Subscribe to Updates
Get the latest creative news from FooBar about art, design and business.
- ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
- ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
- ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
- ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
- ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಎಸ್ ಐಟಿ (SIT) ರಚನೆ!
- ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
- ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
- 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
Author: admin
ತುರುವೇಕೆರೆ: ತಾಲ್ಲೂಕಿನ ಕಸಬಾ ಮತ್ತು ಮಾಯಸಂದ್ರ ಹೋಬಳಿಯ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯವತಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಸಾಲಾ ಜಯರಾಮ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಶಾಸಕರು ಮಾತನಾಡಿ , ಗ್ರಾಮಗಳ ಜನರಿಗೆ ನೀಡಿದಂತಹ ಭರವಸೆಯನ್ನು ನಾನು ಈಡೇರಿಸಿದ್ದೇನೆ. ಹಾಗೆಯೇ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ಗ್ರಾಮಗಳಲ್ಲಿ ಮಣ್ಣು ರಹಿತ ರಸ್ತೆ ಗಳನ್ನಾಗಿ ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು. ನಿಮ್ಮ ಮನೆಯ ಮಗನಾಗಿ ನಿಮ್ಮ ಸೇವೆಗೆ ಯಾವಾಗಲೂ ಸಿದ್ದನಿದ್ದೇನೆ. ಗ್ರಾಮಗಳಲ್ಲಿ ಇನ್ನು ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಲಾಗುವುದು. ವಿವಿಧ ಗ್ರಾಮಗಳಲ್ಲಿ ಸುಮಾರು 95 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಚಿಕ್ಕೋನಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ ಕಾಮಗಾರಿ ಅಂದಾಜು ವೆಚ್ಚ 10 ಲಕ್ಷ, ಕಳ್ಳನಕೆರೆ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿ ಅಂದಾಜು ವೆಚ್ಚ 20 ಲಕ್ಷ, ದೊಡ್ಡ ಮಲ್ಲಿಗೆರೆಯಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಅಂದಾಜು ಮೊತ್ತ 25 ಲಕ್ಷ, ಚಿಕ್ಕ…
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ ನಲ್ಲಿ ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ ನೀಡಿದ್ದು, ದೇಶಕ್ಕೆ ಬೆಳ್ಳಿ ಪದಕಕ್ಕೆ ನೀಡಿದ್ದಾರೆ. ಈ ಸಾಧನೆ ಭಾರತದ ಪಾಲಿಗೆ ಹೆಮ್ಮೆ ಎಂದೆನ್ನಬಹುದು. ಏಕೆಂದರೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೋಪ್ರಾ ಭಾಜನರಾಗಿದ್ದಾರೆ. ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಫೈನಲ್ನಲ್ಲಿ ನೀರಜ್ ಚೋಪ್ರಾ ಅವರ ಚೊಚ್ಚಲ ಪಂದ್ಯ ಉತ್ತಮವಾಗಿರಲಿಲ್ಲ. ನೀರಜ್ ಚೋಪ್ರಾ ಅವರ ಮೊದಲ ಎಸೆತವು ಫೌಲ್ ಎಂದು ಸಾಬೀತಾಯಿತು. ಮೊದಲ ಪ್ರಯತ್ನದಲ್ಲಿಯೇ ವಿಫಲರಾದ ಚೋಪ್ರಾ, ಎರಡನೇ ಸುತ್ತಿನಲ್ಲಿ ಜಾವೆಲಿನ್ ಅನ್ನು 82.39 ಮೀಟರ್ ದೂರಕ್ಕೆ ಎಸೆದರು. ಇನ್ನು ಮೂರನೇ ಸುತ್ತಿನಲ್ಲಿ ತಮ್ಮ ಪ್ರದರ್ಶನವನ್ನು ಸುಧಾರಿಸಿದ್ದರು. ಈ ಸುತ್ತಿನಲ್ಲಿ 86.37 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಪದಕ ಗೆಲ್ಲುವ ಭರವಸೆ ಮೂಡಿಸಿದರು. ಇನ್ನು ನಾಲ್ಕನೇ ಪ್ರಯತ್ನದಲ್ಲಿ, ನೀರಜ್ ಶ್ರಮವನ್ನೆಲ್ಲಾ ಒಗ್ಗೂಡಿಸಿ ಬರೋಬ್ಬರಿ 88.13 ಮೀ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಪದಕ ಗೆಲ್ಲುವ ರೇಸ್ ಗೆ ಪ್ರವೇಶಿಸಿದರು.…
ಚಳ್ಳಕೆರೆ : ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ ನಗರದ ಪ್ರವಾಸಿ ಮಂದಿರದಲ್ಲಿ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ, ಮೂಢನಂಬಿಕೆಗಳನ್ನು ತೊಡೆದುಹಾಕಿ ಬಾಬಾಸಾಹೇಬರ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಿಮ್ಮ ಬದುಕಿನಲ್ಲಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಕರೆ ನೀಡಿದರು. ದಲಿತರಿಗೆ, ಅಸ್ಪೃಶ್ಯರಿಗೆ , ಶೋಷಿತರಿಗೆ ದೌರ್ಜನ್ಯ , ಅತ್ಯಾಚಾರಗಳು ನಡೆದರೆ, ಅಂತಹ ಸಂದರ್ಭದಲ್ಲಿ ಸಮುದಾದ ಪರವಾಗಿ ನಿಂತು ಪ್ರತಿಯೊಬ್ಬರೂ ನ್ಯಾಯಕೊಡಿಸುವ ಕೆಲಸ ಮಾಡಬೇಕು ಎಂದು ನೂತನ ಪದಾಧಿಕಾರಿಗಳಿಗೆ ತಿಳಿಸಿದರು. ಹಿರಿಯ ದಲಿತ ಮುಖಂಡರಾದ ವಿಜಯಕುಮಾರ್ ಅವರು ನೂತನ ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಿ, ಸಂಘಟನೆಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಬಾರದಂತೆ, ತಾಯಿ ಹೃದಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಚಳ್ಳಕೆರೆ ತಾಲೂಕು ಅಧ್ಯಕ್ಷರು ಮಾತನಾಡಿ, ನಮ್ಮ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಆರ್ ಕೋದಂಡರಾಮ್ ಅವರು ಬಹಳ ಒಳ್ಳೆಯ ಹೋರಾಟಗಾರರು ಇಂತಹ ರಾಜ್ಯ ಅಧ್ಯಕ್ಷರು ಸಿಕ್ಕಿರುವುದು ನಮ್ಮ…
ತಿಪಟೂರು: ನಗರದ ಪ್ರತಿಷ್ಠಿತ ಜನವಸತಿ ಪ್ರದೇಶಗಳಾದ ಮಾರನಗೆರೆ ಶಾರದಾ ನಗರ .ಶ್ರೀ ಸಿದ್ದಾರಾಮೇಶ್ವರ ಬಡಾವಣೆ.ನಾರಾಯಣಗೌಡ ಲೇಹೌಟ್.ಶಿವನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆಗಳ ಓಡಾಟ ಕಂಡುಬಂದಿದ್ದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ ಪ್ರತಿದಿನ ಬೆಳಗಿನ ಜಾವ ಹಾಗೂ ಸಂಜೆ ವೇಳೆಯಲ್ಲಿ ವಾಯುವಿಹಾರಿಗಳು ಸಂಚರಿಸುವ ಮಾರ್ಗವಾಗಿದ್ದು, ಜನವಸತಿ ಪ್ರದೇಶದ ಪಕ್ಕದ ತೋಟಗಳಲ್ಲಿ ಎರಡು ಚಿರತೆ ಸಂಚಾರ ಕಾಣಿಸಿಕೊಂಡ ಕಾರಣ ಆತಂಕಕ್ಕೆ ಕಾರಣವಾಗಿದ್ದು, ರಾತ್ರಿ ಚಿರತೆ ಸಂಚರಿಸುವಾಗ ವಾಹನ ಸವಾರೊಬ್ಬರು ತಮ್ಮ ಮೊಬೈಲ್ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ನೋಡಿದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ ಶೀಘ್ರವೇವಾಗಿ ಚಿರತೆ ಸೆರೆಹಿಡಿಯ ಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ಪರಿಶೀಲನೆ ನಡೆದಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಂಗಳೂರು: ಆಂಧ್ರಪ್ರದೇಶದ ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಚಿತ್ತೂರು ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದು, ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಅಪಘಾತಕ್ಕೊಳಗಾದವರು ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಿಪಟೂರು: ತಾಲ್ಲೂಕಿನ ಅಯ್ಯನಬಾವಿ ಆಟದ ಮೈದಾನದಲ್ಲಿ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅಯ್ಯನಬಾವಿ ರಾಯಲ್ ಕ್ರಿಕೆಟರ್ಸ್ ವತಿಯಿಂದ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿ,ಗ್ರಾಮೀಣ ಭಾಗಗಳಲ್ಲಿ ಇಂತಹ ಕ್ರೀಡಾ ಚಟುವಟಿಕೆಗಳು ನಡೆಯುತ್ತಿರುವುದು ತುಂಬ ಸಂತೋಷದ ಸುದ್ದಿ. ಇಂತಹ ಗ್ರಾಮೀಣ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಿ ಎಂದು ಶುಭ ಹಾರೈಸಿದರು. ಬಳಿಕ ಬ್ಯಾಟು ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಗ್ರಾಮದ ಹಿರಿಯ ಮುಖಂಡ ಕೃಷ್ಣಪ್ಪ, ಸಮಾಜ ಸೇವಕ ಬೋಜೇಗೌಡ ಮತ್ತು ಪ್ರಥಮ ದರ್ಜೆ ಅರಣ್ಯ ಗುತ್ತಿಗೆದಾರ ಬಿ.ಆರ್.ಶಶಿಧರ್ ಮಾತನಾಡಿದರು. ಮತ್ತೀಹಳ್ಳಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ತೇಜಾವತಿ ಶ್ರೀನಿವಾಸ್, ಸದಸ್ಯ ತಿಮ್ಮರಾಜು, ಮಾಜಿ ಸದಸ್ಯರಾದ ಮೂರ್ತಿ, ನಾಗರಾಜ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ.ಕುಮಾರ್, ಮುಖಂಡರಾದ ಗಂಗಾಧರಯ್ಯ ಮತ್ತು ಸತೀಶ್ ಸೇರಿದಂತೆ ಸಂಘಟನೆ ರಾಯಲ್ ಕ್ರಿಕೆಟರ್ಸ್ ನ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ಆನಂದ್…
ತಿಪಟೂರು: ನಗರದ ಎಪಿಎಂಸಿ ಮಾರುಕಟ್ಟೆಯ ಕೊಬ್ಬರಿ ಯಾರ್ಡ್ ನಲ್ಲಿರುವ ಟಿಎಪಿಸಿ ಎಂ ಎಸ್ ಲಿಮಿಟೆಡ್ ನ ಕಚೇರಿಯ ಬಾಗಿಲು ಮುರಿದು, ಸುಮಾರು 53 ಸಾವಿರ ನಗದು ದೋಚಿ ಘಟನೆ ನಡೆದಿದೆ. ಕಳ್ಳರು ಕೃತ್ಯದ ವೇಳೆ ದಾಖಲಾತಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು, ಘಟನೆ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಶಂಕರ ಮೂರ್ತಿ (ಮಡೇನೂರು) , ರಾತ್ರಿ ನಗರದ ನಮ್ಮ ಕಛೇರಿಯಲ್ಲಿ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಗರ ಮತ್ತು ತಾಲೂಕಿನಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಘಟನೆ ಬೆನ್ನಲ್ಲೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತುಮಕೂರು: ಡಿ ಕೊರಟಗೆರೆಯ ಜಾತ್ರೆಯಲ್ಲಿ ಹಾಲಿ ಶಾಸಕರ ಬ್ಯಾನರ್ ಕಟ್ಟಿದ್ದಕ್ಕೆ ಮಾಜಿ ಶಾಸಕರ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿರುವ ಘಟನೆ ನಡೆದಿದೆ. ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಜೆಡಿಎಸ್ ಮುಖಂಡ ಪಾಲನೇತ್ರಯ್ಯ ಗಂಭೀರ ಆರೋಪ ಮಾಡಿದ್ದು, ಶಾಸಕ ಡಿ.ಸಿ.ಗೌರಿಶಂಕರ್ ಫ್ಲಕ್ಸ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಡಿ.ಕೊರಟಗೆರೆ ಜಾತ್ರಾ ಮಹೋತ್ಸವಕ್ಕೆ ಹಾಲಿ ಶಾಸಕ ಗೌರಿಶಂಕರ್ ಫ್ಲಕ್ ಕಟ್ಟಲು ಪಕ್ಷದ ಬೆಂಬಲಿಗರು ಮುಂದಾಗಿದ್ದರು. ಈ ವೇಳೆ 20 ಜನರ ಗುಂಪು ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಜೆಡಿಎಸ್ ಕಾರ್ಯಕರ್ತ ಸಿರಾಜ್ ಹಾಗೂ ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ. ಉಮೇಶ್ ಚಂದ್ರು ಮತ್ತು ಬೆಂಬಲಿಗರ ಮೇಲೆ ಈ ಆರೋಪ ಕೇಳಿ ಬಂದಿದ್ದು, ಸದ್ಯ ಹಲ್ಲೆಗೊಳಗಾದವರು ತುಮಕೂರಿನ ವಿನಾಯಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿ : ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಹಿರಿಯೂರು: ತಾಲ್ಲೂಕಿನ ಹಿರಿಯೂರು ನಗರಗಳಲ್ಲಿ ಶುಚಿತ್ವ ಕಾಪಾಡದ ಹೋಟೆಲ್ ಗಳಿಗೆ ನಗರಸಭೆಯ ನೂತನ ಅಧ್ಯಕ್ಷರಾದ ಎಸ್. ಶಿವರಂಜಿನಿ ಯಾದವ್ ದಿಢೀರ್ ದಾಳಿ ನಡೆಸಿ ಹೊಟೇಲ್ ಗಳಲ್ಲಿ ಶುಚಿತ್ವ ಕಾಪಾಡಲು ತಾಕೀತು ಮಾಡಿದರು. ಶುಕ್ರವಾರದಂದು ಹಿರಿಯೂರು ನಗರದ ವಿವಿಧ ಹೋಟೆಲ್ ಗಳಿಗೆ ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ದಿಢೀರ್ ದಾಳಿ ನಡೆಸಿ ಸ್ವಚ್ಛತೆಯನ್ನು ಕಾಪಾಡುವಂತೆ ಅವರು ಎಚ್ಚರಿಕೆ ನೀಡಿದರು. ಹಿರಿಯೂರು ನಗರದ ಸ್ವಚ್ಛತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಇದೇ ಪುನರಾವರ್ತನೆಯಾದರೆ, ಸಾರ್ವಜನಿಕರಿಂದ ದೂರು ಬಂದರೆ ಎಷ್ಟೇ ಪ್ರಭಾವಿಗಳಿಂದ ಒತ್ತಡ ತಂದರೂ ನಾನು ಕೇಳುವುದಿಲ್ಲ. ಕಠಿಣಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮಾಂತರ ಪ್ರದೇಶಗಳಿಂದ ಬಂದ ಜನರಿಗೆ ಶುಚಿ-ರುಚಿಯಾದ ಊಟ-ತಿಂಡಿ ಸಿಗುವಂತಾಗಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ, ವಿವೇಚನೆಯಿಂದ ಹೋಟೆಲ್ ಗಳನ್ನು ನಡೆಸಬೇಕು ಎಂದುಹೋಟೆಲ್ ಮಾಲಿಕರಿಗೆ ಶಿವರಂಜನಿ ಯಾದವ್ ಸೂಚಿಸಿದರು. ಈ ಸಂದರ್ಭದಲ್ಲಿ ಹಿರಿಯೂರು ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರುಗಳಾದ ಸಂಧ್ಯಾ ಮತ್ತು ಮೀನಾಕ್ಷಿ ಮಾತನಾಡಿ, ಸ್ವಚ್ಛ, ಸುಂದರ, ನೈರ್ಮಲ್ಯ ನಗರವನ್ನಾಗಿಸಲು ಎಲ್ಲಾ ಹೋಟೆಲ್, ಉದ್ದಿಮೆ, ಬೀದಿಬದಿ,…
ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಕುಮಾರ್ ರವರು ಇಂದು ನಿಧನರಾಗಿದ್ದಾರೆ. ವಿಶ್ವ ಪ್ರಸಿದ್ಧಿ ದಿವ್ಯಸ್ಥಳವಾದ ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನಕುಮಾರ್ ರವರು ಇಂದು ವಿಧಿವಶರಾಗಿದ್ದಾರೆ. ಗೊರವರನಹಳ್ಳಿ ಕ್ಷೇತ್ರದ ನಿರ್ಮಾತೃ ಶ್ರೀಮತಿ ಕಮಲಮ್ಮನವರ ಏಕೈಕ ಪುತ್ರರಾದ ಇವರು ತಾಯಿಯ ಮರಣದ ನಂತರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದೊಂದು ವಾರದಿಂದ ಬೆಂಗಳೂರಿನ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz