Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಇಂದಿನಿಂದ ಪಕ್ಷದ ನಾಯಕರುಗಳು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಿಜೆಪಿ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ಸಿಂಗ್, ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ನೇತೃತ್ವದ ಮೂರು ತಂಡಗಳಲ್ಲಿ ಬಿಜೆಪಿಯ ಪ್ರಮುಖ ಮುಖಂಡರುಗಳು, ಶಾಸಕರು, ಸಂಸದರು ಪಕ್ಷ ಬಲವರ್ಧನೆಗೆ ಇಂದಿನಿಂದ ಏ. 28ರವರೆಗೆ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಭೆ ಸಮಾವೇಶಗಳಲ್ಲಿ ಭಾಗಿಯಾಗುವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವ ಹ್ರಹ್ಲಾದ್ ಜೋಷಿ, ಸಚಿವರಾದ ಡಾ. ಅಶ್ವತ್ಥ ನಾರಾಯಣ, ಬಿ. ಶ್ರೀರಾಮುಲು, ಬಿಜೆಪಿ ರಾಜ್ಯ ಉಪಾಧ್ಯಕ್ಷರುಗಳಾದ ಬಿ.ವೈ ವಿಜಯೇಂದ್ರ,, ಲಕ್ಷಣ ಸವದಿ, ನಿರ್ಮಲ್‌ಕುಮಾರ್ ಸುರಾನಾ, ನಯನಾ ಗಣೇಶ್ ಇವರುಗಳಿದ್ದು, ರಾಜ್ಯ ಕಾರ್ಯದರ್ಶಿ ವಿನಯ್ ಬಿದಿರೆ ಈ ತಂಡದ ಸಂಯೋಜಕರಾಗಿದ್ದು, ಈ ತಂಡ ಇಂದು ಮತ್ತು ನಾಳೆ ಮಂಗಳೂರು ವಿಭಾಗದಲ್ಲಿ ಸರಣಿ ಸಭೆ ನಡೆಸಲಿದ್ದು, 19, 20 ರಂದು ಶಿವಮೊಗ್ಗ ವಿಭಾಗದಲ್ಲಿ,…
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ತಲೆದಂಡ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಸಂತೋಷ್ ಪಾಟೀಲ್ ಪ್ರಕರಣವು ಕಾಂಗ್ರೆಸ್‍ಗೆ ಪ್ರಭಲ ಅಸ್ತ್ರ ಸಿಕ್ಕಂತಾಗಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಕೂಡಲೇ ಈಶ್ವರಪ್ಪ ರಾಜೀನಾಮೆಯನ್ನು ಪಡೆಯಬೇಕು ಮತ್ತು ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಈಶ್ವರಪ್ಪನವರ ರಾಜೀನಾಮೆಗೆ ಪ್ರತಿಪಕ್ಷಗಳಿಂದ ಒತ್ತಡ ಹಿನ್ನೆಲೆ ಸಿಎಂ ಬೊಮ್ಮಾಯಿಯವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. ಸದ್ಯ ಬೆಳಗಾವಿ ಪ್ರವಾಸದಲ್ಲಿರುವ ಯಡಿಯೂರಪ್ಪನವರ ಜೊತೆಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಈಶ್ವರಪ್ಪನವರಿಂದ ರಾಜೀನಾಮೆ ಪಡೆಯುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ. ಉಭಯ ನಾಯಕರ ಫೋನ್ ಸಂಭಾಷಣೆ ಕುರಿತು ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಿಎಂ ಬೊಮ್ಮಾಯಿಯವರ ಮಾತಿಗೆ ಬಿಎಸ್‌ವೈ ಸಮ್ಮತಿ ನೀಡಿದ್ರಾ? ಸಚಿವ ಸ್ಥಾನಕ್ಕೆ ಇಂದು ರಾತ್ರಿಯೇ ಕೆ.ಎಸ್.…
ಹೃದಯಘಾತ ಒಳಗಾಗಿದ್ದ ನೀರುವಿತರಕರೊಬ್ಬರು ಚಿಕಿತ್ಸೆ ಪಡೆದು ಮರಳಿ ಕೆಲಸಕ್ಕೆ ಆಗಮಿಸುವ ವೇಳೆ ಕೆಲಸ ನೀಡಲು ನಿರಾಕರಿಸಿದ ಘಟನೆ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಪಂಚಾಯತ್ ನ ಕ್ರಮವನ್ನು ಖಂಡಿಸಿ ಸಂತ್ರಸ್ತ ಹಾಗೂ ಕುಟುಂಬದ ಸದಸ್ಯರು ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಧರಣಿ ನಡೆಸಿದ್ದು, ತಕ್ಷಣವೇ ಕೆಲಸಕ್ಕೆ ಮರುನೇಮಕ ಮಾಡುವಂತೆ ಒತ್ತಾಯಿಸಿದರು. ಹೃದಯಘಾತ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಕಛೇರಿಗೆ ಕೆಲಸಕ್ಕೆ ಹಾಜರಾಗಲು ಹೋದರೆ, ಗ್ರಾಮ ಪಂಚಾಯಿತಿ ಆಡಳಿತ ನೀರುವಿತರಕ ಹುದ್ದೆಯಿಂದ ನಿನ್ನನ್ನು ವಜಾಕರಿಸಲಾಗಿದೆ ಎಂದು ಹೇಳಿದೆ. ಇದರಿಂದಾಗಿ ನನ್ನ ಕುಟುಂಬವೇ ಇಂದು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ನೊಂದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕೃಷ್ಣಚಾರಿ ಅಳಲು ತೋಡಿಕೊಂಡಿದ್ದಾರೆ. ನಾನು 2014 ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗೆ ನೀರು ವಿತರಕನಾಗಿ ಕೆಲಸಕ್ಕೆ ಸೇರಿದ್ದು, ಪ್ರಾಮಾಣಿಕವಾಗಿ ಕೆಲಸ ನಿರ್ವಹಣೆ ಮಾಡುತ್ತಿದ್ದೆ. ಇತ್ತೀಚೆಗೆ ನಾನು ಹೃದಯಘಾತಕ್ಕೆ ಒಳಗಾಗಿ ಆಸ್ಪತ್ರೆ ಸೇರಿ ಸುಮಾರು 8 ಇಂಚಿನಷ್ಟು ಬೈಪಾಸ್ ಸರ್ಜರಿ ಮಾಡಿದ್ದಾರೆ. ಈ…
ಮಧುಗಿರಿ: ತಾಲೂಕಿನ ಪುರವರ ಹೋಬಳಿಯ ಗೊಂದಿಹಳ್ಳಿ,ಪುರವರ,ಬ್ಯಾಲ್ಯ,ಕೋಡಗದಾಲ ಗ್ರಾಮಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ,ಬಾಲ್ಯ ವಿವಾಹ ನಿಷೇದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನದ ಅಭಿಯಾನ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧವಾಗಿ ವಾರ್ತಾ ಇಲಾಖೆಯ “ವಿಡಿಯೋ ಆನ್ ವ್ಹೀಲ್ಸ್ ” ಮುಖಾಂತರ ಬಸ್ ನಿಲ್ದಾಣ ಸ್ಥಳಗಳಲ್ಲಿ ವಿಡಿಯೋ ಪ್ರದರ್ಶನ ಏರ್ಪಡಿಸಲಾಗಿತ್ತು. ಗ್ರಾಮದಲ್ಲಿನ ಕಾರ್ಯಕ್ರಮವನ್ನು ಮಧುಗಿರಿಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್, ಗೊಂದಿಹಳ್ಳಿ ಗ್ರಾ.ಪಂ ಅಧ್ಯಕ್ಷೆ ರಮ್ಯಾ, ಪುರವರ ಗ್ರಾ.ಪಂ ಉಪಾಧ್ಯಕ್ಷೆ ರಾಧಿಕಾ, ಪಿ ಡಿ ಓ ಪುಂಡಲಿಕ, ಕಂದಾಯ ಇಲಾಖೆಯ ನಟರಾಜು ಉದ್ಘಾಟಿಸಿದರು. ಸಾಂತ್ವನ ಕೇಂದ್ರದ ವಿಜಯಲಕ್ಷ್ಮಿ, ಗ್ರಾಮದ ಮುಖಂಡ ಸತೀಶ್ ಗ್ರಾ.ಪಂ ಬಿಲ್ ಕಲೆಕ್ಟರ್ ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಧುಗಿರಿಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮಹೇಶ್ ಪ್ರಮಾಣ ವಚನ ಭೋದಿಸಿದರು. ಪಿಡಿಓ ಪುಂಡಲಿಕ ರವರು ಬಾಲ್ಯವಿವಾಹದಿಂದಾಗುವ ಅನಾಹುತಗಳನ್ನು ಕುರಿತು ವಿವರಿಸಿದರು. ನಂತರ ಬಾಲ್ಯವಿವಾಹ ನಿಷೇದ ಕುರಿತು ಜಾಗೃತಿ…
ರಾಮನವಮಿ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟಗಳು ನಡಿಸಿದ ಪರಿಣಾಮ ಉಂಟಾದ ಗಲಭೆಯಲ್ಲಿ ಕೆಲವು ವಾಹನಗಳು ಮತ್ತು ಮನೆಗಳಿಗೆ ಬೆಂಕಿ ಹಚ್ಚಿಲಾಗಿದ್ದು ಪರಿಸ್ಥಿತಿ ಹತೋಟಿಗೆ ತರಲು ಪೋಲೀಸರು ಕೊನೆಗೂ ಯಶಸ್ವಿಯಾಗಿ ಇಡೀ ಖಾರ್ಗೋನ್ ನಗರದಲ್ಲಿ ಕಫ್ರ್ಯೂ ವಿಸಲಾಗಿದೆ.ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಜಿಲ್ಲಾಕೇಂದ್ರದ ಬಳಿಯ ತಾಲಾಬ್ ಚೌಕ್ ಪ್ರದೇಶದಿಂದ ರಾಮನವಮಿ ಮೆರವಣಿಗೆ ಪ್ರಾರಂಭವಾದಾಗ ಕಿಡಿಗೇಡಿಗಳು ಕಲ್ಲು ಎಸೆದು ದಾಂದಲೆ ನಡೆಸಿದ್ದಾರೆ ಅಂಗಡಿಗಳಿಗೆ ಬೆಂಕಿಹಚ್ಚಿ ಭಯದ ವಾತಾವರನ ಸೃಷ್ಠಸಿದರು ಎಂದು ಉದ್ರಿಕ್ತ ಗುಂಪು ಪೋಲಿಸರ ಮೇಲೆ ಹಲ್ಲೆಗೆ ಮುಂದಾದಾಗ ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲೀಸರು ಅಶ್ರುವಾಯುಸೆಡಿಸಲಾಯಿತ್ತು.ಖಾರ್ಗೋನೆ ಪೋಲೀಸ್ ಅೀಧಿಕ್ಷಕ ಸಿದ್ಧಾರ್ಥ್ ಚೌಧರಿ ಮತ್ತು ಇತರ ಇಬ್ಬರು ಪೋಲೀಸ್ ಸಿಬ್ಬಂದಿ ಸೇರಿ ಹಲವು ಜನರು ಗಾಯಗೊಂಡಿದ್ದಾರೆ. ಘಟನೆಯ ನಂತರ, ಇಡೀ ಖಾರ್ಗೋನ್ ನಗರದಲ್ಲಿ ಕಫ್ರ್ಯೂ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ .ಅನುಗ್ರಹ ಹೇಳಿದ್ದಾರೆ.ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಮಾತ್ರ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ತಿಳಿಸಲಾಗಿದೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು. ಆಕ್ಷೇಪಾರ್ಹ ಸಂದೇಶಗಳು ಮತ್ತು…
ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸೋಮವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಗುಜರಾತ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಹೈದರಾಬಾದ್ 19.1 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ಸಾಧಿಸಿತು. ಸತತ 3 ಗೆಲುವು ಸಾಧಿಸಿದ್ದ ಗುಜರಾತ್ ತಂಡಗ ಗೆಲುವಿನ ನಾಗಾಲೋಟಕ್ಕೆ ಹೈದರಾಬಾದ್ ಬ್ರೇಕ್ ಹಾಕಿತು. ಹಾರ್ದಿಕ್ ಪಾಂಡ್ಯ ಪಡೆಗೆ ಸೋಲಿನ ರುಚಿ ತೋರಿಸುವ ಮೂಲಕ ಕೇನ್ ವಿಲಿಯಮ್ಸನ್ ಪಡೆ 2ನೇ ಗೆಲುವು ದಾಖಲಿಸಿತು. ವರದಿ ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು. ಉಡುಪಿ-ಮಂಗಳೂರು ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಇಂದು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡೋಕೆ ನೈತಿಕ ಹಕ್ಕೇ ಇಲ್ಲ ಎಂದರು. ಈ ದೇಶದಲ್ಲಿ ಅತಿ ಹೆಚ್ಚು ಬೆಲೆ ಏರಿಕೆ ಮಾಡಿದ ಕೀರ್ತಿ, ಖ್ಯಾತಿ, ದಾಖಲೆ ಕಾಂಗ್ರೆಸ್ ಪಕ್ಷದ್ದು ಎಂದು ವಾಗ್ದಾಳಿ ನಡೆಸಿದ ಅವರು, ಯಾವ ನೈತಿಕತೆ ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೋ ಗೊತ್ತಿಲ್ಲ ಎಂದರು. ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ಬೆಲೆಗಳು ಇಳಿಕೆಯಾಗಿರಲಿಲ್ಲ. ಈಗಿರುವಾಗ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುವುದಕ್ಕೆ ನೈತಿಕತೆ ಇಲ್ಲ ಎಂದರು. ಮಂಡ್ಯದ ವಿದ್ಯಾರ್ಥಿನಿ ಮಸ್ಕಾನ್‌ಗೂ ಆಲ್ ಖೈದಾಗೂ ಸಂಬಂಧ ಇದೆ ಈ ಬಗ್ಗೆ ತನಿಖೆ ನಡೆಸಿ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ…
ಗುಜರಾತಿನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಹ್ಮದಾಬಾದ್ ನಿಂದ ೨೩೫ ಕಿ.ಮೀ. ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದಲ್ಲಿನ ಘಟಕದಲ್ಲಿ ಮುಂಜಾನೆ ೩ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಈ ಕುರಿತು ಪ್ರತಿಕ್ರಿಯಿಸಿದ ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್, ಮೃತಪಟ್ಟಿರುವ ಆರು ಕಾರ್ಮಿಕರು ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದರು. ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದರು. ರಿಯಾಕ್ಟರ್ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೆಂಕಿಯನ್ನು ಸಹ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಬೇರೆ ಯಾರೂ ಗಾಯಗೊಂಡಿಲ್ಲ ಎಂದು ಅವರು ಹೇಳಿದರು. ವರದಿ: ಆಂಟೋನಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದರು. ನಗರದಲ್ಲಿಂದು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪದೇ ಪದೇ ಪಟ್ರೋಲ್, ಡಿಸೇಲ್,ಗ್ಯಾಸ್ ಸಿಲಿಂಡರ್, ಪಿಎನ್ ಜಿ, ಸಿಎನ್ ಜಿ ಬೆಲೆಗಳನ್ನು ಏರಿಸುತ್ತಿದೆ. ಮೋದಿ ಸರ್ಕಾರ ಜನವಿರೋಧಿ ಎಂಬುದಕ್ಕೆ ಇದು ಸಾಕ್ಷಿ ಎಂದು ದೂರಿದರು.ಅಧಿಕಾರ ವೈಫಲ್ಯವನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್ ನಾಯಕರು ಸಮರ ಸಾರಿದರು. ಕಾಂಗ್ರೆಸ್ ಮಖಂಡರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಎಂ. ಉದಯ್‌ಶಂಕರ್, ಮತ್ತಿತರರು ಭಾಗವಹಿಸಿದ್ದರು. ಭಾವನಾತ್ಮಕ ವಿಚಾರಗಳನ್ನು ಮುನ್ನಲೆಗೆ ತಂದು…
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆ ಒಳಪಡಿಸಿತು. 79 ವರ್ಷದ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕನಾಗಿರುವ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಹತ್ವದ ಮಾಹಿತಿ ಸಂಗ್ರಹಿಸಿದರು ಎಂದು ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಖರ್ಗೆಯವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ಪೂರಕವಾಗಿ ಖರ್ಗೆಯವರನ್ನು ಕೆಲವೊಂದು ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ. ಫೆ. 26, 2011ರಲ್ಲಿ ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಶೇರುಗಳ ಸ್ವಾಧೀನ ಪ್ರಕರಣದಲ್ಲಿ ವಿವಾದ ಉಂಟಾಗಿದೆ. ನ. 20 ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್ ಸಾರ್ವಜನಿಕ ಲಿಮಿಟೆಡ್ ಕಂಪನಿಯಾಗಿತ್ತು. 1937ರ ಭಾರತೀಯರ ಕಂಪನಿಗಳ ಕಾಯ್ದೆಯಡಿ ಲಿಮಿಟೆಡ್ ಕಂಪನಿಯಾಗಿತ್ತು. ವಿವಿಧ ಭಾಷೆಗಳಲ್ಲಿ ಪತ್ರಿಕೆಗಳನ್ನು…