Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ತುಮಕೂರು: ಕೋವಿಡ್19 ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ನೇಮಕ ಮಾಡಿಕೊಂಡಿರುವ ಆರೋಗ್ಯ ಇಲಾಖೆಯ 6,163 ನೌಕರರನ್ನು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಂಡು ಸೇವೆಯಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಕೊರೊನಾ ವಾರಿಯರ್ಸ್ ಪ್ರತಿಭಟನೆ ನಡೆಸಿದರು. ಕೋವಿಡ್ -19ರ ತುರ್ತು ಪರಿಸ್ಥಿತಿಯಲ್ಲಿ ನಮ್ಮನ್ನು (ಫಾರ್ಮಸಿ ಅಧಿಕಾರಿಗಳು, ಲ್ಯಾಬ್ ಟೆಕ್ನಿಶಿಯನ್, ಸ್ಟಾಫ್ ನರ್ಸ್,ಪಿ ಎಚ್.ಸಿ ಓ, ಗ್ರೂಪ್ – ಡಿ, ಸ್ವಾಬ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹಾಗೂ ಇತರ ಸಿಬ್ಬಂದಿಗಳು) ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ನಾವು ನಮ್ಮ ಕುಟುಂಬ, ಮನೆ-ಮಠ ಬಿಟ್ಟು, ನಮ್ಮ ಪ್ರಾಣದ ಹಂಗನ್ನು ತೊರೆದು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮ ಜೊತೆಯಲ್ಲಿಯೇ ಸೇರಿದ ಕೆಲವು ಆರೋಗ್ಯ ಸಿಬ್ಬಂದಿ ಪ್ರಾಣಭಯದಿಂದ ಹಾಗೂ ಕೊರೊನ ಮಹಾ ಮಾರಿಗೆ ಹೆದರಿ ಅರ್ಧದಲ್ಲೇ ಕೆಲಸವನ್ನು ಬಿಟ್ಟು ಹೋದರು. ಆದರೆ ನಮ್ಮಲ್ಲಿ ಹಲವರಿಗೆ ಹಲವು ಬಾರಿ ಕೊರೂನಾ ಪಾಸಿಟಿವ್ ಬಂದು ಸಾವಿನ ಕದ ತಟ್ಟಿದರೂ ಸೋಲು…
ತುಮಕೂರು: ಕೆಲ ದಿನಗಳ ಹಿಂದೆ ಮದುವೆಯಾಗಿದ್ದ ಯುವತಿ ಇದೀಗ ತನ್ನ ಪತಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಮೆಟ್ಟಿಲೇರಿದ ಘಟನೆ ನಡೆದಿದೆ. ತುರುವೇಕೆರೆಯ ಮೊಬೈಲ್ ಶಾಪ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಚೈತ್ರಾ ಹಾಗೂ ಅದೇ ಮೊಬೈಲ್ ಶಾಪ್ ನಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ನಿಖಿಲ್ ನಡುವೆ ಪ್ರೀತಿ ಬೆಳೆದಿತ್ತು. ಬಳಿಕ ಚೈತ್ರಾ ಮನೆಯವರ ವಿರೋಧದ ನಡುವೆಯೂ ನಿಖಿಲ್ ನನ್ನು ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಜೊತೆಗೆ ಫೆಬ್ರವರಿ 7ರಂದು ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿದ್ದರು. ಆದರೆ ಇದ್ದಕ್ಕಿದ್ದಂತೆ ನಿಖಿಲ್ ನಾಪತ್ತೆಯಾಗಿದ್ದು, ಇದರಿಂದ ಗಾಬರಿಗೊಂಡ ಚೈತ್ರಾ ನಿಖಿಲ್ ನನ್ನು ತಿಪಟೂರು ತಾಲೂಕಿನ ಪರವ ಗೊಂಡನಹಳ್ಳಿಯಲ್ಲಿರುವ ನಿಖಿಲ್ ಮನೆಗೆ ಹುಡುಕಿಕೊಂಡು ಹೋಗಿದ್ದು, ಈ ವೇಳೆ ಚೈತ್ರಾಳಿಗೆ ನಿಖಿಲ್ ತಂದೆ ಬಸವರಾಜು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಇದರಿಂದ ಕಂಗಾಲಾಗಿರುವ ಚೈತ್ರಾ ನನ್ನ ಗಂಡನನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಕಿಬ್ಬನಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಎ.ಎನ್. ಪೀರ್, ತುಮಕೂರು…
ತುಮಕೂರು: ಬಾಬೂಜಿ ಎಂದೇ ಖ್ಯಾತರಾದ ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲದೇ ಸಮಾಜ ಸುಧಾರಕರು ಆಗಿದ್ದರು. ಬಿಹಾರದ ಚಮ್ಮಾರ್ ಕುಟುಂಬದಲ್ಲಿ ಜನಿಸಿದ ಇವರು, ನೆಹರು ಮಂತ್ರಿಮಂಡಲದಲ್ಲಿ ಕೃಷಿ ಸಚಿವರಾಗಿ ಆಹಾರ ಸ್ವಾವಲಂಬನೆಗೆ ಕಾರಣೀಕರ್ತರಾಗಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದಾರೆ ಎಂದು ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕ ಎ.ನರಸಿಂಹಮೂರ್ತಿ ಹೇಳಿದರು. ಇಂದು ನಗರವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು, ಮುರಾರ್ಜಿ ದೇಸಾಯಿ ಕಾಲದಲ್ಲಿ ಭಾರತದ ಉಪಪ್ರಧಾನಿಯಾಗಿ ರಕ್ಷಣಾ ಖಾತೆ ಜವಾಬ್ದಾರಿ ವಹಿಸಿಕೊಂಡು ದೇಶ ರಕ್ಷಣೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಅಸ್ಟೃಷ್ಯತಾ ನಿವಾರಣೆಯ ನಾಯಕತ್ವವನ್ನು ವಹಿಸಿದ್ದರು ಮತ್ತು ಕಾರ್ಮಿಕ ಮಂತ್ರಿಯಾಗಿ ಕಾರ್ಮಿಕ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ಸ್ವಾತಂತ್ರ್ಯ ಭಾರತದ ಕಾರ್ಮಿಕ ಕಾಯ್ದೆಗಳ ಶಿಲ್ಪಿಯಾಗಿದ್ದರು ಎಂದರು. ಕಾರ್ಮಿಕ ಕಲ್ಯಾಣಕ್ಕಾಗಿ ದುಡಿದ ಉಜ್ವಲ ಯೋಧ, ನವಭಾರತದ ನಿರ್ಮಾತೃ ಬಾಬು ಜಗಜೀವನ್ ರಾಮ್ ಸ್ಮರಣೆಯನ್ನು ಇಂದು ಕಾರ್ಮಿಕ ಮಾಡಿಕೊಳ್ಳಬೇಕಿದೆ. ಕಾರ್ಮಿಕ ಸಚಿವರಾಗಿ ಅವರು…
ತುಮಕೂರು: ಜಿಲ್ಲಾ ಬಿ.ಜೆ.ಪಿ ಎಸ್.ಸಿ ಮೋರ್ಚಾದ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ರವರ 115 ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕರು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಡಾ.ಬಾಬು ಜಗಜೀವನ್ ರಾಮ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರಾದ ಜ್ಯೋತಿಗಣೇಶ್, ಬಾಬೂ ಜಗಜೀವನ್ ರಾಮ್ ರವರು ಹಸಿರು ಕ್ರಾಂತಿಯ ಹರಿಕಾರರೆಂದೇ ಪ್ರಖ್ಯಾತರಾದವರು, ದೇಶಕ್ಕೆ ಅಪಾರವಾದ ಕೊಡುಗೆ ನೀಡಿದವರು’ ಎಂದರು. ಎಸ್.ಸಿ.ಮೋರ್ಚ ಜಿಲ್ಲಾಧ್ಯಕ್ಷರಾದ ಓಂಕಾರ್ ಮಾತನಾಡಿ, ‘ದಲಿತ ಸಮುದಾಯಗಳ ಏಳಿಗೆಗೆ ಶ್ರಮಿಸಿದ ಮಹಾನಾಯಕರಾದ ಡಾ.ಬಾಬೂಜೀ ರವರ ಜಯಂತಿ ಆಚರಣೆಗಷ್ಟೆ ಸೀಮಿತವಾಗಬಾರದು, ಅವರ ಆದರ್ಶಗಳನ್ನು ನಮ್ಮ ಕಾರ್ಯಕರ್ತರು ಪಾಲಿಸಬೇಕು. ದಲಿತ ಸಮುದಾಯದ ಬಡ ವ್ಯಕ್ತಿಗಳಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಪ್ರಮಾಣಿಕ ಪ್ರಯತ್ನ ಮಾಡಬೇಕಾಗಿದೆ ಎಂದರು. ಬಾಬೂಜೀ ರವರು ರಾಷ್ಟçದ ಸಂಕಷ್ಟದ ಪರಿಸ್ಥಿತಿಗಳಲ್ಲಿ ರಕ್ಷಣಾ ಖಾತೆ, ಕೃಷಿ, ಕಾರ್ಮಿಕ ಅನೇಕ ಪ್ರಮುಖ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದವರು, ಪ್ರಧಾನಿಯಾಗುವ ಎಲ್ಲಾ…
ತುಮಕೂರು: ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ಅವರ ಜಯಂತಿ ಉತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಡಾ.ಬಾಬು ಜಗಜೀವನ್ ಅವರ ಜನ್ಮದಿನವನ್ನು ದೇಶಾದ್ಯಂತ ಆಚರಿಸುತ್ತಿದ್ದೇವೆ. ನಾವು ಕಚೇರಿಯಲ್ಲಿ ಜಯಂತಿ ಉತ್ಸವ ಆಚರಿಸಬೇಕಾದ ಪ್ರತಿ ಬಾರಿಯೂ ಒಂದೊಂದು ಹೊಸ ವಿಚಾರಗಳನ್ನು ನಾವು ಇಟ್ಟುಕೊಂಡು ಆಚರಣೆ ಮಾಡಬೇಕು ಮತ್ತು ಒಂದು ಹೊಸ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಈ ಜಯಂತಿ ಉತ್ಸವದ ಸದುದ್ದೇಶ ಎಂದರು. ಬಿಹಾರ ರಾಜ್ಯದಲ್ಲಿ ಜನಿಸಿದ ಡಾ.ಬಾಬು ಜಗಜೀವನ್ ಅವರು, ಬಾಲ್ಯದಲ್ಲಿ ಶಾಲೆಯಲ್ಲಿ ಕಲಿಯುವ ಸಂದರ್ಭದಲ್ಲಿ ಬಹಳಷ್ಟು ಕಷ್ಟ ಅನುಭವಿಸಿದರು. ವಿದ್ಯಾರ್ಥಿಗಳಿಗೆ ಮೂರು ಪಾತ್ರೆಗಳಲ್ಲಿ ಬೇರೆ ಬೇರೆ ನೀರನ್ನು ಇಟ್ಟಾಗ ಅದನ್ನು ಹೊಡೆದು ಹಾಕಿ ಒಂದು ಪಾತ್ರೆಯಲ್ಲಿ ಇಡಬೇಕು ಎಂದು ಸಮಾನತೆ ಸಾರಿದರು. ಅವರನ್ನು ಸಮಾನತೆಯ ಹರಿಕಾರ ಎಂದು ನಾವು ಅವರಿಗೆ ಕರೆಯುತ್ತೇವೆ ಎಂದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಜಿಲ್ಲಾಧಿಕಾರಿ ವೈ .ಎಸ್. ಪಾಟೀಲ್ ಉದ್ಘಾಟಿಸಿದರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ಗದಗ: ಭಾರತದಾದ್ಯಂತ ಕಾಂಗ್ರೆಸ್ ‘ಬೆಲೆ ಏರಿಕೆ ಮುಕ್ತ ಭಾರತ’ ಎಂಬ ಅಭಿಯಾನದಡಿಯಲ್ಲಿ ವಿನೂತನ ಹೋರಾಟವನ್ನು ನರಗುಂದ ತಾಲೂಕಿನ ಸೋಮಾಪೂರ ಓಣಿಯ ಐದು ಮತ್ತು ಹದಿನೆಂಟನೆಯ ವಾರ್ಡ್ ನ ಜನರು ಹಮ್ಮಿಕೊಂಡರು. ಎಐಸಿಸಿ ಮಾನವ ಹಕ್ಕುಗಳ ಘಟಕದಿಂದ ಅಧ್ಯಕ್ಷರಾದ ಶಿವಾನಂದ ಮಾಯಣ್ಣ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿ, ಬಿಜೆಪಿ ಸರಕಾರ ಹತ್ತೇದಿನದಲ್ಲಿ ಹನ್ನೊಂದು ಬಾರಿ ಪೆಟ್ರೊಲ್ ಬೆಲೆಯನ್ನು ಏರಿಕೆ ಮಾಡಿದೆ. ಇದೊಂದು ಸುಳಿಗೆ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ರಸಗೊಬ್ಬರಗಳ ವರ್ಷಕ್ಕೆ ಎರಡು ಕೋಟಿ ಇಪ್ಪತ್ತು ಲಕ್ಷ ಟನ್ ಅವಶ್ಯವಿದ್ದು, 2300ಲಕ್ಷ ಕೋಟಿ ರೂಪಾಯಿ ಹೆಚ್ಚುವರಿ ರೈತರಿಂದ ವಸೂಲಿ ಮಾಡಿದೆ. ಇದೊಂದು ಜನವಿರೋಧಿ ಸರಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ಪೆಟ್ರೋಲ್ ಡಿಸೇಲ್ ಗ್ಯಾಸ್ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ನರಗುಂದ ತಾಲೂಕಿನ ಸೋಮಾಪೂರ ಓಣಿಯ5 ಮತ್ತು 18ನೇಯ ವಾರ್ಡಿನ ಹಿರಿಯರಾದ ಬಸನಗೌಡ ಕ ಪಾಟೀಲ, ಚನ್ನಬಸುವ ಹುಲಜೋಗಿ, ಪಕ್ರುಸಾಬ ಬಿಳಗಿ, ವಿಠ್ಠಲ ಬಾರಕೇರ, ಶರಣಪ್ಪ ಹುಲಜೋಗಿ,…
ಸರಗೂರು: ತಾಲ್ಲೂಕಿನ ಕೆ ಬೆಳ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಹುಂಡಿ ಗ್ರಾಮದಲ್ಲಿ ಸಾಲುಂಡಿ ಗ್ರಾಮದ ಚಿಕ್ಕಣ್ಣ ಎಂಬುವರು ಸರ್ಕಾರಿ ಜಾಗ ಗೋಮಾಳ ವನ್ನು ಒತ್ತುವರಿ ಮಾಡಿಕೊಂಡು ಅಲ್ಲಿಂದ ಮಣ್ಣು ಸಾಗಣಿಗೆ ಮಾಡಿರುವ ಆರೋಪ ಕೇಳಿ ಬಂದಿದೆ. ಚಿಕ್ಕಣ್ಣ ಅವರು ತನ್ನ ಜಮೀನು ಪಕ್ಕದಲ್ಲಿರುವ ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು, ಅಲ್ಲಿದ ಗೋಮಾಳ ಜಾಗದ ಬೆಟ್ಟದಿಂದ ಅಕ್ರಮ ವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ತೆಗೆದುಕೊಂಡು ಬಂದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ವಿಚಾರವನ್ನು ಗ್ರಾಮಸ್ಥರು ಪ್ರಶ್ನಿಸಿದರೆ, ಅವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.. ಚಿಕ್ಕಣ್ಣ ಪೋಲಿಸ್ ಇಲಾಖೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಪ್ರಭಾವ ಬಳಸಿ ಅವರು ಈ ಕೆಲಸ ಮಾಡುತ್ತಿದ್ದಾರೆ. ಸರಗೂರು ತಾಲ್ಲೂಕಿನ ತಹಶೀಲ್ದಾರ್ ಹಾಗೂ ಅರಣ್ಯ ಇಲಾಖೆಯವರು ಮತ್ತು ಚಿಕ್ಕಣ್ಣನ ಈ ವಿಚಾರಕ್ಕೆ ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಮಣ್ಣು ಅಕ್ರಮ ಗಣಿಗಾರಿಕೆ ನಡೆಸಿದರೂ ಕಂದಾಯ ಮತ್ತು ಅರಣ್ಯ…
ತುಮಕೂರು: ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಗೆ ಆರ್ ಟಿಒ ಅಧಿಕಾರಿಯೊಬ್ಬರು ನೆರವಾಗಿದ್ದು, ತಮ್ಮ ಜೀಪಿನಲ್ಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಆರ್ ಟಿ ಓ ಇನ್ಸ್ ಪೆಕ್ಟರ್ ಇದಾಯತ್ ಷರೀಫ್ ಮಾನವೀಯತೆ ಮೆರೆದ ಅಧಿಕಾರಿಯಾಗಿದ್ದಾರೆ. ತುಮಕೂರು ತಾಲೂಕಿನ ಬೆಳದರ ಬಳಿ ಅಪಘಾತವಾಗಿ ಬಿಹಾರ ಮೂಲದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದರು. ಅವರ ಕಾಲಿಗೆ ತೀವ್ರವಾದ ಏಟು ತಗಲಿತ್ತು. ಆಂಬುಲೆನ್ಸ್ ಬರುವುದು ತಡವಾದ ಹಿನ್ನೆಲೆಯಲ್ಲಿ ವ್ಯಕ್ತಿ ಸ್ಥಳದಲ್ಲಿ ನರಳುತ್ತಿದ್ದ. ಇದನ್ನು ಕಂಡ ಇದಾಯತ್ ಷರೀಫ್ ತಡಮಾಡದೇ ತಮ್ಮ ಜೀಪಿನಲ್ಲೇ ಗಾಯಾಳುವನ್ನು ಕೂರಿಸಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದು, ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇನ್ನೂ ಇದಾಯತ್ ಷರೀಫ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಂಬುಲೆನ್ಸ್ ಗೆ ಕಾಯದೇ, ಯಾವುದೇ ಅಡೆತಡೆಗಳನ್ನು ಗಮನಿಸಿದೇ ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಅವರು ಸಾರ್ವಜನಿಕರಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ ಈ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮೊದಲ ಬಾರಿಗೆ ಜಗನ್ ಜೀವನ್ ರಾಮ್ ಅವರ 115ನೇ ಜನ್ಮ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದಂತೆ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾ. ಮಾಜಿ ಸಚಿವರಾದ ಡಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಹೆಚ್.ಆಂಜನೇಯ ಮಾರ್ಗದರ್ಶನ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದ್ದು, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಕಾಂಗ್ರೆಸ್ ನಾಯಕರ ಕಟೌಟ್ ಗಳು ರಾರಾಜಿಸುತ್ತಿವೆ. ಇನ್ನೊಂದೆಡೆ ಕಾರ್ಯಕ್ರಮಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕಾರಣ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಇನ್ನೂ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಜಿಲ್ಲಾಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಕೂಡ ಆಗಮಿಸಲಿದ್ದಾರೆ. ಈಗಾಗಲೇ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. …
ಕುಣಿಗಲ್: ಎಸೆಸೆಲ್ಸಿ ಪರೀಕ್ಷೆಗೆ ಸ್ನೇಹಿತರ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದು ಬೆಳಗ್ಗೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಬಳಿಯ ನವೀನ್ ಎಂಬಾತ ಸ್ಥಳದಲ್ಲೇ ಮೃತಪಟ್ಟು ಬೈಕಿನಲ್ಲಿ ತೆರಳುತ್ತಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ . ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಅಮೃತೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ಎನ್ನಲಾಗಿದೆ. ಕಳೆದ ಐದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆಯುವ ಸಂಬಂಧ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಬೆನ್ನಲ್ಲೇ ಹೃದಯಾಘಾತಕ್ಕೆ ಈಡಾಗಿ ಅಸುನೀಗಿದಳು, ಇನ್ನು ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ವರದಿ: ಮಾರುತಿ ಪ್ರಸಾದ್ ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5