Subscribe to Updates
Get the latest creative news from FooBar about art, design and business.
- CEC ಜ್ಞಾನೇಶ್ ಕುಮಾರ್ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
- ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
- ವಿರಾಜಪೇಟೆ ಗಣೇಶ ವಿಸರ್ಜನೆ ವೇಳೆ ಕರೆಂಟ್ ಶಾಕ್: ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ; ತಪ್ಪಿದ ದೊಡ್ಡ ಅನಾಹುತ!
- ಕಚೇರಿಗೆ ತಡವಾಗಿ ಬಂದ ಅಧಿಕಾರಿಗಳಿಗೆ ಗೇಟ್ ಬಂದ್: ಜಿಪಂ ಸಿಇಒ ದಿಢೀರ್ ಭೇಟಿ, ಒಂದು ದಿನದ ಸಂಬಳ ಕಟ್ ಎಚ್ಚರಿಕೆ!
- ಕೊರಟಗೆರೆ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಒತ್ತು– ಸರ್ವಜನ ಶ್ರಮಜೀವಿ ಸೇವಾ ಟ್ರಸ್ಟ್ ಉದ್ಘಾಟನೆ
- ಮಾವತ್ತೂರು ಸೊಸೈಟಿ ಸರ್ವ ಸದಸ್ಯರ ಸಭೆ ರಣರಂಗ: ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ, ಅರ್ಧದಲ್ಲೇ ಸಭೆ ಮುಂದೂಡಿಕೆ!
- ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
- ಬುಡುಬುಡಿ ವೇಷಧಾರಿ ಕಳ್ಳರ ಬಂಧನ
Author: admin
ತಿಪಟೂರು: ತಾಲೂಕು ಕಬ್ನಳ್ಳಿ ಹೋಬಳಿ ಕಟ್ಟಡ ಕಾರ್ಮಿಕ ಸಂಘ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕ ದಿನಾಚರಣೆಯನ್ನು ಅರಳಗುಪ್ಪೆ ಗ್ರಾಮದಲ್ಲಿ ನಡೆಸಲಾಯಿ ತು. ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ, ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅರಳಗುಪ್ಪೆ ಗ್ರಾಮಕ್ಕೆ ನಾನು ಶಾಸಕನಾಗಿದ್ದ ಒಂದು ಕೋಟಿ ರೂ., ನವಗ್ರಾಮ ಯೋಜನೆಯಡಿ ಸಿಮೆಂಟ್ ರಸ್ತೆ ಹಾಗೂ ಅರಳುಕುಪ್ಪೆ ಗ್ರಾಮದ ಕೆರೆಗೆ ನೀರು ತುಂಬಿಸುವ ಯೋಜನೆ ಕೂಲಿ ಕಾರ್ಮಿಕರು ಗಳಿಗೆ ಇಎಸ್ ಐ ಆಸ್ಪತ್ರೆ ತಿಪ್ಟೂರು ನಗರಕ್ಕೆ ತಂದು ಕೊಟ್ಟಿದ್ದೇನೆ ಎಂದರು. ನಗರದಲ್ಲಿ ತಿಪಟೂರಿನಲ್ಲಿ ಇಂದಿರಾ ಕ್ಯಾಂಟೀನ್ ತಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಡವರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು. ನಮ್ಮ ಅಧಿಕಾರದಲ್ಲಿ ಹಲವಾರು ಯೋಜನೆಗಳನ್ನು ತಿಪಟೂರು ತಾಲೂಕಿಗೆ ತಂದಿರುತ್ತೇನೆ ಅರಳಗುಪ್ಪೆ ಲಿ ಸೇರಿದ ಎಲ್ಲಾ ಕಾರ್ಮಿಕರಿಗೂ ಕಿಟ್ಟು ವಿತರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಿದ್ದಯ್ಯ, ಸಂಘಟನಾ ಸಂಚಾಲಕ ಹರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷ…
ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲೂ ಪಿಎಸ್ ಐ ನೇಮಕಾತಿ ಪರೀಕ್ಷೆ ಹಗರಣ ನಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಯುವ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಅವರನ್ನು ಬಂಧಿಸಲಾಗಿದೆ. ಪಿಎಸ್ ಐ ಅಭ್ಯರ್ಥಿ ಪರ ಡೀಲ್ ಕುದುರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಶರತ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಸರಗೂರು: ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಕೇಂದ್ರ ಸರ್ಕಾರ ನೀಡುವ ವಿಶಿಷ್ಟ ಗುರುತಿನ ಚೀಟಿ UDID Card ಆಸೆಸ್ ಮೆಂಟ್ ಕ್ಯಾಂಪ್ ಮೈಸೂರು KR ಆಸ್ಪತ್ರೆ ವೈದ್ಯಾಧಿಕಾರಿ ರವರು ತಪಾಸಣೆ ಮಾಡಿ, ಒಟ್ಟು 87 ವಿಕಲಚೇತನರಲ್ಲಿ 75 ಜನ ವಿಕಲಚೇತನರಿಗೆ UDID Card ಆಸೆಸ್ ಮೆಂಟ್ ಮಾಡಿದರು. ಈ ಸಂದರ್ಭದಲ್ಲಿ ಸರಗೂರು ತಾಲೂಕು ಸಂಯೋಜಕರಾದ S.H.ದೇವರಾಜ್ ಎಲ್ಲಾ ರೀತಿಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಿದರು ತಮ್ಮ ಸ್ವಂತ ಖರ್ಚಿನಿಂದ ಬಂದ ವೈದ್ಯಾಧಿಕಾರಿಗಳಿಗೆ ಚಹಾ ಹಾಗೂ ಉಪಹಾರ ವ್ಯವಸ್ಥೆ ಮಾಡಿದರು. ಇದೇ ವೇಳೆ ವಿಕಲಚೇತನರ ಸಮಸ್ಯೆಯನ್ನು ಆಲಿಸಿ ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹಾಜರಿದ್ದರು. ಸರಗೂರು ತಾಲೂಕು ಸಂಯೋಜಕರಾದ S.H. ದೇವರಾಜ್, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಬಸವರಾಜು, ಸ್ವಮೇಶ್, ಸಂತೋಷ, ಮೋಹನ್ ಕುಮಾರ, ಕೆಂಡಗಣ, ರಂಜಿತ, ಮಹಾದೇವಮೂರ್ತಿ ಹಾಗೂ ಮೈಸೂರಿನ ವೈದ್ಯಾಧಿಕಾರಿ ಸರಗೂರು ಆಸ್ಪತ್ರೆ ಸಿಬ್ಬಂದಿ ಹಾಜರಿದ್ದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಗುಬ್ಬಿ: ತುಮಕೂರು ಜಿಲ್ಲೆಯ ಪೆದ್ದನಹಳ್ಳಿಯಲ್ಲಿ ಎಸ್ ಸಿ ಹಾಗೂ ಎಸ್ ಟಿ ಯುವಕರ ಜೋಡಿ ಕೊಲೆಯನ್ನು ಖಂಡಿಸಿ, ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ದಲಿತ ಮುಖಂಡ ಡಿ.ಜೆ.ಎಸ್. ನಾರಾಯಣಪ್ಪ ಮಾತನಾಡಿ, ಕೊಲೆಗಡುಕರನ್ನು ಕೂಡಲೇ ಸರ್ಕಾರ ಪೊಲೀಸ್ ಇಲಾಖೆ ಬಂಧಿಸಬೇಕು. ತನಿಖೆಯನ್ನು ಸಿಐಡಿಗೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ 25 ಲಕ್ಷ ರೂಪಾಯಿಗಳನ್ನು ಪರಿಹಾರ ನೀಡಿ. ಕುಟುಂಬದ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮಕ್ಕಳ ಉನ್ನತ ಶಿಕ್ಷಣ ನೀಡಲು ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ದಲಿತ ಮುಖಂಡ ಕಡಲಕೆರೆ ಹನುಮಂತರಾಯಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ 5 ಎಕರೆ ಜಮೀನು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು. ಕುಟುಂಬಕ್ಕೆ ವಸತಿ ಯೋಜನೆಯಲ್ಲಿ ಮನೆ…
ತುಮಕೂರು: ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿಯ ರಸ್ತೆಬದಿ ಮಂಗಳವಾರ ಬೆಳ್ಳಂಬೆಳಗ್ಗೆ ಪತ್ತೆಯಾದ ವ್ಯಕ್ತಿಯ ಮೃತದೇಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ವಿಚಾರಗಳು ಬಯಲಾಗಿದೆ. ಐಯ್ಯಣ್ಣ ಎಂಬುವವರು ತನ್ನ ಪುತ್ರಿ ಸುಮಿತ್ರಾಳನ್ನು 6 ವರ್ಷದ ಹಿಂದೆ ಮೂಡ್ಲಯ್ಯಗೆ ಕೊಟ್ಟು ಮದುವೆ ಮಾಡಿದ್ದರು. ಪತ್ನಿ ಇದ್ದರೂ ಮೂಡ್ಲಯ್ಯಗೆ ಪರಸ್ತ್ರೀಯ ಚಟ ಹೊಂದಿದ್ದನು. ಈ ವಿಚಾರವಾಗಿ ಮೂಡ್ಲಯ್ಯಗೆ ಬುದ್ಧಿಮಾತು ಹೇಳಿದ್ದ ಮಾವ ಐಯ್ಯಣ್ಣ, ಮಗಳ ಜೀವನ ಬೀದಿ ಪಾಲು ಮಾಡಬೇಡ. ಪರಸ್ತ್ರೀ ಜತೆಗಿನ ಸಂಬಂಧವನ್ನು ನಿಲ್ಲಿಸುವಂತೆ ಬುದ್ದಿ ಹೇಳಿದ್ದಾರೆ. ಆದರೆ ಮೂಡ್ಲಯ್ಯ ಅವರ ಮಾತಿಗೆ ಬೆಲೆ ಕೊಡದೆ ತನ್ನ ಕೆಟ್ಟ ಚಾಳಿ ಮುಂದುವರಿಸಿದ್ದ ಇದರಿಂದ ಬೆಸತ್ತ ಅಪ್ಪ-ಮಗ ಇಬ್ಬರೂ ಮೂಡ್ಲಯ್ಯನ ಮುಗಿಸಲು ಸಂಚು ರೂಪಿಸಿದ್ದು, ಸೋಮವಾರ ತಡರಾತ್ರಿ ಬೈಕ್ ನಲ್ಲಿ ಬರುತ್ತಿದ್ದ ಮೂಡ್ಲಯ್ಯನನ್ನು ಕರಿಶೆಟ್ಟಿಹಳ್ಳಿ ಬಳಿ ಅಡ್ಡಗಟ್ಟಿದ ಮಾವ-ಬಾಮೈದುನ ಇಬ್ಬರೂ ಆತನ ಮರ್ಮಾಂಗಕ್ಕೆ ಒದ್ದು ಸಾಯಿಸಿದ್ದಾರೆ. ಬಳಿಕ ರಸ್ತೆಬದಿ ನಗ್ನ ಸ್ಥಿತಿಯಲ್ಲಿ ಮೃತದೇಹ ಎಸೆದು, ನಡುರಸ್ತೆಯಲ್ಲಿ ಬೈಕ್ ಬಿಸಾಡಿ ಪರಾರಿಯಾಗಿದ್ದರು. ಮಂಗಳವಾರ ಬೆಳಗ್ಗೆ ಮ್ರತದೇಹ ಮತ್ತು…
ಉತ್ತರಪ್ರದೇಶ: ಮದುವೆ ಆಮಂತ್ರಣ ಪತ್ರಿಕೆ ಹಂಚಲು ಹೋಗುತ್ತಿದ್ದ ವೇಳೆ 18 ವರ್ಷ ವಯಸ್ಸಿನ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಆರೋಪಿಗಳು ತನ್ನನ್ನು ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದರು. ನಂತರ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೇರೊಬ್ಬರೊಂದಿಗೆ ಇರುವಂತೆ ಒತ್ತಾಯಿಸಿದರು ಎಂದು ಯುವತಿ ಹೇಳಿಕೆ ನೀಡಿರುವುದಾಗಿ ಝಾನ್ಸಿ ಜಿಲ್ಲೆಯ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಎಪ್ರಿಲ್ 21 ರಂದು ನಡೆಯಲಿರುವ ತನ್ನ ಮದುವೆಯ ಕಾರ್ಡ್‌ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಎಪ್ರಿಲ್ 18 ರಂದು ತನ್ನನ್ನು ಅಪಹರಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ಬೆಳಗಾವಿ: ಅಪೆಕ್ಸ್ ಬ್ಯಾಂಕ್ ನಿಂದ ಶಾಸಕ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಬಂಡೆಪ್ಪ ಕಾಶಂಪುರ ಸಹಿತ ಹಲವರು ಸಾಲ ಪಡೆದಿದ್ದು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದ ಸುಮಾರು 24 ಜನ ಅಪೆಕ್ಸ್ ಬ್ಯಾಂಕಿನಿಂದ ಸುಮಾರು ಆರು ಸಾವಿರ ಕೋಟಿ ರೂ. ವರೆಗೆ ಸಾಲ ಪಡೆದಿದ್ದಾರೆ. ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹಾಗೂ ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಅನೇಕರು ಸಾಲ ಪಡೆದಿದ್ದಾರೆ. ಸಾಲ ಪಡೆದವರಿಗೆ ನೋಟಿಸ್ ನೀಡಲಾಗಿದೆ ಎಂದರು. ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಸಾಲ ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾಲ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ನೀಡಲಾಗಿದೆ. ಸಾಲ ಕಟ್ಟದವರ ಆಸ್ತಿ ಜಪ್ತಿ ಹೇಗೆ ಮಾಡಿಕೊಳ್ಳುತ್ತದೆಯೋ ಹಾಗೆಯೇ ಅಪೆಕ್ಸ್ ಬ್ಯಾಂಕ್ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಧು ಇದೇ ವೇಳೆ…
ಬೆಂಗಳೂರು: ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಲ್ಲಿ ನಡೆದಿದೆ. 19 ವರ್ಷ ವಯಸ್ಸಿನ ಸೋಮನಾಥ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸೋಮನಾಥ್ 5ನೇ ತಾರೀಕಿನಂದು ಸ್ನೇಹಿತರು ನನ್ನ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅವರಿಗಿಂತ ಮೊದಲು ನಾನೇ ಸಾಯ್ತೀನಿ ಎಂದು ಡೆತ್ ನೋಟ್ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಈ ಬಗ್ಗೆ ಆತನ ಪೋಷಕರು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಇದಾದ ಬಳಿಕ ಮಾರತ ಹಳ್ಳಿ ಬಳಿ ಎಮ್ ಸ್ಯಾಂಡ್ ಅನ್ ಲೋಡ್ ಮಾಡುವ ಲಾರಿಯಲ್ಲಿ ಸೋಮನಾಥ್ ನ ಮೃತದೇಹ ಪತ್ತೆಯಾಗಿತ್ತು. ತಮಿಳುನಾಡಿನಿಂದ ಮರಳು ತುಂಬಿಕೊಂಡು ಬಂದಿದ್ದ ಟಿಪ್ಪರ್ ಲಾರಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಅಪರಿಚಿತ ಶವ ಯಾವುದೆಂದು ತಿಳಿಯಲು ತಮಿಳುನಾಡು ಕ್ವಾರಿ ಮತ್ತು ಕೆ.ಆರ್ .ಪುರಂ ಸ್ಟಾಂಡ್ ನಲ್ಲೆ ಪೊಲೀಸರು ವಿಚಾರಣೆ ಮಾಡಿದ್ದಾರೆ.ಈ ವೇಳೆ ಹೊಸಕೋಟೆ ನಿವಾಸಿ ಎನ್ನುವುದು ತಿಳಿದು ಬಂದಿದೆ.…
ರಾಜಸ್ಥಾನ: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಕಾರಣ ವಧುಗಳಿಬ್ಬರು ಅದಲು-ಬದಲು ಆದ ಘಟನೆ ರಾಜಸ್ಥಾನದ ಉಜ್ಜೈನಿಯಲ್ಲಿ ನಡೆದಿದೆ. ರಾಜಸ್ಥಾನದ ಅಸ್ಲಾನಾ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ವಿದ್ಯುತ್ ಕೈಕೊಟ್ಟಿದೆ. ಪೂಜೆ ಪ್ರಾರಂಭಿಸಿ ಸಪ್ತಪದಿ ತುಳಿಯುವ ವೇಳೆ ಎರಡು ಜೋಡಿಗಳಿದ್ದ ಕಾರಣ ವಧುಗಳು ಅದಲು-ಬದಲಾಗಿದ್ದಾರೆ. ನಿಕಿತಾ ಎಂಬ ವಧು ತಮ್ಮ ಭಾವಿ ಪತಿ ಗಣೇಶ್ ಬದಲಿಗೆ ಭೋಲಾ ಕೈಹಿಡಿದಿದ್ದು, ಗಣೇಶ್ನೊಂದಿಗೆ ಕರಿಷ್ಮಾ ಕೈಹಿಡಿದು ಕುಳಿತುಕೊಂಡಿದ್ದಾರೆ. ಮದುವೆಯ ಕೆಲಕಾರ್ಯ ನಡೆದ ಬಳಿಕ ಜೋಡಿ ಅದಲು- ಬದಲು ಆಗಿರುವುದು ತಿಳಿದು ಬಂದಿದೆ. ಬಳಿಕ ತುರಾತುರಿಯಲ್ಲಿ ಜೋಡಿಯನ್ನು ಸರಿಪಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5
ತುಮಕೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿ ಬಳಿ ತಡರಾತ್ರಿ ನಡೆದಿದೆ. ಇಲ್ಲಿನ ಚೌಕೇನಹಳ್ಳಿ ಗ್ರಾಮದ ನಿವಾಸಿ 40 ವರ್ಷ ವಯಸ್ಸಿನ ಮೂಡ್ಲಯ್ಯ ಹತ್ಯೆಯಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ತಡ ರಾತ್ರಿ ತೋಟದಿಂದ ಮನೆಯ ಕಡೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆನ್ನಲಾಗಿದೆ. ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಹತ್ಯೆಯ ಬಳಿಕ ರಸ್ತೆ ಬದಿಯ ಕಾಲುವೆಗೆ ಮೃತದೇಹವನ್ನು ಎಸೆದು ಹೋಗಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಗುಬ್ಬಿ ಸಿಪಿಐ ನಧಾಫ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…