Author: admin

ಬೆಳಗಾವಿ: ಈ ಬಾರಿಯೂ ಹೊಸ ವರ್ಷಾಚರಣೆಗೆ ಕೊರೊನಾದ ಕರಿನೆರಳು ಬಿದ್ದಿದ್ದು, ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ನಿಯಂತ್ರಣ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಕೊವಿಡ್ ಹರಡುವಿಕೆ ತಡೆಯಲು ಸರ್ಕಾರ ಹಲವು ನಿರ್ಬಂಧಗಳನ್ನು ಹೇರುವ ಬಗ್ಗೆ  ತಿಳಿಸಿದ್ದಾರೆ. ಡಿಸೆಂಬರ್ 30ರಿಂದ ಜನವರಿ 2ರವರೆಗೂ ರಾಜ್ಯದಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ ಒಟ್ಟು ಸಾಮರ್ಥ್ಯದ ಶೇಕಡ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಬೇಕು. ಅಲ್ಲಿನ ಎಲ್ಲ ಸಿಬ್ಬಂದಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯ ಎಂದರು. ಬೆಂಗಳೂರಿನ ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಈ ಹಿಂದೆ ನಡೆಯುತ್ತಿದ್ದ ಮಾದರಿಯ ಹೊಸ ವರ್ಷಾಚರಣೆಗೆ ರಾಜ್ಯದ ಯಾವುದೇ ಭಾಗದಲ್ಲೂ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

Read More

ಮಧುಗಿರಿ: ಬೆಳಗಾವಿಯಲ್ಲಿ ಪೊಲೀಸ್  ಜೀಪಿಗೆ ಬೆಂಕಿ ಹಚ್ಚಿರುವ ಹಾಗೂ ಕನ್ನಡ ಬಾವುಟಕ್ಕೆ ಅಪಮಾನ ಮಾಡಿರುವ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ತಾಲೂಕು ಕರುನಾಡ ವಿಜಯ ಸೇನೆ ಸಂಘಟನೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಂಘಟನೆಯ ನಗರ ಅಧ್ಯಕ್ಷ ರಾಜು, ಮಹಿಳಾ ಘಟಕ ಅಧ್ಯಕ್ಷೆ ಲತಾ ಗೋವಿಂದರಾಜು, ಗೌರವಾಧ್ಯಕ್ಷರಾದ ಲತಾ ನಾರಾಯಣ್, ಮಂಜುಳ ನಾಗಭೂಷಣ್, ಅಲ್ಪಸಂಖ್ಯಾತರ ಘಟಕದ ದಾಧಪೀರ್, ಯುವ ಘಟಕದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ಸತೀಷ್, ಶ್ರೀನಿವಾಸ್, ದಾದು, ಅಶೋಕ, ವೀಣಾ, ಸವಿತಾ, ಶಾರದ ಹಾಗು ಮುಂತಾದವರು ಇದ್ದರು. ವರದಿ: ಅಬಿದ್ ಮಧುಗಿರಿ

Read More

ಸರಗೂರು: ಶ್ರೀ ಭೀಮಭಾಯಿ ವಿಶೇಷ ಚೇತನರ ಸ್ವಸಹಾಯ ಸಂಘ ಮತ್ತು ಮಹಾಲಿಂಗೇಶ್ವರ ಸ್ವಸಹಾಯ ಸಂಘದ ನಾಮಫಲಕವನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಹಾಗೂ ಸಮುದಾಯದ ಸಹಕಾರದೊಂದಿಗೆ  ಅನಾವರಣಗೊಳಿಸಲಾಯಿತು. ತಾಲ್ಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಲಾಪುರ ಗ್ರಾಮದ ಶಾಲೆಯಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲೋಕೇಶ್ ಅವರು ಅಧ್ಯಕ್ಷತೆ ವಹಿಸಿದ್ದರು. ಹೆಗ್ಗನೂರು ಗ್ರಾ.ಪಂ.ನ ಉಪಾಧ್ಯಕ್ಷ ನಾಗಮ್ಮ ನಾಗೇಂದ್ರ ಅವರು, ಭೀಮಭಾಯಿ ಅಂಬೇಡ್ಕರ್ ಫೋಟೋಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿವೇಕಾನಂದ ಆಸ್ಪತ್ರೆಯ ದೇವರಾಜಸ್ವಾಮಿ, ನಾಗೇಂದ್ರ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಗ್ರಾಮದ ಮುಖಂಡರು ಭಾಗಿಯಾಗಿದ್ದರು. ವರದಿ: ಚಂದ್ರಹಾದನೂರು

Read More

ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ,  ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ,…

Read More

ಬೆಳಗಾವಿ: ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮಸ್ತ್ರ ಸೇರಿದಂತೆ ಸಣ್ಣಪುಟ್ಟ ವಿಷಯಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ ಎಂದರು. ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಿ, ಇದೇ ಮಾದರಿಯಲ್ಲಿ ರಾಜ್ಯದ ಇತರ ಪ್ರಮುಖ ನಗರಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

Read More

ತಿಪಟೂರು: ರಾಜ್ಯದ ನಾಡ ಧ್ವಜವಾದ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಮತ್ತು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಸಗಣಿ ಎರಚಿರುವುದನ್ನು ಖಂಡಿಸಿ, ತಾಲ್ಲೂಕು ಜಯ ಕರ್ನಾಟಕ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಕೃತ್ಯ ನಡೆಸಿದವರನ್ನು ತಕ್ಷಣವೇ ಗಡಿಪಾರು ಮಾಡಬೇಕು. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯವರು ಪದೇ ಪದೇ ನಾಡದ್ರೋಹಿ ಕೆಲಸಗಳನ್ನು ಮಾಡುತ್ತಿದ್ದು, ಈ ಸಂಘಟನೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ನಿಷೇಧ ಮಾಡುವಂತೆ ಹಾಗೂ ಎಂಇಎಸ್ ಸಂಘಟನೆಯ ಮುಖಂಡರ ಆಸ್ತಿಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕುವಂತೆ ಒತ್ತಾಯಿಸಿ ಉಪ ವಿಭಾಗಾಧಿಕಾರಿಗಳ ಕಚೇರಿಯ ತಹಸೀಲ್ದಾರ್ ಕೆ.ಎಲ್.ಪರಮೇಶ್ವರಯ್ಯ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಂಘಟನೆಯ ತಾಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯೆ ಡಾ.ಓಹೀಲಾ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಸಾರ್ಥವಳ್ಳಿ ಶಿವಕುಮಾರ್ ಮಾತನಾಡಿದರು. ಮಾಜಿ ನಗರಸಭಾ ಸದಸ್ಯ ತರಕಾರಿ ಗಂಗಾಧರ್, ಸಂಘಟನೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಕಾರ್ಯದರ್ಶಿ ಲೋಕೇಶ್, ವಿದ್ಯಾರ್ಥಿ…

Read More

ಬೆಂಗಳೂರು : ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು. ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು ಯಲಹಂಕದ ಹೊಯ್ಸಳ ಆಟದ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಸಮುದಾಯದ ಮುಖಂಡರಿಂದ ಈ ಅಭಿಪ್ರಾಯ ವ್ಯಕ್ತವಾಯಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಎನ್. ಸಂಪತ್ ಕುಮಾರ್ ಮಾತನಾಡಿ ಕೋವಿಡ್ ಇದ್ದುದರಿಂದ ಒಂದೂವರೆ ವರ್ಷಗಳ ಕಾಲ ನಾವು ಸರ್ವ ಸದಸ್ಯರ ಸಭೆ ನಡೆಸಲಾಗಲಿಲ್ಲ. ಈಗ ಅನುಮತಿ ಪಡೆದು ಸಭೆ ನಡೆಸುತ್ತಿದ್ದೇವೆ. ರಾಜ್ಯದ ನಾನಾ ಭಾಗಗಳಿಂದ ಸವಿತಾ ಸಮುದಾಯದ ಜನ ಆಗಮಿಸಿದ್ದಾರೆ’ ಎಂದರು.…

Read More

ಬೆಳಗಾವಿ: ಕಲ್ಯಾಣ ಕರ್ನಾಟಕದ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಮಲತಾಯಿ ಧೋರಣೆ ಅನುಸರಿಸುವ ಮೂಲಕ ಘನಘೋರ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ನಡೆಯಬೇಕೆಂದು ಬೆಳಗಾವಿಯಲ್ಲಿ  ಅಧಿವೇಶನ ನಡೆಯುತ್ತಿದೆ. ಆದರೆ, ಅದರ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ, ಕಳೆದ ಅಧಿವೇಶನದಲ್ಲಿ 10 ದಿನದೊಳಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾಡುವುದಾಗಿ ಮುಖ್ಯಮಂತ್ರಿ ಮಾತು ಕೊಟ್ಟಿದ್ದರು. ಮೂರು ತಿಂಗಳು ಕಳೆದರೂ ಮಂಡಳಿ ರಚನೆಯಾಗಿಲ್ಲ ಎಂದು ಆರೋಪಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿಗೆ ಬಜೆಟ್‍ ನಲ್ಲಿ 1500 ಕೋಟಿ ರೂ. ಒದಗಿಸಿದ್ದು, 125 ಕೋಟಿ ಮಾತ್ರ ಖರ್ಚಾಗಿದೆ ಎಂದು ಆರೋಪಿಸಿದ ಅವರು, ಕಲ್ಯಾಣ ಕರ್ನಾಟಕವನ್ನು 2ನೇ ದರ್ಜೆಯ ನಾಯಕರಂತೆ ಪರಿಗಣಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಹೋರಾಟ ಮಾಡುತ್ತೇವೆ. ಅನವಶ್ಯಕ ಕಾಯ್ದೆ ತಂದು ಆಡಳಿತ ವೈಫಲ್ಯ ಮುಚ್ಚಿ ಹಾಕುವ ಪ್ರಯತ್ನ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ…

Read More

ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಬಿಜೆಪಿ ನಾಯರು ಆರೋಪಿಸುತ್ತಿದ್ದು, ಇದೀಗ ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿ, ಮರಾಠಿಗರ ಮನವೊಲಿಕೆಗೆ ಡಿಕೆಶಿ ಆಟ ಆಡಿದರೂ ಆಡಿರಬಹುದು ಎಂದಿದ್ದಾರೆ. ಬೆಳಗಾವಿಯ ಆನಗೋಳದಲ್ಲಿ ಮಾತನಾಡಿದ ಈಶ್ವರಪ್ಪ, ಎಂಇಎಸ್ ಬಗ್ಗೆ ಡಿ.ಕೆ.ಶಿವಕುಮಾರ್ ಮೃದು ಧೋರಣೆ ತಳೆದಿರುವುದು ನೋಡಿದರೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ಜನರ ಮನವೊಲಿಕೆಗಾಗಿ ಎಂಇಎಸ್ ಬೆಂಬಲಕ್ಕೆ ಆಟ ಆಡಿದರೂ ಆಡಿರಬಹುದು. ಅದಕ್ಕೆ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದರು ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಇಎಸ್ ಬ್ಯಾನ್ ಗೆ ಒತ್ತಾಯ ಮಾಡುತ್ತಾರೆ. ಹೊರಗಡೆ ಡಿ.ಕೆ. ಶಿವಕುಮಾರ್ ಎಂಇಎಸ್ ಪರ ಬ್ಯಾಟ್ ಬೀಸುತ್ತಾರೆ ಎಂದು ಕೆ.ಎಸ್.ಈಶ್ವರಪ್ಪ  ಅಸಮಾಧಾನ ವ್ಯಕ್ತಪಡಿಸಿದರು. ಎಂಇಎಸ್ ಪುಂಡಾಟದ ಹಿಂದೆ ಯಾವ ರಾಜಕೀಯ ಶಕ್ತಿ ಅಡಗಿದೆ ಎಂಬುದು ತನಿಖೆಯಿಂದ ತಿಳಿಯಬೇಕು. ಈ ನಿಟ್ಟಿನಲ್ಲಿ ತನಿಖೆ ಮಾಡುತ್ತೇವೆ ಎಂದರು.

Read More

ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ. ಖಾನಾಪುರದ ಹಲಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಬಳಿಕ ಬಸವಣ್ಣನವರ ಮೂರ್ತಿಗೆ ಕಪ್ಪು ಮಸಿ ಬಳಿದಿದ್ದರು. ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸಂಜು ಗುರವ್, ಸಚಿನ್ ಗುರವ್, ಗಣೇಶ ಪಡ್ನೇಕರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More