Author: admin

ದಾವಣಗೆರೆ: ಕೂಡಲಸಂಗಮ ಪೀಠದ ಜಗದ್ಗುರು ಶ್ರೀಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ನಗರದ ಸದ್ಯೋಜ್ಯಾತ ಮಠದಲ್ಲಿ ಬೆಳಗ್ಗೆ 10:30ಕ್ಕೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ರಾಜ್ಯ ಯುವ ಘಟಕದ ಅಧ್ಯಕ್ಷ ಬಿ.ಜಿ.ಅಜಯ್ ಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳು ತಮ್ಮ ಜನ್ಮ ದಿನಾಚರಣೆಯ ಅಂಗವಾಗಿ ಡಿ.23ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಸ್ವತಃ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟದಲ್ಲಿ ಹೇಳಿದಂತೆ ‘ರಕ್ತ ಕೊಟ್ಟೇವು,  ಮೀಸಲಾತಿ ಬಿಡೆವು’ ಘೋಷಣೆಯಂತೆ ಈ ಬಾರಿ ಜಗದ್ಗುರುಗಳ 42ನೇ ಹುಟ್ಟುಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯದಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ರಕ್ತದಾನ ಮಾಡುವುದರ ಮೂಲಕ ರಕ್ತ ದಾಸೋಹ ಕಾರ್ಯಕ್ರಮದ ಮೂಲಕ ಮೀಸಲಾತಿ ಹೋರಾಟವನ್ನು ಮುನ್ನಲೆಗೆ ತಂದು ಸರ್ಕಾರಕ್ಕೆ ಅರಿವು ಮೂಡಿಸಲಾಗುವುದು ಎಂದರು. ಪಂಚಮಸಾಲಿ ಸಮಾಜದ ಜನಾಂಗವು ಜಗತ್ತಿನಲ್ಲಿ ಸಾಮಾಜಿಕ ಕಳಕಳಿ ಉಳ್ಳಂತವರು…

Read More

ಹಾಸನ: ಕುಡಿದ ಮತ್ತಿನಲ್ಲಿ ಚಾಲಕ ಲಾರಿ ಚಲಾಯಿಸಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಅವಳಿ ಮಕ್ಕಳು ಸೇರಿದಂತೆ ತಾಯಿ ಸಾವನ್ನಪ್ಪಿದ್ದಾರೆ. ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 8 ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು. ಪ್ರಣತಿ, ಪ್ರಣವ್ ಇಬ್ಬರೂ ಅವಳಿ ಮಕ್ಕಳಾಗಿದ್ದಾರೆ. ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕ್‌ ನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ, ಎರಡು ಪುಟ್ಟ ಮಕ್ಕಳಿದ್ದ ಬೈಕ್‌ ಗೂ ಡಿಕ್ಕಿ ಹೊಡೆದಿದೆ ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ ಅಪಘಾತಕ್ಕೆ ಕಾರಣವಾಗಿದ್ದಲ್ಲದೇ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ.  ಇದರಿಂದ ಸುಮಾರು ಎರಡು…

Read More

ಯಾದಗಿರಿ: ಜಿಲ್ಲೆಯ ಸುರಪುರ ನಗರದಿಂದ ಮಹಾರಾಷ್ಟ್ರದ ಪುಣೆ ನಗರಕ್ಕೆ ತೆರಳಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಮೇಲೆ ದುಸ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನಾ ಬೆಂಬಲಿಗರು ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿ ಪುಂಡಾಟ ಮೆರೆದಿದ್ದರು, ಇದಕ್ಕೆ ಕನ್ನಡಿಗರು ಒಗ್ಗಟ್ಟಾಗಿ ಪ್ರತಿಭಟಿಸುತ್ತಿರುವುದರಿಂದ ಆಕ್ರೋಶಗೊಂಡಿರುವ ಅಲ್ಲಿನ ಕೆಲ ಕಿಡಿಗೇಡಿಗಳು ಪ್ರತಿಕಾರವಾಗಿ ಬಸ್‌ ನ ಮೇಲೆ ಕಲ್ಲು ತೂರಿರುವುದರಿಂದ ಗ್ಲಾಸ್‌ ಗಳು ಒಡೆದಿವೆ ಎಂಬ ಆರೋಪ ಕೇಳಿ ಬಂದಿದೆ. ಬಸ್ ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದು, ಆರೋಪಿಗಳ ಬಂಧನಕ್ಕೆ ವ್ಯಾಪಕ ಒತ್ತಡ ಕೇಳಿ ಬರುತ್ತಿದೆ. ವರದಿ : ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ ಎಂಇಎಸ್ ಹಾಗೂ ಶಿವಸೇನೆ ಕಾರ್ಯಕರ್ತರ ಕೃತ್ಯವನ್ನು ಖಂಡಿಸಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಕರವೇ ನಡೆ, ಬೆಳಗಾವಿ ಕಡೆಗೆ ಎಂಬ ವಾಕ್ಯದೊಂದಿಗೆ ಹೋರಾಟ ಆರಂಭಿಸಿದೆ. ಇಂದು ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲು ಸಿದ್ಧತೆ ನಡೆಸಿರುವ ನಡುವೆಯೇ, ಬೆಳಗಾವಿ ನಗರ, ತಾಲೂಕಿನಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆ, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಡಿಸಿಪಿ ವಿಕ್ರಮ್ ಆಮಟೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ಪ್ರತಿಭಟನಾಕಾರರನ್ನು ಹೀರೇಬಾಗೇವಾಡಿ ಟೋಲ್ ಗೇಟ್ ಬಳಿಯಲ್ಲಿಯೇ ತಡೆಯಲಾಗುವುದು. ಪ್ರತಿಭಟನಾ ನಿರತರನ್ನು ಮನವೊಲಿಸಿ ವಾಪಸ್ ಕಳುಹಿಸುವುದಾಗಿ ಡಿಸಿಪಿ ತಿಳಿಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬ್ಯಾಡಗಿ: ತಾಲೂಕಿನ ಕದರಮಂಡಲ ಗ್ರಾಮಸಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಅರಣ್ಯ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ್ ಅವರ ಪುತ್ರನ ಮದುವೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಗವಹಿಸಿ, ವಧುವರರಿಗೆ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯಕ್, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್,  ಬಿ.ಎಸ್.ಪಾಟೀಲ್,  ರಾಮಕೃಷ್ಣ ದೊಡ್ಡಮನಿ, ಎಸ್.ಆರ್.ಪಾಟೀಲ್ ಚಂದ್ರಣ್ಣ, ಬೀಡರ ರುಕ್ಮಿಣಿ ಸಾಹುಕಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿಯವರ ಆಪ್ತರು ಮತ್ತು  ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ  ಪ್ರಕಾಶ್ ಹಾದಿಮನಿ ಸುರೇಶ್ ಮಾಗಡಿ  ಭಾಗವಹಿಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಉತ್ತಮ ಸಮಾಜವನ್ನು  ಸೃಷ್ಟಿಸುವಲ್ಲಿ ಶಿಕ್ಷಕರು, ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಎಲ್ಲಾ  ಸಿಬ್ಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಜಿಲ್ಲಾ  ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ  ಕಚೇರಿ ಸಹಯೋಗದಲ್ಲಿಂದು ಆಯೋಜಿಸಿದ್ದ ನಗರದ ಎಸ್‌.ಬಿ.ಎಂ. ಮುಖ್ಯ ರಸ್ತೆಯಲ್ಲಿರುವ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ  ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಳಿತು-ಕೆಡುಕು  ಎರಡನ್ನೂ ಗುರುತಿಸುವ ಹಾಗೂ ಒಳ್ಳೆಯದನ್ನು ಸೃಷ್ಟಿಸಿ ಕೆಟ್ಟದ್ದನ್ನು ಶಿಕ್ಷಿಸುವ ಜವಾಬ್ದಾರಿ ಮತ್ತು ಶಕ್ತಿ ಎರಡೂ ಕೇವಲ ಶಿಕ್ಷಕನಿಗೆ ಮಾತ್ರ  ಇರುವಂಥದ್ದು. ಪುರಾತನ ಕಾಲದಲ್ಲಿ ಚಾಲ್ತಿಯಲ್ಲಿದ್ದ ಗುರುಕುಲ ಶಿಕ್ಷಣ  ಪದ್ಧತಿಯಿಂದ ಈಗಿನವರೆಗೂ ಗುರುವಿಗೆ ತನ್ನದೇ ಆದ ಸ್ಥಾನ-ಮಾನವಿದೆ. ಪ್ರತಿಯೊಂದು ಮಗುವು ಒಬ್ಬ ಶಿಕ್ಷಕನಲ್ಲಿ ಜ್ಞಾನ ಮತ್ತು  ಚಾರಿತ್ರ್ಯಗಳೆರಡನ್ನೂ ಗುರುತಿಸುತ್ತಿರುತ್ತದೆ. ಅಂತಹ ಶ್ರೇಷ್ಟ  ಸ್ಥಾನದಲ್ಲಿರುವಾತ ಮಗುವಿಗೆ ಮಾದರಿಯಾಗಿ ಮುಂದಿನ ಭವಿಷ್ಯಕ್ಕೆ  ದಾರಿದೀಪವಾಗಬೇಕು ಎಂದರು. ಗುರುತರ…

Read More

ಬೆಳಗಾವಿ:  ನಗರದಲ್ಲಿ ಪೊಲೀಸ್ ವ್ಯವಸ್ಥೆ, ಆಡಳಿತ ವ್ಯವಸ್ಥೆ ಇದ್ದರೂ ಸಹ ಎಂಇಎಸ್ ಪುಂಡರು ಕರ್ನಾಟಕ ಸರ್ಕಾರದ ವಿರುದ್ಧ ಮಹಾಮೇಳ ಮಾಡಲು ಹೊರಟಿದ್ದರು. ಇದರ ವಿರುದ್ಧ ಕನ್ನಡಿಗರು ಹೋರಾಟ ಮಾಡಿದರು. ಆದರೆ ಕನ್ನಡಿಗರನ್ನು ಜೈಲಿಗೆ ಅಟ್ಟಿದ ಸರ್ಕಾರ ಕನ್ನಡಪರ ಹೋರಾಟಗಾರರಿಗೆ ಶಿಕ್ಷೆ ಆಗುವಂತೆ ಸರ್ಕಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ  ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಸುವರ್ಣಸೌಧವನ್ನು ಸೋಮವಾರ ಮುತ್ತಿಗೆ ಹಾಕುವ ಸಲುವಾಗಿ ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ,  ಎಂಇಎಸ್ ಪುಂಡರು ಸರ್ಕಾರಿ ವಾಹನ, ಪೊಲೀಸ್ ವಾಹನಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಧ್ವಂಸ ಮಾಡಿ, ಕರ್ನಾಟಕದ ಭಾಗಗಳನ್ನು ತನ್ನದು ಎಂದು ಹೇಳುವ ಮೂಲಕ ನಮ್ಮ ಸರ್ಕಾರದ ಶವಯಾತ್ರೆ ಮಾಡ್ತೀವಿ ಅಂತ ಹೇಳಿಕೆ ಕೊಟ್ಟಿದ್ದಾರೆ. ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ ನಡೆಸಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ. ಎಂಇಎಸ್ ಪುಂಡರು ಕರ್ನಾಟಕದ ನೆಲ-ಜಲ ನಾಡು-ನುಡಿಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಇದ್ದುಕೊಂಡು…

Read More

ರಾಮನಗರ: ಮಹಾರಾಷ್ಟ್ರ ಏಕೀಕರಣ ಸಮಿತಿ-(ಎಂಇಎಸ್) ನ್ನು ನಿಷೇಧಿಸಬೇಕು ಎಂದು ಕರ್ನಾಟಕದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ  ಎಂಇಎಸ್ ನಿಷೇಧಿಸುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ರಾಮನಗರದಲ್ಲಿ ಮಾತನಾಡಿದ್ದ ವಿ.ಸೋಮಣ್ಣ, ಅವರು ಕೂಡ ನಮ್ಮವರೇ ಇದ್ದಾರೆ. ಅವರ ಹಕ್ಕನ್ನು ಅವರು ಕೇಳಲಿ ಆದರೆ ಪುಂಡಾಟ, ಗಲಭೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಬೆಳಗಾವಿಯಲ್ಲಿ ಎಂಇಎಸ್ ಪ್ರಭಾವ ಈ ಹಿಂದೆ ಇದ್ದಂತೆ ಇಲ್ಲ. ಬೆಳಗಾವಿ ಎಂಇಎಸ್ ನವರ ಕೈ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಇಂತಹ ಘಟನೆ ನಡೆದಿದೆ. ಅಧಿವೇಶನ ಮುಗಿದ ಬಳಿಕ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಪ್ರಕರಣ ಖಂಡಿಸಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು,  ನಿಷೇಧಾಜ್ಞೆ ನಡುವೆಯೂ ಆನಗೋಳ ಚಲೋ ಹೋರಾಟ ಮುಂದುವರಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೀರನವಾಡಿ ತಲುಪಿದ್ದು, ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕನ್ನಡಿಗ ಹೋರಾಟಗಾರರು, ಎಂಇಎಸ್ ಪುಂಡರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರನ್ನು ಪೀರನವಾಡಿ ಬಳಿ ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ-ಘರ್ಷಣೆ ನಡೆದಿದೆ. ಇನ್ನೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಿಗರು,  ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವ ಬದಲು ಕನ್ನಡ ಪರ ಹೋರಾಟಗಾರರನ್ನು ಬಂಧಿಸಿ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ತುಮಕೂರು: ಸದಾಶಿವನಗರದಲ್ಲಿರುವ ಮಾದಿಗ ಸಮುದಾಯದ ಶ್ರೀ ನಾಗಾರ್ಜುನ ಪತ್ತಿನ ಸಹಕಾರ ಸಂಘದ 25ನೇ ವರ್ಷದ ಬೆಳ್ಳಿ ಮಹೋತ್ಸವ ಸರ್ವಸದಸ್ಯರ ಸಭೆ ನಡೆಯಿತು. ಸಭೆಯನ್ನು ಸರ್ಕಾರದ ಅಪರ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮುದಾಯದ ರಾಜಕೀಯ ಮುಖಂಡರು ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More