Author: admin

ಉಯಿಲು ಬರವಣಿಗೆಯಲ್ಲಿಯೇ ಇರತಕ್ಕದ್ದು: ಸಾಧ್ಯವಾದರೆ ಉಯಿಲು ಕರ್ತನು ಅದನ್ನು ತನ್ನ ಕೈಬರಹದಲ್ಲಿಯೇ ಬರೆಯುವುದು ಸೂಕ್ತ. ಉಯಿಲನ್ನು ಯಾವುದೇ ಭಾಷೆಯಲ್ಲಿ ಯಾವುದೇ ಶೈಲಿಯಲ್ಲಿ ಬರೆಯಬಹುದು. ಉಯಿಲನ್ನು ಛಾಪಾ ಕಾಗದದ ಮೇಲೆಯೇ ಬರೆಯಬೇಕೆಂದೇನಿಲ್ಲ. ಉತ್ತಮ ದರ್ಜೆಯ ಯಾವುದೇ ಕಾಗದದಲ್ಲಿಯೂ ಬರೆಯಬಹುದು. ಉಯಿಲಿನ ಪ್ರತಿಪುಟದ ಮೇಲೆ ಉಯಿಲು ಕರ್ತನು ತನ್ನ ಸಹಿಯನ್ನು ಮಾಡಬೇಕು ಅಥವಾ ಹೆಬ್ಬೆರಳಿನ ಗುರುತನ್ನು ಹಾಕಬೇಕು. ಉಯಿಲು ದಸ್ತಾವೇಜಿಗೆ ಕನಿಷ್ಠ ಇಬ್ಬರು ವ್ಯಕ್ತಿಗಳು ‘ಸಾಕ್ಷಿಗಳೆಂದು’ (Witness) ಉಯಿಲು ಕರ್ತನು ಅದಕ್ಕೆ ಸಹಿ ಮಾಡಿದ್ದನ್ನು ಪ್ರತ್ಯಕ್ಷ ಕಂಡು ಸಹಿ ಮಾಡಬೇಕು. ಬಿಕ್ಕಲಂ (Document Writer) ಬರಹಗಾರ ‘ಸಾಕ್ಷಿ’ ಆಗುವುದಿಲ್ಲ.(ಉಯಿಲು ದಾಖಲೆ ಪತ್ರ ಬರೆದ ವ್ಯಕ್ತಿ Deed writer) ಉಯಿಲಿನ ಮೂಲಕ ಯಾವುದೇ ವಿಧದ ಪ್ರಯೋಜನವನ್ನು ಪಡೆಯುವ ವ್ಯಕ್ತಿ ( Beneficiary Of the will ) ಉಯಿಲಿಗೆ ಸಾಕ್ಷಿ ಹಾಕಬಾರದು. ಹಾಗೊಂದು ವೇಳೆ ಸಾಕ್ಷಿ ಹಾಕಿದಲ್ಲಿ, ಸಾಕ್ಷಿ ಹಾಕಿದ್ದು ಅನೂರ್ಜಿತವಾಗುವುದಿಲ್ಲ. ಆದರೆ ಸಾಕ್ಷಿ ಹಾಕಿದ ವ್ಯಕ್ತಿ ಅಥವಾ ಆತನ/ಆಕೆಯ ಹೆಂಡತಿ ಅಥವಾ ಗಂಡ ಉಯಿಲು…

Read More

ತುಮಕೂರು: ಜಿಲ್ಲೆಯ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ತಕ್ಷಣದಲ್ಲಿ ಕ್ರಮಕೈಗೊಂಡು 7 ದಿನಗಳ ಕಾಲ ಶಾಲೆಗೆ ರಜೆ ನೀಡಿ ಮುನ್ನೆಚ್ಚರಿಕೆ ಕೈಗೊಂಡಿದೆ. 9ನೇ ತರಗತಿಯ ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಶಾಲೆಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸೋಮವಾರವೇ ಶಾಲಾಗೆ ಆಡಳಿತ ಮಂಡಳಿ ರಜೆ ನೀಡಿದ್ದು, 9ನೇ ತರಗತಿಯಲ್ಲಿದ್ದ 34 ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗಿದೆ. ಜೊತೆಗೆ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 6 ಮಕ್ಕಳಿಗೂ ಕೊವಿಡ್ ಟೆಸ್ಟ್ ನಡೆಸಲಾಗಿದ್ದು, ಈ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ. 1ರಿಂದ 10ನೇ ತರಗತಿಯವರೆಗೆ ಈ ಶಾಲೆಯಲ್ಲಿ ತರಗತಿ ನಡೆಯುತ್ತಿದೆ. ಶಾಲೆಯಲ್ಲಿ ಒಟ್ಟು 700 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗೆ ಕೊವಿಡ್ ಪಾಸಿಟಿವ್ ಬಂದ ತಕ್ಷಣವೇ ಶಾಲೆಯ ಆಡಳಿತ ಮಂಡಳಿ ತಕ್ಷಣದಲ್ಲಿಯೇ ಕ್ರಮಕೈಗೊಂಡಿದ್ದು, ಶಾಲೆಗೆ ರಜೆ ನೀಡಿ, ಪ್ರತಿ ದಿನ ಶಾಲೆಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೂ ರಜೆ ನೀಡಲಾಗಿದೆ.…

Read More

ಆಟೋ ಡ್ರೈವರ್ ಆದ ನಾನು ಇತ್ತೀಚಿನ ಚುನಾವಣಾ ಸಮಯದಲ್ಲಿ ನನ್ನ 10 ವರ್ಷದ ಮಗನೊಂದಿಗೆ ತರಕಾರಿ ತರಲು ಮಾರ್ಕೆಟ್ ಗೆ ಕಾಲು ನಡಿಗೆಯಲ್ಲಿ ಹೋಗಿದ್ದೆ………. ಹಿಂದಿರುಗಿ ಬರುವಾಗ ಒಂದು ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯುತ್ತಿತ್ತು. ಜನರ ಗುಂಪು ನೋಡಿ ನನ್ನ ಮಗ ಅದನ್ನು ತೋರಿಸು ಎಂದು ಹಠ ಹಿಡಿದ. ನಾನು ಗುಂಪಿನಲ್ಲಿ ಹೋಗಿ ಕುಳಿತೆ. ಆ ಕ್ಷೇತ್ರದ ಅಭ್ಯರ್ಥಿ ಭಾಷಣ ಮಾಡುತ್ತಿದ್ದ. ” ಅಕ್ಕ ತಂಗಿಯರೇ, ಅಣ್ಣ ತಮ್ಮಂದಿರೇ, ನಾನು ನಿಮ್ಮ ಮನೆ ಮಗ, ಇಲ್ಲೇ ಹುಟ್ಟಿ ಬೆಳೆದ ಬಡ ರೈತನ ಮಗ, ನನಗೆ ಗೊತ್ತು ಬಡತನ ಎಷ್ಟು ಕಷ್ಟ ಅಂತ. ಒಳ್ಳೆಯ ರಸ್ತೆ ಇಲ್ಲ, ಬೀದಿ ದೀಪ ಇಲ್ಲ, ಕುಡಿಯುವ ನೀರಿಲ್ಲ, ಎಲ್ಲೆಲ್ಲೂ ಗಲೀಜು,ಬೀದಿ ನಾಯಿ ಕಾಟ, ಕಾಮುಕರು, ರೌಡಿಗಳ ತೊಂದರೆ, ಲಂಚ ಅತಿಯಾಗಿದೆ. ಹಬ್ಬ ಉತ್ಸವಗಳನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುತ್ತೇನೆ. ದೇವ ಮಂದಿರಗಳನ್ನು ಕಟ್ಟಿಸುತ್ತೇನೆ. ನೀವು ನನ್ನನ್ನು ಗೆಲ್ಲಿಸಿದರೆ 24 ಗಂಟೆಯು ನಾನು ನಿಮಗೆ ಸೇವೆ ಸಲ್ಲಿಸುತ್ತೇನೆ.…

Read More

ಸರಗೂರು: ಮಳೆ ಹಾನಿಯ ಫಲಾನುಭವಿಗಳಿಗೆ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಕೊತ್ತೇಗಾಲದಲ್ಲಿ ಗ್ರಾಮಸ್ಥರ ನಡುವೆಯೇ ಗೊಂದಲ ಸೃಷ್ಟಿಯಾಗಿದ್ದು, ಒಂದೆಡೆ ಕೊತ್ತೆಗಾಲದ ಕೆಲವು ಗ್ರಾಮಸ್ಥರು ಪರಿಹಾರ ನೀಡಲು ಅಧಿಕಾರಿಗಳು  ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದರೆ, ಇನ್ನೊಂದು ಗ್ರಾಮಸ್ಥರ ತಂಡ, ಇದು ಸುಳ್ಳು, ಅಧಿಕಾರಿಗಳು ಯಾವುದೇ ಹಣದ ಬೇಡಿಕೆ ಇಟ್ಟಿಲ್ಲ ಎಂದು ಆರೋಪ ನಿರಾಕರಿಸಿದ್ದಾರೆ. ಗ್ರಾಮಸ್ಥರ ಒಂದು ತಂಡ, “ಮಳೆಯಿಂದ ಹಾನಿಯಾದ ಮನೆಗಳ ಪರಿಹಾರದ ಫಲಾನುಭವಿಗಳ ಪಟ್ಟಿಗೆ ಸೇರಿಸಲು ಪರಿಶೀಲನೆಗೆ ಬರುವ ಗ್ರಾಮ ಲೆಕ್ಕಿಗರು 60-80 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ನೀಡಿದವರ ಹೆಸರನ್ನು ಮಾತ್ರ ಫಲಾನುಭವಿಗಳ ಪಟ್ಟಿಗೆ ಸೇರಿಸಿ ಉಳಿದ ಹಣ ನೀಡದ 20 ಬಡಕುಟುಂಬದ ಮನೆಗಳನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ” ಎಂದು ಆರೋಪಿಸಿ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ ತನಿಖೆ ನಡೆಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರಿಗೆ ಮನವಿಪತ್ರ ಸಲ್ಲಿಸಿದರು. ಆದರೆ, ಇದೀಗ ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮತ್ತೊಂದು ಗ್ರಾಮಸ್ಥರ ಗುಂಪು, ತಾಲ್ಲೂಕು ಕಛೇರಿಗೆ ಭೇಟಿ ನೀಡಿ…

Read More

ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ. 2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ ನಂತರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಅನುಮತಿ ನೀಡಿದೆ. ಸಂಪುಟ ಇದಕ್ಕೆ ಅನುಮೋದನೆ ನೀಡಿದ ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ.ೀ ಮೂಲಕ ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ 1955ರಂತಹ ವೈಯಕ್ತಿಕ ಕಾನೂನುಗಳಿಗೂ ತಿದ್ದುಪಡಿ ತರಲಾಗುತ್ತದೆ ಎಂದು ತಿಳಿದುಬಂದಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಅವರು ಹೇಳಿದ್ದಾರೆ. ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಳಗಾವಿ: ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಮಳೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಕೇಂದ್ರ ಸರಕಾರದ ಅನುದಾನಕ್ಕೆ ಕಾಯದೇ ತತ್‌ ಕ್ಷಣ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಲಹೆ ನೀಡಿದರು. ಪ್ರವಾಹದ ಕುರಿತು ನಿಯಮ 69ರ ಅಡಿಯಲ್ಲಿ ನಡೆಯುತ್ತಿರುವ ಚರ್ಚೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯಆರ್‌. ವಿ. ದೇಶಪಾಂಡೆ ಮಾತಿಗೆ ಬೆಂಬಲ ಸೂಚಿಸಿ ಮಾತನಾಡಿದ ಯಡಿಯೂರಪ್ಪ, ಅತಿವೃಷ್ಟಿ ಹಾನಿ ವಿಚಾರವಾಗಿ ದೇಶಪಾಂಡೆ ಮಾತು ವಾಸ್ತವಿಕ ಸತ್ಯ ಎಂದು ಸಮ್ಮತಿ ಸೂಚಿದರು. ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ, ಅವರಿಗೂ ವಾಸ್ತವಿಕ ಸ್ಥಿತಿ ಗೊತ್ತಿದೆ. ಕೇಂದ್ರ ಸರಕಾರ ತಜ್ಞರ ಸಮಿತಿ ಕಳಿಸಿ ಪರಿಶೀಲಿಸಲಿದೆ. ಕೇಂದ್ರದಿಂದ ಹಣ ಬರುವವರೆಗೂ ಕಾಯಲು ಹೋಗಬೇಡಿ, ಬೇರೆ ಎಲ್ಲ ಕೆಲಸ ಬದಿಗೊತ್ತಿ ದೇಶಪಾಂಡೆ ಅವರ ಮಾತನ್ನು ಗಮನದಲ್ಲಿ ಇಟ್ಟುಕೊಂಡು ಪರಿಹಾರ ನೀಡಿ ಎಂದು ಸಿಎಂಗೆ ಸಲಹೆ ನೀಡಿದರು. ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡಿದವರ ಕೂಲಿಯನ್ನು 1-2 ತಿಂಗಳು ಕೊಡದಿದ್ದರೆ…

Read More

ಬೆಂಗಳೂರು:  ತುಮಕೂರು ನಗರದ ರಸ್ತೆ ಅವ್ಯವಸ್ಥೆ ಸರಿಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ ಎಂದು ವರದಿಯಾಗಿದೆ. ತುಮಕೂರು ನಗರದ ರಸ್ತೆಗಳು ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿವೆ ಈ ಹಿನ್ನೆಲೆಯಲ್ಲಿ ವಕೀಲ ಎಲ್. ರಮೇಶ್ ನಾಯಕ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳು ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ, ನಗರದ ರಸ್ತೆಗಳ ಸ್ಥಿತಿ ಮಾತ್ರ ಬದಲಾಗಿಲ್ಲ. ಇವುಗಳನ್ನು ಮುಚ್ಚುವಂತೆ ಕೋರಿ ಕಳೆದ ಮೂರು ವರ್ಷಗಳಿಂದ ಹಲವು ಬಾರಿ ಮನವಿ ಸಲ್ಲಿಸಿದ್ದರೂ ತುಮಕೂರು ನಗರಸಭೆ ಅಧಿಕಾರಿಗಳು ಪರಿಗಣಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ವಾಹನ…

Read More

ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಬಿಟ್ಟು ನಂತರ ಮಂಡಿಸುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿ ಬಂದಿತು. ಇನ್ನು ಕೆಲವು ಶಾಸಕರು ಸಾರ್ವಜನಿಕ ಚರ್ಚೆ ನಡೆಸದೇ ಮಂಡಿಸುವುದು ಸೂಕ್ತ ಎಂಬ ವಾದವನ್ನೂ ಮುಂದಿಟ್ಟರು. ಆ ರೀತಿ ಮಾಡುವುದೇ ಆದರೆ, ಕೆಲವು ತಿದ್ದುಪಡಿಗಳನ್ನು ಮಾಡಬೇಕು ಎಂಬ ಅಭಿಪ್ರಾಯ ಕೇಳಿ ಬಂದಿತು ಎಂದು ಮೂಲಗಳು ತಿಳಿಸಿವೆ ಮಸೂದೆ ಮಂಡಿಸುವುದೇ ಆದರೆ, ಮುಂದಿನ ವಾರ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಸೂದೆಯ ಅಂಗೀಕಾರಕ್ಕೆ ವಿರೋಧ ಪಕ್ಷಗಳು ಅಡ್ಡಿ ಉಂಟು ಮಾಡುವ ಸಾಧ್ಯತೆ ಇದ್ದು, ವಿಧಾನಪರಿಷತ್ತಿನಲ್ಲಿ ಬಹುಮತ ಇಲ್ಲದ ಕಾರಣ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಇತಿಹಾಸ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಹನುಮ ಜಯಂತಿ ಪ್ರಯುಕ್ತ ಕೋಟೆ ಶ್ರೀಆಂಜನೇಯ ಸ್ವಾಮಿ ವೃತ್ತ ಕೇಸರಿ ಧ್ವಜಗಳಲ್ಲಿ ಕಂಗೊಳಿಸುತ್ತಿದ್ದು, ಕೋಟೆ ಶ್ರೀ ಆಂಜನೇಯಸ್ವಾಮಿ ಯುವಕರ ಬಳಗ ಹನುಮ ಜಯಂತಿ ಪ್ರಯುಕ್ತ ಸಕಲ ಕೆಲಸ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದೆ. ಗುರುವಾರ 10ನೇ ವರ್ಷದ ವೈಭವದ ಹನುಮ ಜಯಂತಿ ಹಾಗೂ ನೂತನ ರಥೋತ್ಸವ ನಡೆಯಲಿದ್ದು, ಶುಕ್ರವಾರ  ಬೆಳಗ್ಗೆ 11:30ಕ್ಕೆ ಕೋಟೆ ಶ್ರೀ ಆಂಜನೇಯ ಸ್ವಾಮಿಯ ವೈಭವದ ಮೆರವಣಿಗೆಯನ್ನು ತುಮಕೂರಿನ ರಾಜಬೀದಿಗಳಲ್ಲಿ ನಡೆಯಲಿದೆ. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಪುರಾತನ ದೇವಸ್ಥಾನವಾಗಿದ್ದು, ಈ ದೇವಸ್ಥಾನದ ವಿಶೇಷತೆ ಏನೆಂದರೆ, ಗರ್ಭಗುಡಿಯ ಒಳಗೆ ಹನುಮನ ಎರಡು ಮೂರ್ತಿಗಳಿವೆ. ಈ ಪೈಕಿ ಒಂದು ಮೂರ್ತಿ ಪುರಾತನ ಕಾಲದ್ದಾಗಿದ್ದು, ಇನ್ನೊಂದು ಆ ಬಳಿಕ ಸ್ಥಾಪನೆ ಮಾಡಿದ ಮೂರ್ತಿಯಾಗಿದೆ. ಈ ದೇವಸ್ಥಾನದ ಹೊರ ಭಾಗಗಳಲ್ಲಿ ವಿಶಾಲವಾದ ಕೋಟೆ ಇದ್ದುದರಿಂದಾಗಿ ಈ ದೇವಸ್ಥಾನಕ್ಕೆ ಕೋಟೆ ಆಂಜನೇಯ ದೇವಸ್ಥಾನ ಎಂಬ ಹೆಸರು ಬಂದಿದೆ. ಆದರೆ, ಪ್ರಸ್ತುತ…

Read More