Subscribe to Updates
Get the latest creative news from FooBar about art, design and business.
- ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
- ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
- ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
- ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
- ಎಲ್ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
- ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
- ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
Author: admin
ಯಾದಗಿರಿ: ಶಾಲೆಯ ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸುವಲ್ಲಿಯೂ ಯಾದಗಿರಿ ಜಿಲ್ಲಾಡಳಿತ ವಿಫಲವಾಗಿದ್ದು, ನೀರಿಗಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ಕನಗೊಂಡನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಗೆ ಇದು ಕೈಗನ್ನಡಿಯಂತಿದೆ. ಶಾಲೆಯಲ್ಲಿ ಬಿಸಿಯೂಟ ಮಾಡಿದ ಬಳಿಕ ಮಕ್ಕಳು, ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇಲ್ಲಿದೆ. ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸಲು ಸಹ ಶಿಕ್ಷಣ ಇಲಾಖೆ ವಿಫಲವಾಗಿದೆ. ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಬೋರವೆಲ್ ಇದೆ. ಮಕ್ಕಳು ನೀರು ಬೇಕಾದರೆ ಶಾಲೆಯಿಂದ 1 ಕಿ.ಮೀ ದೂರ ಸಾಗಬೇಕು. ಬಿಸಿಯೂಟ ತಯಾರಿಸಲು ಸಹ ನೀರಿನ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಧಾರವಾಡ: ಮದುವೆ ಮನೆಯಲ್ಲಿ ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಧಾರವಾಡ(Dharwad)ದಲ್ಲಿ ನಡೆದಿದೆ. ಪೆಂಡಾರ್ ಗಲ್ಲಿಯ ಹಾಲ್ ನಲ್ಲಿ ಮದುವೆ ಸಮಾರಂಭಕ್ಕೆ ಹೋಗಿದ್ದ ಜಾಂಬವಂತನಗರ ನಿವಾಸಿ ಸಾಧಿಕ್ ಮೃತಪಟ್ಟವರು. ಮದುವೆ ಮನೆಯಲ್ಲಿ ಇಬ್ಬರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಜಗಳ ಬಿಡಿಲು ಸಾಧಿಕ್ ಹೋಗಿದ್ದಾನೆ. ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಸಿಲುಕಿದ್ದರಂತೆ ಸಾಧಿಕ್ ತಲೆಗೆ ಗೇಟ್ ಬಡಿದಿದೆ. ಪರಿಣಾಮ ಆತನ ತಲೆಗೆ ಗಂಭೀರ ಪೆಟ್ಟಿ ಬಿದ್ದು ಗಾಯಗೊಂಡಿದ್ದಾನೆ.ಗಂಭೀರವಾಗಿ ಗಾಯಗೊಂಡಿದ್ದ ಸಾಧಿಕ್‌ನನ್ನು ಸ್ಥಳೀಯರು ತಕ್ಷಣವೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ(Kims Hospital Hubli)ಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ರಿಜ್ವಾನ್ ಎಂಬಾತ ಸಾಧಿಕ್‌ನನ್ನು ತಳ್ಳಿದ್ದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು(Sahara Police Station) ಭೇಟಿ ನೀಡಿದ್ದು, ಆರೋಪಿ ರಿಜ್ವಾನ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.…
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಅಬ್ಬಿನಹೊಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯದಲ್ಲಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಅಬ್ಬಿನಹೊಳೆ ಗ್ರಾಮ ಪಂಚಾಯಿತಿ ಕಾರ್ಯಾಲಯವು ವಿಫಲವಾಗಿದೆ ಎಂದು ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ತಿಪ್ಪೇಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಹೊಸಹಳ್ಳಿ ಗ್ರಾಮಕ್ಕೆ ಇಂದಿಗೂ ಸಹ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿಗಳು, ವಿಫಲರಾಗುತ್ತಿದ್ದಾರೆ, ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ಅವರೇ ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಹೊಸಕೆರೆ ಗ್ರಾಮದಲ್ಲಿನ ಎ.ಕೆ. ಕಾಲೋನಿಯಲ್ಲಿ ಇಂದಿಗೂ ಇಲ್ಲಿನ ಸ್ಥಳೀಯರಿಗೆ ಕುಡಿಯುವ ನೀರು, ಬೀದಿ ದೀಪಗಳು ಸಹ ಸರಿಯಾದ ರೀತಿಯಲ್ಲಿ ಇಲ್ಲ. ಇಲ್ಲಿನ ಸರ್ಕಾರಿ ಶಾಲೆಯ ಮುಂದೆ ಕೊಚ್ಚೆ ತುಂಬಿದ್ದರೂ ಯಾರು ಸಹ ಗಮನಕ್ಕೆ ತೆಗೆದುಕೊಳ್ಳದೇ ಬೇಜಾವ್ದಾರಿತನ ತೋರುತ್ತಿದ್ದಾರೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ತಿಪ್ಪೇಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ…
ಹೊಸದುರ್ಗ: ಭಾರತೀಯ ದಲಿತ ಸಂಘರ್ಷ ಸಮಿತಿ(ಸಮಾಜಸೇವಾ ರತ್ನ ಡಾ.ಪ್ರಕಾಶ್ ಬಿರಾವರ್ ಸ್ಥಾಪಿತ) ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಪ್ರಕಾಶ್ ಬಿರಾವಾರ ಅವರ ಆದೇಶದ ಮೇರೆಗೆ ರಾಜ್ಯ ಕಾರ್ಯಾಧ್ಯಕ್ಷರಾದ ಕೆ ತಿಮ್ಮರಾಜು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಚೋಳಗುಡ್ಡ ಚಂದ್ರಣ್ಣ, ಮತ್ತೊಬ್ಬ ರಾಜ್ಯ ಉಪಾಧ್ಯಕ್ಷರಾದ ಚಂದ್ರಣ್ಣ ಘಾಟ್ ಹಾಗೂ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಹರೀಶ್ ನೇತೃತ್ವದಲ್ಲಿ ಹೊಸದುರ್ಗ ದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪೂಜಾರ್ ಕರಿಯಪ್ಪ ಅವರನ್ನು ಚಿತ್ರದುರ್ಗ ಜಿಲ್ಲಾ ಹಿರಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಹೊಸದುರ್ಗ ತಾಲ್ಲೂಕು ಅಧ್ಯಕ್ಷರನ್ನಾಗಿ ಪರಮೇಶ್ ಬಿ. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕಿನ ಕಾರ್ಯಾಧ್ಯಕ್ಷರನ್ನಾಗಿ ರ೦ಗಸ್ವಾಮಿ ಎಸ್. ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕು ಯುವ ಘಟಕದ ಅಧ್ಯಕ್ಷರನ್ನಾಗಿ ನಿರಂಜನ್ ಮೂರ್ತಿ ಅವರನ್ನು ಆಯ್ಕೆ ಮಾಡಲಾಯಿತು. ತಾಲ್ಲೂಕು ಉಪಾಧ್ಯಕ್ಷರನ್ನಾಗಿ ಕರಡಿ ಬಸವರಾಜು ಅವರನ್ನು ಆಯ್ಕೆ ಮಾಡಲಾಯಿತು . ನಂತರ ಕರ್ನಾಟಕದ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ.ಯನ್ನು ಹೊಸದುರ್ಗ ತಾಲ್ಲೂಕು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಸಭೆಯಲ್ಲಿ ಕಾಳಪ್ಪ ಹನಮಂತಪ್ಪ .ವರದರಾಜು ದೇವರಾಜ್…
ಮಧುಗಿರಿ: ತೀವ್ರ ಅನಾರೋಗ್ಯದಿಂದ ಬೇಸತ್ತ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರದಲ್ಲಿ ನಡೆದಿದೆ. ದೊಡ್ಡೇರಿ ಗೊಲ್ಲರಹಟ್ಟಿಯ ಮಂಜುಳ ಎಂಬವರು ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಇವರು ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನೋವಿನಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಇನ್ ಸ್ಪೆಕ್ಟರ್ ಹನುಮಂತರಾಯಪ್ಪ ಹಾಗೂ ಸಿಬ್ಬಂದಿ , ತಹಸೀಲ್ದಾರ್ ಭೇಟಿ ನೀಡಿದ್ದು, ಘಟನೆಯ ಮಾಹಿತಿ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ವೇಳೇ ಗ್ರಾ.ಪಂ. ಸದಸ್ಯ ಮಂಜುನಾಥ ಕುಮಾರ್, ಮುದ್ದರಾಜು, ವಕೀಲರಾದ ಶಿವಣ್ಣ, ರಂಗಸ್ವಾಮಿ, ಗಂಗಾಧರ ಮತ್ತಿತರ ಗ್ರಾಮಸ್ಥರಿದ್ದರು. ವರದಿ: ಮಹಾಲಿಂಗ ಡಿ.ಎಲ್. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಈ ವರ್ಷ ರಣಜಿ ಟ್ರೋಫಿಯಲ್ಲಿ ತಮ್ಮ ಮೊದಲ ಪ್ರಥಮ ದರ್ಜೆಯ ಋತುವಿಗೆ ಮರಳಿದ ಎಸ್. ಶ್ರೀಶಾಂತ್ (S.Sreesanth) ಅವರು ಎಲ್ಲಾ ರೀತಿಯ ಕ್ರಿಕೆಟ್ ಮಾದರಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ನಲ್ಲಿ ನಿವೃತ್ತಿ ಘೋಷಿಸಿದ ಅವರು ಟೀಂ ಇಂಡಿಯಾವನ್ನು ಪ್ರತಿನಿಧಿಸುವುದು ಗೌರವದ ಸಂಗತಿ ಎಂದು ಹೇಳಿದ್ದಾರೆ. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಈ ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚುನಾವಣಾ ಫಲಿತಾಂಶ ಈ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆ (President election)ಮೇಲೂ ನೇರ ಪರಿಣಾಮ ಬೀರಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ಮಾರ್ಚ್ 10 ಅಂದರೆ ಇಂದು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ (five state election result). ಇಂದಿನ ಈ ಫಲಿತಾಂಶ 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ಪಕ್ಷ ಅಥವಾ ಒಕ್ಕೂಟವು ನಿರ್ಣಾಯಕ ಪಾತ್ರ ವಹಿಸಲಿದೆ ಎನ್ನುವುದು ಕೂಡಾ ನಿರ್ಣಯವಾಗಲಿದೆ. ಹೆಚ್ಚಲಿದೆಯೇ ಬಿಜೆಪಿ ಸಂಕಷ್ಟ : ಎಕ್ಸಿಟ್ ಪೋಲ್ ಫಲಿತಾಂಶ (Exit poll 2022 result) ಭವಿಷ್ಯ ನುಡಿದಂತೆ ನಡೆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಕಷ್ಟ ಎದುರಾಗಲಿದೆ. ಯುಪಿಯಲ್ಲಿ ನಡೆದ ಹಲವು ಎಕ್ಸಿಟ್ ಪೋಲ್‌ಗಳನ್ನು ವಿಶ್ಲೇಷಿಸಿದರೆ, ಬಿಜೆಪಿ…
ಬಹುನಿರೀಕ್ಷಿತ ‘ಪಂಚ’ ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಮತದಾರ ಪ್ರಭು ಯಾರಿಗೆ ಆಶೀರ್ವಾದ ಮಾಡಿದ್ದಾನೆಂಬುದು ಇಂದು ತಿಳಿದುಬರಲಿದೆ. ಉತ್ತರಪ್ರದೇಶ, ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಮಣಿಪುರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ತಾಜಾ ಮಾಹಿತಿಯನ್ನು ನಾವು ಇಲ್ಲಿ ನಿಮಗೆ ನೀಡಲಿದ್ದೇವೆ. ಆರಂಭಿಕ ಟ್ರೆಂಡ್ ನ ಪ್ರಕಾರ ಪಂಜಾಬ್‌ನ ಮುಕೇರಿಯನ್ ವಿಧಾನಸಭಾ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನದಂದು ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಇಂಫಾಲ್‌ನ ಶ್ರೀ ಗೋವಿಂದಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯನ್ನು ದೇಶದ ಮಿನಿ ಮಹಾಚುನಾವಣೆ ಎಂದು ಪರಿಗಣಿಸಲಾಗುತ್ತದೆ. ಉತ್ತರಪ್ರದೇಶ ಮತ್ತು ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಗೆಲುವು ಸಿಗಲಿದೆ, ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಕಮಾಲ್ ಮಾಡಿದರೆ, ಉತ್ತರಾಖಂಡ ಮತ್ತು ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ…
ನೆಲಮಂಗಲ: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಸುಮಾರು 20 ಕಾರ್ಮಿಕರಿಗೆ ತೀವ್ರವಾದ ಗಾಯಗಳಾದ ಘಟನೆ ಇಲ್ಲಿನ ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಗುರುವಾರ ಸಂಜೆ ನಡೆದಿದೆ. ತಾಲ್ಲೂಕಿನ ಮಾರತ್ಹಳ್ಳಿ ಬಳಿಯಿರುವ ಟೆಕ್ಸ್ ಪೋರ್ಟ್ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹೆಣ್ಣುಮಕ್ಕಳು ಸಂಜೆ ಕೆಲಸ ಮುಗಿಸಿ ತಮ್ಮ ಊರುಗಳಿಗೆ ಈ ಬಸ್ಸಿನಲ್ಲಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಬಸ್ಸಿನ ಚಾಲಕ ಮದ್ಯದ ಅಮಲಿನಲ್ಲಿದ್ದು, ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದಾನೆ ಎನ್ನಲಾಗಿದೆ. ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ಎದುರಿನಿಂದ ಬಂದ ಕಾರನ್ನು ತಪ್ಪಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ 3 ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಮಹಿಳೆಯರಿಗೆ ಗಾಯಳಾಗಿದ್ದು, ಕೆಲವು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ ಮಹಿಳೆಯರು ಎಷ್ಟೇ ಹೇಳಿದರೂ ಕೇಳದ ಚಾಲಕ, ನಿಮ್ಮೆಲ್ಲರ ಪ್ರಾಣ ನನ್ನ ಕೈಲಿದೆ ಎಂದು ಉಡಾಫೆ ಉತ್ತರವನ್ನು ನೀಡಿ, ಕುಡಿದ ಅಮಲಿನಲ್ಲಿ ಅತಿ ವೇಗದಿಂದ ಚಾಲನೆ ಮಾಡಿದ್ದರಿಂದ ಈ ಅವಘಡ…
ಹಿರಿಯೂರು: ತಾಲ್ಲೂಕಿನ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ಐ.ಕ್ಯೂ.ಎ.ಸಿ, ಎನ್.ಎಸ್.ಎಸ್., ಕ್ರೀಡೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್ ಹಾಗೂ ರೋವರ್ಸ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗಿ ಉಳಿಯದೇ, ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ, ಗೌರವ ಹಾಗೂ ಸ್ವಾತಂತ್ರ್ಯ ಸಿಗುವಂತಾಗಬೇಕು ಎಂದು ಹೇಳಿದರು. ನಮ್ಮ ಭಾರತ ದೇಶದಲ್ಲಿ ಮಹಿಳೆಯರಿಗೆ ತಮ್ಮದೇ ಆದ ಸ್ಥಾನಮಾನ, ಗೌರವಗಳಿದ್ದು, ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ಗೌರವಪೂರ್ಣವಾಗಿ ಕಾಣಲಾಗುತ್ತಿದೆ. ಆದರೂ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇನ್ನು ಅನೇಕ ಮೂಢನಂಬಿಕೆ ಆಚರಣೆಗಳು, ಕಟ್ಟುಪಾಡುಗಳಿದ್ದು, ಈ ಎಲ್ಲಾ ಆಚರಣೆಗಳು ಹಾಗೂ ಕಟ್ಟುಪಾಡುಗಳಿಂದ ಮಹಿಳೆಯರು ಹೊರಬರಬೇಕು ಎಂದು ಕರೆ ನೀಡಿದರು. ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಒಂದು ಕುಟುಂಬಕ್ಕೆ ಎರಡು ಕಣ್ಣುಗಳಿದ್ದಂತೆ, ಆದರೂ, ಕೆಲವು ಸಂದರ್ಭದಲ್ಲಿ ಪುರುಷರಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಹಿಳೆಯರ …