Author: admin

ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿಗೆ ಬಂಡಾಯ ಸಾಹಿತ್ಯ ಎಂದು ಪರಿಚಯವಾದ ರಂಗಾರೆಡ್ಡಿ ಕೋಡಿರಾಂಪುರ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ತುಮಕೂರು ಡಿಸಿಸಿ ಬ್ಯಾಂಕ್ ನಿರ್ದಶಕ ಬಿ ನಾಗೇಶ್ ಬಾಬು ಮತ್ತು ಪುಲಮ ಘಟ್ಟದ ಕರುನಾಡ ಬೆಳಕು ಫೌಂಡೇಶನ್ ಒತ್ತಾಯಿಸಿದೆ. ಹೆಸರಿನಲ್ಲಿ ಸ್ಮಾರಕ ಸ್ಮಾರಕ ನಿರ್ಮಿಸಬೇಕು ಅದೇ ರೀತಿ ಕೈಮರ ದೊಡ್ಡೇರಿ ರಂಟವಳಲು ರಸ್ತೆಗೆ ರಂಗಾರೆಡ್ಡಿ ಕೋಡಿರಾಂಪುರ ಹೆಸರನ್ನು ನಾಮಕರಣ ಮಾಡಬೇಕೆಂದು ಎಂದು ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಪುನಾ ಭರತ್ ತೆಗ್ಗಿನಮನೆ ರಂಗನಾಥ ಬಾಬು ಕವಿತಾ ಗೌಡ ಗುಟ್ಟೇ ರವಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ : ಮಕರ ಸಂಕ್ರಾಂತಿ ಅಂಗವಾಗಿ ಹೆಲ್ಪ್ ಸೊಸೈಟಿ ವತಿಯಿಂದ ಇಂದು ಆರ್.ಎಂ.ಸಿ. ಯಾರ್ಡ್ ಆವರಣದಲ್ಲಿ ಪಟ್ಟಣದ ಗುಟ್ಟಹಳ್ಳಿ ಬಡ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಕೊವಿಡ್ ಹಿನ್ನೆಲೆಯಲ್ಲಿ ಮಕರ ಸಂಕ್ರಾಂತಿಯಂದು ಎಳ್ಳು ಬೆಲ್ಲದ ಜೊತೆಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಲು ಬಡ ಜನತೆಗೆ ಕಷ್ಟಸಾಧ್ಯವಾಗುವುದರಿಂದ ಹೆಲ್ಪ್ ಸೊಸೈಟಿ ವತಿಯಿಂದ ನಮ್ಮ ಸಂಸ್ಥೆ ಕೈಲಾದಷ್ಟು ಮಟ್ಟಿಗೆ ಬಡ ಕುಟುಂಬಗಳಿಗೆ ಸಂಕ್ರಾಂತಿ ಹಬ್ಬವನ್ನು ಆಚರಿಸಲು ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವೀರಮ್ಮನಹಳ್ಳಿ ಲೋಕೇಶ್, ಬೇಕರಿ ನಾಗರಾಜ, ಗೋವಿಂದ್, ಗೌತಮ್,ಆದಿಕೇಶವ, ಹೆಲ್ಪ್ ಸೊಸೈಟಿ ಸಕ್ರಿಯ ಪದಾಧಿಕಾರಿಯಾದ ಸಾಯಿ ಹಾಜರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಫಾತಿಮಾ ಶೇಖ್ (ಜನನ 9 ಜನವರಿ 1831) ಒಬ್ಬ ಭಾರತೀಯ ಶಿಕ್ಷಣತಜ್ಞ ಮತ್ತು ಸಮಾಜ ಸುಧಾರಕರಾಗಿದ್ದರು. ಅವರು ಸಮಾಜ ಸುಧಾರಕರಾದ ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆಯವರ ಸಹೋದ್ಯೋಗಿಯಾಗಿದ್ದರು. ಫಾತಿಮಾ ಶೇಖ್ ಮಿಯಾನ್ ಉಸ್ಮಾನ್ ಶೇಖ್ ಅವರ ಸಹೋದರಿ, ಅವರ ಮನೆಯಲ್ಲಿ ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ವಾಸವಾಗಿದ್ದರು. ಆಧುನಿಕ ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕರಲ್ಲಿ ಒಬ್ಬರಾದ ಅವರು ಫುಲೆಸ್ ಶಾಲೆಯಲ್ಲಿ ದಲಿತ ಮಕ್ಕಳಿಗೆ ಶಿಕ್ಷಣ ನೀಡಲು ಪ್ರಾರಂಭಿಸಿದರು. ಜ್ಯೋತಿಬಾ ಮತ್ತು ಸಾವಿತ್ರಿಬಾಯಿ ಫುಲೆ ಅವರು ಫಾತಿಮಾ ಶೇಖ್ ಅವರೊಂದಿಗೆ ದೀನದಲಿತ ಸಮುದಾಯಗಳಲ್ಲಿ ಶಿಕ್ಷಣವನ್ನು ಹರಡುವ ಜವಾಬ್ದಾರಿಯನ್ನು ವಹಿಸಿಕೊಂಡರು. ಶೇಖ್ ಸಾವಿತ್ರಿಬಾಯಿ ಫುಲೆಯನ್ನು ಭೇಟಿಯಾದಾಗ ಇಬ್ಬರೂ ಅಮೇರಿಕನ್ ಮಿಷನರಿ ಸಿಂಥಿಯಾ ಫರಾರ್ ನಡೆಸುತ್ತಿದ್ದ ಶಿಕ್ಷಕ ತರಬೇತಿ ಸಂಸ್ಥೆಗೆ ದಾಖಲಾದರು. ಅವರು ಫುಲೆಗಳು ಸ್ಥಾಪಿಸಲು ಹೋದ ಎಲ್ಲಾ ಐದು ಶಾಲೆಗಳಲ್ಲಿ ಕಲಿಸಿದರು ಮತ್ತು ಅವರು ಎಲ್ಲಾ ಧರ್ಮ ಮತ್ತು ಜಾತಿಗಳ ಮಕ್ಕಳಿಗೆ ಕಲಿಸಿದರು. ಶೇಖ್ 1851 ರಲ್ಲಿ ಬಾಂಬೆಯಲ್ಲಿ ಎರಡು ಶಾಲೆಗಳ…

Read More

ತುಮಕೂರು:  ಜಿಲ್ಲೆಯಲ್ಲಿ ಕೊವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಭಾನುವಾರ ಜಿಲ್ಲೆಯಲ್ಲಿ 190 ಜನರಿಗೆ ಕೊವಿಡ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ 441 ಸಕ್ರಿಯ ಕೊವಿಡ್ ಪ್ರಕರಣಗಳಿದ್ದು, ತುಮಕೂರು ತಾಲೂಕಿನಲ್ಲಿ ಅತ್ಯಧಿಕ ಪ್ರಕರಣ ದಾಖಲಾಗಿದ್ದು, ಇಲ್ಲಿ 103 ಪ್ರಕರಣ ದಾಖಲಾಗಿದೆ. ಉಳಿದಂತೆ ಚಿಕ್ಕನಾಯಕನಹಳ್ಳಿ 6, ಕೊರಟಗೆರೆ 34 , ಕುಣಿಗಲ್ 7 ,  ಮಧುಗಿರಿ 8,  ಪಾವಗಡ 10, ಶಿರಾ  3, ತಿಪಟೂರು 14, ತುರುವೇಕೆರೆ 4 ಕೊವಿಡ್ ಪ್ರಕರಣಗಳು ದಾಖಲಾಗಿವೆ. ವರದಿ: ರಾಜೇಶ್ ರಂಗನಾಥ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಮನಗರ: ಕನಕಪುರ ತಾಲ್ಲೂಕಿನ ಸಂಗಮದಲ್ಲಿ ಭಾನುವಾರ ಬೆಳಿಗ್ಗೆ ಆರಂಭಗೊಂಡ ಮೇಕೆದಾಟು ಪಾದಯಾತ್ರೆಗೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆ 9: 30ರ ವೇಳೆಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಹಸಿರು ನಿಶಾನೆ ತೋರಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಕೋವಿಡ್‌ ಕರ್ಫ್ಯೂ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಜಿಲ್ಲಾಡಳಿತ ಹಾಗೂ ಪೊಲೀಸರು ತಡೆ ಒಡ್ಡಬಹುದು ಎನ್ನಲಾಗಿತ್ತು. ಆದರೆ ಸದ್ಯ ಅಂತಹ ಯಾವ ಘಟನೆಗಳೂ ನಡೆದಿಲ್ಲ. ಕಾಂಗ್ರೆಸ್ ನೇತೃತ್ವದ ಪಾದಯಾತ್ರೆ ಸುಗಮವಾಗಿ ನಡೆದಿದ್ದು, ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಸಂಗಮದತ್ತ ಬಂದಿದ್ದಾರೆ. ಕನಕಪುರ-ಮೇಕೆದಾಟು ರಸ್ತೆ ತುಂಬೆಲ್ಲ ವಾಹನಗಳೇ ತುಂಬಿಕೊಂಡಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಪಾದಯಾತ್ರೆಗೆ ಬರುವವರಿಗೆ ಮಾಸ್ಕ್‌, ಸ್ಯಾನಿಟೈಸರ್, ಟೀ ಶರ್ಟ್‌ಗಳನ್ನು ವಿತರಿಸಲಾಗುತ್ತಿದೆ. ಊಟೋಪಚಾರದ ಜೊತೆಗೆ ಆಯೋಜಕರು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೂ ಪಾದಯಾತ್ರೆಗೆ ಮುನ್ನ ಕೆಪಿಸಿಸಿ ಡಿ.ಕೆ. ಶಿವಕುಮಾರ್‌ ಕಾವೇರಿ…

Read More

ಪಾವಗಡ: ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಪಾವಗಡ ತಾಲ್ಲೂಕು ವತಿಯಿಂದ  ಭಾನುವಾರ ವದನಕಲ್ ನ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನಗಳ ಆವರಣ ಸ್ವಚ್ಛಗೊಳಿಸಲಾಯಿತು. ದೇವಸ್ಥಾನಗಳ ಆವರಣ ಹಾಗೂ ಅರಳಿಕಟ್ಟೆ ಮತ್ತು ಬೇವಿನಮರ ಕಟ್ಟೆಗಳ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ‘ಸೇವಾ ದಿನ’ವನ್ನು ಸಂಘವು ಆಚರಿಸಿತು. ಕಾರ್ಯಕ್ರಮದಲ್ಲಿ ಸ್ವಯಂಸೇವಕರಾದ ತಾಲ್ಲೂಕು ಕಾರ್ಯವಾಹಕ ಸಾಸಲಕುಂಟೆ ನಾಗೇಂದ್ರಪ್ರತಾಪ್, ತಾಲ್ಲೂಕು ಸಂಪರ್ಕ ಪ್ರಮುಖ್ ಆರ್ಲಹಳ್ಳಿ ಗೋಪಾಲಕೃಷ್ಣ ಡಿ., ನಿಡಗಲ್ ಹೋಬಳಿ ಪ್ರಮುಖ್ ಮಲ್ಲಮ್ಮನಹಳ್ಳಿ ದಿನೇಶ್, ಕಲಿಕಾ ಕೇಂದ್ರ ಪ್ರಮುಖ್ ಕ್ಯಾತಗಾನಹಳ್ಳಿ ರಾಮಚಂದ್ರ, ಮಲ್ಲಮ್ಮನಹಳ್ಳಿ ಶಾಖಾ ಮುಖ್ಯಶಿಕ್ಷಕ್ ಲಿಖೀತ್ ಕುಮಾರ್, ವದನಕಲ್ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ವದನಕಲ್  ಲೋಕೇಶ್ ರವರು ಸ್ವಚ್ಚತಾ ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಬ್ಬಿ: ತಾಲ್ಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ರೈತರು ಶೇಖರಣೆ. ಮಾಡಲಾಗಿದ್ದ ರಾಗಿಯ ಹುಲ್ಲಿನ ಬಣವೆಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಮಾರು 4 ಟ್ರಾಕ್ಟರ್ ನಷ್ಟ ರಾಗಿ ತೆನೆಯ ಬಣವೆ ಬೆಂಕಿಗಾಹುತಿ ಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿತ್ತು. ಘಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಟಿ.ಕೃಷ್ಣ ಪ್ಪ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದರು. ಬಳಿಕ ನೊಂದ ರೈತ ಕುಟುಂಬದವರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು. ಬಾನಿಹಟ್ಟಿ ಗ್ರಾಮದ ರೈತರಾದ  ನಾಗಣ್ಣ,  ಬಲ್ಲಯ್ಯ, ಶಾರದಮ್ಮ ಎಂಬುವರು, ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 4 ಟ್ರಾಕ್ಟರ್ ರಾಗಿ ತೆನೆಯನ್ನು, ಕಣ ಮಾಡಲು ಸಂಗ್ರಹಿಸಿದ್ದರು. ಆದರೆ ಯಾರೋ ಕಿಡಿಗೇಡಿಗಳು ರಾಗಿ ಬಣವೆಗೆ ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ರೈತರಿಗೆ ತೀವ್ರ ನಷ್ಟವುಂಟಾಗಿತ್ತು. ವರದಿ: ಡಿ.ಮಂಜುನಾಥ್,  ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ವ್ಯಕ್ತಿಯೋರ್ವ ಕೈಕಾಲು ಚೆನ್ನಾಗಿದ್ದರೂ, ಕೈ ಇಲ್ಲದಂತೆ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದು, ವ್ಯಕ್ತಿಯೊಬ್ಬರು ಆತನನ್ನು ತಡೆದು, ಆತನಿಗೆ ಕೈ ಇರುವುದನ್ನು ಬಯಲುಗೊಳಿಸಿ ವಿಡಿಯೋ ವೈರಲ್ ಆಗಿದೆ. ಬೆಂಗಳೂರು ಜಯನಗರದ ಸೌತ್ ಅಂಡ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ವಿಡಿಯೋದಲ್ಲಿರುವ ವ್ಯಕ್ತಿ ಯಾರು ಎನ್ನುವುದು ತಿಳಿದು ಬಂದಿಲ್ಲ. ಜೊತೆಗೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ತಡೆದ ವ್ಯಕ್ತಿ ಯಾರು ಎನ್ನುವುದೂ ತಿಳಿದು ಬಂದಿಲ್ಲ. ಕೈ ಇದ್ದರೂ ಅಂಗವಿಕಲನಂತೆ ನಟಿಸುತ್ತಾ, ಜನರ ಅನುಕಂಪಗಿಟ್ಟಿಸುತ್ತಿದ್ದ ವ್ಯಕ್ತಿಯನ್ನು ತಡೆದ ವ್ಯಕ್ತಿಯೋರ್ವ, ನಿನ್ನ ಕೈ ತೋರಿಸು, ಷರ್ಟ್ ಬಿಚ್ಚು ಎಂದು ಗದರಿ ಬಿಚ್ಚಿಸಿದ್ದು, ಈ ವೇಳೆ ಆತನಿಗೆ ಕೈಗಳಿರುವುದು ಪತ್ತೆಯಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಜೊತೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು, “ಕೈಕಾಲು  ಚೆನ್ನಾಗಿದ್ದರೂ ದುಡಿದು ತಿನ್ನಬಾರದೇ? ಈ ರೀತಿಯಾಗಿ ಬೀದಿಯಲ್ಲಿ ಭಿಕ್ಷೆ ಬೇಡಬೇಕೇ? ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು, “ಸಣ್ಣಪುಟ್ಟ ಭಿಕ್ಷುಕರನ್ನು ಹಿಡಿದು ಬಣ್ಣ ಬಯಲು…

Read More

ಪಾವಗಡ: ಪಾವಗಡ ತಾಲ್ಲೂಕು ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇದನ್ನು ಸರಿಪಡಿಸಲು ಇನ್ನೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಮುಂದಾಗಿಲ್ಲ ಎಂದು  ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಆಕ್ರೋಶ ವ್ಯಕ್ತಪಡಿಸದ್ದಾರೆ. ಸುಮಾರು ಒಂದು ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮದಲ್ಲಿ ಪಾನ್ ಏಷ್ಯಾ ವರ್ಲ್ಡ್ ವೈಡ್ ಕಂಪೆನಿಯ ಸಹಭಾಗಿತ್ವದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಪ್ರಾರಂಭಿಸಿದ್ದು, ಇದು ಕಳಪೆ ಗುಣಮಟ್ಟಾದ್ದಾಗಿರುವುದರಿಂದ ಆಗಾಗ್ಗೆ ಕೆಟ್ಟು ಹೋಗುತ್ತಿದೆ ಎಂದು ಅವರು ದೂರಿದರು. 5 ತಿಂಗಳಿಂದ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತಿದ್ದು, ಇಲ್ಲಿನ ಜನತೆ ಕುಡಿಯುವ ನೀರಿಗಾಗಿ  ಐದಾರು ಕಿ.ಮೀ. ಹೋಗಿ ನೀರು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಸ್ಥಳೀಯ ಜನ ಪ್ರತಿನಿದಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ  ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ದೂರಿದ್ದಾರೆ. ಸಾರ್ವಜನಿಕರ ದೂರಿನ…

Read More

ಪಾವಗಡ: ತಾಲೂಕಿನ ಶ್ರೀ ಕ್ಷೇತ್ರ ನಾಗಲಮಡಿಕೆ ಸುಬ್ರಮಣ್ಯಸ್ವಾಮಿ ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ನಡೆಯಬೇಕಾಗಿತ್ತು. ಆದರೆ ಕೊರೊನಾ ಮೂರನೇ ಅಲೆಯ ಭೀತಿಯಿಂದ ಈ ವರ್ಷ ತಾಲೂಕು ಆಡಳಿತ ದೇವಸ್ಥಾನದಲ್ಲಿ ನಡೆಯುವ ಜಾತ್ರೆಯನ್ನು ರದ್ದುಪಡಿಸಲಾಗಿತ್ತು. ದೇವಸ್ಥಾನದಲ್ಲಿ ಪೂಜೆ ಅಭಿಷೇಕ ನಡೆದರು ಭಕ್ತಾದಿಗಳಿಗೆ ಅವಕಾಶ ನೀಡಲಾಗಿರಲಿಲ್ಲ. ಇನ್ನು ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ರದ್ದಾಗಿದೆ ಎಂದು ಮಾಹಿತಿಯನ್ನು ತಿಳಿಯದ ಕೆಲವು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಆದರೆ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರಿಂದ ಯಾವುದೆ ಭಕ್ತಾದಿಗಳಿಗೆ ಅವಕಾಶ ನೀಡಲಾಗಲಿಲ್ಲ. ದೂರದಿಂದ ಬಂದಂತಹ ಭಕ್ತಾದಿಗಳು ರಸ್ತೆಯ ಬದಿಯಲ್ಲಿರುವ ರಕ್ಷಣಾ ಗೋಡೆಗೆ ತೆಂಗಿನಕಾಯಿ ಒಡೆದು ಹೂ ಹಾಕಿ ದಾರಿಯಿಂದಲೇ ಸುಬ್ರಮಣ್ಯ ಸ್ವಾಮಿ ಕೈಮುಗಿದು ಹಿಂದೆ ತಿರುಗಿ ಹೋಗಿರುವುದು ಈ ವೇಳೆ ಕಂಡುಬಂದಿದೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More