Subscribe to Updates
Get the latest creative news from FooBar about art, design and business.
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
- ಗಾಂಜಾ ಮಾರಾಟ ಜಾಲ: ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ
- ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
Author: admin
ನವದೆಹಲಿ: ಓಲಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು,ಓಲಾ ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ. ‘ಮುನ್ನೆಚ್ಚರಿಕಾ ಕ್ರಮವಾಗಿ ನಾವು ನಿರ್ದಿಷ್ಟ ಬ್ಯಾಚ್‌ನ ವಾಹನಗಳನ್ನು ಪರಿಶೀಲಿಸುತ್ತೇವೆ. ಆದ್ದರಿಂದ 1,441 ವಾಹನಗಳನ್ನು ಸ್ವಯಂಪ್ರೇರಿತವಾಗಿ ಹಿಂಪಡೆಯುತ್ತಿದ್ದೇವೆ’ ಎಂದು ಓಲಾ ಕಂಪೆನಿ ತಿಳಿಸಿದೆ. ಹಿಂಪಡೆದ ಸ್ಕೂಟರ್‌ಗಳನ್ನು ಎಂಜಿನಿಯರ್‌ಗಳು ಪರಿಶೀಲಿಸುತ್ತಾರೆ. ಬ್ಯಾಟರಿ ವ್ಯವಸ್ಥೆಗಳು, ಥರ್ಮಲ್ ಸಿಸ್ಟಮ್‌ಗಳು ಮತ್ತು ಸುರಕ್ಷತಾ ವ್ಯವಸ್ಥೆಗಳಲ್ಲಿನ ಸಮಸ್ಯೆಯನ್ನು ಪತ್ತೆ ಮಾಡಲಿದ್ದಾರೆ’ ಎಂದು ಸಂಸ್ಥೆ ತಿಳಿಸಿದೆ. ಬ್ಯಾಟರಿ ವ್ಯವಸ್ಥೆಗಳು ಯುರೋಪಿನ ‘ಇಸಿಇ-136’ ಮಾನದಂಡಗಳಿಗೆ ಅನುಗುಣವಾಗಿವೆ. ಜತೆಗೆ, ಭಾರತದ ಇತ್ತೀಚಿನ ಪ್ರಸ್ತಾವಿತ ‘ಎಐಎಸ್-156’ಗೆ ಅನುಗುಣವಾಗಿ ಪರೀಕ್ಷಿಸಲ್ಪಟ್ಟಿದೆ’ ಎಂದು ಓಲಾ ಹೇಳಿದೆ. ಅಗ್ನಿ ಅವಘಡಗಳನ್ನು ಪರಿಶೀಲಿಸಲು ಸರ್ಕಾರ ಸಮಿತಿಯನ್ನು ರಚಿಸಿದೆ. ಕಂಪನಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ದಂಡ ವಿಧಿಸುವುದಾಗಿಯೂ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರ ನಿರ್ಧರಿಸಿದೆ. ಕೋವಿಡ್ 1 ಮತ್ತು 2ನೇ ಅಲೆಯ ಪರಿಣಾಮ ಜನಜೀವನ, ಆರ್ಥಿಕ ವ್ಯವಸ್ಥೆ ಕುಸಿದು ಹೋಗಿ ಜನರು ಸಂಕಷ್ಟ ಎದುರಿಸಿದ್ದಾರೆ. ಲಾಕ್‍ಡೌನ್ ಸೇರಿದಂತೆ ನಾನಾ ರೀತಿಯ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಕೋರೊನಾ ಮೂರನೆ ಅಲೆಯಿಂದ ಹೆಚ್ಚಿನ ಹಾನಿಯಾಗಲಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‍ನ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಿವೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಕೋವಿಡ್ ರೂಪಾಂತರದ ಸೋಂಕುಗಳು ಕಾಣಿಸಿಕೊಂಡಿವೆ. ಹೀಗಾಗಿ ನಾಲ್ಕನೇ ಅಲೆ ಎದುರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ ಸರ್ಕಾರಗಳ ಜೊತೆ ಏ.27ರಂದು ವರ್ಚುವಲ್ ಮಾದರಿಯಲ್ಲಿ ಸಭೆ ನಡೆಸಲಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋವಿಡ್ ಜಾಗೃತಿಗೆ…
ಮಧುಗಿರಿ: 2021- 22ನೇ ಸಾಲಿನ ರಾಷ್ಟ್ರೀಯ ವಿಕಾಸ ಯೋಜನೆಯಡಿ ರಸಮೇವು ಘಟಕ ಸ್ಥಾಪಿಸಲು ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಮೇ 10ರೊಳಗೆ ತಮ್ಮ ಹತ್ತಿರದ ಪಶು ಆಸ್ಪತ್ರೆಗಳಿಂದ ಅರ್ಜಿ ಪಡೆದು ನಿಗದಿತ ದಾಖಲಾತಿಯೊಂದಿಗೆ ಹತ್ತಿರದ ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಧುಗಿರಿ ತಾಲೂಕಿನ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಜಿ.ಗಿರೀಶ್ ಬಾಬು ರೆಡ್ಡಿ ತಿಳಿಸಿದ್ದಾರೆ. ಮಧುಗಿರಿ ತಾಲೂಕಿನಿಂದ 47 ಸಾಮನ್ಯ ವರ್ಗ, 18 ಪರಿಶಿಷ್ಟ ಜಾತಿ, 9 ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಆಯ್ಕೆ ಮಾಡಲಾದ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಆಫ್ರಿಕನ್ ಟಾಲ್ ಮೇವಿನ ಬೀಜ, ಒಂದು ಪ್ಲಾಸ್ಟಿಕ್ ಶೀಟ್, 100 ಕೆ.ಜಿ.ಸಾಮರ್ಥ್ಯದ 20 ಸೈಲೋ ಬ್ಯಾಗ್ ಗಳು ಅಥವಾ 500 ಕೆಜಿ ಸಾಮರ್ಥ್ಯದ 4 ಸೈಲೋ ಬ್ಯಾಕ್ ಗಳನ್ನು ಉಚಿತವಾಗಿ ನೀಡಲಾಗುವುದು. ಅರ್ಜಿದಾರರು ಮೇವು ಬೆಳೆಯಲು ಭೂಮಿ ಹೊಂದಿರಬೇಕು. Fruits ID ಹೊಂದಿರಬೇಕು. ಕಡ್ಡಾಯವಾಗಿ 2…
ವಿಶೇಷ ವರದಿ: ತುಮಕೂರು: ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರ ಹತ್ಯೆ ತುಮಕೂರು ತಾಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯ ನಂತರ ಗ್ರಾಮದಲ್ಲಿ ಇದೀಗ ಮೌನ ಆವರಿಸಿದ್ದು, ಸ್ಥಳೀಯ ಜನರು ಭೀತಿಗೊಂಡಿದ್ದಾರೆ. ಪೆದ್ದನಹಳ್ಳಿಯ ಪರಿಶಿಷ್ಟ ಜಾತಿಗೆ ಸೇರಿದ ಪಿ.ಎಂ.ಗಿರೀಶ್ (32), ಮಂಚಲದೊರೆ ಗ್ರಾಮದ ಪರಿಶಿಷ್ಟ ಪಂಗಡಕ್ಕೆ ಸೇರಿದ ಗಿರೀಶ್ (33) ಕೊಲೆಯಾದವರು. ಇದೇ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ನಂದೀಶ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ. ಶುಕ್ರವಾರ ಬೆಳಗ್ಗೆ ಗ್ರಾಮದ ನೀರಿನ ಕಟ್ಟೆಯ ಬಳಿಯಲ್ಲಿ ಈ ಇಬ್ಬರು ಯುವಕರ ಮೃತದೇಹ ಪತ್ತೆಯಾಗಿದೆ. ದಾರಿಹೋಕರು ನೀಡಿದ ಮಾಹಿತಿಯಿಂದಾಗಿ ಕುಟುಂಬಸ್ಥರಿಗೆ ವಿಚಾರ ತಿಳಿದು ಬಂದಿತ್ತು. ಇಬ್ಬರ ದೇಹದ ಮೇಲೆಯೂ ಗಂಭೀರವಾದ ಗಾಯಗಳಿದ್ದು, ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶ್ವಾನದಳ ಕರೆಸಲಾಗಿದ್ದು. ಶ್ವಾನಗಳು ಹಲವು ಮನೆಗಳ ಬಳಿಗೆ ಹೋಗಿದ್ದವು. ಇದರಿಂದ ಆತಂಕಗೊಂಡ ಪೆದ್ದನಹಳ್ಳಿಯ ಕೆಲವು ಪುರುಷರು ಮನೆಗಳನ್ನು ತೊರೆದಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಮೌನ ಆವರಿಸಿದೆ. ಕೃಷಿ ಪಂಪ್…
ಸರಗೂರು: ತಾಲ್ಲೂಕಿನ ಮೂಳ್ಳೂರು ಗ್ರಾ.ಪಂ. ಹಳೆಹೆಗ್ಗುಡಿಲು ಗ್ರಾಮದಲ್ಲಿ ಆನೆ ಹಾವಳಿ ಹೆಚ್ಚುತ್ತಿದ್ದು, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಮಹದೇವನಾಯಕ ಅವರು ನೀರು ತರಲೆಂದು ಹೋಗುತ್ತಿದ್ದ ವೇಳೆ ಆನೆಗಳನ್ನು ಕಂಡು ಬೆಚ್ಚಿ ಬಿದ್ದು ಬೈಕ್ ನಿಂದ ಬಿದ್ದಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಗೆ ಹಾನಿಯಾಗಿದೆ. ಇಲ್ಲಿನ ಜನರಿಗೆ ಹಲವು ಬಾರಿ ಆನೆಗಳು ಎದುರಾಗಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎನ್ನುವ ಆಕ್ರೋಶದ ಮಾತುಗಳು ಕೇಳಿ ಬಂದಿವೆ. ಜನರು ಆನೆ ಹಾವಳಿಯ ಬಗ್ಗೆ ಬಂಡೀಪುರ ಅರಣ್ಯ ಅಧಿಕಾರಿಗಳಿಗೆ ತಿಳಿಸಿದರೆ , ಅವರು ಸರಗೂರಿನ ಅರಣ್ಯ ಅಧಿಕಾರಿಗಳಿಗೆ ಹೇಳಿ ಎಂದು ಹೇಳುತ್ತಾರೆ. ಸರಗೂರು ಅರಣ್ಯ ಇಲಾಖೆ ಅಧಿಕಾರಿಗಳು ನಾವು ಆನೆ ಕಾವಲುಗಾರರನ್ನು ಹಾಕಿದ್ದೇವೆ ಎಂದು ಹೇಳುತ್ತಾರೆ. ಆದರೆ ಆನೆ ಕಾವಲುಗಾರರು ಯಾವುದೇ ಕೆಲಸವನ್ನು ಮಾಡುತ್ತಿಲ್ಲ . ಮತ್ತೆ ಅರಣ್ಯ ಅಧಿಕಾರಿಗಳು ವ್ಯಾಪ್ತಿ ಸರಗೂರು ಭಾಗಕ್ಕೆ ಬರುವುದಿಲ್ಲ ಎಂದು ಹೇಳುತ್ತಾರೆ. ನಾವು ಕೇವಲ ಆನೆ ಕಾವಲುಗಾರರನ್ನು ಮಾತ್ರ ಹಾಕಬಹುದು ಎಂದು…
ಪಟ್ನಾ: ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದರು. ಸ್ವಾತಂತ್ರ್ಯ ಹೋರಾಟಗಾರ ವೀರ್ ಕುನ್ವರ್ ಸಿಂಗ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರ್ ಜೆಡಿ ಮುಖಂಡರಾದ ರಾಬ್ಡಿದೇವಿ ಅವರ ನಿವಾಸದಲ್ಲಿ ಶುಕ್ರವಾರ ನಡೆದ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ ಆಹ್ವಾನ ಬಂದಿತ್ತು, ನಾನು ಹಾಜರಾಗಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೂಡ ಇಫ್ತಾರ್ ಕೂಟಗಳನ್ನು ಆಯೋಜಿಸುತ್ತೇವೆ ಮತ್ತು ಎಲ್ಲರನ್ನೂ ಆಹ್ವಾನಿಸುತ್ತೇವೆ ಎಂದು ಅವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಂಗಳೂರು: 545 ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣವನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದ್ದು, ಅದಕ್ಕೆ ಮುಕ್ತ ಅಧಿಕಾರ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಜಿಎಂಐಟಿ ಕಾಲೇಜಿನ ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರು, ಯಾವ ಮಟ್ಟದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲಾಗುವುದು. ಯಾವುದೇ ಪಕ್ಷದವರಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪರೀಕ್ಷಾ ಕೇಂದ್ರ, ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಸೂಪರ್ ವೈಸರ್ ಗಳನ್ನು ಪತ್ತೆ ಹಚ್ಚಿ ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡಲಾಗುವುದು. ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಯಾರು, ಏನು ಮಾತನಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದರು. ಈ ವೇಳೆ ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಚನ್ನಪ್ಪ, ಮಹಾನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ, ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಎಸ್ಪಿ ಸಿ.ಬಿ.ರಿಷ್ಯಂತ್ ಇದ್ದರು. ನಮ್ಮತುಮಕೂರು.ಕಾಂನ…
ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮದ ಗ್ರಾಮಸ್ಥರು ಆದಿ ಕರ್ನಾಟಕ ಸಮಾಜದಿಂದ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಅಂಬೇಡ್ಕರ್ ಹಬ್ಬ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಪುತ್ಥಳಿ ಹೊತ್ತ ಜಾಥಾ ರಥಕ್ಕೆ ಚಾಲನೆ ನೀಡಲಾಯಿತು. ಸಮುದಾಯ ಭವನದಿಂದ ಹೊರಟ ಜಾಥಾವು ಹೆಡಿಯಾಲ ಮತ್ತು ಚಿಕ್ಕಬರಗಿ ರಸ್ತೆಯ ಮೂಲಕ ಸಂಚರಿಸಿ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ನಂತರ ಅದೇ ಮಾರ್ಗವಾಗಿ ಸಮುದಾಯ ಭವನದಲ್ಲಿ ಕೊನೆಗೊಂಡಿತು. ಜಾಥಾ ಹೊರಟ ಮಾರ್ಗ ಮಧ್ಯೆ ಯುವಕರು ಅಂಬೇಡ್ಕರ್ ಹಾಡುಗಳನ್ನು ಹೇಳಿಕೊಂಡು ನೃತೃ ಪ್ರದರ್ಶಿಸಿದರು. ಮಂಗಳವಾದ್ಯ, ಸತ್ತಿಗೆಯು ಮೆರವಣಿಗೆಯಲ್ಲಿ ಸಾಗಿತ್ತು. ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ದಿನ ದಲಿತರ ಬಂಧು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಎಲ್ಲರೂ ಮೈಗೂಢಿಸಿಕೊಳ್ಳಬೇಕು. ವಿದ್ಯಾವಂತರಾಗಿ, ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಎಲ್ಲರೂ ಸಂಘಟನೆ-ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು…
ಬೆಂಗಳೂರು: ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ 150 ಪ್ಲಸ್ ಶಾಸಕ ಸ್ಥಾನ ಪಡೆಯಲು ಕಾರ್ಯತಂತ್ರ ರೂಪಿಸಲಾಗಿದೆ. ಮೂರು ತಂಡಗಳಲ್ಲಿ ಪಕ್ಷದ ಸಂಘಟನೆಗಾಗಿ ಪ್ರವಾಸವೂ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಬೆಂಗಳೂರಿನ ಜಯನಗರದ ದಿ ಪ್ರೆಸಿಡೆಂಟ್ ಹೋಟೆಲ್‍ನ ಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸದ ವೇಳೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರಕಾರಗಳ ಸಾಧನೆಯ ಕುರಿತು ಜನರಿಗೆ ತಲುಪಿಸುವ ದೃಷ್ಟಿಯಿಂದ ರಾಜ್ಯದಿಂದ ಬೂತ್ ವರೆಗೆ ಸಭೆಗಳನ್ನು ನಡೆಸಲಾಗಿದೆ. ನಮ್ಮ ಸಂಘಟನೆಯನ್ನು ಸರ್ವಸ್ಪರ್ಶಿ- ಸರ್ವವ್ಯಾಪಿ ಮಾಡಲು ಶ್ರಮಿಸುತ್ತಿದ್ದೇವೆ. ಬೂತ್ ಕಮಿಟಿ, ಪೇಜ್ ಕಮಿಟಿ ಹೆಚ್ಚು ಸದೃಢಗೊಳಿಸಲಾಗುತ್ತಿದೆ ಎಂದು ವಿವರಿಸಿದರು. ಪ್ರತಿ ಪೇಜ್‍ಗೆ ಆರು ಜನರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು. ಒಂದು ಮಂಡಲದಿಂದ ಇನ್ನೊಂದು ಮಂಡಲಕ್ಕೆ ತೆರಳಿ ಪೇಜ್ ಕಮಿಟಿ ಕಾರ್ಯದ ಪರಿಶೀಲನೆ ನಡೆದಿದೆ. ಬೂತ್ ಅಧ್ಯಕ್ಷರ ನಾಮಫಲಕ ಜೋಡಣೆ ದೇಶದಲ್ಲೇ ಮೊದಲ ಬಾರಿಗೆ ನಡೆದಿದ್ದು, ಶೇ.90ರಷ್ಟು…
ಕೊರಟಗೆರೆ: ಮಾಜಿ ಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಅವರು ಶನಿವಾರ ಕ್ಷೇತ್ರಾದ್ಯಂತ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. * ಬೆಳಗ್ಗೆ 10 ಗಂಟೆಗೆ ಪುರವರ ಹೋಬಳಿಯ ಗೊಂದಿಹಳ್ಳಿ ಗ್ರಾಪಂ ವ್ಯಾಪ್ತಿಯ ತಿಮ್ಮಲಾಪುರ ತಾಂಡದಿಂದ ಗೊಲ್ಲರಹಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ, 40 ಲಕ್ಷ * ಬೆಳಗ್ಗೆ 10:30ಕ್ಕೆ ಗೊಂದಿಹಳ್ಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ಉದ್ಘಾಟನೆ. * ಬೆಳಗ್ಗೆ 11:00 ಕ್ಕೆ ಗೊಂದಿಹಳ್ಳಿ ಗ್ರಾಪಂ ವ್ಯಾಪ್ತಿಯ ಚುಂಚೇನಹಳ್ಳಿ ಗ್ರಾಮದಲ್ಲಿ TSP ಯೋಜನೆಯಡಿಯಲ್ಲಿ ಸಿಸಿ ರಸ್ತೆ ಚರಂಡಿ ಉದ್ಘಾಟನೆ, 8 ಲಕ್ಷ * ಬೆಳಗ್ಗೆ 11:30 ಕ್ಕೆ ಪುರವರ ಗ್ರಾಪಂ ವ್ಯಾಪ್ತಿಯ ದೊಡ್ಡಹೊಸಹಳ್ಳಿ ಇಂದ ತಗ್ಗಿಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ. 48 ಲಕ್ಷ ರೂಪಾಯಿ. * ಬೆಳಗ್ಗೆ 12:00ಕ್ಕೆ ಬ್ಯಾಲ್ಯ ಗ್ರಾಮದಿಂದ ಹಂದ್ರಾಳುವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿಪೂಜೆ. 40 ಲಕ್ಷ * 12:30ಕ್ಕೆ ಬ್ಯಾಲ್ಯ ಗ್ರಾಮದಿಂದ ಹನುಮಂತಪುರದ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಗುದ್ದಲಿ ಪೂಜೆ.…