Subscribe to Updates
Get the latest creative news from FooBar about art, design and business.
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
- ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
- ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
- ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
- ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
Author: admin
ಕೊರಟಗೆರೆ : ಭ್ರಷ್ಟಾಚಾರವು ಕೇವಲ ಹಣದ ವ್ಯವಹಾರವಲ್ಲ, ಅದು ನೈತಿಕ ಮೌಲ್ಯಗಳ ಕುಸಿತವಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಪಾರದರ್ಶಕತೆ, ನೈತಿಕತೆ ಮತ್ತು ಹೊಣೆಗಾರಿಕೆಯಿಂದ ನಡೆದುಕೊಂಡಾಗ ಮಾತ್ರ ಶುದ್ಧ ಆಡಳಿತ ಸಾಧ್ಯ ಎಂದು ತುಮಕೂರು ಜಿಲ್ಲಾ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಶಿವರುದ್ರಪ್ಪ ಮೇಟಿ ಹೇಳಿದರು. ಭ್ರಷ್ಟಾಚಾರವೆಂಬ ಸಾಮಾಜಿಕ ವ್ಯಾಧಿಗೆ ಅಂತ್ಯಗೊಳಿಸುವ ದೃಢಸಂಕಲ್ಪದೊಂದಿಗೆ “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–2025” ಕಾರ್ಯಕ್ರಮವನ್ನು ಕರ್ನಾಟಕ ಲೋಕಾಯುಕ್ತ, ತುಮಕೂರು ಘಟಕದ ವತಿಯಿಂದ ಕೊರಟಗೆರೆ ತಾ.ಪಂ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಸಾಮಾನ್ಯರ ಸಹಕಾರವಿಲ್ಲದೆ ಭ್ರಷ್ಟಾಚಾರ ವಿರೋಧಿ ಚಳವಳಿ ಯಶಸ್ವಿಯಾಗಲಾರದು, ಈ ಪಿಡುಗಿಗೆ ಯಾರೊಬ್ಬರೂ ಒಳಗಾಗಬಾರದು ವೃತ್ತಿಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು. ತಹಶೀಲ್ದಾರ್ ಮಂಜುನಾಥ ಕೆ. ಮಾತನಾಡಿ, ಭ್ರಷ್ಟಾಚಾರವನ್ನು ನಿರ್ಮೂಲಗೊಳಿಸುವ ಹೋರಾಟ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಕಾನೂನಿನಲ್ಲಿ ಭ್ರಷ್ಟಾಚಾರ ವಿರುದ್ಧ ಕಠಿಣ ಶಿಕ್ಷೆಗಳು ಇದ್ದರೂ, ಜನರು ತಮ್ಮ ಹಕ್ಕುಗಳನ್ನು ಅರಿತು ಧೈರ್ಯವಾಗಿ ದೂರು ನೀಡಬೇಕಾಗಿದೆ, ಪಾರದರ್ಶಕ ಆಡಳಿತಕ್ಕೆ ತಂತ್ರಜ್ಞಾನ ಬಳಕೆಯು ಸಹಾಯಕವಾಗುತ್ತದೆ ಇದನ್ನು ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಬಳಕೆ…
ಸರಗೂರು: ವ್ಯಾಪ್ತಿಯ ಕಾಡಂಚಿನ ಭಾಗದಲ್ಲಿ ಹುಲಿ ದಾಳಿಯು ಮುಂದುವರಿದಿದ್ದು, ಹುಲಿ ಸೆರೆ ಕಾರ್ಯಾಚರಣೆ ನಡುವೆಯೇ ತಾಲೂಕಿನ ಕೂರ್ಣೇಗಾಲ ಸಮೀಪದ ಜಮೀನುವೊಂದರಲ್ಲಿ ದನಗಾಯಿ ರೈತನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದಿದೆ. ತಾಲೂಕಿನ ಕೂಡಗಿ ಗ್ರಾಮದ ರೈತ ದೊಡ್ಡ ನಿಂಗಯ್ಯ (55) ಹುಲಿ ದಾಳಿಗೆ ಬಲಿಯಾದ ಮೃತ ದುರ್ದೈವಿ. ಇತ್ತ ಮುಳ್ಳೂರು ಸಮೀಪದ ಬೆಣ್ಣೆಗೆರೆ ಬಳಿ ರೈತ ರಾಜಶೇಖರ್ ಎಂಬವರನ್ನು ಬಲಿ ಪಡೆದಿದ್ದ ಹುಲಿ ಸೆರೆಗೆ ಅರಣ್ಯ ಇಲಾಖೆ ಕೂಂಬಿಂಗ್ ನಡೆಸುತ್ತಿರುವಾಗಲೇ ಕೂರ್ಣೆಗಾಲ ಬಳಿ ದೊಡ್ಡ ನಿಂಗಯ್ಯರನ್ನು ಹುಲಿ ಬಲಿ ಪಡೆದಿದೆ. ದೊಡ್ಡ ನಿಂಗಯ್ಯ ಎಂದಿನಂತೆ ತಮ್ಮ ಸ್ವಗ್ರಾಮ ಕೂಡಗಿ ಸಮೀಪದ ಕೂರ್ಣೇಗಾಲದ ಜಮೀನುವೊಂದರಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದರು. ಸಂಜೆ ಸುಮಾರು 3.30ರ ವೇಳೆಗೆ ಜಾನುವಾರುಗಳನ್ನು ಕರೆದುಕೊಂಡು ಮನೆಗೆ ಹಿಂದಿರುಗುವ ವೇಳೆ ಏಕಾಏಕಿ ಹುಲಿಯೊಂದು ದಾಳಿ ನಡೆಸಿದ್ದು, ಅವರ ಕುತ್ತಿಗೆಯನ್ನು ಹಿಡಿದ ಪರಿಣಾಮ ದೊಡ್ಡ ನಿಂಗಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಜೊತೆಗಿದ್ದ ಉಳಿದಿಬ್ಬರ ಕೂಗಾಟದಿಂದ ಹುಲಿ ಮೃತದೇಹವನ್ನು ಬಿಟ್ಟು ಓಡಿದೆ ಎನ್ನಲಾಗಿದೆ. ಘಟನಾ…
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೋಳವೊಂದು ಒಂದೇ ದಿನ ನಾಲ್ಕು ಜನರ ಮೇಲೆ ತೋಳ ದಾಳಿ ನಡೆಸಿ ಆತಂಕ ಸೃಷ್ಠಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರು ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಹೋಲದಲ್ಲಿ ಕೆಲಸ ಮಾಡುತ್ತಿದ್ದ ಆಲೂರ್ (ಬಿ) ಗ್ರಾಮದ ರುಕ್ಮಿಣಬಾಯಿ ಮೇತ್ರೆ ಹಾಗೂ ಜೋಜನಾ ಗ್ರಾಮದ ಲಾಲಮ್ಮ ಕಾಂಬ್ಳೆ ಅವರ ಮೇಲೆ ತೋಳ ಹಿಂಬದಿಯಿಂದ ದಾಳಿ ನಡೆಸಿ ತಲೆ, ಕಿವಿ, ಬೆನ್ನು ಹಾಗೂ ಸೋಂಟ ಭಾಗಕ್ಕೆ ಗಾಯಮಾಡಿದೆ. ಜೀರ್ಗಾ (ಬಿ) ಗ್ರಾಮದ ಮಂಗಲಾ ಸ್ವಾಮಿ ಅವರು ಹೋಲದಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ತೋಳದ ದಾಳಿಗೆ ಒಳಗಾಗಿದ್ದಾರೆ. ಅವರ ಕೂಗನ್ನು ಕೇಳಿ ಪತಿ ಶರಣಯ್ಯ ಸ್ವಾಮಿ ಓಡಿ ಬಂದು ತೋಳವನ್ನು ಓಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಅದೇ ಗ್ರಾಮದ 15 ವರ್ಷದ ಬಾಲಕನ ಮೇಲೂ ತೋಳ ದಾಳಿ ನಡೆಸಿ ಗಾಯಗೊಳಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಯಗೊಂಡ ನಾಲ್ವರನ್ನು ಬೀದರ್ ಜಿಲ್ಲಾ…
ಕರ್ನಾಟಕ ಬರೀ ನಾಡಲ್ಲ ನಮ್ಮ ಸಂಸ್ಕೃತಿಯ ಧಾತು ಕನ್ನಡ ಕೇವಲ ನುಡಿಯಲ್ಲ ನಮ್ಮ ಅಂತರಂಗದ ಮಾತು ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ರಾಜ್ಯೋತ್ಸವದ ಜೊತೆಗೆ ನಾಲ್ಕು ವರ್ಷದ ಸಂಭ್ರಮಾಚರಣೆ ಆಚರಿಸುತ್ತಿರುವ ನಮ್ಮ ತುಮಕೂರು ನ್ಯೂಸ್ ಚಾನೆಲ್ ಹಾಗೂ ಇದರ ಆಧಾರ ಸ್ತಂಭ ಹಾಗೂ ಸಂಸ್ಥಾಪಕರಾದ ನಟರಾಜು ಜಿ.ಎಲ್. ಅವರಿಗೂ ವಾರ್ಷಿಕೋತ್ಸವದ ಶುಭಾಶಯಗಳು ನಾಲ್ಕು ವರ್ಷಗಳ ಹಿಂದೆ ಈ ಚಾನೆಲ್ ಆರಂಭವಾದಾಗ ಅದರ ಉದ್ದೇಶ ಸರಳವಾಗಿತ್ತು — “ಸತ್ಯವನ್ನೇ ಹೇಳುವುದು, ಯಾರ ಪರವಾಗಿಯೂ ಅಲ್ಲ; ಜನರ ಪರವಾಗಿಯೇ ನಿಲ್ಲುವುದು.” ಮಾಧ್ಯಮದ ವ್ಯವಹಾರೀಕರಣದ ಮಧ್ಯೆ ಈ ಮಾತುಗಳು ಸವಾಲಿನಂತೆ ಕೇಳಿಸಬಹುದು. ಆದರೆ ಈ ಚಾನೆಲ್ ತನ್ನ ಆರಂಭದಿಂದಲೇ ಆ ಮೌಲ್ಯವನ್ನು ಕಾಪಾಡಿಕೊಂಡು ಬಂತು. ಪ್ರಾರಂಭಿಕ ದಿನಗಳಲ್ಲಿ ಸಣ್ಣ ತಂಡ, ಸೀಮಿತ ಸಂಪನ್ಮೂಲಗಳಿದ್ದರೂ ಜನಪ್ರಿಯತೆ ಬೆಳೆಸಿದ ರೀತಿಯು ಶ್ಲಾಘನೀಯವಾಗಿದೆ. ಪತ್ರಿಕೋದ್ಯಮವು ಸಮಾಜದ ನಾಲ್ಕನೇ ಸ್ತಂಭವೆಂದು ಪರಿಗಣಿಸಲ್ಪಟ್ಟಿದೆ. ಪ್ರಜಾಪ್ರಭುತ್ವದ ಬಲವಾದ ಅಸ್ತಿವಾರವನ್ನು ಕಟ್ಟುವಲ್ಲಿ ಮಾಧ್ಯಮದ ಪಾತ್ರ ಅತ್ಯಂತ ಮುಖ್ಯವಾಗಿದೆ. ಈ ಪೈಕಿ, ನಮ್ಮ ನ್ಯೂಸ್ ಚಾನೆಲ್ ಕಳೆದ…
ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕು, ಪೋಲೇನ ಹಳ್ಳಿಯಲ್ಲಿ ದಲಿತ ಯುವಕ ಆನಂದ ಎಂಬುವನನ್ನು ಕುಡಿಯುವ ನೀರು ಕೇಳಿದಕ್ಕೆ ಬರ್ಬರವಾಗಿ ಕೊಲೆ ಮಾಡಲಾಗಿದೆ, ಪಾವಗಡ ತಾಲ್ಲೂಕು ಬೆಳ್ಳಿಬಟ್ಟಲು ಗ್ರಾಮದ ದಲಿತ ಹನುಮಂತರಾಯಪ್ಪ ಎಂಬುವರನ್ನು ಕುಲ್ಲಕ ಕಾರಣಕ್ಕಾಗಿ ಹತ್ಯೆಗೈಯಲಾಗಿದೆ, ಈ ಘನ ಘೋರವಾದ ಕೃತ್ಯವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ತುಮಕೂರು ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ಮುಖಂಡರು, ಹತ್ಯೆಗೊಳಗಾದ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ನಿಯಮದಂತೆ ಸರ್ಕಾರಿ ಉದ್ಯೋಗ ನೀಡಲು ಜಿಲ್ಲಾ ಸರ್ಕಾರವನ್ನು ಆಗ್ರಹಿಸಿದರು. ಜಿಲ್ಲೆಯಲ್ಲಿ ಎಸ್ ಸಿ/ಎಸ್ ಟಿ, ದೌರ್ಜನ್ಯ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಮತ್ತು ಸುಳ್ಳು ಕೌಂಟರ್ ಕೇಸ್ ಅನ್ನು ತಡೆಯಲು ಕ್ರಮವಹಿಸಬೇಕು, ಜಿಲ್ಲೆಯ ಮೂರು ಉಪವಿಭಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಪಿ.ಟಿ.ಸಿ.ಎಲ್ ಕಾಯ್ದೆ ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸಿ ದಲಿತರಿಗೆ ಜಮೀನನ್ನು ಸ್ವಾಧೀನ ಕೂಡಿಸಿಕೊಡಬೇಕು, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಹಾಗೂ ಜಮೀನು ಮಂಜುರಾತಿ ಫಾರಂ, 50.53,57. ಅರ್ಜಿ ಸಲ್ಲಿಸಿರುವ ಎಲ್ಲಾ…
ಬೀದರ್: ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಮುಂದಿನ 15 ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಜಮಾ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ʼ2025–26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತಲೂ ಹೆಚ್ಚುವರಿಯಾಗಿ ಮಳೆಯಾಗಿ ಹಾಗೂ ಮಹಾರಾಷ್ಟ್ರ ರಾಜ್ಯದಿಂದ ಮಾಂಜ್ರಾ ನದಿಗೆ ಧನೆಗಾಂವ ಆಣೆಕಟ್ಟಿನಿಂದ ನೀರು ಹರಿಸಿರುವುದರಿಂದ ಪ್ರವಾಹ ಉಂಟಾಗಿ ಜಿಲ್ಲಾದ್ಯಂತ ಒಟ್ಟು 1,67,202 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆʼ ಎಂದರು. ʼಬೆಳೆ ಹಾನಿಯಾದ ಬಗ್ಗೆ ಜಿಲ್ಲಾಡಳಿತ ಅತ್ಯಂತ ಶ್ರಮ ವಹಿಸಿ ಸಮೀಕ್ಷೆ ಕಾರ್ಯಕೈಗೊಂಡಿದ್ದು, ಪರಿಹಾರ ತಂತ್ರಾಂಶದಲ್ಲಿ ನಮೂದಿಸಿರುವ 1.68 ಲಕ್ಷ ಹೆಕ್ಟೇರ್ ಬೆಳೆ ಹಾನಿಯ ಎನ್ ಡಿಆರ್ ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಅಂದಾಜು ಪರಿಹಾರ ಮೊತ್ತು ಒಟ್ಟು ₹143.34 ಕೋಟಿಯಾಗಿದೆʼ ಎಂದು ವಿವರಿಸಿದರು. ʼಅ.30ರೊಳಗಾಗಿ…
ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಒಳಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿಎಂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿಪಿ /ಟಿಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ ಎಂದರು. ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆಯ ಮುಂಭಾಗ ನಡೆಯುತ್ತಿದ್ದ ವಾರದ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಅಲ್ಲಿನ ಗಿಡಗಂಟಿಗಳನ್ನು ತೆರವು ಮಾಡಿ ಕುಳಿತು ವ್ಯಾಪಾರ ಮಾಡಲು ಅನುಕೂಲ ಆಗುವಂತೆ ಮಣ್ಣು ಹಾಕಿಸಿ, ನೀರು ಮತ್ತು ಶೌಚಾಲಯ ಸುಸ್ಥಿತಿಯಲ್ಲಿಟ್ಟು ಜಾಗ ಹಂಚಿಕೆ ಮಾಡಲು ಪಟ್ಟಣ ಪಂಚಾಯ್ತಿಯ ತುರ್ತು ಸಭೆಯಲ್ಲಿ ಬುಧವಾರ ನಿರ್ಧರಿಸಲಾಯಿತು. ಹೂವು ಹೊನ್ನು, ಹಣ್ಣಿನ ವ್ಯಾಪಾರಿಗಳಿಗೆ 5*5 ಅಳತೆಯ ಜಾಗ ನೀಡಿ ವಾರಕ್ಕೆ ರೂ.50 ಸುಂಕ, ತರಕಾರಿ ವ್ಯಾಪಾರಿಗಳಿಗೆ 10*10 ಅಳತೆಯ ಜಾಗ ನೀಡಿ ವಾರಕ್ಕೆ ರೂ.100 ಸುಂಕ, ದಿನಸಿ ಅಂಗಡಿಗಳಿಗೆ 10*15 ಅಳತೆ ಜಾಗ ನೀಡಿ ವಾರಕ್ಕೆ ರೂ.150 ಸುಂಕ ವಸೂಲಿ ಮಾಡಲು ತೀರ್ಮಾನಿಸಲಾಯಿತು. ಹಾಲಿ ವಾರದ ಸಂತೆಯಲ್ಲಿ ವ್ಯಾಪಾರ ಮಾಡುವವರಿಗೆ ಮೊದಲ ಆದ್ಯತೆಯಂತೆ ವ್ಯಾಪಾರಕ್ಕೆ ಜಾಗ ನೀಡಿ ಜಾಗ ಉಳಿದರೆ ನಂತರ ಅರ್ಜಿ ಕರೆದು ಸ್ಥಳ ನೀಡುವಂತೆಯೂ ಎಲ್ಲರಿಗೂ ಲಕ್ಕಿಡಿಪ್ ಮೂಲಕ ಸ್ಥಳದ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ಹಬ್ಬ ಸೇರಿದಂತೆ ವಿಶೇಷ ದಿನಗಳಲ್ಲಿ ಗುರುವಾರದ ವಾರದ ಸಂತೆಯ ಬದಲಿಗೆ…
ತುಮಕೂರು: ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ನೀರು ಸೋರಿಕೆಯಾಗುತ್ತಿದ್ದ ಸ್ಥಳಕ್ಕೆ ಈಗಾಗಲೇ ಮಣ್ಣನ್ನು ಹಾಕುವ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸೋರಿಕೆ ಪ್ರಮಾಣವನ್ನೂ ನಿಯಂತ್ರಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು. ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮೈದಾಳ ಕರೆ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಸಂಚರಿಸಿದ ಅವರು, ತಕ್ಷಣವೇ ಪಿಡಿಒ ಹಾಗೂ ಸಂಬಂಧಪಟ್ಟ ತಾಂತ್ರಿಕ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಮಳೆ ಪ್ರಮಾಣ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಬಲಪಡಿಸಬೇಕು. ಕೆರೆ ಹತ್ತಿರ ಇರುವ ಮನೆ, ಶಾಲೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಿಗೆ ಯಾವುದೇ ಹಾನಿ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಅವರು ಮುಂದುವರಿದು ಕಟ್ಟೆ ಬಲಪಡಿಸುವ ತುರ್ತು…
ತುಮಕೂರು: ನವೆಂಬರ್ ತಿಂಗಳಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿ ಪ್ರಯುಕ್ತ ‘ಸರ್ದಾರ್ 150’ ಏಕತಾ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಸರ್ದಾರ್ 150’ ಪಾದಯಾತ್ರೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾದಯಾತ್ರೆಯ ಮೂಲಕ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ರಾಷ್ಟ್ರ ಏಕೀಕರಣದ ಪಾತ್ರ, ಸಾಹಸ, ಆಡಳಿತ ಹಾಗೂ ದೇಶಭಕ್ತಿಯ ಸಂದೇಶವನ್ನು ಯುವ ಪೀಳಿಗೆಗೆ ತಲುಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಶಿಬಿರ, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಸ್ವಚ್ಛತಾ ಕಾರ್ಯಕ್ರಮ, ಜಾಗೃತಿ ಜಾಥಾ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಿದ್ಧತೆ ಪ್ರಾರಂಭಿಸುವಂತೆ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಶ್ರೀವಾಣಿ ಅವರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಈಶ್ವರಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…