Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ತುಮಕೂರು: ಗುರು ದತ್ತಾತ್ರೇಯ ಜಯಂತಿಯ ಪ್ರಯುಕ್ತ ದತ್ತಮಾಲಾಧಾರಿಗಳು ಹಾಗೂ ಬಜರಂಗದಳದ ವತಿಯಿಂದ ಜಿಲ್ಲೆ ತಿಪಟೂರು ತಾಲೂಕು ಚಿತ್ತೂರ್ ನಗರದಲ್ಲಿ ದತ್ತ ಪೀಠಕ್ಕೆ ಯಾತ್ರೆ ನಡೆಯಿತು. ತಿಪಟೂರು ನಗರದ ಕಲ್ಲೇಶ್ವರ ಸ್ವಾಮಿ ದೇವಸ್ಥಾನ ಬಳಿ ತಿಪ್ಟೂರ್ ವೈದ್ಯಾಧಿಕಾರಿಗಳಾದ ಡಾಕ್ಟರ್ ಶ್ರೀಧರ್ ಅವರು ತೆಂಗಿನಕಾಯಿ ಒಡೆಯುವ ಮೂಲಕ ಸಮವಸ್ತ್ರ ಮಾಲಾಧಾರಿಗಳಿಗೆ ಶುಭ ಹಾರೈಸಿದರು. ಬಳಿಕ ನಗರದಲ್ಲಿ ಯಾತ್ರೆ ನಡೆಸಲಾಯಿತು. ಯಾತ್ರೆಯ ವೇಳೆ ಕುಮಾರ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಶ್ರೀಧರ್ ವಿನಯ್ ತಿಪಟೂರು ಮಾಲಾಧಾರಿಗಳನ್ನು ತಿಪಟೂರು ಹಾಸನ ಸರ್ಕಲ್ ಬಳಿವರೆಗೂ ಪಾದಯಾತ್ರೆ ಮೂಲಕ ತೆರಳಿ ಕಳುಹಿಸಿ ಕೊಟ್ಟು ಶುಭ ಹಾರೈಸಿದರು. ವರದಿ: ಆನಂದ್ ತಿಪಟೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ತಾಲೂಕಿನ ಕರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಸಹಕಾರ ಸಂಘಗಳು ರೈತರ ಪರ ಕಾಳಜಿ ಹೊಂದಿದ್ದು, ಎಲ್ಲಾ ರೈತರಿಗೆ ಸವಲತ್ತುಗಳನ್ನು ಒದಗಿಸಿಕೊಟ್ಟಾಗ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದರು. ಇಂತಹ ಕಾರ್ಯಕ್ರಮವನ್ನು ನಮ್ಮ ತಾಲೂಕಿನ ಕರಡಿ ಸಹಕಾರ ಸಂಘ ನಡೆಸುತ್ತಿದ್ದು ಇದರ ಸದುಪಯೋಗವನ್ನು ರೈತರು ಬಳಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು ಮತ್ತು ಇದೇ ಸಂದರ್ಭದಲ್ಲಿ ಸಚಿವರು 2022 ನೇ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆ.ಆರ್. ದೇವರಾಜು ಮಾತನಾಡಿ, ಸಚಿವರಾದ ಬಿ.ಸಿ. ನಾಗೇಶ್ ಅವರು ತಾಲೂಕಿನ ಉತ್ತಮ ನಾಯಕರಾಗಿದ್ದು, ಇವರ ನಾಯಕತ್ವದಲ್ಲಿ ಕೆಲಸ ಮಾಡಿದಾಗ ತಾಲೂಕಿನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕೃಷಿ ಮಾರುಕಟ್ಟೆ ಅಧ್ಯಕ್ಷ ದಿವಾಕರ್, ಜಿಲ್ಲಾ ಬಿಜೆಪಿ ಮುಖಂಡ ಲೋಕೇಶ್ ಗೌಡ, ಪ್ರಗತಿಪರ ರೈತರಾದ ಸದಾಶಿವಯ್ಯ ಸೇರಿದಂತೆ ಪ್ರಮುಖ ಮುಖಂಡರುಗಳು ಹಾಜರಿದ್ದರು ವರದಿ: ಮಂಜು ಗುರುಗದಹಳ್ಳಿ…
ಬೆಳಗಾವಿ: ಬೆಳಗಾವಿಯಲ್ಲಿ ಪುಂಡರು ನಿನ್ನೆ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ. ನಂತರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು ಕನ್ನಡಪರ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗುತ್ತಿದೆಯ ಕರವೇ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಅಲಪ್ಪುಳ: ಕೇರಳದಲ್ಲಿ ಎಸ್‌ಡಿಪಿಐ ಮತ್ತು ಬಿಜೆಪಿ ನಡುವಿನ ರಾಜಕೀಯ ದ್ವೇಷಕ್ಕೆ ಭಾನುವಾರ ಉಭಯ ಪಕ್ಷಗಳ ಇಬ್ಬರು ಮುಖಂಡರ ಕೊಲೆ ನಡೆದಿದೆ. ಆಲಪ್ಪುಳ ಜಿಲ್ಲೆಯಲ್ಲಿ ಈ ಎರಡೂ ಕೊಲೆ ನಡೆದಿದ್ದು, ಶನಿವಾರ ತಡರಾತ್ರಿ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಎ. ಎಸ್. ಶಾನ್(38) ಅವರನ್ನು ಹತ್ಯೆ ಮಾಡಿದ ನಂತರ, ಇಂದು ಬೆಳಗಿನ ಜಾವ ಬಿಜೆಪಿಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರೆಂಜಿತ್ ಶ್ರೀನಿವಾಸನ್(40) ಅವರ ಮನೆಗೆ ನುಗ್ಗಿದ ಗುಂಪೊಂದು ಅವರನ್ನು ಹತ್ಯೆ ಮಾಡಿದೆ. ಎರಡು ಕೊಲೆಯ ನಂತರ ಪರಿಸ್ಥಿತಿ ಉದ್ವಿಗ್ನ ಗೊಂಡಿರುವುದರಿಂದ, ಭಾನುವಾರ ಮತ್ತು ಸೋಮವಾರ ಎರಡು ದಿನಗಳ ಕಾಲ ಅಲಪ್ಪುಳ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿ ಅಲಪ್ಪುಳದ ಮನ್ನಂಚೇರಿ ಬಳಿಯ ಪೊನ್ನಾಡ್ ಎಂಬಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಶಾನ್ ಅವರಿಗೆ ಬೈಕ್ ಗೆ ಕಾರು ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು, ಎಸ್ ಡಿಪಿಐ ನಾಯಕ ಕೆಳಗೆ ಬೀಳುತ್ತಿದ್ದಂತೆಯೇ ಆತನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್…
ತುರುವೇಕರೆ: ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿ ಕೊಡಗಿಹಳ್ಳಿ ಗ್ರಾಮದ ಜೆ.ಶಂಕರ್(50) ಇವರು ನಾಪತ್ತೆಯಾಗಿದ್ದು, ಇವರ ಸುಳಿವು ದೊರೆತರೆ ತಕ್ಷಣವೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ಡಿಸೆಂಬರ್ 12ರಂದು ಒಕ್ಕಲಿಗರ ಸಂಘದ ಚುನಾವಣೆ ಇದೆ. ಮತದಾನ ಮಾಡಿ ಬರುತ್ತೇನೆ ಎಂದು ಬೈಕ್ ನಲ್ಲಿ ಹೊರಟಿದ್ದ ಶಂಕರ್ ಅವರು, ವಾಪಸ್ ಮನೆಗೆ ಬಂದಿಲ್ಲ ಎನ್ನಲಾಗಿದೆ. ಮನೆಯಿಂದ ತೆರಳುವ ವೇಳೆ ಅವರು ಆರೆಂಜ್ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಂಕರ್ ಅವರನ್ನು ಸಂಬಂಧಿಕರ ಮನೆ ಸೇರಿದಂತೆ ವಿವಿಧೆಡೆಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಶಂಕರ್ ಅವರ ಬಗ್ಗೆ ಯಾವುದೇ ಮಾಹಿತಿಗಳು ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ತುರುವೇಕೆರೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 08139- 287334 ಮತ್ತು ಸಬ್ ಇನ್ಸ್ ಪೆಕ್ಟರ್ ಮೊಬೈಲ್ ನಂಬರ್ 9480802965ಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: …
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆಯ ಟೆಂಡರ್ ಪ್ರಕ್ರಿಯೆಯಲ್ಲಿ ಶೇ.40 ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಸಮಸ್ತ ಲಿಂಗಾಯತ ಹೋರಾಟ ವೇದಿಕೆ ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಿದ್ದು, 2013ರಿಂದ ಈವರೆಗೆ ನಡೆದಿರುವ ಎಲ್ಲ ಕಾಮಗಾರಿಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ.ಎಂ.ಚಿಕ್ಕನಗೌಡರ ಒತ್ತಾಯಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಗುರುತರವಾದ ಆರೋಪ ಕೇಳಿಬಂದಿದೆ. ಈ ವಿಚಾರದಲ್ಲಿ ಅತ್ಯಂತ ಪಾರದರ್ಶಕ ರೀತಿಯಲ್ಲಿ ತನಿಖೆ ನಡೆಸಬೇಕು. ಲಂಚ ಪ್ರಮಾಣ ಹೆಚ್ಚುತ್ತಿರುವುದರಿಂದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಹೇಳಿದ್ದಾರೆ. ಇದು ಅತ್ಯಂತ ಗಂಭೀರವಾದ ಸಮಸ್ಯೆ ಎಂದು ಅವರು ಹೇಳಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com…
ಶಹಜಾನ್ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ 594 ಕಿ.ಮೀ. ಉದ್ದದ ಸುಮಾರು ₹ 36,230 ಕೋಟಿ ರೂ. ವೆಚ್ಚದ ಗಂಗಾ ಎಕ್ಸ್‌ಪ್ರೆಸ್‌ವೇಗೆ ಪ್ರಧಾನಿ ನರೇಂದ್ರ ಮೋದಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಗಂಗಾ ಎಕ್ಸ್ಪ್ರೆಸ್ ಹೈವೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಯುವಕರಿಗೆ ಉದ್ಯೋಗ ಪಡೆಯಲು ಇದು ಸಹಕಾರಿಯಾಗಿದೆ. ಜತೆಗೆ ಗಂಗಾ ಎಕ್ಸ್ಪ್ರೆಸ್ ಹೈವೇ ಕೆಲಸ ಇಂದಿನಿಂದಲೇ ಪ್ರಾರಂಭವಾಗಲಿದೆ ಎಂದರು. ಮೀರತ್, ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಶಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್‌ಬರೇಲಿ, ಪ್ರತಾಪ್‌ಗಢ್ ಮತ್ತು ಪ್ರಯಾಗ್‌ರಾಜ್‌ನಲ್ಲಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ. ಸುಮಾರು 600 ಕಿ.ಮೀ. ಉದ್ದದ ಈ ಎಕ್ಸ್‌ಪ್ರೆಸ್‌ವೇಗೆ 36,000 ಕೋಟಿ ರೂ.ಗೂ ಹೆಚ್ಚು ವೆಚ್ಚವಾಗಲಿದೆ. ಗಂಗಾ ಎಕ್ಸ್ ಪ್ರೆಸ್‌ವೇ ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳನ್ನು ತರುತ್ತದೆ ಎಂದಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಧ್ವಂಸಗೊಳಿಸಿ ಎಂಇಎಸ್ ಸಂಘಟನೆ ಪುಂಡಾಟಿಕೆ ಮೆರೆಯುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ. ಕರ್ನಾಟಕ ರಕ್ಷಣಾ ವೇದಿಕೆಯ ಒಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ಆರಂಭವಾಗಲಿದೆ. ಸೋಮವಾರ ಬೆಳಗ್ಗೆ ರ್ಯಾಲಿಗಳು ಬೆಳಗಾವಿಯ ಸುವರ್ಣ ಸೌಧ ತಲುಪುವ ನಿರೀಕ್ಷೆ ಇದೆ ಎನ್ನಲಾಗಿದೆ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಕಾರು, ಬೈಕು, ಬಸ್, ರೈಲುಗಳ ಮೂಲಕ ಹೊರಟು ಸೋಮವಾರ ಬೆಳಗ್ಗೆ ಬೆಳಗಾವಿ ತಲುಪಲು ಸೂಚನೆ ನೀಡಲಾಗಿದೆ. ನೆಲಮಂಗಲದ ಹಾದಿಯಲ್ಲಿ ಪುಣೆ ಹೆದ್ದಾರಿಯಲ್ಲಿ ರ್ಯಾಲಿಗಳು ಸಾಗಲಿವೆ. ಕನ್ನಡಪರ ಹೋರಾಟ ಮತ್ತು ಪ್ರತಿಭಟನೆಗೆ ದಲಿತ ಸಂಘಟನೆಗಳು, ರೈತ ಸಂಘಟನೆಗಳು, ರಾಯಣ್ಣ ಅಭಿಮಾನಿ ಸಂಘಟನೆಗಳು ಕೂಡ ಈ ರ್ಯಾಲಿಗೆ ಕೈಜೋಡಿಸಲಿದೆ…
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 335 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ. ಕೊವಿಡ್ ನಿಂದಾಗಿ ಇಂದಯ 5 ಮಂದಿ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊವಿಡ್ ನಿಂದ ಮೃತಪಟ್ಟವರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು 225 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,59,963ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,56,691ಕ್ಕೆ ಏರಿಕೆಯಾಗಿದೆ. ಇನ್ನು 7,120 ಸಕ್ರಿಯ ಪ್ರಕರಣಗಳಿವೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕದ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸ್ಯಾಂಕಿ ಕೆರೆಗೆ ಹೊಂದಿಕೊಂಡಿರುವ ಉದ್ಯಾನದಲ್ಲಿ ಶಿವಾಜಿ ಪ್ರತಿಮೆ ಇದೆ. ಗುರುವಾರ ರಾತ್ರಿ ಯಾರೋ ಕಿಡಿಗೇಡಿಗಳು ಉದ್ಯಾನದೊಳಗೆ ನುಗ್ಗಿ ಪ್ರತಿಮೆಗೆ ಮಸಿ ಬಳಿದಿದ್ದಾರೆ ಎಂದು ಸದ್ಯ ಹೇಳಲಾಗಿದೆ. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದರು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹೇಳಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಇದೆ. ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೂಡಬಾರದು ಎಂದು ಅವರು ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700