Author: admin

ಸಿರಾ: ನಗರ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಾರ್ಡ್ ಸಂಖ್ಯೆ 19ರಲ್ಲಿ ಬಿಜೆಪಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮನೆ ಮನೆಗಳಿಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸಿದರು. ವಾರ್ಡ್ ಸಂಖ್ಯೆ 19 ಸೇರಿದಂತೆ ಹಲವಾರು ವಾರ್ಡ್ ಗಳಲ್ಲಿ  ಬಿಜೆಪಿ ಅಭ್ಯರ್ಥಿ ಪರ ರಾಜೇಶ್ ಪ್ರಚಾರ ನಡೆಸಿದ್ದು, ಈ ವೇಳೆ ಪಕ್ಷದ ಮುಖಂಡರು, ಮಹಿಳಾ ಮುಖಂಡರು, ಕಾರ್ಯಕರ್ತರು ಅವರಿಗೆ ಸಾಥ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಎಲ್ಲರಿಗೂ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಹೇಳುತ್ತಾ….. ಒಂದು ವಿಚಿತ್ರ ಸನ್ನಿವೇಶದಲ್ಲಿ ನಾವಿದ್ದೇವೆ. ಜಗತ್ತಿಗೆ ಶಾಂತಿ ಪ್ರೀತಿ ಸೇವೆ ಎಂಬ ಮಹತ್ವದ ಮಾರ್ಗಗಳನ್ನು ಪರಿಣಾಮಕಾರಿಯಾಗಿ ಹೇಳಿದ ಜೀಸಸ್ ಜನ್ಮದಿನದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದಿಂದ ಮತಾಂತರ ನಿಷೇಧ ಕಾನೂನು ಜಾರಿ ಮಾಡಲಾಯಿತು ಮತ್ತು ಅದೂ ಬಹುತೇಕ ಕ್ರಿಶ್ಚಿಯನ್ ಧರ್ಮದ ಮೇಲಿನ ಆರೋಪಗಳಿಗೆ ಉತ್ತರ ಹಾಗು ಸವಾಲಿನ ರೂಪದಲ್ಲಿ… ಭಾರತದ ಮಟ್ಟಿಗೆ ಮತಾಂತರದ ಆರೋಪ ಹೆಚ್ಚಾಗಿ ಕೇಳಿಬರುತ್ತಿರುವುದು ಯೇಸುಕ್ರಿಸ್ತನ ಅನುಯಾಯಿಗಳ ಮೇಲೆಯೇ… ಹಣ ಉದ್ಯೋಗ ಸಮಾನತೆ ಇತ್ಯಾದಿ ಇತ್ಯಾದಿ ಆಮಿಷಗಳಿಗೆ ಹಾಗು ಇದರ ಪರೋಕ್ಷ ಪರಿಣಾಮ ಕೆಲವು ಹಿಂದುಗಳ ತುಳಿತಕ್ಕೊಳಗಾದವರು ಸ್ವಯಂ ಪ್ರೇರಣೆಯಿಂದ ಮತಾಂತರವಾಗುತ್ತಿದ್ದಾರೆ. ಹೀಗೇ ಇದು ಮುಂದುವರಿದರೆ ಹಿಂದೂಗಳ ಜನಸಂಖ್ಯೆಗೆ ಅಪಾಯ. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಒಂದು ಪ್ರಯತ್ನ ಎಂಬ ವಾದ. ಹಾಗೆಯೇ ಇದು ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ. ಅದನ್ನು ವಿರೋಧಿಸುತ್ತೇವೆ ಎಂಬುದು ಮತ್ತೆ ಕೆಲವರ ಅಭಿಪ್ರಾಯ… ” ನಿಮ್ಮ ಶತ್ರುಗಳನ್ನು ಸಹ ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ, ಅಸಹಾಯಕರಿಗೆ…

Read More

ತಿಪಟೂರು: ನಗರದ ಡಾ.ಅಂಬೇಡ್ಕರ್ ವೃತ್ತದ ಬಳಿಯಿರುವ ಚರ್ಚ್ ನಲ್ಲಿ ಸಕಲ ಶೃಂಗಾರದ ಸಿದ್ಧತೆಯೊಂದಿಗೆ ಕ್ರಿಸ್ಮಸ್ ಆಚರಣೆ ಭರದಿಂದ ಸಾಗುತ್ತಿದ್ದು ಪ್ರೀತಿ ಕಾರುಣ್ಯದ ಕ್ರಿಸ್ತನನ್ನು ಆಹ್ವಾನಿಸುವ ಕ್ರಿಸ್ಮಸ್ ಆಚರಣೆಗೆ ನಗರವು ಸಜ್ಜುಗೊಂಡಿದೆ. ಚರ್ಚ್ ಸಮುದಾಯದ ಶಾಲೆಗಳು ಹಾಗೂ ಕ್ರೈಸ್ತ ಸಮುದಾಯದ ಮನೆಗಳು ವಿದ್ಯುತ್ ದೀಪಗಳಿಂದ ಅಲಂಕಾರ ಗೊಂಡಿದೆ. ಇಂದು ಬೆಳಗ್ಗಿನಿಂದಲೇ ಯೇಸುಕ್ರಿಸ್ತನ ಜನ್ಮದಿನವನ್ನು ನೆನೆದು ಚರ್ಚುಗಳಲ್ಲಿ ಪ್ರಾರ್ಥನೆಯನ್ನು ಮಾಡಿ ಅನಂತರ ತಮ್ಮ ಗೆಳೆಯರ ಮತ್ತು ನೆರೆಮನೆಯವರ ಸಂಬಂಧಿಕರಿಗೆ ಮನೆಗಳಿಗೆ ತೆರಳಿ ಕೇಕ್ ಗಳನ್ನು ಕತ್ತರಿಸಿ ಹಬ್ಬದ ಶುಭಾಶಯಗಳನ್ನು ಕೋರಿ ಮಧ್ಯಾಹ್ನದ ಸಮಯ ಸಿಹಿತಿನಿಸುಗಳನ್ನು ಮನೆಗಳಲ್ಲಿ ಮಾಡಿ ಆಚರಣೆ ನಡೆಯುತ್ತದೆ. ವರದಿ: ಮಂಜು ಗುರುಗದಹಳ್ಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: ಜಿಲ್ಲೆಯ ಹೆಸರಾಂತ  ಮಹೇಶ್ ಪಿ.ಯು. ಕಾಲೇಜಿನ ಉಪನ್ಯಾಸಕ ಹರೀಶ್ ರವರು ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು. ತುರುವೇಕೆರೆ ಪಟ್ಟಣದ ಜೆ.ಪಿ.ಆಂಗ್ಲ ಪ್ರೌಢಶಾಲೆ, ಮಾದಿಹಳ್ಳಿ ಗ್ರಾಮದ ರಾಮಕೃಷ್ಣ ಮಠದ ಬದರಿಕಾಶ್ರಮ   ಮಾಯಸಂದ್ರ ಗ್ರಾಮದ ನೆಹರು ಬಾಲಿಕಾ ವಿದ್ಯಾಶಾಲೆಗಳಿಗೆ ಭೇಟಿ ನೀಡಿದ ಉಪನ್ಯಾಸಕರಾದ ಹರೀಶ್ ರವರು ವಿದ್ಯಾರ್ಥಿಗಳೊಂದಿಗೆ ಕಾಲೇಜು ಶಿಕ್ಷಣ ಕುರಿತು ಸಂವಾದ ನಡೆಸಿದರು. ಇದೇ ವೇಳೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮುಂದಿನ ಕಾಲೇಜು ಶಿಕ್ಷಣ ಕುರಿತು ವಿದ್ಯಾರ್ಥಿಗಳ ಪಾತ್ರ ಮತ್ತು ಪೋಷಕರ ಪಾತ್ರದ ಹಲವಾರು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ವಿನಿಮಯ ಮಾಡಿಕೊಂಡರು. ಮಹೇಶ್ ಪಿ.ಯು.ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಾದ್ಯಂತ  ಉತ್ತಮ ಪ್ರಶಂಸೆಗೆ ಪಾತ್ರವಾಗಿದೆ. ಕಳೆದ ಸಾಲಿನಲ್ಲಿ ಹಾಗೂ ಇನ್ನು ಹಿಂದಿನ ವರ್ಷಗಳಲ್ಲಿ ಜಿಲ್ಲೆಯಲ್ಲೇ ಉತ್ತಮ ಪ್ರಗತಿ ಸಾಧಿಸಿದ  ಶಿಕ್ಷಣ ಸಂಸ್ಥೆಯಾಗಿದೆ. ಈ ಸಂಸ್ಥೆಯು 2ರಿಂದ 3 ಶಾಖೆಗಳು ಇದೆ ಎಂದು ಸುಳ್ಳು ಮಾಹಿತಿಗಳು ಹರಿದಾಡುತ್ತಿವೆ. ಆದರೆ ನಮ್ಮ ಸಂಸ್ಥೆ ತುಮಕೂರು ಜಿಲ್ಲೆಯಲ್ಲಿ ಒಂದು ಮಾತ್ರವೇ ಇದೆ. ನಮ್ಮ…

Read More

ವಡೋದರ: ಗುಜರಾತ್‌ ನ ವಡೋದರದ ಕಾರ್ಖಾನೆಯೊಂದರ ಬಾಯ್ಲರ್ ನಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ಕು ವರ್ಷದ ಬಾಲಕಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ರಾಸಾಯನಿಕ ಕಾರ್ಖಾನೆಯಲ್ಲಿ ಬೆಳಿಗ್ಗೆ 9.30ಕ್ಕೆ ಈ ಘಟನೆ ನಡೆದಿದ್ದು, ರಾಸಾಯನಿಕ ಕಾರ್ಖಾನೆಯ ಬಾಯ್ಲರ್ ಭಾರೀ ಶಬ್ಧದೊಂದಿಗೆ ಸ್ಫೋಟಗೊಂಡಿದ್ದು, ಪರಿಣಾಮವಾಗಿ ನಾಲ್ವರು ಮೃತಪಟ್ಟು, ಸುಮಾರು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು 15 ಮಂದಿ ಗಾಯಗೊಂಡಿದ್ದರು. ಈ ಪೈಕಿ ನಾಲ್ವರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟರು. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಧಾವಿಸಿದ್ದು ಸ್ಫೋಟಕ್ಕೆ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಿಜಯಪುರ: ನಾಳೆ ಸಿಎಂ ವಿಜಯಪುರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿ ಕುಂಠಿತಗೊಂಡಿದ್ದ ರಸ್ತೆ ಕಾಮಗಾರಿಗಳು ತೀವ್ರ ಗತಿಯಲ್ಲಿ ಸಾಗುತ್ತಿವೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಇತ್ತಿಚೆಗೆ ರಸ್ತೆ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿತ್ತು.‌ ಸಿಎಂ ಬೊಮ್ಮಾಯಿ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಸ್ತೆ ಕಾಮಗಾರಿಯನ್ನು ತೀವ್ರಗತಿಯಲ್ಲಿ ನಡೆಸತೊಡಗಿದೆ. ನಾಳೆ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಬೊಮ್ಮಾಯಿವರು ನಾಳೆ ಬೆಳಿಗ್ಗೆ 10:30ಕ್ಕೆ ಹೆಲಿಕಾಪ್ಟರ್ ಮೂಲಕ ಸೈನಿಕ ಸ್ಕೂಲ್ ಹೆಲಿಪ್ಯಾಡ್‌ ಗೆ ಬಂದಿಳಿದು 11.00 ಗಂಟೆಗೆ ಗಾಂಧಿ ವೃತ್ತದ ಬಳಿಯ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಗೆ ಮಾಲಾರ್ಪನೆ ಮಾಡಲಿದ್ದಾರೆ. ಬಳಿಕ 11.30ಕ್ಕೆ ಜಿಲ್ಲಾ ಪಂಚಾಯತ್ ಮೈದಾನದಲ್ಲಿ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭದಲ್ಲಿ ಪಾಲ್ಗೊಂಡು ವಿಜಯಪುರ ನಗರ, ಬಬಲೇಶ್ವ, ಸಿಂದಗಿ, ನಾಗಠಾಣ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ವಿಜಯಪುರ ಜಿಲ್ಲಾ ಕಚೇರಿಗಳ ಸಂಕೀರ್ಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.…

Read More

ತಿಪಟೂರು : ತಾಲ್ಲೂಕಿನ ಹಾಲ್ಕುರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾಸಭೆ ನಡೆಸಲಾಯಿತು. ಸಂಘದ ಆವರಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಬಸವರಾಜು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘದ ಸದಸ್ಯರು ಹಾಗೂ ಶೇರುದಾರರ ಸಹಕಾರದಿಂದ ನಮ್ಮ ಸಹಕಾರ ಸಂಘ ಉತ್ತಮವಾಗಿ ನಡೆಯುತ್ತಿದೆ. ಸದಸ್ಯರು ಹಾಗೂ ಶೇರುದಾರರು ಪರಸ್ಪರ ಸಹಕಾರವೇ ನಮ್ಮ ಯಶಸ್ಸು.  ಸಂಘದ ಬೆಳವಣಿಗೆಗೆ ಸದಸ್ಯರು ರೈತರು ಹಾಗೂ ಸಾರ್ವಜನಿಕರು ಹೆಚ್ಚುಹೆಚ್ಚು ವಹಿವಾಟು ನಡೆಸಿ ಸಂಘದ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಪಿ ನಾಗರಾಜು ಸಂಘದ ಅಯವ್ಯಯ ಮಂಡಿಸಿದರು. ಸಭೆಯಲ್ಲಿ ನಿರ್ದೇಶಕರಾದ ಎಂ.ಬಿ.ಉಮಾಮಹೇಶ್, ರೇವಣ್ಣ, ಸೋಮಶೇಖರ್ ಹೆಚ್.ಪಿ., ಜಯಂತಿ, ಸಾವಿತ್ರಮ್ಮ, ಮೋಹನ್ ಕುಮಾರ್  ಆಡಳಿತಾದಿಕಾರಿ ಟಿ.ಪಿ.ಉಮಾಮಹೇಶ್ ಉಪಸ್ಥಿತರಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ: ಇನ್ನರ್ ವೀಲ್ ಕ್ಲಬ್ ಸೆಂಟ್ರಲ್ ಬೆಂಗಳೂರು ಸಂಸ್ಥೆಯು, ತಾಲೂಕಿನ ಕಾಟಗೊಂಡನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಶಿರಡಿ ಸಾಯಿ ವೃದ್ಧಾಶ್ರಮಕ್ಕೆ ಭೇಟಿ ಕೊಟ್ಟು ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿರುವ ವೃದ್ಧರಿಗೆ ಹೊದಿಕೆ, ವೃದ್ಧರಿಗೆ ನೆಲೆಯಾದ ಮತ್ತು ದಿನಬಳಕೆ ವಸ್ತುಗಳು ಹಾಗೂ ಇನ್ನಿತರೆ ಉಪಯುಕ್ತ ವಸ್ತುಗಳನ್ನು ವಿತರಿಸಲಾಯಿತು. ಕ್ಲಬ್ ಸದಸ್ಯರಾದ ಗುಣಂಬ ಸಿರವಳ್ಳಿ ಅಧ್ಯಕ್ಷರಾದ ರಶ್ಮಿ ಅಜಿತ್, ಖಜಾಂಚಿಯಾದ  ಹೇಮಾ ಶರವಣ್, ಡಾ.ನಿರ್ಮಲ ದಿನೇಶ್,  ವೃದ್ದಾಶ್ರಮದ ಅಧ್ಯಕ್ಷರಾದ ಗೋಪಾಲಯ್ಯ ಉಪಸ್ಥಿತರಿದ್ದರು. ವರದಿ: ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ. ರಾಜು ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ. ರಾಜು ಅವರು ಇಂದು ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ಹುಲಿಯಾ, ಬೆಳ್ಳಿಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗರ, ಯುದ್ದಕಾಂಡ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಕೆ.ವಿ.ರಾಜು ಅವರು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯಗಳು ದಿನೇದಿನೇ ಹೆಚ್ಚಾಗುತ್ತಿವೆ. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಲಾಗಿದೆ, ಇಡೀ ಮನುಕುಲಕ್ಕೆ ಕಾಯಕ ಧರ್ಮವನ್ನು ನೀಡಿದ ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಗಿದೆ. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿ ಇಡಲಾಗಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳು. ಈ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಈ ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ  ಸತತ ಹೋರಾಟ ನಡೆಸುತ್ತಿದೆ ಎಂದು ಟಿ.ಎ.ನಾರಾಯಣಗೌಡ ಅವರ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದ್ದು, ಈ ಸಂಬಂಧ ಹಲವು ನಿರ್ಣಯಗಳನ್ನು ಸಂಘಟನೆ ಕೈಗೊಂಡಿದೆ. ಕಳೆದ ಡಿಸೆಂಬರ್ 20ರಂದು ಬೆಳಗಾವಿಯಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಸುಮಾರು ಐದು ಸಾವಿರಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು. ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲೂ ಕರ್ನಾಟಕ ರಕ್ಷಣಾ ವೇದಿಕೆಯ…

Read More