Author: admin

ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ತುಮಕೂರು ಮಧುಗಿರಿಯ ತೆರಿಯೂರು–ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಹಾಗೂ ಆಂಧ್ರ ಪ್ರದೇಶದ ಚೌಲೂರು ಗ್ರಾಮದ ಐವರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾಗಿರುವ ನಾಗರಾಜು ಮತ್ತು ನಿಂಗಕ್ಕ ಎಂಬವರನ್ನು ಹಿಂದೂಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೆರಿಯೂರು ಗ್ರಾಮದ ಮಾರಪ್ಪ ದಾಸಪ್ಪ ಚಿಕ್ಕನರಸಿಂಹಯ್ಯ ಹಾಗೂ ಟಿ. ನಾಗರಾಜು ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.  ಉಳಿದವರು  ಪ್ರಾಥಮಿಕ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಲಾರಿಗೆ ಹಿಂದಿನಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗುಜರಾತ್ನ ಅಮಿತ್ ಪಾಟೀಲ್ (45) ಮತ್ತು ಲತಾ (40) ಮೃತರು. ಗಾಯಾಳುಗಳಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ರಾಜ್ಯದ ತಂಡ ತಿರುಪತಿಯಲ್ಲಿ ದರ್ಶನ ಮುಗಿಸಿಕೊಂಡು ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಸರ್ಕಾರದ ಮಹತ್ವಕಾಂಕ್ಷಿ 15ನೇ ಹಣಕಾಸು ಯೋಜನೆಯ ಮಾರ್ಗಸೂಚಿಗಳನ್ನು ಹಾಗೂ ಕೆಟಿಪಿಪಿ ನಿಯಮ ಉಲ್ಲಂಘನೆ ಮಾಡಿರುವ ಆರೋಪದಡಿ ಹುಲಸೂರ ಗ್ರಾಮ ಪಂಚಾಯತ್ ಪಿಡಿಒ ರಮೇಶ್ ಮಿಲಿಂದಕರ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಗಿರೀಶ ಬಂದೋಲೆ ಆದೇಶಿಸಿದ್ದಾರೆ. 2024–25 ನೇ ಸಾಲಿನ 15ನೇ ಹಣಕಾಸು ಯೋಜನೆಯನ್ನು ಸಾಮಾನ್ಯ ಸಭೆ/ಗ್ರಾಮ ಸಭೆ ಜರುಗಿಸದೆ ಗ್ರಾ.ಪಂ. ಸದಸ್ಯರಿಗೆ ಮಾಹಿತಿ ನೀಡದೆ ಕ್ರಿಯಾ ಯೋಜನೆ ತಯಾರಿಸಿ ಕಾಮಗಾರಿ ನಡೆಸಿ ಅದರ ಬಿಲ್ ಪಾವತಿ ಮಾಡುತ್ತಿದ್ದಾರೆ. ನಿಧಿ–1 ನಿಧಿ–2 ಖಾತೆಗಳ ಕುರಿತು ಮಾಹಿತಿ ಕೇಳಿದರೂ ಮಾಹಿತಿ ನೀಡಿಲ್ಲ. 9(ಎ)11(ಬಿ) ಬಗ್ಗೆ ಮಾಹಿತಿ ಕೇಳಿದರು ಇಲ್ಲಿಯವರೆಗೆ ನೀಡಿರುವುದಿಲ್ಲ’ ಎಂದು ಅದೇ ಗ್ರಾಮ ಪಂಚಾಯಿತಿ ಸದಸ್ಯ ದೇವೆಂದ್ರ ಬಿ. ಪವಾರ ದೂರು ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ನಿಧಿ–1 ಮತ್ತು ನಿಧಿ–2 ಖಾತೆಯಿಂದ ₹22 ಲಕ್ಷ ಮತ್ತು 15ನೇ ಹಣಕಾಸು ಯೋಜನೆಯಡಿ ₹37 ಲಕ್ಷ ಖರ್ಚು ಮಾಡಿದ್ದಾರೆ. 2024–25ನೇ ಸಾಲಿನ 15ನೇ ಹಣಕಾಸು ಯೋಜನೆ ಕಾಮಗಾರಿಗಳನ್ನು ಮತ್ತು ನಿಧಿ 1…

Read More

ಸರಗೂರು: ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ ಎಂದು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪೂರ್ಣಿಮ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ಶನಿವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆ, ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆಯನ್ನು ಮಾತನಾಡಿದರೆ ಸಾಲದು, ಭಾಷೆ ಉಳಿಸಲಿಕ್ಕೆ ನಾವೆಲ್ಲ ಪ್ರಯತ್ನಿಸಬೇಕು. ನಾನು ವೈದ್ಯರಾಗಿದ್ದರೂ ಕನ್ನಡ ಮಾಧ್ಯಮದಲ್ಲಿ ನಾನು ಓದಿದ್ದು ಈಗಲೂ ಕೂಡ ನಾನು ಕನ್ನಡದಲ್ಲಿಯೇ ಸಹಿ ಮಾಡುತ್ತಿದ್ದೇನೆ, ಹೊರಗಿನಿಂದ ಬಂದವರಿಗೆ ಕನ್ನಡವನ್ನು ಕಲಿಸುವಂತರಾಗಬೇಕು, ಕನ್ನಡ ಸುಂದರವಾದ ಭಾಷೆ ನಾವು ನಮ್ಮ ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಕನ್ನಡ ಭಾಷೆಗೆ ಅಪಾರವಾದ ಗೌರವವನ್ನು ನಾವೆಲ್ಲ ನೀಡಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ  ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಮತ್ತು ನಿಕಟಪೂರ್ವ ಅಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ವೈ.ಡಿ.ರಾಜಣ್ಣ ಮಾತನಾಡಿ, ಕರ್ನಾಟಕ ರಾಜ್ಯ ಉದಯವಾಗಬೇಕು ಎಂಬುದು ಕನ್ನಡ ಹೋರಾಟಗಾರರ ಒತ್ತಾಸೆ ನಾವು ನಮ್ಮ ಮಕ್ಕಳಿಗೆ…

Read More

ಬೆಂಗಳೂರು: ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು ಕನ್ನಡ ಭಾಷೆ, ನೆಲ, ಜಲ  ಮತ್ತು ಕನ್ನಡ ಅಭಿವೃದ್ಧಿಗೆ ಅಪಾಯ  ತಂದೊಡ್ಡುತ್ತಿದ್ದಾರೆ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್  ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಜುಡಿಷಿಯಲ್ ಲೇಔಟ್‌ ನಲ್ಲಿ ಬಡಾವಣೆಯ ಕನ್ನಡ ಕಸ್ತೂರಿ ಸಂಘ ಹಾಗೂ  ವಿವಿಧ ಸಂಘಟನೆಗಳೊಂದಿಗೆ ಆಯೋಜಿಸಿದ್ದ ಅದ್ದೂರಿಯ 70 ನೇ ಕನ್ನಡ ರಾಜೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರದ ಕೆಲವು  ಸಮಿತಿಗಳಲ್ಲಿ, ಪ್ರಾಧಿಕಾರಗಳಲ್ಲಿ ಅಧ್ಯಕ್ಷರು, ಸದಸ್ಯರು ಆಗಲು ಮತ್ತು ಪ್ರಶಸ್ತಿಗಳನ್ನು ಪಡೆದುಕೊಳ್ಳಲು ರಾಜಕಾರಣಿಗಳ ಜೊತೆ ಲಾಭಿ ನಡೆಸಿ ಅಧಿಕಾರ ಅನುಭವಿಸಲು  ಹಾತೊರೆಯುತ್ತಿರುವುದರಿಂದ  ಕನ್ನಡ ಸಾಹಿತ್ಯದ ಬೆಳವಣಿಗೆ ಕುಂಠಿತಗೊಂಡಿದೆ ಎಂದರು. ಜೊತೆಗೆ ಉತ್ತರ ಭಾರತದಿಂದ ಉದ್ಯೋಗ ಅರಸಿ ಬರುವ ಹಿಂದಿ ಭಾಷಿಕರ ಸಂಖ್ಯೆ ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟುವಲ್ಲಿ ರಾಜ್ಯ  ಸರ್ಕಾರ ವಿಫಲವಾಗಿದ್ದು,…

Read More

ಸರಗೂರು:   ಕೂಡಗಿ ಗ್ರಾಮದ  ರೈತರೊಬ್ಬರ ಮೇಲೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ ಮಹದೇವಪ್ಪ ತಿಳಿಸಿದರು. ತಾಲೂಕಿನ ಬಿ ಮಟಕರೆ ಗ್ರಾಪಂ ವ್ಯಾಪ್ತಿಯ ಕೂಡಗಿ ಗ್ರಾಮದ ದೊಡ್ಡನಿಂಗಯ್ಯ  ಶುಕ್ರವಾರದಂದು ಹುಲಿ ದಾಳಿಗೆ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಶನಿವಾರ ಡಾ.ಎಸ್.ಸಿ.ಮಹದೇವಪ್ಪ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ನೀಡಿ ಕುಟುಂಬಸ್ಥರಿಗೆ ಸ್ವಾತಂನ ಹೇಳಿದರು. ನಂತರ ಗ್ರಾಮಸ್ಥರು ಮತ್ತು ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಹುಲಿ ಓಡಾಟದ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಮಾಹಿತಿಯನ್ನು ಸ್ಥಳೀಯ ಶಾಸಕರು ತಿಳಿಸಿದ್ದಾರೆ. ನೊಂದ ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಯೋಜನೆಯಡಿಯಲ್ಲಿ ಮನೆ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಸ್ಥಳದಲ್ಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಮಾನವ–ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ, ಹಿಂದಿನಿಂದಲೂ ಇದೆ.…

Read More

ಸಾಂಪ್ರದಾಯಿಕ ಕಲೆಗಳ ಪರಂಪರೆ ಮತ್ತು ಜನಪದ ಸಂಸ್ಕೃತಿಯ ಸೊಬಗಿನ ನಡುವೆ, ಸ್ಥಳೀಯ ಪ್ರತಿಭೆಗಳನ್ನು ಅಣಿಗೊಳಿಸಿ ರೂಪುಗೊಂಡಿರುವ ಹೊಸ ದೃಶ್ಯಮಾಲಿಕೆ “ಪ್ರೊಡಕ್ಷನ್ ನಂ 01” ಇದೀಗ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶ್ರೀ ಗಂಗಾಧರೇಶ್ವರ ಸ್ವಾಮಿಗಳ ಆಶೀರ್ವಾದದಿಂದ, ಕಲ್ಪತರು ಪ್ರೊಡಕ್ಷನ್ ರವರಿಂದ ಪ್ರಥಮ ಕೃತಿಯಾಗಿ ಮೂಡಿ ಬಂದಿರುವ ಈ ಕೃತಿ ಕನ್ನಡ ಸಂಸ್ಕೃತಿಯ ಮಣ್ಣಿನ ವಾಸನೆ ತಂದುಕೊಡುವ ಭರವಸೆ ವ್ಯಕ್ತಪಡಿಸಿದೆ. ಕಥೆ -– ಚಿತ್ರಕಥೆ -– ಸಂಭಾಷಣೆ / ಸಹಿತ / ನಿರ್ದೇಶನ ಶ್ರೀಕಾಂತ್ ಕುಮಾರ್ ನಿರ್ಮಾಪಕರು ಭೋಜರಾಜ್ -– ವೆಂಕಟೇಶ್ ಪ್ರಚಾರ ಗೀತೆ ಕುಶಿ ಇವೆಂಟ್ ಬಾಯಾಗ್ರಾಹಕ/ಅಡ್ವೈಜ ರ್‌ಗಳು ಕಲಾವಿದರು ಭೋಜರಾಜ್, ವೆಂಕಟೇಶ್, ಕುಮಾರ್, ಶ್ರೀಕಾಂತ್, ಶುಭಾ ಚಿತ್ರದ ಹೈಲೈಟ್ಸ್: ಮೂಲಭೂತ ಜನಪದ ಭಾವನೆಗಳು ಮಣ್ಣಿನ ಸಂಗತಿ, ಸಂಸ್ಕೃತಿ ಮತ್ತು ಮನುಷ್ಯ ಮೌಲ್ಯಗಳ ತೆರೆಯ ಮೇಲೆ ಮೂಡಿಸುವ  ಪ್ರಯತ್ನ ಶ್ರದ್ಧಾ, ನಂಬಿಕೆ ಮತ್ತು ಕಲೆಯನ್ನು ಸೇರ್ಪಡಿಸುವ ಸುಂದರ ಯತ್ನ ವಿಶೇಷ ಸಂದೇಶ: “ಸಮಾಜದ ನಾಡಿಯ ಜನತೆಗೆ…

Read More

ಕೊರಟಗೆರೆ: ನಮ್ಮ ಕರ್ನಾಟಕ ಕೇವಲ ಒಂದು ಪ್ರದೇಶವಲ್ಲ ಅದು ಶ್ರೀಮಂತ ಸಂಸ್ಕೃತಿ, ಭವ್ಯ, ಇತಿಹಾಸ ಮತ್ತು ಪ್ರಕೃತಿಯ ಸೌಂದರ್ಯವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಪುಣ್ಯಭೂಮಿ ಎಂದು ತಹಶೀಲ್ದಾರ್ ಕೆ.ಮಂಜುನಾಥ ತಿಳಿಸಿದರು. ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ 70ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದರು. ಕನ್ನಡದಲ್ಲಿ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಸಾಧ್ಯವಾಗುತ್ತದೆ. ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಕುವೆಂಪು ಅವರು ಹೇಳುವಂತೆ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ ಎಂದು ಹೇಳಿದರು. ಆದಿಕವಿ ವಾಲ್ಮೀಕಿಯಿಂದ ಆರಂಭವಾಗಿ ಪಂಪ, ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ. ಕರ್ನಾಟಕವು ತನ್ನದೇ ಆದ…

Read More

ಕೊರಟಗೆರೆ : ಇಂದಿನ ಯುವಜನತೆ ಅನಾವಶ್ಯಕ ವಿಷಯಗಳಲ್ಲಿ ತೊಡಗಿಕೊಳ್ಳುವುದರಿಂದ ತಮ್ಮ ಶಕ್ತಿಯನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜೀವನದ ಗುರಿಯನ್ನು ಅರಿತು, ಉತ್ತಮ ಭವಿಷ್ಯ ಮತ್ತು ಸಮಾಜ ನಿರ್ಮಾಣಕ್ಕೆ ಅಗತ್ಯವಾದ ವಿಷಯಗಳತ್ತ ಕೇಂದ್ರೀಕರಿಸಬೇಕು, ಎಂದು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ತಿಳಿಸಿದರು. ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದಲ್ಲಿ ಬೆಂಗಳೂರಿನ ವಿವೇಕಾನಂದ ಮಹಿಳಾ ಕಾಲೇಜಿನ ಎನ್‌ ಎಸ್‌ ಎಸ್‌ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾತನಾಡಿದರು. ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ತಮ್ಮ ಜೀವನವನ್ನೇ ಮುಡುಪಾಗಿಡುತ್ತಾರೆ, ಅವರ ತ್ಯಾಗದ ಬೆಲೆ ಮಕ್ಕಳಿಗೆ ಅರಿವಾಗಬೇಕು, ಯಾವುದೇ ಅಡ್ಡದಾರಿಗಳನ್ನೂ ತುಳಿಯದೆ, ಶ್ರದ್ಧೆ, ಶ್ರಮ ಮತ್ತು ನೈತಿಕತೆಯಿಂದ ಓದಬೇಕು. ನಿಜವಾದ ಶಿಕ್ಷಣ ಎಂದರೆ ಕೇವಲ ಪುಸ್ತಕದ ಅಕ್ಷರಗಳಲ್ಲ, ಅದು ವ್ಯಕ್ತಿತ್ವದ ಬೆಳವಣಿಗೆಯ ಮಾರ್ಗವಾಗಿದ್ದು ಇದನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಮಾತನಾಡಿ, ಹೆಣ್ಣು ಮಕ್ಕಳ ಶಿಕ್ಷಣವು ರಾಷ್ಟ್ರದ ಪ್ರಗತಿಯ ಮೂಲ. ಹೆಣ್ಣೊಂದು ಕಲಿತರೆ ಮನೆ, ಶಾಲೆ,…

Read More

ಕೊರಟಗೆರೆ: ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಈಶ್ವರಯ್ಯ ಮತ್ತು ಉಪಾಧ್ಯಕ್ಷರಾಗಿ ಭಾಗ್ಯಮ್ಮ  ಶುಕ್ರವಾರ ನಡೆದ ಚುನಾವಣೆಯಲ್ಲಿ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಲ್ಲಾ ಸದಸ್ಯರ ಒಗ್ಗಟ್ಟಿನಿಂದ ಯಾವುದೇ ಸ್ಪರ್ಧೆ ಇಲ್ಲದೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯಾಗಿದ್ದು, ಸಂಘದ ಕಚೇರಿಯು ಹರ್ಷೋದ್ಗಾರದ ವಾತಾವರಣದಿಂದ ಕಂಗೊಳಿಸಿತು. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಅವಿರೋಧವಾಗಿ ಆಯ್ಕೆಯಾದ ನಂತರ ಮಾತನಾಡಿದ ನೂತನ ಅಧ್ಯಕ್ಷ ಈಶ್ವರಯ್ಯ ಗೃಹ ಸಚಿವರ ಆಶೀರ್ವಾದ ಮತ್ತು ಸದಸ್ಯರ ಸಹಕಾರದಿಂದ ನನಗೆ ಅಧ್ಯಕ್ಷ ಸ್ಥಾನ ದೊರೆತಿದೆ. ಸಂಘದ ಅಭಿವೃದ್ಧಿ ಮತ್ತು ರೈತರ ಹಿತಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವುದೇ ನನ್ನ ಧ್ಯೇಯ ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ಮಾತನಾಡಿ, ಕ್ಷೇತ್ರದ ಶಾಸಕರು ಮತ್ತು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್  ಆಶಯದಂತೆ ಸಂಘವು ರೈತರ ಪರವಾಗಿ ಪರಿಣಾಮಕಾರಿ ಕೆಲಸ ಮಾಡಲಿದೆ ಎಂದರು. ಪಟ್ಟಣ ಪಂಚಾಯಿತಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಎ.ಡಿ. ಬಲರಾಮಯ್ಯ ಮಾತನಾಡಿ, ಗೃಹ…

Read More