Author: admin

ತುಮಕೂರು: ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಮಾಯವಾಗಿದ್ದರೂ ಬಿಜೆಪಿಯವರು ಇನ್ನೂ ಅವರ ಹೆಸರು ಜಪಿಸುತ್ತಿದ್ದಾರೆ, ಉಳಿದ ನಾಯಕರಿಗೆ ಧಮ್ ಇಲ್ಲವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯನ್ನು ವ್ಯಂಗ್ಯವಾಡಿದರು. ಕಾಂಗ್ರೆಸ್ ನೇತೃತ್ವದ ಸರ್ಕಾರ ಈವರೆಗೆ ದೇಶದಲ್ಲಿ ಜಾರಿಗೊಳಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಸಲುವಾಗಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜನಜಾಗೃತಿ ಅಭಿಯಾನಕ್ಕೆ ತುಮಕೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿಯವರು ಇನ್ನೂ ಮೋದಿ ಹೆಸರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಉಳಿದ ನಾಯಕರಿಗೆ ಧಮ್ ಇಲ್ಲವೆ ಎಂದು ಪ್ರಶ್ನಿಸಿದರು. ಮೋದಿ ಒಳ್ಳೆಯ ಕಾಲ ಬರುತ್ತದೆ ಎಂದು ಹೇಳಿದ್ದರು. ಆ ಮೂಲಕ ವೋಟು ಕೊಡಿ ಎಂದು ಕೇಳಿದ್ದರು. ನಂತರ ಬೆಲೆ ಏರಿಕೆ ಮಾಡಿ ದುಬಾರಿ ಕಾಲ ನಿರ್ಮಿಸಿದ್ದಾರೆ. ಇಂತಹ ಕೆಲಸ ಮಾಡಲು ನಾಚಿಕೆ ಆಗುವುದಿಲ್ಲವೆ? ಎಂದು ವಾಗ್ದಾಳಿ ನಡೆಸಿದರು. ಇನ್ನೂ ಬಿಜೆಪಿ ಕೈಗೊಂಡಿರುವ ಜನಸ್ವರಾಜ್ಯ ಯಾತ್ರೆಯನ್ನು ಲೇವಡಿ ಮಾಡಿದ ಅವರು,’ಶಂಖು, ಜಾಗಟೆ ಬಾರಿಸಿಕೊಂಡು, ಕೊಂಬು, ಕಹಳೆ ಊದಿಕೊಂಡು ಹೊರಟಿದ್ದಾರೆ. ಕೊಂಬು, ಕಹಳೆಗಿದ್ದ ಬೆಲೆಯನ್ನು ಕಳೆಯುತ್ತಿದ್ದಾರೆ. ನಾಲ್ಕು…

Read More

ತುಮಕೂರು: ವಿಧಾನ ಪರಿಷತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಬಲ್ಲದು. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಮಾಜಿ ಡಿಸಿಎಂ, ಕಾಂಗ್ರೆಸ್ ನ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ  ತುಮಕೂರು ಜಿಲ್ಲೆ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ರಾಜೇಂದ್ರ ಅವರು ನಾಮಪತ್ರ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಪರಮೇಶ್ವರ್ ಮಾತನಾಡುತ್ತಿದ್ದರು. ಈ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಬಹುದು. ಇಂದು ನಮ್ಮ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ ನ ಗೆಲುವಾಗಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಬೇಕು ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ನಾಮಪತ್ರ ಸಲ್ಲಿಸಿದ ವೇಳೆ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಚಿವರಾದ ವೆಂಕಟರವಣಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಧುಗಿರಿಯ ಮಾಜಿ ಶಾಸಕ ಕೆ.ಎನ್.ರಾಜೇಂದ್ರ, ಮಾಜಿ  ಶಾಸಕರುಗಳಾದ ಷಡಕ್ಷರಿ,ಷಫೀ ಅಹಮ್ಮದ್ ರಫೀಕ್ ಅಹಮ್ಮದ್ ಮತ್ತಿತರರು ಹಾಜರಿದ್ದರು. ವಿಡಿಯೋ: ಜಿ.ಪರಮೇಶ್ವರ್ ಅವರು ಮಾತನಾಡುತ್ತಿರುವುದು  ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ:…

Read More

ಕಣ್ಣೂರು: : ಬಾಂಬ್ ಇದ್ದ ಐಸ್ ಕ್ರೀಮ್ ಬಾಲ್ ಸ್ಫೋಟಗೊಂಡು, 7ನೇ ತರಗತಿ ಬಾಲಕ ಗಾಯಗೊಂಡ ಘಟನೆ ಕಣ್ಣೂರಿನ ಧರ್ಮಡೋಮ್ ನಲ್ಲಿ ನಡೆದಿದೆ. ಮೈದಾನದಲ್ಲಿ ಆಟವಾಡುತಿದ್ದ ವಿದ್ಯಾರ್ಥಿಗಳಿಗೆ ಮೂರು ಐಸ್ ಕ್ರಿಮ್ ಬಾಲ್ ಗಳು ದೊರಕ್ಕಿದ್ದು, ವಿದ್ಯಾರ್ಥಿಗಳು ಅದನ್ನು ತೆಗೆದುಕೊಂಡು ಆಟವಾಡುತ್ತಿದ್ದರು.  ಆ ವೇಳೆ ಬಾಂಬ್ ಇದ್ದ ಒಂದು ಬಾಲ್ ಸ್ಫೋಟಿಸಿದೆ ಎನ್ನಲಾಗಿದೆ. ಬಾಂಬ್ ಸ್ಫೋಟಗೊಂಡ ಪರಿಣಾಮ ಬಾಲಕ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬಾಂಬ್ ನಿಷ್ಕ್ರಿಯ ತಜ್ಞರು, ಇನ್ನೆರಡು ಸ್ಫೋಟಕಗಳನ್ನು ಪತ್ತೆ ಮಾಡಿ ನಿಷ್ಕ್ರಿಯಗೊಳಿಸಿದ್ದಾರೆ.  ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ತುಮಕೂರು ಗ್ರಾಮಾಂತರ ಮೈದಾಳದ ಕೆರೆ ಸುಮಾರು 22 ವರ್ಷಗಳ ನಂತರ ವರುಣನ ಕೃಪೆಯಿಂದ ತುಂಬಿ ಕೋಡಿ ಹರಿದಿದ್ದು ಇಂದು ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗಂಗಾ ಪೂಜೆ ನೆರವೇರಿಸಿದರು. ಇದೇ ವೇಳೆ ಕೆರೆಗೆ ಬಾಗಿನ ಅರ್ಪಿಸಿದ ಅವರು, ಗಂಗಾಪೂಜೆ ಕಾರ್ಯಕ್ರಮಕ್ಕೆ ಭಾಗವಹಿಸಿದ ಸುಮಾರು 2,000ಕ್ಕೂ ಹೆಚ್ಚು ಹೆಣ್ಣುಮಕ್ಕಳಿಗೆ ಅರಿಶಿಣ, ಕುಂಕುಮ, ಬಳೆ, ಸೀರೆ ನೀಡುವ ಮೂಲಕ ಬಾಗಿನ ನೀಡಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಪುತ್ತೂರು: ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಮುಂಡ್ಯ ಕರಂಟಿಯಡ್ಕದಲ್ಲಿ ನಡೆದಿದೆ. ಇಲ್ಲಿನ ಸುಳ್ಯಪದವು ಶಬರಿ ನಗರದ ನಿವಾಸಿ ರವಿರಾಜ್ ಪೂಜಾರಿ(31)  ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು,  ರವಿರಾಜ್ ಪ್ರೀತಿಸುತ್ತಿದ್ದ ಯುವತಿಯ ಜೊತೆಗೆ ಮದುವೆಯಾಗಲು ಪೋಷಕರು ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ರವಿರಾಜ್ ಕುಂದಾಪುರ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನೇ ಮದುವೆಯಾಗಲು ನಿರ್ಧರಿಸಿದ್ದರು. ಯುವತಿಯ ಮನೆಯವರು ಕೂಡ ಮದುವೆಗೆ ಒಪ್ಪಿಗೆ ನೀಡಿದ್ದರು. ಮದುವೆ ಮಾತುಕತೆ ನಡೆಸಲು ರವಿರಾಜ್ ಮನೆಗೆ ಯುವತಿಯ ಕಡೆಗೆ ಬರಲು ಮುಂದಾಗಿದ್ದರು ಎನ್ನಲಾಗಿದೆ. ಈ ನಡುವೆ ರವಿರಾಜ್ ಮನೆಯಲ್ಲಿ ಆತನ ಒಪ್ಪಿಗೆಯಿಲ್ಲದೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ನಿಗದಿ ಮಾಡಿದ್ದರಿಂದ ನೊಂದ ರವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕೆಂಚನಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇವರ ಜೊತೆಗಿದ್ದ ಮತ್ತೋರ್ವ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಅಬ್ದುಲ್ಲಾ(21) ಹಾಗೂ ತನ್ವೀರ್(20) ಮೃತಪಟ್ಟ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಲು ಜಾರಿ ವಿದ್ಯಾರ್ಥಿಗಳು ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ತೆಗೆಯುತ್ತಿದ್ದ ಯುವಕ ಮಾತ್ರ ಬಚಾವಾಗಿದ್ದಾನೆ ಎಂದು ವರದಿಯಾಗಿದೆ. ಇನ್ನೂ ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲು ರವಾನಿಸಲಾಗಿದ್ದು, ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತಿಪಟೂರು: ತಾಲೂಕು ಆಡಳಿತ ವತಿಯಿಂದ ನಗರದ ತಾಲೂಕು ಮಿನಿ ವಿಧಾನಸೌಧದಲ್ಲಿ ಕನಕದಾಸರ 534ನೇ ಜಯಂತೋತ್ಸವ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು‌. ಈ ಕಾರ್ಯಕ್ರಮದಲ್ಲಿ ತಹಾಸಿಲ್ದಾರ್ ಚಂದ್ರಶೇಖರ್, ನಗರಸಭೆ ಆಯುಕ್ತ ಉಮಾಕಾಂತ್,  ಮಾಜಿ ನಗರಸಭಾ ಸದಸ್ಯ ಲೋಕೇಶ್, ರವಿಕುಮಾರ್ ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ ಹಾಜರಿದ್ದರು. ವರದಿ: ಮಂಜು ಗುರುಗದಹಳ್ಳಿ ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ಹಾಗೂ ಚಲವಾದಿ ಮಹಾಸಭಾ ವೇದಿಕೆ ವತಿಯಿಂದ 534ನೇ  ಕನಕದಾಸರ ಜಯಂತೋತ್ಸವವನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಇದೇ ವೇಳೆ ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷ  ಎನ್.ಕೆ.ನಿಧಿ ಕುಮಾರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಪಿ. ಎನ್. ರಾಮಯ್ಯ, ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ಯುವ ಘಟಕದ ಜಿಲ್ಲಾ ಅಧ್ಯಕ್ಷರು ಗೋವಿಂದರಾಜ್ ಕೆ., ವಕೀಲರಾದ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷರು ಎಚ್.ಬಿ.ರಾಜೇಶ್, ದಲಿತ ಸಂಘರ್ಷ ಸಮಿತಿ ನಗರ ಅಧ್ಯಕ್ಷರು ಲಕ್ಷ್ಮೀನಾರಾಯಣ ಎಸ್.ಅಖಿಲ ಭಾರತ ಡಾಕ್ಟರ್ ಅಂಬೇಡ್ಕರ್ ಪ್ರಚಾರ ಸಮಿತಿ ನಗರ ಅಧ್ಯಕ್ಷರು ಮನು ಟಿ ದಲಿತ ಸಂಘರ್ಷ ಸಮಿತಿ ನಾಗರ ಉಪಾಧ್ಯಕ್ಷರು ಮಾರುತಿ ಸಿ ನರಸಿಂಹರಾಜ ಏ.ಡಿ ಅಖಿಲ ಭಾರತ…

Read More

ತಿಪಟೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರು ವ್ಯಾಪಾರ ಮಾಡುವ ಸ್ಥಳಗಳಲ್ಲಿ ಈರುಳ್ಳಿ ಚೀಲಗಳನ್ನು ಇಟ್ಟು ವ್ಯಾಪಾರಕ್ಕೆ ತೊಂದರೆ ನೀಡಲಾಗುತ್ತಿದೆ ಎಂದು ಇಲ್ಲಿನ ವ್ಯಾಪಾರಿಗಳು ಆರೋಪಿಸಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರೂ ಅವರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ಕೇಳಿ ಬಂದಿದೆ. ರೈತರು ತಾವು ಬೆಳೆದ ಬೆಳೆಗಳನ್ನು ತಂದು ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿ ಕೊಳೆತ ಈರುಳ್ಳಿಗಳನ್ನು ರಾಶಿ ಹಾಕಲಾಗಿದ್ದು, ಇದರಿಂದಾಗಿ ವ್ಯಾಪಾರ ಮಾಡಲು ಅನಾನುಕೂಲವಾಗಿದೆ. ಈರುಳ್ಳಿ ಕೊಳೆತು ದುರ್ವಾಸನೆ ಹರಡಿದ್ದು, ಮಾರುಕಟ್ಟೆಗೆ ಆಗಮಿಸುತ್ತಿರುವ ಗ್ರಾಹಕರು ಕೂಡ ಛೀ. ಥೂ ಎನ್ನುವಂತಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ದಿನೇ ದಿನೇ ಮಧ್ಯವರ್ತಿಗಳ ಕಾಟ ಕೂಡ ಹೆಚ್ಚಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಇನ್ನೊಂದೆಡೆ ವ್ಯಾಪಾರ ಮಾಡಲು ಕೂಡ ಅನಾನುಕೂಲ ಸೃಷ್ಟಿಯಾಗುತ್ತಿರುವುದರಿಂದಾಗಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಅವ್ಯವಸ್ಥೆಯ ಸಂಬಂಧ ಎಪಿಎಂಸಿ ಅಧ್ಯಕ್ಷ ದಿವಾಕರ್ ಅವರಿಗೆ ದೂರು ನೀಡಿದರೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದು, ತಕ್ಷಣವೇ ಈ…

Read More

ಸಿರಾ: ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅವರು ಇಂದು ಶಿರಾ ಬಿಜೆಪಿ ಕಾರ್ಯಾಲಯದಲ್ಲಿ  ಕನಕ ಜಯಂತಿ ಆಚರಣೆ ಮಾಡಿದರು. ಕನಕದಾಸರ ಭಾವ ಚಿತ್ರಕ್ಕೆ ಹೂವಿನ ಹಾರ ಅರ್ಪಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕನಕದಾಸರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಮಹಿಳಾ ಕಾರ್ಯಕರ್ತರು ಮುಂತಾದವರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More