Author: admin

ವಿಜಯಪುರ: ಟಿಪ್ಪರ್ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನಗದು ಸೇರಿದಂತೆ 8.85 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಲ್ಲಿನ ರಹಿಂನಗರದ ರವಿ ಗುರುಬಸಪ್ಪ ಜಾಮಗೊಂಡ (27), ಶಿವಾನಂದ ಲಿಂಗಪ್ಪ ಕಾಲೇಬಾಗ (36), ಶ್ರೀಶೈಲ ಉರ್ಫ್ ಪಪ್ಪು ದುಂಡಪ್ಪ ಗಾಂಜಿ (31), ಮಹಾರಾಷ್ಟ್ರ ಸೊಲ್ಲಾಪುರದ ಗೌರಿಶಂಕರ ರಾಮಚಂದ್ರ ಚೌಗಲೆ (43) ಹಾಗೂ ಇಕ್ರಾರ್ ಜಾಕೀರ್ ನಾಯ್ಕೋಡಿ (28) ಬಂಧಿತ ಆರೋಪಿಗಳು. ಈ ಆರೋಪಿಗಳು ಇಲ್ಲಿನ ಆದರ್ಶ ನಗರ ಠಾಣೆ ವ್ಯಾಪ್ತಿಯಲ್ಲಿ 2 ಟಿಪ್ಪರ್‌ಅನ್ನು ಕಳ್ಳತನ ಮಾಡಿದ್ದು, ವಿಶೇಷ ತಂಡ ಈ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳಿಂದ 2 ಟಿಪ್ಪರ್ ಗಳ ಬಿಡಿ ಭಾಗ, 1.50 ಲಕ್ಷ ರೂ.ಗಳ ನಗದು ಹಾಗೂ ಕೃತ್ಯಕ್ಕೆ ಬಳಸಿದ 1 ಟಾಟಾ ಸುಮೋ ವಾಹನ ಸೇರಿ 8.85 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ…

Read More

ವಿಜಯಪುರ: ಕಾರು ಮಗುಚಿ ಬಿದ್ದು, ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದ ಬಳಿಯಲ್ಲಿ ನಡೆದಿದೆ. ಸಲೀಂ ಟಕ್ಕಳಕಿ (20) ಸೈಫನ್ ತಾಂಬೋಳೆ (17) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಪೈಕಿ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಸೈಫನ್ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಿಂದ ದೇವರಹಿಪ್ಪರಗಿ ಪಟ್ಟಣಕ್ಕೆ ತೆರಳುತ್ತಿದ್ದ  ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ‌ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಹಾಗೂ ಗಾಯಾಳು ದೇವರಹಿಪ್ಪರಗಿ ಪಟ್ಟಣದ ವಾಸಿಗಳಾಗಿದ್ದು, ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ. ಈ ಮೂಲಕ  ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು  ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು. ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ. ಇದು ಕರ್ನಾಟಕದಲ್ಲಿ ಈವರೆಗೆ ಕಂಡಿರುವ ಒಬ್ಬ ಧೀಮಂತ ಮುಖ್ಯಮಂತ್ರಿ ಎಂಬುದು ಸಾಬೀತಾಗಿದೆ ಎಂದರು. ಹಿಂದಿನ ಸರ್ಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದರು. ಆದರೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಪರ ಎಂಬುದು ಜನರ ಅರಿವಿಗೆ ಬರುವಂತಾಗಿದೆ. ರಾಜ್ಯದಲ್ಲಿ ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ಐತಿಹಾಸಿಕ ನಿರ್ಧಾರ ಇದಾಗಿದೆ . ಬೆಳೆ…

Read More

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಸಿಟಿ ರವಿ ವಿರುದ್ಧ ಧ್ರುವನಾರಾಯಣ್ ವಾಗ್ದಾಳಿ ನಡೆಸಿದರು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್​ ಹಿಂಪಡೆದಿದ್ದರು. ಆ 43 ಕೇಸ್​ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್​ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವನಾರಾಯಣ ಕಿಡಿಕಾರಿದರು.

Read More

ಬೆಳಗಾವಿ: ಲ್ಯಾಪ್‌ ಟಾಪ್ ವಿತರಣೆ ಮಾಡುವಂತೆ ಒತ್ತಾಯಿಸಿ ಆರ್‌ ಸಿ‌ಯು ವಿದ್ಯಾರ್ಥಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಹಿರೇಬಾಗೇವಾಡಿಯ ಮಲ್ಲಪ್ಪನಗುಡ್ಡದಲ್ಲಿ ಆರ್‌ ಸಿಯು ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಮುಖ್ಯಮಂತ್ರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದವರಾದ, ನಾಲ್ಕನೇ ಸೆಮಿಸ್ಟರ್‌ ನಲ್ಲಿರುವ ನಮಗೆ ಲ್ಯಾಪ್‌ ಟಾಪ್ ನೀಡಿಲ್ಲ. ನಾವು 316 ಮಂದಿ ಇದ್ದೇವೆ. ಕುಲಪತಿ, ಕುಲಸಚಿವರನ್ನು ಕೇಳಿದರೆ ಎಸ್‌ ಸಿಪಿ ಮತ್ತು ಟಿಎಸ್‌ಪಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ‌. ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು. ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ ಶೀಘ್ರವೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

Read More

ಬೆಂಗಳೂರು: ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ ಎಂದ , ಅವರು, ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜ ಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ ಎಂದು ಅವರು ಹೇಳಿದ್ದಾರೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನ ಮಾಡಲಾಗುತ್ತಿದೆ.ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ’ ಎಂದು ಟ್ವೀಟ್ ಮಾಡಿದ್ದಾರೆ. ಈ ಮಧ್ಯೆ ಮಾನ್ಯ ಸ್ಪೀಕರ್ ಅವರು…

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭೂಕಂಪನದ ಅನುಭವವಾಗಿದ್ದು, ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಉತ್ತರ, ಈಶಾನ್ಯ ಭಾಗದ 70 ಕಿ.ಮೀ. ದೂರದಲ್ಲಿ 11 ಕಿ.ಮೀ. ಆಳದಲ್ಲಿ ಭೂಕಂಪನ ಉಂಟಾಗಿದೆ’ ಎಂದು ಎನ್‌ಎಸ್‌ಸಿ ಟ್ವೀಟ್ ಮಾಡಿದೆ. ಇದಾಗಿ ಐದು ನಿಮಿಷದಲ್ಲಿಯೇ ಮತ್ತೊಮ್ಮೆ ಭೂಕಂಪನ ಉಂಟಾಗಿದ್ದು, ಈ ಬಾರಿ ತೀವ್ರತೆ ಕೊಂಚ ಹೆಚ್ಚಿತ್ತು. ಬೆಂಗಳೂರು ಉತ್ತರ- ಈಶಾನ್ಯ ಭಾಗದ 66 ಕಿ.ಮೀ. ದೂರದಲ್ಲಿ 23 ಕಿ.ಮೀ. ಆಳದಲ್ಲಿ ಬೆಳಿಗ್ಗೆ 7.14ರ ಸುಮಾರಿಗೆ 3.3 ತೀವ್ರತೆಯಲ್ಲಿ ಭೂಮಿ ನಡುಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.

Read More

ತುಮಕೂರು: ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ಚಿತ್ರಕಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು “ಅಂತಿಮ ಆಯ್ಕೆಪಟ್ಟಿ”ಯನ್ನು ಜರೂರಾಗಿ ಪ್ರಕಟಿಸುವ ಮೂಲಕ, ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡುವಂತೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಮನವಿ ಮಾಡಿಕೊಂಡಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಸರ್ಕಾರದ ಒಂದು ಅಂಗಸಂಸ್ಥೆಯಾದ “ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ”ವು ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ 2016ರಲ್ಲಿ ಚಿತ್ರಕಲಾ ಪದವೀಧರರಿಗೆ 230, ಚಿತ್ರಕಲಾ ಡಿಪ್ಲೋಮಾದವರಿಗೆ 230, ಒಟ್ಟು 460 ಚಿತ್ರಕಲಾ ಶಿಕ್ಷಕರ ಹುದ್ದೆಗೆ  ಕರ್ನಾಟಕ ಲೋಕಸೇವಾ ಆಯೋಗ ದ ಮೂಲಕ ಅರ್ಜಿ ಯನ್ನು ಕರೆಯಲಾಗಿತ್ತು. ಅರ್ಜಿಗಳನ್ನು  ಸ್ವೀಕರಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಿ ದಾಖಲೆಗಳನ್ನು ಪರಿಶೀಲಿಸಿದ ನಂತರ ದಿನಾಂಕ:27-10-2021 ರಂದು ಚಿತ್ರಕಲಾ ಶಿಕ್ಷಕರು ಪದವೀಧರ 230 ಹುದ್ದೆಗಳ “ತಾತ್ಕಾಲಿಕ ಆಯ್ಕೆ ಪಟ್ಟಿ”ಯನ್ನು ಮತ್ತು ದಿನಾಂಕ:25-11-2021 ರಂದು ಚಿತ್ರಕಲಾ…

Read More

ಅರೆರೇ ಅಲ್ನೋಡೋ ಏಲಿಯನ್ಸು! ಅಲ್ಲ ಕಣೋ ಅದು ರಾಕೆಟ್’ಗಳು! ಅದು ಅಲ್ಲ ಕಣೋ‌ ಯಾವ್ದೋ ದೇಶದವ್ರು ಇನ್ನೊಂದ್ ದೇಶದ ಮೇಲೆ ಬಾಂಬ್ ಹಾಕ್ತವ್ರೆ ಕಣೋ! ಹಾಗಂತೆ, ಹೀಗಂತೆ ಎಂದು ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಜನತೆ ಡಿಸೆಂಬರ್ 20 ಸೋಮವಾರ ಸಂಜೆ ಈ ವಿದ್ಯಮಾನ ದ ಬಗ್ಗೆ ಏನೇನೋ ಮಾತುಕತೆಗಳು ಜನರ ಬಾಯಿಂದ ಬಾಯಿಗೆ ಹರಡಿತು. ಅಷ್ಟಲ್ಲದೇ ವಾಟ್ಸಪ್ ಫೇಸ್ಬುಕ್’ಗಳಲೆಲ್ಲಾ ಇದರ ಬಗ್ಗೆ ಬಾರಿ  ಚರ್ಚೆಗಳಾಗಿತ್ತು. ಆದರೆ ವಾಸ್ತವವಾಗಿ ಇದು ಏಲಿಯನ್ಸ್ ಅಲ್ಲಾ, ರಾಕೆಟ್’ಗಳಲ್ಲ ಮತ್ತು ಬಾಂಬ್’ಗಳಂತೂ ಅಲ್ಲವೇ ಅಲ್ಲ. ಇವೆಲ್ಲಾ ಕೃತಕ ಉಪಗ್ರಹಗಳು. ಹೌದು ನೀವು ಕೇಳುತ್ತಿರುವುದು ನಿಜ. ಇವೆಲ್ಲಾ ಮಾನವ ನಿರ್ಮಿತ ಉಪಗ್ರಹಗಳು. ಐರನ್ ಮ್ಯಾನ್ ಎಂದೇ ಪ್ರಸಿದ್ಧಿಯಾಗಿರುವ ಎಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್’ನಿಂದ ಭೂಮಿಯ ಕೆಳ ಕಕ್ಷೆಯಲ್ಲಿ ಸುತ್ತುತ್ತಿರುವ ” ಸ್ಟಾರ್ ಲಿಂಕ್ ” ಉಪಗ್ರಹಗಳು . ಈ ಉಪಗ್ರಹಗಳಲ್ಲಿ ಅಳವಡಿಸಿರುವ ಸೋಲಾರ್ ಪ್ಯಾನೆಲ್’ಗಳು ಸೂರ್ಯನ ಕಿರಣಗಳಿಗೆ ಪ್ರತಿಫಲನಗೊಂಡಾಗ ಕೆಲವು ಆಯ್ದ ಪ್ರದೇಶಗಳಲ್ಲಿ ಮಾತ್ರ…

Read More

ತಿಪಟೂರು: ಕಿಬ್ಬನಹಳ್ಳಿ ಹೋಬಳಿಯ ಹಟ್ನಾ ಗ್ರಾಮದ ದೇವತೆಗಳ ಕಾರ್ತಿಕ ಮಾಸದ ಜಾತ್ರಾ ಮಹೋತ್ಸವಕ್ಕೆ ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ಶಾಂತಕುಮಾರ್ ಅವರು ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು. ಈ ಬಾರಿ ಹೆಚ್ಚು ಮಳೆಗಾಲವಾಗಿದ್ದು ಒಂದು ಕಡೆ ರಾಗಿ ಬೆಳೆದ ರೈತರು ನೆಲಕ್ಕುರುಳಿದ್ದಾರೆ. ಮುಂದಿನ ದಿನಗಳಲ್ಲಿ ದೇವರು ಒಳ್ಳೆಯ ಬೆಳೆ ಕೊಟ್ಟು ಅನ್ನದಾತರ ಕಷ್ಟ ಕಳೆಯಬೇಕಾಗಿದೆ ಎಂದು ದೇವರಲ್ಲಿ ಇದೇ ವೇಳೆ ಅವರು ಪ್ರಾರ್ಥನೆ  ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮಾಜ ಸೇವಕ ಕೆ.ಟಿ.ಶಾಂತಕುಮಾರ್ ಗೊರಗೊಂಡನಹಳ್ಳಿ ಸುದರ್ಶನ್ ಸೇರಿದಂತೆ  ಗ್ರಾಮಸ್ಥರು ಮುಖಂಡರು ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ

Read More