Subscribe to Updates
Get the latest creative news from FooBar about art, design and business.
- ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
- ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
- ರುಡ್ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
- ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
- ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
- ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
- ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
- ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
Author: admin
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟು 73.45 ಶೇ. ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ ಇಂದು ತುಮಕೂರು ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ‘ತುಮಕೂರು ದಿಶಾ ಸಮಿತಿ’ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ವಿವಿಧ ಸಮಸ್ಯೆಗಳ ಅಹವಾಲನ್ನು ನೀಡಿದರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಚಿವ ಸೋಮಣ್ಣ ಸ್ಥಳದಲ್ಲಿಯೇ ಇದ್ದ ಜಿಲ್ಲಾಧಿಕಾರಿ ಶುಭಕಲ್ಯಾಣವರಿಗೆ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿದರು. ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಕಸದ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರು ತಮ್ಮ ಅರ್ಜಿಗಳನ್ನು ಸಚಿವರಿಗೆ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಮತ್ತು ನೇಗಲಾಲ ಗ್ರಾಮದ ಜನರ ಮತ್ತು ವಿದ್ಯಾರ್ಥಿಗಳ ಹಾಗೂ ಶ್ರೀ ಕ್ಷೇತ್ರ ಸಿದ್ದರಬೆಟ್ಟಕ್ಕೆ ಬರುವಂತಹ ಭಕ್ತರ ಹಾಗೂ ಪ್ರವಾಸಿಗರ ಬಹುದಿನಗಳ ಬೇಡಿಕೆ ಸುಮಾರು ಎರಡು ಕಿಲೋ ಮೀಟರ್ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊರಟಗೆರೆ ಲೋಕೋಪಯೋಗಿ ಇಲಾಖೆಯು ರಸ್ತೆ ಅಭಿವೃದ್ಧಿ ಪಡಿಸಲು ಇದೀಗ ಮುಂದಾಗಿದೆ. ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಸುಮಾರು ಒಂದು ಕೋಟಿ ಐವತ್ತು ಲಕ್ಷ ರೂ ಅನುದಾನವನ್ನು ರಸ್ತೆಗೆ ಮೀಸಲಿಟ್ಟಿದ್ದಾರೆ. ಅವರ ಮಾರ್ಗದರ್ಶನದಂತೆ ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ನಾಗಣ್ಣ ಸ್ಥಳೀಯ ಮುಖಂಡರೊಂದಿಗೆ ಶಂಕು ಸ್ಥಾಪನೆ ನೆರವೇರಿಸಿದ್ದಾರೆ. ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶಂಕುಸ್ಥಾಪನೆಯ ಕಾರ್ಯ ಸುಗಮವಾಗಿ ಸಾಗಿದೆ. ನೇಗಲಾಲ ಮತ್ತು ಸಿದ್ದರಬೆಟ್ಟ ಗ್ರಾಮಸ್ಥರ ಬಹುದಿನದ ಮುಖ್ಯ ಬೇಡಿಕೆಯಾಗಿದ್ದ ರಸ್ತೆ ಅಭಿವೃದ್ಧಿಯು ಮಾನ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಧಿಕೃತ ವೆಬ್ ಸೈಟ್ https://karresults.nic.in/ ಅಥವಾ https://kseab.karnataka.gov.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಅನಿಲ ಕಂಪನಿಗಳು ಸಿಲಿಂಡರ್ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಲಿದೆ. ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಬಕಾರಿ ಸುಂಕ ಏರಿಕೆ ಮಾಡಿದರೂ ಗ್ರಾಹಕರ ಮೇಲೆ ಯಾವುದೇ ಹೊರೆ ಇಲ್ಲ ಎಂದು ಇಲಾಖೆ ಸಚಿವರು ಹೇಳಿದ್ದಾರೆ. ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ಕ್ಷೇತ್ರದ ಜನಪ್ರಿಯ ಶಾಸಕರು ರಾಜ್ಯದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಕೆ. ಹೇಳಿದರು. ಸಿದ್ದರಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಇಲಾಖೆ ಮುಂದಾಗಿದ್ದು, ದಾಸೋಹ ಭವನದ ದುರಸ್ತಿ ಕಾರ್ಯ, ಕುಡಿಯುವ ನೀರು, ಶೌಚಾಲಯ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮತ್ತು ಮುಡಿ ತೆಗೆಯುವ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ, ಸ್ವಚ್ಛತೆ ಇನ್ನು ಮುಂತಾದ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರದಲ್ಲೇ ಬಗೆಹರಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತೇವೆ ಎಂದರು. ಗೃಹ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಡಾ.ನಾಗಣ್ಣ, ಡಾ.ಜಿ.ಪರಮೇಶ್ವರ್ ಅವರ ಹೆಸರಿನಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವಕ್ಕೆ…
ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಇಲ್ಲಿ ಸಮಾಜಶಾಸ್ತ್ರ ವಿಭಾಗ ಮತ್ತು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ “ಸೋಶಿಯಾಲಜಿ ಸಿನರ್ಜಿ” ಎಂಬ ಅಂತರ್ ಕಾಲೇಜು ಸಮಾಜಶಾಸ್ತ್ರ ವಿಷಯದ ವಿನಿಮಯ ಉಪನ್ಯಾಸ ಮಾಲೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ.ವಿಜಯಲಕ್ಷ್ಮೀ ಎನ್., ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಧುಗಿರಿ ಇವರು ಲಿಂಗತ್ವವು ಆರೋಗ್ಯದ ಸಾಮಾಜಿಕ ನಿರ್ಧಾರಕಾಂಶ: ಸಮಸ್ಯೆಗಳು ಮತ್ತು ಸವಾಲಗಳು ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಮಾಜದಲ್ಲಿ ಸ್ತ್ರೀಯರ ಆರೋಗ್ಯಕ್ಕೆ ದ್ವಿತೀಯ ಸ್ಥಾನ ನೀಡಲಾಗುತ್ತದೆ. ಲಿಂಗತ್ವವು ಕೇವಲ ಜೈವಿಕ ಆಯಾಮವನ್ನಷ್ಟೇ ಹೊಂದಿರದೆ ಮಾನಸಿಕ ಹಾಗೂ ಸಾಮಾಜಿಕ ಆಯಾಮವನ್ನು ಒಳಗೊಂಡಿರುತ್ತದೆ. ಸಮಾಜದಲ್ಲಿ ಲಿಂಗತಾರತಮ್ಯ ಕಂಡು ಬರುತ್ತದೆ. ಗಂಡು ಮಕ್ಕಳಿಗೆ ಹೆಣ್ಣು ಮಕ್ಕಳಿಗಿಂತ ಹೆಚ್ಚು ಪ್ರಾಶಸ್ತ್ರ ನೀಡುವುದು, ಸ್ತ್ರೀಯರು ಅಡುಗೆ ಮಾಡುವುದು, ಅತಿಥಿ ಸತ್ಕಾರ, ಮಕ್ಕಳ ಪಾಲನೆ, ವಿಟಮಿನ್ಯುಕ್ತ ಆಹಾರದ ಸೇವನೆಯ ಕೊರತೆ, ಪುರುಷರ ಊಟದ ನಂತರ ಉಳಿದ ಆಹಾರ ಸೇವಿಸುವ ಪದ್ಧತಿ ಗರ್ಭ ನಿರೋಧಕಗಳ ಬಳಕೆ, ಮುಂತಾದವುಗಳಿಂದ ಸ್ತ್ರೀಯರ ಆರೋಗ್ಯದ…
ಬೀದರ್: ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸುಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣಗಳ ವಿವರ: 22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ ,11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ,49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ. ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ.ಹಾಗೂ 97 ಅಬಕಾರಿ…
ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ಕೆಟ್ಟುನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ನಮ್ಮತುಮಕೂರು ವರದಿ ಮಾಡಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಂಬಂಧಪಟ್ಟ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಮೂಲಕ ನಮ್ಮತುಮಕೂರು ಮಾಧ್ಯಮದ ವರದಿಯಿಂದಾಗಿ ಕಳೆದ 1 ವರ್ಷಗಳಿಂದ ನೀರಿಗಾಗಿ ಕಷ್ಟಪಡುತ್ತಿದ್ದ ಸಾರ್ವಜನಿಕರ ಸಮಸ್ಯೆ ಬಗೆಹರಿದಿದ್ದು, ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಎರ್ರಪಾಳ್ಯ ಗ್ರಾಮದ ನಾಗರಿಕರು ಶುದ್ಧ ಕುಡಿಯುವ ನೀರನ್ನು ತರಲು ಸುಮಾರು ಮೂರ್ನಾಲ್ಕು ಕಿಲೋಮೀಟರ್ ಗಳಷ್ಟು ದೂರ ನಡೆದುಕೊಂಡು ಹೋಗಬೇಕಿತ್ತು. ವಾಹನ ಇದ್ದವರಿಗೆ ದೊಡ್ಡ ಸಮಸ್ಯೆಯಾಗದಿದ್ದರೂ, ನಡೆದುಕೊಂಡು ಹೋಗಿ ನೀರು ತರುವವರ ಸ್ಥಿತಿ ಶೋಚನೀಯವಾಗಿತ್ತು. ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳ ನಿರ್ಲಕ್ಷ್ಯತೆಯನ್ನು ಪ್ರಶ್ನಿಸಿ ನಮ್ಮತುಮಕೂರು ಸವಿರವಾದ ವರದಿಯನ್ನು ಪ್ರಕಟಿಸಿತ್ತು. ಇದೀಗ ವರದಿಯ ಬೆನ್ನಲ್ಲೇ ಸಾರ್ವಜನಿಕರ ಸಮಸ್ಯೆಗೆ…