Author: admin

ಪಾವಗಡ: ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿಸಿದ ಮಾರ್ಗ ಮತ್ತು ತತ್ವಗಳನ್ನು ಅನುಸರಿಸುವ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯವೆಂದು ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಎಚ್. ಪಿ. ವೆಂಕಟೇಶ್ ಹೇಳಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿದ್ಯೆ ಎನ್ನುವುದು ಸಮಾಜದಲ್ಲಿ ಏನೆಲ್ಲ ಸಾಧನೆ ಮಾಡಬಹುದು ಎಂಬುದಕ್ಕೆ ಅಂಬೇಡ್ಕರ್ ಅವರು ಜೀವಂತ ಉದಾಹರಣೆ. ಅವರ ಆದರ್ಶಗಳು ಮತ್ತು ತತ್ವಗಳು ನಮಗೆ ಪ್ರೇರಣೆಯಾಗಬೇಕು. ಇಂತಹ ಸಂದರ್ಭಗಳಲ್ಲಿ ಜಾತಿ, ಪಕ್ಷಪಾತವನ್ನು ಮರೆಯಬೇಕು,” ಎಂದ ಅವರು, ಜನತೆಗೆ ಉತ್ತಮ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಪುರಸಭೆ ಅಧ್ಯಕ್ಷ ಪಿ.ಎಚ್. ರಾಜೇಶ್, ತಹಸೀಲ್ದಾರ್ ಡಿ.ಎನ್. ವರದರಾಜು, ಇಒ ಜಾನಕಿರಾಮ್, ಸಿಪಿಐ ಗಿರೀಶ್, ಪ್ರಾಧ್ಯಾಪಕ ನಾಗಭೂಷಣ್ ಬಗ್ಗನಡಗು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು. ವರದಿ : ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೀದರ್: ಔರಾದ ತಾಲೂಕಿನ ಮಾದಿಗ ಸಮುದಾಯದ ವತಿಯಿಂದ ಇಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ  ಜಯಂತಿ  ಕಾರ್ಯಕ್ರಮ ಪಟ್ಟಣದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮುಖಂಡರಾದ ಸುಧಾಕರ ಕೊಳ್ಳೂರು ಮಾತನಾಡಿ, ಅಂಬೇಡ್ಕರ್ ಅವರ ವಿಚಾರಗಳು ಮತ್ತು ಅವರು ನೀಡಿದ ಸಂವಿಧಾನ ಈ ದೇಶದ ಬೆಳವಣಿಗೆಗೆ ದಿಕ್ಸೂಚಿಯಾಗಿದೆ.  ಸಾಮಾಜಿಕ ಸಮಾನತೆ, ಶೋಷಿತರ ಉದ್ಧಾರ ಮತ್ತು ನ್ಯಾಯಯುತ ಸಮಾಜ ನಿರ್ಮಾಣಕ್ಕಾಗಿ ಅವರ ಹೋರಾಟ ಇಂದಿಗೂ ಸಹ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು. ಸಮುದಾಯದ ಮುಖಂಡರಾದ ಅಶೋಕ್ ದರಬಾರೆ, ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದ ಮೇಘ, ಬಸವರಾಜ್ ಮಾಳಿಗೆ ಜಾನ್ಸನ್ ಅವರು ಮಾತನಾಡಿದರು. ಅಮರ ಜಲವಾ, ಮಾರುತಿ, ಯೆಶಪ್ಪ, ಅಬ್ರಾಮ್, ಶಾಮ್ವೇಲ್, ಅಜಯ, ತುಕಾರಾಂ, ರವಿ ಮತ್ತಿತರರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೀದರ್: ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ ವಿಶ್ವರತ್ನ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಪರಮೇಶ್ವರ ಮೇತ್ರೆ ಬಾಬಾ ಸಾಹೇಬರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವ  ನಮನ  ಸಲ್ಲಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾ.ಪಂ. ಸದಸ್ಯರು ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್      ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು:  ದೇಶಾದ್ಯಂತ ಎಸಿಪಿ, ಟಿಎಸ್‌ಪಿ ಕಾನೂನುಗಳನ್ನು ಜಾರಿಗೆ ಮಾಡಿದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮೊದಲಿಗನಾಗಿ ನಾನು ಧನ್ಯವಾದ ಹೇಳುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಅವರು, ದೇಶದಲ್ಲೇ ಆಂಧ್ರಪ್ರದೇಶ ಹೊರತುಪಡಿಸಿದರೆ ಕರ್ನಾಟಕ ಸರ್ಕಾರ ಎರಡನೆಯದಾಗಿ ಎಸ್ ಸಿಪಿ, ಟಿಎಸ್ ಪಿ ಜಾರಿಗೆ ತಂದಿದೆ. ಜನಸಂಖ್ಯೆಗನುಗುಣವಾಗಿ ಹಣ ಬಳಕೆ ಮಾಡುತ್ತಿದ್ದೇವೆ. ಇದನ್ನು ಮರೆಮಾಚಲು ಬಿಜೆಪಿಯವರು ಪರಿಶಿಷ್ಟರ ಅಭಿವೃದ್ಧಿಗೆ ಹಣವನ್ನು ಬೇರೆ ರೀತಿ ವರ್ಗಾವಣೆ ಮಾಡಲಾಗಿದೆ ಎಂದು ಟೀಕೆ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದರು. ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲಿ ಎಸ್ ಸಿಪಿ, ಟಿಎಸ್‌ ಪಿ ಕಾಯ್ದೆಯಿಲ್ಲ, ಟೀಕೆ ಮಾಡುವ ಬಿಜೆಪಿಯು ಕೇಂದ್ರದಲ್ಲಿ ಕೇಂದ್ರದಲ್ಲಿ ಎಸ್ ಸಿಪಿ, ಟಿಎಸ್ ಪಿಯನ್ನು ಜಾರಿಗೊಳಿಸಲಿ ಎಂದು ಸವಾಲು ಹಾಕಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಾಸಕರಾದ ರಿಜ್ವಾನ್ ಹರ್ಷದ್, ಪಿ.ಎಂ.ನರೇಂದ್ರಸ್ವಾಮಿ ಮತ್ತಿತರರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಮಠದ ಮಕ್ಕಳಲ್ಲಿ ಒಂದು ರೀತಿ ಆತಂಕ ಮೂಡಿಸಿತ್ತು. ನಂತರ ಮಠದ ಸಿಬ್ಬಂದಿಗಳು ತಕ್ಷಣ ಊರಗತಜ್ಞರಾದ ಕಾರ್ತಿಕ್ ಮತ್ತು ಸೂರ್ಯ ಅವರಿಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಸುಮಾರು ಎಂಟು ಅಡಿ ಉದ್ದದ ಹೆಬ್ಬಾವು , ಮಠದ ಆವರಣದಲ್ಲಿರುವ ದೇವಸ್ಥಾನಕ್ಕೆ ಕಿಟಕಿ ಮೂಲಕ ಪ್ರವೇಶಿಸಿದೆ. ಮಠದ ಸಿಬ್ಬಂದಿ ಇದನ್ನು ಕಂಡು ಕೆಲಕಾಲ ಗಾಬರಿಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಬೆಂಗಳೂರು: ಹುಬ್ಬಳ್ಳಿಯಲ್ಲಿ ಅತ್ಯಾಚಾರ ಪ್ರಕರಣ ಆರೋಪಿ ರಿತೇಶ್ ಕುಮಾರ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ರೇಪಿಸ್ಟ್ ರಿತೇಶ್ ಕುಮಾರ್ ಎನ್ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ. ಆದರೆ ಅದು ಬೆನ್ನಿಗೆ ಬಿದ್ದಿದೆ. ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಬಿಹಾರ ಮೂಲದ ವ್ಯಕ್ತಿ ಐದು ವರ್ಷದ ಮಗುನ ಎತ್ತಿಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಆತನ ಬಂಧನವಾಗಿದೆ. ಆತನನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ. ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ, ಪೊಲೀಸರು ಅವರ ಆತ್ಮ ರಕ್ಷಣೆ ಮಾಡಿಕೊಳ್ಳಬೇಕಲ್ಲಾ. ಹೀಗಾಗಿ ಕಾಲಿಗೆ ಫೈಯರ್ ಮಾಡಿದ್ದಾರೆ ಅದು ಬೆನ್ನಿಗೆ ಬಿದ್ದಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಘಟನೆ ಸಂಬಂಧ ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಅವರು…

Read More

ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ.ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3:4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕೆಲ ತಿಂಗಳ ಹಿಂದಷ್ಟೇ ಬ್ಯಾಂಕ್ ಜನಾರ್ಧನ ಅವರಿಗೆ ಹೃದಯಾಘಾತವಾಗಿತ್ತು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಸಂವಿಧಾನ ಶಿಲ್ಪ, ಮಾನವತಾವಾದಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜನ್ಮದಿನಾಚರಣೆಯಾದ ಇಂದು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ನೆರೆವೇರಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಬಿ.ಎಸ್. ಅಬ್ದುಲ್ ಖಾದರ್, ಸಿ.ಗೋಪಾಲ್ ರವರುಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ಆಡಳಿತಾಧಿಕಾರಿ ಶಿವಪ್ರಕಾಶ್ ಹಾಗೂ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಈ ಘಟನೆ ನಡೆದಿತ್ತು. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ ಪೊಲೀಸರಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿತ್ತು. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಲು ಮುಂದಾದರು. ಆದರೆ ಪೊಲೀಸರ ಮೇಲೆ ರಿತೇಶ್ ಕುಮಾರ್ ಹಲ್ಲೆಗೆ ಯತ್ನಿಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಪೊಲೀಸರು ಹಾರಿಸಿದ ಗುಂಡುಗಳು ಆರೋಪಿಯ ಕಾಲು ಮತ್ತು ಎದೆಯ ಭಾಗಕ್ಕೆ ನುಗ್ಗಿದ್ದರಿಂದ ಅಲ್ಲೆ ಕುಸಿದುಬಿದ್ದಿದ್ದಾನೆ. ತಕ್ಷಣ ಪೊಲೀಸರು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾದರು. ಆದರೆ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ರಿತೇಶ್ ಕುಮಾರ್ ಚಾಕಲೇಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು…

Read More

ತುಮಕೂರು:  12 ಅಡಿ  ಎತ್ತರದ ಸಾವಿರ ಕೆ.ಜಿ. ತೂಕದ ಕಂಚಿನ ಅಂಬೇಡ್ಕರ್ ಪ್ರತಿಮೆ ನಾಳೆ ಉದ್ಘಾಟನೆಯಾಗಲಿದ್ದು,  ಐವತ್ತು ವರ್ಷದ ತುಮಕೂರು ನಾಗರಿಕರ ಕನಸು ನಾಳೆ ನನಸಾಗಲಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ತಿಳಿಸಿದ್ದಾರೆ. ಐ ಎ ಎನ್ ಎಸ್ ಜೊತೆ ಮಾತನಾಡಿದ ಅವರು, ಸುಮಾರು 40 ಲಕ್ಷ ರೂ ಮೌಲ್ಯದ ಅಂಬೇಡ್ಕರ್ ಪ್ರತಿಮೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು. ಅಂಬೇಡ್ಕರ್ ಪ್ರತಿಮೆಯು ಏಕತೆ ಮತ್ತು ಸಮಗ್ರತೆಗೆ ಮಾದರಿಯಾಗುವಂತೆ ತುಮಕೂರು ಜಿಲ್ಲೆಯಲ್ಲಿ ಪ್ರತಿಷ್ಠಾಪನೆಗೊಳ್ಳುತ್ತಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More