Subscribe to Updates
Get the latest creative news from FooBar about art, design and business.
- ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
- ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
- ರುಡ್ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
- ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
- ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
- ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
- ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
- ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
Author: admin
ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಲಾಗಿರುವ ಲಾರಿ ಮಾಲಿಕರ ಅನಿರ್ದಿಷ್ಟ ಅವಧಿಗೆ ಮುಷ್ಕರಕ್ಕೆ ತುಮಕೂರು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆದ್ದಾರಿಗಳಲ್ಲಿ ಸಾಗುತ್ತಿದ್ದ ಲಾರಿಗಳನ್ನು ಅಡ್ಡ ಹಾಕಿದ ತುಮಕೂರು ಲಾರಿ ಮಾಲೀಕರ ಸಂಘದ ಸದಸ್ಯರು ಅಧ್ಯಕ್ಷ ಮುಜಾಮಿಲ್ ಪಾಷಾ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೆ ಬಂದ್ ಗೆ ಬೆಂಬಲ ನೀಡುವಂತೆ ಲಾರಿ ಮಾಲಿಕರಲ್ಲಿ ಹಾಗೂ ಚಾಲಕರಲ್ಲಿ ಮನವಿ ಮಾಡಿದರು. ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಏರಿಕೆ ಮಾಡಿರುವುದುನ್ನು ತಿಳಿಸಬೇಕು, ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಹಣವನ್ನು ತೆಗೆದು ಹಾಕಬೇಕು, ರಾಜ್ಯದ ಗಡಿ ಭಾಗದಲ್ಲಿ ಇರುವ ಚೆಕ್ ಪೋಸ್ಟ್ ಗಳನ್ನು ತೆಗೆದು ಹಾಕಬೇಕು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಇಂದು ತುಮಕೂರು ಜಿಲ್ಲಾ ಟ್ರಕ್ ಮಾಲೀಕರ ಸಂಘದ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. ಪ್ರಸ್ತುತ ಟೈರು ಬೆಲೆ, ಡೀಸೆಲ್ ಬೆಲೆ, ಸ್ಪೇರ್ ಪಾರ್ಟ್ಸ್ ಗಳ ಬೆಲೆ ಜಾಸ್ತಿ ಆಗಿದೆ. ಆದರೆ ಬಾಡಿಗೆ ಮಾತ್ರ ಜಾಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ…
ಬೆಂಗಳೂರು: ಜಾತಿ ಗಣತಿ ವರದಿಯನ್ವಯ ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ ಎಂದಮೇಲೆ ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಏಕೆ ಬೇಕು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿರುವ ಜನಸಂಖ್ಯೆ ಅಂಕಿ–ಅಂಶಗಳು ನಿಜವೇ ಆದರೆ, ರಾಜ್ಯದಲ್ಲಿ ಮುಸ್ಲಿಮರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹೀಗಿದ್ದಾಗ ಅವರಿಗೇಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಎಂಬುದು ಅರ್ಥವಾಗುತ್ತಿಲ್ಲ ಎಂದರು. ಈ ಕೂಡಲೇ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಅಲ್ಪಸಂಖ್ಯಾತ ಸ್ಥಾನಮಾನ ಹಿಂಪಡೆಯಬೇಕು ಎಂದು ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಜಾತಿಗಣತಿ ವರದಿ ಪ್ರಕಾರ ಮುಸಲ್ಮಾನರು ಅತಿ ಹೆಚ್ಚು ಸಂಖ್ಯೆಯಲ್ಲಿ ಇದ್ದಾರೆ ಎಂದರೆ ಅವರಿಗೆ ಅಲ್ಪಸಂಖ್ಯಾತರು ಎನ್ನುವುದೇಕೆ? ಜಾತಿಗಣತಿ ವರದಿ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚುನಾವಣೆಯ ಗಿಮಿಕ್ ಅಷ್ಟೇ. ಮುಂದಿನ ಸಚಿವ ಸಂಪುಟದಲ್ಲಿ ಉಪಸಮಿತಿ ರಚಿಸಿ ಕೈ ತೊಳೆದುಕೊಳ್ಳುತ್ತಾರೆ ಎಂದು ಆರ್. ಅಶೋಕ್ ಇದೇ ವೇಳೆ ಅಭಿಪ್ರಾಯಪಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಅಗ್ನಿಸಾಕ್ಷಿ, ಬಿಗ್ ಬಾಸ್ ಖ್ಯಾತಿಯ ವೈಷ್ಣವಿ ಗೌಡ ಗ್ರ್ಯಾಂಡ್ ಆಗಿ ನಟಿ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಇಂಡಿಯನ್ ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಅನುಕೂಲ್ ಮಿಶ್ರಾ ಜೊತೆಗೆ ವೈಷ್ಣವಿ ಗೌಡ ನಿಶ್ಚಿತಾರ್ಥ ಅದ್ದೂರಿಯಾಗಿ ನೆರವೇರಿದೆ. ನಿಶ್ಚಿತಾರ್ಥದ ಫೋಟೋಗಳನ್ನು ಹಂಚಿಕೊಂಡ ವೈಷ್ಣವಿ ಅವರು, ಅವನದ್ದು ಆಕಾಶ ಸೇವೆ, ನನ್ನದು ಸ್ಕ್ರೀಪ್ಟ್ ಹಾಗೂ ವೇದಿಕೆ. ವಿಧಿ ಒಂದು ಸುಂದರ ಲವ್‌ಸ್ಟೋರಿ ಹೆಣೆದಿದೆ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ದೆಹಲಿ: 20 ವರ್ಷ ವಯಸ್ಸಿನ ಯುವತಿಯೊಬ್ಬಳ ಮೃತದೇಹ ದೆಹಲಿಯ ಶಹದಾರಾದ ಜಿಟಿಬಿ ಎನ್ಕ್ಲೇವ್ ಬಳಿ ಪತ್ತೆಯಾಗಿದ್ದು, ಮೃತದೇಹದ ಮೇಲೆ ಬುಲೆಟ್ ಗುರುತು ಪತ್ತೆಯಾಗಿದ್ದು, ಆಕೆ ಗುಂಡೇಟಿನಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಯುವತಿಯೊಬ್ಬಳಿಗೆ ಗುಂಡು ಹಾರಿಸಲಾಗಿದೆ ಎಂದು ನಮಗೆ ಕರೆ ಬಂದಿತ್ತು. ಜಿಟಿಬಿ ಎನ್ ಕ್ಲೇವ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಸುಮಾರು 20 ವರ್ಷ ವಯಸ್ಸಿನವಳಂತೆ ಕಾಣುತ್ತಿದ್ದಾಳೆ. ಮೃತದೇಹದ ಮೇಲೆ 2 ಗುಂಡೇಟಿನ ಗುರುತು ಇದೆ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತೆ ನೇಹಾ ತಿಳಿಸಿದರು. ಯುವತಿಯ ಗುರುತು ಇನ್ನೂ ತಿಳಿದಿಲ್ಲ, ಮತ್ತು ಮರಣೋತ್ತರ ಪರೀಕ್ಷೆಯಿಂದ ಹೆಚ್ಚಿನ ವಿವರಗಳು ತಿಳಿದುಬರುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತೆಲಂಗಾಣ: ತೆಲಂಗಾಣದ ಕೊಮರಂ ಭೀಮ್ ಆಸಿಫಾಬಾದ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಒಂದೇ ಬಾರಿಗೆ ಇಬ್ಬರು ಯುವತಿಯರನ್ನು ಮದುವೆಯಾಗಿರುವ ಘಟನೆ ನಡೆದಿದೆ. ಲಿಂಗಾಪುರ ಮಂಡಲದ ಗುಮ್ನೂರ್ ಗ್ರಾಮದ ನಿವಾಸಿ ಸೂರ್ಯದೇವ್, ಲಾಲ್ ದೇವಿ ಮತ್ತು ಝಲ್ಕರಿ ದೇವಿಯನ್ನು ಪ್ರೀತಿಸುತ್ತಿದ್ದು, ಒಂದೇ ಸಮಾರಂಭದಲ್ಲಿ ಇವರಿಬ್ಬರನ್ನೂ ಮದುವೆಯಾಗಲು ನಿರ್ಧರಿಸಿದ್ದಾನೆ. ಇನ್ನು ಈ ವರ ಒಂದೇ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಎರಡೂ ವಧುಗಳ ಹೆಸರನ್ನು ಮುದ್ರಿಸಿ ಅದ್ಧೂರಿಯಾಗಿ ಮದುವೆಯಾಗಿದ್ದಾನೆ. ಮೂವರು ಕುಟುಂಬಗಳು, ಸಂಬಂಧಿಕರು ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಗ್ರಾಮದ ಹಿರಿಯರು ಆರಂಭದಲ್ಲಿ ಈ ಮದುವೆಯನ್ನು ವಿರೋಧಿಸಿದರು. ಆದರೆ ಕೊನೆಗೆ ಅವರ ಆಸೆಗೆ ಒಪ್ಪಿಗೆ ನೀಡಿದ್ದರಂತೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಬೆಳಗಾವಿ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ನಡೆದಿದೆ. ಅಪಘಾತ ಸಂಭವಿಸಿದ ಕೆಲವೇ ನಿಮಿಷಗಳಲ್ಲಿ ಅದೇ ಮಾರ್ಗವಾಗಿ ರಾಣಿ ಚೆನ್ನಮ್ಮ ರೈಲು ಸಂಚರಿಸುವುದರಲ್ಲಿತ್ತು. ಅಧಿಕಾರಿಗಳ ಸಮಯಪ್ರಜ್ಞೆಯಿಂದ ರಾಣಿ ಚೆನ್ನಮ್ಮ ರೈಲು ನಿಲುಗಡೆಗೊಳಿಸಲಾಯಿತು. ಇದರಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಗೂಡ್ಸ್ ರೈಲು ಎರಡು ಗಂಟೆಗಳ ಕಾಲ ವಿಳಂಬವಾಗಿ ಚಲಿಸುತ್ತಿತ್ತು. ಹೀಗಾಗಿ, ಅದಾದ ಬೆನ್ನಲ್ಲೇ ರಾಣಿ ಚೆನ್ನಮ್ಮ ರೈಲು ಆಗಮಿಸುತ್ತಿತ್ತು. ಬೆಳಗ್ಗೆ 8 ಗಂಟೆಗೆ ರಾಣಿ ಚೆನ್ನಮ್ಮ ಸಂಚರಿಸಬೇಕಿತ್ತು. ರೈಲು ಬರುತ್ತಿದ್ದಂತೆಯೇ ಎಚ್ಚೆತ್ತ ಅಧಿಕಾರಿಗಳು, ರೈಲನ್ನು ಬೆಳಗಾವಿಯಿಂದ 8 ಕಿ.ಮೀ. ದೂರದಲ್ಲಿರುವ ದೇಸೂರ ನಿಲ್ದಾಣದಲ್ಲಿ ನಿಲುಗಡೆ ಮಾಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ಯಾವ ಜಾತೀಯತೆಯನ್ನು ಮೀರಬೇಕು ಎಂದು ಡಾ.ಅಂಬೇಡ್ಕರ್ ಅವರು ಆಶಿಸಿದ್ದರೋ, ಆ ಜಾತೀಯತೆಯನ್ನು ಮೀರುವುದಕ್ಕೆ ನಮ್ಮಿಂದ ಸಾಧ್ಯವಾಗಿಲ್ಲ. ಜಾತಿ ನಿರ್ಮೂಲನೆ ಆಗುವ ಬದಲು ಅಹಂಕಾರವಾಗಿ ಮಾರ್ಪಟ್ಟಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಹಿರಿಯ ಕನ್ನಡ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯಕ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಸಂಸ್ಥೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಸ್ವಾತಂತ್ರ್ಯಕ್ಕೆ ಅರ್ಥ ಬರಬೇಕಾದರೆ ಜಾತಿಪದ್ಧತಿ ನಿರ್ಮೂಲನೆ ಆಗಬೇಕೆಂದು ಅಂಬೇಡ್ಕರ್ ಬಯಸಿದ್ದರು. ಆದರೆ ಅದು ಆಗಿಲ್ಲ. ಜಾತಿ ಅಸ್ಮಿತೆ ಹೆಚ್ಚಾಗುತ್ತಲೇ ಇದೆ. ಮಾನವೀಯತೆ ಮಾರೆಯಾಗುತ್ತಿದೆ ಎಂದು ವಿಷಾದಿಸಿದರು. ಎಲ್ಲ ಸಮಸ್ಯೆಗಳ ಮೂಲ ಜಾತಿವ್ಯವಸ್ಥೆಯಲ್ಲಿದೆ. ಅದು ಅಕ್ಟೋಪಸ್ನಂತೆ ಇಡೀ ಸಮಾಜದಲ್ಲಿ ವ್ಯಾಪಿಸಿಕೊಂಡಿದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂತರ್ಜಾತೀಯ ವಿವಾಹ ಆದೆವು ಎನ್ನುವವರಿಗೂ ಜಾತಿವ್ಯವಸ್ಥೆಯಿಂದ ಹೊರಬರಲು ಆಗುತ್ತಿಲ್ಲ ಎಂದರು. ಬುದ್ಧ ಆರಂಭಿಸಿದ ಪ್ರಶ್ನಿಸುವ ಪರಂಪರೆಯನ್ನು ಅಂಬೇಡ್ಕರ್ ಮುಂದುವರಿಸಿದರು. ಆದರೆ ಅದನ್ನು ಸಮಪರ್ಥವಾಗಿ ನಾವು ಮುಂದುವರಿಸಿಲ್ಲ. ಆತ್ಮಗೌರವ ಮಾರಿಕೊಂಡು…
ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಇಂದು ಚಾಲನೆ ನೀಡಿದರು. ಡಾ.ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಮತ್ತು ಅವರ 134ನೇ ಜಯಂತಿ ಹಾಗೂ ಡಾ.ಬಾಬು ಜಗಜೀವನ ರಾಂ ಅವರ 118ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಮಹಾನಗರ ಪಾಲಿಕೆ ಆವರಣದಲ್ಲಿಂದು ಇಬ್ಬರು ಮಹನೀಯರ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಛಾಯಾಚಿತ್ರ ಪ್ರದರ್ಶನದಲ್ಲಿ ಡಾಃ ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನ ರಾಂ ಅವರ ಸುಮಾರು 116 ಅಪರೂಪದ ಛಾಯಾಚಿತ್ರಗಳನ್ನು ಇರಿಸಲಾಗಿತ್ತು. ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನ: ಅಂಬೇಡ್ಕರ್ ಅವರು 1942ರ ಜುಲೈ 20ರಂದು ಕಮ್ಯಾಂಡಿಂಗ್ ಆಫೀಸರ್ ಹುದ್ದೆಯಲ್ಲಿದ್ದಾಗ ಮಿಲಿಟರಿ ಅಧಿಕಾರಿ ಹಾಗೂ ಸೈನಿಕರೊಂದಿಗೆ, 1956ರ ಅಕ್ಟೋಬರ್ 14ರಂದು ಬೌದ್ಧಧರ್ಮಕ್ಕೆ ದೀಕ್ಷೆ…
ತುಮಕೂರು: ಸ್ವಾತಂತ್ರ್ಯ ಬಂದಾಗಿನಿಂದ ಬಾಬಾ ಸಾಹೇಬ್ ರ ಪ್ರತಿಮೆ ನಿರ್ಮಿಸಲು ಸಾಧ್ಯವಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ಅನೇಕ ಬಾರಿ ನಿರ್ಧರಿಸಿದ್ದರು ಸಾಧ್ಯವಾಗಲಿಲ್ಲ. ಎಲ್ಲ ಜಿಲ್ಲೆಗಳಲ್ಲೂ ಬಾಬಾ ಸಾಹೇಬ್ ಪ್ರತಿಮೆ ಇಡಲಾಗಿತ್ತು. ಬೆಂಗಳೂರಿಗೆ ಹತ್ತಿರವಿರುವ ತುಮಕೂರಿನಲ್ಲಿ ಇಡಲಾಗಿಲ್ಲ ಎಂಬ ಕೊರಗು ಇತ್ತು. ಪ್ರತಿಮೆ ಇಡಲು ಎಲ್ಲರು ಒಕ್ಕರಲಿನಿಂದ ಸಹಕರಿಸಿದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ತುಮಕೂರು ನಗರದ ಟೌನ್‌ಹಾಲ್ ಮುಂಭಾಗದಲ್ಲಿ ನೂತನವಾಗಿ ಸ್ಥಾಪಿಸಲಾದ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ 12 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಾಗೂ ಮಹಾನಗರ ಪಾಲಿಕೆ ಆವರಣದಲ್ಲಿ ಅಳವಡಿಸಲಾದ ‘ಲೈಟ್ ಯುಟಿಲಿಟಿ ಹೆಲಿಕ್ಯಾಪ್ಟರ್’ ಮಾದರಿಯನ್ನು ಉದ್ಘಾಟಿಸಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮಾತನಾಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡದೇ ಹೋಗಿದ್ದರೆ ಭಾರತ ಯಾವ ಸ್ಥಾನಮಾನದಲ್ಲಿ ಇರುತ್ತಿತ್ತು ಎಂಬುದು ಊಹಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯದ ನಂತರ ಪ್ರತಿಯೊಂದು ಜಾತಿ, ಧರ್ಮ ಸಮಾನವಾಗಿ ಬಾಳಬೇಕೆಂಬ ಮಾತುಗಳು ಕೇಳಿ ಬಂದಾಗ ಸಂವಿಧಾನ ರಚಿಸುವ…
ತುಮಕೂರು: ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರೋ ಸಾವಿರ ಕೆ.ಜಿ. ತೂಕದ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನುಗೃಹ ಸಚಿವ ಡಾ.ಜಿ.ಪರಮೇಶ್ವರ್ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಬೌದ್ಧ ಭಿಕ್ಕುಗಳು, ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವರಾದ ಕೆ.ಎನ್.ರಾಜಣ್ಣ, ಡಾ.ಮಹದೇವಪ್ಪ, ಭೈರತಿ ಸುರೇಶ್ ಜಿಲ್ಲಾಧಿಕಾರಿ ಶುಭಕಲ್ಯಾಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಜರಿದ್ದರು. 12 ಅಡಿ ಎತ್ತರದ ಸಾವಿರ ಕೆ.ಜಿ. ತೂಕದ ಕಂಚಿನ ಅಂಬೇಡ್ಕರ್ ಪ್ರತಿಮೆಯಾಗಿದ್ದು, ಇದನ್ನು ಸಚಿವ ಪರಮೇಶ್ವರ್ ದಾನವಾಗಿ ನೀಡಿದ್ದಾರೆ. ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೂ ಮೊದಲು ಸಚಿವರು ಬೌದ್ಧ ಭಿಕ್ಕುಗಳು ಆಯೋಜಿಸಿದ್ದ ಪೂಜೆಯಲ್ಲಿ ಪಾಲ್ಗೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW