Subscribe to Updates
Get the latest creative news from FooBar about art, design and business.
- ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
- ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
- ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
- ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
- ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
- ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
- ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
- ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Author: admin
ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ ) ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ, ಬೃಹತ್ ಪ್ರತಿಭಟನೆ ಮಾಡುತ್ತಿದ್ದು, ಈ…
ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಪಬ್ ಗೆ ದಾಳಿ ನಡೆಸಿದ ಪೊಲೀಸರು, ನಿಯಮ ಪಾಲನೆ ಮಾಡುವಂತೆ ಮೇಲ್ವಿಚಾರಕರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿಯಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ ಎಂದು ಗುರುತಿಸಲಾಗಿದೆ. ಘಟನೆಯು ಅಕ್ಟೋಬರ್ 16ರಂದು ಉಡುಪಿಯ ಇಂದ್ರಾಳಿ ಫ್ಲ್ಯಾಟ್ ನಲ್ಲಿ ನಡೆದಿದ್ದು, ಕುಡಿದ ಮತ್ತಿನಲ್ಲಿ ಗೆಳತಿಯ ಮೇಲೆ ಆರೋಪಿ ಆರ್ಯನ್ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ. ಈ ವಿದ್ಯಾರ್ಥಿಯು ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಎನ್ನಲಾಗಿದೆ. ಅ.26ರಂದು ಸಂಜೆ ವೇಳೆ ಸ್ನೇಹಿತರ ವಾಟ್ಸಾಪ್ ಗ್ರೂಪ್ ಗೆ ಮೆಸೇಜ್ ಹಾಕಿದ ಕಿಶೋರ್, “ ಮಿಸ್ ಯೂ ಫ್ರೆಂಡ್ಸ್, ನಾನು ಹೋಗ್ತಿದ್ದೀನಿ… ನನ್ನದು ಬ್ಯಾನರ್ ಹಾಕಿ” ಎಂದು ಸಂದೇಶ ಕಳುಹಿಸಿದ್ದಾನೆ. ಆತ್ಮಹತ್ಯೆಗೂ ಮೊದಲು ಕೆರೆಯ ಫೋಟೋವನ್ನು ಗ್ರೂಪ್ ಗೆ ಶೇರ್ ಮಾಡಿದ್ದಾನೆ ಎಂದು ಹೇಳಲಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಯ ಮೃತದೇಹವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಇನ್ನೂ ಕಾಲೇಜು ಪ್ರಾಂಶುಪಾಲ ಸುಗ್ರಮಣಿ ಅವರು ಬೈದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವಯಸ್ಸಿನ ಅನಂತ್ ಭಟ್, ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಎಂದು ಆರೋಪಿಸಲಾಗಿದೆ. ಆರೋಪಿ ರಾಜೇಶ್ ಭಟ್ ಬಳಸುತ್ತಿದ್ದ ಕಾರು ಮತ್ತು ಮೊಬೈಲ್ ಫೋನ್ ನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದ ಎಂದು ಹೇಳಲಾಗಿದೆ. ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ತನ್ನ ಕಚೇರಿಯಲ್ಲಿ ತರಬೇತಿಗಾಗಿ ಬಂದಿದ್ದ ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ಭಟ್ ತಲೆ ಮರೆಸಿಕೊಂಡಿದ್ದಾನೆ.
ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಂಪಲ ಕಡೆಗೆ ಅವರು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸುಬ್ರಹ್ಮಣ್ಯ ಅವರು, ರಸ್ತೆಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿದಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿತ್ತು. ಅಷ್ಟರಲ್ಲೇ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಆಸ್ಪತ್ರೆಗಳ ಮೂಲಗಳ ಪ್ರಕಾರ ನಟ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ಅಪ್ಪು ವರ್ಕ್ಔಟ್ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದು, ಬಿಜೆಪಿಯಿಂದ 30-40 ಲಕ್ಷ ಹಣ ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ವಿಡಿಯೋವೊಂದನ್ನು ಹಂಚಿಕೊಂಡು, ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿರುವ ದೃಶ್ಯವನ್ನು ತೋರಿಸಿದ್ದಾರೆ.
ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದು, ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 3 ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. 2 ದಿನದಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯದ ಎಲ್ಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ವೈಯಕ್ತಿಕ ಸಮಸ್ಯೆಯನ್ನು ಸಾಮೂಹಿಕ ಸಮಸ್ಯೆ ಎಂದು ಬಿಂಬಿಸಲಾಗದು. ಶಿಕ್ಷಕ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವೆ? ನಾವು ಶಿಕ್ಷಕರನ್ನು ನೇಮಕ ಮಾಡಿರುವುದು ಪಾಠ ಮಾಡಲಿಕ್ಕೆ. ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಬಿ.ಸಿ.ನಾಗೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು. ನಂತರ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ. ಸದ್ಯದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದರು. ಶಿಕ್ಷಕರ ಸಮಸ್ಯೆ ಸಂಬಂಧ…
ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಅಣ್ಣ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿಯಲ್ಲಿ ನಡೆದಿದ್ದು, ಪ್ರಾಣ ಸ್ನೇಹಿತರಾಗಿದ್ದ ಇವರ ನಡುವೆ ಪ್ರೀತಿ ವಿಚಾರ ಒಡಕು ಮೂಡಿಸಿತ್ತು ಎನ್ನಲಾಗಿದೆ. 21 ವರ್ಷ ವಯಸ್ಸಿನ ಆಕಾಶ್ ಹತ್ಯೆಗೀಡಾದ ಯುವಕನಾಗಿದ್ದು, ಈತ ಓಂ ನಗರ ಕಾಲನಿಯ ಗ್ಯಾರೇಜ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಸ್ನೇಹಿತ ಶ್ರೀನಿಧಿ ಎಂಬಾತನ ತಂಗಿಯನ್ನು ಆಕಾಶ್ ಪ್ರೀತಿಸುತ್ತಿದ್ದು, ಈ ಬಗ್ಗೆ ಸಾಕಷ್ಟು ಬುದ್ಧಿ ಹೇಳಿದರೂ, ಆತ ಪ್ರೀತಿಸುವುದನ್ನು ಬಿಡಲಿಲ್ಲ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಶ್ರೀನಿಧಿಯ ತಂಗಿಯ ಜೊತೆಗೆ ಆಕಾಶ್ ನಾಪತ್ತೆಯಾಗಿದ್ದ. ನಮ್ಮ ಮನೆಯಲ್ಲಿಯೇ ಬಂದು ಕೊಂಡು ಇದ್ದು, ನನ್ನ ತಂಗಿಯ ಕೈಯಿಂದಲೇ ರಾಖಿ ಕಟ್ಟಿಸಿಕೊಂಡು ಇದೀಗ ಆಕೆಯ ಜೊತೆಗೆ ಆಕಾಶ ಪರಾರಿಯಾಗಿರುವ ವಿಚಾರದಿಂದ ಶ್ರೀನಿಧಿ ತೀವ್ರವಾಗಿ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ತಂಗಿಯ ಜೊತೆಗೆ ಪರಾರಿಯಾಗಿದ್ದ ಆಕಾಶ್ ವಾಪಸ್ ಊರಿಗೆ ಬರುತ್ತಿದ್ದಂತೆಯೇ ಶ್ರೀನಿಧಿ, ಆಕಾಶ್ ನ ಹತ್ಯೆಗೆ ಸಂಚು ಹಾಕಿದ್ದಾನೆ. ಹೊರಗೆ ಸುತ್ತಾಡಿ ಬರೋಣ…