Subscribe to Updates
Get the latest creative news from FooBar about art, design and business.
- ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
- ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
- ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
- ಬುಡುಬುಡಿ ವೇಷಧಾರಿ ಕಳ್ಳರ ಬಂಧನ
- ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
- ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
- ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
- ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
Author: admin
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ ಅಂಗಡಿ ಮುಂದೆ ಕುಳಿತಿದ್ದ ವೇಳೆ ದಾಳಿ ನಡೆಸಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಬುಧವಾರ ಮಧ್ಯಾಹ್ನ 1 ಗಂಟೆ ವೇಳೆ ಅಂಗಡಿ ಬಳಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡ ಕುರಿ ಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದೆ. ಘಟನೆ ಸಂಬಂಧ ಗುಬ್ಬಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಕೊಲೆಗಾರರ ಬಂಧನಕ್ಕೆ ಬಲೆ ಬೀಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ದಾಸರಹಳ್ಳಿ ವಲಯದ ಎರಡು ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಎಲ್ಲ ಶಾಲೆಯಲ್ಲೂ ಎಸ್‍ಒಪಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ತಿಳಿಸಿದರು. ಎರಡು ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಪ್ರಕರಣ ಕಂಡುಬಂದಿದ್ದು, ಈ ಹಿಂದೆ ಶಾಲೆಯಲ್ಲಿ ಕೈಗೊಳ್ಳುತ್ತಿದ್ದ ಎಲ್ಲ ಕ್ರಮಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರದ ಜೊತೆಗೆ ಎಲ್ಲ ಶಾಲಾಕಾಲೇಜುಗಳ ಪ್ರವೇಶ ದ್ವಾರದಲ್ಲೇ ಥರ್ಮಲ್ ಸ್ಕ್ಯಾನ್ ಸೇರಿದಂತೆ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಈವರೆಗೆ 41 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. 4,205 ಸ್ಥಳಗಳಲ್ಲಿ ಲಾರ್ವ ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಲಯವಾರು ನೀರಿನ ಸ್ಯಾಂಪಲ್ ಪಡೆಯಲು ತೀರ್ಮಾನ ಮಾಡಲಾಗಿದೆ. ಅನಾರೋಗ್ಯ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಔಷಧಿ ಸಂಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಬಿಬಿಎಂಪಿಯಲ್ಲಿ ಮತ್ತೆ ಕಸದ ಮಾಫಿಯಾ ತಲೆ ಎತ್ತುತ್ತಿದೆ. ಕೂಡಲೇ ಮಾಫಿಯಾಗೆ ಕಡಿವಾಣ ಹಾಕಬೇಕು ಇಲ್ಲದಿದ್ದಲ್ಲಿ ಪ್ರತಿ ವರ್ಷ ಪಾಲಿಕೆಗೆ 300 ಕೋಟಿ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಲಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ರಮೇಶ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗಾಗಿ ಹೊಸ ಗುತ್ತಿಗೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಟೆಂಡರ್‍ನಲ್ಲಿ ಇಂದೋರ್ ಮಾದರಿಯಲ್ಲಿ ಪ್ರತಿ ಕಾಂಪ್ಯಾಕ್ಟರ್‍ನ ಹಿಂಭಾಗದಲ್ಲಿ ಹಸಿ ತ್ಯಾಜ್ಯ ಮತ್ತು ಒಣ ತ್ಯಾಜ್ಯ ಸಂಗ್ರಹಿಸಲು ಎರಡು ಭಾಗಗಳನ್ನಾಗಿ ಮಾಡಿಕೊಳ್ಳಲೇ ಬೇಕು ಎಂಬ ಅಂಶವನ್ನು ಸೇರಿಸಲಾಗಿತ್ತು. ಆದರೆ, ಗಾರ್ಬೇಜ್ ಮಾಫಿಯಾದ ಗುತ್ತಿಗೆದಾರರು ಲಾಭಿ ನಡೆಸಿ ಅಂತಿಮ ಕ್ಷಣದಲ್ಲಿ ಹಸಿ ಮತ್ತು ಒಣ ತ್ಯಾಜ್ಯಕ್ಕೆ ಪ್ರತ್ಯೇಕ ಕಾಂಪ್ಯಾಕ್ಟರ್ ವ್ಯವಸ್ಥೆ ಕಲ್ಪಿಸಬೇಕು ಎಂಬ ಬಿಬಿಎಂಪಿ ಆರ್ಥಿಕ ವಿರೋಧಿ ಅಂಶವನ್ನು ಸೇರ್ಪಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಪಾಲಿಕೆಗೆ ಪ್ರತಿ ವರ್ಷ ಕನಿಷ್ಠ…
ಡಾಮಿನೊಸ್ ದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಉದ್ಯೋಗಿಗೆ ನಾಲ್ವರು ಯುವತಿಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನ ದ್ವಾರಕಪುರಿ ಏರಿಯಾದಲ್ಲಿ ನಡೆದಿದೆ. ಹಾಡಹಗಲಲ್ಲೇ ನಡುರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ವೇಳೆ ಮಹಿಳಾ ಉದ್ಯೋಗಿಗೆ ಕೈ ಮುಗಿದು, ಹೊಡೆಯಬೇಡಿ ಎಂದು ಬೇಡಿದರೂ ಬಿಡದ ಯುವತಿಯರು ಕರುಣೆ ತೋರದೆ ದೊಣ್ಣೆ, ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಆಕೆ ಕೆಳಗೆ ಬಿದ್ದರೂ ಬಿಡದೇ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಇಂದೋರ್ ಪೊಲೀಸರು ಆರೋಪಿ ಯುವತಿಯರ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನೂ ಹಲ್ಲೆಗೊಳಗಾದ ಮಹಿಳೆಯಿಂದ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಪ್ರಥಮ ಮಾಹಿತಿ ವರದಿ ದಾಖಲಾಗದೆ ಸಮನ್ಸ್ ನೀಡಲು, ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವೇ ಇಲ್ಲ. ರಾಹುಲ್ ಗಾಂಧಿ ಅವರನ್ನು ಯಾವ ಸೆಕ್ಷನ್ ಮೇಲೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪ್ರಶ್ನಿಸಿದ್ದಾರೆ. ಟ್ವಟರ್‍ನಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ವಾಗ್ಧಾಳಿ ನಡೆಸಿದ ಚಿದಂಬರಂ, ಬಿಜೆಪಿಯಲ್ಲಿರುವ ಖ್ಯಾತ ವಕ್ತಾರರು ದಯವಿಟ್ಟು ತಮ್ಮ ಪ್ರಶ್ನೆಗಳಿಗೆ ಉತ್ತರಿಸುವರೇ ಎಂದು ಪ್ರಶ್ನಿಸಿದ್ದಾರೆ. ಜಾರಿ ನಿರ್ದೇಶನಾಲಯದ ಯಾವ ನಿಗದಿತ ಅಪರಾಧಕ್ಕಾಗಿ ರಾಹುಲ್‍ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ. ಪಿಎಂಎಲ್‍ಎ ಕಾನೂನಿನ ಯಾವ ಸೆಕ್ಷನ್‍ಗಳನ್ನು ಉಲ್ಲೇಖಿಸಲಾಗಿದೆ. ವಿಚಾರಣೆ ನಡೆಸುತ್ತಿರುವ ಆರೋಪದ ಮೇಲೆ ಯಾವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಯವಿಟ್ಟು ಆ ಎಫ್‍ಐಆರ್ ಪ್ರತಿಯನ್ನು ನಮಗೆ ತೋರಿಸುತ್ತೀರಾ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ. ಎಫ್‍ಐಆರ್ ಇಲ್ಲದೆ ವಿಚಾರಣೆ ನಡೆಸುವ ಅಧಿಕಾರವನ್ನು ಜಾರಿ ನಿರ್ದೇಶನಾಲಯ ಹೊಂದಿಲ್ಲ ಎಂಬ ಮಾಹಿತಿ ನಿಮಗೆ ತಿಳಿದಿಲ್ಲವೇ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಕರ್ನಾಟಕದ ಹಿರಿಯ ರಾಜಕಾರಣಿಗಳ ಮೇಲೆ ದೆಹಲಿಯಲ್ಲಿ ಪೊಲೀಸರು ಬಲ ಪ್ರಯೋಗ ನಡೆಸಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವರು ಹಾಗೂ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡುರಾವ್ ಅವರೊಂದಿಗೆ ದೆಹಲಿ ಪೊಲೀಸರು ಅಗೌರವವಾಗಿ ನಡೆದುಕೊಂಡಿದ್ದು, ತಳ್ಳಾಟ ನೂಕಾಟ ನಡೆಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂ ಅವರನ್ನು ಎರಡನೇ ದಿನವೂ ವಿಚಾರಣೆ ನಡೆಸುತ್ತಿದೆ. ಇದನ್ನು ವಿರೋ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ದೆಹಲಿಯಲ್ಲೂ ಕಾನೂನು ಸುವಸ್ಥೆ ಕಾವೇರಿದ್ದು, ಪ್ರತಿಭಟನೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಇಂದು ಬೆಳಗ್ಗೆ ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಗೆ ಹೋಗುತ್ತಿದ್ದ ಡಿ.ಕೆ.ಸುರೇಶ್ ಮತ್ತು ಹಿರಿಯ ನಾಯಕರನ್ನು ಪೊಲೀಸರು ತಡೆದಿದ್ದಾರೆ. ಯಾವ ಕಾನೂನಿನಲ್ಲಿ ನಮ್ಮನ್ನು ತಡೆದಿದ್ದೀರಾ, ಯಾವ ಆದೇಶ ಇದೆ ಕೊಡಿ. ಹಿರಿಯ ಅಧಿಕಾರಿಗಳನ್ನು ಕರೆಯಿರಿ ನಾನು ಅವರೊಂದಿಗೆ ಮಾತನಾಡುತ್ತೇನೆ ಎಂದು ಸುರೇಶ್ ಹೇಳಿದ್ದಾರೆ. ಸಂಸದರು ಅವರು ತಮ್ಮ ಗುರುತಿನ ಕಾರ್ಡ್ ತೋರಿಸಿ ಬಳಿಕವೂ ಪೊಲೀಸರು…
ಸರ್ಕಾರದ ಬಹು ನಿರೀಕ್ಷಿತ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಜೂನ್ 18ರಂದು ಜಿಲ್ಲಾಯ ತುರುವೇಕೆರೆ ತಾಲೂಕು ಮಾಯಸಂದ್ರ ಗ್ರಾಮದಲ್ಲಿ ನಡೆಯಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾÁರೆ ಎಂದು ಜಿಲ್ಲಾಧಿಕಾರಿ ವೈ.ಎಸ್ . ಪಾಟೀಲ ತಿಳಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕಂದಾಯ ಸಚಿವರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಇಲಾಖೆಯ ಪ್ರಯೋಜನಗಳನ್ನು ತಿಳಿಸಲು 30ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಮಾಹಿತಿ ನೀಡಬೇಕಲ್ಲದೇ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಸೂಚಿಸಿದರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರನ್ನು ಸೇರಿಸಬೇಕು. ಸ್ಥಳೀಯ ಪಂಚಾಯತಿ ಅಧ್ಯಕ್ಷರು, ಸದಸ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದರೊಂದಿಗೆ ಶೌಚಾಲಯ,…
ಪ್ರಸಿದ್ದ ದೇವಸ್ಥಾನವೊಂದರಲ್ಲಿ ಬೃಹತ್ ರಥ ಉರುಳಿಬಿದ್ದು ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸಿ.ಮನೋಹರನ್ (57) ಮತ್ತು ಜಿ ಸರವಣನ್ (50) ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ವೈಕಾಶಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ 30 ಅಡಿ ಅಲಂಕೃತ ರಥ ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದಾಗ ರಥವು ಇದ್ದಕ್ಕಿದ್ದಂತೆ ಉರುಳಿಬಿದ್ದಿದೆ. ಪರಿಣಾಮ ರಥದ ಮರದ ಚಕ್ರದಡಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಕೂಡಲೇ ರಥ ಎಳೆಯುತ್ತಿದ್ದ ಭಕ್ತರು ಹಾಗೂ ಮೆರವಣಿಗೆ ವೀಕ್ಷಿಸುತ್ತಿದ್ದವರು ರಥದಡಿ ಸಿಲುಕಿದ್ದ ಇನ್ನುಳಿದವರ ರಕ್ಷಣೆಗೆ ಧಾವಿಸಿ ಮೂವರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಅವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಸಕಲೇಶಪುರ: ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಬುಧವಾರ ನಡೆದಿದೆ. ತಾಲೂಕಿನ ಮಠಸಾಗರ ಗ್ರಾಮದ ನಿವಾಸಿ ಎ. ಸ್ವಾಮಿ (53) ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಇವರು ಕಳೆದ 25 ವರ್ಷಗಳಿಂದ ಕಾಫಿ ಮಂಡಳಿಯಲ್ಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ರಾತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸಾಗಿದ್ದರು. ಬುಧವಾರ ಮುಂಜಾನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ದಾರಿ ಹೋಕರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ವಾಮಿ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ಪುತ್ರ, ನಮ್ಮ ತಂದೆ ತುಂಬಾ ಸೌಮ್ಯ ಸ್ವಭಾವದವಾರಗಿದ್ದು ಯಾರೋ ಕೊಲೆ ಮಾಡಿ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಚೀನಾದ ಪುರಾತತ್ವ ಶಾಸ್ತ್ರಜ್ಞರು ಸುಮಾರು 13,000 ಕಲಾಕೃತಿಗಳ ಪುರಾತನ ನಿಧಿ ಪತ್ತೆ ಹಚ್ಚಿದ್ದು, ನೈಋತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಪತ್ತೆಯಾದ ಕನಿಷ್ಠ ಹತ್ತು ಕಂಚಿನ ಸಾಮಾನು ಒಳಗೊಂಡಂತೆ ಸೊಗಸಾದ ಕಂಚು, ಚಿನ್ನ ಮತ್ತು ಪಚ್ಚೆಹರಳು ಸಾಮಾನುಗಳು ಪುರಾತತ್ವ ಶಾಸ್ತ್ರಜ್ಞರನ್ನು ಬೆರಗುಗೊಳಿಸಿದೆ. ಇದು 3,000 ದಿಂದ 4,500 ವರ್ಷಗಳಷ್ಟು ಹಿಂದಿನ ನಿಗೂಢ ಸಾಮ್ರಜ್ಯವೆಂದು ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೊದಲಿಗೆ ಇದನ್ನು 1920ರ ದಶಕದ ಅಂತ್ಯದಲ್ಲಿ ಪತ್ತೆಹಚ್ಚಲಾಗಿತ್ತು. ಅವಶೇಷಗಳನ್ನು 20ನೇ ಶತಮಾನದ ವಿಶ್ವದ ಶ್ರೇಷ್ಠ ಪುರಾತತ್ವ ಶಾಸ್ತ್ರದ ಸಂಶೋಧನೆಗಳಲ್ಲಿ ಒಂದು ಎಂದು ಹೆಸರಿಸಲಾಗಿದೆ. ಪುರಾತನ ಕಾಲದ ಸಾಂಸ್ಕೃತಿಕ ಅವಶೇಷಗಳನ್ನು ಪುರಾತತ್ವ ಶಾಸ್ತ್ರಜ್ಞರು ಈ ಸ್ಥಳದಲ್ಲಿ ಪತ್ತೆ ಹಚ್ಚಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz