Author: admin

ತುಮಕೂರು:  ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 14ರಂದು ನಗರದ ಟೌನ್‌ಹಾಲ್ ವೃತ್ತದಿಂದ ಮಧ್ಯಾಹ್ನ 12 ಗಂಟೆಯಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆಯನ್ನು ಏರ್ಪಡಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್.ಕೃಷ್ಣಪ್ಪ ಅವರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ರಾತ್ರಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆಯನ್ನು ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಸ್ಥಳೀಯ ಕಲಾ ತಂಡಗಳಿಂದ ಪ್ರದರ್ಶನ ಏರ್ಪಡಿಸಬೇಕು ಎಂದು ತಿಳಿಸಿದರು. ನಂತರ ಮಹಾನಗರಪಾಲಿಕೆ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ಕಂಚಿನ ಪ್ರತಿಮೆ ಅನಾವರಣಗೊಳಿಸಲು ತಯಾರಿ ಮಾಡಿಕೊಳ್ಳಬೇಕು. ದೇಶದ ಮಹಾನ್ ನಾಯಕರಿಗೆ ಗೌರವ ಸೂಚಿಸುವ ಮಹತ್ವದ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ಸಮುದಾಯ, ಶಾಲಾ–ಕಾಲೇಜು ವಿದ್ಯಾರ್ಥಿಗಳು, ಸಂಘಗಳು ಸೇರಿದಂತೆ ವಿವಿಧ ಸಂಘಟನೆಗಳು ಪಾಲ್ಗೊಳ್ಳುವಂತೆ ವ್ಯವಸ್ಥೆ…

Read More

ತುಮಕೂರು:  ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 9, 15, 17, 20, 22, 24, 25, 28ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನ ತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಹಾಗೂ ಏಪ್ರಿಲ್ 11, 16, 19, 21, 23, 25, 27, 29ರಂದು ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ ಶಾರದಾ ದೇವಿ ನಗರ, ಗಣೇಶ ನಗರ ನಿರ್ವಾಣಿ ಲೇಔಟ್ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಲಕ್ಷಾಂತರ ಹಣ ಕಟ್ಟಿ ಶಿಕ್ಷಣ ಪಡೆಯುವುದು ಕಷ್ಟಕರ ಕೆಲಸವಾಗಿತ್ತು. ಇದನ್ನು ಮನಗಂಡು ಕೋಟನಾಯಕನಹಳ್ಳಿ ಬಳಿ ವಿದ್ಯಾರ್ಥಿಗಳಿಗೆ ಗುರುಕುಲ ಪದ್ದತಿಯಂತೆ ಗುಣಮಟ್ಟದ ಬೋಧನೆಯೊಂದಿಗೆ ಎಸ್.‌ಆರ್‌.ಎಸ್‌. ಕ್ರೋಮ್ ಪಿಯು ಕಾಲೇಜನ್ನು ತೆರೆದೆವು. ಇಂದು ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿರುವುದು ತೃಪ್ತಿಕರವಾಗಿದೆ ಎಂದು ರುದ್ರಮುನಿ ಸ್ವಾಮೀಜಿ ತಿಳಿಸಿದರು. ನಮ್ಮ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಿ.ಕೆ.ಲಕ್ಷ್ಮೀ 10ನೇ ರಾಂಕ್ ಪಡೆದು ಕಾಲೇಜಿಗೆ ಕೀರ್ತಿ ಪತಾಕೆ ಎತ್ತರಕ್ಕೆ ಹಾರಿಸಿದ್ದಾರೆ, ಇದು ಗ್ರಾಮೀಣ ಭಾಗದ ಮಧ್ಯಮ ವರ್ಗದ ವಿದ್ಯಾರ್ಥಿ ಸಾಧನೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ  ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದರು. ವಿದ್ಯಾರ್ಥಿನಿ ನಿ.ಸಿ.ಕೆ.ಲಕ್ಷ್ಮೀ ಮಾತನಾಡಿ,  ನಾನು ಮುಂದೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂದು ತೀರ್ಮಾನಿಸಿದ್ದೇನೆ. ಈ ಕಾಲೇಜಿನ ವಾತಾವರಣ ಬೋಧನೆ ತುಂಬಾ ಚೆನ್ನಾಗಿದೆ ಎಂದು ತಿಳಿಸಿದರು ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಅಂತರ್ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ 2026ಕ್ಕೆ ಉದ್ಘಾಟನೆ ಕೊರಟಗೆರೆ : ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ 160 ಕೋಟಿ ರೂ ವೆಚ್ಚದಲ್ಲಿ ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಡಿ ಭಾಗದಲ್ಲಿ ನಿರ್ಮಾಣಗೊಳ್ಳುತ್ತಿದ್ದು, ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಭರವಸೆಯಂತೆ ಮುಂದಿನ ವರ್ಷ ನಾವು ನೀವೆಲ್ಲರೂ ರಣಜಿ ಕ್ರಿಕೆಟ್ ಟೂರ್ನಿಯನ್ನು ವೀಕ್ಷಿಸಲಿದ್ದೇವೆ ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಭರವಸೆ ನೀಡಿದರು. ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ಭಾನುವಾರ ಆಯೋಜನೆಗೊಂಡಿದ್ದ  ಡಾ.ಬಿ.ಆರ್ ಅಂಬೇಡ್ಕರ್‍ ರವರ 138ನೇ ಜಯಂತಿ ಪ್ರಯುಕ್ತ  ಕೊರಟಗೆರೆ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್  ಹಾಗೂ  “ಪರಮೇಶ್ವರ್ ಕಪ್–2025” ಪಂದ್ಯಾವಳಿ ಸಮಾರಂಭ ಉದ್ದೇಶಿಸಿ ಮಾತನಾಡಿ, ತುಮಕೂರು ವಸಂತ ನರಸಾಪುರದ ಬಳಿ ಮುಂದಿನ ವರ್ಷ ಇಂಟನ್ರ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಗೊಂಡು ರಣಜಿ ಸೇರಿದಂತೆ ಇನ್ನಿತರ ರಾಜ್ಯ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ಟೂರ್ನಿ ನಡೆಯಲಿದೆ ಎಂದರು. ಕ್ರೀಡಾಪಟುವಾಗಿ ಕ್ರೀಡೆಗೆ ನಾನು ಮೊದಲಿನಿಂದಲೂ…

Read More

ಕೊರಟಗೆರೆ: ಸಿದ್ದರಬೆಟ್ಟದ ದಾಸೋಹ ಭವನಕ್ಕೆ ಎರಡು ಮಿನಿ ಕುಡಿಯುವ ನೀರಿನ ಘಟಕಗಳನ್ನ ಕೊಡುಗೆಯಾಗಿ ಸಮಾಜ ಸೇವಕ ವಿ.ನಟರಾಜ್ ನೀಡಿದರು. ಕೊರಟಗೆರೆ ತಾಲೂಕಿನ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ದಾಸೋಹ ಭವನದಲ್ಲಿ ಶುದ್ಧ ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದ ಸುದ್ದಿ ಕೇಳಿದ ತಕ್ಷಣ ಎರಡು ಫಿಲ್ಟರ್ ವಾಟರ್ ಘಟಕಗಳನ್ನು ಸಮಾಜ ಸೇವಕ ವಿ.ನಟರಾಜ್ ತಮ್ಮ ಕುಟುಂಬದ ಪರವಾಗಿ ಕೊಡುಗೆಯಾಗಿ ನೀಡಿದ್ದಾರೆ. ಕ್ಷೇತ್ರಕ್ಕೆ ಬರುವ ಸಾವಿರಾರು ಜನ ಭಕ್ತರು ದಾಸೋಹ ಭವನಕ್ಕೆ ಬಂದು ಪ್ರಸಾದ ಸೇವಿಸುತ್ತಿರುತ್ತಾರೆ.  ಆದರೆ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇರಲಿಲ್ಲ. ಈ ವಿಚಾರ ತಿಳಿದು ಮಣುವಿನಕುರಿಕೆ ಗ್ರಾಮದ ಸಮಾಜ ಸೇವಕ ಹಾಗೂ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ (KREIS) ವಿ.ನಟರಾಜ್ ಎರಡು ಮಿನಿ ಶುದ್ಧ ಕುಡಿಯುವ ನೀರಿಗೆ ಘಟಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ನೂತನ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳು ಚಾಲನೆ ನೀಡಿದ್ದಾರೆ. ನಂತರ…

Read More

ತುಮಕೂರು : ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುದಾರಣೆ ಕಂಡು ಬಂದಿದ್ದು,  ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18 ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶ  ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಾಲಗುರುಮೂರ್ತಿ ತಿಳಿಸಿದರು. ಜಿಲ್ಲೆಯಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಶ್ರಮ ಹಾಗೂ ಇಲಾಖೆಯ ಕಾರ್ಯವೈಖರಿಯಿಂದ ಈ ವರ್ಷ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ತಿಳಿಸಿದರು. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಗ್ಲಿಷ್ ಭಾಷೆಯ ಕ್ಲಿಸ್ಟತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಸುಮಾರು 6 ಶನಿವಾರ ವಿಶೇಷ ಉಪನ್ಯಾಸಕರನ್ನು ಒಳಗೊಂಡಂತೆ ಜಿಲ್ಲೆಯಾದ್ಯಂತ ನೋಡಲ್ ಕೇಂದ್ರಗಳಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆದವು. ಅಲ್ಲದೆ ಉನ್ನತ ಶ್ರೇಣಿಯ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಉಪನ್ಯಾಸ ಕಾರ್ಯಾಗಾರಗಳಿಂದ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಕಾರಣವಾಯಿತು ಎಂದು ತಿಳಿಸಿದರು. ದ್ವಿತೀಯ ಪಿಯುಸಿ ಫಲಿತಾಂಶವನ್ನು ಕುರಿತು ಮಾಹಿತಿ ನೀಡಿದ ಅವರು,  ಜಿಲ್ಲೆಯಲ್ಲಿ ಒಟ್ಟಾರೆ ಕಲಾ ವಿಭಾಗದಲ್ಲಿ 4,318 ವಿದ್ಯಾರ್ಥಿಗಳಿಗೆ 2476, ವಿಜ್ಞಾನ ವಿಭಾಗದಲ್ಲಿ 10,051 ವಿದ್ಯಾರ್ಥಿಗಳಿಗೆ…

Read More

ಸಿಂಗಾಪುರ: ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಕಿರಿಯ ಪುತ್ರ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಓದುತ್ತಿರುವ ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಮಾರ್ಕ್ ಗೆ ಗಂಭೀರವಾಗಿ ಗಾಯಗಳಾಗಿವೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಕ್ ನ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW ————————————

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ವಿಚಾರಣೆ ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದರು. ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ದರ್ಶನ್ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.…

Read More

ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. 600 ಅಂಕಗಳಲ್ಲಿ  597 ಅಂಕಗಳನ್ನ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಿದರು. ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದೆ, ದ್ವಿತೀಯ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆ ಪಡೆದುಕೊಂಡಿದೆ. ತುಮಕೂರು ಜಿಲ್ಲೆ 18ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದು, 72.02 ಫಲಿತಾಂಶ ದಾಖಲಿಸಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಪಡೆದುಕೊಂಡಿದೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ: 600ರಲ್ಲಿ 597 ಅಂಕ ಪಡೆದಿದ್ದಾರೆ. ಬಳ್ಳಾರಿಯ ನಿರ್ಮಲಾಗೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನಾರ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರಾಂಕ್ ಗಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು…

Read More