Subscribe to Updates
Get the latest creative news from FooBar about art, design and business.
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
- ತುಮಕೂರು | ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
- ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
Author: admin
ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಡಾ.ಎನ್.ಮೂರ್ತಿ ಸ್ಥಾಪಿತ ಸಂಘಟನೆಯನ್ನು ಬಳ್ಳೇಕೆರೆ ಗ್ರಾಮದಲ್ಲಿ ಇಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ಯವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಅಶೋಕ್ ಗೌಡನಕಟ್ಟೆ ಮಾತನಾಡಿ, ಡಾ.ಎನ್.ಮೂರ್ತಿ ಬಣ. ಬಳ್ಳೇಕೆರೆ ಗ್ರಾಮದಲ್ಲಿ ಗ್ರಾಮ ಶಾಖೆ ಉದ್ಘಾಟನೆ ಮಾಡಿದ್ದು ತುಂಬಾ ಸಂತೋಷದ ವಿಷಯ, ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚನೆಯಿಂದ ಹಿಡಿದು ಹಲವಾರು ಕಾನೂನುಗಳ ರಚನೆಯ ಮೂಲಕ ಭಾರತದ ಮೊದಲ ಕಾನೂನು ಮಂತ್ರಿಯಾಗಿ ಅವರು ನೀಡಿದ ಕೊಡುಗೆಗಳು ಸಾಮಾಜಿಕ ವ್ಯವಸ್ಥೆಯ ವಿರುದ್ಧ ಮಾಡಿದ ಹೋರಾಟ ಅವರ ವಿದ್ಯೆಯಲ್ಲಿ ಅವಿತುಕೊಂಡ ಸಾಧನೆಗಳು. ನಮ್ಮವರೆಲ್ಲರಿಗೂ ತಿಳಿದು ಬರುತ್ತಿದೆ. ಹಾಗೆಯೇ ನಮ್ಮ ಎಲ್ಲ ಯುವಕರು ಪ್ರಜ್ಞಾವಂತರಾಗಿ ಸಂಘಟಿತರಾಗಿ ಶಿಕ್ಷಣ ಪಡೆದು ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ತಿಳಿಸಿದರು ತಾಲೂಕು ಉಪಾಧ್ಯಕ್ಷರಾದ ಮತ್ತಿಘಟ್ಟ ಶಿವಕುಮಾರ್ ಮಾತನಾಡಿ, ಸಮುದಾಯದ ಏಳಿಗೆಗೆ ಮತ್ತು ತಳ ಸಮುದಾಯದ ಬದುಕಿನ…
ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ನಾಲ್ಕೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಯುವತಿ ಬಾಗೆಪಲ್ಲಿಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಯುವತಿಯ ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಅಟ್ಟಹಳ್ಳಿ ನಿವಾಸಿಯಾಗಿರುವ 25 ವರ್ಷದ ಯುವತಿ ಯಲಹಂಕದ ಬಾಗಲೂರು ಕ್ರಾಸ್ ನಿವಾಸಿಯಾಗಿರುವ ಯುವಕನನ್ನು ಪ್ರೀತಿಸಿ ನಾಲ್ಕು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದಳು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರಿನ ಶ್ರೀ ಸತ್ಯಗಣಪತಿ ಪೆಂಡಾಲ್ ಮುಂಭಾಗದಲ್ಲಿರುವ ಅರಳೀಕಟ್ಟೆ ವೃತ್ತವನ್ನು ಪುನೀತ್ ರಾಜ್ ಕುಮಾರ್ ವೃತ್ತವೆಂದು ಹಾಗೂ ಕೆ.ಆರ್.ಬಡಾವಣೆಯ ನಾಲ್ಕನೇ ಮುಖ್ಯರಸ್ತೆಯಲ್ಲಿ ವಾಸ ಇರುವ ಡಾ.ರಾಜ್ ಕುಮಾರ್ ಬಾಲ್ಯ ಸ್ನೇಹಿತರಾದ ಶ್ರೀರಾಮಸ್ವಾಮಿಯವರ ರಸ್ತೆಯನ್ನು ಯುವರತ್ನ, ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ನಗರಸಭೆ ಪೌರಾಯುಕ್ತರಾದ ಉಮಾಕಾಂತ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯ ಮಹೇಶ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್ ಮಾತನಾಡಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು. ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ನಗರಸಭೆ ಆಯುಕ್ತರಾದ ಉಮಾಕಾಂತ್, ಮುಂದಿನ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಸೂಕ್ತ ನಿರ್ಣಯವನ್ನು ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಬೆನ್ನಾಯಕನಹಳ್ಳಿ ಗ್ರಾ.ಪಂ. ಸದಸ್ಯ ನರಸಿಂಹಯ್ಯ, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹಿದ್, ಕಾರ್ಯಾಧ್ಯಕ್ಷ ಅನ್ವರ್ ಪಾಷಾ, ದಲಿತ ಮುಖಂಡ…
ಸರಗೂರು: ಹೆಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ನೂತನ ಆಡಳಿತ ವೈದ್ಯಾಧಿಕಾರಿ ಇಟ್ನ ಗ್ರಾಮದ ಡಾ.ಸೋಮಣ್ಣ ಅವರನ್ನು ಕಾಂಗ್ರೆಸ್ ಮುಖಂಡರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಡಾ.ರವಿಕುಮಾರ್, ಪುರಸಭಾ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಹೆಚ್.ಸಿ.ನರಸಿಂಹಮೂರ್ತಿ, ಮೈಮೂಲ್ ನಿರ್ದೇಶಕರಾದ ಹೀರೆಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸುರೇಂದ್ರ ಗೌಡ, ಡಿಸಿಸಿ ಸದಸ್ಯ ಪರಶಿವಮೂರ್ತಿ, ಕ್ಯಾತನಹಳ್ಳಿ ನಾಗರಾಜು, ಪುರಸಭಾ ಸದಸ್ಯರಾದ ಮಧುಕುಮಾರ್, ಸಾಮಾಜಿಕ ಜಾಲತಾಣದ ಉಪಾಧ್ಯಕ್ಷ ವೆಂಕಿ ಕೋಟೆ, ಉಮೇಶ್ ವನಸಿರಿ ಮತ್ತಿತರರು ಭಾಗವಹಿಸಿದ್ದರು. ವರದಿ: ಚಂದ್ರ ಹಾದನೂರು ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ, ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಮುಲ್ ಅಧ್ಯಕ್ಷ ಪ್ರಸನ್ನ, ಈ ಪ್ರಕರಣದಲ್ಲಿ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ವಿರುದ್ಧ ನೇರವಾಗಿ ಎಸ್ಪಿಗೆ ದೂರು ನೀಡಿದ್ದು, ಈ ಸಂಬಂಧ ಎಫ್ ಐಆರ್ ಕೂಡ ದಾಖಲಾಗಿದೆ ಎಂದು ತಿಳಿಸಿದರು. ನಾನು ಕೂಡಾ ಸ್ಥಳ ಪರಿಶೀಲನೆ ಮಾಡಿ ಬಂದಿದ್ದು, ನಕಲಿ ತುಪ್ಪ ತಯಾರಿಕೆಯಲ್ಲಿ ಯಾರೇ ಭಾಗಿಯಾದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ಮೈಮುಲ್ ಸಿಬ್ಬಂದಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ನಮ್ಮ ಸಿಬ್ಬಂದಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಸೇವೆಯಿಂದಲೇ ವಜಾ ಮಾಡುತ್ತೇವೆ, ಜೈಲಿಗೂ ಕಳುಹಿಸುತ್ತೇವೆ. ಅನೇಕ ದಿನಗಳಿಂದ ಮೈಸೂರಿನ ಹೊರವಲಯದ ಹೊಸಹುಂಡಿಯಲ್ಲಿ ನಕಲಿ ತುಪ್ಪ ತಯಾರಿಕೆ ಮಾಡಲಾಗುತ್ತಿತ್ತು ಎಂಬುದು ತಿಳಿದು ಬಂದಿದ್ದು, ಅಲ್ಲಿಗೂ ನಾವು ಭೇಟಿ ನೀಡಿ,…
ಬೆಳಗಾವಿ: ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ ಮೂರ್ತಿಯ ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ನಿಂದ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಕಿತ್ತು ಹಾಕಿದ್ದಾರೆ. ಬೆಳಗ್ಗಿನ ಜಾವ 3ರ ಸುಮಾರಿಗೆ ಈ ಕೃತ್ಯ ನಡೆಸಿರುವ ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿದ ತಿಲಕವಾಡಿ ಠಾಣೆ ಪೊಲೀಸರು, ಪ್ರತಿಮೆಯನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ರಾಯಣ್ಣ ಅಭಿಮಾನಿ ಸಂಘಟನೆಗಳು ತಿಲಕವಾಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಘಟನಾ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮೈಸೂರು: ಲೋಕಾಯುಕ್ತ ಇರುತ್ತಿದ್ದರೆ, ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ದರು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಅವರು ಹರಿಹಾಯ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅನುಭವಿಗಳು. ಸದನದಲ್ಲಿ ಮಾತನಾಡುವುದನ್ನು ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದು ಸಮಂಜಸವಲ್ಲ.40% ಕಮಿಷನ್ ಬಗ್ಗೆ ತನಿಖೆಯಾಗಬೇಕು ಅನ್ನೋದನ್ನು ಸದನದ ಒಳಗೆ ಕೇಳಬೇಕು. ಅದಕ್ಕೆ ಪೂರಕ ಸಾಕ್ಷಿ ದಾಖಲೆಯೊಂದಿಗೆ ಕೇಳಬೇಕು. ನೀವು ಮಾತ್ರ ಸತ್ಯವಂತರು ಬಿಜೆಪಿ ಪರ್ಸೆಂಟೇಜ್ ಎಂದು ಅವರು ಹೇಳುತ್ತಾರೆ. ನಾನು ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವುದಿಲ್ಲ. ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತೇನೆ ಎಂದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕೆ ಶಿವಕುಮಾರ್ ರಿಂದ 7 ಸಾವಿರ ಕೋಟಿ ಸೋಲಾರ್ ಟೆಂಡರ್ ಕೇವಲ 3 ನಿಮಿಷದಲ್ಲಿ ಮುಗಿಸಿದ್ದರು. ಸತ್ಯವಂತ ಸಿದ್ದರಾಮಯ್ಯ ಲೋಕಾಯುಕ್ತ ಏಕೆ ಸ್ಕ್ಯ್ರಾಪ್ ಮಾಡಿದಿರಿ.? ಲೋಕಾಯುಕ್ತ ಬಿ. ಎಸ್. ಯಡಿಯೂರಪ್ಪ ಅವರನ್ನು ಸಿಎಂ ಆಗಿದ್ದಾಗಲೇ ಜೈಲಿಗೆ ಹಾಕಿತ್ತು. ಅರ್ಕಾವತಿ ರೀ ಡೂ ಹೊಸ ಹೆಸರು ನೀಡಿದಿರಿ. ಲ್ಯಾಂಡ್ ಡೀ ನೋಟಿಫಿಕೇಶನ್…
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಈ ವಿಡಿಯೋಗೆ ಸಂಬಂಧಿಸಿದಂತೆ ಇಂದು ಪ್ರತಿಕ್ರಿಯೆ ನೀಡಿರುವ ಸಿಎಂ ಇಬ್ರಾಹಿಂ, ತಿರುಚಿದ ವಿಡಿಯೋವನ್ನು ವೈರಲ್ ಮಾಡಲಾಗಿದ್ದು, ಈ ವಿಡಿಯೋವನ್ನೇ ಬ್ರಾಡ್ ಕಾಸ್ಟ್ ಮಾಡಲಾಗಿದೆ. ಇದು ಭಾರೀ ನೀಚವಾಗಿರುವ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾರಿಗೆ ಧೈರ್ಯವಾಗಿ ಎದುರಿಗೆ ಬಂದು ನಿಂತು ಹೋರಾಟ ಮಾಡುವ ಶಕ್ತಿ ಇಲ್ಲವೋ, ಅಂತಹ ಜನ ಈ ಕೆಲಸವನ್ನು ಮಾಡಿದ್ದಾರೆ. ಆದ್ದರಿಂದ ಸಾರ್ವಜನಿಕರಲ್ಲಿ ತಪ್ಪು ಭಾವನೆ ಮೂಡಲು ಕಾರಣವಾಗಿದೆ. ಈ ಬಗ್ಗೆ ನಿನ್ನೆಯೇ ನಾನು ಇದಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ಅಂದುಕೊಂಡಿದ್ದೆ. ಆದರೆ ಸಾಧ್ಯವಾಗಲಿಲ್ಲ. ಈ ವಿಡಿಯೋದಲ್ಲಿ ಏನು ಬಿಂಬಿಸಲಾಗಿದೆ ಅದು ತಪ್ಪು ಎಂದರು. ಈ ವಿಡಿಯೋವನ್ನು ತಿರುಚಿ ಪ್ರಸಾರ ಮಾಡಿದವರ ವಿರುದ್ಧ ನಾನು ಈಗಾಗಲೇ ಸೈಬರ್ ಠಾಣೆಗೆ ದೂರು ದಾಖಲಿಸಿದ್ದು,…
ತಿಪಟೂರು: ತಾಲ್ಲೂಕಿನ ಸೂಗೂರು ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ತಿಪಟೂರು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘ, ಸೂಗೂರುವತಿಯಿಂದ ಮಿಶ್ರತಳಿ ಹಸು ಮತ್ತು ಕರುಗಳ ಪ್ರದರ್ಶನ ಮತ್ತು ಉಚಿತ ಚಿಕಿತ್ಸಾ ಶಿಬಿರ ನಡೆಸಲಾಯಿತು. ಶಿಬಿರದಲ್ಲಿ ಸುಮಾರು 300 ಜಾನುವಾರುಗಳಿಗೆ ಆರೋಗ್ಯ ತಪಾಸಣೆ, ಜಂತು ನಾಶಕ ವಿತರಣೆ, ಖನಿಜ ಮಿಶ್ರಣ ವಿತರಣೆ ನಡೆಸಲಾಯಿತು. ಶಿಬಿರದಲ್ಲಿ ಪ್ರದರ್ಶಿಸಲಾದ ಅತ್ಯುತ್ತಮ ಮಿಶ್ರತಳಿ ಹಸುಗಳಿಗೆ ಮತ್ತು ಕರುಗಳಿಗೆ ಬಹುಮಾನ ವಿತರಿಸಲಾಯಿತು. ಹುಣಸೇಘಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ದಕ್ಷಿಣ ಮೂರ್ತಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪಶುಆಸ್ಪತ್ರೆ, ತಿಪಟೂರಿನ ಸಹಾಯಕ ನಿರ್ದೇಶಕರಾದ ಡಾ. ನಂದೀಶ್ ಕೆ.ಜೆ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು, ಪಶುಪಾಲಕರಿಗೆ ಜಾನುವಾರುಗಳಲ್ಲಿ ಲಸಿಕೆಯ ಮಹತ್ವ ಮತ್ತು ಕರುಗಳ ಪಾಲನೆ ಬಗ್ಗೆ ತಿಳಿಸಿದರು. ಸಭೆಯಲ್ಲಿ ಸೂಗೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸೋಮಶೇಖರ್, ಕಾರ್ಯದರ್ಶಿ ಸುರೇಶ್, ಗ್ರಾಮಪಂಚಾಯತಿ ಉಪಾದ್ಯಕ್ಷರಾದ ಜಯಂತಿ, ಸದಸ್ಯರಾದ ಮಾದೇವಯ್ಯ, ಶಿವಗಂಗಮ್ಮ, ಕವಿತ, ಮುಖಂಡರಾದ ದೇವರಾಜು ಉಪಸ್ಥಿತರಿದ್ದರು. ಪಶುವೈದ್ಯರಾದ ಡಾ.ಮೃತ್ಯುಂಜಯ, ಡಾ.ಪರ್ವೇಜ್ ಪಾಶ,…
ತುಮಕೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ಶುಕ್ರವಾರ ಪ್ರತಿಭಟನೆ ನಡೆಸಿ, ತುಮಕೂರಿನ ಪ್ರಭಾರ ಜಿಲ್ಲಾಧಿಕಾರಿಯವರಿಗೆ ಮನವಿ ನೀಡಲಾಯಿತು. ರಾಜ್ಯಾಧ್ಯಕ್ಷ ರಂಗನಾಥ್ ತುಮಕೂರು, ಡಿಎಸ್ ಎಸ್ ಮುಖ್ಯಸ್ಥರಾದ ನಿಧಿಕುಮಾರ್ ಹಾಗೂ ಗೋವಿಂದಣ್ಣ ರಾಜ್ಯ ಕಾರ್ಯದರ್ಶಿ ರಮೇಶ G R , ಪ್ರಧಾನ ಕಾರ್ಯದರ್ಶಿ ರಘು ತುಮಕೂರು, ಜಿಲ್ಲಾ ಗೌರವಾಧ್ಯಕ್ಷರಾದ ರಮೇಶ್ N, ತುಮಕೂರು ಜಿಲ್ಲಾಧ್ಯಕ್ಷರಾದ ನರಸಿಂಹಮೂರ್ತಿ, ಉಪಾಧ್ಯಕ್ಷರಾದ ಜ.ಬಿ. ಗ್ರಾಮಾಂತರ ಅಧ್ಯಕ್ಷರಾದ ಗಿರಿ ಸ್ವಾಮಿ, ಕಾನೂನು ಸಲಹೆಗಾರರ ರಜನಿಕಾಂತ್, ಕೊರಟಗೆರೆ ಕಾರ್ಯದರ್ಶಿ ರಾಜಣ್ಣ, ಕುಣಿಗಲ್ ತಾಲೂಕ್ ಅಧ್ಯಕ್ಷರಾದ ವರದರಾಜ್ , ಹೆಬ್ಬೂರು ಹೋಬಳಿ ಅಧ್ಯಕ್ಷರಾದ ಚೇತನ್ ಕುಮಾರ್ ಹಾಗೂ ತುಮಕೂರು ಜಿಲ್ಲೆ ಪರಮೇಶ್ವರ್ ಯುವ ಸೈನ್ಯ ಮುಖಂಡರು ಭಾಗವಹಿಸಿದ್ದರು. ವಿಡಿಯೋ ನೋಡಿ: ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700