Subscribe to Updates
Get the latest creative news from FooBar about art, design and business.
- ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
- ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
- BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
- ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ ಪ್ರತಿಭಟನೆ
- ಸರಗೂರು | ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
- ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
- ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
- ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
Author: admin
ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ….. ಸ್ವಾಮಿ ವಿವೇಕಾನಂದ.. ಇಲ್ಲದಿದ್ದರೆ….. ಒಂದೇ ಕುಟುಂಬಗಳು, ಒಂದೇ ಮನೆತನಗಳು, ಒಂದೇ ರಕ್ತ ಸಂಬಂಧಗಳು, ಒಂದೇ ಹಣ ದಾಹಿಗಳು, ಒಂದೇ ಜಾತಿಯವರುಗಳು, ಒಂದೇ ಭ್ರಷ್ಟಾಚಾರಿಗಳು, ಒಂದೇ ಸುಳ್ಳುಗಾರರು, ಒಂದೇ ಮತಾಂಧರು, ಒಂದೇ ಮೌಢ್ಯದವರು, ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ. ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ. ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು. ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ…….. ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು. ಶ್ರೀಮಂತರ…
ನವದೆಹಲಿ: ದೇಶದ ಪ್ರತಿಯೊಬ್ಬ ನಾಗರಿಕ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹ ಎಂದು ಹೇಳಿರುವ ಸುಪ್ರೀಂಕೋರ್ಟ್, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್ ಕಾರ್ಡ್, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೋವಿಡ್-19 ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಸಿಲುಕಿರುವ ಲೈಂಗಿಕ ಕಾರ್ಯಕರ್ತೆಯರ ಸಮಸ್ಯೆಗಳ ಕುರಿತಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ಪೀಠ, ವಿಚಾರಣೆ ನಡೆಸಿದ ಪೀಠವು, ಗುರುತಿನ ಪುರಾವೆ ಇಲ್ಲದಿದ್ದರೂ ಲೈಂಗಿಕ ಕಾರ್ಯಕರ್ತೆಯರಿಗೆ ಒಣ ಪಡಿತರವನ್ನು ನೀಡಬೇಕು ನಿರ್ದೇಶನ ನೀಡಿದೆ. ಲೈಂಗಿಕ ಕಾರ್ಯಕರ್ತರಿಗೆ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ನೀಡಲು ಈ ಹಿಂದೆಯೂ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೂ ಆದೇಶ ಅನುಷ್ಠಾನಕ್ಕೆ ಬಂದಿಲ್ಲ. ಇದರ ಹಿಂದೆ ಯಾವುದೇ ಕಾರಣಗಳೂ ಇಲ್ಲ ದೇಶದ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ…
ನಂಜನಗೂಡು: ನಗರದ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಐದು ತಿಂಗಳ ಗರ್ಭಿಣಿ ಹೆಂಡತಿಯನ್ನು ಗಂಡನೇ ನದಿಗೆ ತಳ್ಳಿ, ಮುಳುಗಿಸಿ ಹತ್ಯೆ ನಡೆದಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ ಪೊಲೀಸರು ತಿಳಿಸಿದ್ದಾರೆ. ತಾಲ್ಲೂಕಿನ ಮುದ್ದಹಳ್ಳಿ ಗ್ರಾಮದ ದೇವಿಕಾ (35) ಮೃತಪಟ್ಟವರು. ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದ ಪುಟ್ಟಸಿದ್ದಯ್ಯನ ಮಗಳಾದ ದೇವಿಕಾ ಅವರನ್ನು ಐದು ವರ್ಷಗಳ ಹಿಂದೆ ಮುದ್ದಹಳ್ಳಿಯ ರಾಜೇಶ್ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ರಾಜೇಶ್ ನದಿಯ ಬಳಿ ಹೆಂಡತಿಯನ್ನು ಕರೆದೊಯ್ದು ನದಿಗೆ ತಳ್ಳಿ, ಮುಳುಗಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೇವಿಕಾ ತಂದೆ ನೀಡಿರುವ ದೂರಿನನ್ವಯ ಆರೋಪಿ ರಾಜೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿ.ಪಿ.ಐ ಲಕ್ಷ್ಮೀಕಾಂತ್ ತಳವಾರ್ ತಿಳಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ ನಿಂದ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿರುವ ಅಭ್ಯರ್ಥಿಗಳ ವಿವರ ಹೀಗಿದೆ. ಬಿಜೆಪಿ = 12 ಬೆಂಗಳೂರು ನಗರ – ಗೋಪಿನಾಥ ರೆಡ್ಡಿ ಮಡಿಕೇರಿ – ಸುಜಾ ಕುಶಾಲಪ್ಪ ಶಿವಮೊಗ್ಗ – ಡಿ.ಎಸ್.ಅರುಣ್ ಚಿತ್ರದುರ್ಗ – ಕೆಎಸ್ ನವೀನ್ ಬಳ್ಳಾರಿ – ವೈಎಂ ಸತೀಶ್ ಉತ್ತರ ಕನ್ನಡ – ಗಣಪತಿ ಉಳ್ವೇಕರ್ ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್ ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್ ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ ಕಾಂಗ್ರೆಸ್ = 11 ಬೀದರ್ – ಭೀಮರಾವ್ ಬಿ ಪಾಟೀಲ್…
ತಿಪಟೂರು: ರಾಜೇಂದ್ರರವರು ಅವಕಾಶವಾದಿ ರಾಜಕಾರಣ ಮಾಡದೆ, ಜನರ ಮಧ್ಯದಲ್ಲಿದ್ದುಕೊಂಡು, ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನರ ಕಷ್ಟ ಸುಖಗಳಿಗೆ ಸ್ಪಂದಿಸಿದ್ದರಿಂದಾಗಿ ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳು, ಬೇರೆ ಪಕ್ಷಗಳ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಪ್ರಾಮಾಣಿಕವಾಗಿ ಅಭಿವೃದ್ಧಿಯ ಕೆಲಸಗಳಿಗೆ ಮನ್ನಣೆ ಕೊಟ್ಟು ರಾಜೇಂದ್ರರವರನ್ನು ಗೆಲ್ಲಿಸಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷರಾದ ಕುಂದೂರು ರವಿ ಹೇಳಿದರು. ಆರ್.ರಾಜೇಂದ್ರ ಅವರ ಗೆಲುವಿನ ಹಿನ್ನೆಲೆಯಲ್ಲಿ ಕೆ.ಬಿ. ಕ್ರಾಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ ವೇಳೆ ಮಾತನಾಡಿದ ಅವರು, ಈ ಗೆಲುವು ಪ್ರಾಮಾಣಿಕ ಹಾಗೂ ನಿಷ್ಪಕ್ಷವಾದ ರಾಜಕಾರಣಕ್ಕೆ ಹಾಗೂ ಪ್ರಜಾಪ್ರಭುತ್ವದ ಆಶಯಕ್ಕಾನುಗುಣವಾಗಿ ಸಂದ ಗೆಲುವು ಎಂದರು. ರಾಜೇಂದ್ರರ ಗೆಲುವಿಗೆ ಜಿಲ್ಲೆಯ ಎಲ್ಲಾ ಹಾಲಿ, ಮಾಜಿ ಶಾಸಕರು, ಸಂಸತ್ ಸದಸ್ಯರು, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಗಿದೆ. ಈ ಗೆಲುವು ಎಲ್ಲರಿಗೂ ಸಲ್ಲಬೇಕು ಎಂದು ಅವರು ಇದೇ ವೇಳೆ ಹೇಳಿದರು. ಕಾಂಗ್ರೆಸ್ ಮುಖಂಡರಾದ ಕುಂದೂರು ಮುರಳಿ, ಕುಂದೂರು…
ತುಮಕೂರು: ಜಿಲ್ಲಾ ವಿಧಾನಪರಿಷತ್ ಕಾಂಗ್ರೆಸ್ ನ ಆರ್.ರಾಜೇಂದ್ರ ಜಯಭೇರಿ ಬಾರಿಸಿರುವುದರ ಮೂಲಕ ನಿರೀಕ್ಷಿತ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್.ರಾಜೇಂದ್ರ ಅಭೂತಪೂರ್ವ ಗೆಲುವನ್ನು ಜಿಲ್ಲೆಯಾದ್ಯಂತ ಹಾಗೂ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಹಚ್ಚುವುದರ ಮೂಲಕ ಸಂಭ್ರಮಿಸಲಾಯಿತು. ಈ ಗೆಲುವಿನ ಸಂಭ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು, ಉಪಾಧ್ಯಕ್ಷರಾದ ಸಿ.ಡಿ.ಚಂದ್ರಶೇಖರ್, ಕಾರ್ಯದರ್ಶಿಗಳಾದ ಬ್ರಹ್ಮಾನಂದ, ಎಸ್.ಸಿ.ಘಟಕದ ಅಧ್ಯಕ್ಷರಾದ ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಾಸಲು ಮಂಜು, ವಕ್ತಾರರಾದ ಕೃಷ್ಣೇಗೌಡ, ಕಾಂಗ್ರೆಸ್ ಮುಖಂಡರುಗಳಾದ ಮುಜೀಬ್, ಕಾತ್ರಿಕೆ ಹಾಲ್ ಗೋವಿಂದರಾಜು, ತರಬೇನಹಳ್ಳಿ ಚಿದಾನಂದಮೂರ್ತಿ, ಆಗಸರಹಳ್ಳಿ ನರಸಿಂಹಮೂರ್ತಿ, ಬಾಚಿಹಳ್ಳಿ ಬಸವರಾಜು ಮುಂತಾದ ತಾಲೂಕು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿ.ಡಿ.ಚಂದ್ರಶೇಖರ್, ರಾಜೇಂದ್ರ ರಾಜಣ್ಣನವರ ಜನಪರ ಕಾರ್ಯಗಳನ್ನು ಮೆಚ್ಚಿ ಮತ್ತು ಸ್ಥಳೀಯ ಅಭ್ಯರ್ಥಿಗೆ ಮನ್ನಣೆ ನೀಡಿ ಗೆಲ್ಲಿಸಿದ ಎಲ್ಲಾ ಸ್ಥಳೀಯ ಸಂಸ್ಥೆಗಳ ಸದಸ್ಯರು, ಅಧ್ಯಕ್ಷರೂ, ಉಪಾಧ್ಯಕ್ಷರು ಮತ್ತು ರಾಜೇಂದ್ರ ರವರನ್ನು ಶತಾಯಗತಾಯ ಗೆಲ್ಲಿಸಲು ಪಣತೊಟ್ಟು ಹಗಲಿರುಳೆನ್ನದೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ…
ತಿಪಟೂರು: ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಿಬ್ಬನಹಳ್ಳಿ ಹೋಬಳಿ ಕೆ.ಬಿ.ಕ್ರಾಸಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಿಸಿದರು. ಕಾಂಗ್ರೆಸ್ ಬಾವುಟ ನೆಟ್ಟು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದ ಕಾರ್ಯಕರ್ತರು, ಗೆಲುವಿನ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಕಾಂಗ್ರೆಸ್ ನ ಸ್ಥಳೀಯ ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಡಿಸೆಂಬರ್ 10ರಂದು ನಡೆದಿದ್ದ ಸ್ಥಳೀಯ ಸಂಸ್ಥೆ ವಿಧಾನ ಪರಿಷತ್ ಚುನಾವಣೆಗೆ ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ರಾಜೇಂದ್ರ ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಲೋಕೇಶ್ ಗೌಡ, ಜೆಡಿಎಸ್ ಪಕ್ಷದ ಅಭ್ಯರ್ಥಿ ಅನಿಲ್ ಕುಮಾರ್ ಸೋಲನುಭವಿಸಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೊದಲ ಸುತ್ತಿನಲ್ಲಿ ಹಾಗೂ ಎರಡನೇ ಸುತ್ತಿನಲ್ಲಿ ಸಹ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಗೆಲುವಿನ ನಿರೀಕ್ಷೆಯನ್ನು ಮೊದಲೇ ಮೂಡಿಸಿದ್ದರು. ಕೊನೆಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್. ರಾಜೇಂದ್ರ ಅವರಿಗೆ ಮತದಾರರ ಒಲವು ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆರ್.ರಾಜೇಂದ್ರ ಪರ ಘಟಾನುಘಟಿ ನಾಯಕರುಗಳದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಾಕಷ್ಟು ಹಿರಿಯ ನಾಯಕರು ಜಿಲ್ಲೆಯಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದರು. ಡಾ.ಜಿ.ಪರಮೇಶ್ವರ್ ಅವರು ವಿಶೇಷ ಮುತುವರ್ಜಿ ವಹಿಸಿ, ಬಿಡುವಿಲ್ಲದೇ ಪ್ರಚಾರ ನಡೆಸಿದ್ದು, ಆರ್.ರಾಜೇಂದ್ರ ಗೆಲುವಿಗೆ ಪ್ರಮುಖ ಕಾರಣವಾಗಿದ್ದಾರೆ. ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆಯೇ, ಕಾಂಗ್ರೆಸ್…
ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ ಹಾಗೂ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 731 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿ 354 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ 1433 ಮತಗಳನ್ನು ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಸೃಷ್ಟಿಯಾಗಿತ್ತು. ಎರಡೂ ಪಕ್ಷಗಳು ಕೂಡ ಭರ್ಜರಿಯಾಗಿ ಪ್ರಚಾರ ನಡೆಸಿದ್ದವು. ಕಾಂಗ್ರೆಸ್ ಅಭ್ಯರ್ಥಿ ಯೂಸೂಫ್ ಷರೀಫ್ (ಕೆ.ಜಿ.ಎಫ್. ಬಾಬು) ಪರವಾಗಿ ಕಾಂಗ್ರೆಸ್ ಘಟನಾನುಘಟಿ ನಾಯಕರು ಪ್ರಚಾರ ನಡೆಸಿದ್ದರು. ಅಂತಿಮವಾಗಿ ಇದೀಗ ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ಗೆಲುವು ದಾಖಲಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700