Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ, ಅಮೂಲ್ಯ ಪುಸ್ತಕ ಪ್ರಕಾಶನದ ಸಹಯೋಗದಲ್ಲಿ ಡಾ.ನಾಗರಾಜು ಜಿ.ಬಿ ಬೈರೇನಹಳ್ಳಿ ಅವರ ‘ತಲೆಗೆ ಬಿದ್ದ ಏಟು’ ಕೃತಿ ಬಿಡುಗಡೆ ಸಮಾರಂಭವನ್ನು ಜು.5ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಹಿರಿಯ ಸಾಹಿತಿ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಕೃತಿ ಬಿಡುಗಡೆಗೊಳಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಹಾಗೂ ಲೇಖಕ ಚ.ಹ. ರಘುನಾಥ್, ಜಿಲ್ಲಾ ಲೇಖಕಿಯರ ಸಂಘದ ನಿಕಟಪೂರ್ವ ಅಧ್ಯಕ್ಷೆ ಮಲ್ಲಿಕಾ ಬಸವರಾಜ ಕೃತಿಯ ಕುರಿತು ಮಾತನಾಡುವರು. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಆಶಾರಾಣಿ ಬಗ್ಗನಡು, ಅಮೂಲ್ಯ ಪುಸ್ತಕ ಪ್ರಕಾಶನದ ಕೃಷ್ಣ ಚೆಂಗಡಿ, ತಲೆಗೆ ಬಿದ್ದ ಏಟು ಕೃತಿಯ ಲೇಖಕ ಡಾ.ನಾಗರಾಜು ಜಿ.ಬಿ ಬೈರೇನಹಳ್ಳಿ ಉಪಸ್ಥಿತರಿರುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕೊರಟಗೆರೆ: ತಾಲ್ಲೂಕಿನ ಹನುಮಂತಪುರ ಗ್ರಾಮಸ್ಥರನ್ನು 4 ದಿನಗಳಿಂದ ಸಾರ್ವಜನಿಕರನ್ನು ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬೆಚ್ಚಿಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸಿಸಿ ಕ್ಯಾಮೆರಾದಲ್ಲಿ ನಾಯಿ ಹೊತ್ತೊಯ್ಯುವ ದೃಶ್ಯ ಸೆರೆಯಾಗಿದ್ದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಹನುಮಂತಪುರ ಗ್ರಾಮದ ಸರ್ವೇ ನಂ. 8/9, 10 ಹಾಗೂ 6ರಲ್ಲಿರುವ ಎಲೆರಾಂಪುರ ನಿವಾಸಿ ರಾಜಣ್ಣ ಅವರ ಬುದ್ಧನ ಮನೆ ವಾಲ್ಮೀಕಿ ವನ ಫಾರ್ಮ್ ಹೌಸ್ ಬಳಿ ಚಿರತೆ ದಾಳಿ ನಡೆಸಿ ನಾಯಿಯನ್ನು ಹೊತ್ತೊಯ್ದಿತ್ತು. ಈ ಭಯಾನಕ ದೃಶ್ಯ ಫಾರ್ಮ್ ಹೌಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ತಕ್ಷಣ ಎಚ್ಚೆತ್ತ ರಾಜಣ್ಣ ಅವರು ಕೊರಟಗೆರೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಫಾರ್ಮ್ ಹೌಸ್ ಬಳಿ ಬೋನು ಅಳವಡಿಸಿದ್ದರು. ಬೋನಿಗೆ ಬಿದ್ದಿದ್ದು ಯಾವಾಗ.? ಜೂನ್ 29ರ ಮುಂಜಾನೆ ಸುಮಾರು 4 ಗಂಟೆಗೆ ಬೋನಿನೊಳಗೆ ಕೋಳಿ ತಿನ್ನಲು ಬಂದ ಚಿರತೆ ಸೆರೆಯಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ,…
ತುಮಕೂರು: ಹಿರಿಯ ಪತ್ರಕರ್ತ, ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ (45) ಅವರು ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ನಿಧನರಾದರು. ಇವರು ಪತ್ನಿ ಅನಿತಾ, ಪುತ್ರಿ ಆಧ್ಯಶ್ರೀ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ಈಶ್ವರ್ ಅವರ ಸ್ವಗ್ರಾಮ ಆಂಧ್ರಪ್ರದೇಶದ ಹೇಮಾವತಿ ಬಳಿಯ ಕೆಂಕೆರೆಯಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ನಗರದ ಪತ್ರಿಕಾ ಭವನ ಬಳಿ ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರ ಇಡಲಾಗಿತ್ತು. ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಲ್. ಯೋಗೇಶ್, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಖಜಾಂಚಿ ಹಾರೋಗೆರೆ ಸತೀಶ್ ಹಾಗೂ ಪದಾಧಿಕಾರಿಗಳು, ಪತ್ರಿಕೋದ್ಯಮಿ ಡಾ.ಎಸ್. ನಾಗಣ್ಣ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಆರ್. ಕಾಮರಾಜ್, ಚಿ.ನಿ. ಪುರುಷೋತ್ತಮ್, ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಕರುಣಾಕರ್, ಪ್ರಧಾನ ಕಾರ್ಯದರ್ಶಿ…
ಕೊರಟಗೆರೆ: ತಾಲ್ಲೂಕಿನ 2026–27 ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯನ್ನು ಜಾರಿಗೊಳಿಸಿದ್ದು, ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತ ಬಾಂಧವರು ಶೇಂಗಾ(ನೀ), ತೊಗರಿ(ಮ.ಆ), ಬೆಳೆಗಳಿಗೆ ಜುಲೈ15, ಮುಸುಕಿನ ಜೋಳ(ಮ.ಆ) ಮತ್ತು ಮುಸುಕಿನ ಜೋಳ(ನೀ) ಬೆಳೆಗಳಿಗೆ ಜುಲೈ 31, ಹಾಗೂ ಭತ್ತ(ನೀ), ಶೇಂಗಾ(ಮ.ಆ), ರಾಗಿ(ಮ.ಆ), ರಾಗಿ(ನೀ) ಮತ್ತು ಹುರುಳಿ(ಮ.ಆ) ಬೆಳೆಗಳಿಗೆ ಆಗಸ್ಟ್ 14 ಬೆಳೆವಿಮೆಗೆ ನೋಂದಾಯಿಸಿಕೊಳ್ಳಲು ಕಡೆ ದಿನಾಂಕವಾಗಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕರಾದ ಕಲ್ಲೇಶ್ ಪ್ರಸಾದ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ತಾಲ್ಲೂಕಿನಲ್ಲಿ ಸುಮಾರು 513 ಜನ ರೈತರು ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೊಂದಾಯಿಸಿದ್ದು , ಬ್ಯಾಂಕ್ ಗಳಲ್ಲಿ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರು ಭತ್ತ, ಶೇಂಗಾ, ರಾಗಿ ಮತ್ತು ಹುರುಳಿ ಬೆಳೆಗಳಗೆ ಬೆಳೆ ವಿಮೆ ನೊಂದಾಯಿಸಿಲು ಆಗಸ್ಟ್ 14 ಕೊನೆ ದಿನಾಂಕ ಆಗಿರುತ್ತದೆ. ಆದ್ದರಿಂದ ರೈತರು…
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ಕೊರಟಗೆರೆ: ಗಡಿಭಾಗಗಳ ಕನಸಿನ ಕೂಸಾದ ರೈಲು ಸಂಚಾರಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ತುಮಕೂರು-ರಾಯದುರ್ಗ ಮಾರ್ಗದ ರೈಲ್ವೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಭಾಗದ ಸಾರ್ವಜನಿಕರ ಕನಸು ನನಸಾಗುವ ದಿನಗಳು ಬಂದಂತೆ ಕಾಣಿಸುತ್ತದೆ. ತುಮಕೂರು–ರಾಯದುರ್ಗ ಹೊಸ ರೈಲು ಮಾರ್ಗದ ಯೋಜನೆಯನ್ನ 2012ರಲ್ಲಿ ಆರಂಭಿಸಲಾಯಿತ್ತು. ಒಟ್ಟು 206 ಕಿ.ಮೀ. ಉದ್ದದ ಲೈನ್ ಆಗಬೇಕಿದೆ. ಸುಮಾರು 1850 ಕೋಟಿ ವೆಚ್ಚದಲ್ಲಿ ಕ್ರಿಯಾ ಯೋಜನೆ ಘೋಷಿಸಿದ್ದರೂ, ಆ ನಂತರ 2,500 ಕೋಟಿಗೆ ಏರಿಸಲಾಗಿದೆ. ನೆರೆಯ ಆಂಧ್ರ ಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ 125 ಕಿ.ಮೀ ವರೆಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡು ಕೆ.ರಾಮಪುರ ರೈಲ್ವೆ ನಿಲ್ದಾಣದವರೆಗೆ ಹಳಿ ಜೋಡಣೆ ಹಾಗೂ ಪ್ರಾಯೋಗಿಕವಾಗಿ ರೈಲು ಸಂಚಾರ ಮಾಡಲಾಗಿದೆ. ಕೆ.ರಾಮಪುರ ನಿಲ್ದಾಣದಿಂದ ಮಧುಗಿರಿ, ಕೊರಟಗೆರೆ, ತುಮಕೂರುವರೆಗೆ 81 ಕಿ.ಮೀ ವರೆಗೂ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಲ್ಲಿಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಈಗಾಗಲೇ ಮಾರ್ಗದ ಮಧ್ಯೆ ಇರುವ ಗಿಡ, ಮರ ಸೇರಿದಂತೆ ಪೆಟ್ಟಿಗೆ ಅಂಗಡಿಗಳನ್ನ ತೆರವು ಮಾಡಲಾಗುತ್ತಿದೆ.…
ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಅಶೋಕ್ ಕೆ.ವಿ ಹೇಳಿದರು. ನಗರದ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರು ಸುಮಾರು 22 ದೇವಸ್ಥಾನ ಕಳ್ಳತನ ಪ್ರಕರಣಗಳನ್ನು ಒಟ್ಟು 6 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿ, ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣಗಳ ಮಾಹಿತಿ ನೀಡಿದರು. ಪ್ರಕರಣ 1: 22 ದೇವಸ್ಥಾನ ಕಳತನ ಪ್ರಕರಣಗಳ ಭೇದಿಸಿದ ಪೊಲೀಸರು: ದರೋಡೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ 6 ಮಂದಿ ಆರೋಪಿಗಳನ್ನು ತುರುವೇಕೆರೆ ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಹಲವು ಜಿಲ್ಲೆಗಳಲ್ಲಿ ನಡೆದ 22 ದೇವಸ್ಥಾನ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಜೂ. 19ರಂದು ತಾಲೂಕು ಸಮೀಪದ ಜೋಡುಗಟ್ಟೆ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತುಮಕೂರು, ಚನ್ನರಾಯಪಟ್ಟಣ, ನಾಗಮಂಗಲ ಸೇರಿದಂತೆ ವಿವಿಧ…
ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ, ತಾಲ್ಲೂಕಿನ ಮಣಕಿಕೆರೆ ಗ್ರಾಮದ ಶ್ರೀ ಕರಿಯಮ್ಮದೇವಿ ಕಲ್ಯಾಣ ಮಂಟಪದ ಆವರಣದಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ತಾಲ್ಲೂಕಿನ ಕುಮಾರ್ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಶ್ರೀಧರ್ ಅವರ ನೇತೃತ್ವದಲ್ಲಿ ಈ ಶಿಬಿರವು ಆಯೋಜನೆಗೊಂಡಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಶ್ರೀಧರ್ ಅವರು, “ಸಪ್ತ ವ್ಯಸನಗಳಲ್ಲಿ ಅತ್ಯಂತ ಅಪಾಯಕಾರಿಯಾದ ಮದ್ಯವ್ಯಸನವು ಕೇವಲ ವ್ಯಸನಿಯ ಆರೋಗ್ಯವನ್ನು ಮಾತ್ರವಲ್ಲದೆ, ಇಡೀ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುತ್ತದೆ. ಈ ಗಂಭೀರ ಪರಿಸ್ಥಿತಿಯನ್ನು ಅರಿತ ಪೂಜ್ಯ ಖಾವಂದರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮದ್ಯದಂಗಡಿಗಳನ್ನು ಮುಚ್ಚಿಸುವ ಬದಲು ಮದ್ಯಪಾನಿಗಳಲ್ಲಿ ಅಂತರಾಳದ ಶುದ್ಧೀಕರಣ ಉಂಟುಮಾಡಿದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ ಎಂಬುದನ್ನು ಮನಗಂಡರು. ಭಗವಾನ್ ಮಂಜುನಾಥ ಸ್ವಾಮಿಯ ಕೃಪೆಯಿಂದ 1992ರಲ್ಲಿ ಬೆಳ್ತಂಗಡಿಯಲ್ಲಿ ಆರಂಭವಾದ ಈ ಮದ್ಯವರ್ಜನ ಶಿಬಿರ ಇಂದು ರಾಜ್ಯಾದ್ಯಂತ ದೊಡ್ಡ ಆಂದೋಲನವಾಗಿ…
ತುಮಕೂರು: ಜಿಲ್ಲೆಯ ಖಾಸಗಿ ಆಂಬುಲೆನ್ಸ್ ನಲ್ಲಿ ನಿಗದಿತ ಸೇವಾ ದರ ಪಾಲನೆ, ಆಂಬುಲೆನ್ಸ್ ಗಳ ಪ್ರಸ್ತುತ ಸೇವೆಗಳಲ್ಲಿ ನಡೆಯುತ್ತಿರುವ ಅನಿಯಮಗಳನ್ನು ತಡೆಗಟ್ಟಿ, ಶುಲ್ಕ ನಿಯಂತ್ರಣ ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಕಾಪಾಡುವ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು. ಸಂಘದ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಯ್ಯ ಹಾಗೂ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆಡಳಿತಾಧಿಕಾರಿಗೆ ಮನವಿಪತ್ರ ಸಲ್ಲಿಸಿ, ಜಿಲ್ಲೆಯ ಆಂಬುಲೆನ್ಸ್ಗಳ ಸೇವಾ ಚಟುವಟಿಕೆಗಳನ್ನು ಪರಿಶೀಲಿಸಿ, ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಒದಗಿಸಬೇಕಾದ ಸೇವೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿ ನಿಯಮ ರೂಪಿಸಿ ಜಾರಿ ಮಾಡಬೇಕು ಎಂದು ಕೋರಿದರು. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳು ಹಾಗೂ ಅವರ ಕುಟುಂಬದವರು ಮಾನಸಿಕವಾಗಿ ಕುಗ್ಗಿರುವ ಸಂದರ್ಭವನ್ನು ದುರುಪಯೋಗ ಪಡಿಸಿಕೊಂಡು ಹೆಚ್ಚಿನ ಹಣವನ್ನು ಒತ್ತಾಯ ಪೂರ್ವಕವಾಗಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಕೆಲವು ಸಂದರ್ಭಗಳಲ್ಲಿ ರೋಗಿಯ ಅಥವಾ ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ನಿರ್ದಿಷ್ಟ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ ಎಂಬ ಆರೋಪಗಳೂ ಇವೆ. ಈ…
ಕೊರಟಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯಾದ್ಯಂತ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಆನ್ ಲೈನ್ ಜಾಗೃತಿ ಕಾರ್ಯಕ್ರಮವು ಮಂಗಳವಾರ ಕೊರಟಗೆರೆ ತಾಲೂಕಿನ ನಾಲ್ಕು ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು. ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ 1,000ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಸುಮಾರು 1.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಭಾಗವಹಿಸಿದರು. ತಾಲ್ಲೂಕಿನ ಪ್ರಿಯದರ್ಶಿನಿ ಪಿಯು ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು (ಹೊಳವನಹಳ್ಳಿ), ಸರ್ಕಾರಿ ಪ್ರೌಢಶಾಲೆ (ಇರಕಸಂದ್ರ ಕಾಲೊನಿ) ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು (ತೀತ) ಕೇಂದ್ರಗಳಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿವಿಧ ಕೇಂದ್ರಗಳಲ್ಲಿ ಪೊಲೀಸ್ ಅಧಿಕಾರಿಗಳು, ಪ್ರಾಂಶುಪಾಲರು, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯರು, ಯೋಜನೆಯ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಬೆಂಗಳೂರು ಎಸ್ ಪಿ ಡಾ. ವೆಂಕಟೇಶ್ ಪ್ರಸನ್ನ ಹಾಗೂ ಹೃದ್ರೋಗ ತಜ್ಞ ಡಾ. ದೇವಿ ಪ್ರಸಾದ್ ಶೆಟ್ಟಿ ಅವರು ಮಾದಕ ವ್ಯಸನದ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Special Intensive Revision — SIR ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ 29ಕ್ಕೆ ಮುಕ್ತಾಯವಾಗಲಿದೆ. ಕ್ಷೇತ್ರದ ಮಾಹಿತಿ: ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು 6 ಹೋಬಳಿ, 386 ಗ್ರಾಮ, 2,09,945 ಮತದಾರರು ಹಾಗೂ 240 ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು 240 ಬೂತ್ ಮಟ್ಟದ ಅಧಿಕಾರಿಗಳನ್ನು ಬಿ ಎಲ್ ಒ ನೇಮಿಸಲಾಗಿದೆ. ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್ ಒಗಳು ಮನೆ–ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷ್ಮಿ ಡಿ.ಆರ್., ಕೃಷಿ ಇಲಾಖೆ ಉಪನಿರ್ದೇಶಕ ಡಾ.ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ…