Author: admin

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ಉತ್ಸಾಹಿ ತರುಣರಾದ  ಸೋಮಶೇಖರ್ ಮತ್ತು ರಾಮಕೃಷ್ಣ ಎಂಬ ನನ್ನ ವಿದ್ಯಾರ್ಥಿ ಮಿತ್ರರು ತಮ್ಮ ಗ್ರಾಮದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗಾಗಿ ‘ಮಹಾನಾಯಕ ಭೀಮ ಗ್ರಂಥಾಲಯ’ ಸ್ಥಾಪಿಸಿರುತ್ತಾರೆ. ‘ಭಾರತದ ಸಂವಿಧಾನ’ ಎಂಬ ಕಿರುಚಿತ್ರ ತಯಾರಿಸಲು ಸಿದ್ಧತೆ ನಡೆಸಿರುವ ಈ ಯುವಕರು ಬುದ್ಧಧ್ಯಾನ ಮಂದಿರವನ್ನು ಸ್ಥಾಪಿಸುವ ಕನಸು ಹೊತ್ತಿದ್ದಾರೆ. ನಿನ್ನೆದಿನ ಸಾಹಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಪ್ರಸನ್ನ (ಮಂಜು ಕೋಡಿಉಗುನೆ), ನಾಟಕಕಾರ, ಸಂಸ್ಕೃತಿ ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ಬಾಲಗುರುಮೂರ್ತಿ, ಪಪೂಶಿಇ ಅಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶ್ರೀರಂಗಾಚಾರಿ ಆರ್, ಸಂಶೋಧಕ- ವಿಮರ್ಶಕರಾದ ಡಾ.ಕುಮಾರಸ್ವಾಮಿ ಬೆಜ್ಜಿಹಳ್ಳಿ ಹಾಗೂ ನನ್ನ ಹೆಂಡತಿ ಎಂಬ ಫ್ರೆಂಡತಿ ರಮಾಶಾಕ್ಯ ನಾವೆಲ್ಲರೂ ಕೆಂಚನಪಾಳ್ಯದ ‘ಮಹಾನಾಯಕ ಭೀಮ ಗ್ರಂಥಾಲಯ’ಕ್ಕೆ ಭೇಟಿ ನೀಡಿದ್ದೆವು. ಗ್ರಂಥಾಲಯವನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಮತ್ತು ನಿತ್ಯ ನಿರ್ವಹಣೆ ಮಾಡಲು ಅನುಕೂಲ ಒದಗಿಸಲು ಬಯಸುವ ಸಹೃದಯಿಗಳು ನನ್ನ ವಿದ್ಯಾರ್ಥಿ ಮಿತ್ರರು ರೂಪಿಸಿರುವ ಈ…

Read More

ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶೀರನಕಟ್ಟೆ ಗ್ರಾಮದಲ್ಲಿ ನಡೆದಿದೆ. ರಾಧಿಕಾ(17) ನೇಣಿಗೆ ಶರಣಾದ ಬಾಲಕಿ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆಯ ಮುದ್ದಪ್ಪ, ಸುದೀಪ್, ಕೋಟಿ, ಅಭಿ ಎಂಬವರು ರಾಧಿಕಾ ಕಾಲೇಜಿಗೆ ಹೋಗುವಾಗ, ಬರುವಾಗ ಜಡೆ ಹಿಡಿದು ಎಳೆದು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ನೊಂದಿರುವುದಾಗಿ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಳು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ಧ ರಾಧಿಕಾ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

Read More

ಬೆಳಗಾವಿ: ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಪುಂಡಾಟಿಕೆಯನ್ನು ಪ್ರಶ್ನಿಸಿ ನಡೆದ ಪ್ರತಿಭಟನೆಯ ವೇಳೆ ಎಂಇಎಸ್ ವಿರುದ್ಧ ಮಾತನಾಡದ ಜನಪ್ರತಿನಿಧಿಗಳ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯ ನೂಕೂಟ ತಳ್ಳಾಟ ನಡೆದಿದೆ. ಬಳಿಕ ಕನ್ನಡ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನಾರಾಯಣಗೌಡ, ಎಂಇಎಸ್ ವಿರುದ್ಧ ಮಾತನಾಡದವರು ರಣಹೇಡಿಗಳು, ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

Read More

ತಿಪಟೂರು: ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಮತ್ತು ಮಳೆಯಿಂದಾಗಿ ಮನೆಗಳನ್ನು ಕಳೆದು ಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ  ರೂ.100000 ಪರಿಹಾರ ಹಾಗೂ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ಸಾರ್ವಜನಿಕರಿಗೆ ಪರಿಹಾರದ ಹಣವನ್ನು ಅವರವರ ಬ್ಯಾಂಕುಗಳಿಗೆ ಹಣ ವರ್ಗಾವಣೆ ಮಾಡಿ ಸಂಬಂಧಿಕರಿಗೆ ಸಾಂತ್ವನದ ಪತ್ರವನ್ನು ನೀಡಲಾಯಿತು. ಕೊವಿಡ್ ನಿಂದ ಮೃತಪಟ್ಟ ತಾಲೂಕಿನ 66 ಜನರ ಪೈಕಿ 34 ಮೃತರ ಸಂಬಂಧಿಕರಿಗೆ ಹಾಗೂ ಮನೆ ಕಳೆದು ಕೊಂಡವರಿಗೆ 104 ಜನರ ಪೈಕಿ 58 ಲಕ್ಷ ರೂಗಳ ಪರಿಹಾರ ಮೊತ್ತವನ್ನು ಅವರ ಬ್ಯಾಂಕಿಗೆ ವರ್ಗಾವಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಸರ್ಕಾರದಿಂದ ನೀಡಿದ ಪರಿಹಾರದ ಮೊತ್ತವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ನಗರಸಭೆ ಅಧ್ಯಕ್ಷ ರಾಮಮೋಹನ್ ಸದಸ್ಯ ಗಂಗಾಧರ್ ತಾಲೂಕು ತಹಸೀಲ್ದಾರ್ ಚಂದ್ರಶೇಖರ್ ಉಪ ತಹಸೀಲ್ದಾರ್ ಜಗನ್ನಾಥ್ ಇ.ಓ., ಸುದರ್ಶನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಮುಖಂಡರು ಹಾಜರಿದ್ದರು. ವರದಿ: ಮಂಜು…

Read More

ತುಮಕೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚೆಗೆ ತಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು, ರಾಜ್ಯ ಮಾದಿಗ ದಂಡೋರ  ಸಮಿತಿಯ ನಿಯೋಗವು ಬೆಳಗಾವಿಯ ಅಧಿವೇಶನದಲ್ಲಿ ಮನವಿ ಸಲ್ಲಿಸಿದ್ದು, ಈ ಸಂಬಂಧ  ಮಾದಿಗ ದಂಡೋರದ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಮುಖಂಡರಾದ ಚನ್ನಬಸವಯ್ಯ ಮಾತನಾಡಿ, ಮಾದಿಗ ದಂಡೋರದ ನಿಯೋಗವು ಸಚಿವರಾದ ಮಾಧುಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವರ ಸಮ್ಮುಖದಲ್ಲಿ, ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ವೇಳೆ ಮುಖ್ಯಮಂತ್ರಿಯವರು, ನಮ್ಮ ನಿಯೋಗವು ನೀಡಿದ ಮನವಿಯನ್ನು ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚಿಸಲು, ಸಂಬಂಧಿಸಿದ ಇಲಾಖೆ ಹಾಗೂ ಸಚಿವರು ಸಿದ್ಧತೆ ಮಾಡಿಕೊಳ್ಳಲು ಕನಿಷ್ಠ ಪಕ್ಷ ಹದಿನೈದು ದಿನಗಳ ಆವಶ್ಯಕತೆ ಇರುವುದರಿಂದ, ಈ ಬೆಳಗಾವಿಯ ಅಧಿವೇಶನದಲ್ಲಿ  ಚರ್ಚಿಸಲು ಸಾಧ್ಯವಿಲ್ಲ, ಆದರೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು. ಸಿಎಂ ಭೇಟಿಗೆ ಜೆ.ಸಿ.ಮಾಧುಸ್ವಾಮಿ…

Read More

ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ ಮತ್ತು ಶಿವಾಜಿ ಪ್ರತಿಮೆ ಮಸಿ ಬಳಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು. ಇನ್ನೂ ಕಾನೂನಿನಲ್ಲಿ ಅವಕಾಶವಿದ್ದರೆ, ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು. ಇದಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಘೋಷಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಮಧುಗಿರಿ: ಮಧುಗಿರಿ ತಾಲ್ಲೂಕಿನ ನೇರಳೇಕೆರೆ ಗ್ರಾ.ಪಂ.ವ್ಯಾಪ್ತಿಯ ವೀರಾಪುರ ಮತ್ತು ಅಕ್ಕ-ಪಕ್ಕದ ಗ್ರಾಮಗಳಿಗೆ ಯಾವುದಾದರೂ ಮೂಲಕಗಳಿಂದ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ನೇರಳೇಕೆರೆ ಗ್ರಾ.ಪಂ.ಅಧ್ಯಕ್ಷರಾದ ನಾಗಲಕ್ಷ್ಮೀ ನೇತೃತ್ವದಲ್ಲಿ ಗ್ರಾಮಸ್ಥರುಗಳು, ಮುಖಂಡರುಗಳು ಕಾವೇರಿ  ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್‍ ರವರಿಗೆ ಮನವಿ ಪತ್ರ ಅರ್ಪಿಸಿದರು. ವೀರಾಪುರ ಭಾಗದಲ್ಲಿ ಸುಮಾರು 5 ಸಾವಿರ ಮಂದಿ ವಾಸಿಸುತ್ತಿದ್ದು, ಕೃಷಿಯೇ ಮೂಲಧಾರವಾಗಿದೆ. ಜೀವನ ನಿರ್ವಹಣೆಗೆ ಯಾವುದೇ ಮೂಲ ಇರುವುದಿಲ್ಲ. ಹಾಗೂ ಅಂತರ್ಜಲ ಕುಸಿದು ಹೋಗಿದೆ. ರೈತರಿಗೆ ವ್ಯವಸಾಯಕ್ಕೆ ನೀರಿನ ತೊಂದರೆ ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಬರಗಾಲ ಪೀಡಿತ ಪ್ರದೇಶವಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಕನಿಷ್ಠ ಕುಡಿಯುವ ನೀರು ತಮ್ಮ ದನ, ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು, ಯಾವುದಾದರೂ ಮೂಲಗಳಿಂದ ನೀರನ್ನು ಒದಗಿಸುವ ಮತ್ತು ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಸಿದ್ದರಾಮಯ್ಯ, ಕೆಂಚಪ್ಪ, ಇಂದ್ರಕುಮಾರ್, ಸಿದ್ದಪ್ಪ, ಶಿವಣ್ಣ, ಶಿವಕುಮಾರ್ ವೀರಾಪುರ,…

Read More

ಮಧುಗಿರಿ: ಜಾನಪದ ಕಲೆಯ ತಾಯಿಬೇರುಗಳಾದ ಯಕ್ಷಗಾನ, ಮೂಡಲಪಾಯ, ಬಯಲಾಟ ಕಲೆಗಳನ್ನು ಸಂರಕ್ಷಿಸಿದರೆ ಜಾನಪದದ ಅಸ್ವಿತ್ವಕ್ಕೆ ಧಕ್ಕೆ ಬಾರದು ಎಂದು ಆದಾಯ ತೆರಿಗೆ ಆಯುಕ್ತರಾದ ಜಯರಾಮ್ ರಾಯಪುರ ಪ್ರತಿಪಾದಿಸಿದರು. ಬಯಲುಸೀಮೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಪುರಾತನ ಕಾಲದಿಂದಲೂ ನೆಲೆಗೊಂಡಿರುವ ಮೂಡಲಪಾಯ ಬಯಲಾಟ ಕಲೆ ಉಳಿವಿಗಾಗಿ ಭಾಗವತರನ್ನು ಒಂದುಗೂಡಿಸಲು ಜಾನಪದ ಒಡನಾಡಿಗಳೊಂದಿಗೆ ಕ್ಷೇತ್ರ ಪರ್ಯಟನೆ ಕೈಗೊಂಡಿರುವ ಅವರು ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಲಿಗಳನ್ನು ಸಂರಕ್ಷಿಸುವ ಟೈಗರ್ ಪ್ರಾಜೆಕ್ಟ್ ಯೋಜನೆಯಿದೆ. ಹುಲಿಗಳ ಉಳಿಸಬೇಕು ಎಂದರೆ ಮೊದಲು ಬೇಟೆ ಪ್ರಾಣಿಗಳನ್ನು ಉಳಿಸಿ ಜೀವಿ ಸಮತೋಲನ ಕಾಯ್ದು ಕೊಳ್ಳಬೇಕು. ಆಗೆಯೇ ಜಾನಪದ ಕಲೆ ಉಳಿಸಬೇಕೆಂದರೆ ಯಕ್ಷಗಾನ, ಬಯಲಾಟ ಸೇರಿದಂತೆ ಜಾನಪದರ ಬಾಯಲ್ಲಿರುವ ಕಲೆಗಳನ್ನು ಉಳಿಸುವುದು ಅನಿವಾರ್ಯ ಎಂದರು. ನಾನು ಅಧಿಕಾರಿಯಾಗಿ ಅಕ್ಷರ ತಿಳಿದವನಾಗಿ ನಮ್ಮ ಕಣ್ಣಮುಂದೆಯೇ ನಶಿಸುತ್ತಿರುವ ಕಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಕೈಜೋಡಿಸದಿದ್ದರೆ ಆತ್ಮ ವಂಚನೆ ಮಾಡಿಕೊಂಡಂತಾಗುತ್ತದೆ ಎಂಬ ಕಾರಣಕ್ಕೆ ಜಾನಪದ ವಿದ್ವಾಂಸರೊಂದಿಗೆ ಸೇರಿ ಭಾಗವತರನ್ನು ಒಂದುಗೂಡಿಸುವ ಕಾರ್ಯದಲ್ಲಿ…

Read More

ಸರಗೂರು: ಹುಲಿ ಬಂತು, ಹುಲಿ… ಹೌದು..! ಸರಗೂರು ತಾಲೂಕಿನ ಹೆಚ್.ಬಿ. ಮಟಗೆರೆ ಗ್ರಾಮದಲ್ಲಿ ಹುಲಿಯನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದ ಘಟನೆ ನಡೆದಿದ್ದು, ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಚ್.ಬಿ.ಮಟಗೆರೆ ಗ್ರಾಮದ ಹೊರವಲಯದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ರೈತರು ಹೇಳಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ, ಜೆಸಿಬಿ ಮೂಲಕ  ಕಾರ್ಯಾಚರಣೆ ನಡೆಸಿದ್ದು, ರೈತರು ಹೇಳಿದ ಜಾಗದಲ್ಲಿ ಹುಲಿ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ಹೋಗಲು ಭೀತಿ ಸೃಷ್ಟಿಯಾಗಿದೆ ಎಂದು ದೂರಿದ್ದಾರೆ. ಹೀಗಾಗಿ ತಕ್ಷಣವೇ ಹುಲಿಗೆ ಬೋನಿಟ್ಟು ಹಿಡಿದು, ಭಯಮುಕ್ತ ವಾತಾವರಣ ಸೃಷ್ಟಿಸಬೇಕು ಎಂದು ಇಲ್ಲಿನ ರೈತರು ಮನವಿ ಮಾಡಿಕೊಂಡಿದ್ದಾರೆ. ವರದಿ: ಚಂದ್ರ ಹಾದನೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ದಾವಣಗೆರೆ: ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಭಗ್ನಗೊಳಿಸಿರುವ ಎಂಇಎಸ್ ಪುಂಡರ ಕೃತ್ಯ ಖಂಡಿಸಿ ನಗರದಲ್ಲಿ ದಾಸಶ್ರೇಷ್ಠ ಶ್ರೀಕನಕದಾಸರು ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೋರಾಟ ಸಮಿತಿ ಹಾಗೂ ಕರ್ನಾಟಕ ಸಮರ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಪಿಬಿ ರಸ್ತೆಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಪ್ರತಿಭನಾಕಾರರು, ರಾಯಣ್ಣರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಂಇಎಸ್ ಪುಂಡಾಟಿಕೆ ವಿರುದ್ಧ ಘೋಷಣೆ ಕೂಗಿ, ಟಯರ್ ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರು ಪಿಬಿ ರಸ್ತೆಯಲ್ಲಿ ಟಯರ್ ಸುಡಲು ಮುಂದಾದಾಗ ಪೊಲೀಸರು ಅದನ್ನು ತಡೆಯಲು ಮುಂದಾದರು. ಆಗ ಪ್ರತಿಭಟನಾನಿರತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಎಷ್ಟೇ ಮನವೊಲಿಸಲು ಮುಂದಾದರೂ ಪಟ್ಟು ಸಡಲಿಸದ ಪ್ರತಿಭಟನಾಕಾರರು ಟಯರ್ ಸುಟ್ಟು ಎಂಇಎಸ್ ಪುಂಡಾಟಿಕೆ ವಿರುದ್ಧ ಕಿಡಿಕಾರಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಿ ಭಗ್ನಗೊಳಿಸಿರುವುದು…

Read More