Author: admin

ಬೀದರ್: ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ   ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸುಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣಗಳ ವಿವರ: 22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ ,11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ,49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ. ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ.ಹಾಗೂ 97 ಅಬಕಾರಿ…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಯಾರ ಪಾಳ್ಯ ಎನ್ನುವ ಗ್ರಾಮದಲ್ಲಿ ಕಳೆದ ಒಂದು ವರ್ಷಗಳಿಂದ ಕೆಟ್ಟುನಿಂತಿದ್ದ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ನಮ್ಮತುಮಕೂರು ವರದಿ ಮಾಡಿದ್ದು, ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಂಬಂಧಪಟ್ಟ ಅಧಿಕಾರಿಗಳು ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಮೂಲಕ ನಮ್ಮತುಮಕೂರು ಮಾಧ್ಯಮದ ವರದಿಯಿಂದಾಗಿ ಕಳೆದ 1 ವರ್ಷಗಳಿಂದ ನೀರಿಗಾಗಿ ಕಷ್ಟಪಡುತ್ತಿದ್ದ ಸಾರ್ವಜನಿಕರ ಸಮಸ್ಯೆ ಬಗೆಹರಿದಿದ್ದು, ನಮ್ಮತುಮಕೂರು ಮಾಧ್ಯಮಕ್ಕೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಎರ್ರಪಾಳ್ಯ ಗ್ರಾಮದ ನಾಗರಿಕರು ಶುದ್ಧ ಕುಡಿಯುವ ನೀರನ್ನು ತರಲು ಸುಮಾರು ಮೂರ್ನಾಲ್ಕು ಕಿಲೋಮೀಟರ್ ಗಳಷ್ಟು ದೂರ ನಡೆದುಕೊಂಡು ಹೋಗಬೇಕಿತ್ತು. ವಾಹನ ಇದ್ದವರಿಗೆ ದೊಡ್ಡ ಸಮಸ್ಯೆಯಾಗದಿದ್ದರೂ, ನಡೆದುಕೊಂಡು ಹೋಗಿ ನೀರು ತರುವವರ ಸ್ಥಿತಿ ಶೋಚನೀಯವಾಗಿತ್ತು. ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳ ನಿರ್ಲಕ್ಷ್ಯತೆಯನ್ನು ಪ್ರಶ್ನಿಸಿ ನಮ್ಮತುಮಕೂರು ಸವಿರವಾದ ವರದಿಯನ್ನು ಪ್ರಕಟಿಸಿತ್ತು. ಇದೀಗ ವರದಿಯ ಬೆನ್ನಲ್ಲೇ ಸಾರ್ವಜನಿಕರ ಸಮಸ್ಯೆಗೆ…

Read More

ತುಮಕೂರು: ನಗರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸಬೇಕು ಎಂದು ವಿವಿಧ ದಲಿತ ಮುಖಂಡರು ಸಲಹೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಸಲಹೆ ನೀಡಲಾಯಿತು. ದಲಿತ ಮುಖಂಡರು ಮಾತನಾಡಿ, ಈ ಬಾರಿ ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿ ಹಾಗೂ ಮುಖಂಡರನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಬೇಕು. ನಗರದಾದ್ಯಂತ ಬಂಟಿಂಗ್ಸ್ ಗಳನ್ನು ಅಳವಡಿಸಬೇಕು. ವೇದಿಕೆಯಲ್ಲಿ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಆಚರಿಸುವುದರಿಂದ ವಿವಿಧ ಕ್ಷೇತ್ರದ ಸಾಧಕರಿಗೆ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ತಲಾ 25 ಪ್ರಶಸ್ತಿಗಳನ್ನು ನೀಡಿ ಗೌರವಿಸಬೇಕು. ಉನ್ನತ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಸಮುದಾಯಗಳು, ಸರ್ಕಾರಿ ಅಧಿಕಾರಿ/ಸಿಬ್ಬಂದಿ, ಸ್ತ್ರೀಶಕ್ತಿ ಸಂಘದ ಸದಸ್ಯರು, ಶಾಲಾ ಮಕ್ಕಳು, ರೈತರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು.…

Read More

ತುಮಕೂರು: ಭಾರತದಲ್ಲಿ ಜಾತಿ ವ್ಯವಸ್ಥೆ ಒಂದು ಮಾನಸಿಕ ರೋಗ. ಮನುಷ್ಯನ ದೇಹಕ್ಕೆ ರೋಗ ಅಂಟಿಕೊಂಡಂತೆ ಜಾತಿ ಅಂಟಿಕೊಂಡಿದೆ. ಬಾಲ್ಯದಲ್ಲಿ ಜಾತಿ ವ್ಯವಸ್ಥೆಯಿಂದ ನಲುಗಿದ ಬಾಬೂಜಿ, ಸಮಾಜದಲ್ಲಿದ್ದ ಜಾತಿ ವ್ಯವಸ್ಥೆಗೆ ಚಿಕಿತ್ಸೆ ನೀಡಿದರು ಎಂದು ಸಾಹಿತಿ ಡಾ. ಶಿವಣ್ಣ ತಿಮ್ಲಾಪುರ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ.ಬಾಬು ಜಗಜೀವನರಾಮ್ ಅಧ್ಯಯನ ಪೀಠವು ಸ್ನಾತಕೋತ್ತರ ಪ.ಜಾ./ಪ.ಪಂ.ಗಳ ಪುರುಷರ ವಿದ್ಯಾರ್ಥಿನಿಲಯದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಬೂಜಿ ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಗಾಗಿ ಶ್ರಮಿಸಿದವರಲ್ಲಿ ಪ್ರಮುಖರು. ದಲಿತ ವರ್ಗದವರನ್ನು ಸಂಘಟಿಸಿ ಅಂಬೇಡ್ಕರ್ ರ ಜೊತೆಗೂಡಿ ಅಸ್ಪೃಶ್ಯತೆ ವಿರುದ್ಧ ಹೋರಾಡಿದರು. ಹಿಂದೂ ಧರ್ಮದಲ್ಲಿ ಇದ್ದುಕೊಂಡೇ ಅಲ್ಲಿನ ನ್ಯೂನತೆಗಳನ್ನು ತಿದ್ದಿದವರು ಎಂದರು. ಬಾಬೂಜಿ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದರೂ ಅದರಿಂದ ವಂಚಿತರಾದರು. ಅವರ ರಾಜಕೀಯ ಜೀವನ ಸುದೀರ್ಘವಾದದ್ದು. ತಮ್ಮ ರಾಜಕೀಯ ಅವಧಿಯಲ್ಲಿ ದೇಶಕ್ಕೆ ಅನೇಕ ಅನುಕೂಲ ಆಗುವಂತ ಕಾರ್ಯಗಳನ್ನು ಮಾಡಿದ್ದಾರೆ. ಇವರ ಬದುಕಿನ ಕುರಿತು…

Read More

ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ.ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿತೋಪು ಪ್ರದೇಶದಲ್ಲಿ ಬಾಬು ಜಗಜೀವನರಾಂ ವೃತ್ತವನ್ನು ಅಭಿವೃದ್ಧಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು, ಶೀಘ್ರದಲ್ಲಿಯೇ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲು ಜಿಲ್ಲಾಡಳಿತ ಅಣಿಯಾಗುತ್ತಿದೆ ಎಂದು ತಿಳಿಸಿದರು. ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಂ ಅವರಂತಹ ಮಹನೀಯರ ಮಾರ್ಗದಲ್ಲಿ ನಾವು ನಡೆಯಬೇಕು. ತಳ ಸಮುದಾಯಗಳಿಗಾಗಿ ಅವರ ಶ್ರಮವನ್ನು ಸ್ಮರಿಸಬೇಕು. ಹಿಂದುಳಿದ, ದಲಿತ, ಮಹಿಳೆಯರು, ಮಕ್ಕಳು, ರೈತ ಸಮುದಾಯ ಅಭಿವೃದ್ಧಿಯಾಗಬೇಕೆಂಬ ಅವರ ಮಹದಾಸೆಯನ್ನು ನಾವೆಲ್ಲ ಒಟ್ಟಾಗಿ ಈಡೇರಿಸುವ ಪ್ರಯತ್ನ ಮಾಡಬೇಕೆಂದರಲ್ಲದೆ, ಜಗಜೀವನರಾಂ ಅವರ ಆಶಯದಂತೆ ಜಿಲ್ಲಾಡಳಿತದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ…

Read More

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಕೆಲ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40 ಕಿ.ಮೀ. ವೇಗದ ಗಾಳಿ ಬೀಸುವ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಚ್ಚರಿಕೆ ನೀಡಿದೆ. ಬಿರುಗಾಳಿಯ ಸಮಯದಲ್ಲಿ ಜನರು ಮನೆಯೊಳಗೆ ಇರಲು ಮತ್ತು ತೀವ್ರ ಮಳೆಯ ಸಮಯದಲ್ಲಿ ಪ್ರಯಾಣ ತಪ್ಪಿಸಲು ಸೂಚಿಸಲಾಗಿದೆ ಎಂದು KSNDMC ತಿಳಿಸಿದೆ, ಬೆಂಗಳೂರು ಮತ್ತು ಹತ್ತಿರದ ಪ್ರದೇಶಗಳಲ್ಲಿ ಗುಡುಗು ಸಹಿತ ಬಿರುಗಾಳಿ ಬೀಸುವ ಬಗ್ಗೆ ಎಚ್ಚರಿಕೆ ನೀಡಿದೆ. KSNDMCಯ ಐದು ದಿನಗಳ ಹವಾಮಾನ ಮುನ್ಸೂಚನೆಯ ಪ್ರಕಾರ, ಸೋಮವಾರದವರೆಗೆ ಕರ್ನಾಟಕದಾದ್ಯಂತ ಮೋಡ ಕವಿದ ವಾತಾವರಣವಿರುತ್ತದೆ, ಗುಡುಗು, ಮಿಂಚು ಮತ್ತು…

Read More

ಬೆಂಗಳೂರು: ಇಂದಿನ ಜಾಗತೀಕರಣ, ಉದಾರಿಕರಣ ಹಾಗೂ ಯಾಂತ್ರಿಕರಣದ ಕಾಲಘಟ್ಟದಲ್ಲಿ ಯುವ ಪೀಳಿಗೆ ಸ್ಪರ್ಧಾತ್ಮಕ ಮನೋಭಾವ ರೂಪಿಸಿಕೊಂಡು ಸಂಘಟಿತರಾಗುವಂತೆ ಹಿರಿಯ ಐ.ಪಿ.ಎಸ್ ಅಧಿಕಾರಿ ಜಿನೇಂದ್ರ ಕಣಗಾವಿ ಜೈನ ಸಮುದಾಯಕ್ಕೆ ಕರೆ ನೀಡಿದರು. ಅವರಿಂದು ಇಲ್ಲಿನ ಪೇರೆಂಟ್ ಅಸೋಸಿಯೇಷನ್ ಕಾಲೇಜಿನಲ್ಲಿ ರಾಜಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಹಾಸ್ತಿ ಜೈನ್ ಮಿಲನ್  ದೂರದೃಷ್ಟಿ, ಕ್ರಿಯಾಶೀಲತೆ , ಹೊಂದಾಣಿಕೆ ಮನೋಭಾವತ್ವದ ಸಂಘಟನೆಯಾಗಿದ್ದು ಕಳೆದ  ಹಲವಾರು ವರ್ಷಗಳಿಂದ ಉತ್ತಮ ಕಾರ್ಯಕ್ರಮಗಳ ಮೂಲಕ ಹೆಚ್ಚು ಪ್ರವರ್ಧಮಾನಕ್ಕೆ ಬಂದಿದೆ ಎಂದರು. ಈ ಹಿಂದೆ 60 ವರ್ಷ ಮೀರಿದ್ದವರಿಗಿದ್ದ ಹಲವು ಕಾರ್ಯಕ್ರಮಗಳಿಗೆ ಯುವ ಪೀಳಿಗೆಯನ್ನ ಸಂಘಟಿಸಿ ಒಂದು ಗುಡಿಸುತ್ತಿದೆ, ಜೈನರನ್ನ ಒಂದೆಡೆ ಸೇರಿಸಿ ಸ್ಪರ್ಧಾತ್ಮಕ ಮನೋಭಾವದ ಮೂಲಕ ಜಿನ ಸಮ್ಮಿಲನವನ್ನು ಪ್ರೋತ್ಸಾಹಿಸುತ್ತಿದೆ, ಇದರ ಜೊತೆಗೆ ಧಾರ್ಮಿಕ ಮನೋಭಾವ ಸದುದ್ದೇಶವು  ಮುಖ್ಯವಾಗಿದೆ ಎಂದರು. ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿಯಾಗಲಿದ್ದು, ಇದೊಂದು ಬಾವನಾತ್ಮಕ ಸಮ್ಮೇಳನವಾಗಿದೆ ಎಂದರು. ಸ್ಪರ್ಧಾತ್ಮಕ ಚಟುವಟಿಕೆಯ ಬಗ್ಗೆ ಉತ್ಸಾಹ ಜೈನರಲ್ಲಿ…

Read More

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬ್ಯಾಡ್ಮಿಂಟನ್ ಕೋಚ್ ವೊಬ್ಬನನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ಬ್ಯಾಡ್ಮಿಂಟನ್ ಕೋಚ್ ಸುರೇಶ್ ಬಾಲಾಜಿ(30) ಬಂಧಿತ ಆರೋಪಿಯಾಗಿದ್ದಾನೆ.  ವಿಚಾರಣೆ ವೇಳೆ ಆರೋಪಿ ಸುರೇಶ್ ಬಾಲಾಜಿ ಬ್ಯಾಡ್ಮಿಂಟನ್ ಹೇಳಿಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯರನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್​ ಸೇರಿದ್ದ ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರ ಬಳಿಯೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ. ಎಸ್ ಎಸ್ ಎಲ್‌ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕಿ, ರಜಾ ದಿನಗಳನ್ನು ಕಳೆಯಲು ಅಜ್ಜಿಯ ಮನೆಗೆ ತೆರಳಿದ್ದಳು. ಈ ವೇಳೆ ಬಾಲಕಿ ಅಜ್ಜಿಯ ಫೋನ್‌ ನಿಂದ ಅಪರಿಚಿತ ನಂಬರ್‌ ಗೆ ತನ್ನ ಬೆತ್ತಲೆ ಫೋಟೋ ಕಳುಹಿಸಿದ್ದಳು. ಇದನ್ನು ಗಮನಿಸಿದ ಅಜ್ಜಿ, ತಕ್ಷಣ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬಾಲಕಿಯ ತಾಯಿಯು ಮಗಳನ್ನು ವಿಚಾರಿಸಿದಾಗ ಸಾಕಷ್ಟು…

Read More

ದಾವಣಗೆರೆ: ಕಳ್ಳತನದ ಆರೋಪ ಹೊರಿಸಿ ಇಬ್ಬರು ಬಾಲಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಲೂರಿನ ಅಸ್ತಾಪನಹಳ್ಳಿಯಲ್ಲಿ ಈ ಘಟನೆ ಏಪ್ರಿಲ್ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳ್ಳತನದ ಆರೋಪ ಮಾಡಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿದ್ದ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು 9 ಜನರ ವಿರುದ್ಧ ಎಫ್​ ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಕ್ಕಿ-ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಸುಭಾಷ್, ಲಕ್ಕಿ , ದರ್ಶನ್ , ಪರಶು , ಶಿವದರ್ಶನ್ ಸೇರಿದಂತೆ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯದ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ 45ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ. ನಾವು ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವವರೆಗೂ ಸುಮನಿರುವುದಿಲ್ಲ ಎಂದು ಅವರು ಗುಡುಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More