Subscribe to Updates
Get the latest creative news from FooBar about art, design and business.
- ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
- ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ: 201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
- ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
- ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
- ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
- ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
- ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
- ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
Author: admin
ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಬಿಜೆಪಿ ನಾಯರು ಆರೋಪಿಸುತ್ತಿದ್ದು, ಇದೀಗ ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿ, ಮರಾಠಿಗರ ಮನವೊಲಿಕೆಗೆ ಡಿಕೆಶಿ ಆಟ ಆಡಿದರೂ ಆಡಿರಬಹುದು ಎಂದಿದ್ದಾರೆ. ಬೆಳಗಾವಿಯ ಆನಗೋಳದಲ್ಲಿ ಮಾತನಾಡಿದ ಈಶ್ವರಪ್ಪ, ಎಂಇಎಸ್ ಬಗ್ಗೆ ಡಿ.ಕೆ.ಶಿವಕುಮಾರ್ ಮೃದು ಧೋರಣೆ ತಳೆದಿರುವುದು ನೋಡಿದರೆ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದ ಜನರ ಮನವೊಲಿಕೆಗಾಗಿ ಎಂಇಎಸ್ ಬೆಂಬಲಕ್ಕೆ ಆಟ ಆಡಿದರೂ ಆಡಿರಬಹುದು. ಅದಕ್ಕೆ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ ಎಂದರು ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಎಂಇಎಸ್ ಬ್ಯಾನ್ ಗೆ ಒತ್ತಾಯ ಮಾಡುತ್ತಾರೆ. ಹೊರಗಡೆ ಡಿ.ಕೆ. ಶಿವಕುಮಾರ್ ಎಂಇಎಸ್ ಪರ ಬ್ಯಾಟ್ ಬೀಸುತ್ತಾರೆ ಎಂದು ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಎಂಇಎಸ್ ಪುಂಡಾಟದ ಹಿಂದೆ ಯಾವ ರಾಜಕೀಯ ಶಕ್ತಿ ಅಡಗಿದೆ ಎಂಬುದು ತನಿಖೆಯಿಂದ ತಿಳಿಯಬೇಕು. ಈ ನಿಟ್ಟಿನಲ್ಲಿ ತನಿಖೆ ಮಾಡುತ್ತೇವೆ ಎಂದರು.
ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ. ಖಾನಾಪುರದ ಹಲಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ಬಳಿಕ ಬಸವಣ್ಣನವರ ಮೂರ್ತಿಗೆ ಕಪ್ಪು ಮಸಿ ಬಳಿದಿದ್ದರು. ಘಟನೆ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸಂಜು ಗುರವ್, ಸಚಿನ್ ಗುರವ್, ಗಣೇಶ ಪಡ್ನೇಕರ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153A, 295, 427, 120Bರ ಅಡಿಯಲ್ಲಿ ಕೇಸ್ ದಾಖಲಾಗಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ಉತ್ಸಾಹಿ ತರುಣರಾದ ಸೋಮಶೇಖರ್ ಮತ್ತು ರಾಮಕೃಷ್ಣ ಎಂಬ ನನ್ನ ವಿದ್ಯಾರ್ಥಿ ಮಿತ್ರರು ತಮ್ಮ ಗ್ರಾಮದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕರಿಗಾಗಿ ‘ಮಹಾನಾಯಕ ಭೀಮ ಗ್ರಂಥಾಲಯ’ ಸ್ಥಾಪಿಸಿರುತ್ತಾರೆ. ‘ಭಾರತದ ಸಂವಿಧಾನ’ ಎಂಬ ಕಿರುಚಿತ್ರ ತಯಾರಿಸಲು ಸಿದ್ಧತೆ ನಡೆಸಿರುವ ಈ ಯುವಕರು ಬುದ್ಧಧ್ಯಾನ ಮಂದಿರವನ್ನು ಸ್ಥಾಪಿಸುವ ಕನಸು ಹೊತ್ತಿದ್ದಾರೆ. ನಿನ್ನೆದಿನ ಸಾಹಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಪ್ರಸನ್ನ (ಮಂಜು ಕೋಡಿಉಗುನೆ), ನಾಟಕಕಾರ, ಸಂಸ್ಕೃತಿ ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ಬಾಲಗುರುಮೂರ್ತಿ, ಪಪೂಶಿಇ ಅಧಿಕಾರಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಶ್ರೀರಂಗಾಚಾರಿ ಆರ್, ಸಂಶೋಧಕ- ವಿಮರ್ಶಕರಾದ ಡಾ.ಕುಮಾರಸ್ವಾಮಿ ಬೆಜ್ಜಿಹಳ್ಳಿ ಹಾಗೂ ನನ್ನ ಹೆಂಡತಿ ಎಂಬ ಫ್ರೆಂಡತಿ ರಮಾಶಾಕ್ಯ ನಾವೆಲ್ಲರೂ ಕೆಂಚನಪಾಳ್ಯದ ‘ಮಹಾನಾಯಕ ಭೀಮ ಗ್ರಂಥಾಲಯ’ಕ್ಕೆ ಭೇಟಿ ನೀಡಿದ್ದೆವು. ಗ್ರಂಥಾಲಯವನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಮತ್ತು ನಿತ್ಯ ನಿರ್ವಹಣೆ ಮಾಡಲು ಅನುಕೂಲ ಒದಗಿಸಲು ಬಯಸುವ ಸಹೃದಯಿಗಳು ನನ್ನ ವಿದ್ಯಾರ್ಥಿ ಮಿತ್ರರು ರೂಪಿಸಿರುವ ಈ…
ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶೀರನಕಟ್ಟೆ ಗ್ರಾಮದಲ್ಲಿ ನಡೆದಿದೆ. ರಾಧಿಕಾ(17) ನೇಣಿಗೆ ಶರಣಾದ ಬಾಲಕಿ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆಯ ಮುದ್ದಪ್ಪ, ಸುದೀಪ್, ಕೋಟಿ, ಅಭಿ ಎಂಬವರು ರಾಧಿಕಾ ಕಾಲೇಜಿಗೆ ಹೋಗುವಾಗ, ಬರುವಾಗ ಜಡೆ ಹಿಡಿದು ಎಳೆದು ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ನೊಂದಿರುವುದಾಗಿ ಬಾಲಕಿ ಪೋಷಕರ ಬಳಿ ಹೇಳಿಕೊಂಡಿದ್ದಳು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಆರೋಪಿಗಳ ವಿರುದ್ಧ ರಾಧಿಕಾ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ: ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಪುಂಡಾಟಿಕೆಯನ್ನು ಪ್ರಶ್ನಿಸಿ ನಡೆದ ಪ್ರತಿಭಟನೆಯ ವೇಳೆ ಎಂಇಎಸ್ ವಿರುದ್ಧ ಮಾತನಾಡದ ಜನಪ್ರತಿನಿಧಿಗಳ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಕರವೇ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯ ನೂಕೂಟ ತಳ್ಳಾಟ ನಡೆದಿದೆ. ಬಳಿಕ ಕನ್ನಡ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ನಾರಾಯಣಗೌಡ, ಎಂಇಎಸ್ ವಿರುದ್ಧ ಮಾತನಾಡದವರು ರಣಹೇಡಿಗಳು, ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ತಿಪಟೂರು: ಕೋವಿಡ್ ಮಹಾಮಾರಿಯಿಂದ ಮೃತಪಟ್ಟ ಕುಟುಂಬಗಳಿಗೆ ಮತ್ತು ಮಳೆಯಿಂದಾಗಿ ಮನೆಗಳನ್ನು ಕಳೆದು ಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೂ.100000 ಪರಿಹಾರ ಹಾಗೂ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ಸಾರ್ವಜನಿಕರಿಗೆ ಪರಿಹಾರದ ಹಣವನ್ನು ಅವರವರ ಬ್ಯಾಂಕುಗಳಿಗೆ ಹಣ ವರ್ಗಾವಣೆ ಮಾಡಿ ಸಂಬಂಧಿಕರಿಗೆ ಸಾಂತ್ವನದ ಪತ್ರವನ್ನು ನೀಡಲಾಯಿತು. ಕೊವಿಡ್ ನಿಂದ ಮೃತಪಟ್ಟ ತಾಲೂಕಿನ 66 ಜನರ ಪೈಕಿ 34 ಮೃತರ ಸಂಬಂಧಿಕರಿಗೆ ಹಾಗೂ ಮನೆ ಕಳೆದು ಕೊಂಡವರಿಗೆ 104 ಜನರ ಪೈಕಿ 58 ಲಕ್ಷ ರೂಗಳ ಪರಿಹಾರ ಮೊತ್ತವನ್ನು ಅವರ ಬ್ಯಾಂಕಿಗೆ ವರ್ಗಾವಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಸರ್ಕಾರದಿಂದ ನೀಡಿದ ಪರಿಹಾರದ ಮೊತ್ತವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ನಗರಸಭೆ ಅಧ್ಯಕ್ಷ ರಾಮಮೋಹನ್ ಸದಸ್ಯ ಗಂಗಾಧರ್ ತಾಲೂಕು ತಹಸೀಲ್ದಾರ್ ಚಂದ್ರಶೇಖರ್ ಉಪ ತಹಸೀಲ್ದಾರ್ ಜಗನ್ನಾಥ್ ಇ.ಓ., ಸುದರ್ಶನ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಮುಖಂಡರು ಹಾಜರಿದ್ದರು. ವರದಿ: ಮಂಜು…
ತುಮಕೂರು: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚೆಗೆ ತಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು, ರಾಜ್ಯ ಮಾದಿಗ ದಂಡೋರ ಸಮಿತಿಯ ನಿಯೋಗವು ಬೆಳಗಾವಿಯ ಅಧಿವೇಶನದಲ್ಲಿ ಮನವಿ ಸಲ್ಲಿಸಿದ್ದು, ಈ ಸಂಬಂಧ ಮಾದಿಗ ದಂಡೋರದ ರಾಜ್ಯ ಕಾರ್ಯದರ್ಶಿ ಬೇವಿನಹಳ್ಳಿ ಚನ್ನಬಸವಯ್ಯ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಲಾಯಿತು. ಮುಖಂಡರಾದ ಚನ್ನಬಸವಯ್ಯ ಮಾತನಾಡಿ, ಮಾದಿಗ ದಂಡೋರದ ನಿಯೋಗವು ಸಚಿವರಾದ ಮಾಧುಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವರ ಸಮ್ಮುಖದಲ್ಲಿ, ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಈ ವೇಳೆ ಮುಖ್ಯಮಂತ್ರಿಯವರು, ನಮ್ಮ ನಿಯೋಗವು ನೀಡಿದ ಮನವಿಯನ್ನು ಸ್ವೀಕರಿಸಿ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚಿಸಲು, ಸಂಬಂಧಿಸಿದ ಇಲಾಖೆ ಹಾಗೂ ಸಚಿವರು ಸಿದ್ಧತೆ ಮಾಡಿಕೊಳ್ಳಲು ಕನಿಷ್ಠ ಪಕ್ಷ ಹದಿನೈದು ದಿನಗಳ ಆವಶ್ಯಕತೆ ಇರುವುದರಿಂದ, ಈ ಬೆಳಗಾವಿಯ ಅಧಿವೇಶನದಲ್ಲಿ ಚರ್ಚಿಸಲು ಸಾಧ್ಯವಿಲ್ಲ, ಆದರೆ ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು. ಸಿಎಂ ಭೇಟಿಗೆ ಜೆ.ಸಿ.ಮಾಧುಸ್ವಾಮಿ…
ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ ಮತ್ತು ಶಿವಾಜಿ ಪ್ರತಿಮೆ ಮಸಿ ಬಳಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದು ಅವರು ಹೇಳಿದರು. ಇನ್ನೂ ಕಾನೂನಿನಲ್ಲಿ ಅವಕಾಶವಿದ್ದರೆ, ಎಂಇಎಸ್ ಸಂಘಟನೆಯನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು. ಇದಕ್ಕೆ ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಘೋಷಿಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700
ಮಧುಗಿರಿ: ಮಧುಗಿರಿ ತಾಲ್ಲೂಕಿನ ನೇರಳೇಕೆರೆ ಗ್ರಾ.ಪಂ.ವ್ಯಾಪ್ತಿಯ ವೀರಾಪುರ ಮತ್ತು ಅಕ್ಕ-ಪಕ್ಕದ ಗ್ರಾಮಗಳಿಗೆ ಯಾವುದಾದರೂ ಮೂಲಕಗಳಿಂದ ನೀರನ್ನು ಒದಗಿಸಬೇಕೆಂದು ಒತ್ತಾಯಿಸಿ ನೇರಳೇಕೆರೆ ಗ್ರಾ.ಪಂ.ಅಧ್ಯಕ್ಷರಾದ ನಾಗಲಕ್ಷ್ಮೀ ನೇತೃತ್ವದಲ್ಲಿ ಗ್ರಾಮಸ್ಥರುಗಳು, ಮುಖಂಡರುಗಳು ಕಾವೇರಿ ನೀರಾವರಿ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ರವರಿಗೆ ಮನವಿ ಪತ್ರ ಅರ್ಪಿಸಿದರು. ವೀರಾಪುರ ಭಾಗದಲ್ಲಿ ಸುಮಾರು 5 ಸಾವಿರ ಮಂದಿ ವಾಸಿಸುತ್ತಿದ್ದು, ಕೃಷಿಯೇ ಮೂಲಧಾರವಾಗಿದೆ. ಜೀವನ ನಿರ್ವಹಣೆಗೆ ಯಾವುದೇ ಮೂಲ ಇರುವುದಿಲ್ಲ. ಹಾಗೂ ಅಂತರ್ಜಲ ಕುಸಿದು ಹೋಗಿದೆ. ರೈತರಿಗೆ ವ್ಯವಸಾಯಕ್ಕೆ ನೀರಿನ ತೊಂದರೆ ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಬರಗಾಲ ಪೀಡಿತ ಪ್ರದೇಶವಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದು, ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಕನಿಷ್ಠ ಕುಡಿಯುವ ನೀರು ತಮ್ಮ ದನ, ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು, ಯಾವುದಾದರೂ ಮೂಲಗಳಿಂದ ನೀರನ್ನು ಒದಗಿಸುವ ಮತ್ತು ಕೆರೆಗಳಿಗೆ ನೀರು ತುಂಬಿಸುವ ಪ್ರಯತ್ನ ಮಾಡಬೇಕೆಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಸಿದ್ದರಾಮಯ್ಯ, ಕೆಂಚಪ್ಪ, ಇಂದ್ರಕುಮಾರ್, ಸಿದ್ದಪ್ಪ, ಶಿವಣ್ಣ, ಶಿವಕುಮಾರ್ ವೀರಾಪುರ,…
ಮಧುಗಿರಿ: ಜಾನಪದ ಕಲೆಯ ತಾಯಿಬೇರುಗಳಾದ ಯಕ್ಷಗಾನ, ಮೂಡಲಪಾಯ, ಬಯಲಾಟ ಕಲೆಗಳನ್ನು ಸಂರಕ್ಷಿಸಿದರೆ ಜಾನಪದದ ಅಸ್ವಿತ್ವಕ್ಕೆ ಧಕ್ಕೆ ಬಾರದು ಎಂದು ಆದಾಯ ತೆರಿಗೆ ಆಯುಕ್ತರಾದ ಜಯರಾಮ್ ರಾಯಪುರ ಪ್ರತಿಪಾದಿಸಿದರು. ಬಯಲುಸೀಮೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಪುರಾತನ ಕಾಲದಿಂದಲೂ ನೆಲೆಗೊಂಡಿರುವ ಮೂಡಲಪಾಯ ಬಯಲಾಟ ಕಲೆ ಉಳಿವಿಗಾಗಿ ಭಾಗವತರನ್ನು ಒಂದುಗೂಡಿಸಲು ಜಾನಪದ ಒಡನಾಡಿಗಳೊಂದಿಗೆ ಕ್ಷೇತ್ರ ಪರ್ಯಟನೆ ಕೈಗೊಂಡಿರುವ ಅವರು ತಾಲ್ಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ನಂತರ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಲಿಗಳನ್ನು ಸಂರಕ್ಷಿಸುವ ಟೈಗರ್ ಪ್ರಾಜೆಕ್ಟ್ ಯೋಜನೆಯಿದೆ. ಹುಲಿಗಳ ಉಳಿಸಬೇಕು ಎಂದರೆ ಮೊದಲು ಬೇಟೆ ಪ್ರಾಣಿಗಳನ್ನು ಉಳಿಸಿ ಜೀವಿ ಸಮತೋಲನ ಕಾಯ್ದು ಕೊಳ್ಳಬೇಕು. ಆಗೆಯೇ ಜಾನಪದ ಕಲೆ ಉಳಿಸಬೇಕೆಂದರೆ ಯಕ್ಷಗಾನ, ಬಯಲಾಟ ಸೇರಿದಂತೆ ಜಾನಪದರ ಬಾಯಲ್ಲಿರುವ ಕಲೆಗಳನ್ನು ಉಳಿಸುವುದು ಅನಿವಾರ್ಯ ಎಂದರು. ನಾನು ಅಧಿಕಾರಿಯಾಗಿ ಅಕ್ಷರ ತಿಳಿದವನಾಗಿ ನಮ್ಮ ಕಣ್ಣಮುಂದೆಯೇ ನಶಿಸುತ್ತಿರುವ ಕಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಕೈಜೋಡಿಸದಿದ್ದರೆ ಆತ್ಮ ವಂಚನೆ ಮಾಡಿಕೊಂಡಂತಾಗುತ್ತದೆ ಎಂಬ ಕಾರಣಕ್ಕೆ ಜಾನಪದ ವಿದ್ವಾಂಸರೊಂದಿಗೆ ಸೇರಿ ಭಾಗವತರನ್ನು ಒಂದುಗೂಡಿಸುವ ಕಾರ್ಯದಲ್ಲಿ…