Subscribe to Updates
Get the latest creative news from FooBar about art, design and business.
- ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
- ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
- ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
- ಖ್ಯಾತ ಖಳನಟ ಹರೀಶ್ ರಾಯ್ ನಿಧನ
- ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
- ಕುಣಿಗಲ್ | ಬೈಕ್ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
- ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
- ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
Author: admin
ತಿಪಟೂರು: ಬೆಳ್ಳಂಬೆಳಗ್ಗೆ ತಿಪಟೂರು ತಾಲ್ಲೂಕಿನ ಕೊಬ್ಬರಿ ರವಾನೆದಾರರು ಹಾಗೂ ವರ್ತಕರು ಮನೆ, ಕಚೇರಿ ಸೇರಿದಂತೆ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರತಿಷ್ಠಿತ ಕೊಬ್ಬರಿ ವರ್ತಕ ಹಾಗೂ ಮಾಜಿ ಶಾಸಕ ಬಿ.ನಂಜಾಮರಿ ಅವರ ಮನೆ ಮೇಲೂ ದಾಳಿ ನಡೆದಿದೆ. 15ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದೆ. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ಶ್ರೀಕರಿಯಮ್ಮ ಶಿಲಾ ಪ್ರತಿಷ್ಠಾಪನಾ ಮಹೋತ್ಸವವು ನಿನ್ನೆ(ನ.23) ಹಾಗೂ ಇಂದು(ನ.24)ರಂದು ತಿಪಟೂರಿನ ಪಿಚ್ಛೇನಹಳ್ಳಿಯಲ್ಲಿ ನಡೆಯುತ್ತಿದೆ. ನವೆಂಬರ್ 23ರಂದು ಗಂಗಾಪೂಜೆ ಮತ್ತು ಧ್ವಜ ಪೂಜೆ ಕಾರ್ಯಕ್ರಮ ನಡೆಯಿತು. ನವೆಂಬರ್ 24ರಂದು ಹೋಮಾ ಹಾಗೂ ಶಿಲಾ ಪ್ರತಿಷ್ಠಾಪನೆ ಮತ್ತು ಕಳಶ ಸ್ಥಾಪನೆ ನಡೆಯುತ್ತಿದೆ. ಶಿಲಾ ಪ್ರತಿಷ್ಠಾಪನಾ ಮಹೋತ್ಸವ ಪಿಚ್ಚೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶುಭಕೋರಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತುಮಕೂರು: ತುಮಕೂರು ತಾಲೂಕಿನ ಹೆಗ್ಗೆರೆ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದ್ದು, ಅಪಘಾತದ ಪರಿಣಾಮ ಬೈಕ್ ಸವಾರನ ದೇಹ ಛಿದ್ರಛಿದ್ರಗೊಂಡಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಬೈಕ್ ಚಾಲಕ ಲಾರಿಯ ಚಕ್ರದಡಿಗೆ ಸಿಲುಕಿದ್ದಾನೆ. ಪರಿಣಾಮವಾಗಿ ಬೈಕ್ ಸವಾರನ ದೇಹವನ್ನು ಲಾರಿ ಎಳೆದುಕೊಂಡೇ ಹೋಗಿದ್ದು, ಕೆಲವೇ ಕ್ಷಣಗಳಲ್ಲಿ ಬೈಕ್ ಸವಾರನ ದೇಹ ಛಿದ್ರಛಿದ್ರಗೊಂಡು ರಸ್ತೆ ತುಂಬಾ ಹರಡಿದ ದೃಶ್ಯ ಕಂಡು ಬಂತು. ಬೈಕ್ ಸವಾರನ ಮೃತದೇಹವು ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಮೃತ ವ್ಯಕ್ತಿ ಯಾರು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈ ಅಪಘಾತ ಹೇಗೆ ಸಂಭವಿಸಿತು ಎನ್ನುವುದೂ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಲು ಸಾಧ್ಯವಾಗದಂತಹ ಸ್ಥಿತಿಯಲ್ಲಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್…
ಕುಣಿಗಲ್: ಪಟ್ಟಣದ ಕಿರಿಯ ಶ್ರೇಣಿಯ ನ್ಯಾಯಾಲಯ ಕಟ್ಟಡ ಮಳೆಯಿಂದಾಗಿ ಸೋರುತ್ತಿದ್ದು, ನ್ಯಾಯಾಧೀಶರು, ವಕೀಲರು ಕಕ್ಷಿದಾರರ ಹಿತದೃಷ್ಟಿಯಿಂದ ಶುಕ್ರವಾರದಿಂದ ಕಲಾಪ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ವಕೀಲರ ಸಂಘದ ಅಧ್ಯಕ್ಷ ಹುಚ್ಚೇಗೌಡ ಈ ಸಂಬಂಧ ಮಾಹಿತಿ ನೀಡಿ, ನ್ಯಾಯಾಲಯದ ಕಟ್ಟಡ ಸೋರುತ್ತಿರುವುದರಿಂದ ಮಳೆ ನೀರಿನಿಂದಾಗಿ ದಾಖಲೆಗಳು ನೆನೆಯುತ್ತಿವೆ. ಸದಾ ನೀರು ಜಿನುಗುತ್ತಿದ್ದು ಯಾರು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಟ್ಟಡ ಶಿಥಲವಾಗಿರುವುದರಿಂದ ತಾರಸಿಯಲ್ಲಿ ಬಿರುಕು ಕಾಣಿಸಿಕೊಂಡು ಉದುರುತ್ತಿದೆ. ಇದನ್ನು ತಡೆಯಲು ತಾತ್ಕಾಲಿಕವಾಗಿ ಜಾಲರಿ ನಿರ್ಮಿಸಿದ್ದರೂ, ಪ್ರಯೋಜನವಾಗಿಲ್ಲ ಎಂದರು. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಬುಧವಾರ ತಾಲ್ಲೂಕು ವಕೀಲರ ಸಂಘದ ಪದಾಧಿಕಾರಿಗಳ ನಿಯೋಗದಿಂದ ಹೈಕೋರ್ಟ್ ನ್ಯಾಯಾಧೀಶರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ತಿಪಟೂರು: ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ನಗರದ ಅಣ್ಣಾಪುರದ ಹೊಸಬಡಾವಣೆಯಲ್ಲಿ ಮಂಗಳವಾರ ವಿದ್ಯಾಗಣಪತಿ ಯುವಕರ ಸಂಘವು ಆಯೋಜಿಸಿದ ರಕ್ತದಾನ ಶಿಬಿರದಲ್ಲಿ 50 ಯೂನಿಟ್ ರಕ್ತ ಸಂಗ್ರಹವಾಯಿತು. ಇದೇ ವೇಳೆ 26ಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ನೋಂದಣಿ ಮಾಡಿಸಿಕೊಂಡರು. ಜಿಲ್ಲಾ ಆಸ್ಪತ್ರೆಯ ರಕ್ತಸಂಗ್ರಹನಿಧಿ ವೈದ್ಯ ಡಾ.ಪ್ರದೀಪ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕೋವಿಡ್ ನಂತರದ ದಿನಗಳಲ್ಲಿ ರಕ್ತದಾನಿಗಳ ಸಂಖ್ಯೆ ಕ್ಷೀಣಿಸಿದೆ. ಹಾಗಾಗಿ ಅಗತ್ಯದ ಸಂದರ್ಭದಲ್ಲಿಯೂ ಕೆಲವೊಮ್ಮೆ ರಕ್ತ ದೊರೆಯುತ್ತಿಲ್ಲ. ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸಲಿದೆ. ಒಬ್ಬರು ರಕ್ತ ನೀಡುವುದರಿಂದ ಸುಮಾರು 4 ಜನರ ಜೀವ ಕಾಪಾಡುವ ಅವಕಾಶ ದೊರೆಯುತ್ತದೆ ಎಂದು ಜಾಗೃತಿ ಮೂಡಿಸಿದರು. ವಿದ್ಯಾಗಣಪತಿ ಯುವಕರ ಸಂಘದ ಅಧ್ಯಕ್ಷ ಪ್ರಭು, ತಿಪಟೂರು ತಾಲ್ಲೂಕು ಆಸ್ಪತ್ರೆಯ ಲ್ಯಾಬ್ ನ ರಾಘವ್, ಆಪ್ತ ಸಮಾಲೋಚಕ ಉಮೇಶ್, ಹೇಮಂತ್, ಪ್ರಕಾಶ, ಭರತ್, ಪಾಂಡು, ಮಂಜುನಾಥ್, ಜಯಂತ್, ಹೇಮಂತ್ ಕುಮಾರ್, ಸಂಪತ್, ಪ್ರದೀಪ್ ಇದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417…
ತುಮಕೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೋಲಿಗೆ ಕಾರಣರಾದವರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು. ಜನತಾ ಸಂಗಮ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು. ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ದೇವೇಗೌಡರು ಸಾಕಷ್ಟು ನೋವು ಅನುಭವಿಸಿದರು. ಅವರ ಮನಸ್ಸಿನ ಮೇಲೆ ಆಗಿರುವ ಆಘಾತದಿಂದ ಇನ್ನೂ ಹೊರ ಬರಲು ಸಾಧ್ಯವಾಗಿಲ್ಲ. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಗೌಡರು ನೋವಿನಿಂದ ಹೊರ ಬರುವಂತೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ತುಮಕೂರು ಜಿಲ್ಲೆಯ ನೀರಾವರಿ ವಿಚಾರದಲ್ಲಿ ನಮ್ಮ ಕುಟುಂಬ ಎಂದೂ ರಾಜಕಾರಣ ಮಾಡಿಲ್ಲ. ಜಿಲ್ಲೆಗೆ ದ್ರೋಹ ಬಗೆದಿಲ್ಲ. ಆದರೆ ಈ ವಿಚಾರ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಗೌಡರ ಸೋಲಿಗೆ ಕಾರಣರಾದವರು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದು ನಿಮಗೆಲ್ಲ ಗೊತ್ತಿದೆ ಎಂದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಅಂಜನಪ್ಪ, ಶಾಸಕರಾದ ಎಂ.ವಿ.ವೀರಭದ್ರಯ್ಯ, ಡಿ.ಸಿ.ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ,…
ತುಮಕೂರು: ರಾಜ್ಯದ ಪರಿಷತ್ ಚುನಾವಣೆ ಬಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಲಿದೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದರೇ ಸ್ವರ್ಗ ಸೃಷ್ಠಿಸುತ್ತೇವೆ ಎಂದು ಉದ್ದುದ್ದ ಭಾಷಣ ಮಾಡಿದ್ದ ಬಿಜೆಪಿ ನಾಯಕರು, ಇಂದು ಕೇವಲ ದಿನದೂಡುತ್ತಾ ಭ್ರಷ್ಟ ಅಧಿಕಾರಿಗಳಿಂದ ವಸೂಲಿ ಮಾಡುತ್ತಾ ಇದ್ದಾರೆ. ಇದರಿಂದಾಗಿ ಜನ ಬೇಸತ್ತಿದ್ದಾರೆ. ಈ ಚುನಾವಣೆ ಗ್ರಾಮ ಪಂಚಾಯಿತಿ ಪಾಲಿಕೆ ಸದಸ್ಯರು ಮತ ನೀಡುವ ಚುನಾವಣೆಯಾಗಿದ್ದು ಇದುವರೆಗೂ ಯಾವಬ್ಬ ಜನ ಪ್ರತಿನಿಧಿಯೂ ಸರ್ಕಾರದಿಂದ ಕನಿಷ್ಠ ಒಂದು ಲಕ್ಷ ರೂ.ಗಳ ಅನುದಾನವನ್ನೂ ಪಡೆದಿಲ್ಲಾ. ಮತ ನೀಡಿದ ಜನರಿಗೆ ಕನಿಷ್ಠ ಸೌಕರ್ಯ ಮಾಡುವ ಕೆಲಸ ಮಾಡಲು ಈ ಸರ್ಕಾರ ಅವಕಾಶ ನೀಡಿಲ್ಲ ಎಂದು ಅವರು ಆರೋಪಿಸಿದರು. ಮಹಾತ್ಮ ಗಾಂಧಿ ಕಂಡ ಕನಸಾದ ಗ್ರಾಮ ಸ್ವರಾಜ್ಯ ಮರೀಚಿಕೆಯಾಗಿದೆ. ಭಾರತ ಹಳ್ಳಿಗಳ ರೈತರ ದೇಶ ಕೇವಲ ಕಂದಾಯದ ಆಧಾರದ ಮೇಲೆ ಕಾರ್ಪೊರೇಟ್ ರವರಿಗೆ ಮನ್ನಣೆ ನೀಡಿ ರೈತರನ್ನು ಕಡೆಗಣಿಸುತ್ತಿದ್ದಾರೆ. ಗ್ರಾಮಗಳ ವಿಕಾಸ ಮತ್ತು ಅಭಿವೃದ್ದಿಯಿಂದ…
ಬೆಂಗಳೂರು: ವಿಶ್ವ ಬೌದ್ಧ ದಮ್ಮ ಸಂಘ ಮತ್ತು ನಾಗಸೇನಾ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಇದೇ ನವೆಂಬರ್ 25 ಮತ್ತು 26ರಂದು ನಾಗಸೇನ ವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ರಾಷ್ಟ್ರೀಯ ಬೌದ್ಧ ದಮ್ಮಾಧಿವೇಶನ ನಡೆಯಲಿದೆ ಎಂದು ಆರ್ ಪಿಐ ರಾಜ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ತಿಳಿಸಿದರು. ಬೌದ್ಧ ದಮ್ಮಾಧಿವೇಶನವನ್ನು 25ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು. ವಿಡಿಯೋ ನೋಡಿ: ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಹೇಳಿಕೆ ಮುಂದಿಟ್ಟುಕೊಂಡು ಜಾತಿವಾದಿಗಳು ವಿವಾದ ಎಬ್ಬಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಂಸಲೇಖ ಪರವಾಗಿ ಪ್ರತಿಭಟನೆ ನಡೆಯುತ್ತಿದ್ದು, ಈ ಬೆಂಬಲ ಕಂಡು ಭಾವುಕರಾಗಿ ಹಂಸಲೇಖ ಪತ್ರ ಬರೆದಿದ್ದಾರೆ. ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗೆ ಆರೋಗ್ಯ ತಪ್ಪಿದೆ ಅಂತ ಇಡೀ ಕರ್ನಾಟಕದಿಂದ ಕರೆ ಬಂದಿದೆ. ಎಲ್ಲರೂ ನನ್ನ ಆರೋಗ್ಯ ವಿಚಾರಿಸುತ್ತಿದ್ದಾರೆ. ನನಗೆ ಗೊತ್ತಾಗಿದೆ ನಿಮ್ಮ ಪ್ರೀತಿ ಎಷ್ಟು ವಿಶಾಲವಾಗಿದೆ ಎಂದು. ಈ ಪ್ರೀತಿ ಪಡೆಯೋಕೆ ನಾನು ತುಂಬಾನೆ ಸವೆದಿದ್ದೀನಿ. ಸಹಿಸಿದ್ದೀನಿ. ಅದರ ಸುಖ ಇವತ್ತು ಅನುಭವಿಸುತ್ತಿದ್ದೀನಿ. ನಾನು ಕೇಳದೆ ನನ್ನ ಮನೆಗೆ ಸರ್ಕಾರ ಭದ್ರತೆ ಕೊಟ್ಟಿದೆ. ನಾನು ಕೇಳದೆ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳು ನನ್ನ ಪರ ಮಾತನಾಡುತ್ತಿದ್ದಾರೆ. ನನ್ನ ಉದ್ಯಮದ ಆತ್ಮೀಯರು ನನಗೆ ಧೈರ್ಯ ತೋರಿದ್ದಾರೆ. ಈಗ ಇಡೀ ಕರ್ನಾಟಕವೇ ನನ್ನನ್ನು ಪ್ರೀತಿಯಲ್ಲಿ ಮುಳುಗಿಸಿ ಅಭಿಮಾನದಲ್ಲಿ ತೇಲಿಸುತ್ತಿದ್ದಾರೆ. ಅಭಿಮಾನ ಆವೇಶವಾಗಬಾರದು: ಆವೇಶ ಅವಗಢಗಳಿಗೆ ಕಾರಣವಾಗಬಾರದು! ಅಭಿಮಾನ ಹಾಡಿನಂತೆ ಇರಬೇಕು. ಹಾಡು ಕೇಳಿಸುತ್ತದೆ, ಮುಟ್ಟಿಸುತ್ತದೆ. ನಿಮ್ಮ…
ತುಮಕೂರು: ಹಂಸಲೇಖ ಅವರು ಮಾತನಾಡಿರುವುದರಲ್ಲಿ ಯಾವುದೇ ತಪ್ಪಿಲ್ಲ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ, ಇನ್ನೂ ಎಷ್ಟು ದಿನ ದಲಿತರು ಅಸ್ಪೃಶ್ಯತೆಯನ್ನು ಅನುಭವಿಸಬೇಕು ಎಂದು ಅಲ್ಪಸಂಖ್ಯಾತ ಸಂಘಟನೆಯ ಜಿಲ್ಲಾಧ್ಯಕ್ಷ ಅತೀಖ್ ಅಹಮದ್ ಪ್ರಶ್ನಿಸಿದರು. ದಲಿತ ಹಾಗೂ ಹಿಂದುಳಿದ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಾದ ಬ್ರಹ್ಮ ಹಂಸಲೇಖ ಅವರ ಪರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಂಸಲೇಖ ಅವರು ಅಸ್ಪೃಶ್ಯತೆಯ ವಿರುದ್ಧ ಮಾತನಾಡಿದ್ದಾರೆಯೇ ವಿನಃ ಯಾರನ್ನೂ ತೇಜೋವಧೆ ಮಾಡಿಲ್ಲ. ಜಾತಿ ಹೋಗಲಾಡಿಸುವ ಬೂಟಾಟಿಕೆಯ ನಾಟಕವನ್ನು ಅವರು ಪ್ರಶ್ನಿಸಿದ್ದಾರೆ. ದಲಿತರ ಮನೆಗೆ ಬಲಿತರು ಹೋಗುವುದು ದೊಡ್ಡ ವಿಚಾರವಲ್ಲ, ಬಲಿತರ ಮನೆಗೆ ದಲಿತರನ್ನು ಕರೆದುಕೊಂಡು ಹೋಗಿ ಸತ್ಕಾರ ಮಾಡಬೇಕು ಎಂದು ಅವರು ಹೇಳಿದ್ದಾರೆ. ಹಾಗಾಗಿ ನಾವು ಹಂಸಲೇಖ ಅವರಿಗೆ ಬೆಂಬಲ ಸೂಚಿಸುತ್ತೇವೆ ಎಂದು ಅವರು ಹೇಳಿದರು. ದಲಿತ ಮುಖಂಡರಾದ ಕೂಟ್ಟ ಶಂಕರ್ ಅವರು ಮಾತನಾಡಿ, ಹಂಸಲೇಖರು ದೇಶದ ಹಿರಿಮೆಯನ್ನು ಸಾರುವಂತಹ ಸಮಾನತೆ ಸಂದೇಶವನ್ನು ಸಮಾಜಕ್ಕೆ ತಿಳಿಸಿದ್ದಾರೆ. ಆದರೆ, ಇದನ್ನು ಸಹಿಸದ ಮನುವಾದಿಗಳು ಅವರ ಮೇಲೆ…