Author: admin

ತುಮಕೂರು: ತಮ್ಮ ವಿರುದ್ಧ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ರವರು ಏಕಾಏಕಿ ನಿಂದಿಸಿ ಅವಮಾನಗೊಳಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಂಡು ನಮಗೆ ರಕ್ಷಣೆ ನೀಡಬೇಕೆಂದು ಅಲೆಮಾರಿ ಜನಾಂಗದ ಕುಟುಂಬಸ್ಥರು ಎಸ್.ಪಿ.ರವರಿಗೆ ದೂರು ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಕಳೆದ ತಿಂಗಳು ಸುರಿದ ಕುಂಭದ್ರೋಣ ಮಳೆಯಿಂದಾಗಿ ಚಿ.ನಾ.ಹಳ್ಳಿ ತಾಲ್ಲೋಕಿನ ಕಡೆಗೆಹಳ್ಳಿ ಗ್ರಾಮದ ಗುಂಡು ತೋಪಿನಲ್ಲಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದ ಗುಡಿಸಲುಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಸೂರು ಕಲ್ಪಿಸಲಾಗಿತ್ತು. ನಂತರ ಕೆಲ ದಿನಗಳ ನಂತರ ಪುರಸಭೆ ಮುಖ್ಯಾಧಿಕಾರಿ ಹಾಗೂ ತಹಶೀಲ್ದಾರ್ ಬಂದು ಕೂಡಲೇ ತಮ್ಮ ಗುಡಿಸಲುಗಳಿಗೆ ತೆರಳುವಂತೆ ಒತ್ತಡ ಹೇರಿದ್ದಾರೆ. ಇದಕ್ಕೂ‌ ಮುನ್ನ ಅಲೆಮಾರಿ ಜನಾಂಗದ ಪರಮೇಶ್ ಎಂಬಾತ ತಹಶೀಲ್ದಾರ್ ರವರಿಗೆ ಮಳೆಯಿಂದಾಗಿ ಗುಡಿಸಲು ನಾಶವಾಗಿದೆ, ಈಗ ಗುಡಿಸಲಿಗೆ ಹೋಗಲು ಸಾಧ್ಯವಾಗುವುದಿಲ್ಲ, ಕನಿಷ್ಠ ಅದಕ್ಕೆ ಪರಿಹಾರ ನೀಡಿದರೆ ಗುಡಿಸಲು ಮರು ನಿರ್ಮಾಣ ಮಾಡಿಕೊಂಡು  ಬದುಕುತ್ತೇವೆಂದು ಮನವಿ ಸಲ್ಲಿಸಿರುತ್ತಾರೆ. ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರದ ಚೆಕ್ ಪಡೆದುಕೊಂಡು…

Read More

ತಿಪಟೂರು: ನಗರ ಪೊಲೀಸ್ ಠಾಣಾ ವತಿಯಿಂದ ತಿಪಟೂರು ನಗರದ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್  ಶ್ರೀಶೈಲಮೂರ್ತಿ, ಸಬ್ ಇನ್ಸ್ ಪೆಕ್ಟರ್ ದಾಕ್ಷಾಯಿಣಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಹಾಜರಿದ್ದರು. ಈ ಕಾರ್ಯಕ್ರಮದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಾಗೂ ಅಪರಾಧಗಳು ನಡೆಯದಂತೆ ಮುನ್ಸೂಚನಾ ಕ್ರಮಗಳನ್ನು ಅನುಸರಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದಾವಣಗೆರೆ: ಎದುರಿಗೆ ಬಂದ ಬೈಕ್‌ ಗೆ ದಾರಿ ಬಿಡಲು ಹೋಗಿ, ಖಾಸಗಿ ಬಸ್ ವಿದ್ಯುತ್ ಟ್ರಾನ್ಸ್ ಫಾರ್ಮರ್‌ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ತಾಲೂಕಿನ ಎಲೆಬೇತೂರ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತವಾದ ಬೆನ್ನಲ್ಲೇ ಬಸ್ ರಸ್ತೆ ಪಕ್ಕದ ಅಡಕೆ ತೋಟದಲ್ಲಿ ಪಲ್ಟಿಯಾಗಿದ್ದು, ವಿದ್ಯುತ್ ಇಲ್ಲದ ಕಾರಣ ಭಾರಿ ದುರಂತ ತಪ್ಪಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವಿನಾಯಕ ಹೆಸರಿನ ಖಾಸಗಿ ಬಸ್ ದಾವಣಗೆರೆಯಿಂದ ಜಗಳೂರು ಕಡೆ ಸಂಚರಿಸುತ್ತಿದ್ದಾಗ, ಎಲೆಬೇತೂರು ಕ್ರಾಸ್ ಬಳಿ ಅನಿರೀಕ್ಷಿತ ವಾಗಿ ಅಡ್ಡ ಬಂದ ಬೈಕ್ ಸವಾರನಿಗೆ ದಾರಿ ಬಿಡಲು ಹೋಗಿ ಈ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಬಹುತೇಕರಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಗಾಯಳುಗಳನ್ನು ಹತ್ತಿರದ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದ್ದು, ಪೋಲಿಸರು ಘಟನ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವರದಿ: ಆನಂದ್…

Read More

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಬಿಲ್ ನ್ನು ಸಂಪೂರ್ಣವಾಗಿ ವಿರೋಧಿಸಲು ನಿರ್ಧರಿಸಿದೆ. ಎರಡೂ ಸದನಗಳಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಲು  ಜೆಡಿಎಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಎಲ್ಲ ಶಾಸಕರು ಸದನದಲ್ಲಿ ಕಡ್ಡಾಯ ಹಾಜರಿಗೆ ವಿಪ್ ಜಾರಿ ಮಾಡಲಾಗಿದೆ. ಇದೊಂದು ಅನಗತ್ಯವಾದ ಬಿಲ್ ಆಗಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗಬೇಕಿತ್ತು. ರಾಜ್ಯ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಬಿಟ್ಟು, ಬಿಜೆಪಿ ಮತಾಂತರ ನಿಷೇಧ ಬಿಲ್ ತರುವ ಮೂಲಕ ಸದನವನ್ನು ಡೈವರ್ಟ್ ಮಾಡಲು ಯತ್ನಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,  ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ ಎಂದು ಪ್ರಶ್ನಿಸಿದ ಅವರು, ‘‘ಮುಸಲ್ಮಾನರಾದ ಮಾತ್ರಕ್ಕೆ ಪಾಕಿಸ್ತಾನಕ್ಕೆ ಹೋಗಬೇಕೆ?” ಎಂದು ಪ್ರಶ್ನಿಸಿದರು. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ  ಬಂದರೆ ಸಾಕಷ್ಟು ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು,  ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ. ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್…

Read More

ತುಮಕೂರು: ನಾಡಿನ ಸಂಸ್ಕೃತಿಯನ್ನು ಭವ್ಯ ಇತಿಹಾಸವನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಮಾಡುತ್ತಿರುವ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ರೋಟರಿ ಭವನ ನೆಹರು ಮೈದಾನದಲ್ಲಿ ನಡೆದ ದಿ.ಶಂಕರ್ ನಾಗ್ ಅಭಿಮಾನಿಗಳ ಕಲಾವೇದಿಕೆ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಹಾಗೂ ನಟ ಶಂಕರ್ ನಾಗ್ ರವರ 67ನೇ ಹುಟ್ಟುಹಬ್ಬ ಹಾಗೂ ನಟ ಹಿನ್ನಲೆ ಗಾಯಕ ಪವರ್ ಸ್ಟಾರ್  ಪುನೀತ್ ರಾಜಕುಮಾರ್ ರವರ ಸವಿನೆನಪಿನ ಈ ಕಾರ್ಯಕ್ರಮವನ್ನು  ಉದ್ಘಾಟಿಸಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ರವರು ಮಾತನಾಡಿದರು. ಕಲಾವಿದರಾದ  ದಿವು ಶಂಕರ್ ರವರು, ಶಂಕರ್ ನಾಗ್ ರೂಪದಲ್ಲಿ ನಾಡಿನ ಉದ್ದಗಲಕ್ಕೂ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಭಿನಯ ಮಾಡುವುದರ ಮೂಲಕ ಹೆಸರು ಪಡೆದಿದ್ದಾರೆ. ಕಲಾವಿದರ ಬದುಕು ಹಸನಾಗಬೇಕಾದರೆ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಸುಧಾಕರ್ ತಿಳಿಸಿದರು.

Read More

ತಿಪಟೂರು: 2022ನೇ ವರ್ಷದಲ್ಲಿ ಯಾವುದೇ ವೈರಾಣು ದೇಶವನ್ನು ಬಾಧಿಸದಿರಲಿ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಹಾರೈಸಿದರು. ತಿಪಟೂರಿನಲ್ಲಿ 2022ರ ಹೊಸ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2021ರಲ್ಲಿ ದೇಶವನ್ನು ಕೊರೊನಾ ಡೆಲ್ಟಾ ವೈರಸ್ ತೀವ್ರವಾಗಿ ಬಾಧಿಸಿತ್ತು. ಇದೀಗ 2022 ಸಮೀಪಿಸುತ್ತಿರುವ ಸಂದರ್ಭದಲ್ಲಿ ಒಮಿಕ್ರಾನ್ ವೈರಾಣು ಬಂದಿದೆ. ಈ ವೈರಾಣು ದೇಶವನ್ನು ಬಾಧಿಸದಿರಲಿ ಎಂದು ಹಾರೈಸಿದರು. ಕ್ಯಾಲೆಂಡರ್ ಬಿಡುಗಡೆಯ ಸಂದರ್ಭದಲ್ಲಿ ಗೊರಗೊಂಡನಹಳ್ಳಿ ಸಹಕಾರ ಸಂಘದ ಸುದರ್ಶನ್, ಪಕ್ಷದ ಮುಖಂಡರು, ಯುವ ಮಿತ್ರರು ಮೊದಲಾದವರಿದ್ದರು.

Read More

ಮಧುಗಿರಿ: ಹಾಲು ಉತ್ಪಾದಕರ ಸಹಕಾರ ಸಂಘ ನಿ. ಬೇಡತ್ತೂರು ಇದರ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ  ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು MPCS ಅಧ್ಯಕ್ಷ B.A.ರಾಜೇಂದ್ರ ಪ್ರಸಾದ್ ವಹಿಸಿದ್ದರು. ಕೊಂಡವಾಡಿ ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ತಿಮ್ಮಾರೆಡ್ಡಿ 2020-21ನೇ ಸಾಲಿನ ಆಡಿಟ್ ಆದ ಜಮಾಖರ್ಚುನ್ನು ಸಭೆಯಲ್ಲಿ ಓದಿದರು. ಸಭೆಯಲ್ಲಿ ವಿಸ್ತರಣಾಧಿಕಾರಿ ಗಿರೀಶ್, ದರ್ಶನ್ ಕೆ.ಟಿ., ವಿಸ್ತರಣಾ ಸಮಾಲೋಚಕ ಧರ್ಮವೀರ, MPCS ಕಾರ್ಯಕಾರಿ ಮಂಡಳಿ ಸದಸ್ಯರಾದ ಬಿ.ವಿ.ರಾಮಕೃಷ್ಣಪ್ಪ, ಅಂಜನ ರೆಡ್ಡಿ, ಶ್ರೀರಾಮರೆಡ್ಡಿ, ಮಂಜುನಾಥ್, ಗೋಪಾಲಯ್ಯ, ಶ್ರೀರಂಗಪ್ಪ, ಭಾಗ್ಯಮ್ಮ ಅರುಣ್, ಅಂಜಿನಮ್ಮ, ಚಿಕ್ಕಓಬಳಯ್ಯ, ನೌಕರರ ಸಿಬ್ಬಂದಿ ತಿಮ್ಮರೆಡ್ಡಿ, ಈಶ್ವರಯ್ಯ, ರವೀಂದ್ರ ರೆಡ್ಡಿ ಉಪಸ್ಥಿತರಿದ್ದರು.  ಬಿ.ಎನ್.ಮಲ್ಲಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ

Read More

ಹಿರಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ನಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ  ಸಾಂಕ್ರಾಮಿಕ ರೋಗ ಕೊರೊನಾ 2ನೇ ಅಲೆಗೆ ತತ್ತರಿಸಿದ ಕರ್ನಾಟಕ ಹಂತ ಹಂತವಾಗಿ ಇದೀಗ ಸಹಜ ಸ್ಥಿತಿಗೆ ಮರಳಿದೆ.  ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಈಗಾಗಲೇ ಪದವಿ ಸ್ನಾತಕೋತ್ತರ ತರಗತಿಗಳೆಲ್ಲವೂ ಸಹಜ ಸ್ಥಿತಿಗಳಲ್ಲಿ ನಡೆಯುತ್ತಿದ್ದು, ಶಾಲಾ,  ಕಾಲೇಜುಗಳು ಮರು ಪ್ರಾರಂಭವಾಗಿವೆ. ಆದರ,  ಭೌತಿಕ ತರಗತಿಗಳು ಆರಂಭಗೊಂಡರೂ ಸಹ ಇನ್ನೂ ರಾಜ್ಯದ ಪ್ರಥಮ ದರ್ಜೆ – ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ತರಗತಿಗಳಲ್ಲಿ ಪೂರ್ಣ – ಪ್ರಮಾಣದ   ಪಾಠಗಳು ನಡೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ರಾಜ್ಯ-ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ – ಕಾಲೇಜುಗಳಿಗೆ ಅತಿಥಿ-ಉಪಾನ್ಯಾಸಕರನ್ನು ಸರ್ಕಾರ ಒಂದು ತಿಂಗಳು ತಡವಾಗಿ ನೇಮಿಸಿಕೊಂಡಿದ್ದು, ಅದು ಅವಶ್ಯಕತೆಗಿಂತ ಕಡಿಮೆ ಎಂದರೇ   80 ಪ್ರತಿಶತ ಉಪಾನ್ಯಾಸಕರನ್ನು ನೇಮಿಸಿಕೊಂಡಿದೆ .  ಆದರೆ ಕಳೆದ ಅಕ್ಟೋಬರ್ 28 ರಿಂದ…

Read More