Subscribe to Updates
Get the latest creative news from FooBar about art, design and business.
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
- ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
- ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
- ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
- ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
- ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!
- ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
Author: admin
ತುಮಕೂರು: ಬೆಂಗಳೂರಿನ ಮಾದವರದಿಂದ ತುಮಕೂರುವರೆಗೆ ಮೆಟ್ರೊ ವಿಸ್ತರಿಸಲು ಅಂದಾಜು 20,649 ಕೋಟಿ ವೆಚ್ಚ ಆಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಸೋಮವಾರ ಹೇಳಿದರು. ಮೆಟ್ರೊ ವಿಸ್ತರಣೆಗೆ ಸಂಬಂಧಿಸಿದಂತೆ ವಿಸ್ಕೃತ ಯೋಜನಾ ವರದಿ (ಡಿಪಿಆರ್) ಸಿದ್ಧ ಪಡಿಸಲು ಸೆ. 25ರಂದು ಸರ್ಕಾರ ಆದೇಶ ಹೊರಡಿಸಿದೆ. ಬಿಎಂಆರ್‌ಸಿಎಲ್‌ಗೆ ಡಿಪಿಆರ್ ಹೊಣೆ ವಹಿಸಲಾಗಿದೆ. ಇದಕ್ಕಾಗಿ 3 ಕೋಟಿ ಖರ್ಚು ಮಾಡಲಾಗುತ್ತಿದೆ. ಆದಷ್ಟು ಶೀಘ್ರ ವರದಿ ಸಲ್ಲಿಕೆಗೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಿಎಂಆರ್ ಸಿಎಲ್ ವತಿಯಿಂದ ಈಗಾಗಲೇ ಕಾರ್ಯ ಸಾಧ್ಯತಾ ವರದಿ ಸಲ್ಲಿಕೆಯಾಗಿದೆ. ನಗರದವರೆಗೆ ಮೆಟ್ರೊ ವಿಸ್ತರಿಸುವ ಯೋಜನೆ ಒಂದೊಂದು ಹಂತ ದಾಟಿಕೊಂಡು ಮುಂದೆ ಸಾಗುತ್ತಿದೆ. ಮೆಟ್ರೊ ನಗರಕ್ಕೆ ಮಾತ್ರ ಸೀಮಿತವಾಗಿದೆ. ಗ್ರಾಮೀಣ ಭಾಗಕ್ಕೆ ವಿಸ್ತರಿಸಲು ಹೊಸ ಕಾನೂನು ರೂಪಿಸಬೇಕು. ಅನೇಕ ನಿಯಮ ಪಾಲಿಸಬೇಕಿದೆ ಎಂದು ಹೇಳಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಮೆಟ್ರೊ ಕಾಮಗಾರಿ ನಡೆಸಲಾಗುತ್ತದೆ. ಡಿಪಿಆರ್ ಸಲ್ಲಿಕೆಯಾದ ನಂತರ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು…
ಗುಬ್ಬಿ: ಸಹಕಾರಿ ಬ್ಯಾಂಕ್ ಮೂಲಕ ಸುಲಭ ಸಾಲ ಸೌಲಭ್ಯ ಲಭ್ಯವಾಗುವುದರಿಂದ ಅನೇಕ ಮಂದಿ ವ್ಯವಸಾಯ, ವ್ಯಾಪಾರ ಮತ್ತು ಉದ್ಯಮ ಸ್ಥಾಪಿಸಿ ಉತ್ತಮ ಜೀವನ ನಿರ್ವಹಿಸಲು ಸಾಧ್ಯವಾಗಿದೆ ಎಂದು ವಾಸವಿ ಪೀಠದ ಪೀಠಾಧ್ಯಕ್ಷ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದರು. ಸೋಮವಾರ ಗುಬ್ಬಿ ಪಟ್ಟಣದಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ–ಆಪರೇಟಿವ್ ಬ್ಯಾಂಕ್ ನ 18ನೇ ಶಾಖೆ ಉದ್ಘಾಟಿಸಿದ ಮಾತನಾಡಿದರು. ಬ್ಯಾಂಕ್ ನ ಎಲ್ಲ ಸದಸ್ಯರ ಸಹಕಾರದಿಂದಾಗಿ ಇತರ ರಾಜ್ಯಗಳಲ್ಲೂ ಶಾಖೆಗಳನ್ನು ತೆರೆಯಲು ಸಾಧ್ಯವಾಗಿದೆ ಎಂದರು. ಗುಬ್ಬಿಯಂತಹ ಪಟ್ಟಣದಲ್ಲಿ ಬ್ಯಾಂಕ್ ಶಾಖೆ ತೆರೆಯುವ ಮೂಲಕ ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ಅನುಕೂಲ ಒದಗಿಸಲು ಮುಂದಾಗಿರುವುದು ಸ್ತುತ್ಯರ್ಹ ಬೆಳವಣಿಗೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಎಲ್ಲರನ್ನೂ ಒಟ್ಟುಗೂಡಿಸಿ ಸಹಕಾರಿ ಬ್ಯಾಂಕ್ ಕಟ್ಟಿ ಬೆಳೆಸುವುದು ಸಾಧಾರಣ ಕಾರ್ಯವಲ್ಲ. ಬ್ಯಾಂಕ್ ಹಣಕಾಸು ವ್ಯವಹಾರ ವೃದ್ಧಿಯಾಗುತ್ತಿರುವಂತೆ ಟಿಎಂಸಿಸಿ ಬ್ಯಾಂಕ್ ವಿವಿಧ ಸಾಮಾಜಿಕ ಕಾರ್ಯಗಳಿಗೆ ಲಾಭಾಂಶ ವಿನಿಯೋಗಿಸುತ್ತಿರುವುದು ಪ್ರಶಂಸನೀಯ ಎಂದರು. ಬ್ಯಾಂಕ್ ಅಧ್ಯಕ್ಷ ಎನ್.ಎಸ್.ಜಯಕುಮಾರ್, ದೇಶದಲ್ಲೇ ಮೊದಲ ಬಾರಿಗೆ ಬ್ಯಾಂಕಿಂಗ್…
ತಿಪಟೂರು: ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಅರಳಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಕೃಷಿ ಇಲಾಖೆ ಮತ್ತು ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ಸಿಂಪಡಣೆ ಪ್ರಾತ್ಯಕ್ಷಿಕೆ ನಡೆಯಿತು. ಶಾಸಕ ಕೆ.ಷಡಕ್ಷರಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಸದುದ್ದೇಶದಿಂದ ಈ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ, ಆಹಾರ ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಯೋಜನೆ ಮುಖ್ಯ ಗುರಿ. ಕೃಷಿಯಲ್ಲಿ ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬಹುದು ಎಂದು ತಿಳಿಸಿದರು. ಕೃಷಿ ಕಾರ್ಮಿಕರ ಕೊರತೆ ಇಂದಿನ ದಿನಗಳಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳು ಮತ್ತು ಸಸ್ಯ ಸಂರಕ್ಷಣಾ ಔಷಧಿಗಳನ್ನು ಸಿಂಪರಣೆ ಮಾಡಲು ಹೆಚ್ಚು ಸಮಯ ಮತ್ತು ಹಣ ವ್ಯಯವಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದು ಉತ್ತಮ ಮಾರ್ಗ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಂ.ಪಿ.ಪವನ್ ಮಾತನಾಡಿ, ತಾಲ್ಲೂಕಿನ…
ಸರಗೂರು: ಶಾಲೆಗಳಲ್ಲಿ ಶಿಕ್ಷಕರ ಶ್ರಮ ಅವಿರತವಾಗಿದ್ದು, ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದು ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೆಶಕ ಡಾ.ವೈ.ಡಿ.ರಾಜಣ್ಣ ತಿಳಿಸಿದರು. ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಸೋಮವಾರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸುವ ಕೆಲಸ ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಭಕ್ತಿ ಗೀತೆ, ಸಾಹಿತ್ಯ, ಕ್ರೀಡೆ, ಸಂಗೀತ ಹೀಗೆ ನಾನಾ ಕ್ಷೇತ್ರಗಳಲ್ಲಿ ಭಾಗಿಯಾಗುವಂತೆ ಪ್ರೇರಣೆ ನೀಡಬೇಕು. ಇಂಥ ಕೆಲಸವನ್ನು ನಮ್ಮ ಶಿಕ್ಷಕರು ಮಾಡಿದ್ದಾರೆ. ಹೀಗಾಗಿಯೇ ಸಾಹಿತ್ಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯಲು ಸಹಕಾರಿಯಾಯಿತು. ಶಿಕ್ಷಕರಿಂದಲೇ ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯಲು ಅನುಕೂಲವಾಯಿತು ಎಂದು ಅವರು ಹೇಳಿದರು. ಮಕ್ಕಳ ಬೌದ್ದಿಕ, ಮಾನಸಿಕವಾಗಿ ವಿಕಾಸ ಹೊಂದುವ ಕೆಲಸ ಮಾಡುತ್ತಾರೆ. ಆದರೆ, ಇತ್ತೀಚಿಗೆ ಶಿಕ್ಷಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಇದರಿಂದಾಗಿ ಹಿಂದಿಗಿಂತ ಅವರು ಜವಾಬ್ದಾರಿ ಹೆಚ್ಚಾಗಿದೆ ಎಂದು ಅವರು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು ಮಾತನಾಡಿ,…
ತುಮಕೂರು: ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಲ್ಲಾ ವಿಭಾಗದಲ್ಲಿ ಆಯುಧ ಪೂಜೆ ಕಾರ್ಯಕ್ರಮವನ್ನು ಸಂಭ್ರಮದಿಂದ ಹಾಗೂ ಸಡಗರದಿಂದ ಮಂಗಳವಾರದಂದು ಆಚರಣೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ ಅವರು ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಆಯುಧ ಹಾಗೂ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರು ಸಹಾಯಕ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ದಸರಾ ಹಬ್ಬ, ಆಯುಧ ಪೂಜೆ ಆಚರಣೆ ನಡುವೆಯೂ ಮಾರುಕಟ್ಟೆಯಲ್ಲಿ ಹೂವಿನ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸ ಕಾಣುತ್ತಿಲ್ಲ. ದಸರಾ ಹಬ್ಬದ ಸಮಯದಲ್ಲಿ ಹೂವಿನ ಧಾರಣೆ ಗಗನ ಮುಟ್ಟುತ್ತಿತ್ತು. ಆದರೆ ಈ ಬಾರಿ ಅಂತಹ ವಾತಾವರಣ ಕಂಡು ಬರುತ್ತಿಲ್ಲ. ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಸೋಮವಾರ ಎಂದಿನ ದರದಲ್ಲಿಯೇ ಹೂವು ಮಾರಾಟ ನಡೆಯಿತು. ಗುಲಾಬಿ ಕೆ.ಜಿ. 350ರಿಂದ 400 ಇತ್ತು. ಬಿಡಿ ಸೇವಂತಿಗೆ ಕೆ.ಜಿ 100–120, ಚೆಂಡು ಹೂವು ಕೆ.ಜಿ 400, ಮಲ್ಲಿಗೆ ಕೆ.ಜಿ 1 ಸಾವಿರ, ಕನಕಾಂಬರ ಕೆ.ಜಿ. 800ರಿಂದ 900ಕ್ಕೆ ಮಾರಾಟವಾಯಿತು. ಕೆ.ಜಿ ಬೂದು ಕುಂಬಳಕಾಯಿ 20–30, ಜೋಡಿ ಬಾಳೆ ಕಂದು 30–40ಕ್ಕೆ ಸಿಗುತಿತ್ತು. ಸೋಮವಾರ ಸಂಜೆ ವೇಳೆಗೆ ಮಾರುಕಟ್ಟೆಯಲ್ಲಿ ಜನ ಸಂದಣಿ ಹೆಚ್ಚಿತ್ತು. ಮಂಗಳವಾರ ಮತ್ತಷ್ಟು ದಟ್ಟಣೆಯಾಗಲಿದೆ. ಹಬ್ಬ ಹತ್ತಿರವಾಗುತ್ತಿದ್ದಂತೆ ಬೆಲೆ ಹೆಚ್ಚಾಗಬಹುದು ಎಂಬುದನ್ನು ಅರಿತವರು ಮುಂಚೆಯೇ ಅಗತ್ಯ ಸಾಮಗ್ರಿ ಖರೀದಿಸಿದರು. ಕಳೆದ ವರ್ಷ ಹೆಚ್ಚಿನ ಮಳೆಯಾಗಿದ್ದರಿಂದ ಹೂವಿನ ಬೆಳೆಗೆ ಹಾನಿಯಾಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಕೈ ಸೇರಲಿಲ್ಲ. ಬೆಳೆಗಾರರು ನಷ್ಟ…
ತುಮಕೂರು: ರೈತರ ಫಲವತ್ತಾದ ಭೂಮಿ ಕಿತ್ತುಕೊಂಡು ನಂದಿಹಳ್ಳಿ ಮಲ್ಲಸಂದ್ರ, ವಸಂತನರಸಾಪುರ ವರ್ತುಲ ರಸ್ತೆ ನಿರ್ಮಾಣಕ್ಕೆ ರೈತರು ಹಾಗೂ ರೈತ ಸಂಘಟನೆ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಂದಿಹಳ್ಳಿ—ಮಲ್ಲಸಂದ್ರ– ವಸಂತನರಸಾಪುರ ಬೈಪಾಸ್ ರಸ್ತೆ ವಿರೋಧಿ ಹೋರಾಟ ಸಮಿತಿ ರಚಿಸಿಕೊಂಡು ಪ್ರತಿಭಟನೆಗೆ ಅಣಿಯಾಗಿದ್ದಾರೆ. ಭೂಸ್ವಾಧೀನ ಕಾಯ್ದೆ–2013ಅನ್ನು ಜಿಲ್ಲಾ ಆಡಳಿತ ಸ್ಪಷ್ಟವಾಗಿ ಉಲ್ಲಂಘಿಸಿದೆ. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಯಾವುದೇ ಕಾರಣಕ್ಕೂ ಭೂಮಿ ಕಿತ್ತುಕೊಳ್ಳಲು ಅವಕಾಶ ನೀಡದಿರಲು ಪಣ ತೊಟ್ಟಿದ್ದಾರೆ. ಸಂಯುಕ್ತ ಹೋರಾಟ– ಕರ್ನಾಟಕ ಸಂಚಾಲಕ ಸಿ.ಯತಿರಾಜು, ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಗೋವಿಂದರಾಜು, ಎಐಕೆಎಂಎಸ್ ಮುಖಂಡ ಎಸ್.ಎನ್.ಸ್ವಾಮಿ, ಎಸ್.ಎಂ.ಸಂಯೋಜಕ ಬಿ.ಉಮೇಶ್, ಎಐಕೆಎಸ್ ಮುಖಂಡ ಕಂಬೇಗೌಡ, ಕೆಪಿಆರ್ ಎಸ್ ಅಜ್ಜಪ್ಪ ನಗರದಲ್ಲಿ ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಔಟರ್ ರಿಂಗ್ ರೋಡ್ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿ ಕಬಳಿಸುವ ಹುನ್ನಾರ ನಡೆದಿದೆ. ಜಮೀನು ಕಳೆದುಕೊಳ್ಳುವ ಹಳ್ಳಿಗಳಿಗೆ ಭೇಟಿ ನೀಡಿ ಅ.4ರಿಂದ 6ರವರೆಗೆ ಜಾಗೃತಿ…
ಬೆಂಗಳೂರು: ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣ ದಿಂದ ವಿಶೇಷ ವಿಮಾನದ ಮೂಲಕ ಹೊರಟು 11.40ರ ವೇಳೆಗೆ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಿಜಯಪುರ, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಧ್ಯಾಹ್ನ 2 ವೇಳೆಗೆ ಸಮೀಕ್ಷೆ ಪೂರ್ಣಗೊಳಿಸಿ ಕಲಬುರಗಿ ನಗರದ ಐವಾನ್–ಇ–ಷಾಹಿ ವಸತಿ ಗೃಹಕ್ಕೆ ಆಗಮಿಸಲಿದ್ದಾರೆ. ಭೋಜನ ವಿರಾಮ ಬಳಿಕ ಮುಖ್ಯಮಂತ್ರಿ ಅವರು ಜಿಲ್ಲೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಲ್ಕೂ ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಳೆ ಹಾನಿ ಪರಿಹಾರ ಕುರಿತು ಮಾಹಿತಿ…
ಬೀದರ್ : ಬಿಜೆಪಿ, ಅನ್ನದಾತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಬೀದರ್ ದಕ್ಷಿಣ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಿ.ಖಾಶೆಂಪುರ ಗ್ರಾಮದ ರೈತ ಮಹಿಳೆ ಗಂಗಮ್ಮ ಅವರ ಪತಿ ಶಂಕರಾವ್ ಮಚ್ಚಕುರಿ ಅವರು ಇತ್ತೀಚೆಗೆ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಿ.ವೈ.ವಿಜಯೇಂದ್ರ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮೃತರ ಮನೆಗೆ ಭೇಟಿ ನೀಡಿದ್ದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು ಆರ್ಥಿಕ ನೆರವು ನೀಡಿ, ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಮತ್ತು ಶಾಸಕ ಪ್ರಭು ಚೌಹಾಣ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಬಾಣಂತನದ ವೇಳೆ ಮಗು ಮೃತಪಟ್ಟಿದ್ದು, ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಔರಾದ್ ತಾಲ್ಲೂಕಿನ ಬೆಳಕುಣಿ ಚೌದ್ರಿ ಗ್ರಾಮದಿಂದ ಬಾಣಂತನಕ್ಕೆ ಬಂದ ಜ್ಯೋತಿ ಎಂಬ ಮಹಿಳೆ ಬಂದಿದ್ದು, ವೈದ್ಯರು, ಸಿಬ್ಬಂದಿಗಳು ಅತ್ಯಾಧುನಿಕ ಸೌಲಭ್ಯಗಳಿದ್ದರೂ ಸರಿಯಾದ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿ ಮಗುವಿನ ಸಾವಿಗೆ ಕಾರಣರಾಗಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಮೊದಲು ಆರೋಗ್ಯ ಪರಿಸ್ಥಿತಿ ಸರಿಯಿಲ್ಲ ಎಂದು ಹೇಳಿದ ವೈದ್ಯರು, ಸಾಮಾನ್ಯ ಹೆರಿಗೆ ಮಾಡುವುದಾಗಿ ಹೇಳಿದರು. ಆದರೆ ಬಾಣಂತಿ ಜ್ಯೋತಿ ಹಾಗೂ ಕುಟುಂಬದವರು ಸಿಸೇರಿಯನ್ ಗೆ ಒತ್ತಾಯಿಸಿದರು. ಆದರೆ ವೈದ್ಯರು ಅದಕ್ಕೊಪ್ಪದೇ ಕಡೇ ಕ್ಷಣದಲ್ಲಿ ಕುಟುಂಬದವರಿಗೆ ಹೆದರಿಸಿ ಬೆದರಿಸಿ ಒಪ್ಪಿಗೆ ಸಹಿ ಪಡೆದು ಶಸ್ತ್ರಚಿಕಿತ್ಸೆ ಮಾಡಿದ್ದು ತಾಯಿ ಬದುಕಿದ್ದಾಳೆ, ಮಗು ಸಾವನ್ನಪ್ಪಿದೆ. ಆದರೆ ಆಸ್ಪತ್ರೆಯ ದಾಖಲೆಗಳಲ್ಲಿ ತಾಯಿ ಹಾಗೂ ಮಗು ಜೀವಂತವಾಗಿದ್ದಾರೆ ಎಂದು ವರದಿ ನೀಡಲಾಗಿದೆ. ಏಕೆ ಎಂದು ಕೇಳಿದರೆ ಸಬೂಬು ಹೇಳುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಗೆ…