Subscribe to Updates
Get the latest creative news from FooBar about art, design and business.
- ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
- ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
- ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
- ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
- ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
- ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
- ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್ ಗಳು
- ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
Author: admin
ತುಮಕೂರು: ಜೆ.ಸಿ.ಐ. ತುಮಕೂರು ಮೆಟ್ರೋ ಮತ್ತು ರೋಟರಿ ತುಮಕೂರು ಪ್ರೇರಣಾ ಸಂಸ್ಥೆ, ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಹಯೋಗದಲ್ಲಿ ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಮಯದ ಮಹತ್ವ ಹಾಗೂ ಸಮಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಜೆ.ಸಿ.ಐ 14ರ ವಲಯ ಮಟ್ಟದ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ, ನರೇಶ್ ಬಿ ಗಾಢಿಯ ಮತ್ತು ಮುಕೇಶ್ ಭಂಡಾರಿ, ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್ ಆಡಳಿತ ಮಂಡಳಿಯೊಂದಿಗೆ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮುಖ್ಯ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳ ಜೀವನಶೈಲಿಯಲ್ಲಿ ಸಮಯಕ್ಕೆ ಮಹತ್ವ ಮತ್ತು ಸಮಯಪಾಲನೆ ಅತಿಮುಖ್ಯವಾದ ಘಟ್ಟವಾಗಿದೆ. ಸಮಯಪಾಲನೆಯ ಮುಖ್ಯ ಉಪಯೋಗವೇನೆಂದರೆ ತಮಗೆ ಆಗುವ ಬೇಸರದಿಂದ ದೂರವಿರಬಹುದು. ಸಾಮಾನ್ಯವಾಗಿ ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಜೆಕ್ಟ್, ಹೋಂ ವರ್ಕ್ ಮುಗಿಸಲು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಇಂತಹ ಸಮಸ್ಯೆಗಳಿಂದ ವಿದ್ಯಾಭ್ಯಾಸ ಸುಂದರವಾಗಿರಲು, ಆಸಕ್ತಿದಾಯಕವಾಗಿ ಇರುವಂತೆ ನೋಡಿಕೊಳ್ಳಲು ಉತ್ತಮ ಟೈಮ್ ಮ್ಯಾನೇಜ್ಮೆಂಟ್ ಅಗತ್ಯವಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲೆ ಮಹೇಶ್…
ಫೈವ್ ಸ್ಟಾರ್ ಹೋಟೆಲೊಂದರಲ್ಲಿ ಹೈಟೆಕ್ ಜೂಜಾಟ ವಾಡುತ್ತಿದ್ದ ನಿವೃತ್ತ ಸರ್ಕಾರಿ ಅಧಿಕಾರಿ ಸೇರಿದಂತೆ ಆರು ಮಂದಿ ಉದ್ಯಮಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 20.71 ಲಕ್ಷ ರೂ. ಹಣ ವಶಪಡಿಸಿ ಕೊಂಡಿದ್ದಾರೆ. ಹೋಟೆಲ್, ಕ್ಯಾಟರಿಂಗ್, ಟ್ರಾನ್ಸ್ಫೆಪೊರ್ಟ್ ಉದ್ಯಮ ನಡೆಸುತ್ತಿರುವ ಉದ್ಯಮಿಗಳು ಹಾಗೂ ಒಬ್ಬರು ನಿವೃತ್ತ ಸರ್ಕಾರಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹಣ ಸೇರಿದಂತೆ ಇಸ್ಪೀಟ್ ಕಾರ್ಡ್ಗಳು ಹಣ ಎಣಿಸುವ ಯಂತ್ರ ವಶಪಡಿಸಿಕೊಂಡಿದ್ದಾರೆ. ಈ ಆರೂ ಮಂದಿ ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಫೈವ್ಸ್ಟಾರ್ ಹೋಟೆಲ್ನಲ್ಲಿ ರೂಂಬುಕ್ ಮಾಡಿಕೊಂಡು ಹೈಟೆಕ್ ಗ್ಯಾಬ್ಲಿಂಗ್ ಆಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಟ್ವಿಟರ್ ಖಾತೆಯಲ್ಲಿ ಲೈಂಗಿಕ ಉತ್ತೇಜನ ನೀಡುವ ಪೋಟೋಗಳನ್ನು ಭಿತ್ತರಿಸುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ ಜೋಷಿ, ಫೆಬ್ರವರಿ 2ರಂದು ಬೆಂಗಳೂರು ನಗರ ಪೊಲೀಸ್ ಹಿರಿಯ ಅಧಿಕಾರಿಗಳ ಖಾತೆಗೆ ವ್ಯಕ್ತಿಯೊಬ್ಬರ ಖಾತೆಯಿಂದ ದೂರಿನ ರೂಪದಲ್ಲಿ ಮಾಹಿತಿ ಬಂದಿತ್ತು. ಅದರಲ್ಲಿ ನಾವು ಬೆಂಗಳೂರಿನಲ್ಲಿರುವ ಮದುವೆಯಾದ ದಂಪತಿ. ನಮ್ಮನ್ನು ಭೇಟಿ ಮಾಡಲು ಯಾರಿಗಾದರೂ ಆಸಕ್ತಿ ಇದ್ದರೆ ಫ್ರೆಂಡ್ಸ್ ವಿತ್ ಬೆನಿಫಿಟ್ಸ್ನಲ್ಲಿ ಸಂಪರ್ಕ ಮಾಡಿ ಎಂಬ ಸಂದೇಶದೊಂದಿಗೆ ಅಶ್ಲೀಲ ಚಿತ್ರಗಳನ್ನು ಹಾಕಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು. ತನಿಖೆ ಆರಂಭಿಸಿದ ಸಿ ಇ ಎನ್ ಪೊಲೀಸ್ ಇನ್ಸ್ಪೆಕ್ಟರ್ ಯೋಗೇಶ್ ಎಸ್.ಟಿ. ಅವರು ವೈಜ್ಞಾನಿಕ ಮಾದರಿಗಳ ಮೂಲಕ ಖಾತೆದಾರರ ವಿಳಾಸವನ್ನು ಪತ್ತೆ ಹಚ್ಚಿದರು.ನಿನ್ನೆ ದಂಪತಿಯ ಮನೆ ಮೇಲೆ ದಾಳಿ ನಡೆಸಿದಾಗ ಆರೋಪಿಗಳು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದವರಿಗೆ ಟೆಲಿಗ್ರಾಮ್ ಐಡಿ ನೀಡುತ್ತಿದ್ದರು. ಅಲ್ಲಿ ಅಶ್ಲೀಲ ವಿಡಿಯೋಗಳು ಮತ್ತು ಚಿತ್ರಗಳನ್ನು…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಶ್ರೀಶೈಲ ಸರ್ಕಲ್ ಮತ್ತು ಚರ್ಚ್ ರಸ್ತೆಯಲ್ಲಿರುವ ವಿವಿಧ ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಮತ್ತು ಪ್ಲಾಸ್ಟಿಕ್ ಲೋಟ ಮಾರಾಟಗಾರರ ಮೇಲೆ ಪೌರಾಯುಕ್ತರಾದ ಡಿ.ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಮಾಲಿಕರಿಂದ 7000 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಅಂಜಿನಪ್ಪ, ಕಿರಿಯ ಆರೋಗ್ಯ ನಿರೀಕ್ಷಕರಾದ ಅಶೋಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪ್ರವಚನ, ಸಂವಾದಗಳ ಮೂಲಕ ಭಾವೈಕ್ಯತೆ ಸಂದೇಶಗಳನ್ನು ಸಾರುತ್ತಿದ್ದ ಕನ್ನಡದ ಕಬೀರ ಎಂದೇ ಪ್ರಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್(76) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಹೃದಯಘಾತವಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದವರಾದ ಇಬ್ರಾಹಿಂ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಬ್ರಾಹಿಂ ಅವರ ಅಂತ್ಯಕ್ರಿಯೆ ಇಂದು ಮಹಾಲಿಂಗಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಇಬ್ರಾಹಿಂ ಸುತಾರ್ ಅವರು ನಾಡಿನ ಎಲ್ಲೆಡೆ ತಮ್ಮ ಪ್ರವಚನಗಳ ಮೂಲಕ ಭಾವೈಕ್ಯತೆಯ ಸಂದೇಶ ಸಾರಿ ಪ್ರಸಿದ್ದಿಯಾಗಿದ್ದರು. ಧರ್ಮ, ಸೂಫಿ ಪರಂಪರೆಗಳ ಪ್ರವಚನಗಳ ಮೂಲಕ ಸಾಮರಸ್ಯಕ್ಕಾಗಿ ಅವರು ಶ್ರಮಿಸಿದ್ದರು.ಹಿಂದು, ಮುಸ್ಲಿಂ ಭಾವೈಕತಾ ಶ್ರೇಷ್ಠ ಪ್ರವಚಕ, ಸೂಫಿ ಸಂತರಾಗಿದ್ದ ಸುತಾರ್‍ಗೆ ಕಳೆದ ನಾಲ್ಕು ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಜ್ಯೋತ್ಸವ ಪ್ರಶಸ್ತಿ, ಅಸಮಾನ್ಯ ಕನ್ನಡಿಗ ಪ್ರಶಸ್ತಿ ಸೇರಿದಂತೆ…
ಬಾಗಲಕೋಟೆ: ಕನ್ನಡದ ಕಬೀರ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ಇಂದು ಬೆಳಗ್ಗೆ 6:30ಕ್ಕೆ ಇಬ್ರಾಹಿಂ ಸುತಾರ್ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ 3-4 ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಇಬ್ರಾಹಿಂ ಸುತಾರ್ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ. ಸುತಾರ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. ಇಬ್ರಾಹಿಂ ಸುತಾರ್ ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ ಕಬೀರ ಆಗಿದ್ದರು. ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪುರಸ್ಕೃತರು…
ತುಮಕೂರು: ಅತಿಥಿ ಉಪನ್ಯಾಸಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಎಲ್ಲರನ್ನೂ ಸೇವೆಯಲ್ಲಿ ಮುಂದುವರಿಸುವಂತೆ ಎಸ್. ವರಲಕ್ಷ್ಮಿ ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದರು. ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, 1.80 ಲಕ್ಷ ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಅನ್ ಲೈನ್ ಅಪ್ಲಿಕೇಷನ್ ಐಡಿ ಪ್ರಕಾರ 14,106 ಅತಿಥಿ ಉಪನ್ಯಾಸಕರು ಇದ್ದಾರೆ . ಇನ್ನೂ ಹೆಚ್ಚಾಗಿರುವ ಕಾಲೇಜುಗಳಲ್ಲಿ ಹೊಸಬರನ್ನು ಆಯ್ಕೆ ಮಾಡಿಕೊಳ್ಳುವ ಸರ್ಕಾರದ ಸೂಚನೆ ಪ್ರಕಾರ ಅಂದಾಜು 3,000 ಜನ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಒಟ್ಟು 17.106 ಅತಿಥಿ ಉಪನ್ಯಾಸಕರಾಗುತ್ತಾರೆ ಎಂದು ತಿಳಿಸಿದರು. ಶಿಕ್ಷಣ ತಜ್ಞರು ಅತಿಥಿ ಉಪನ್ಯಾಸಕ ಸಂಘದ ಪ್ರತಿನಿಧಿಗಳನ್ನು ಯೋಜನಾ ಇಲಾಖೆ ಮತ್ತು ಉಪನ್ಯಾಸಕರ ಸಂಘಟನೆಗಳ ಪ್ರತಿನಿಧಿಗಳನ್ನೂಳಗೊಂಡ ಸಮಿತಿ ರಚಿಸುವ ಬದಲಿಗೆ ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ಮಂಡಳಿ ಮತ್ತು ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಮಾತ್ರ ಬಳಸಿಕೊಂಡು ರಚಿಸಿದ ಸಮಿತಿ ನಿರೀಕ್ಷೆ ಪ್ರಾಕಾರ ಸಂಪೂರ್ಣ ಅತಿಥಿ ಉಪನ್ಯಾಸಕರನ್ನು ರಕ್ಷಣೆ ಮಾಡುವ ಬದಲಿಗೆ ಆತುರವಾಗಿ ಶಿಫಾರಸ್ಸು…
ಅಹಮದಾಬಾದ್: ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್‌ನ್ನು ವೈದ್ಯಕೀಯ ತುರ್ತುಸ್ಥಿತಿಗಾಗಿ ದಾನ ಮಾಡಿ ಮೆಚ್ಚುಗೆಗೆ ಪಾತ್ರರಾದ ಪದ್ಮಶ್ರೀ ಪುರಸ್ಕೃತರು. 59 ವರ್ಷದ ಸೂರತ್ ನಿವಾಸಿಯಾಗಿರುವ ಸಾವ್ಜಿ ಧೋಲಾಕಿಯಾ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪಡೆದಿದ್ದಾರೆ. ಈ ಕಾರದಿಂದ ಕುಟುಂಬ ಸದಸ್ಯರು ಹೆಲಿಕಾಪ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು. 50 ಕೋಟಿ ರೂ.ಬೆಲೆಯ ಹೊಚ್ಚಹೊಸ ಹೆಲಿಕಾಪ್ಟರ್‌ನ್ನು ಅವರು, ಸೂರತ್‍ನ ವೈದ್ಯಕೀಯ ಮತ್ತು ಇತರ ತುರ್ತು ಪರಿಸ್ಥಿತಿಗಳಿಗಾಗಿ ಕೊಡುಗೆಯಾಗಿ ನೀಡುವ ಮೂಲಕ ಎಲ್ಲಡೆ ಮೆಚ್ಚುಗೆ ಪಡೆದಿದ್ದಾರೆ. ಧೋಲಾಕಿಯಾ ಅವರು ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕರಾಗಿದ್ದಾರೆ. ಇವರು ಕೆಲವು ದಿನಗಳಿಂದ ಸೂರತ್‍ನ ಜನರಿಗೆ ಹೆಲಿಕಾಪ್ಟರ್ ಉಡುಗೊರೆಯಾಗಿ ನೀಡಲು ಯೋಜಿಸಿದ್ದರು. ಆದರೆ ಆಶ್ಚರ್ಯಕರ ರೀತಿಯಲ್ಲಿ ಹೆಲಿಕಾಪ್ಟರ್‌ನ್ನೇ ಉಡುಗೊರೆಯನ್ನು ಸ್ವೀಕರಿಸಿದ ನಂತರ ಅವರು ಅದನ್ನೇ ಸೂರತ್ ಜನತೆಗೆ ಕೊಡುಗೆಯಾಗಿ ನೀಡಿದ್ದಾರೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂರತ್ ಗುಜರಾತ್‍ನ ಆರ್ಥಿಕ ರಾಜಧಾನಿಯಾಗಿದೆ. ಆದರೆ ತನ್ನದೇ ಆದ ಹೆಲಿಕಾಪ್ಟರ್ ಹೊಂದಿಲ್ಲ. ಹೀಗಾಗಿ, ನಾನು ಈ ಉಡುಗೊರೆಯನ್ನು…
ತಿಪಟೂರು: ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಎನ್ಸಿಡಿ (NCD) ಕ್ಲಿನಿಕ್ ಇವರ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ವಿಶ್ವ ಕ್ಯಾನ್ಸರ್ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಹ್ಲಾದ್, ಕ್ಯಾನ್ಸರ್ ಕಾಯಿಲೆ ಇಂದು ಪ್ರಪಂಚದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕಾಯಿಲೆಯಾಗಿದ್ದು, ಸಾರ್ವಜನಿಕರು ಇದರ ಬಗ್ಗೆ ಅರಿವು ಮುಂಜಾಗ್ರತೆ ಪಡೆದುಕೊಳ್ಳುವುದು ಉತ್ತಮ, ಕ್ಯಾನ್ಸರ್ ತಪಾಸಣೆ ಮಧುಮೇಹ ಅಧಿಕ ರಕ್ತದೊತ್ತಡ ತಪಾಸಣೆಗಳು ಒಂದು ವಾರಗಳ ಕಾಲ ನಮ್ಮ ಆಸ್ಪತ್ರೆಯಲ್ಲಿ (ಸಪ್ತಾಹ) ಏರ್ಪಡಿಸಿದ್ದು, ಸಾರ್ವಜನಿಕರು ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ,ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಆಸ್ಪತ್ರೆಯ ವೈದ್ಯರುಗಳಾದ ಡಾ.ಸುರೇಶ್, ಡಾ.ರಕ್ಷಿತ್, ಡಾ. ಸ್ವಾಮಿ ಮತ್ತು ಡಾ.ವಿಜಯಕುಮಾರ್, ಸಿಬ್ಬಂದಿಗಳಾದ ರಾಘವ್, ಉಮೇಶ್ ಮತ್ತು ಆಪ್ತ ಸಮಾಲೋಚಕ ಶ್ರೀನಿವಾಸ್ ಸೇರಿದಂತೆ ಎನ್.ಸಿ.ಡಿ. ಸಿಬ್ಬಂದಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತಿಪಟೂರು : ತಾಲ್ಲೂಕಿನ ಧಾರ್ಮಿಕ ಕ್ಷೇತ್ರವಾದ ಆದಿಚುಂಚನಗಿರಿ ಶಾಖಾಮಠದ ದಸರೀಘಟ್ಟದ ಚೌಡೇಶ್ವರಿ ದೇವಾಲಯದಲ್ಲಿ ಫೆ.6 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಚೌಡೇಶ್ವರಿ ದೇವಿಯ ನೂತನ ವಿಗ್ರಹ ಪ್ರತಿಷ್ಠಾಪನಾ ಪೂಜಾ ಮಹೋತ್ಸವವು ನೆರವೇರಲಿದೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿಯ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯವನ್ನು ವಹಿಸಲಿದ್ದು, ಅಧ್ಯಕ್ಷತೆಯನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಕೆ.ಷಡಕ್ಷರಿ, ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಲ್.ಜಗದೀಶ್, ಬೆಂಗಳೂರಿನ ರಾಮಕೃಷ್ಣಪ್ಪ, ಚಲನಚಿತ್ರ ನಿರ್ಮಾಪಕ ಚನ್ನೇಗೌಡ ಭಾಗವಹಿಸಲಿದ್ದಾರೆ ಎಂದು ಮಠದ ಕಾರ್ಯದರ್ಶಿ ಚಂದ್ರಶೇಖರನಾಥ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB