Subscribe to Updates
Get the latest creative news from FooBar about art, design and business.
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
- ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
- ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
- 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
- ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
- ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
Author: admin
ತುರುವೇಕೆರೆ: ತಾಲ್ಲೂಕಿನಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ –2025 ಭರದಿಂದ ಸಾಗಿದ್ದು, ಗಣತಿಯಿಂದ ಯಾರಾದರೂ ಹೊರಗುಳಿದಿದ್ದರೆ ತಕ್ಷಣ ಸರ್ಕಾರ ಆರಂಭಿಸಿರುವ ಸಹಾಯವಾಣಿಗೆ ಸಂಪರ್ಕಿಸಬೇಕೆಂದು ತಾಲೂಕಿನ ತಹಶೀಲ್ದಾರ್ ಕುಂ.ಇ.ಅಹಮದ್ ರವರು ತಾಲೂಕಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. 13.08.2025 ಆದೇಶದನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ –2025 ಮನೆ ಮನೆ ಸಮೀಕ್ಷೆಯಮ್ಮ ಸೆಪ್ಟೆಂಬರ್ –22 ರಿಂದ ಅಕ್ಟೋಬರ್ –7 ರವರೆಗೆ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುತ್ತದೆ . ಅದರಂತೆ ತುರುವೇಕೆರೆ ತಾಲೂಕಿನಲ್ಲಿಯೂ ಸಹ 443 ಸಮೀಕ್ಷೆದಾರರು, 22 ಸಮೀಕ್ಷಾ ಮೇಲ್ವಿಚಾರಕರು, 12 ಮಾಸ್ಟರ್ ಟ್ರೈನರ್ಗಳು ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಆದರಿಂದ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಗ್ರಾಮ / ಹಟ್ಟಿ / ಕಾಲೋನಿ / ಬೀದಿಗಳಲ್ಲಿ ಕುಟುಂಬದಲ್ಲಿ ಸಮೀಕ್ಷೆ ನಡೆಯದೇ ಇದ್ದಲ್ಲಿ ಅಂತಹ ವಿವರಗಳನ್ನು ದಿ : 07.10.2025 ರ ಒಳಗೆ ಕೆಳಕಂಡ ತುರುವೇಕೆರೆ ತಾಲ್ಲೂಕು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಸಹಾಯವಾಣಿಯನ್ನು ಸಂಪರ್ಕಿಸಿ , ಮಾಹಿತಿ ಒದಗಿಸುವುದು ಅಥವಾ ತಾಲ್ಲೂಕು…
ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು. ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು. ಹಂಪಿ ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು. ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’…
ಬೆಂಗಳೂರು: ಗಣತಿ ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಎಂದು ಕೇಳಬಾರದು. ಬೆಂಗಳೂರಲ್ಲಿ ಆ ರೀತಿ ಕೇಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ನಿಮಗೆ ಏನು ಉತ್ತರ ಕೊಡಬೇಕೋ ಅದಕ್ಕೆ ಉತ್ತರ ಕೊಡಿ. ಕೊಡಬಾರದು ಅನ್ನಿಸಿದರೆ ಕೊಡಬಾರದು. ಎಷ್ಟು ವಾಚ್, ಎಷ್ಟು ಚಿನ್ನ ಇದೆ, ಎಷ್ಟು ಫ್ರಿಡ್ಜ್ ಇದೆ ಅದೆಲ್ಲ ಕೇಳಬೇಡಿ. ಅದು ಅವರ ಪರ್ಸನಲ್ ಬಿಟ್ಟು ಬಿಡಿ ಎಂದು ಅಧಿಕಾರಿಗಳಿಗೂ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು. ಯಾರು ಬೇಕಾದರೂ ಅಪೇಕ್ಷೆಪಡಲಿ. ಕೋರ್ಟ್ ಹೇಳಿದೆ, ಏನು ಬೇಕೋ ಅದಕ್ಕೆ ಮಾತ್ರ ಉತ್ತರ ನೀಡಿ. ಆದರೆ ಸಮೀಕ್ಷೆ ವಿರೋಧ ಮಾಡೋದರಲ್ಲಿ ಅರ್ಥ ಇಲ್ಲ, ಎಲ್ಲರೂ ಭಾಗಿಯಾಗಬೇಕು. ಇಲಾಖೆಯವರು ಏನು ಮಾಡುತ್ತಾರೆ, ಮಾಡಲಿ. ಎಲ್ಲರೂ ಸಮೀಕ್ಷೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ–2025’ ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ನಮ್ಮಲ್ಲಿ ಅನೇಕ ಜಾತಿ, ಅನೇಕ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು. ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ. ಅಂದಿಗಲ್ಲ—ಇಂದಿಗಲ್ಲ–ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದರು. ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ…
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ವೇಳೆ ದೇಶದ ಯಾವುದೇ ಭಾಗದಲ್ಲೂ ಹಿಂದೂಗಳು ಅಶಾಂತಿ ಉಂಟುಮಾಡಿಲ್ಲ. ಆದ್ರೆ ರಾಜ್ಯದ ಮದ್ದೂರು, ನಾಗಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದರು. ಇಸ್ಲಾಂ ಧರ್ಮದಲ್ಲಿ ನಿಜವಾದ ಸೋದರತ್ವದ ಮೌಲ್ಯಗಳು ಕಾಣಿಸುತ್ತಿಲ್ಲ. ಈಗ ಕರ್ನಾಟಕದಲ್ಲಿ ಸಾಬ್ರ ಸರ್ಕಾರವೇ ಆಡಳಿತ ನಡೆಸುತ್ತಿದೆ. ನಮ್ಮ ಮುಖ್ಯಮಂತ್ರಿ ದಸರಾ ವೇಳೆ ಚಾಮುಂಡೇಶ್ವರಿಯ ಕುಂಕುಮ ಹಚ್ಚಿಕೊಳ್ಳುವುದಿಲ್ಲ, ಆದರೆ ಮುಸ್ಲಿಂ ಕಾರ್ಯಕ್ರಮಗಳಲ್ಲಿ ಟೋಪಿ ಧರಿಸಿ ಸಂತೋಷ ವ್ಯಕ್ತಪಡಿಸುತ್ತಾರೆ ಎಂದು ಟೀಕಿಸಿದರು. 2028ರಲ್ಲಿ ಸನಾತನ ಧರ್ಮ ರಕ್ಷಣೆ ಮಾಡುವ ಶಕ್ತಿಯೇ ಅಧಿಕಾರಕ್ಕೆ ಬರಬೇಕು, ಹಿಂದೂಗಳ ದೇವಾಲಯಗಳು, ಕುಂಕುಮ ಮತ್ತು ಸಂಸ್ಕೃತಿಯ ರಕ್ಷಣೆ ಅಗತ್ಯವಾಗಿದೆ. ಇನ್ನೂ ನನಗೂ ಒಂದು ಅವಕಾಶ ಕೊಡಿ ಮಾದರಿ ಆಡಳಿತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಆಗುವ…
ತುಮಕೂರು: ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಲು ಅ.1ರಿಂದ ರೈತರ ನೋಂದಣಿ ಆರಂಭವಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 4,886 ನಿಗದಿಪಡಿಸಲಾಗಿದೆ. ನೋಂದಣಿ ಮಾಡಿಸಲು ಡಿಸೆಂಬರ್ 15ರ ವರೆಗೆ ಕಾಲಾವಕಾಶವಿದೆ. 2026ನೇ ಜನವರಿ 1ರಿಂದ ಮಾರ್ಚ್ 31ರ ವರೆಗೆ ರಾಗಿ ಖರೀದಿ ನಡೆಯಲಿದೆ. 11 ನೋಂದಣಿ ಕೇಂದ್ರ: ಚಿಕ್ಕನಾಯಕನಹಳ್ಳಿ ಹೊಸ ಸರ್ಕಾರಿ ಆಸ್ಪತ್ರೆ ಹಿಂಭಾಗ ಇರುವ ಎಪಿಎಂಸಿ ಗೋದಾಮು, ಹುಳಿಯಾರು ಎಪಿಎಂಸಿ, ಕುಣಿಗಲ್ ಎಪಿಎಂಸಿ (2 ಕೇಂದ್ರ), ತಿಪಟೂರು ಎಪಿಎಂಸಿ, ತುರುವೇಕೆರೆ ಎಪಿಎಂಸಿ, ಗುಬ್ಬಿ ಎಪಿಎಂಸಿ, ಮಧುಗಿರಿ ಎಪಿಎಂಸಿ, ಶಿರಾ ಎಪಿಎಂಸಿ, ಕೊರಟಗೆರೆ ಅಕ್ಕಿರಾಂಪುರ ಪಿಡಿಎಸ್ ಗೋದಾಮು, ತುಮಕೂರು ಬಟವಾಡಿ ಎಪಿಎಂಸಿ ಗೋದಾಮಿನಲ್ಲಿ ರೈತರು ನೋಂದಣಿ ಮಾಡಿಸಬಹುದು. ನಗರದಲ್ಲಿ ಶನಿವಾರ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ನೋಂದಣಿಗೆ ಅಗತ್ಯ ಕ್ರಮಕ್ಕೆ ನಿರ್ದೇಶಿಸಿದರು. ಆಹಾರ ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ, ಕೃಷಿ ಇಲಾಖೆ ಜಂಟಿ ನಿರ್ದೇಶಕ…
ಕುಣಿಗಲ್: ಬೆಸ್ಕಾಂ ಸಿಬ್ಬಂದಿ ಯಡವಟ್ಟಿನಿಂದಾಗಿ ಜಾತಿವಾರು ಸಮೀಕ್ಷೆಗೆ ಸರಿಯಾದ ಮನೆ ವಿಳಾಸ ಸಿಗುತ್ತಿಲ್ಲ ಎಂದು ಆರೋಪಿಸಿದ ಸಮೀಕ್ಷೆದಾರರು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು. ಪಟ್ಟಣದ ಕುವೆಂಪು ನಗರದಲ್ಲಿ ಸಮೀಕ್ಷೆಗೆ 20 ಶಿಕ್ಷಕರ ನಿಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಮನೆ ವಿಳಾಸ ಹುಡುಕಲಾಗದೆ, ಜಿಪಿಎಸ್ ಲೊಕೇಶನ್ ಹಾಕಿದರೆ ಅಂಚೆಪಾಳ್ಯ, ಊರಾಚೆ, ಮರದ ಕೆಳಗೆ ತೋರಿಸುತ್ತಿತ್ತು. ಇದರಿಂದ ಬೇಸತ್ತ ಶಿಕ್ಷಕರು ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಮೇಲ್ವಿಚಾರಕ ಮಹೇಶ್ ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ಶನಿವಾರ ಅಗತ್ಯ ಸಿಬ್ಬಂದಿ ಕಳಿಸುವ ಭರವಸೆ ನೀಡಿದ್ದರು. ಶನಿವಾರ ಬೆಳಿಗ್ಗೆ 20ಕ್ಕೂ ಹೆಚ್ಚು ಶಿಕ್ಷಕರು ಸಮೀಕ್ಷೆಗೆ ಬಂದಾಗ ಒಬ್ಬರೇ ಬೆಸ್ಕಾಂ ಸಿಬ್ಬಂದಿ ಇದ್ದು, ಸರಿಯಾದ ಮಾಹಿತಿ ಕೊಡಲು ವಿಫಲವಾದ ಕಾರಣ ಬೇಸತ್ತ ಶಿಕ್ಷಕರು ಎಸ್ ಬಿಐ ಬ್ಯಾಂಕ್ ಬಳಿ ಜಮಾವಣೆಗೊಂಡು ಬೆಸ್ಕಾಂ ಸಿಬ್ಬಂದಿ ನಡೆ ಖಂಡಿಸಿ ಧರಣಿಗೆ ಮುಂದಾದರು. ಮೇಲ್ವಿಚಾರಕ ಮಹೇಶ್ ಮಾತನಾಡಿ, ಬೆಸ್ಕಾಂ ಸಿಬ್ಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ. ಜಿಪಿಎಸ್ ವಿಳಾಸ ಹುಡುಕಲು ಹೋದರೆ…
ಕುಣಿಗಲ್: ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ಆತುರವಾಗಿ ವರದಿ ಪಡೆದು ಒಕ್ಕಲಿಗರ ಮೀಸಲಾತಿಗೆ ಧಕ್ಕೆಯಾದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಂಜಾವಧೂತ ಸ್ವಾಮೀಜಿ ಎಚ್ಚರಿಸಿದರು. ಪಟ್ಟಣದಲ್ಲಿ ಶನಿವಾರ ನಡೆದ ಒಕ್ಕಲಿಗರ ಮಾಹಿತಿ ಮತ್ತು ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಹಠಕ್ಕೆ ಬಿದ್ದು ಸಮೀಕ್ಷೆ ಮಾಡುತ್ತಿದ್ದು, ಅಂಕಿ ಅಂಶಗಳ ಪ್ರಕಾರ ಶೇ.70ರಷ್ಟು ಮುಗಿದಿದ್ದರೂ, ಗೊಂದಲಗಳು ನಿವಾರಣೆಯಾಗಿಲ್ಲ. ಸಮೀಕ್ಷೆ ವರದಿ ರಾಜಕೀಯ ಮೀಸಲಾತಿಗೆ ಪೂರಕವಾಗಿದ್ದು, ಸರ್ಕಾರಕ್ಕೆ ಸಮೀಕ್ಷೆ ಮುಗಿಸಿ ವರದಿ ಪಡೆಯಲು ಆತುರ ಯಾಕೆ? ಒಂದು ವೇಳೆ ವರದಿ ಆಧರಿಸಿ ಒಕ್ಕಲಿಗರ ಶೇ.4 ಮೀಸಲಾತಿಗೆ ಧಕ್ಕೆಯಾದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯವಾಗುತ್ತದೆ ಎಂದರು. ಮುಖ್ಯಮಂತ್ರಿ ತಮ್ಮ ಸಮುದಾಯದವರಿಗೆ ‘ಕುರುಬ’ ಎಂದು ಮಾತ್ರ ಬರೆಸಲು ಸೂಚನೆ ನೀಡಿದ್ದಾರೆ. ಆದರೆ ಕೆಲ ಒಕ್ಕಲಿಗರು ಪ್ರತಿಷ್ಠೆಯಿಂದಾಗಿ ಸಮೀಕ್ಷೆಯ ಸೂಕ್ಷ್ಮಗಳ ಅರಿವಿಲ್ಲದೆ ಮಾಹಿತಿ ನೀಡುತ್ತಿದ್ದಾರೆ. ಸಮೀಕ್ಷೆಯ ನೂನ್ಯತೆಗಳನ್ನು ಸರಿಪಡಿಸಿ, ಸಮೀಕ್ಷೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದರು. ವಿಶ್ವ ಒಕ್ಕಲಿಗರ ಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ…
ಕೊರಟಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಅರಸಾಪುರ ಬಳಿ ನಡೆದಿದೆ. ಅರಸಾಪುರದ ಶಕುಂತಲಮ್ಮ(39), ಗಂಗಮ್ಮ(36) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದನ ಮೇಯಿಸಲೆಂದು ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಕೃಷಿಹೊಂಡದ ಬಳಿಯಲ್ಲಿ ಮೃತರ ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿಗಳು ಪೊಲೀಸರ ತನಿಖೆಯ ನಂತರ ತಿಳಿದು ಬರಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೆಳಧರ ಬಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟವರನ್ನು ಕೊರಟಗೆರೆ ತಾಲ್ಲೂಕಿನ ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಗೋವಿಂದಪ್ಪ (60), ಬೈಚಾಪುರದ ಶಿವಶಂಕ (28) ಎಂದು ಗುರುತಿಸಲಾಗಿದೆ. ಕತ್ತಿನಾಗೇನಹಳ್ಳಿಯ ಗೋಪಾಲ್ (28), ರೆಡ್ಡಿಹಳ್ಳಿಯ ಶಂಕರ್ (28) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಧರ್ಮಸ್ಥಳಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ‘ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC