Subscribe to Updates
Get the latest creative news from FooBar about art, design and business.
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
- ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
- ಕುಣಿಗಲ್ | ಬೈಕ್ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
Author: admin
ತುರುವೇಕೆರೆ: ತುಮಕೂರು ಜಿಲ್ಲೆ ತುರುವೇಕರೆ ತಾಲೂಕಿನ ದಬ್ಬೇಘಟ್ಟ ಹೋಬಳಿ ಅರೆಮಲ್ಲೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮದ ವಾಸಿ ಚಿಕ್ಕಮ್ಮ ಲೇಟ್ ವಜ್ರಯ್ಯ ಎಂಬುವರ ಮನೆ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಹಾನಿಗೀಡಾಗಿದ್ದು ಸುಮಾರು ಎರಡರಿಂದ ಮೂರು ಲಕ್ಷ ಗೃಹಬಳಕೆ ವಸ್ತುಗಳು ಆಹಾರ ಪದಾರ್ಥಗಳು ಹಾನಿಯಾಗಿದೆ. ಚಿಕ್ಕಮ್ಮನವರು ಸುಮಾರು ರಾಜಕೀಯ ಮುಖಂಡರುಗಳು ಸಂಬಂಧಪಟ್ಟ ಇಲಾಖೆಗೆ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಯಾವುದೇ ಕೆಲಸ ಮಾಡುತ್ತಿಲ್ಲ ಅವರಿಗೆ ಬೇಕಾದ ರೀತಿಯಲ್ಲಿ ಬೇಕಾದ ಅಂತವರಿಗೆ ಕೆಲಸ ಮಾಡುತ್ತಿದ್ದಾರೆ. ಅಧ್ಯಕ್ಷರು ಕೂಡ ನಮಗೆ ಯಾವುದೇ ಅನುಕೂಲ ಮಾಡುತ್ತಿಲ್ಲ ಎಲ್ಲಾ ಅಧಿಕಾರಿಗಳಿಗೂ ತಿಳಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ, ರಾಜಕೀಯ ವ್ಯಕ್ತಿಗಳು ಮುಖಂಡರುಗಳು ಅವರಿಗೆ ಬೇಕಾಗಿರುವ ವೋಟು ಕೇಳುವುದಕ್ಕೆ ಮಾತ್ರ ನಮ್ಮ ಮನೆ ಬಳಿ ಬರುತ್ತಾರೆ ಇದ್ದಂತೆ ನಮ್ಮ ಸಮಸ್ಯೆಯನ್ನು ಕೇಳುವವರು ಯಾರು ಇಲ್ಲ ನಮ್ಮ ಕಷ್ಟವನ್ನು ನಾವು ಯಾರಿಗೆ ಹೇಳಿಕೊಳ್ಳಬೇಕು ಮಾನ್ಯ ಮುಖ್ಯಮಂತ್ರಿಗಳೇ ಬಡ ಜನಗಳ ಕಷ್ಟವನ್ನು ಸ್ವಲ್ಪ ನೋಡಿ ಇಂದು ಚಿಕ್ಕಮ್ಮ ನವರು…
ಸರಗೂರು: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ ಮಟಕೇರಿಯ ಆಸ್ಪತ್ರೆಯ ಆವರಣ ಅವ್ಯವಸ್ಥೆಯಿಂದ ಕೂಡಿದ್ದು, ಜನರ ಆರೋಗ್ಯ ಕಾಪಾಡುವುದು ಬಿಡಿ ಇಲ್ಲಿ ಆಸ್ಪತ್ರೆಯ ಆರೋಗ್ಯವನ್ನೇ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಇಲ್ಲಿನ ಜನರು ಆರೋಪಿಸುತ್ತಿದ್ದಾರೆ. ಬಿ ಮಟಕೇರಿ ಗ್ರಾಪಂನ ಶಿಕ್ಷಕರ ಭವನ, ವಿವಿಧ ರಸ್ತೆ ಕಾಮಗಾರಿ ಮೊದಲಾದ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿನ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮಾಡಿಸಿದ್ದಾರೆ ಎಂದು ಎಲ್ಲೆಡೆಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಆದರೆ, ಇಲ್ಲಿನ ಆಸ್ಪತ್ರೆ ಸ್ಥಿತಿ ನೋಡಿದರೆ, ಇಲ್ಲಿ ರೋಗಿಗಳು ಬಂದರೆ, ರೋಗ ಕಡಿಮೆಯಾಗುವುದಕ್ಕಿಂತ ಹೆಚ್ಚಾಗಬಹುದು ಎಂಬಂತಾಗಿದೆ ಎಂದು ಸ್ಥಳೀಯ ಮುಖಂಡ ಗೋವಿಂದರಾಜು ಈ ಬಗ್ಗೆ ಅಭಿಪ್ರಾಯಪಟ್ಟರು. ಆಸ್ಪತ್ರೆ ಇಷ್ಟೊಂದು ಹದೋಗತಿಯಲ್ಲಿದ್ದರೂ ಪಂಚಾಯತ್ ಅಧಿಕಾರಿಗಳಾಗಲಿ, ಶಾಸಕರಾಗಲಿ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ತಾಲೂಕಿನ ಕಂದಲಿಕೆ ಹೋಬಳಿಯ ಮಟಕೆರಿ ಗ್ರಾಪಂ ವ್ಯಾಪ್ತಿಯ ಆಸ್ಪತ್ರೆಯ ಸುತ್ತಲೂ ಗಿಡಗಂಟಿಗಳು ಬೆಳೆದಿದ್ದು, ಆಸ್ಪತ್ರೆ ಮುಂಭಾಗದಲ್ಲಿ ನೀರಿನ ಗುಂಡಿಗಳಿದ್ದು, ಕೊಳಚೆ ನೀರಿನಿಂದಾಗಿ ಜನರು ರೋಗಗ್ರಸ್ತರಾಗುವ ಭೀತಿಯಲ್ಲಿದ್ದಾರೆ. ಈ ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರದ…
ಸರಗೂರು: ಸರಗೂರು ಪಟ್ಟಣದಲ್ಲಿ ಇರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ಹೋಗುವ ಗರ್ಭಿಣಿಯರ ಹತ್ತಿರ 100 ರೂ. ಗಳನ್ನು ವಸೂಲಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. BPL ಪಡಿತರ ಚೀಟಿ ಇರುವ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ ರಕ್ತ ಪರೀಕ್ಷೆಯನ್ನು ಮಾಡಬೇಕು. LAB ಟೆಕ್ನಿಷಿಯನ್ ಬಳಿ ಈ ಸಂಬಂಧ ವಿಚಾರಿಸಿದಾಗ ನಮಗೆ ಮೇಲಿನ ಅಧಿಕಾರಿಗಳಿಂದ ಆದೇಶವಾಗಿದೆ. ಅದರಂತೆ 100 ರೂ.ಗಳನ್ನು ಪಡೆದು ರಸೀದಿಯನ್ನು ನೀಡುತ್ತಿದ್ದೇವೆ ಎಂದು ಚಂದ್ರ ಮೋಹನ್ ಎಂಬವರು ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ಆರೋಗ್ಯ ಸಹಾಯವಾಣಿಗೆ ಕರೆ ಮಾಡಿ ಇಲ್ಲಿ ನಡೆಯುತ್ತಿರುವ ಅವ್ಯವಸ್ಥೆಯ ಬಗ್ಗೆ ವಿಚಾರಿಸಿದಾಗ Lab ಟೆಕ್ನಿಷಿಯನ್ ಜೊತೆ ಮಾತನಾಡಿ, BPL ಪಡಿತರ ಚೀಟಿ ಇರುವ ಗರ್ಭಿಣಿ ಮಹಿಳೆಯರಿಗೆ ಸೇವೆಗಳು ಉಚಿತವಾಗಿರುತ್ತವೆ. ಆದ್ದರಿಂದ ನೀವು ಪಡೆದಿರುವ 100 ರೂ.ಗಳನ್ನು ಅವರಿಗೆ ಹಿಂದಿರುಗಿಸಿ ಎಂದು ಹೇಳಿ ಪಡೆದ ಹಣವನ್ನು ಹಿಂತಿರುಗಿಸುವಂತೆ ಮಾಡಿದ್ದಾರೆ ಎನ್ನಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಈ ರೀತಿಯ ಅವ್ಯವಸ್ಥೆಯ ಬಗ್ಗೆ THO ರವಿಕುಮಾರ್ ಸರ್…
ಗುಬ್ಬಿ: ಪಟ್ಟಣದ ಆದಿಶಕ್ತಿ ಶ್ರೀ ಗ್ರಾಮದೇವತೆ ಅಮ್ಮನವರ ಪುರಾತನ ದೇವಾಲಯವನ್ನು ಮೂಲ ಸ್ಥಳದಲ್ಲೇ ಜೀರ್ಣೋದ್ಧಾರ ನಡೆಸಿ ನೂತನ ದೇವಾಲಯವನ್ನು ಹದಿನೆಂಟು ಕೋಮಿನ ಭಕ್ತರ ಸಹಕಾರದಲ್ಲಿ ನವೆಂಬರ್ 29, 30 ಮತ್ತು ಡಿಸೆಂಬರ್ 1 ರಂದು ಮೂರು ದಿನಗಳ ಕಾಲ ಧಾರ್ಮಿಕ ವಿಧಿವತ್ತಾಗಿ ದೇವತಾಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಜಿ.ಎನ್.ಬೆಟ್ಟಸ್ವಾಮಿ ತಿಳಿಸಿದರು. ಪಟ್ಟಣದ ಹಳೇ ಸಂತೆ ಮೈದಾನದ ಬಳಿಯಿರುವ ಗದ್ದುಗೆ ಗ್ರಾಮದೇವತೆ ದೇವಾಲಯ ಬಳಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ಶ್ರೀ ಗ್ರಾಮದೇವತೆ ಗುಬ್ಬಿ ಹಳೇ ಗ್ರಾಮದ ಹೃದಯ ಭಾಗದಲ್ಲಿದ್ದು ದೇವಸ್ಥಾನ ಕಟ್ಟಡದ ಶಿಥಿಲಾವಸ್ಥೆ ಕಂಡ ನಂತರದಲ್ಲಿ ಗುಬ್ಬಿ ಪಟ್ಟಣದ ಹದಿನೆಂಟು ಕೋಮಿನ ಮುಖಂಡರು ಸಭೆ ಸೇರಿ ಚರ್ಚಿಸಿ ಜೀರ್ಣೋದ್ದಾರ ಕಾರ್ಯಕ್ಕೆ ಚಾಲನೆ ನೀಡಲಾಗಿ 13 ವರ್ಷದ ನಂತರ ಸಂಪೂರ್ಣಗೊಳಿಸಲಾಗಿದೆ ಎಂದರು. ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮವನ್ನು ಈ ತಿಂಗಳ 29 ರಂದು ಪೂರ್ಣಕುಂಭದ ಮೆರವಣಿಗೆ ಮೂಲಕ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ನಗರದ ರಾಜ ಬೀದಿಯಲ್ಲಿ…
ಚಿಕ್ಕಬಳ್ಳಾಪುರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಆದರೆ, ಸಚಿವರುಗಳು ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾಲ್ಲೂಕಿನ ನುಗುತಹಳ್ಳಿಯಲ್ಲಿ ಮಳೆಯಿಂದ ಹಾನಿಗೆ ಒಳಗಾದ ರೈತರ ಜಮೀನುಗಳನ್ನು ಬುಧವಾರ ವೀಕ್ಷಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಬಹಳಷ್ಟು ಜಿಲ್ಲೆಗಳಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆದರೆ, ಯಾವ ಸಚಿವರು ರೈತರ ಕಷ್ಟ ಕೇಳುತ್ತಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಟೀಕಿಸಿದ ಮೇಲೆ ಮುಖ್ಯಮಂತ್ರಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳೆ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಅವರು ಆರೋಪಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ಬೆಲೆ ಏರಿಕೆ ಕಾಲಕ್ಕೆ ಅನುಗುಣವಾಗಿ ಏರಿಕೆಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದು, ಎಲ್ಲಾ ಸರ್ಕಾರಗಳ ಅವಧಿಯಲ್ಲಿ ಇದು ನಡೆದಿದೆ ಎಂದು ಸಮರ್ಥಿಸಿಕೊಂಡರು. ಬೆಲೆ ಏರಿಕೆಯು ವಿಧಾನ ಪರಿಷತ್ ಚುನಾವಣೆ ಮೇಲೆ ಪರಿಣಾಮ ಬೀರಬಹುದೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಲೆ ಏರಿಕೆ ಸಹಜ, ಕಾಲಕ್ಕೆ ಅನುಗುಣವಾಗಿ ಬೆಲೆ ಏರಿಕೆಯಾಗುತ್ತ ಇರುತ್ತದೆ ಎಂದು ಉತ್ತರಿಸಿದರು. ನೋಟಿನ ಮೌಲ್ಯ ಕಡಿಮೆಯಾದಂತೆ ಉತ್ಪನ್ನಗಳ ಬೆಲೆ ಹೆಚ್ಚಳವಾಗುತ್ತದೆ. ಇದು ಎಲ್ಲಾ ಸರ್ಕಾರಗಳು ಇದ್ದಾಗಲೂ ಆಗುತ್ತದೆ. ನಿರಂತರವಾಗಿ ಬೆಲೆ ಏರಿಕೆ ಆಗುತ್ತಲೇ ಬಂದಿದೆ ಎಂದು ಮಾಧುಸ್ವಾಮಿ ಸಮರ್ಥಿಸಿಕೊಂಡರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಕುಣಿಗಲ್: ಮಳೆಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಹಾಗೂ ಮನೆ ಹಾನಿಯಾಗಿರುವವರಿಗೆ ರೂ.10 ಸಾವಿರ ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಜಲಧಿಗೆರೆ ಮತ್ತು ಬ್ಯಾಲದಲ್ಲಿ ಮಳೆಯಿಂದ ಹಾನಿಯಾಗಿರುವ ಬೆಳೆಗಳನ್ನು ಬುಧವಾರ ಪರಿಶೀಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎನ್.ಡಿ.ಆರ್.ಎಫ್ ನಿಂದ ರೂ.900 ಕೋಟಿ ಬಿಡುಗಡೆ ಕೋರಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 5 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಾಶವಾಗಿದೆ. ಹತ್ತು ದಿನದಲ್ಲಿ ಬೆಳೆ ಹಾನಿ ವರದಿ ಸಲ್ಲಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕಾಲಿಕ ಮಳೆಯಿಂದಾಗಿ ನಷ್ಟಕ್ಕೊಳಗಾಗಿರುವ ರೈತರಾಗಲಿ, ಮನೆ ಕಳೆದುಕೊಂಡವರಾಗಲಿ ಆತಂಕಪಡುವುದು ಬೇಡ. ಸರ್ಕಾರ ಬೆಳೆ ಹಾನಿಯಾದ ರೈತರ ನೆರವಿಗೆ ರೂ. 358 ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಪಾವಗಡ: ಪಟ್ಟಣದ ಅಗಸರ ಕುಂಟೆ ಕಟ್ಟೆಯಿಂದ ನೀರು ಹೊರ ಬರುತ್ತಿದ್ದು, ಇದೀಗ ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿದೆ. ಅಗಸರ ಕುಂಟೆಗೆ ನಾಗಲಮಡಿಕೆಯಿಂದ ನೀರು ಹರಿಸುವ ಸಂದರ್ಭದಲ್ಲಿ ಕಟ್ಟೆಯನ್ನು ಸಮರ್ಪಕವಾಗಿ ದುರಸ್ತಿ ಮಾಡದೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಸಮಸ್ಯೆಗಳು ಆರಂಭವಾಗಿದೆ ಎಂದು ವರದಿಯಾಗಿದೆ. ಕುಂಟೆ ಸಮೀಪವಿರುವ ಶಾಲೆ, ಕಾಲೇಜು ಕಟ್ಟಡಗಳ ಬಳಿಯಲ್ಲಿ ನೀರು ಹರಿಯುತ್ತಿದ್ದು, ಕೆಲವರು ಮನೆ, ಶೌಚಾಲಯಗಳು ಕುಸಿದು ಬೀಳುವ ಆತಂಕವನ್ನು ಕೂಡ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಕುಂಟೆಯಲ್ಲಿ ನಿರ್ಮಿಸಿರುವ ಓವರ್ ಹೆಡ್ ಟ್ಯಾಂಕ್ ಬಾಗಿದೆ. ಟ್ಯಾಂಕ್ ಪಿಲ್ಲರ್‌ಗಳು ಶಿಥಿಲವಾಗಿದೆ. ಟ್ಯಾಂಕ್ ಕುಂಟೆಯೊಳಗೆ ಬಿದ್ದರೆ ರಭಸಕ್ಕೆ ಕಟ್ಟೆ ಒಡೆದು ಭಾರಿ ಅನಾಹುತ ಸಂಭವಿಸಲಿದೆ ಎಂದು ಇಲ್ಲಿನ ಜನ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಬಗ್ಗೆ ತಕ್ಷಣವೇ ಮುಂಜಾಗೃತ ಕ್ರಮಕೈಗೊಂಡು ಕಟ್ಟೆಯನ್ನು ದುರಸ್ತಿ ಮಾಡಿಸುವ ಮೂಲಕ ಸಂಭಾವ್ಯ ಅನಾಹುತವನ್ನು ತಪ್ಪಿಸಬೇಕು ಎಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ನವದೆಹಲಿ: ಕೊರೊನಾ ಸಂಕಷ್ಟದ ಕಾರಣದಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ 5 ಕೆಜಿ ಉಚಿತ ಪಡಿತರ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ 80 ಕೋಟಿ ಪಡಿತರ ಫಲಾನುಭವಿಗಳಿಗೆ ಉಚಿತ ಪಡಿತರ ನೀಡಲಾಗುತ್ತದೆ. ಇದಕ್ಕಾಗಿ 53,344 ಕೋಟಿ ರೂ. ವೆಚ್ಚ ಮಾಡಲಾಗುವುದು. ಇದರೊಂದಿಗೆ ಉಚಿತ ಪಡಿತರ ವಿತರಣೆ ಮಾಡಲು ಸರ್ಕಾರ 2.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದಂತಾಗುತ್ತದೆ ಎಂದು ತಿಳಿದು ಬಂದಿದೆ. ಪಡಿತರ ಚೀಟಿದಾರರಿಗೆ ನೀಡುವ ಪಡಿತರದ ಜೊತೆಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲಾಗುವುದು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಸರಗೂರು: ನವೆಂಬರ್ 28ರಿಂದ ಡಿಸೆಂಬರ್ 1ರವರೆಗೆ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಬೇಲದಕುಪ್ಪೆ ಶ್ರೀ ಮಹದೇಶ್ವರ ಟ್ರಸ್ಟ್ ಪದಾಧಿಕಾರಿಗಳು ಪೂರ್ವ ಭಾವಿ ಸಭೆ ನಡೆಸಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಇದಾಗಿರುವುದರಿಂದಾಗಿ ಜನರನ್ನು ಸರ್ಕಾರದ ನಿಯಮದಂತೆ ನಿಯಂತ್ರಿಸಬೇಕಾಗುತ್ತದೆ. ಅರಣ್ಯದೊಳಗೆ ಸಾರ್ವಜನಿಕರ ಪ್ರವೇಶ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪೂಜೆಯಲ್ಲಿ ಭಾಗಿಯಾಗುವವರು ಕೊವಿಡ್ ತಪಾಸಣೆ ನಡೆಸಿ ಪರೀಕ್ಷಾ ವರದಿಯನ್ನು ವಲಯ ಅರಣ್ಯಾಧಿಕಾರಿಗೆ ಸಲ್ಲಿಸಿ, ಬಳಿಕ ಪಾಸ್ ಪಡೆಯ ಬೇಕು. ಆದರೆ ಅರಣ್ಯದೊಳಗೆ ಪ್ರವೇಶಿಸಬಾರದು ಎಂದು ಅಧಿಕಾರಿಗಳು ಹೇಳಿದರು. ಸಾರ್ವಜನಿಕರಿಗೆ ದೇವಸ್ಥಾನಕ್ಕೆ ಮುಕ್ತ ಅವಕಾಶ ನೀಡಲಾಗುವುದಿಲ್ಲ. ಜೊತೆಗೆ ಜಾತ್ರೆಯಲ್ಲಿ ಕೊವಿಡ್ 19 ನಿಯಂತ್ರಣ ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಮತ್ತು ತಾಲೂಕು ಆಡಳಿತಕ್ಕೆ ತಿಳಿಸಲಾಗಿದೆ. ಸಭೆಯಲ್ಲಿ ಸರಗೂರು ವೃತ್ತ ನಿರಿಕ್ಷಕರಾದ ಆನಂದ್ ಎನ್. , ಹೆಡಿಯಾಲ ವಲಯದ ಅರಣ್ಯಾಧಿಕಾರಿ ಎ ಸಿ ಎಫ್ ರವಿಕುಮಾರ್, ಸರಗೂರು ಪಿ ಎಸ್…