Subscribe to Updates
Get the latest creative news from FooBar about art, design and business.
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
- ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
Author: admin
ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆಯಿಂದ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುವ ಆಶಾ ಕಾರ್ಯಕರ್ತೆಯರು ನಾಳೆ ನಗರಕ್ಕೆ ಆಗಮಿಸುತ್ತಿರುವುದರಿಂದ ಸಿಲಿಕಾನ್ ಸಿಟಿ ಪಿಂಕ್ ಸಿಟಿಯಾಗಿ ಮಾರ್ಪಾಡಾಗಲಿದೆ. ತಮ್ಮ ಬೇಡಿಕೆ ಈಡೇರಿಸುವಂತೆ ಈಗಾಗಲೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗದಿರುವ ಹಿನ್ನಲೆಯಲ್ಲಿ ನಾಳೆಯಿಂದ ಬೃಹತ್ ಹೋರಾಟ ನಡೆಸಲು ಆಶಾ ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಲಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ನಗರದ ಫ್ರೀಡಂ ಪಾರ್ಕ್‍ನಲ್ಲಿ ಎಐಟಿಯುಸಿ ಕಾರ್ಮಿಕ ಸಂಘಟನೆ ಮುಖಂಡರೊಂದಿಗೆ ಪ್ರತಿಭಟನೆ ನಡೆಸಲಿದ್ದಾರೆ. ನಾವು ಕಳೆದ ಹದಿನೈದು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರೂ ನಮ್ಮ ಪ್ರೋತ್ಸಾಹ ಧನ ಹೆಚ್ಚಾಗಿಲ್ಲ. ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್‍ಗಳಾಗಿ ದಿನದ 24 ಗಂಟೆಗಳ ಕಾಲ ಸೇವೆ ಸಲ್ಲಿಸಿದ್ದೇವೆ.ಆದರೂ ನಮಗೆ ಕೆಲಸಕ್ಕೆ ತಕ್ಕ ಸಂಬಳ ಮಾತ್ರ ಕೊಡದೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದಿಂದ ಐದು ಸಾವಿರ ಮತ್ತು ಕೇಂದ್ರ ಸರ್ಕಾರದಿಂದ ಮೂರು ಸಾವಿರ…
ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಪಠ್ಯಪುಸ್ತಕ ಮತ್ತು ಸೈಕಲ್ ಗಳನ್ನು ಸಕಾಲಕ್ಕೆ ವಿತರಣೆ ಮಾಡಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯಾದ್ಯಂತ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಶಾಲೆಗಳನ್ನು ಎರಡು ವಾರ ಮುಂಚಿತವಾಗಿಯೇ ಆರಂಭಿಸುತ್ತಿದ್ದೇವೆ. ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಪಠ್ಯಪುಸ್ತಕ ಮತ್ತು ಸೈಕಲ್‍ಗಳನ್ನು ವಿತರಣೆ ಮಾಡಲು ಸಿದ್ದವಿದ್ದೇವೆ ಎಂದು ಹೇಳಿದರು. ಪಠ್ಯ ಪುಸ್ತಕ ಇಲ್ಲವೇ ಸೈಕಲ್ ವಿತರಣೆ ವಿಳಂಬವಾಗುತ್ತದೆ ಎಂಬ ಆತಂಕ ಯಾರಿಗೂ ಬೇಡ. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳ ಕೈಗೆ ತಲುಪುವಂತೆ ವ್ಯವಸ್ಥೆ ಮಾಡುವುದು ನಮ್ಮ ಸರ್ಕಾರದ ಜವಾಬ್ದಾರಿ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ಸರಿಯಾಗಿ ಶಾಲೆಗಳನ್ನು ತೆರೆಯಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕೋವಿಡ್ ಆತಂಕ ಇಲ್ಲದಿರುವ ಕಾರಣ ಮಕ್ಕಳು ವಾತಾವರಣಕ್ಕೆ ಹೊಂದಿಕೊಳ್ಳಲಿ ಎಂಬ ಕಾರಣಕ್ಕಾಗಿಯೇ ಮುಂಚಿತವಾಗಿ ಪ್ರಾರಂಭಿಸುತ್ತಿದ್ದೇವೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.…
ಕೊರಟಗೆರೆ : ಕರ್ನಾಟಕದ ಸಂಜೀವಿನಿ ಬೆಟ್ಟವೆಂದೇ ಕರೆಸಿಕೊಳ್ಳುವ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಪ್ರಕೃತಿ ಮಡಿಲಲ್ಲಿ ಸ್ವಾಸ್ಥ್ಯ ಮಾರ್ಗದ ವತಿಯಿಂದ ಎರಡು ದಿನಗಳ ಪ್ರಾಕೃತಿಕ ಸ್ವಾಸ್ಥ್ಯ ಜೀವನ ಕೌಶಲ್ಯ ತರಬೇತಿ ಶಿಬಿರ ನಡೆಸಲಾಯಿತು. ಸ್ವಾಸ್ಥ್ಯ ಜೀವನ ಮಾರ್ಗ ಯೋಗ ಪ್ರತಿಷ್ಠಾನ, ನಾಗಮಂಗಲ ಇವರ ವತಿಯಿಂದ ಖ್ಯಾತ ಯೋಗ ಗುರು ಲಕ್ಷ್ಮಣ್ ಜೀ ಅವರ ಸಾರಥ್ಯದಲ್ಲಿ ನಡೆದ ಈ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ, ಆಯುರ್ವೇದ ಚಿಕಿತ್ಸೆ, ಸಸ್ಯೌಷಧಗಳ ಪರಿಚಯವನ್ನು ಒಳಗೊಂಡ ಸ್ವಾಸ್ಥ್ಯ ಚಿಂತನೆಯ ಜೊತೆಗೆ ಚಾರಣದ ಹೂರಣವನ್ನು ಒಳಗೊಂಡಿದ್ದು ಶಿಬಿರದ ವಿಶೇಷ. ಮೊದಲಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ವೈದ್ಯೆ ಡಾ.ಭವ್ಯರವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆರೋಗ್ಯ ಸಂರಕ್ಷಣೆಯಲ್ಲಿ ಆಹಾರ ವಿಹಾರ ವ್ಯಾಯಾಮ ಅತೀ ಮುಖ್ಯ ಆ ನಿಟ್ಟಿನಲ್ಲಿ ಎಲ್ಲರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಡೆ ಗಮನ ಹರಿಸಬೇಕಿದೆ ಎಂದರು. ತದನಂತರ ಮಾತನಾಡಿದ ಸ್ವಾಸ್ಥ್ಯ ಮಾರ್ಗ ಜೀವನ ಮಾರ್ಗ ಯೋಗ…
ಹುಡುಗಿಗೆ ಮೆಸೆಜ್ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ನಡೆದಿದೆ. ಗಣೇಶ ಎಂಬ ದಲಿತ ಯುವಕನು ಯುವತಿಗೆ ಮೆಸೇಜ್ ಮಾಡಿದ್ದ ಎಂದು ಆರೋಪಿಸಿ ಗ್ರಾಮ ಗ್ರಾ.ಪಂ ಸದಸ್ಯ ಬಾಬಣ್ಣ, ಕಾರ್ತೀಕ್ ಹಾಗೂ ಹರೀಶ್ ಸೇರಿ ಅರವತ್ತಕ್ಕೂ ಹೆಚ್ಚು ಜನ ಸವರ್ಣೀಯರು ದಲಿತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಯುವಕನಿಗೆ ಎರಡು ದಿನಗಳ ಕಾಲ ಚಿತ್ರ ಹಿಂಸೆ ನೀಡಿ, ಅರೇ ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರಗಾಯಗೊಂಡ ದಲಿತ ಯುವಕನಿಗೆ ಜಿಲ್ಲಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಗಣೇಶನನ್ನು ಹಾಗೂ ಆತನ ತಾಯಿಯನ್ನು ಎರಡು ದಿನಗಳ ಕಾಲ ಕಲ್ಯಾಣ ಮಂಟಪದಲ್ಲಿ ಕೂಡಿ ಹಾಕಿ ಹಿಂಸಿಸಲಾಗಿದೆ ಈ ಅಮಾನವೀಯ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕನ ಸಂಬಂಧಿಕರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ವಾರಣಾಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ಕಾರ್ಯ ಮೂರನೇ ದಿನವಾದ ಇಂದು ಮುಂದುವರೆದಿದ್ದು, ಇಂದು ಸರ್ವೇಯಲ್ಲಿ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ ಎಂದು ವಕೀಲರಾದ ವಿಷ್ಣುಜೈನ್ ತಿಳಿಸಿದ್ದಾರೆ. ನಿನ್ನೆವರೆಗೂ ನಡೆದ ಸರ್ವೇಯಲ್ಲಿ ಮಸೀದಿಯ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ವಕೀಲರಾದ ಹರೀಶಂಕರ್ ಜೈನ್, ವಿಷ್ಣು ಜೈನ್ ಅವರ ಪ್ರಕಾರ ಭಾನುವಾರ ಮಸೀದಿಯ ಪ್ರದೇಶದ ಸಮೀಕ್ಷೆ ವೇಳೆ ಕೆಲವು ಭಾಗಗಳು ದೇವಸ್ಥಾನವಾಗಿ ಬಳಕೆಯಾಗಿರುವುದು ಕಂಡು ಬಂದಿದೆ. ಮಸೀದಿ ಸಂಕೀರ್ಣದ ಪಶ್ಚಿಮ ಭಾಗದ ಗೋಡೆ ಮೇಲೆ ಹಿಂದು ದೇವರುಗಳ ಕುರುಹುಗಳು ಪತ್ತೆಯಾಗಿವೆ. ಇದು ದೊಡ್ಡ ಪುರಾವೆಯಾಗಿದೆ. ಶನಿವಾರದ ಸರ್ವೇಯಲ್ಲಿ ಮೂರು ಕೊಠಡಿಗಳನ್ನು ತೆರೆಯಲಾಗಿದೆ, ಇಂದು ನಾಲ್ಕನೇ ಕೊಠಡಿಯನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಮಸೀದಿಯು ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿದೆ. ಸ್ಥಳೀಯ ನ್ಯಾಯಾಲಯವು ಅದರ ಹೊರಗಿನ ಗೋಡೆಗಳ ಮೇಲೆ ಪ್ರತಿನಿತ್ಯದ ಪ್ರಾರ್ಥನೆಗೆ ಅನುಮತಿ ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಸೇರಿ ಐದು ಮಂದಿ ಮಹಿಳೆಯರು 2021ರ ಏಪ್ರಿಲ್ 18 ನ್ಯಾಯಾಲಯಕ್ಕೆ…
ಆ್ಯಸಿಡ್ ದಾಳಿ ನಡೆಸಿದ ನಂತರ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ ತನ್ನ ಬೈಕ್‍ನಲ್ಲಿ ನ್ಯಾಯಾಲಯದ ಬಳಿ ಹೋಗಿ ವಕೀಲರೊಬ್ಬರನ್ನು ಸಂಪರ್ಕಿಸಿ ನಡೆದ ಘಟನೆ ಬಗ್ಗೆ ವಿವರಿಸಿದಾಗ ವಕೀಲರು ಪೊಲೀಸರಿಗೆ ಶರಣಾಗುವಂತೆ ಸೂಚಿಸಿದ್ದಾರೆ. ವಕೀಲರ ಮಾತನ್ನು ಅಲ್ಲಗಳೆದ ಆರೋಪಿ ಬೈಕನ್ನು ಅಲ್ಲೇ ಬಿಟ್ಟು ಬಸ್‍ನಲ್ಲಿ ಹೊಸಕೋಟೆಗೆ ಹೋಗಿದ್ದಾನೆ. ಅಲ್ಲಿಯ ಕೆರೆಯೊಂದರ ಬಳಿ ತೆರಳಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದ ಎಂಬುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬಳಿಕ ಆರೋಪಿ ನಾಗೇಶ್ ಮನಸ್ಸು ಬದಲಿಸಿಕೊಂಡು ತಿರುಪತಿಗೆ ಹೋಗಲು ನಿರ್ಧರಿಸಿ ತನ್ನ ಬಳಿ ಮೊಬೈಲ್ ಇದ್ದರೆ ಸಿಕ್ಕಿಬೀಳುತ್ತೇನೆಂದು ತಿಳಿದು ಆ ಮೊಬೈಲ್‍ಅನ್ನು ಕೆರೆಗೆ ಬಿಸಾಡಿದ್ದಾನೆ. ನಂತರ ತಿರುಪತಿಗೆ ಹೋದರೆ ಸಿಕ್ಕಿಹಾಕಿಕೊಳ್ಳಬಹುದೆಂದು ತಿಳಿದು ತಮಿಳುನಾಡಿಗೆ ಹೋಗಲು ನಿರ್ಧಾರ ಬದಲಿಸಿದ್ದಾನೆ. ಅದರಂತೆ ಹೊಸಕೋಟೆಯಿಂದ ಮಾಲೂರು ಮುಖಾಂತರ ತಮಿಳುನಾಡಿನ ತಿರುವಣ್ಣಾಮಲೈಗೆ ಹೋಗಿದ್ದಾನೆ. ಅಲ್ಲಿನ ರಮಣ ಆಶ್ರಮದ ಬಗ್ಗೆ ತಿಳಿದುಕೊಂಡು ಖಾವಿ ವಸ್ತ್ರ ಖರೀದಿಸಿ ಸನ್ಯಾಸಿಯಂತೆ ವೇಷ ಧರಿಸಿ ಅಲ್ಲಿನವರೊಂದಿಗೆ ಸೇರಿಕೊಂಡು ಧ್ಯಾನ, ಇನ್ನಿತರ…
ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. ದೆಹಲಿಯಿಂದ ವರಿಷ್ಠರ ಸಂದೇಶವನ್ನು ಹೊತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ ಸಂದರ್ಭದಲ್ಲೇ ಬೊಮ್ಮಾಯಿ ಅವರು ಪ್ರಮುಖರ ಜೊತೆ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮೂರ್ನಾಲ್ಕು ದಿನಗಳಲ್ಲಿ ಸಂದೇಶ ನೀಡಲಾಗುವುದು ಎಂದು ವರಿಷ್ಠರು ಹೇಳಿದ್ದರು. ಆದರೆ ಇದುವರೆಗೂ ಯಾವುದೇ ಸಂದೇಶ ದೆಹಲಿ ನಾಯಕರಿಂದ ಬಾರದಿರುವುದು ಸಚಿವ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. ಬೆಂಗಳೂರಿಗೆ ಆಗಮಿಸಿರುವ ಉಸ್ತುವಾರಿ ಅರುಣ್ ಸಿಂಗ್ ದೆಹಲಿ ನಾಯಕರಿಂದ ಶುಭ ಸುದ್ದಿಯನ್ನೇ ತಂದೇ ತರುತ್ತಾರೆ ಎಂಬ ಅಚಲವಾದ ವಿಶ್ವಾಸ ಬಿಜೆಪಿ ನಾಯಕರದ್ದು.…
ತಿಪಟೂರು: ತಾಲ್ಲೂಕು ಕೆರೆಗೋಡಿ ರಂಗಾಪುರ ದಲ್ಲಿ ಶಾಲೆಗೆ ಮಕ್ಕಳು ಬರುವ ಮೊದಲ ದಿನ ಸ್ವಚ್ಛ ಪರಿಸರ ಹಾಗೂ ಸುಂದರ ವಾತಾವರಣವಿರಲಿ ಎಂಬ ಉದ್ದೇಶದಿಂದ ಶಿಕ್ಷಣ ಸಚಿವರು ಜನತೆಗೆ ಕರೆ ನೀಡಿರುವುದು ಉತ್ತಮ ಕಾರ್ಯವಾಗಿದೆ ಎಂದು ರಂಗಾಪುರ ಸುಕ್ಷೇತ್ರ ಅಧ್ಯಕ್ಷರು ಶ್ರೀ ಗುರು ಪರದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ರಂಗಾಪುರ ಪ್ರಾಥಮಿಕ ಶಾಲೆಯನ್ನು ಸ್ವಚ್ಛಗೊಳಿಸುವ ಮೂಲಕ ಕೆಲಸಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಬಿ.ಸಿ. ನಾಗೇಶ್ ಮಾತನಾಡಿ, ದೇಶದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಳ ಓಡಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದರು. ಕಳೆದ ಎರಡು ವರ್ಷಗಳಿಂದ ಕರೋನಾ ಕಾರಣಕ್ಕೆ ಶಾಲೆಗಳು ಸರಿಯಾಗಿ ನಡೆಯದೆ ಮಕ್ಕಳ ಕಲಿಕೆ ಪೂರ್ಣವಾಗಿ ಇರಲಿಲ್ಲ ಆದಕಾರಣ ವಿಶೇಷವಾಗಿ ಕಲಿಕಾ ಚೇತರಿಕೆಯ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದೇವೆ. ಈ ವರ್ಷದ ಸಿಲಬಸ್ ನಲ್ಲೂ ಸ್ವಲ್ಪ ಕಡಿಮೆ ಮಾಡಿ ಅದನ್ನು ಮುಂದಿನ ವರ್ಷ ಪ್ರಾರಂಭದಲ್ಲಿ ಬೋಧಿಸಿ ಬೋಧಿಸಿ ಪೂರ್ಣಗೊಳಿಸಲಾಗುವುದು ಎಂದರು ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ರಂಗಾಪುರ ಗ್ರಾಮ…
ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಡಿಜಿಎಫ್‍ಟಿ ತಿಳಿಸಿದೆ. ಭಾರತ ಸರ್ಕಾರವು ಇತರ ದೇಶಗಳಿಗೆ ಅವರ ಆಹಾರ ಭದ್ರತೆ ಅಗತ್ಯತೆಗಳನ್ನು ಪೂರೈಸಲು ಮತ್ತು ಆ ಸರ್ಕಾರಗಳ ಕೋರಿಕೆಯ ಮೇರೆಗೆ ನೀಡುವ ಅನುಮತಿಯನ್ನು ಆಧರಿಸಿ ಗೋಧಿ ರಫ್ತಿಗೆ ಅನುಮತಿಸಲಾಗುವುದು ಎಂದು ಸ್ಪಷ್ಟ ಪಡಿಸಲಾಗಿದೆ. ಪ್ರತ್ಯೇಕ ಅಧಿಸೂಚನೆಯಲ್ಲಿ ಈರುಳ್ಳಿ ಬೀಜಗಳ ರಫ್ತು ಷರತ್ತುಗಳನ್ನು ಸಡಿಲಿಸುವುದಾಗಿ ಡಿಜಿಎಫ್‍ಟಿ ತಿಳಿಸಿತ್ತು. ಈ ಹಿಂದೆ ಈರುಳ್ಳಿ ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಈ ವಾರ ಬಿಡುಗಡೆಯಾದ ಅಧಿಕೃತ ಮಾಹಿತಿಯ ಪ್ರಕಾರ ಇಂಧನ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಳದಿಂದ ಹಣದುಬ್ಬರದಲ್ಲಿ ಏರಿಕೆ ಕಂಡುಬಂದಿದೆ. ಚಿಲ್ಲರೆ ಹಣದುಬ್ಬರವು ಏಪ್ರಿಲ್‍ನಲ್ಲಿ ಎಂಟು ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ತಿಳಿದು ಬಂದಿದೆ. ಆಹಾರಧಾನ್ಯದ ಪ್ರಮುಖ ರಫ್ತುದಾರರಾಗಿರುವ ರಷ್ಯಾ ಮತ್ತು ಉಕ್ರೇನ್ ಯುದ್ಧದಿಂದ ಜಾಗತಿಕ ಗೋ ಪೂರೈಕೆಯಲ್ಲಿ ಏರುಪೇರಾಗಿದೆ. 2021-22ರಲ್ಲಿ ಭಾರತದ…
ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸುವುದಕ್ಕಿಂತ ಶೂಟೌಟ್ ಮಾಡಬೇಕಿತ್ತು ಎಂದು ಸಂತ್ರಸ್ಥೆ ಯುವತಿಯ ತಂದೆ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ನಾಗೇಶನ ಒಂದು ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆಂದು ಗೊತ್ತಾಯಿತು. ಎರಡೂ ಕಾಲಿಗೂ ಹೊಡೆಯಬೇಕಿತ್ತು. ಆತನನ್ನು ಜೈಲಿಗೆ ಕಳುಹಿಸಿದರೆ ಪ್ರಯೋಜನವಾಗುವುದಿಲ್ಲ. ರಸ್ತೆಗೆ ಆತನನ್ನು ಬಿಟ್ಟರೆ ಜನ ಏನು ಮಾಡುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಗುಡುಗಿದರು. ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ನಮಗೂ ಸಹ ಧೈರ್ಯ ತುಂಬಿದ್ದಾರೆ. ಮಗಳ ಚಿಕಿತ್ಸೆಗೆ ಸರ್ಕಾರ ಸ್ಪಂದಿಸಿದೆ. ಅದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ರಾಜಣ್ಣ ಹೇಳಿದರು. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB