Author: admin

ಹೆಚ್.ಡಿ.ಕೋಟೆ: ತಾಲೂಕಿನ ಚಾ ಕಳ್ಳಿ ಮತ್ತು  ಹೆಗ್ಗಡಾಪುರ ಗ್ರಾಮಗಳ ಸರ್ಕಾರಿ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್ನು ಮತ್ತು ಪೆನ್ಸಿಲ್ ಗಳನ್ನು ರಕ್ಷಣಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ಚಂದ್ರಿಕಾ ದೊರೆಸ್ವಾಮಿ ಹಾಗೂ ಸ್ವಯಂ ನಿವೃತ್ತಿ ಹೊಂದಿದ ಎಎಸ್ಐ ದೊರೆಸ್ವಾಮಿ ವಿತರಣೆ ಮಾಡಿದರು. ಸಂದರ್ಭದಲ್ಲಿ ಚಂದ್ರಿಕಾ ದೊರೆಸ್ವಾಮಿ ಮಾತನಾಡಿ,  ಹೆಚ್.ಡಿ.ಕೋಟೆ ತಾಲೂಕು ಹಿಂದುಳಿದ ತಾಲೂಕು ಎಂದು ಹೆಸರುವಾಸಿಯಾಗಿದೆ ಹಿಂದುಳಿದ ತಾಲೂಕು ಎಂಬ ಹಣೆ ಪಟ್ಟಿಯ ಬಗ್ಗೆ ಕೇವಲ ಸ್ಟೇಜ್ ಮೇಲೆ ಬೂಟಾಟಿಕೆ ಮಾತುಗಳಿಂದ ಆಗಲಿ ವೇದಾಂತದ ಮಾತುಗಳಿಂದ ಆಗಲಿ ಸುಳ್ಳು ಆಶ್ವಾಸನೆ ಭರವಸೆಗಳಿಂದ ಆಗಲಿ ಸಾಧ್ಯವಿಲ್ಲ, ಬದಲಿಗೆ ವಿದ್ಯೆಯಿಂದ , ಬುದ್ಧಿಯಿಂದ ಜ್ಞಾನದಿಂದ ಪ್ರಜ್ಞಾವಂತರಾದ ರೆ ಮಾತ್ರ ಅಭಿವೃದ್ಧಿ ಮತ್ತು ಬದಲಾವಣೆ ಮಾಡಲುಸಾಧ್ಯ ಎಂದು ಅರಿತು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಪೋಲಿಸ್ ಇಲಾಖೆಯಿಂದ ನಿವೃತ್ತ ಹೊಂದಿ ಸಮಾಜಸೇವೆ ಮಾಡಲು ಎಎಸ್ಐ ದೊರೆಸ್ವಾಮಿ ಮಾತನಾಡಿ, ಹೆಚ್.ಡಿ.ಕೋಟೆಯನ್ನು ಬದಲಾವಣೆಯತ್ತ ಕೊಂಡೊಯ್ಯಲು ವಿದ್ಯೆಯಿಂದ ಜ್ಞಾನದಿಂದ ಸಾಧ್ಯ ಎಂದು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ…

Read More

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಸೇರಿದಂತೆ ದೇಶದ 4 ರಾಜ್ಯಗಳ 16 ಸ್ಥಾನಗಳಿಗೆ ಮತದಾನ ಇಂದು ಆರಂಭವಾಗಿದೆ. ವಿಧಾನಸಭೆಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಮತದಾನ ಮುಕ್ತವಾಗಿರುವುದರಿಂದ ಯಾರು ಯಾವ ಅಭ್ಯರ್ಥಿಗೆ ಮತ ಹಾಕಿದ್ದಾರೆ, ಎಷ್ಟು ಅಡ್ಡ ಮತದಾನವಾಗಲಿದೆ ಎಂದು ಸುಲಭವಾಗಿ ತಿಳಿದು ಬರಲಿದೆ. ಶಾಸಕರು ಮತದಾನ ಮಾಡುವಾಗ ತಮ್ಮ ಪಕ್ಷದ ಏಜೆಂಟ್ ಗೆ ತೋರಿಸಿ ಮತ ಹಾಕಬೇಕಾಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಸ್ವತಂತ್ರ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನಿವಾಸದ ಮುಂದೆ ಪ್ರತಿಭಟಿಸಿ ಆರೆಸ್ಸೆಸ್ ಚಡ್ಡಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎನ್ ಎಸ್ ಯುಐ ಕಾರ್ಯಕರ್ತರನ್ನು ಬಿಡುಗಡೆಗೊಳಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರಿಗೆ ಪಠ್ಯಪುಸ್ತಕದಲ್ಲಿ ಅವಮಾನ ಮಾಡಿರುವುದನ್ನು ವಿರೋಧಿಸಿದ್ದ ಎನ್ ಎಸ್ ಯುಐ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿ.ಸಿ.ನಾಗೇಶ್ ಮನೆ ಮುಂದೆ ವಿದ್ಯಾರ್ಥಿಗಳು ಚಡ್ಡಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ ವೇಳೆ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿಗಳನ್ನು 9 ದಿನಗಳ ಬಳಿಕ ಇಂದು ಬಿಡುಗಡೆಗೊಳಿಸಲಾಗಿದೆ. ವಿದ್ಯಾರ್ಥಿಗಳ ಬಿಡುಗಡೆಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತ್ತು. ಬಿಡುಗಡೆಯ ಬಳಿಕ ಮಾತನಾಡಿದ ಎನ್ ಎಸ್ ಯುಐ ರಾಜ್ಯಾದ್ಯಕ್ಷ  ಕೀರ್ತಿ ಗಣೇಶ್, ದೇಶಕ್ಕೋಸ್ಕರ ಹೋರಾಟ ಮಾಡಿ ಜೈಲಿಗೆ ಹೋಗಿದ್ದಕ್ಕೆ ಖುಷಿ ಇದೆ. ಆರೆಸ್ಸೆಸ್ ಮಾತು ಕೇಳಿ ಬಿಜೆಪಿಯವರು ಅಂಬೇಡ್ಕರ್, ಬಸವಣ್ಣ, ಕುವೆಂಪು ವಿಚಾರಗಳನ್ನು ಸುಟ್ಟು ಹಾಕಲು ಪ್ರಯತ್ನಿಸುತ್ತಿತ್ತು. ಹಾಗಾಗಿ ನಾವು ಆರೆಸ್ಸೆಸ್ ಚಡ್ಡಿ ಸುಟ್ಟಿದ್ದೇವೆ ಎಂದು…

Read More

ಹಿರಿಯೂರು: ಪುರುಷರಿಗೆ ಸಮಾನವಾಗಿ ಮಹಿಳೆಯರು ಕರ್ತವ್ಯ ನಿರ್ವಹಿಸಲು ಸುರಕ್ಷಿತ ಹಾಗೂ ಸಾರ್ಥಕ ಸೇವೆ ಮಾಡಲು ಅನುಕೂಲಕರ ಕ್ಷೇತ್ರಗಳಲ್ಲಿ ಈ ಪೊಲೀಸ್ ಇಲಾಖೆಯು ಅಗ್ರಗಣ್ಯ ಸ್ಥಾನದಲ್ಲಿದೆ ಎಂಬುದಾಗಿ ನಗರಠಾಣೆ ಅಪರಾಧ ವಿಭಾಗದ ಉಪನಿರೀಕ್ಷಕಿಯಾದ ಪಿ ಎಸ್ ಐ ಅನುಸೂಯಮ್ಮ ಹೇಳಿದರು. ಹಿರಿಯೂರು ನಗರದ ಪೊಲೀಸ್ ಠಾಣೆಯಿಂದ ಪದೋನ್ನತಿ ಹೊಂದಿ ಚಿತ್ರದುರ್ಗ ನಗರ ಸಂಚಾರಿ ಠಾಣೆಗೆ ವರ್ಗಾವಣೆಗೊಂಡ ಮಹಿಳಾ ಪೇದೆ ಮಂಜುಳಾ ಅವರಿಗೆ ಹಮ್ಮಿಕೊಳ್ಳಲಾಗಿದ್ದ  ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮನ್ನು ಗುರುತಿಸಿಕೊಂಡಿದ್ದು, ಮಹಿಳಾ ಸಿಬ್ಬಂದಿಗೆ ಕೆಲವೊಂದು ಕ್ಷೇತ್ರಗಳಲ್ಲಿ ವಿನಾಕಾರಣ ಕಿರುಕುಳ ನೀಡುವ ಉದಾಹರಣೆಗಳನ್ನು ಸಹ ನೋಡಿದ್ದೇವೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಎಲ್ಲಾ ಹಂತದ ಸಿಬ್ಬಂದಿ, ಅಧಿಕಾರಿಗಳು ನಿರ್ಭೀತವಾಗಿ ಕಾರ್ಯ ನಿರ್ವಹಿಸುವ ಕ್ಷೇತ್ರವಾಗಿದೆ. ಕೌಟುಂಬಿಕ ಸೌಜನ್ಯ, ಕಿರುಕುಳ ಹಾಗೂ ಅಬಲೆಯರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಪೋಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಹೆಚ್ಚು ಅವಕಾಶ ಸಿಗುವ ಕಾರಣ ಇಲಾಖೆಯ ಸೇವೆಯನ್ನು ಆತ್ಮತೃಪ್ತಿಯಿಂದ ಮಾಡಬಹುದಾಗಿದೆ ಎಂದು ತಿಳಿಸಿದರು.…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಾಗನಾಯ್ಕನಹಟ್ಟಿ ಹೋಗುವ ರಸ್ತೆ ತೀರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಹಾಗೂ ವಾಹನ ಸವಾರರು ಸಹ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಸಂಬಂಧ ಪಟ್ಟ ವಾರ್ಡ್ ನ ನಗರಸಭೆ ಸದಸ್ಯರು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗನಾಯ್ಕನಹಟ್ಟಿ ಹೋಗುವ ರಸ್ತೆ ಮಾತ್ರವಲ್ಲದೆ ಹಿರಿಯೂರು ತಾಲ್ಲೂಕಿನ ಪ್ರಖ್ಯಾತಿ ಪಡೆದಿರುವ ಹಳೇ ಕಡಲೆಕಾಯಿ ಮಂಡಿಯ ಒಳಗಡೆ ರಾಷ್ಟ್ರಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳವಾಗಿದ್ದು, ಇಲ್ಲಿನ ಕ್ರೀಡಾಂಗಣವು ಕೆಸರು ಗದ್ದೆಯಾಗಿ ಮಾರ್ಪಟ್ಟಿದೆ. ಇನ್ನೂ ಕ್ರೀಡಾಂಗಣದಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಿದ್ದರೂ, ಬೀದಿ ಬದಿ ವ್ಯಾಪಾರಿಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಿರಿಯೂರು ನಗರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ. ಜನರು ಬೀದಿ ಬದಿ ವ್ಯಾಪಾರಸ್ಥರಿಂದ ಆಹಾರ ಖರೀದಿಸಿ ಸೇವಿಸಿದ ಬಳಿಕ ಪ್ಲಾಸ್ಟಿಕ್ ಪ್ಲೇಟ್ ಗಳನ್ನು ಅಲ್ಲಲ್ಲೆ ಹಾಕುತ್ತಿದ್ದಾರೆ. ಇದರಿಂದಾಗಿ ನಾನಾ ರೋಗಗಳಿಗೆ ಆಹ್ವಾನ ನೀಡಿದಂತಾಗಿದೆ. ಅಧಿಕಾರಿಗಳ ತೀವ್ರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು…

Read More

ಚೆನ್ನೈ:  ಬಹುಬಾಷ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ಹಿಂದು ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಂಭ್ರಮದ ಫೋಟೋಗಳು ರಿವೀಲ್​ ಆಗಿದ್ದು, ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಮಹಾಬಲಿಪುರಂನ ರೆಸಾರ್ಟ್ ​ನಲ್ಲಿ ಇವರ ಮದುವೆ ನಡೆದಿದ್ದು ಮದುವೆಯಲ್ಲಿ  ಶಾರುಖ್ ಖಾನ್, ರಜಿನಿಕಾಂತ್, ವಿಜಯ್ ಸೇತುಪತಿ, ತಲಾ ಅಜಿತ್, ಸೂರ್ಯ ಸೇರಿದಂತೆ ಅನೇಕ ಗಣ್ಯರು, ಕುಟುಂಬದ ಆಪ್ತರು ಮತ್ತು ಸ್ನೇಹಿತರು ಪಾಲ್ಗೊಂಡಿದ್ದರು. ಇವರ ಮದುವೆಗೆ  ಮಾದ್ಯಮದವರಿಗೆ ನಿರ್ಬಂಧ ಹೇರಲಾಗಿತ್ತು. ಮದುವೆಯ ದೃಶ್ಯ ಪ್ರಸಾರದ ಹಕ್ಕನ್ನು 10 ಕೋಟಿ ರೂ.ಗೆ ಈ ಜೋಡಿ ಸೇಲ್ ಮಾಡಿದರು ಎನ್ನಲಾಗಿದೆ. ನವಜೋಡಿಯ ಫೋಟೋ ವೈರಲ್​ ಆಗಿದ್ದು, ನೆಟ್ಟಿಗರು ಮತ್ತು ಅಭಿಮಾನಿಗಳು ಪ್ರಭುದೇವ ಮತ್ತು ಸಿಂಬು ಜೊತೆಗಿನ ಅಫೇರ್‌ನಿಂದ ಸುದ್ದಿಯಾಗಿದ್ದ ನಯನತಾರಾ, ತನಗಿಂತ ಒಂದು ವರ್ಷ ಚಿಕ್ಕವರಾದ ವಿಘ್ನೇಶ್ ​ರನ್ನು ಕೈಹಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ರಶ್ಮಿಕಾ ಮಂದಣ್ಣ ಸದ್ಯ ಬಹು ಬೇಡಿಕೆಯ ನಟಿ. ಸ್ಯಾಂಡಲ್‌ ವುಡ್‌ ಗೆ ಕಿರಿಕ್‌ ಪಾರ್ಟಿ ಮೂಲಕ ಪದಾರ್ಪಣೆ ಮಾಡಿದ ಅವರು, ತೆಲುಗು ಸಿನಿಮಾಗಳಲ್ಲಿ ನಟಿಸಿ ಅಲ್ಲಿನ ಸಿನಿ ಪ್ರಿಯರ ಮನಗೆದ್ದರು. ಇದೀಗ ಬಾಲಿವುಡ್‌ಗೂ ಕಾಲಿಟ್ಟಿರುವ ರಶ್ಮಿಕಾ ಬ್ಯೂಟಿಗೆ ಮರುಳಾಗದವರಿಲ್ಲ. ಈ ಎಲ್ಲದರ ಮಧ್ಯೆ ರಶ್ಮಿಕಾಗೆ ಮತ್ತೊಂದು ಗರಿ ಸಿಕ್ಕಿದ್ದು, ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ. ಕೇವಲ ಒಂದೆರಡು ವರ್ಷಗಳಲ್ಲಿ, ರಶ್ಮಿಕಾ ಮಂದಣ್ಣ ದಕ್ಷಿಣದ ಅತ್ಯಂತ ಫೇಮಸ್‌ ತಾರೆಗಳಲ್ಲಿ ಒಬ್ಬರಾದರು. 2021 ರಲ್ಲಿ ಬಿಡುಗಡೆಯಾದ ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗಿನ ನಟನೆಯಿಂದ ಅವರ ಸ್ಟಾರ್‌ಡಮ್ ಮತ್ತಷ್ಟು ಹೆಚ್ಚಾಯಿತು. ಎಲ್ಲಾ ಭಾಷೆಗಳಲ್ಲಿಯೂ ಬಹುತೇಕ ಸ್ಟಾರ್‌ ನಟರಿಗೆ ನಾಯಕಿಯಾಗಿರುವ ರಶ್ಮಿಕಾ ಸಂಭಾವನೆ ಕೋಟಿಯ ಗಡಿ ದಾಟಿದೆ. ಈ ಹೊತ್ತಿನಲ್ಲಿಅವರು ಫಿಲ್ಮ್‌ಫೇರ್‌ ಮ್ಯಾಗಜೀನ್‌ನ ಮುಖಪುಟಕ್ಕೆ ರೂಪದರ್ಶಿಯಾಗಿದ್ದಾರೆ. ಈ ಮುಖಪುಟ ಈಗ ಸೋಷಿಯಲ್‌ ಮೀಡಿಯಾದಲ್ಲಿಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಇದು ಅವರ ಅಭಿಮಾನಿಗಳಲ್ಲಿ ಮತ್ತಷ್ಟು ಸಂತಸ ತಂದಿದೆ. ಸದ್ಯ ತಮಿಳಿನ ದಳಪತಿ ವಿಜಯ್‌ ಜತೆ ರಶ್ಮಿಕಾ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿಅಮಿತಾಬ್‌ ಬಚ್ಚನ್‌…

Read More

ಭಾರತದ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ ಇಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಈ ಹಿಂದೆ ಮಿಥಾಲಿ ಭಾರತದ ಪರ ಮೂರು ಮಾದರಿಯ ಕ್ರಿಕೆಟ್ ಗೆ ನಾಯಕಿಯಾಗಿದ್ದರು. ಬುಧವಾರ ಮಧ್ಯಾಹ್ನ ಮಿಥಾಲಿ ರಾಜ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ವಿದಾಯದ ಕುರಿತು ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಮಿಥಾಲಿ ತನ್ನ 23 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಬದುಕಿಗೆ ಗುಡ್ ಬೈ ಹೇಳಿದ್ದಾರೆ. ತನ್ನ ವಯಸ್ಸಿನ 39ನೇ ವರ್ಷದಲ್ಲಿ ಮಿಥಾಲಿ ತನ್ನ ವೃತ್ತಿ ಬದುಕಿಗೆ ವಿಧಾಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಿಥಾಲಿ, ‘ಮೊಟ್ಟ ಮೊದಲ ಬಾರಿಗೆ ನೀಲಿ ಬಣ್ಣದ ಜರ್ಸಿ ತೊಟ್ಟು ನಾನು ನನ್ನ ದೇಶವನ್ನು ಪ್ರತಿನಿಧಿಸಿದ್ದಾಗ ಓರ್ವ ಪುಟ್ಟ ಬಾಲಕಿಯಾಗಿದ್ದೆ. ಅತ್ಯಂತ ದೀರ್ಘ ಕಾಲದ ನನ್ನ ಕ್ರಿಕೆಟ್ ಪಯಣದಲ್ಲಿ ಸಾಕಷ್ಟು ಸನ್ನಿವೇಶಗಳಿಗೆ ಸಾಕ್ಷಿಯಾಗಿದ್ದೇನೆ. 23 ವರ್ಷಗಳ ನನ್ನ ವೃತ್ತಿ ಜೀವನ, ನನ್ನ ಜೀವನದ ಅತ್ಯುನ್ನದ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿಯೊಂದು ಪಯಣದಂತೆ…

Read More

ಮಂಡ್ಯ: ಸಕ್ಕರೆನಾಡು‌ ಮಂಡ್ಯ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ. ಜಿಲ್ಲೆಯ ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು‌ ಒಂದೇ ದಿನ ಬೇರೆ ಬೇರೆ ಕಡೆ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತ ದೇಹ ಪತ್ತೆಯಾಗಿವೆ. ಪಾಂಡವಪುರ ತಾಲೂಕಿನ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷ ಪ್ರಾಯದ ಮಹಿಳೆಯ ಅರ್ಧ ಕತ್ತರಿಸಿದ ಶವ ಪತ್ತೆಯಾಗಿದೆ. ಮತ್ತೊಂದು ಮಹಿಳೆಯ ಶವ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆಕೆರೆ ಗ್ರಾಮದ ಬಳಿಯ ಸಿಡಿಎಸ್ ನಾಲೆಯಲ್ಲಿ‌ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿದೆ. ಪತ್ತೆಯಾದ ಎರಡು ಶವಗಳ ಅರ್ಧ ಭಾಗವನ್ನು ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ನೀರಿಗೆ ಬಿಸಾಡಿದ್ದಾರೆ. ಇನ್ನು ಎರಡು ಕಡೆ ಪ್ರತ್ಯೇಕವಾಗಿ ದೇಹದ ಅರ್ಧಭಾಗ ಪತ್ತೆಯಾಗಿರುವ ಸುದ್ದಿ ತಿಳಿದು ಪಾಂಡವಪುರ ಹಾಗೂ…

Read More

ಮದುವೆ ಮನೆಯಲ್ಲಿ ಶಾವಿಗೆ ಪಾಯಸ ಊಟ ಮಾಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ಜಗಳೂರು ತಾಲೂಕಿನ ಗೌಡಗೊಂಡನಹಳ್ಳಿಯಲ್ಲಿ ಮದುವೆ ಇತ್ತು. ಮದುವೆಗೆ ಬಂದಿದ್ದ 9 ಮಕ್ಕಳೂ ಸೇರಿದಂತೆ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮದಲ್ಲಿ ಊಟ ಮಾಡಿದ ಬಹುತೇಕರಿಗೆ ವಾಂತಿ, ಬೇದಿ, ತಲೆ ಸುತ್ತು ಬಂದ ಪರಿಣಾಮ ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸೇರಿಸಲಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ 23 ಜನರನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏಳು ಜನರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಅಸ್ವಸ್ಥರಾಗಿದ್ದವರಲ್ಲಿ 9 ಮಕ್ಕಳಿದ್ದು ನಾಲ್ಕು ಗಂಡು ಮತ್ತು ಐವರು ಹೆಣ್ಣಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಹಿಳೆಯರು ಸಹ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮದುವೆಯಲ್ಲಿ ಮಾಡಿಸಿದ್ದ ಶಾವಿಗೆ ಪಾಯಸ ಸೇವಿಸಿದ್ದೇ ಅಸ್ವಸ್ಥರಾಗಲು ಕಾರಣ ಎನ್ನಲಾಗಿದೆ. ಮೊದಲನೇ ಪಂಕ್ತಿಯಲ್ಲಿ…

Read More