Author: admin

ಪಾವಗಡ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ಕನಸಿನ ಯೋಜನೆ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಅಂಗವಾಗಿ ಇಂದು ಅದರ ತರಬೇತಿ ಕಾರ್ಯಾಗಾರವನ್ನು ಮಧುಗಿರಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ, ಪಾವಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ವಿ.ವೆಂಕಟೇಶ್, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಕೆಪಿಸಿಸಿ ವತಿಯಿಂದ ಆಗಮಿಸಿದ್ದ ತರಬೇತುದಾರ ಅನಿಲ್ ಕುಮಾರ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಸುಜಿತ್, ನಗರ ಘಟಕದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಮಣಿ ಪಿ.ಎಲ್., ಈಶ್ವರ್, ಭಾಸ್ಕರ್ ನಾಯ್ಡು, ಪಾಪಣ್ಣ ವಿ.ಹೆಚ್.ಪಾಳ್ಯ,ಹರೀಶ್ ಗೋವಿಂದ್ ಯಾದವ್, ಮದನ್ ರೆಡ್ಡಿ, ತಿಪ್ಪೇಸ್ವಾಮಿ, ಅನಿಲ್, ರಾಮಾಂಜಿ, ಹನುಮೇಶ ಸೇರಿದಂತೆ ಇನ್ನು ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ವರದಿ: ರಾಮಪ್ಪ  ಸಿ.ಕೆ.ಪುರ., ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ರಸ್ತೆಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ವಿದೇಶಿ ಪ್ರಜೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಠಾಣೆ ಮುಂಭಾಗದ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ 4.30ರ ಸುಮಾರಿನಲ್ಲಿ ಐವರಿ ಕೋಸ್ಟ್ ಪ್ರಜೆ ಮಚ್ಚು ಹಿಡಿದು ಓಡಾಡುತ್ತಾ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಾ ಸಾರ್ವಜನಿಕರನ್ನು ಬೆದರಿಸುತ್ತಿದ್ದನು. ವಿಷಯ ತಿಳಿದು ಎಎಸ್‍ ಐ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಅವರ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಆದರೂ ಪ್ರಾಣವನ್ನು ಲೆಕ್ಕಿಸದೆ ಪೊಲೀಸರು ಆತನನ್ನು ಹಿಡಿದು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಯಾವ ವೀಸಾದಲ್ಲಿ ಆತ ಭಾರತಕ್ಕೆ ಬಂದಿದ್ದಾನೆ. ಬೆಂಗಳೂರಿಗೆ ಯಾವಾಗ ಬಂದ, ಎಲ್ಲಿ ವಾಸವಾಗಿದ್ದಾನೆ, ವೃತ್ತಿ ಏನು ಎಂಬಿತ್ಯಾದಿ ವಿಷಯಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ವಿಚ್ಛೇದಿತ ಮಹಿಳೆಯನ್ನು ಪುಸಲಾಯಿಸಿ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿ ಕೊಂಡು ಮೋಸ ಮಾಡಿರುವ ವ್ಯಕ್ತಿ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂದಿರಾನಗರದ 30 ವರ್ಷದ ನೊಂದ ಮಹಿಳೆ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೌಟುಂಬಿಕ ಕಲಹದಿಂದಾಗಿ ಪತಿಗೆ ವಿಚ್ಛೇಧನ ನೀಡಿದ್ದ ಮಹಿಳೆ ಇಬ್ಬರು, ಮಕ್ಕಳೊಂದಿಗೆ ಇಂದಿರಾನಗರದಲ್ಲಿ ಪ್ರತ್ಯೇಕ ವಾಸವಾಗಿದ್ದಾರೆ. ಜೀವನ ನಿರ್ವಹಣೆಗಾಗಿ ಆ ಮಹಿಳೆ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅದೇ ಕಂಪನಿಯಲ್ಲಿ ಕೆಲಸ ಮಾಡುವ ವ್ಯಕ್ತಿಯ ಪರಿಚಯವಾಗಿದೆ.ಈ ವ್ಯಕ್ತಿ ಆ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು ಪ್ರೀತಿಸುವ ನಾಟಕವಾಡಿ ವಿವಾಹವಾಗುವುದಾಗಿ ನಂಬಿಸಿ ಸಂಪರ್ಕ ಬೆಳೆಸಿದ್ದಾನೆ. ತದನಂತರ ಮದುವೆ ವಿಚಾರ ಬಂದಾಗಲೆಲ್ಲ ಒಂದೊಂದು ಸಬೂಬು ಹೇಳುತ್ತಾ ನುಣುಚಿಕೊಳ್ಳುತ್ತಿದ್ದ.2020, ಡಿಸೆಂಬರ್ 10ರಂದು ಸಬ್‍ರಿಜಿಸ್ಟಾರ್ ಕಚೇರಿಯಲ್ಲಿ ವಿವಾಹಕ್ಕೆ ಸಿದ್ದತೆ ಮಾಡಿಕೊಂಡಾಗಲೂ ನೆಪ ಹೇಳಿ ದಿನಾಂಕ ಮುಂದೂಡಿದ್ದ. ತದನಂತರವೂ ಸಂಪರ್ಕ ಬೆಳೆಸಿಕೊಂಡಿದ್ದ ವ್ಯಕ್ತಿ ತನಗೆ ವಂಚಿಸಿದ್ದಾನೆ ಎಂದು ನೊಂದ ಮಹಿಳೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ…

Read More

ಕೆಪಿಎಸ್ ಶಾಲೆಗಳಲ್ಲಿ ಆ ಕ್ಷೇತ್ರದ ಶಾಸಕರನ್ನು ಅಧ್ಯಕ್ಷರನ್ನಾಗಿಸಿರುವ ತಿದ್ದುಪಡಿ ಆದೇಶ ನಿಯಮ ಬಾಹಿರವಾಗಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾಪೋಷಕರಾದ ಪಿ.ನಿರಂಜನಾರಾಧ್ಯ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪೂರ್ವ ಪ್ರಾಥಮಿಕದಿಂದ 12 ನೇ ತರಗತಿಯವರೆಗೆ ಗುಣಾತ್ಮಕ ಶಿಕ್ಷಣ ಒದಗಿಸಲು ಪ್ರಾರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (ಕೆಪಿಎಸ್) ಈ ಹಿಂದೆ ಶಿಕ್ಷಣ ಹಕ್ಕು ಕಾಯಿದೆ ಹಾಗು ನಿಯಮಗಳ ಅನ್ವಯ ಪಾಲಕರಿಂದ ಆಯ್ಕೆಯಾದ ಪೋಷಕ ಪ್ರತಿನಿಯೊಬ್ಬರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡುವಂತೆ 2021 ಅಕ್ಟೋಬರ್ 26ರ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿತ್ತು.ಈ ತೀರ್ಮಾನ ನಿಯಮ ಮತ್ತು ಸುತ್ತೋಲೆಗಳ ಅನ್ವಯ ಕ್ರಮಬದ್ಧವಾಗಿತ್ತು. ಅಧ್ಯಕ್ಷರ ಜೊತೆಗೆ ಕ್ಷೇತ್ರದ ಶಾಸಕರು ಸಮಿತಿಯಲ್ಲಿ ಗೌರವಾಧ್ಯಕ್ಷರಾಗಿ ಇರುವಂತೆ ತಿಳಿಸಲಾಗಿತ್ತು. ಶಾಲೆಗಳ ಅಭಿವೃದ್ಧಿಗೆ 2 ಕೋಟಿ ರೂ. ಹಣ ಮಂಜೂರಾದ ಸುದ್ದಿ ಕೇಳಿದಾಕ್ಷಣ ಶಾಸಕರು ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ಸರಕಾರದ ಮೇಲೆ ಒತ್ತಡ ಹಾಕಿ, ಕ್ರಮಬದ್ಧವಾದ ಹಿಂದಿನ ತೀರ್ಮಾನವನ್ನು ಅಸಿಂಧುಗೊಳಿಸಿದ್ದಾರೆ.2022ರ ಜನವರಿ…

Read More

ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು. ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ.…

Read More

ತುಮಕೂರು: ತುಮಕೂರು ಜಿಲ್ಲಾ ಪಂಚಾಯತ್ ತುಮಕೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಶಾಂತಾರಾಮ ಕೆ.ಜಿ ನಿವೃತ್ತ ಐ.ಎ.ಎಸ್. ಅಧಿಕಾರಿ ಇಂದು ಬೆಳಗ್ಗೆ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಾಂತಾರಾಮ ಕೆ.ಜಿ. ಅವರ ನಿಧನದ ಹಿನ್ನೆಲೆಯಲ್ಲಿ, ಸಾರ್ವಜನಿಕರು ತೀವ್ರ ನೋವು ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಶಾಂತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಪಾವಗಡ:  ತಾಲೂಕಿನ ವೈ.ಎನ್. ಹೊಸಕೋಟೆ  ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಸಾರ್ವಜನಿಕರು ದಾಖಲೆಗಳನ್ನು ಪಡೆದುಕೊಳ್ಳಲು ಕಟ್ಟಡ ಸೈಡಿನ ಕಿಟಕಿಯಲ್ಲಿ ರಣ ಬಿಸಿಲಿನಲ್ಲಿ ಕ್ಯೂ ನಿಲ್ಲುವಂತಹ ಸ್ಥಿತಿ ಎದುರಾಗಿದೆ. ಈ ಸಂಬಂಧ ಕೂಡಲೇ ಇದಕ್ಕೆ ಸಂಬಂಧ ಪಟ್ಟವರು ಸೂಕ್ತ ವ್ಯವಸ್ಥೆಯನ್ನು ಮಾಡಿಕೊಡಬೇಕು. ನಾಡ ಕಚೇರಿಯಲ್ಲೇ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡಲು ಸಾಧ್ಯವಾಗದವರು ಇನ್ನು ಜನರಿಗೆ ಏನು ಸೇವೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಇದೀಗ ಸಾರ್ವಜನಿಕರು ಕೇಳುವಂತಾಗಿದೆ. ಒಂದೋ ಕಚೇರಿಯೊಗೆ ಕರೆದು ದಾಖಲೆಗಳನ್ನು ಕೊಡಬೇಕು. ಸಾರ್ವಜನಿಕರನ್ನು ಬಿಸಿಲಲ್ಲಿ ನಿಲ್ಲಿಸಿ ಅಧಿಕಾರಿಗಳು ನೆರಳಲ್ಲಿ ಕುಳಿತು ನಡೆಸುತ್ತಿರುವ ದರ್ಬಾರ್ ಮೊದಲು ನಿಲ್ಲಿಸಬೇಕು. ನೀವು ಜನರ ಸೇವಕರೇ ಹೊರತು, ಆಳುವ ದೊರೆಗಳಲ್ಲ ಎನ್ನುವುದನ್ನು ಮೊದಲು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಇದೊಂದು ದುರಾಹಂಕಾರದ ಪರಮಾವಧಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಡಾ.ರೆಡ್ಡೀಸ್ ಫೌಂಡೇಶನ್ ತುಮಕೂರು ಸಂಸ್ಥೆಯ ಸಹಭಾಗಿತ್ವದಲ್ಲಿ  ಉದ್ಯೋಗ ನೀಡುವ ಸಂಬಂಧ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಪಿಯುಸಿ ಅಥವಾ ಯಾವುದೇ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 10ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿಸಿಸಿ ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾಗೊಂಡಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 0816-2278488 ಇವರನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಹಿರಿಯೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿಯ ದರ್ಬಾರ್ ಹಾಗೂ ಇದರ ವಿರುದ್ಧ ಕ್ರಮಕೈಗೊಳ್ಳದೇ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಜಿಲ್ಲಾಡಳಿತದ ವಿರುದ್ಧ  ಮಾಜಿ ಸಚಿವ ಡಿ.ಸುಧಾಕರ್ ಹಾಗೂ  ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆದಿವಾಲ ಗ್ರಾಮದಲ್ಲಿ ರೂ. 25 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ  ಹೈಟೆಕ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ  ಉದ್ಘಾಟನೆಯ ಸರ್ಕಾರಿ ಕಾರ್ಯಕ್ರಮದಲ್ಲಿ  ಹಿರಿಯೂರು ಶಾಸಕಿಯ ಪತಿಯ ಫೋಟೋವನ್ನು ದೊಡ್ಡದಾಗಿ ಹಾಕಲಾಗಿತ್ತು. ಜೊತೆಗೆ ಶಾಸಕಿ ಮಾಡಬೇಕಾದ ಭಾಷಣವನ್ನು ಅವರ ಪತಿ ಮಾಡಿದ್ದರು ಇದರ ಬಗ್ಗೆ ಕ್ರಮಕೈಗೊಳ್ಳಬೇಕಾದ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ,  ನಾನು ಜಿಲ್ಲಾಧಿಕಾರಿಯಾಗಿದ್ದರೂ ಬಹಳ ಅಸಹಾಯಕಳಾಗಿದ್ದೇನೆ ಎಂದು ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಖಾದಿರಮೇಶ್ ಹೇಳಿದರು. ಶಾಸಕಿ ಪೂರ್ಣಿಮಾಶ್ರೀನಿವಾಸ್ ರವರ ಪತಿ ಡಿ.ಟಿ ಶ್ರೀನಿವಾಸ್  ರವರು   ಹಿರಿಯೂರು ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯತಿಯ ಪಿ ಡಿ ಓ ಅಧಿಕಾರಿಗಳನ್ನು ಕರೆದುಕೊಂಡು, …

Read More

ಕೋಮುವಾದದ ವಿಷ ಕಾರಲು ಕೇಸರಿ ವಸ್ತ್ರವನ್ನು ಬಳಸುತ್ತಿರುವ ಹಿಂದೂ ಮತೀಯವಾದಿಗಳು ತಿಳಿದುಕೊಳ್ಳಬೇಕಾದ ವಾಸ್ತವ ಸಂಗತಿ ಏನೆಂದರೆ…, ಕೇಸರಿ ವಸ್ತ್ರ ಮೂಲದಲ್ಲಿ ಬುದ್ಧಗುರು, ಬಸವಾದಿ ಪ್ರಮಥ ಶರಣರು, ಪಂಚಗಣಾಧೀಶರು ಹಾಗೂ ದೇಶಿ ಯೋಗಧಾರೆಯ ಸಾಧು ಸನ್ಯಾಸಿ ಯೋಗಿಗಳು ಧರಿಸುತ್ತಿದ್ದ ಧರ್ಮಾತೀತ ವಸ್ತ್ರವಾಗಿತ್ತು. ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆಯನ್ನು ಪಡೆದ ಬಳಿಕ‌ ಬುದ್ಧಗುರುವಿನಂತೆ ಇದೇ ಕೇಸರಿ ಚೀವರವನ್ನು ಧರಿಸಿದ್ದರು. ಆಗೆಲ್ಲಾ ಕೇಸರಿ ಶಾಲು ಹಿಂದೂ ಮತೀಯವಾದಿಗಳ ಲಾಂಛನವಾಗಿರಲಿಲ್ಲ. ಇಂತಹ ಕೇಸರಿಯನ್ನು ಹಿಂದೂಧರ್ಮದ ಗುರುತಿನ ಬಣ್ಣದ ವಸ್ತ್ರವನ್ನಾಗಿ ಹೈಜಾಕ್ ಮಾಡಿರುವ ಹಿಂದೂ ಮತೀಯವಾದಿಗಳು ಹಚ್ಚುತ್ತಿರುವ ಬೆಂಕಿಗೆ ವಿದ್ಯಾರ್ಥಿಗಳು ದೀಪದ ಹುಳುಗಳಂತೆ ಆಕರ್ಷಿತವಾಗಬಾರದು. ದೀಪದ ಹುಳುಗಳು ರೆಕ್ಕೆ ಸುಟ್ಟು ಬೀಳುವಂತೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಸುಟ್ಟುಕೊಳ್ಳಬಾರದು. ನ್ಯಾಯಾಲಯವು ಬುದ್ಧಗುರು ಬಸವಣ್ಣ ಅಂಬೇಡ್ಕರ್ ಬಳಸಿರುವ ಕೇಸರಿ ವಸ್ತ್ರವನ್ನು ಕೋಮುವಾದವನ್ನು ಪ್ರಚೋದಿಸುವ ಲಾಂಛನವನ್ನಾಗಿ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಬಳಸಿಕೊಳ್ಳಬಾರದೆಂದು ನಿಷೇಧ ಹೇರಲು ನಾವು ಸರ್ಕಾರವನ್ನು ಒತ್ತಾಯಿಸುವ ಅಗತ್ಯವಿದೆ.  ಡಾ.ವಡ್ಡಗೆರೆ ನಾಗರಾಜಯ್ಯ 8722724174 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More