Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿಯ ಲಂಕೆ ಗ್ರಾಮದಲ್ಲಿ ಮಳೆಯ ಪರಿಣಾಮ ಮನೆಗಳಿಗೆ ಚರಂಡಿ ನೀರು ನುಗ್ಗಿರುವ ಘಟನೆ ನಡೆದಿದ್ದು, ಚರಂಡಿಯನ್ನು ಸ್ವಚ್ಛತೆಗೊಳಿಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಕೆ ಎರಡನೇ ಬ್ಲಾಕ್ ನ ಗ್ರಾಮ ಪಂಚಾಯತ್ ಚರಂಡಿ ಸ್ವಚ್ಛಗೊಳಿಸದೇ ಹಾಗೆಯೇ ಬಿಟ್ಟಿದ್ದು, ಚರಂಡಿಯಲ್ಲಿ ತುಂಬಿದ್ದ ಕಸಗಳಿಂದಾಗಿ ಸುಗಮವಾಗಿ ನೀರು ಹರಿಯದೇ, ಮನೆಗಳಿಗೆ ನುಗ್ಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚರಂಡಿಯನ್ನು ಸ್ವಚ್ಛಗೊಳಿಸದೇ ಗ್ರಾಮ ಪಂಚಾಯತ್ ನಿರ್ಲಕ್ಷ್ಯವಹಿಸುತ್ತಿದೆ ಎಂದು ಗ್ರಾಮದ ಯುವ ಮುಖಂಡ ಶಿವರಾಜ್ ಆಕ್ರೋಶ ವ್ಯಕ್ತಪಡಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೂ ಹಾಗೂ ಸದಸ್ಯರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಕೊಳಚೆ ನೀರಿನಿಂದಾಗಿ ಇಲ್ಲಿನ ನಿವಾಸಿಗಳು ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿದ್ದಾರೆ. ತಕ್ಷಣವೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದರೆ, ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವರದಿ: ಚಂದ್ರ ಹಾದನೂರು.…
ತುಮಕೂರು: ಜಿಲ್ಲೆ ಮತ್ತು ತುಮಕೂರು ನಗರದ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಚಿತ ಮಧುಮೇಹ ಮತ್ತು ಬಿ.ಪಿ. ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಮಹಿಳೆಯರಿಗೆ ಆಟೋಟ ಸ್ಪರ್ಧೆಯನ್ನು ಕೂಡ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಲೀಲಾದೇವಿ ಆರ್ ಪ್ರಸಾದ್, ಜಿಲ್ಲಾಧ್ಯಕ್ಷೆ ತಾಹೆರಾ ಕುಲ್ಸುಮ್, ನಗರ ಅಧ್ಯಕ್ಷೆ ಸಿ.ಡಿ. ಜಯಶ್ರೀ ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಲೀಲಾದೇವಿ ಆರ್.ಪ್ರಸಾದ್ ಮಾತನಾಡಿ, ನಾವು ಮಹಿಳಾ ದಿನಾಚರಣೆ ಕೇವಲ ವರ್ಷದಲ್ಲಿ ಒಂದು ದಿವಸಕ್ಕೆ ಸೀಮಿತವಾಗಬಾರದು. ನಾವು ಏನಾದರೂ ಬದಲಾವಣೆ ತರಬೇಕು. ವರ್ಷಕ್ಕೆ ಒಂದು ದಿವಸ ಆಚರಣೆ ಮಾಡಿದರೆ, ಯಾವುದೇ ಬದಲಾವಣೆ ಆಗದು. ಹೆಣ್ಣುಮಕ್ಕಳಿಗೆ ಕೆಲಸಗಳಲ್ಲಿ ಕೂಲಿ ತಾರತಮ್ಯ ಮಾಡಲಾಗುತ್ತದೆ. ಇದು ನ್ಯಾಯಾನಾ? ಇದಕ್ಕೆ ನಾವು ಹೋರಾಟ ಮಾಡುವುದಿಲ್ಲ. ಆದ್ದರಿಂದ ಹೆಣ್ಣುಮಕ್ಕಳಿಗೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು. ನಂತರ ಮಾತನಾಡಿದ ತಾಹೆರಾ ಕುಲ್ಸುಮ್, ಹೆಣ್ಣುಮಕ್ಕಳಿಗೆ ಉತ್ತಮ ಆದ್ಯತೆ ಕೊಡಬೇಕು ಹಾಗೂ ಪುರುಷರ ಸಹಕಾರದಿಂದ ನಾವು ಮುಂದುವರಿಯಬೇಕು. ಮಹಿಳೆಯರು ಧೈರ್ಯದಿಂದ ಇರಬೇಕು.…
ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಆಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 10ನೇ ದಿನಕ್ಕೆ ಕಾಲಿಟ್ಟಿದೆ. ಈ ದಿನ ಮಧುಗಿರಿ AC ರವರು ಸ್ಥಳಕ್ಕೆ ಆಗಮಿಸಿ ಒಂದು ತಿಂಗಳಲ್ಲಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಡಲಾಗುವುದು ಧರಣಿ ಕೈಬಿಡಿ ಎಂದು ಮನವಿ ಮಾಡಿದರು. ಈ ವೇಳೆ ಧರಣಿ ನಿರತರು, ಸ್ಥಳದಲ್ಲೇ ನಮ್ಮ ಸಮಸ್ಯೆಗಳನ್ನು ಬಗೆಹರಿಸಿ ಕೊಡಿ. ನಾವು ಧರಣಿ ಕೈಬಿಡುತ್ತೇವೆ ಎಂದು ತಿಳಿಸಲಾಗಿದೆ ಎಂದು ಹಂದ್ರಾಳ್ ನಾಗಭೂಷಣ್ ಹೇಳಿದರು. ಧರಣಿಯ ಹಕ್ಕೊತ್ತಾಯಗಳು: *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಪಂಚಾಯತ್ CEO ರವರು ಗಳು, ಈಗಾಗಲೆ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು. *MLA ಗಳ ಅದ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್ 20 ಕ್ಕೆ ಮುಗಿಯುವುದರಿಂದ ಪ್ರಸ್ತುತ ಧರಣಿಯಲ್ಲಿರುವ ಫಲಾನುಭವಿಗಳ ಸುಮಾರು…
ದಾವಣಗೆರೆ: 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತ ಗೌರವಧನದಲ್ಲಿ ಹೆಚ್ಚಳ ಮಾಡಿರುವುದನ್ನು ಹೊರತುಪಡಿಸಿ , ಇತರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಕಡೆಗಣಿಸಿದ್ದು, ಇದರ ವಿರುದ್ಧ ಎ.ಐ.ಯು.ಟಿ.ಯು.ಸಿ. ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಹಾಗೂ ಜಿಲ್ಲಾ ಸಮಿತಿಯು ತೀವ್ರ ಪ್ರತಿಭಟನೆ ನಡೆಸಿದೆ. ನಗರದ ಜಯದೇವ ವೃತ್ತದಲ್ಲಿ ಆಶಾಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರದ ಮಾಸಿಕ ನಿಶ್ಚಿತ ಗೌರವಧನವನ್ನು ಕನಿಷ್ಠ ರೂ. 2,000 ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದ್ದರೂ , ಕಡೆಗೆ 1000 ರೂ.ಗಳಾದರೂ ಹೆಚ್ಚಳ ಮಾಡಿರುವುದನ್ನು ಸಂಘದಿಂದ ಸ್ವಾಗತಿಸುತ್ತೇವೆ. ಆದರೆ ಸಂಘದ ರಾಜ್ಯ ಸಮಿತಿಯಿಂದ ಸರ್ಕಾರ ಮತ್ತು ಇಲಾಖೆಗೆ ಸಲ್ಲಿಸಿರುವ ಪ್ರಮುಖ ಬೇಡಿಕೆಗಳಿಗೆ ಪರಿಹಾರ ಕ್ರಮಗಳನ್ನು ಘೋಷಣೆ ಮಾಡದೆ ಕಡೆಗಣಿಸಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ ಹಾಕಿದರು.…
ತುಮಕೂರು: ನಡೆದಾಡುವ ದೇವರು ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ಏಪ್ರಿಲ್ 1 ರಂದು ತುಮಕೂರಿಗೆ ಆಗಮಿಸುವ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಭವ್ಯ ಸ್ವಾಗತ ಕೋರಲು ಜಿಲ್ಲೆಯ ಎಲ್ಲಾ ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದ್ದಾರೆ ಎಂದು ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್.ಪಂಚಾಕ್ಷರಿ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಅವರ 115 ನೇ ವರ್ಧಂತಿ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರ ಆಗಮನಕ್ಕೆ ಬಿಜೆಪಿ ಸನ್ನದ್ಧವಾಗಿದೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಒಗ್ಗೂಡಿ ಅಮಿತ್ ಷಾ ಅವರನ್ನು ಹಾಗೂ ಸಿಎಂ ಬೊಮ್ಮಾಯಿ ಅವರನ್ನು ಸ್ವಾಗತಿಸಲಿದ್ದಾರೆ ಎಂದರು.ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಮಾಜಿ ಸಿ.ಎಂ.ಯಡಿಯೂರಪ್ಪ ಹಾಗೂ ರಾಜ್ಯ ದ ಸಚಿವರು, ಶಾಸಕರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉಸ್ತುವಾರಿಯನ್ನು ಯುವ ನಾಯಕ ವಿ.ವೈ.ವಿಜಯೇಂದ್ರ ವಹಿಸುತ್ತಿದ್ದು ಬಹಳ ಅದ್ದೂರಿಯಾಗಿ ಕೇಂದ್ರ ಗೃಹ ಅಮಿತ್ ಷಾ ರವರನ್ನು ಸ್ವಾಗತಿಸಲು ಸಜ್ಜಾಗಿದ್ದೇವೆ ಎಂದರು.…
ಮಧುಗಿರಿ: ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಮೊದಲ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ಮಧುಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ರಾಜ್ಯ ಬಿಜೆಪಿ ದಾವಣಗೆರೆ ವಿಭಾಗ ಪ್ರಭಾರಿ ಆಸೀಫ್ ಸೇಟ್ ರವರು ಮಧುಗಿರಿಯ ಪಾವಗಡ ಸರ್ಕಲ್ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಐತಿಹಾಸಿಕ ಸಯ್ಯದ್ ಇಬ್ರಾಹಿಂ ಖಾಲಿಲುಲ್ಲಾ ಶಾ ಅವ್ವ್ ಳಿಯಾ ಅಲ್ಲ ದರ್ಗಾ ಷರೀಫ್ ಗೆ ಹೂವಿನ ಜಾದರ್ ಸಮರ್ಪಿಸಿ, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವು ಬಲಿಷ್ಠವಾಗಿ ಬೆಳೆಯಲಿ ಹಾಗೂ ಜಿಲ್ಲೆಯ ನಾಲ್ಕು ವಿಧಾನ ಸಭ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಹಫೀಜ್ ರಾಹ್ಮನ್, ಮುಬಾರಕ್ ಸಹ ಪ್ರಭಾರಿ ದಾವಣಗೆರೆ, ಮೊಹಮ್ಮದ್ ಊರೂಜ್ ಪಾಶ ಸಹ ಪ್ರಭಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಇಂತ್ಯಾಜ್ ಪಾಷ, ಮಧುಗಿರಿ ಮಂಡಲ ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ,ಜಿಲ್ಲಾ ವಕ್ಫ್ ಬೋರ್ಡ್ ವೈಸ್ ಚೇರ್ಮೆನ್ ಯಾಸ್ಮಿನ್ …
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಡಿ.ಸುಧಾಕರ್ ಅವರ ಹುಟ್ಟುಹಬ್ಬವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಹಿರಿಯೂರು ತಾಲೂಕಿನ ಸಮಗ್ರ ಅಭಿವೃದ್ಧಿ ಹರಿಕಾರರಾದ ಡಿ.ಸುಧಾಕರ್ ರವರು ಮತ್ತೊಮ್ಮೆ ಜಯಶಾಲಿಯಾಗಲಿ ಎಂದು ಇದೇ ವೇಳೆ ಕಾರ್ಯಕರ್ತರು ಶುಭ ಹಾರೈಸಿ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಡಿ ಸುಧಾಕರ್, ಈ ಕ್ಷೇತ್ರದ ಜನತೆ ನನ್ನ ಮೇಲೆ ಇಟ್ಟ ಅಭಿಮಾನ ಇಂದಿಗೂ ಸಹ ಕಡಿಮೆಯಾಗಿಲ್ಲ. ಅವರ ಆಶಯಗಳು ಹುಸಿಯಾಗದಂತೆ ಈವರೆಗೆ ನಾನು ನಡೆದುಕೊಂಡು ಬಂದಿದ್ದೇನೆ. ಮುಂದೆಯೂ ಅದೇ ರೀತಿಯಾಗಿ ಇರುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯೂರು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ , ಕೆಪಿಸಿಸಿ ಸದಸ್ಯ ಎ.ಎಂ.ಅಮೃತೇ ಶ್ವರ ಸ್ವಾಮಿ , ನಗರ ಮಹಿಳಾ ಘಟಕದ ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಸುರೇಖಾಮಣಿ, ಮಹಿಳಾ ಘಟಕದ ಅಧ್ಯಕ್ಷರಾದ ಎಂ.ಎಸ್.ಗೌರಿ, ಮುರುಳಿಧರನ್ ಹಿರಿಯೂರು , ಅಭಿಮತ ಕನ್ನಡ ವಾರಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಕಂದಿಕೆರೆ ಸುರೇಶ ಬಾಬು, ಜಿಲ್ಲಾ…
ತುಮಕೂರು: ನಾಡಿನಾದ್ಯಂತ ಹುಣಸೆ ಹಣ್ಣಿನ ಬೆಲೆಯು ಕುಸಿದಿರುವುದರಿಂದ ರೈತರಿಗೆ ನೆರವಾಗಲು ಹುಣಸೆಹಣ್ಣಿಗೂ ಬೆಂಬಲ ಬೆಲೆ ಘೋಷಿಸಬೇಕು ಮತ್ತು ಹುಣಸೆಹಣ್ಣಿನ ಖರೀಧಿ ಕೇಂದ್ರಗಳನ್ನು ತೆರೆಯಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಮುರಳೀಧರ ಹಾಲಪ್ಪ ಸರ್ಕಾರವನ್ನು ಒತ್ತಾಯಿಸಿದರು. ನಗರದ ಎಪಿಎಂಸಿಯ ಹುಣಸೆಹಣ್ಣಿನ ಮಂಡಿಯಲ್ಲಿ ಸೋಮವಾರ ರೈತರು ಮತ್ತು ಮಂಡಿ ವರ್ತಕರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಹುಣಸೆ ಬೆಳೆಯುವ ಪ್ರದೇಶವಾದ ಜಿಲ್ಲೆಯ ರೈತರ ಪಾಲಿಗೆ ಯುಗಾದಿ ಶುಭ ಸೂಚನೆ ಕೊಟ್ಟಿಲ್ಲ. ಎಪಿಎಂಸಿಯಲ್ಲಿ ಹುಣಸೆಹಣ್ಣಿನ ಬೆಲೆ ತೀವ್ರವಾಗಿ ಕುಸಿದಿದೆ. ಬೆಲೆ ಕುಸಿದ ರೀತಿ ಕಂಡ ರೈತರು ಅಕ್ಷರಶಃ ತತ್ತರಿಸಿದ್ದಾರೆ ಎಂದರು. ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗ್ರಾಮಾಂತರ ಸೇರಿದಂತೆ ಪಕ್ಕದ ಚಿತ್ರದುರ್ಗ ಜಿಲ್ಲೆ, ಚಿಕ್ಕಬಳ್ಳಾಪುರ ಜಿಲ್ಲೆ ಹೀಗೆ ಬಯಲು ಸೀಮೆಯ ಕಲ್ಪವೃಕ್ಷ ಕಾಮದೇನು ಹುಣಸೆ. ಇದೊಂದು ಬಂಗಾರದ ಬೆಳೆ. ಬೀಜ, ಹಿಪ್ಪೆ, ನಾರು, ತೊಗಟೆ ಸಂಪೂರ್ಣ ಬಳಕೆಗೆ ಉಪಯೋಗಿಸಲ್ಪಡುವ ಹುಣಸೆ ಜನೋಪಯೋಗಿರುವ ಫಸಲು, ಒಂದು ಮರಕ್ಕೆ 1,500 ರಿಂದ 3,000 ರೂ.…
ತುಮಕೂರು: ಎ.ಐ.ಸಿ.ಸಿ. ವರಿಷ್ಠರಾದ ರಾಹುಲ್ ಗಾಂಧಿ ಅವರು ಮಾರ್ಚ್ 31ರಂದು ಸಂಜೆ 4ಗಂಟೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮಂಗಳವಾರ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು ಮಾರ್ಚ್ 31ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಹುಲ್ ಗಾಂಧಿ ಅವರು ಬೇಟಿ ನೀಡಲಿದ್ದಾರೆ. ಅಂದು ಶಿವಕುಮಾರ ಶ್ರೀಗಳ ಗದ್ದುಗೆಗೆ ಬೇಟಿ ನೀಡಿ ನಂತರ ಸಿದ್ದಗಂಗಾ ಶ್ರೀಗಳ ಬೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ ಎಂದು ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠ ರಾಜ್ಯ ,ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ವಾಸಿಯಾಗಿದ್ದು, ಲಕ್ಷಾಂತರ ಮಕ್ಕಳಿಗೆ ಉಚಿತವಾಗಿ ವಿದ್ಯಾಭ್ಯಾಸ ಹಾಗೂ ದಾಸೋಹವನ್ನು ಮಾಡಿ ಶಿವಕುಮಾರ ಶ್ರೀಗಳು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಇನ್ನೂ ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು. ಇನ್ನು ಸೋನಿಯಾ ಗಾಂಧಿರವರು 2008ರಲ್ಲಿ ಎ.ಐ.ಸಿ ಸಿ ಅಧ್ಯಕ್ಷರಾಗಿದ್ದ ವೇಳೆಯಲ್ಲೂ ಸಹ ಶ್ರೀ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಅದರಂತೆ ಈ ಬಾರಿಯೂ ಸಹ ಶಿವಕುಮಾರ…
ಹಿರಿಯೂರು: ಕಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಾಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ನಡೆದಿದೆ. ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ಈಚರ್ ಲಾರಿಯೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಬಲ ಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಂಜುನಾಥ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಕಾರಿನಲ್ಲಿದ್ದ ಇತರರಿಗೂ ತೀವ್ರವಾದ ಗಾಯಗಳಾಗಿವೆ. ಮಂಜುನಾಥ್ ಅವರನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಆದರೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಂಜುನಾಥ್ ಅವರು ವಾಣಿವಿಲಾಸಪುರ ಗ್ರಾಮದ ಹಾಸ್ಟೆಲ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಕುಟುಂಬಕ್ಕೆ ಆಧಾರ…