Subscribe to Updates
Get the latest creative news from FooBar about art, design and business.
- ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
- ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
- ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
- ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್ ಗೌಡ
- ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
- ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
Author: admin
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನವಾಗಿ ಮರು ವಿಂಗಡಣೆ ಆಗಿರುವ ವಾರ್ಡ್ ಒಂದಕ್ಕೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ರವರ ಹೆಸರನ್ನು ಇಡಬೇಕೆಂದು ಬೆಂಗಳೂರಿನ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಭಾಗ್ಯವತಿ ಅಮರೇಶ್ ಎಂಬುವವರು ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ರವರು ನಟನೆ ಮತ್ತು ಸಾಮಾಜಿಕ ಕಾರ್ಯದಿಂದ ಅತ್ಯಂತ ಜನಪ್ರಿಯರಾಗಿದ್ದರು. ಇವರ ಅಕಾಲಿಕ ಮರಣದಿಂದ ಕರ್ನಾಟಕ ಮತ್ತು ದೇಶದ ಇತರೆ ರಾಜ್ಯದ ಜನತೆ ನೋವು ಅನುಭವಿಸುವಂತೆ ಮಾಡಿದೆ. ಹೀಗಾಗಿ ಬಿಬಿಎಂಪಿಯ 198 ರಿಂದ 243ಕ್ಕೆ ಮರು ವಿಂಗಡಣಿ ಆಗುತ್ತಿದ್ದು, ಹೊಸದಾಗಿ ಸೇರ್ಪಡೆಯಾಗುತ್ತಿರುವ ವಾರ್ಡ್‌ಗಳಿಗೆ ನಾಮಕರಣ ಮಾಡುವಾಗ ಯಾವುದಾದರು ಒಂದು ವಾರ್ಡ್‌ಗೆ ಅಥವಾ ಪುನೀತ್ ರಾಜ್‌ಕುಮಾರ್ ರವರು ವಾಸವಿದ್ದ ಮನೆಯ ವಾರ್ಡ್‌ಗೆ ಅವರ ಹೆಸರನ್ನು ಇಟ್ಟು ಶಾಶ್ವತವಾಗಿ ಅವರ ಹೆಸರು ಉಳಿಯುವಂತೆ ಮಾಡಬೇಕಿದೆ ಎಂದು ಮನವಿ ಪತ್ರದಲ್ಲಿ ಕೋರಿಕೊಳ್ಳಲಾಗಿದೆ. ಒಂದು ಬೀದಿಗೆ, ಒಂದು ವೃತ್ತಕ್ಕೆ ಅಥವಾ ರಸ್ತೆಗೆ ಅವರ ಹೆಸರನ್ನ ಇಡುವುದಕ್ಕಿಂತ ಸಂಪೂರ್ಣ ಒಂದು ವಾರ್ಡ್‌ಗೆ ಅವರ ಹೆಸರನ್ನು ಇಟ್ಟರೆ…
ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಅವರ ಮನೆ ಮೇಲೆ ಇಂದು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ 2.85 ಕೋಟಿ ರೂಪಾಯಿ ಅನಾಮದೇಯ ನಗದು ಮತ್ತು 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಇಡಿ ಹಿಂದಿನ ದಿನ 7 ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಪ್ರಕಾಶ್ ಜ್ಯುವೆಲರ್‌ನಿಂದ 2.23 ಕೋಟಿ ನಗದು, 41.5 ಲಕ್ಷ ನಗದು ಮತ್ತು 133 ಚಿನ್ನದ ನಾಣ್ಯಗಳು ವೈಭವ್ ಜೈನ್ ಅವರ ಮನೆಯಲ್ಲಿ ಪತ್ತೆಯಾಗಿದೆ. ಹಾಗೆ, ವೈಭವ್ ಮತ್ತೊಬ್ಬ ಆಪ್ತ ಸ್ನೇಹಿತ ಜಿ.ಎಸ್.ಮಥಾರು ಅವರಿಂದ 20 ಲಕ್ಷ ರೂ. ಅನ್ನು ಇಡಿ ವಶ ಪಡಿಸಿಕೊಂಡಿದೆ. ಸಚಿವ ಜೈನ್ ಅವರನ್ನು ಮೇ 30 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಮತ್ತು ಜೂನ್ 9 ರವರೆಗೆ ಇಡಿ ಕಸ್ಟಡಿಯಲ್ಲಿದ್ದಾರೆ. ಇಡಿ ಆಭರಣ ವ್ಯಾಪಾರಿ ಸೇರಿದಂತೆ ಸುಮಾರು 7 ಸ್ಥಳಗಳಲ್ಲಿ…
ತುರುವೇಕೆರೆ: ಈ ಸಮಾಜ ನನಗೇನು ನೀಡಿದೆ ಅನ್ನುವುದಕ್ಕಿಂತ ಸಮಾಜಕ್ಕೆ ನಾನೇನು ಕೊಡುಗೆ ನೀಡಿದ್ದೇನೆ ಎಂದು ನಾವೆಲ್ಲಾ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹುಲ್ಲೇಕೆರೆ ಸಮಾಜ ಸೇವಕ ಎಚ್.ಬಿ.ಗಂಗಾಧರಯ್ಯ ಹೇಳಿದರು. ತಾಲ್ಲೂಕಿನ ದಂಡಿನಶಿವರ ಹೋಬಳಿಯ ದೊಂಬರನಹಳ್ಳಿ ಗ್ರಾಮದ ಶ್ರೀ ಸೋಮೇಶ್ವರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನೋಟ್ ಬುಕ್, ಲೇಖನ ಸಾಮಗ್ರಿಗಳ ವಿತರಣೆ ಹಾಗೂ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಹಳ್ಳಿಗಳಲ್ಲಿ ಸಾಕಷ್ಟು ಪ್ರತಿಭಾವಂತ ಮಕ್ಕಳಿದ್ದಾರೆ ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆರ್ಥಿಕ ನೆರವಿನ ಕೊರತೆಯಿಂದಾಗಿ ಎಷ್ಟೋ ಪ್ರತಿಭೆಗಳು ಉನ್ನತ ಮಟ್ಟದ ವ್ಯಾಸಂಗ ಮಾಡಲು ಸಾಧ್ಯವಾಗದ ಸ್ಥಿತಿ ಇದೆ. ನಾವು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಪೂರಕವಾದ ಪ್ರೋತ್ಸಾಹವಿಲ್ಲದ ಕಷ್ಟದ ದಿನಗಳನ್ನು ಕಂಡಿದ್ದೇನೆ. ಸಮಾಜದಲ್ಲಿ ಬಹಳ ಮಂದಿ ಸ್ಥಿತಿವಂತರಿದ್ದಾರೆ. ಅವರೆಲ್ಲಾ ಬಡಬಗ್ಗರಿಗೆ ತಮ್ಮ ಕೈಲಾದ ಸಹಾಯ ಮಾಡಿದರೆ ನಿರ್ಗತಿಕರೂ ಸಮಾಜದಲ್ಲಿ ಕೊಂಚ ಮುಂದೆ ಬರಲು ಸಾಧ್ಯವಿದೆ ಆದರೆ ಇಂತಹ ಮೌಲ್ಯಯುತ ಆಲೋಚನೆಗಳನ್ನು ಇಂದು ಕಾಣಲು ಸಾಧ್ಯವಿಲ್ಲ. ಬಲಗೈಯಲ್ಲಿ ಮಾಡಿದ ದಾನವು ಎಡಗೈಯಿಗೆ ತಿಳಿಯಬಾರದು…
ಮೈಸೂರು: ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿರೋಧಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ. ಮೈಸೂರು: ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ವಿದ್ಯಾರ್ಥಿ ನಿಲಯವು ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ವಿಶ್ವವಿದ್ಯಾನಿಲಯವು ಇನ್ನೂ ಸಹ ಪ್ರವೇಶಾತಿಯನ್ನು ನೀಡದೆ ವಿಳಂಬ ಮಾಡುತ್ತಿರುವುದರಿಂದ ಹಲವಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ತೊಂದರೆ ಉಂಟಾಗಿದ್ದು, ಇದನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದರು. ಕುಲಪತಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ ಪ್ರತಿಭಟನಾಕಾರರು, ಸಂಶೋಧಕರ ವಿದ್ಯಾರ್ಥಿನಿಲಯದ ಪ್ರವೇಶಾತಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಕೂಡಲೇ ಕಟ್ಟಬೇಕೆಂದು ಮೈಸೂರು ವಿವಿ ಆದೇಶ ಹೊರಡಿಸಿರುವ ಆದೇಶವನ್ನು ರದ್ದುಪಡಿಸಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಬಂದನಂತರ ಶುಲ್ಕಗಳನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ದರು. ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಇದೆ. ಅದೇ ದಿನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಪರೀಕ್ಷೆಯನ್ನು ಮುಂದೂಡಬೇಕು ಎಂದು ಇದೇ ವೇಳೆ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ತರಳಬಾಳು ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ತರಳಬಾಳು ಗುರುಪರಂಪರೆಯ ಚರಪಟ್ಟಾಧ್ಯಕ್ಷರಾದ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿಯವರ100ನೇ ವರ್ಷದ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಹೆಚ್.ಸಿ.ಎಂ.ಜಿ ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ನಾಯಕ್,ತರಳಬಾಳು ಇಂಟರ್ನ್ಯಾಷನಲ್ ಸ್ಕೂಲ್ ನ ಮುಖ್ಯ ಶಿಕ್ಷಕ ಹೆಚ್.ಬಿ.ವಿಜಯ ಕುಮಾರ್,ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಗೌಡ್ರು ಸೇರಿದಂತೆ ಶಾಲಾ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಗಿಡ ನೆಡುವುದರ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ಕೊಡಲಾಯಿತು.ಪರಿಸರ ಗೀತಾ ಗಾಯನ ಹಮ್ಮಿಕೊಳ್ಳಲಾಗಿತ್ತು. ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ರವರ ಜೀವನ ವೃತ್ತಾಂತ,ಸೇವೆ,ಅವರ ಹಾಕಿ ಕೊಟ್ಟಂತಹ ಮಾರ್ಗವನ್ನು ನೆನೆಯಲಾಯಿತು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ತಾಲೂಕಿನ ಪಟ್ಟಣದ ಎಸ್. ಎಸ್. ಕೆ. ಸಮುದಾಯಭವನದಲ್ಲಿ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಆರ್. ರಾಜೇಂದ್ರ ಭಾಗವಹಿಸಿ ಮಾತನಾಡಿ, ಪಾವಗಡ ಪಾವಗಡ ತಾಲೂಕು ಅತೀ ಹಿಂದುಳಿದಿದ್ದು, ತಾಲೂಕಿನ ಅಭಿವೃದ್ಧಿಗೆ ಪಕ್ಷತೀತವಾಗಿ ಕೆಲಸ ಮಾಡಲಾಗುವುದು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಭಿವೃದ್ದಿಗೆ ಶಕ್ತಿ ತುಂಬಿ ಅಭಿವೃದ್ಧಿಪಡಿಸುತ್ತೇವೆ ಮತ್ತು ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗುವುದು ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವೆಂಕಟರವಣಪ್ಪ , ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯ ನೀಡಿ…
ಪಾವಗಡ: ಪ್ರವಾದಿ ಮಹಮ್ಮದ್ ಕುರಿತು ಲಘು ಹೇಳಿಕೆ ವಿವಿಧ ರಾಷ್ಟ್ರಗಳು ಭಾರತವನ್ನು ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ವಿಧಾನಪರಿಷತ್ ಸದಸ್ಯ ಉಗ್ರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಬಿಜೆಪಿಯ ವಕ್ತಾರರೊಬ್ಬರು ಪ್ರವಾದಿ ಮಹಮ್ಮದ್ ಕುರಿತು ಲಘುವಾಗಿ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಇಡೀ ಪ್ರಪಂಚದ ವಿವಿಧ ರಾಷ್ಟ್ರಗಳು ಭಾರತದ ಬಗ್ಗೆ ಅನುಮಾನದ ಕೆಂಗಣ್ಣಿನಿಂದ ನೋಡುವಂತಾಗಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಲೆ ಏರಿಕೆಯಿಂದಾಗಿ ದೇಶ ತತ್ತರಿಸಿಹೋಗಿದೆ. ಹೀಗಾಗಿ ಮೋದಿ ಆಧುನಿಕ ಬಸ್ಮಾಸುರನಾಗಿದ್ದಾರೆ ಎಂದು ಅವರು ಇದೇ ವೇಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ತೊಂದರೆ ಕೊಡ್ತಾನೆ ಇದೆ. ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್ ಸಿಗುತ್ತೋ ಸಿಗಲ್ವೋ ಅಂತ ಸಾವಿರಾರು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸಿಇಟಿ ಪರೀಕ್ಷೆಗೆ ಇನ್ನೂ ಕೇವಲ 9 ದಿನ ಮಾತ್ರ ಬಾಕಿ ಉಳಿದಿದೆ. ಸಿಇಟಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಸಿಇಟಿ ಪರೀಕ್ಷೆ ಸಿಗೋದಿಲ್ಲ ಅನ್ನೂ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕುತ್ತಿದ್ದಾರೆ. ಈ ಕುರಿತು ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದ್ರೆ, ಪ್ರಾಧಿಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಲ್ ಟಿಕೆಟ್ ಸಮಸ್ಯೆ ಒಂದಲ್ಲ, ಎರಡಲ್ಲ ಬರೋಬ್ಬರಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎದುರಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಆದ್ರೆ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಲು…
ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಜೂನ್ 9 ರಂದು ಕಾಂಗ್ರೆಸ್ ವಿಧಾನಸೌಧದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಈಗ ಪಠ್ಯದ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆಯುತ್ತಿದೆ. ಮೊದಲನೇ ಬಾರಿಗೆ ಸ್ವಾಮೀಜಿ,ಸಾಹಿತಿ, ಸಂಘಟನೆಗಳು ಸರ್ಕಾರದ ಧೋರಣೆಯನ್ನು ವಿರೋಧಿಸಿದ್ದಾರೆ. ಸಿದ್ದಗಂಗಾ ಶ್ರೀಗಳಿಗೆ, ಮುರುಘಾ ಮಠ ಶ್ರೀ, ಆದಿ ಚುಂಚನಗಿರಿ,ಸಾಣೆ ಮಠದ ಶ್ರೀಗಳಿಗೆ ನಮಸ್ಕಾರ ಹೇಳುತ್ತೇನೆ.ಅವರ ಧ್ವನಿ ಜೊತೆಗೆ ನಮ್ಮ ಧ್ವನಿ ಸೇರಿಸುತ್ತೇವೆ ಎಂದರು. ಚಿಕ್ಕ ವಯಸ್ಸಿನ ಮಕ್ಕಳಿಗೆ ಹೊಸ ರೂಪ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂಬುವುದನ್ನು ಪಠ್ಯದಲ್ಲಿ ತೆಗೆದು ಹಾಕಲಾಗಿದೆ. ಇದಕ್ಕಿಂತ ಅವಮಾನ ಏನು ಬೇಕು? ಇದು ಇಡೀ ಭಾರತ ಭೂಮಿಗೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿವೇಕಾನಂದ,ಪೆರಿಯಾರ್ ವಿಚಾರಗಳಿಗೆ ಕತ್ತರಿ ಹಾಕಲಾಗಿದೆ, ತಿರುಚಲಾಗಿದೆ. ಭಕ್ತಿ ಹಾಗೂ ಸೂಫಿ ಪಂಥದ…
ಕಲಬುರಗಿ: ಊಟ ಬೇಡಿದ ಮುಗ್ದ ಮಗುವಿನ ಕೈಗೆ ಮಲತಾಯಿ ಬರೆ ಹಾಕಿರುವ ಘಟನೆ ನಡೆದಿದೆ. ಈ ಕೃತ್ಯ ನಾಲವಾರ ಗ್ರಾಮದಲ್ಲಿ ನಡೆದಿದ್ದು, ನಾಲ್ಕು ವರ್ಷದ ಮಗುವಿಗೆ ಮಲತಾಯಿ ಚಿತ್ರಹಿಂಸೆ ನೀಡಿದ್ದಾಳೆ. ನಾಲ್ಕು ವರ್ಷದ ಮಗುವನ್ನು ಹಗ್ಗದಿಂದ ಮಂಚಕ್ಕೆ ಕಟ್ಟಿ ಹಾಕಿ, ಕೆಂಡದಿಂದ ಕೈಯನ್ನು ಸುಟ್ಟು ಕ್ರೂರತೆ ಮೆರೆದಿದ್ದಾಳೆ. ಇನ್ನು ಎರಡು ದಿನಗಳಿಂದ ಮಗು ಹೊರಗಡೆ ಬಾರದನ್ನು ಗಮನಿಸಿದ ಸ್ಥಳೀಯರು ಮಲತಾಯಿಯನ್ನು ವಿಚಾರಣೆ ಮಾಡಿದ್ದಾಳೆ. ಈ ಸಂದರ್ಭದಲ್ಲಿ ವಿಚಾರ ತಿಳಿದು, ಗ್ರಾಮಸ್ಥರು ಮಗುವನ್ನು ಆಕೆಯ ಕಪಿಮುಷ್ಟಿಯಿಂದ ಬಿಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳೀಯರ ಜೊತೆ ವಾದಕ್ಕಿಳಿದ ಮಹಿಳೆ, ನಾನು ಸುಡುವುದು ಹೀಗೇ. ನೀವ್ಯಾರು ಕೇಳೋಕೆ ಅಂತ ವಾಗ್ವಾದ ನಡೆಸಿದ್ದಾಳೆ. ಇನ್ನು ಮಗುವಿನ ರೋಧನೆ ಕಂಡು ವಾಡಿ ಪೊಲೀಸ್ ಠಾಣೆಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಮಗುವಿಗೆ ಯಾವುದೇ ಸಮಸ್ಯೆಯಾಗಬಾರದು ಎಂದು ಪುಟ್ಟ ಕಂದಮ್ಮನ ತಂದೆ ತಿಪ್ಪಣ್ಣ ಎರಡನೇ ಮದುವೆಯಾಗಿದ್ದ. ಆದರೆ ಕೆಲಸದ ನಿಮಿತ್ತ ಮಗುವನ್ನು ಈಕೆಯ ಬಳಿ ಬಿಟ್ಟು ಕಳೆದ ಕೆಲ ದಿನಗಳ ಹಿಂದೆ…