Author: admin

ಖ್ಯಾತ ನಟಿಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ಸ್ನೇಹಿತ ಶರತ್ ಜಿ. ನಾಯರ್‌ ರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದಡಿ ಪೊಲೀಸರು ಶರತ್ ಜಿ. ನಾಯರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಟ ದಿಲೀಪ್ ಜಾಮೀನು ಪಡೆದ ನಂತರ ಅವರ ಮನೆಗೆ ಶರತ್ ಜಿ. ನಾಯರ್ ಭೇಟಿ ನೀಡಿದ್ದಾರೆ ಎಂಬ ಚಲನಚಿತ್ರ ನಿರ್ದೇಶಕ ಬಾಲಚಂದ್ರಕುಮಾರ್ ಹೇಳಿಕೆ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅವರು, ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಸಂಚು ರೂಪಿಸಿದ್ದ ಆಡಿಯೋ ಟಿವಿಗಳಲ್ಲಿ ಪ್ರಸಾರವಾದ ಬಳಿಕ ದಿಲೀಪ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಉದ್ದೇಶಪೂರ್ವಕವಾಗಿ ತನ್ನನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಸಲು ತನಿಖಾಧಿಕಾರಿ ಯತ್ನಿಸಿದ್ದಾರೆ ಎಂದು ದಿಲೀಪ್ ಆರೋಪಿಸಿದ್ದರು. ತಮಿಳು, ತೆಲುಗು, ಮಲಯಾಳಂ, ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ಖ್ಯಾತಿ ನಟಿಯನ್ನು 2017ರ ಫೆಬ್ರವರಿ 17ರಂದು ರಾತ್ರಿ ವಾಹನದಲ್ಲಿ ಅಪಹರಿಸಿ…

Read More

ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಶ್ರೀಲಂಕಾಕ್ಕೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದ್ದು ಇದರಿಂದಾಗಿ ಸ್ವಲ್ಪ ಮಟ್ಟಿಗೆ ಸರ್ಕಾರ ಮತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಜನರು ಪರಿತಪಿಸುವಂತಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಮಾತ್ರ ಪೆಟ್ರೋಲ್ ಇದೇ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತ ಪೆಟ್ರೋಲ್ ಸರಬರಾಜು ಮಾಡುತ್ತಿದೆ. ಎರಡು ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಇದು ಭಾರತೀಯ ಕ್ರೆಡಿಟ್ ಲೈನ್‌ಯಡಿಯಲ್ಲಿ ಮೇ ೧೮ ಮತ್ತು 19 ರಂದು ಬರಲಿದೆ ಎಂದು ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು 75 ದಶಲಕ್ಷ ಅಮೆರಿಕನ್ ಡಾಲರ್ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯ ಡಾಲರ್‌ಗಳನ್ನು ಪಡೆಯಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ತಿಳಿಸಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1 ಕೆ.ಜಿ. ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಹಾಗೂ ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ಮಗಳು ದೀಪ್ತಿ ಹಾಗೂ ಮದನ್‌ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ. ಬಂಧಿತರಿಂದ 36  ಲಕ್ಷ ಮೌಲ್ಯದ 725 ಗ್ರಾಂ. ತೂಕದ ವಿವಿಧ ಚಿನ್ನದ ಆಭರಣಗಳು  ಹಾಗೂ ಕಳವು ಮಾಡಿದ ಆಭರಣಗಳ ಮಾರಾಟದಿಂದ ಬಂದ ಹಣದಿಂದ ಖರೀದಿಸಿದ್ದ ಸುಮಾರು 6 ಲಕ್ಷ ರೂ. ಬೆಲೆಬಾಳುವ 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಕ್ಕೂರು ಲೇಔಟ್‌ ನಲ್ಲಿ ರತ್ನಮ್ಮ ಹಾಗೂ ಪುತ್ರಿ ದೀಪ್ತಿ ವಾಸವಾಗಿದ್ದರು. ರತ್ನಮ್ಮ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ಈಗಾಗಲೇ ವಿವಾಹವಾಗಿದ್ದ ದೀಪ್ತಿಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಳು. ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್‌ ಗೆ…

Read More

ರಾಜ್ಯದಲ್ಲಿ ಉದ್ಯಮಸ್ನೇಹಿ, ಕೈಗಾರಿಕಾ ಸ್ನೇಹಿ ವಾತಾವರಣ ಇದ್ದು, ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತ ಆಹ್ವಾನ ನೀಡಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯ ನೆಲಮಂಗಲದ ಮಾದಾವರ ಬಳಿ ಇರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿಂದು ಕಟ್ಟಡ ನಿರ್ಮಾಣ ಸಲಕರಣೆಗಳ ಎಕ್ಸೋಕಾನ್ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಸರ್ಕಾರ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸಲಿದೆ ಎಂದರು. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಉದ್ಯಮಸ್ನೇಹಿ ವಾತಾವರಣವಿದೆ. ಹಾಗಾಗಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಅವರು ಆಹ್ವಾನ ನೀಡಿದರು. ಉದ್ಯಮಿಗಳಿಗಾಗಿ ಸರ್ಕಾರದ ರಿಯಾಯ್ತಿ ಸೌಲಭ್ಯಗಳು, ಸವಲತ್ತುಗಳು, ಕೌಶಲ್ಯಯುತ ಉದ್ಯೋಗಿಗಳ ಲಭ್ಯತೆ ಎಲ್ಲವನ್ನು ಎಳೆ ಎಳೆಯಾಗಿ ವಿವರಿಸಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ತಮ ವಾತಾವರಣ ಇದೆ ಎಂದರು. ಕರ್ನಾಟಕ ಮೊದಲಿನಿಂದಲೂ ಬಂಡವಾಳ ಹೂಡಿಕೆದಾರರಿಗೆ ಉತ್ತಮ ನೆಲೆಯಾಗಿದೆ. ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂಡವಾಳಗಾರರು ಹೂಡಿಕೆಗಾಗಿ ಬರುತ್ತಿದ್ದಾರೆ ಎಂದರು. ರಾಜ್ಯಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸಲು ರಾಜ್ಯ ಸರ್ಕಾರ ಬರುವ ನವೆಂಬರ್‌ನಲ್ಲಿ ಬಂಡವಾಳ ಹೂಡಿಕೆ…

Read More

ಸರಗೂರು: ರಾಜ್ಯದಲ್ಲಿ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಒಗ್ಗಟ್ಟಾಗಿ ಒಂದು ವೇದಿಕೆಯನ್ನು ಸೃಷ್ಟಿಸಿಕೊಂಡು ಪ.ಜಾತಿ ಮತ್ತು ಪ.ಪಂಗಡಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸರಗೂರು ಸಂವಿಧಾನ ರಕ್ಷಣಾ ಸಮಿತಿ ಪತ್ರ ಚಳುವಳಿಯ ಮೂಲಕ ಎಚ್ಚರಿಕೆ ನೀಡಿದೆ. ಪಟ್ಟಣದ ಅಂಚೆ ಕಛೇರಿ ಆವರಣದಲ್ಲಿ ಜಮಾಯಿಸಿದ ಸಂವಿಧಾನ ರಕ್ಷಣಾ ಸಮಿತಿಯ ಸದಸ್ಯರು,  ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರುಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಪ.ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಪಕ್ಷಭೇದವನ್ನು ಮರೆತು ಒಗ್ಗೂಡಿ ಕೆಲಸ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂವಿಧಾನ ರಕ್ಷಣಾ ಸಮಿತಿಯ ಖಜಾಂಚಿ ಗ್ರಾಮೀಣ ಮಹೇಶ್, ರಾಜ್ಯದಲ್ಲಿ ಸಂವಿಧಾನದ ಮೂಲ ಆಶಯ ಬುಡಮೇಲಾಗುತ್ತಿದ್ದು, ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿ ದೂರದ ಮಾತಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಮೀಸಲಾತಿಯಿಂದ ಗೆದ್ದಂತಹ ರಾಜ್ಯದ ಶಾಸಕರು ಪಕ್ಷಕ್ಕಾಗಿ ದುಡಿಯುವುದನ್ನು ಬಿಟ್ಟು ಪಕ್ಷಭೇದ ಮರೆತು ಒಗ್ಗಟ್ಟಾಗಿ ಶೋಷಿತರ ಅಭಿವೃದ್ಧಿಯ ಕೆಲಸಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಮೇಲ್ವರ್ಗದವರಿಗೆ ಜಾತಿಗೊಂದು…

Read More

ಹಿರಿಯೂರು : ಭಾರತ ಸ್ವತಂತ್ರ್ಯ ಪಡೆದು 75 ವರ್ಷಗಳು ಕಳೆದಿದ್ದು, ಈ ಅಮೃತ ಮಹೋತ್ಸವದ ಸಂಭ್ರಮದ ಅಂಗವಾಗಿ ಶಿಕ್ಷಣ, ಆರೋಗ್ಯ, ಕೃಷಿ ಈ ಮೂರು ಕ್ಷೇತ್ರಗಳಿಗೆ ಆದ್ಯತೆ ನೀಡಬೇಕೆಂಬ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲ್ಲೂಕಿನ ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದ ಅವರು,   ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮೊದಲು ಹೋಬಳಿ ಮಟ್ಟದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲು ಸರ್ಕಾರ ಮುಂದಾಗಿದ್ದು,  ಜೀವನದಲ್ಲಿ ಆರೋಗ್ಯ ಮತ್ತು ಶಿಕ್ಷಣವನ್ನು ಮುಂದೂಡಲು ಸಾಧ್ಯವಿಲ್ಲ, ಈ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ಈ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ  ಎಂದು ತಿಳಿಸಿದರು. ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಐಮಂಗಲ, ಮರಡಿಹಳ್ಳಿ, ಬುರುಜಿನರೊಪ್ಪ, ಸೂರಗೊಂಡನಹಳ್ಳಿ, ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.…

Read More

ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಕೆಇಬಿ ಕಚೇರಿ ಮುಂಭಾಗ ದೊಡ್ಡ ಆಲದಮರ   ಬಿದ್ದು, ಹುಳಿಯಾರು – ತಿಪಟೂರು ರಸ್ತೆ ಮಾರ್ಗ  ಸಂಪೂರ್ಣವಾಗಿ ಬಂದ್ ಆಗಿದ್ದು, ಪರಿಣಾಮವಾಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ವಿದ್ಯುತ್ ತಂತಿಯ ಮೇಲೆಯೇ ಮರ ಬಿದ್ದ ಪರಿಣಾಮ ರಸ್ತೆ ಬಂದ್ ಆಗಿರುವುದಲ್ಲದೇ ಈ ಪ್ರದೇಶದಲ್ಲಿ ವಿದ್ಯುತ್  ಕಡಿತಗೊಂಡಿದೆ. ರಸ್ತೆ ಬಂದ್ ಆದ ಹಿನ್ನೆಲೆಯಲ್ಲಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಈ ಮಾರ್ಗದ ಬದಿಯಲ್ಲಿ ಹಳೆಯ ಕಾಲದ ಸಾಕಷ್ಟು ಮರಗಳಿದ್ದು, ಗಾಳಿ, ಮಳೆಗಳ ಸಂದರ್ಭದಲ್ಲಿ ರಸ್ತೆಗೆ ಬೀಳುತ್ತಿವೆ. ಪದೇ ಪದೇ ಇಂತಹ ಘಟನೆಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಸಂಬಂಧ ಪಟ್ಟವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚಲಿಸುತ್ತಿರುವ ವಾಹನಗಳ ಮೇಲೆ ಮರಗಳು ಉರುಳಿ ಬಿದ್ದು, ಸಾವು ನೋವು ಸಂಭವಿಸುವ ಮೊದಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿರುವ ಮರಗಳ ತೆರವಿಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ವರದಿ: ಆನಂದ ತಿಪಟೂರು…

Read More

ಬೆಂಗಳೂರು:  ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದರು. ಇದೀಗ ನಾಳೆ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧವಾಗಿದೆ. ಇನ್ನೊಂದೆಡೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾತರದಿಂದ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಳೆ ಬೆಳಗ್ಗೆ 11ರಿಂದ  ಮಧ್ಯಾಹ್ನದ ವೇಳೆಗೆ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ನಾಳೆ ಪರೀಕ್ಷೆ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು karresults.nic.in ಮತ್ತು sslc.karnataka.gov.in ವೆಬ್ ಸೈಟ್ ಗಳಿಗೆ ಭೇಟಿ ನೀಡಬಹುದಾಗಿದೆ. ಹಾಗೆಯೂ ಯಾರಿಗಾದರೂ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಲು ಸಾಧ್ಯವಾಗದಿದ್ದರೆ. ಮೇ 20ರಂದು ನಿಮ್ಮ ಶಾಲೆಗಳಲ್ಲಿಯೇ ಫಲಿತಾಂಶಗಳು ಪ್ರಕಟಗೊಳ್ಳಲಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕಕ್ಕೀಡಾಗಬೇಕಾದ ಅಗತ್ಯವಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

Read More

ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ. ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗಿತ್ತು. ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವೆ. 2016ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದರು. ಅಲ್ಲದೆ, ಕಾಶ್ಮೀರ ಫೈಲ್ಸ್ ಚಲನಚಿತ್ರವು ಹಿಂಸಾಚಾರವನ್ನು ಪ್ರಚೋದಿಸಿದೆ ಎಂದ ಅವರು, ಕೇಂದ್ರ ಸರ್ಕಾರ ನಮ್ಮ ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ. ಕೇಂದ್ರ ಸರ್ಕಾರವು ನೈಜ ವಿಷಯಗಳಿಂದ ವಿಚಲಿತರಾಗಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈಗ ಜ್ಞಾನವಾಪಿ ಮಸೀದಿಯ ಹಿಂದೆ ಇದ್ದಾರೆ ಎಂದು ಹೇಳಿದರು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೊರಟಗೆರೆ: ಕೊರಟಗೆರೆಯಿಂದ ಮಲ್ಲೇಶ್ವರಕ್ಕೆ ಹೋಗುವ ರಸ್ತೆ ಮಧ್ಯದಲ್ಲಿ ಸೇತುವೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು. ರಸ್ತೆಗಳಿಗೆ ಮಣ್ಣನ್ನು ಹಾಕುತ್ತೇವೆ ಎಂದು ಟಿಪ್ಪರ್ ಗಟ್ಟಲೆ ಮಣ್ಣನ್ನು ಅಗೆದು ಹೊರ ಸಾಗಿಸುತ್ತಿರುವ ಘಟನೆ ನಡೆದಿದ್ದು,  ಇದು ಸ್ಥಳೀಯ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಅಥವಾ ಕಂಡರೂ ಕಾಣದಂತೆ ಗಾಢನಿದ್ರೆಯಲ್ಲಿ ಮಲಗಿದ್ದಾರೆಯೇ ಎನ್ನುವ ಪ್ರಶ್ನೆಗಳು ಕೇಳಿಬಂದಿವೆ. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಬಜನಹಳ್ಳಿ  ಹಾಗೂ ಕ್ಯಾಮೇನಹಳ್ಳಿ  ಹೋಗುವ ರಸ್ತೆ ಪಕ್ಕದಲ್ಲಿರುವ  ದೊಡ್ಡ ದೊಡ್ಡ ಬೆಟ್ಟಗಳೇನ್ನೆ ಕರಗಿಸುತ್ತಿರುವ ಗುತ್ತಿಗೆದಾರರು,  ದೊಡ್ಡ ದೊಡ್ಡ ಜೆಸಿಬಿ ಹಿಟಾಚಿಗಳನ್ನು ತಂದು ದೊಡ್ಡ ಬೆಟ್ಟಗಳನ್ನೇ  ಕರಗಿಸಿ  ಭೂತಾಯಿಯ ಒಡಲಿಗೆ ಕೊಡಲಿ ಹಾಕುತ್ತಿದ್ದಾರೆ. ಇಂತಹ ದೊಡ್ಡ ದೊಡ್ಡ ಗುತ್ತಿಗೆದಾರರ ಕಂಪನಿಗಳನ್ನು ಕೂಡಲೇ ರದ್ದು ಮಾಡಬೇಕು. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಣ್ಣು ಅಗೆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ  ಮಣ್ಣನ್ನು ಅಗೆಯುತ್ತಿದ್ದ ವ್ಯಕ್ತಿಯನ್ನು ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ನಮ್ಮ ಗುತ್ತಿಗೆದಾರರ ಬಳಿ ಕೇಳಿ ಎಂದು ಹೇಳುತ್ತಾರೆ. ಅವರಿಗೆ ಕರೆ ಮಾಡಿ ಕೇಳಿದಾಗ ಇದಕ್ಕೆಲ್ಲಾ ನಾವು ಪರ್ಮಿಷನ್…

Read More