Subscribe to Updates
Get the latest creative news from FooBar about art, design and business.
- CEC ಜ್ಞಾನೇಶ್ ಕುಮಾರ್ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
- ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
- ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
- ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
- ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
- ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
- ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
- ಬುಡುಬುಡಿ ವೇಷಧಾರಿ ಕಳ್ಳರ ಬಂಧನ
Author: admin
ಸರಗೂರು: ಅಮಾಯಕ ಹಾಡಿ ಜನರ ಮೇಲೆ ಅರಣ್ಯ ಇಲಾಖೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ಖಂಡಿಸಿ, ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ಹಾಡಿ ಜನರೊಂದಿಗೆ ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೊಳೆಯೂರು ವನ್ಯ ಜೀವಿ ವಲಯದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ದೂರು ದಾಖಲಿಸಿ, ಇಬ್ಬರನ್ನು ಬಂಧಿಸಿದ್ದಾರೆ. ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿದ್ದಾರೆ ಎನ್ನುವುದು ಅರಣ್ಯ ಇಲಾಖೆ ದೂರು. ಆದರೆ ಹಾಡಿ ಜನತೆ ಜಿಂಕೆಯನ್ನು ಕೊಂದು ತಿಂದಿಲ್ಲ. ಕೆಬ್ಬೇಪುರ ಹಾಡಿ ಅರಣ್ಯದಂಚಿನಲ್ಲಿದ್ದು, ಜಿಂಕೆಯೊಂದು ಹಾಡಿಗೆ ಬಂದಿದೆ. ಹಾಡಿಯಲ್ಲಿದ್ದ ನಾಯಿಗಳು, ಜಿಂಕೆ ಮೇಲೆ ದಾಳಿ ನಡೆಸಿ ಕೊಂದು ತಿಂದಿವೆ. ಆದರೆ ಈ ಬಗ್ಗೆ ಸರಿಯಾಗಿ ವಿಚಾರಣೆ ನಡೆಸದ ಅರಣ್ಯಾಧಿಕಾರಿ ಪುಟ್ಟರಾಜು, ಹಾಡಿಯ 16 ಮಂದಿ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಮೂವರನ್ನು ಬಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 26 ರಂದು ಘಟನೆ ನಡೆದಿದೆ. ದೂರು ದಾಖಲಾದ ಅಂದಿನಿಂದ ಹಾಡಿ ಜನತೆ…
ಸರಗೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ಮರದ ಚೇಗಿನ ತುಂಡುಗಳನ್ನು ಅರಣ್ಯಧಿಕಾರಿಗಳು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಇಲ್ಲಿನ ಕಲ್ಲಹಳ್ಳ ಗ್ರಾಮದ ಬಳಿ ನಡೆಸಿದೆ. ರಾಜು(40) ಹಾಗೂ ರಮೇಶ್(37) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಈ ಪ್ರಕರಣದ ಇನ್ನಿತರ ಮೂವರು ಆರೋಪಿಗಳಾದ ದಾಸ(28), ಕುಮಾರ(30) ಶಿವು(25 ವರ್ಷ ತಲೆ ಮರೆಸಿಕೊಂಡ ಆರೋಪಿಗಳಾಗಿದ್ದಾರೆ. ಶ್ರೀಗಂಧದ ಮರದ ಚೇಗಿನ ತುಂಡುಗಳನ್ನು ಸಾಗಿಸಲಾಗುತ್ತಿರುವ ಬಗ್ಗೆ ಖಚಿತ ಮಾಹಿತಿಮೇರೆಗೆ ವಿಶೇಷ ಹುಲಿ ಸಂರಕ್ಷಣಾ ದಳ ಪ್ಲಟೂನ್-02 ಹ್ಯಾಂಡ್ ಪೋಸ್ಟ್ ಪ್ರಭಾರ ವಲಯ ಅರಣ್ಯಧಿಕಾರಿಗಳಾದ ನವೀನ್ ಕುಮಾರ್ ಅಶೋಕ ಚಿಕ್ಕಗಡೆ ರವರ ನೇತೃತ್ವದಲ್ಲಿ, ಕಲ್ಲಹಳ್ಳ ಗ್ರಾಮದ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಮರ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳೆಲ್ಲರೂ ಕಾಂತನ ಹಾಡಿ ಸರಗೂರು ತಾಲೂಕಿನವರಾಗಿರುತ್ತಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳು ಹಾಗೂ ಜಪ್ತಿ ಮಾಲಿನ ಸಮೇತ ಮೊಳೆಯೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿಗಳ ರವರ ಕಚೇರಿಗೆ ಹಸ್ತಾಂತರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ…
ತಿಪಟೂರು : ಅಭಿವೃದ್ಧಿಯಲ್ಲಿ ಶೂನ್ಯ. ಕಳೆದ ಚುನಾವಣೆಯಲ್ಲಿ ಜನರಿಗೆ ಅನೇಕ ಸುಳ್ಳು ಭರವಸೆ ನೀಡಿ ಶಾಸಕರನ್ನು ಹೈಜಾಕ್ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಸದಾ ವಿವಾದಗಳನ್ನು ಸೃಷ್ಠಿಸುತ್ತಾ ಜನರ ಮನಸ್ಸಿಗೆ ಘಾಸಿ ಮಾಡಿ ಸದಾ ಒಂದು ಸಮುದಾಯದ ಹಿತ ಕಾಪಾಡುತ್ತಾ ಎಲ್ಲಾ ವರ್ಗದವರ ದಾರಿತಪ್ಪಿಸುತ್ತಿದೆ. ಇದೀಗ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ತಮ್ಮ ಕೋಮುವಾದ ಬಿಂಬಿಸುತ್ತಿದೆ ಎಂದು ತಿಪಟೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಷಡಕ್ಷರಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನದಲ್ಲಿ ಇಂತಹ ದುಸ್ಥಿತಿ ಎಂದೂ ಕಂಡಿಲ್ಲಾ. ಹಿಂದೆ ತಾವು ಬರೆದ ಲೇಖನ ಪಠ್ಯದಲ್ಲಿ ಬಂದರೇ ಹೆಮ್ಮೆಪಡುತ್ತಿದ್ದರು. ಆದರೆ ಈಗ ಪಠ್ಯ ಭಾಗಗಳಿಗೆ ಲೇಖಕರು ಬರೆದ ಪಾಠಗಳನ್ನು ದಯಮಾಡಿ ಸೇರಿಸಬೇಡಿ ಎಂದು ಲೇಖಕರೇ ಪತ್ರ ಬರೆಯುತ್ತಿರುವುದು ದುಸ್ಥಿತಿಯಾಗಿದೆ ಎಂದು ಅವರು ಹೇಳಿದರು. ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ ಜ್ಞಾನಜ್ಯೊತಿ ಬಸವಣ್ಣ ಧರ್ಮವನ್ನು ಸುಧಾರಿಸಿದರು ಎಂದು ಸೇರಿಸುವ ಮಟ್ಟಕ್ಕೆ ಇಳಿದಿದ್ದಾರೆಂದರೇ ಜನ ಯೋಚಿಸಬೇಕು.…
ಕೊರಟಗೆರೆ: ಶಿಕ್ಷಣ, ಆರೋಗ್ಯ,ಕೃಷಿ, ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರ ಹೆಚ್ಚಿನ ಆದ್ಯತೆಯ ಅನುದಾನ ಮೀಸಲಿಡಬೇಕಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಆಗ್ರಹಿಸಿದರು. ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಬೈರೇನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ತಾಲ್ಲೂಕು ಪಂಚಾಯತ್ ಯಿಂದ ಸೋಮವಾರ ಏರ್ಪಡಿಸಲಾಗಿದ್ದ ಗಂಗಾಕಲ್ಯಾಣ ಯೋಜನೆಯಡಿ ಮೋಟಾರುಪಂಪು ವಿತರಣೆ ಮತ್ತು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ದೇಶದ ರೈತಾಪಿವರ್ಗ ಮಳೆಯನ್ನೇ ಆಧರಿಸಿ ವ್ಯವಸಾಯ ಮಾಡ್ತಾರೇ. ನೀರಾವರಿ ಯೋಜನೆಗೆ ಈಗಾಗಲೇ ಹತ್ತಾರು ಕಾಮಗಾರಿ ನಡೆಯುತ್ತಿದೆ. ಎತ್ತಿನಹೊಳೆ ಯೋಜನೆಯಿಂದ ಕೊರಟಗೆರೆ ತಾಲೂಕಿನ 109ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ರೈತಾಪಿವರ್ಗ ಕೃಷಿ ಚಟುವಟಿಕೆ ಮಾಡಲು ಅನುಕೂಲ ಆಗಲಿದೆ ಎಂದು ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ 15, ವಾಲ್ಮೀಕಿ ಅಭಿವೃದ್ದಿ ನಿಗಮದಿಂದ 16, ಆದಿಜಾಂಭವ ಅಭಿವೃದ್ದಿ ನಿಗಮದಿಂದ 10, ತಾಂಡ ಅಭಿವೃದ್ದಿ ನಿಗಮದಿಂದ 2 ಸೇರಿ ಒಟ್ಟು 2018-19ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ 43ಫಲಾನುಭವಿಗಳಿಗೆ ಮೋಟಾರ್ ಪೈಪ್ ಮತ್ತು ಪರಿಕರ ಹಾಗೂ…
ಮೈಸೂರು: ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕೇಂದು ಒತ್ತಾಯಿಸಿ ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗುತ್ತಾ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಮುಂಭಾಗ ಪ್ರತಿಭಟನೆ ಮಾಡಲಾಯಿತು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇದ್ದಕ್ಕಿದ್ದ ಹಾಗೆ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು ಕೂಡಲೇ ಪಾವತಿ ಮಾಡಬೇಕೆಂದು ಆದೇಶ ಹೊರಡಿಸಿರುವ ಆಡಳಿತ ವ್ಯವಸ್ಥೆಗೆ ಧೋರಣೆಯನ್ನು ತೀವ್ರವಾಗಿ ಖಂಡಿಸಿ, ಕರ್ನಾಟಕ ರಾಜ್ಯ ಸಂಶೋಧಕ ಸಂಘದ ಅಧ್ಯಕ್ಷರಾದ ಮರಿದೇವಯ್ಯ.ಎಸ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು, 2021/22ನೇ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಸಂದರ್ಭದಲ್ಲಿ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ಸರ್ಕಾರದ ಆದೇಶದ ಅನುಸಾರ ಉಚಿತವಾಗಿ ಪ್ರವೇಶಾತಿಯನ್ನು ನೀಡಿದ್ದು, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಬಂದಾಗ ಪ್ರವೇಶ ಶುಲ್ಕವನ್ನು ಕಡಿತ ಮಾಡಿಕೊಳ್ಳಬೇಕಿತ್ತು. ಆದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಬರುವ ಮುಂಚೆಯೇ ಎಲ್ಲರೂ ಪ್ರವೇಶ ಶುಲ್ಕ ಮತ್ತು ಪರೀಕ್ಷಾ ಶುಲ್ಕವನ್ನು 31/05/2022ರಂದು ಕಡೆಯ ದಿನದ ಒಳಗೆ ಕಟ್ಟಬೇಕೆಂದು…
ತಿಪಟೂರು: ತಾಲ್ಲೂಕಿನ ಗುರುಗದಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶ್ರೀಮತಿ ಶೈಲಾ ಮತ್ತು ಉಪಾಧ್ಯಕ್ಷರಾಗಿ ಎಚ್.ಎಂ.ನಾಗರಾಜ್ ಅವಿರೋಧ ಆಯ್ಕೆಯಾಗಿದ್ದಾರೆ. ಸದಸ್ಯರಾದ ಶಶಿಧರ್, ನರಸಿಂಹಮೂರ್ತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಶಶಿಧರ್, ಚಂದ್ರಶೇಖರ್, ಮಾಜಿ ಸದಸ್ಯ ದರ್ಶನ್ ಪಟೇಲ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ (ಎಲ್ಐಸಿ), ರಾಜು, ಪ್ರಸನ್ನ ಕುಮಾರ್, ಸೋಮಶೇಖರ್, ಜೀವನ್ ಕುಮಾರ್, ಮಂಜುನಾಥ್, ಶಿವರ ಹಾಲಿನ ಡೈರಿಯ ಅಧ್ಯಕ್ಷ ಗುರುಸಿದ್ದಯ್ಯ, ಉಪಾಧ್ಯಕ್ಷ ಕರಿಯಪ್ಪ,ಶೇಖರಯ್ಯ,ಶಂಕ್ರಪ್ಪ, ದೇವೇಗೌಡ,ಮಂಜುನಾಥ್ ಮತ್ತು ಬಸವರಾಜ್ ಸೇರಿದಂತೆ ಹಲವು ಮುಖಂಡರುಗಳು ಹಾಜರಿದ್ದು,ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋವಳಿಯ ನೀಲಮ್ಮನಹಳ್ಳಿ ಗ್ರಾಮದ ಆಕರ್ಷಣೆ ವಿದ್ಯಾ ಸಂಸ್ಥೆ ಬಲ್ಲೇನಹಳ್ಳಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಎಸ್. ತಮ್ಮಪ್ಪನವರು ನಿವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಸಿಬ್ಬಂದಿ ಬೀಳ್ಕೊಡುಗೆ ಸಮಾರಂಭ ಆಯೋಜಿಸುವ ಮೂಲಕ ಎಸ್. ತಮ್ಮಪ್ಪನವರ ಸೇವೆಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ತಮ್ಮಪ್ಪನವರು, ಆಕರ್ಷಣೆ ಸಂಸ್ಥೆಯ ಕುರಿತು ಮಾತನಾಡಿ, ಸುಮಾರು 30ವರ್ಷಗಳಿಂದ ಶಾಲೆ ಮೇಲ್ಛಾವಣಿ ಇಲ್ಲದೇ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಕಷ್ಟಪಡುವಂತಾಗಿತ್ತು. ಈ ಸಮಸ್ಯೆಗಳನ್ನು ಕಂಡ ನೀಲಮ್ಮನಹಳ್ಳಿ ಆಧಿಶೇಷ ಮತ್ತು ಛಲಪತಿ ಹಾಗೂ ಭೂಶಪ್ಪ ಇವರು ಹೆಂಚಿನ ಮನೆ ಕೊಟ್ಟು ಮಕ್ಕಳಿಗೆ ಶಿಕ್ಷಣ ನೀಡಲು ವ್ಯವಸ್ಥೆ ಮಾಡಿಕೊಟ್ಟರು. ಈ ಸಂಸ್ಥೆಯ ಕಾರ್ಯದರ್ಶಿಗಳಾದ ಬಲರಾಮಯ್ಯ ಇವರು ಶಾಲೆಗೆ 3 ಎಕರೆ ಜಮೀನು ನೀಡಿದರು. ಈ ಶಾಲೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾನ್ಯತೆ ನೀಡಿದರು ಎಂದು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಹೆಚ್ಚಿನ ಅಂಕ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಠ್ಯ ಪುಸ್ತಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯಾದವ…
ಬೆಂಗಳೂರು: ಇದೀಗ 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಪಾಠದಲ್ಲಿ ಕೆಲವು ಬದಲಾವಣೆ ಮಾಡಿರುವುದಕ್ಕೆ ಲಿಂಗಾಯಿತ ಸಮುದಾಯದ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 9ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರು ಉಪನಯನದ ನಂತರ ಕೂಡಲಸಂಗಮಕ್ಕೆ ಹೋದರು ಎಂದು ಬರೆಯಲಾಗಿದೆ. ಆದರೆ ತನ್ನ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ತನಗ್ಯಾಕೆ ಎಂದು ಧಿಕ್ಕರಿಸಿ ಬಸವಣ್ಣನವರು ಕೂಡಲ ಸಂಗಮಕ್ಕೆ ಹೋದರು ಎಂಬುದು ಇತಿಹಾಸ. ಶೈವ ಗುರುಗಳ ಸಾನ್ನಿಧ್ಯದಲ್ಲಿ ಲಿಂಗದೀಕ್ಷೆ ಪಡೆದರು ಎಂದು ಬರೆದಿರುವುದು ತಪ್ಪು. ಶೈವ ಗುರುಗಳು ಗುಡಿ ಸ್ಥಾವರ ಲಿಂಗಾರಾಧಕರು ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು? ಇಷ್ಟಲಿಂಗ ಬಸವಣ್ಣನವರ ಪರಿಕಲ್ಪನೆಯಲ್ಲಿ ಮೂಡಿಬಂದಿರುವುದು.. ಹೀಗೆ ಬಸವಣ್ಣನವರ ಬಗ್ಗೆ ಹಲವು ತಪ್ಪು ವಿಚಾರಗಳನ್ನು ಪಠ್ಯದಲ್ಲಿ ಸೇರಿಸಿರುವುದು ಖಂಡನೀಯ ಎಂದು ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಠ್ಯ ಪುಸ್ತಕದಲ್ಲಿನ ಈ ಅನೈತಿಹಾಸಿಕ ತಪ್ಪುಗಳನ್ನು ಸರಿಪಡಿಸಿ ಇಲ್ಲವಾದರೆ ಲಿಂಗಾಯತ ಸಮುದಾಯದ ಮಠಾಧೀಶರು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಪಾವಗಡ: ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ಅವರನ್ನು ಅಮಾನತುಗೊಳಿಸಬೇಕು ಎಂದು ತಾಲೂಕಿನ ವೈ .ಎನ್. ಹೊಸಕೋಟೆ ಹೋಬಳಿ ಪೋತಗಾನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ಮಾಧವ ರಾಜ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಹೊರಗುತ್ತಿಗೆ ಕರವಸೂಲಿ ನೌಕರ ಜಿ.ಮಂಜುನಾಥ್ ರವರು ಈ ಹಿಂದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿ ತಮ್ಮ ಸ್ವಂತ ಖಾತೆಗೆ ಹಣ ಹಾಕಿಕೊಂಡು ಲೋಕಾಯುಕ್ತ ತನಿಖೆ ವೇಳೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ 2015ರಲ್ಲಿ ಕೇಸ್ ದಾಖಲಾಗಿದ್ದು , ಕೇಸ್ ದಾಖಲಾದ ನಂತರ ದಿನಾಂಕ 7:10 2015ರಂದು ಅವರನ್ನು ಗ್ರಾಮ ಪಂಚಾಯಿತಿಯಿಂದ ಬಿಡುಗಡೆಗೊಳಿಸಿದ್ದರು. ಆದರೆ ಆನಂತರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮಂಜುನಾಥ್ ಅವರನ್ನು ಕೊಡಮಡಗು ಗ್ರಾಮ ಪಂಚಾಯಿತಿಯ ಕರವಸೂಲಿಗಾರ ರಾಗಿ ನೇಮಿಸಿದ್ದರು ಎಂದರು. 2021ರಲ್ಲಿ ಮತ್ತೆ ರಾಜಕೀಯ ಪ್ರಭಾವ ಬೆಳೆಸಿ, ಪೋತಗಾನಹಳ್ಳಿ ಹಳ್ಳಿ ಗ್ರಾಮ ಪಂಚಾಯಿತಿಗೆ ಅವರು ಮರು ಆದೇಶದೊಂದಿಗೆ ವಾಪಸ್ ಆಗಿದ್ದು, ಲೋಕಾಯುಕ್ತ ನ್ಯಾಯಾಲಯದಲ್ಲಿ…
ಮೈಸೂರು: ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಭಯ ಕಾಡುತ್ತಿದೆ. ಹೀಗಾಗಿ ಪದೇ ಪದೇ ಅನಗತ್ಯ ಆರೋಪಗಳನ್ನು ಮಾಡುತ್ತಿರುತ್ತಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಃಪತನದಲ್ಲಿದೆ. ಆದ್ದರಿಂದ ಸಿದ್ದರಾಮಯ್ಯ ಕೆಲಸಕ್ಕೆ ಬಾರದ ಟ್ವೀಟ್ ಗಳನ್ನು ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ನ್ನು ದೊಡ್ಡ ದನಿಯಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ, ವಕ್ತಾರರಾಗಿದ್ದ ಬ್ರಿಜೇಶ್ ಕಾಳಪ್ಪ ಆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ ಎಂದು ಅವರು ತಿರುಗೇಟು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5