Author: admin

ಬೆಂಗಳೂರು:  ಖಾಸಗಿ ಕಂಪನಿಯ ಎಲೆಕ್ಟ್ರಿಕ್ ಬೈಕ್ ನ್ನು ಸಚಿವ ಶ್ರೀರಾಮುಲು ಅವರು ಉದ್ಘಾಟಿಸಿ, ಪರಿಸರ ಸ್ನೇಹಿ ಬೈಕ್ ಗಳ ಸಂಖ್ಯೆ ಹೆಚ್ಚಿಸಲು ಶುಭ ಹಾರೈಸಿದರು. ಈ  ವೇಳೆ ಮಾತನಾಡಿದ ಅವರು, ಮೇಡ್ ಇನ್ ಕರ್ನಾಟಕ, ಮೇಡ್ ಇನ್ ಇಂಡಿಯಾ ಅಡಿಯಲ್ಲಿ ನಮ್ಮದೇ ಸ್ಟಾರ್ಟ್ ಆಪ್ ಗಳು ದೇಶದಾದ್ಯಂತ ಅರಿವು ಮೂಡಿಸಲು ದಾಖಲೆ ಯಾತ್ರೆ ಕೈಗೊಳ್ಳುತ್ತಿರುವುದು ಒಳ್ಳೆಯ ವಿಷಯ ಎಂದರು. ಎಲೆಕ್ಟ್ರಿಕ್ ಬೈಕ್ ಗಳಲ್ಲಿ 54 ದಿನಗಳಲ್ಲಿ 4,216 ಕಿ.ಮೀ ಪ್ರಯಾಣ ಮಾಡಿ ಅರಿವು ಮೂಡಿಸುವ ಜೊತೆಗೆ ದಾಖಲೆ ಪ್ರಯಾಣ ಕೈಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಖಾಸಗಿ ಸಂಸ್ಥೆಗಳು ಹಾಗೂ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪೆಟ್ರೋಲ್, ಡಿಸೇಲ್ ಮೇಲಿನ ಅವಲಂಬನೆ ಕಡಿಮೆ ಮಾಡಿಕೊಳ್ಳಲು ಎಲೆಕ್ಟ್ರಿಕ್ ಗೆ ಬದಲಾಗಬೇಕಿದೆ ಎಂದು ಅವರು ತಿಳಿಸಿದರು. ಇತ್ತೀಚೆಗೆ ಸುಮಾರು 50 ಕೋಟಿ ವೆಚ್ಚದಲ್ಲಿ ಎಲೆಕ್ಟ್ರಿಕ್ ಬಸ್ ಗಳನ್ನು ಸೇವೆಗೆ ಅರ್ಪಿಸಲಾಗಿದೆ ಹಾಗೆಯೇ ಹಲವು ಸಂಸ್ಥೆಗಳು ತಮ್ಮ ಎಲೆಕ್ಟ್ರಿಕ್ ಟು ವೀಲರ್ , ಫೋರ್ ವೀಲರ್ ಹಾಗೂ ಆಟೋಗಳನ್ನು…

Read More

ತುರುವೇಕೆರೆ ತಾಲ್ಲೂಕು ದಂಡಿನಶಿವರ ಹೋಬಳಿ ,ಕೊಂಡಜ್ಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ಜಿ.ಪುರುಷೋತ್ತಮ್ ವಹಿಸಿದ್ದರು.  ತರಬೇತಿ ಕಾರ್ಯಾಗಾರಕ್ಕೆ ಆಗಮಿಸಿದ ಎಲ್ಲ ಸದಸ್ಯರನ್ನು ಶಿಕ್ಷಕರಾದ ಮೋಹನ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ವನಜಾಕ್ಷಮ್ಮ ಮಾತನಾಡಿದರು. ಶಿಕ್ಷಕಿ ಲಕ್ಷ್ಮೀ  ವಂದಿಸಿದರು. ಈ ಕಾರ್ಯಾಗಾರದಲ್ಲಿ  ಸದಸ್ಯರು ಶಿಕ್ಷಕರು ಹಾಜರಿದ್ದರು. ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಿತ್ರದುರ್ಗ:  ಜಿಲ್ಲೆಯ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ  ಮಡಿವಾಳ ಜನಾಂಗದವರು (ಗುರುಪೀಠದಲ್ಲಿ )ದಲ್ಲಿ  ಆಯೋಜಿಸಿದ್ದ ‘ಕಾಯಕ ಜನೋತ್ಸವ-2022’ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮಡಿವಾಳ ಜನಾಂಗದ   ಪರಮಪೂಜ್ಯ ಗುರುಗಳಾದ , ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ  ಮಾಚಿದೇವ ಮಹಾಸಂಸ್ಥಾನದಲ್ಲಿ ಮಾಚಿದೇವ ರತ್ನ ಪುರಸ್ಕೃತ  ಪ್ರಶಸ್ತಿಯನ್ನು ನೀಡಿ   ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಂತಹ  ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ  ಸಚಿವರು ಡಿ.ಸುಧಾಕರ್  ರವರನ್ನು ಸಹ  ಸಿದ್ದರಾಮಯ್ಯ “ನವರ ನೇತೃತ್ವದಲ್ಲಿ  ಪರಮಪೂಜ್ಯ ಮಡಿವಾಳ ಗುರುಗಳಾದ  ಡಾ.ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಡಿ ಆತ್ಮಿಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರು ಮಾಜಿ ಸಂಸದರು ಆದ ಬಿ.ಎನ್ ಚಂದ್ರಪ್ಪ,  ಡಿ .ಸುಧಾಕರ್ , ಟಿ.ರಘುಮೂರ್ತಿ  ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು , ಸಚಿವರು , ಕಾರ್ಯಕರ್ತರು ಹಾಗೂ ಮುಖಂಡರುಗಳು  ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್ . ಹಿರಿಯೂರು. ನಮ್ಮತುಮಕೂರು.ಕಾಂನ ಕ್ಷಣ…

Read More

ತುಮಕೂರು:  ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಕೊಳೆಗೇರಿ ಪ್ರದೇಶ ನಿವಾಸಿಗಳ ಪುನರ್ವಸತಿ ಯೋಜನೆಯಡಿಯಲ್ಲಿ  ಮಾರಿಯಮ್ಮನಗರದಲ್ಲಿ ನಿರ್ಮಿಸಿರುವ ವಸತಿ ಸಂಕೀರ್ಣವನ್ನು ಉದ್ಘಾಟಿಸಲಾಯಿತು. ಇದೇ ವೇಳೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಒಳಪಡುವ ಮತ್ತೊಂದು  ಕಟ್ಟಡವಾದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ನೂತನ ಸಭಾಂಗಣ, ಪ್ರಯೋಗಾಲಯ ಹಾಗೂ ಗ್ರಂಥಾಲಯ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ  ಕಾನೂನು ಮತ್ತು ಸಂಸದೀಯ ವ್ಯವಹಾರ  ಹಾಗೂ ಸಣ್ಣ  ನೀರಾವರಿ ಸಚಿವ ಜಿ.ಸಿ.ಮಾಧುಸ್ವಾಮಿ  ಉದ್ಘಾಟನೆ ನೆರವೇರಿಸಿದರು. ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಭೈರತಿ, ಲೋಕಸಭಾ ಸದಸ್ಯ ಜಿ.ಎಸ್.ಬಸವರಾಜು, ಶಾಸಕರಾದ ಬಿ.ಬಿ.ಜ್ಯೋತಿಗಣೇಶ್ ಮೊದಲಾದವರು ಭಾಗವಹಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು: “ಈ ನನ್ನ ಮಗ ನಮ್ಮ ಮಂತ್ರಿ ಹೆಂಗೆ ಗೊತ್ತಾ ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದಾನಲ್ಲ ಆ ರೀತಿ. ಹಾಳು ಮಾಡಿಬಿಟ್ಟಿದ್ದಾನೆ ನಮ್ಮ ಜಿಲ್ಲೆಯನ್ನ, ಮಾತು ಎತ್ತಿದ್ರೆ ಹೊಡಿ ಬಡಿ ಕಡಿ ಅಂತಾನೆ” ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸ್ವಪಕ್ಷದವರೇ ಮಾತನಾಡಿರುವ ಘಟನೆ ನಡೆದಿದೆ. ತುಮಕೂರಿನಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಆರಂಭದಲ್ಲಿ ಸಂಸದ ಜಿ ಎಸ್ ಬಸವರಾಜ್ ಮತ್ತು ಸಚಿವ ಭೈರತಿ ಬಸವರಾಜ್ ಗುಸುಗುಸು ಮಾತನಾಡಿದ್ದು, ಸಚಿವ ಮಾಧುಸ್ವಾಮಿ ಅವರ ಕಾರ್ಯವೈಖರಿ ಬಗ್ಗೆ ಪರಸ್ಪರ ಟೀಕೆ ಮಾಡುತ್ತಾ ಹೋಗುತ್ತಾರೆ. ಆ ಬಳಿಕ ಸುಮ್ಮನಿರು ಆ ಮೇಲೆ ಮಾತನಾಡೋಣ ಎನ್ನುತ್ತಾ ಪತ್ರಿಕಾಗೋಷ್ಠಿ ನಡೆಸಲು ಮುಂದಾಗಿದ್ದಾರೆ. ಇವರಿಬ್ಬರೂ ಕಾನೂನು ಸಚಿವ ಮಾಧುಸ್ವಾಮಿ ಬಗ್ಗೆ ಹಾಗೂ ಅವರು ಜಿಲ್ಲೆಯಲ್ಲಿ ಮಾಡುತ್ತಿರುವ ಕೆಲಸ, ತಮಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂದು ಹೇಳುತ್ತಿರುವುದು ಸ್ಪಷ್ಟವಾಗಿದೆ. ಜಿಲ್ಲೆಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಗ್ಗಟ್ಟು ಇಲ್ಲ ಎಂಬುದನ್ನು ಇದು ತೋರಿಸುತ್ತದೆ. ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು.…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ರೋಟರಿ ಸಂಸ್ಥೆಗಳು ಸಾರ್ವಜನಿಕರಿಗೆ ಆರೋಗ್ಯ, ಶಿಕ್ಷಣ, ಸಮಾಜಸೇವೆ ಸೇರಿದಂತೆ ಹಲವಾರು ಉತ್ತಮ ಸೇವೆಗಳನ್ನು ನೀಡುವುದರ ಜೊತೆಗೆ ಯುದ್ಧದ ಸಂದರ್ಭದಲ್ಲಿ ಸಹ ನಮ್ಮ ಸೈನಿಕರಿಗೆ ಗಾಯಾಳುಗಳಿಗೆ ತುರ್ತು ಸೇವೆ ಸೇರಿದಂತೆ  ಹಲವಾರು ಉಪಯುಕ್ತ ಸಹಾಯಗಳನ್ನು ಮಾಡು ವಂತಹ  ಸಂಸ್ಥೆಯಾಗಿದೆ, ಇವರ ಸೇವೆ ಇದೇ ರೀತಿ ಮುಂದುವರೆಯಲಿ ಎಂಬುದಾಗಿ ನಗರಸಭೆ ಅಧ್ಯಕ್ಷರಾದ  ಶಂಷುನ್ನೀಸಾ ಅವರು ತಿಳಿಸಿದರು. ಹಿರಿಯೂರು ನಗರದ ರೋಟರಿ ಸಭಾಭವನದಲ್ಲಿ ಬುಧವಾರ ಮಧ್ಯಾಹ್ನ  ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ ಹಾಗೂ ಇನ್ಹರ್ ವ್ಹೀಲ್ ಕ್ಲಬ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ  ಪೌರಕಾರ್ಮಿಕರಿಗೆ ಉಚಿತ  ಹೈಜನ್ ಕಿಟ್  ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿರಿಯೂರು ನಗರಸಭೆ ಅಧ್ಯಕ್ಷೆ  ಶಂಶುನ್ನಿಸಾ ಅವರು ಮಾತನಾಡಿದರು. ರೋಟರಿ ಸಂಸ್ಥೆ ಜಿಲ್ಲಾ ಗೌರ್ನರ್ ವಿ.ತಿರುಪತಿನಾಯ್ಡು ಅವರು  ಮಾತನಾಡಿ, ರೋಟರಿ ಸಂಸ್ಥೆ ವತಿಯಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಸಮಾಜದ ಬಡವರಿಗೆ, ಅನಾಥರಿಗೆ, ನಿರ್ಗತಿಕರಿಗೆ, ಫುಟ್ ಮಾಸ್, ಸ್ಯಾನಿಟೈಸರ್…

Read More

ರಾಯಚೂರು: ನಗರದ ರೈಲ್ವೆ ನಿಲ್ದಾಣದ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ಶಾಲಾ ಓಮ್ನಿ ವ್ಯಾನ್‌ ಇದ್ದಕ್ಕಿದ್ದಂತೆ ಹೊತ್ತಿ ಉರಿದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ಬುಧವಾರ ನಡೆಯಿತು. ದೇವದುರ್ಗ ತಾಲ್ಲೂಕು ಗೊಬ್ಬೂರ ಗ್ರಾಮದ ಖಾಸಗಿ ಶಾಲೆಯ ವ್ಯಾನ್‌ ಇದಾಗಿದ್ದು, ಬೆಂಕಿ ಅವಘಡದಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವ್ಯಾನ್ ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಚಾಲಕ ಹಾಗೂ ಕೆಲವು ಜನರು ನೀರು ಹಾಕಿ ನಂದಿಸಲು ಯತ್ನಿಸಿದ್ದಾರೆ. ರೈಲ್ವೆ ನಿಲ್ದಾಣದೊಳಗಿನಿಂದ ಮರಳು ಹಾಗೂ ಬೆಂಕಿನಂದಿಸುವ ಉಪಕರಣ ತಂದು ಹಾಕಲಾಗಿತ್ತು. ಆದರೂ ಇದ್ದಕ್ಕಿದ್ದಂತೆ ಬೆಂಕಿ ಕೆನ್ನಾಲಿಗೆ ಚಾಚಿ ವ್ಯಾನ್‌ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ವಾಹನವು ತಲುಪುವ ಮೊದಲೇ ವಾಹನ ಉರಿದುಹೋಗಿತ್ತು ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು:  ಅತಿಥಿ ಉಪನ್ಯಾಸಕರ ಮುಷ್ಕರ ಸ್ಥಳಕ್ಕೆ ತುಮಕೂರು ನಗರದ ಶಾಸಕರಾದ  ಜ್ಯೋತಿ ಗಣೇಶ್ ಅವರು ಆಗಮಿಸಿದ್ದರು, ಪ್ರತಿಭಟನಾಕಾರರ ಜೊತೆಗೆ ಮಾತನಾಡಿದರು. ತುಮಕೂರು  ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರು   ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಆಗಮಿಸಿದ ಶಾಸಕರು,  ಅತಿಥಿ ಶಿಕ್ಷಕರ ಸಮಸ್ಯೆಯ ಬಗ್ಗೆ ಅರಿವಿದೆ. ನಿಮಗೆ ಸರ್ಕಾರ ಒಳ್ಳೆಯದು ಮಾಡುವ ನಿರೀಕ್ಷೆ ಇದೆ. ಈ ವಿಚಾರದ ಬಗ್ಗೆ  ಉನ್ನತ ಶಿಕ್ಷಣ ಸಚಿವರ ಜೊತೆಗೆ ಮಾತನಾಡುವುದಾಗಿ ಅವರು ಹೇಳಿದರು. ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ  ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಉನ್ನತ ಶಿಕ್ಷಣ ಉನ್ನತ ಶಿಕ್ಷಣ ಇಲಾಖೆಯ ಅಪರ  ಕಾರ್ಯದರ್ಶಿಗಳೊಂದಿಗೆ ಕೂಡ ಚರ್ಚಿಸಿ, ಶೀಘ್ರ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳುವುದಾಗಿ ತಿಳಿಸಿದರು. ವರದಿ : ಸೌಮ್ಯ ಎಸ್.ಬಿ., ಸಿರಾ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸರಗೂರು:  ದುಷ್ಟರ ಅಟ್ಟಹಾಸಕ್ಕೆ ಸುಮಾರು 20 ಸಾವಿರ ರೂಪಾಯಿ ಬೆಲೆ ಬಾಳುವ ಹುಲ್ಲಿನ ಮೇದ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಕೆ ಬೆಳತೂರು ಗ್ರಾಮದಲ್ಲಿ ನಡೆದಿದೆ. ಮಧ್ಯ ರಾತ್ರಿ ಸುಮಾರು 2 ಗಂಟೆ ವೇಳೆಗೆ ಯಾರೋ ಕಿಡಿಗೇಡಿಗಳು  ಹುಲ್ಲಿನ ಮೇದಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಪರಿಣಾಮವಾಗಿ  ರೈತ ಸಿದ್ದನಾಯಕ ಎಂಬವರಿಗೆ ತೀವ್ರ ನಷ್ಟವಾಗಿದ್ದು, ಇದೀಗ ಅವರು ಕಣ್ಣೀರು ಹಾಕುತ್ತಾ ಕುಳಿತುಕೊಳ್ಳುವಂತಾಗಿದೆ. ಘಟನೆಯಿಂದ ನೊಂದಿರುವ ಸಿದ್ದನಾಯಕ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, ನಾನು ಒಬ್ಬ ಹುಟ್ಟಿನಿಂದಲೂ ವಿಶೇಷಚೇತನನಾಗಿದ್ದೇನೆ. ನಮಗೆ ಯಾವುದೇ ರೀತಿಯ ಸ್ವಂತ ಜಮೀನಾಗಲಿ, ಆಸ್ತಿಯಾಗಲಿ ಇಲ್ಲ. ಬೇರೆಯವರ ಜಮೀನಿನಲ್ಲಿ ಹುಳಿಮೆ ಮಾಡಿ ಬದುಕು ನಡೆಸುತ್ತಿದ್ದೇವೆ. ವಾರದ ಹಿಂದೆಯಷ್ಟೇ ಭತ್ತವನ್ನು ಹೊಕ್ಕಣೆ, ನಡೆಸಿ ಹುಲ್ಲನ್ನು ಸಂಗ್ರಹಿಸಲಾಗಿತ್ತು . ಆದರೆ ಇಂದು ಕೀಡಿಗೇಡಿಗಳು ಈ ರೀತಿಯ ಕೆಲಸ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿ ಕಣ್ಣೀರು ಹಾಕಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡಿದ ಕೆಲಸಗಾರರಿಗೆ ಇನ್ನೂ ಸಹ ಸಂಬಳ ನೀಡಿಲ್ಲ. ಈ ಹುಲ್ಲಿನ ಮೇದವನ್ನು ಮಾರಿ…

Read More

ರಾಜ್ಯಕ್ಕೆ ಮೂರನೇ ಅಲೆ ಈಗಾಗಲೇ ಬಂದಿದೆ. ಇದು ಮೂರನೇ ಅಲೆಯ ಪ್ರಾರಂಭದ ಹಂತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.  ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್,  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರದಲ್ಲೂ ಕೇಸ್ ಗಳು ಹೆಚ್ಚಾಗುತ್ತಿದ್ದು,  ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ.ಬೆಂಗಳೂರಿಗೆ ವಿಶೇಷ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅವಶ್ಯಕ ಎಂದಿದ್ದಾರೆ. ವೀಕೆಂಡ್ ಕರ್ಫ್ಯೂ: ದೇಶದಲ್ಲಿ ನೋಡ ನೋಡುತ್ತಿದ್ದಂತೆ ಕೊರೊನಾ ಮೂರನೇ ಅಲೆ ಅಬ್ಬರಿಸಲು ಶುರುಮಾಡಿದೆ. ದೆಹಲಿಯಲ್ಲಿ ಹೆಮ್ಮಾರಿ ಸೋಂಕು ಅಬ್ಬರಿಸುತ್ತಿದ್ದು,  ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೆ ಮುಂದಾಗಿದೆ ಎಂದು ವರದಿಯಾಗಿದೆ. ದೆಹಲಿಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಡೆಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಶನಿವಾರ ಕರ್ಫ್ಯೂ ಹೇರಿ, ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ಕೇಜ್ರಿವಾಲ್ ಸರ್ಕಾರ ಚಿಂತನೆ ನಡೆಸಿದೆ. ಪಾದಯಾತ್ರೆ ನಿಲ್ಲಲ್ಲ: ನಾವು ಪಾದಯಾತ್ರೆ ಮಾಡಿದ್ರೆ ಮಾತ್ರ…

Read More