Subscribe to Updates
Get the latest creative news from FooBar about art, design and business.
- ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
- ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
- ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
- ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
- ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
- ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
- ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Author: admin
ಹಿರಿಯೂರು: ಕರ್ನಾಟಕದಾದ್ಯಂತ ಪುನೀತ್ ರಾಜ್ ಕುಮಾರ್ ಅವರ ಜೇಮ್ಸ್ ಚಿತ್ರವು ಬಿಡುಗಡೆಯಾಗಿದೆ. ಇದೇ ಸಂದರ್ಭದಲ್ಲಿ ಹಿರಿಯೂರಿನಲ್ಲಿ ನಿನ್ನೆಯೇ ಟಿಕೆಟ್ ಗಳು ಖರೀದಿಯಾಗಿದೆ. ತಾಲ್ಲೂಕಿನ ನಂಜುಂಡೇಶ್ವರ ಚಿತ್ರಮಂದಿರದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನಗೊಳ್ಳುತ್ತಿದ್ದು, ನಿನ್ನೆಯೇ ಪ್ರೇಕ್ಷಕರು ಟಿಕೆಟ್ ಖರೀದಿಸುತ್ತಿರುವುದು ಕಂಡು ಬಂತು. ಒಂದೆಡೆ ಪುನೀತ್ ರಾಜ್ ಕುಮಾರ್ ಅವರು ನಿಧನರಾದ ನೋವು ಇನ್ನೊಂದೆಡೆ ಅವರ ಕೊನೆ ಚಿತ್ರ ನೋಡುವ ಕಾತರ ಈ ಎರಡೂ ಭಾವನೆಗಳನ್ನು ಸಾರ್ವಜನಿಕರು ನಮ್ಮತುಮಕೂರು.ಕಾಂ ಜೊತೆಗೆ ಹಂಚಿಕೊಂಡರು. ಮೈಸೂರಿನ ಶಕ್ತಿ ಧಾಮ ಆಶ್ರಮದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಪುನೀತ್, `ಬೆಂಗಳೂರು ಪ್ರೀಮೀಯರ್ ಪುಟ್ ಬಾಲ್ ತಂಡದ ಒಡೆತನವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರದ ನಂದಿನಿ ಹಾಲು ಉತ್ಪನ್ನಗಳು ಮತ್ತು LED ಬಲ್ಬ್ ಗಳ ರಾಯಭಾರಿಯಾಗಿ ಕೂಡ ಆಗಿದ್ದಾರೆ. ಒಂದು ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರಾಯಭಾರಿಯಾಗಿದ್ದರು ಎಂಬುದಾಗಿ ಪುನೀತ್ ಅಭಿಮಾನಿಗಳು ತುಮಕೂರು ಮಾಧ್ಯಮದ ಮೂಲಕ ತಿಳಿಸಿದರು. ಪುನೀತ್ ರಾಜಕುಮಾರ್ ರವರ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆ ಮತ್ತು ಸಮಾಜಮುಖಿ ಕಳಕಳಿಯನ್ನು…
ತುಮಕೂರು: ಪತ್ನಿಯನ್ನು ಲಾಡ್ಜ್ ಗೆ ಕರೆತಂದ ಪತಿಯೋರ್ವ, “ಪತ್ನಿಯ ಕಾಲು ಕತ್ತರಿಸಿದ್ದೇನೆ. ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು. ನಾಲ್ವರು ಹುಡುಗರನ್ನು ಕಳುಹಿಸಿಕೊಡಿ” ಎಂದು ಹೊಟೇಲ್ ಮಾಲಿಕರಿಗೆ ಕರೆ ಮಾಡಿ ಹೇಳಿದ ವಿಲಕ್ಷಣ ಘಟನೆ ನಡೆದಿದೆ. ತುಮಕೂರಿನ ಅಶೋಕ ಲಾಡ್ಜ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಗದಗ ಮೂಲದ 34 ವರ್ಷ ವಯಸ್ಸಿನ ಬಾಬು ಎಂಬಾತ ಈ ಕೃತ್ಯ ನಡೆಸಿದ್ದು, ತುಮಕೂರಿನ ಅಶೋಕ ಲಾಡ್ಜ್ ಗೆ ಬಂದಿದ್ದ ಈತ ಪತ್ನಿಯನ್ನು ಹತ್ಯೆ ಮಾಡುವ ಉದ್ದೇಶದಿಂದ ಬ್ಯಾಗ್ ನಲ್ಲಿ ಮಚ್ಚು ಹಿಡಿದುಕೊಂಡು ಬಂದಿದ್ದ ಎನ್ನಲಾಗಿದೆ. ಲಾಡ್ಜ್ ನಲ್ಲಿ ಪತ್ನಿ, ಮಧುಗಿರಿ ಮೂಲದ ಅನಿತಾ ಅವರ ಕಾಲಿಗೆ ಮಚ್ಚಿನಿಂದ ಗಾಯಗೊಳಿಸಿದ್ದು, ಬಳಿಕ ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡು ಹೈಡ್ರಾಮಾ ಆಡಿದ್ದಾನೆ. ಬಳಿಕ ಹೊಟೇಲ್ ಮಾಲಿಕರಿಗೆ ಕರೆ ಮಾಡಿ ಹುಡುಗರನ್ನು ಕರೆಸುವಂತೆ ಹೇಳಿದ್ದಾನೆ ಎನ್ನಲಾಗಿದೆ. ಅನಿತಾ ಅವರನ್ನು ಆರೋಪಿಯು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಅನಿತಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಬಾಬುನನ್ನು ತುಮಕೂರು…
ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮೂರು ಕಡೆಯ ಫಾಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ತುಮಕೂರು ತಾಲ್ಲೋಕಿನ ಕೌತಮಾರನಹಳ್ಳಿ, ಕಟ್ಟಿಗೆ ಗೊಲ್ಲಹಳ್ಳಿ ಹಾಗೂ ಮಧುಗಿರಿ ತಾಲ್ಲೂನ ಪುರವರ ಬಳಿಯಿರುವ ಎ.ಜಿ.ಒ. ಫಾರ್ಮ್ ಹೌಸ್ ಮೇಲೆ ಮೇಲೆ ದಾಳಿ ನಡೆಸಿದ ಎ.ಸಿ.ಬಿ. ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸಿ ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀನಿವಾಸ್ ಎಂಬುವವರ ಮನೆಗಳಮೇಲೆ ದಾಳಿ ನಡೆದಿದ್ದು, ದಾಳಿಯ ವೇಳೆ ಎ.ಸಿ.ಬಿ.ಯ ಹದಿನಾರು ಮಂದಿ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ 7 ಗಂಟೆಯಿಂದ ದಾಳಿ ಪ್ರಾರಂಭವಾಗಿದ್ದು ಏಕ ಕಾಲದಲ್ಲಿ ಶ್ರೀನಿವಾಸ್ ರವರಿಗೆ ಸೇರಿರುವ ಮನೆಗಳು ಹಾಗೂ ಫಾರಗಮ್ ಹೌಸ್ ನ ಮೇಲೆ ದಾಳಿ ನಡೆದು ದಾಖಲೆಗಳ ಪರಿಶೀಲನೆ ನಡೆಯಿತು. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ…
ಪಾವಗಡ: ಪಾವಗಡ ತಾಲೂಕಿನಲ್ಲಿ ಕೊಡಿಗೆಹಳ್ಳಿ ಗ್ರಾಮದ ಲೋಕೇಶ್ ಅವರ ಪುತ್ರಿ ಪ್ರತಿಕ್ಷಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರಿನ ರಾಜ್ ಇಂದಿರಾ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮಗುವಿನ ಚಿಕಿತ್ಸೆಗೆ ಪಾವಗಡದ ಹೆಲ್ಪ್ ಸೊಸೈಟಿ ನೆರವು ನೀಡಿತು. ಧನು ಸಿಂಹಾದ್ರಿ ಪಾವಗಡ, ಸೂರಿ ಮಧುಸೂದನ್, ಅನಿಲ್ ಕುಮಾರ್ ಪಾವಗಡ ಸೇರಿದಂತೆ ಹಲವರು ಮಗುವಿನ ಚಿಕಿತ್ಸೆಗೆ ನೆರವು ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದರು. ಈ ಸಂದೇಶವನ್ನು ನೋಡಿದ ಪಾವಗಡದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಅವರು ಸ್ಪಂದಿಸಿದ್ದಾರೆ. ಹೆಲ್ಪ್ ಸೊಸೈಟಿ ಕಚೇರಿಯಲ್ಲಿ ಮಗುವಿನ ಚಿಕಿತ್ಸೆಗೆ ನೆರವನ್ನು ನೀಡಲಾಯಿತು. ಬಳಿಕ ಮಾತನಾಡಿದ ಶಶಿಕಿರಣ್, ಸಾಮಾಜಿಕ ಜಾಲತಾಣಗಳಲ್ಲಿನ ಸಂದೇಶಗಳನ್ನು ನೋಡಿ ಅವರಿಗೆ ಏನಾದರೂ ಸಹಾಯ ಮಾಡಬೇಕು ಎಂದು ನನಗೆ ಅನ್ನಿಸಿತು. ಆ ಪುಟ್ಟ ಕಂದಮ್ಮನಿಗೆ ನಮ್ಮ ಕೈಲಾದಷ್ಟು ಆರ್ಥಿಕ ನೆರವನ್ನು ನೀಡಿದ್ದೇವೆ. ಇದೇ ರೀತಿ ಪಾವಗಡ ತಾಲೂಕಿನ ಎಲ್ಲಾ ವರ್ಗದ ಜನರು ಕೂಡ ಮಗುವಿಗೆ ನೆರವಾಗಲು ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು. ಇದೇ…
ಸರಗೂರು: ಮುಂದಿನ ದಿನಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣವಾಗಿ ಕಡಿವಾಣ ಹಾಕಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆರ್ .ಚೇತನ್ ಅವರು ತಿಳಿಸಿದರು. ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿರುವ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದಲ್ಲಿ ನಡೆದ ನೇರಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಇದನ್ನು ನಿಯಂತ್ರಿಸಲು ಇಲಾಖೆಯು ಸಂಪೂರ್ಣವಾಗಿ ಸಿದ್ಧತೆಗೊಂಡಿದೆ ಎಂದರು. ಹಾಡಿಗಳಿಗೆ ಹೆಚ್ಚಿನ ರೀತಿಯಲ್ಲಿ ಅಕ್ರಮ ಮದ್ಯ ಸರಬರಾಜು ಆಗುತ್ತಿದೆ. ಅಕ್ರಮ ಮದ್ಯ ಮಾರಾಟದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳು ಒಳಗೊಂಡಿದ್ದರು ಸಹ ಅವರ ವಿರುದ್ಧವು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು. ಇನ್ನೂ ಸಂಚಾರಿ ನಿಯಮಗಳ ಬಗ್ಗೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಲಾಖೆಯು ಮುಂದಿನ ದಿನಗಳಲ್ಲಿ ಕಿರು ನಾಟಕವನ್ನು ಏರ್ಪಡಿಸಲಾಗುವುದು. ಆರೋಗ್ಯದ ದೃಷ್ಠಿಯಿಂದ ದಯವಿಟ್ಟು ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡಿ. ಹಾಗೂ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಮಾಡಿಸಿ ಎಂದು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಾದ ಗಾಂಧಿಸರ್ಕಲ್ ನಿಂದ ಹಿರಿಯೂರು ನಗರದ ರಂಜಿತ ಲಾಡ್ಜ್ ನವರೆಗೂ ಬೀದಿ ದೀಪಗಳು ಕೆಟ್ಟು ಹೋಗಿ ತಿಂಗಳುಗಳೇ ಕಳೆದರೂ ಸಂಬಂಧಪಟ್ಟ ಆಡಳಿತ ಅಧಿಕಾರಿಗಳು ಹಾಗು ಸ್ಥಳೀಯ ಶಾಸಕರು ಇದರ ಬಗ್ಗೆ ಗಮನಹಿಸದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ಹಾಗೂ ಬಾಂಬೆ , ರಾಯಚೂರು ಹುಬ್ಬಳ್ಳಿ-ಧಾರವಾಡ ಕ್ಕೆ ತೆರಳುವಂತಹ ಪ್ರಧಾನ ರಸ್ತೆ ಇದಾಗಿದ್ದು, ಗಾಂಧಿಸರ್ಕಲ್ ನಿಂದ ಹಿರಿಯೂರು ಸಾರಿಗೆ ಬಸ್ ನಿಲ್ದಾಣ ಹಾಗೂ ರಂಜಿತ ಲಾಡ್ಜ್ ನವರೆಗೂ ಸಹ ಬೀದಿ ದೀಪಗಳು ಕೆಟ್ಟುಹೋಗಿದ್ದು, ಈವರೆಗೆ ಸಂಬಂಧಪಟ್ಟ ಆಡಳಿತ ಅಧಿಕಾರಿಗಳಾಗಲಿ , ಸ್ಥಳೀಯ ಶಾಸಕರಾಗಲಿ ಇದರ ಬಗ್ಗೆ ಸ್ವಲ್ಪವೂ ಸಹ ಗಮನಹರಿಸಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕರಿಂದ ಕೇಳಿ ಬಂದಿದೆ. ಬೀದಿ ದೀಪಗಳಿಲ್ಲದ ಕಾರಣ ಈ ಪ್ರದೇಶಗಳು ಅನೈತಿಕ ಚಟುವಟಿಕೆಗಳ ತಾಣವಾಗುತ್ತಿದ್ದು, ಈ ಪ್ರದೇಶಗಳಲ್ಲಿ ಸಾರ್ವಜನಿಕರು ಭೀತಿಯಿಂದ ಓಡಾಡುವಂತಾಗಿದೆ ಎಂದು ನಮ್ಮತುಮಕೂರು.ಕಾಂ ಜೊತೆಗೆ ಸಾರ್ವಜನಿಕರು ಅಭಿಪ್ರಾಯ ಹಂಚಿಕೊಂಡರು. ಇನ್ನೂ ಇಲ್ಲಿನ ಸಾರಿಗೆ ಸಂಸ್ಥೆಯ ವ್ಯವಸ್ಥೆಯು ಸಹ ಹದಗೆಟ್ಟಿದೆ…
ತಿಪಟೂರು: ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯು, ನಗರದ ಕಲ್ಪತರು ಸಭಾಂಗಣ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಅಧ್ಯಕ್ಷ ಅಶೋಕ್, ಗೌಡನಕಟ್ಟೆ ದಲಿತರಿಗೆ ಈ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಗಳ ಬಗ್ಗೆ ತಹಸೀಲ್ದಾರ್ ಅವರ ಗಮನ ಸೆಳೆದರು. ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗುರುಗದಹಳ್ಳಿ ಕಾಲೋನಿಯಲ್ಲಿ ಖಾಲಿ ಜಾಗವಿದ್ದು, ಈ ಜಾಗ ಪಕ್ಕದ ಮನೆಯವರು ಈ ಜಾಗ ನಮ್ಮದು ಎಂದು ಕಾಲೋನಿಯ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಸಂಬಂಧ ನಾವು ನಿಮ್ಮ ಗಮನಕ್ಕೆ ತಂದಿದ್ದೇವೆ. ಈ ಜಾಗವನ್ನು ಅಳತೆ ಮಾಡಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಂಜೂರು ಮಾಡಬೇಕೆಂದು ತಹಶೀಲ್ದಾರ್ ಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಾಲೂಕು ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಇಓ ಸುದರ್ಶನ್, ತಾಲೂಕು ಡಿಎಸ್ಎಸ್ ಅಧ್ಯಕ್ಷ ಅಶೋಕ ಗೌಡನಕಟ್ಟೆ, ತಾಲೂಕು ಉಪಾಧ್ಯಕ್ಷ ಮತ್ತಿಘಟ್ಟ ಶಿವಕುಮಾರ್, ಪರಿಶಿಷ್ಟ ಜಾತಿ-ಪರಿಶಿಷ್ಟಪಂಗಡದ ಮುಖಂಡರುಗಳು ಭಾಗಿಯಾಗಿದ್ದರು. ವರದಿ:…
ಪೌರಕಾರ್ಮಿಕರ ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಆರ್ಥಿಕ ಹೊರೆಯ ಬಗ್ಗೆ ಪರಿಶೀಲನೆ ನಡೆಸಿ ಅವರನ್ನು ಖಾಯಂ ಮಾಡುವ ಬಗ್ಗೆ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಶಾಸಕ ಪಿ.ರಾಜೀವ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ಪೌರಕಾರ್ಮಿಕರನ್ನು ಗುತ್ತಿಗೆದಾರರು ನೇಮಕ ಮಾಡಿಕೊಂಡಿದ್ದು, ಅವರಿಗೆ ಸರಿಯಾಗಿ ವೇತನ ಕೊಡುತ್ತಿರಲಿಲ್ಲ. ಈಗ ಪೌರಕಾರ್ಮಿಕರ ಖಾತೆಗಳಿಗೆ ವೇತನ ಜಮೆಯಾಗುತ್ತಿದೆ. ಪೌರಕಾರ್ಮಿಕರ ಆರೋಗ್ಯಕ್ಕಾಗಿ ಪ್ರತಿ ತಿಂಗಳು 2 ಸಾವಿರ ರೂ. ಒದಗಿಸಲು ಬಜೆಟ್‍ನಲ್ಲಿ ಘೋಷಿಸಲಾಗಿದೆ. ವೈದ್ಯಕೀಯ ಸೌಲಭ್ಯ ಒದಗಿಸುವುದು ಸೇರಿದಂತೆ ಅವರಿಗೆ ಅಗತ್ಯ ಅನುಕೂಲಗಳನ್ನು ಮಾಡಿಕೊಡುವ ಕಡೆ ಸರ್ಕಾರ ಗಮನಹರಿಸಿದೆ ಎಂದರು. ಕಾರ್ಮಿಕರ ಸ್ಥಿತಿ ಗೊತ್ತಿದೆ. ಸ್ವಚ್ಚತೆ ಮಾಡುವಾಗ ಪ್ರಾಣ ಕಳೆದುಕೊಂಡ ಘಟನೆಗಳು ನಡೆದಿವೆ. ಮತ್ತೆ ಮರುಕಳಿಸಿವೆ. ಎಲ್ಲ ಇಲಾಖೆಗಳಿಂದ ಮಾಹಿತಿ ಪಡೆದು ಖಾಯಂ ಮಾಡುವ ನಿರ್ಧಾರ ಮಾಡಲಾಗುವುದು ಎಂದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ ಸೇವೆ ಖಾಯಂ ಮಾಡುವುದು ಸೇರಿದಂತೆ 27…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಾಯಂಡಹಳ್ಳಿ ಜಂಕ್ಷನ್‍ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್‍ವರೆಗಿನ ರಸ್ತೆಗೆ ನಾಮಕರಣ ಮಾಡಲು ಮುಹೂರ್ತ ನಿಗದಿಯಾಗಿದೆ. ಇದೇ ಮಾ.30ರಂದು ಈ ರಸ್ತೆಗೆ ಪುನೀತ್‍ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗುವುದು.ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ರಾಜ್ ಕುಟುಂಬಸ್ಥರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನೂ ಅದೇ ದಿನ ಈ ರಸ್ತೆಯ ಎಲ್ಲಾ ನಾಮಫಲಕಗಳನ್ನು ಕೂಡ ಬದಲಾಯಿಸಲಾಗುವುದು ಎನ್ನಲಾಗಿದೆ. ಕಮರ್ಷಿಯಲ್ ಅಂಗಡಿಗಳ ಫಲಕ ಗಳಲ್ಲಿಯೂ ಪುನೀತ್ ರಾಜ್‍ಕುಮಾರ್ ರಸ್ತೆ ಎಂದು ಬದಲಾಯಿಸಲಾಗುವುದು ಎಂದು ಹೇಳಲಾಗಿದೆ. ಒಟ್ಟಿನಲ್ಲಿ 12 ಕಿಮೀ ಉದ್ದದ ರಸ್ತೆಗೆ ಪುನೀತ್ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ.ಈ ರಸ್ತೆಗೆ ಅಪ್ಪು ಹೆಸರಿಡುವಂತೆ ಬಿಬಿಎಂಪಿ ಮಾಜಿ ಆಡಳಿತ ಪಕ್ಷ ನಾಯಕ ಎನ್.ಆರ್. ರಮೇಶ್ ಪ್ರಸ್ತಾಪ ಮಾಡಿದ್ದರು. ಇದೀಗ ಬಿಬಿಎಂಪಿ ಆಡಳಿತಾಧಿಕಾರಿ ವತಿಯಿಂದ ಇದಕ್ಕೆ ಅನುಮತಿ ಸಿಕ್ಕಿದೆ. ಬನಶಂಕರಿ 2ನೇ ಹಂತ , ಬನಶಂಕರಿ 3ನೇ ಹಂತದ…
ರಸ್ತೆ ಗುಂಡಿಯಲ್ಲಿ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ಇದಕ್ಕೆ ಕಾರಣವೆನ್ನಲಾದ ಜಲಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಬೆಸ್ಕಾಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧವೂ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಕಳೆದ ರಾತ್ರಿ ಎಂಎಸ್ ಪಾಳ್ಯದ ಮುನೇಶ್ವರ ಬಡಾವಣೆಯಲ್ಲಿ ಸಂಭವಿಸಿದ ದುರಂತದಲ್ಲಿ ಯುವಕ ಬಲಿಯಾಗಿದ್ದಾನೆ. ಇದಾಗ ಬಾರದಿತ್ತು. ಆದರೆ, ನಡೆದುಹೋಗಿದೆ. ಒಟ್ಟಿನಲ್ಲಿ ಜಲಮಂಡಳಿ ತಪ್ಪಿನಿಂದ ಇಂತಹ ಅನಾಹುತ ಆಗಿದೆ ಎಂದರು.ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿಗೆ ಮಾಹಿತಿ ನೀಡದೆ ರಸ್ತೆ ಅಗೆದಿದ್ದರಿಂದ ಇಂತಹ ಅನಾಹುತ ಆಗಿದೆ. ಇನ್ನೂ, ಈಗಾಗಲೇ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇಂತಹ ಸಂಸ್ಥೆಗಳ ವಿರುದ್ಧ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.…