Subscribe to Updates
Get the latest creative news from FooBar about art, design and business.
- ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
Author: admin
ತುರುವೇಕೆರೆ: ಕಳೆದೆರಡು ದಿನಗಳಿಂದ ಮಾಯಸಂದ್ರ ಗ್ರಾಮದಲ್ಲಿ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಸರಣಿ ಕಳ್ಳತನಗಳು ಹೆಚ್ಚಾಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಶನಿವಾರ ರಾತ್ರಿ ಮಾಯಸಂದ್ರ ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ಆವರಣದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಮತ್ತು ಈಶ್ವರ ದೇವಸ್ಥಾನಕ್ಕೆ ಬಾಗಿಲು ಮುರಿದು ದೇವಾಲಯಕ್ಕೆ ಒಳನುಗ್ಗಿದ ಕಳ್ಳರು, ದೇವಾಲಯದ ಹುಂಡಿ ಸೇರಿದಂತೆ ಮುಂತಾದ ವಸ್ತುಗಳನ್ನು ಕಳವು ಮಾಡಿದ್ದಾರೆ. ಗ್ರಾಮದ ನಾಗರಾಜ ನಾಯಕ ಮಾಲಿಕತ್ವದ ವೀರಭದ್ರ ಮೆಡಿಕಲ್ ಸ್ಟೋರ್ ನ ಕಬ್ಬಿಣದ ಬಾಗಿಲು ಮುರಿದು ಹಣವನ್ನು ಕಳವು ಮಾಡಲಾಗಿದೆ. ಗ್ರಾಮದ ಕೆಲವು ಅಂಗಡಿ, ಟೀ ಅಂಗಡಿ ಸೇರಿದಂತೆ ಚಿಲ್ಲರೆ ಅಂಗಡಿಗಳಿಗೆ ನುಗ್ಗಿ ಹಣ ಮತ್ತು ಹಲವು ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ಪಟ್ಟಣದ ಪೊಲೀಸ್ ಠಾಣೆಗೆ ಕೆಲವರು ದೂರು ನೀಡಿದ್ದಾರೆ. ಇಂದು ಸೋಮವಾರ ಬೆಳಗಿನ ಜಾವ ಮಾಯಸಂದ್ರ ಹೋಬಳಿಯ ಮಾವಿನಕೆರೆ ಗ್ರಾಮದ ಕೆಂಪಮ್ಮ ದೇವಿಯ ದೇವಾಲಯ ಹಾಗೂ ಚಿಲ್ಲರೆ ಅಂಗಡಿಗೆ ನುಗ್ಗಿ ಹಣವನ್ನು ದೋಚಿದ್ದಾರೆ. ಒಟ್ಟಾರೆ ತಾಲೂಕಿನಾದ್ಯಂತ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ…
ತುಮಕೂರು: ಶನಿವಾರ ಪಾವಗಡದಲ್ಲಿ ಸಂಭವಿಸಿದ ಬಸ್ ದುರಂತ ಬಹಳ ದುರದೃಷ್ಟಕರ ಇಂತಹ ಘಟನೆ ನಡೆಯಬಾರದಿತ್ತು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಬೇಸರ ವ್ಯಕ್ತಪಡಿಸಿದ್ದಾರೆ. ಸೋಮವಾರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಆರೋಗ್ಯ ಸಚಿವರು, ಪಾವಗಡ ಬಸ್ ದುರಂತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಬೇಸರದ ಸಂಗತಿ ಎಂದರು. ಇನ್ನು ಅಪಘಾತಕ್ಕೀಡಾಗಿರುವ ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ದಿರುವುದು ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಮಾಹಿತಿ ಲಭ್ಯವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 18 ಜನ ರೋಗಿಗಳು ದಾಖಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕೆಲವರಿಗೆ ಮೂಳೆಮುರಿತಗಳು ಕಂಡುಬಂದಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಆರೋಗ್ಯ ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ. ಆ ಭಾಗದಲ್ಲಿ ಬಸ್ ನ ಸಮಸ್ಯೆ ಕೂಡ ಇತ್ತು ಎಂದು…
ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು. ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು. ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು. ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು. ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು. ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ…
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿಯ ಕೋಟೆ ನಾಯಕನಹಳ್ಳಿಯಲ್ಲಿ ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ರಾಜರತ್ನ ಪುನೀತ್ ರಾಜ್ ಕುಮಾರ್ ಮತ್ತು ಸಂಘಟನೆಯ ಸಂಸ್ಥಾಪಕ ಯುವ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಹುಟ್ಟುಹಬ್ಬದ ಅಂಗವಾಗಿ ವಿಭಾಗೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಕುಮಾರ್ ಆಸ್ಪತ್ರೆಯ ವೈದ್ಯ ಡಾ.ಜಿ.ಎಸ್.ಶ್ರೀಧರ್, ಸಮಾಜ ಸೇವಕ ಬಿ.ಆರ್.ಶಶಿಧರ್ ಮತ್ತು ನಿವೃತ್ತ ಶಿಕ್ಷಕ ಎಂ.ಆರ್.ಸೋಮಶೇಖರ್ ಬ್ಯಾಟ್ ಬೀಸುವುದರ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಕಾಂಗ್ರೆಸ್ ಯುವ ಮುಖಂಡ ನಿಖಿಲ್ ರಾಜು,ಸಂಘಟನೆ ಯುವ ಘಟಕದ ಜಿಲ್ಲಾಧ್ಯಕ್ಷ ಶ್ರೀಧರ್ ,ಉಪಾಧ್ಯಕ್ಷ ಬಿ.ಬಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ತಾಲ್ಲೂಕು ಕಾರ್ಯದರ್ಶಿ ರವಿ ಹಿಂಡಿಸ್ಕೆರೆ, ನಗರ ಕಾರ್ಯದರ್ಶಿ ಲೋಕೇಶ್, ಕಾರ್ಮಿಕ ಘಟಕದ ಉಪಾಧ್ಯಕ್ಷ ಉಮಾಶಂಕರ್, ಕಾರ್ಯದರ್ಶಿ ಭರತ್, ಗ್ರಾಮ ಪಂಚಾಯತ್ ಸದಸ್ಯರಾದ ಜಗನ್ನಾಥ,ಕಲ್ಯಾಣಮ್ಮ, ಬನಶಂಕ್ರಮ್ಮ,ಓಂಕಾರ ಸ್ವಾಮಿ ಮತ್ತು ನರಸಿಂಹಯ್ಯ ಮುಖಂಡರಾದ ಗಂಗಾಧರ್,ಡಾ.ಬಸವಪ್ರಸಾದ್, ಪ್ರಶಾಂತ್ ಸಂಘಟನೆ ಜಿಲ್ಲಾ ಪದಾಧಿಕಾರಿಗಳಾದ ಇಮ್ರಾನ್, ಯೂನಸ್ ಮತ್ತು ಯುವ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ರವರ ನೇತೃತ್ವದಲ್ಲಿ ಧರ್ಮಪುರ ಹೋಬಳಿಯ ಪಿ.ಡಿ.ಕೋಟೆ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಪಂಚಲಿಂಗೇಶ್ವರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುಟ್ಟಸ್ವಾಮಿಗೌಡ, ಡಿ ಸುಧಾಕರ್ ರವರ ನೇತೃತ್ವದಲ್ಲಿ ನನ್ನನ್ನು ಆಯ್ಕೆ ಮಾಡಲಾಗಿದೆ. 2023ರಲ್ಲಿ ಸುಧಾಕರ್ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಸ್ಪಷ್ಟವಾಗುತ್ತಿದೆ. ಪಕ್ಷ ಹಾಗೂ ಜನರೊಂದಿಗೆ ಕೆಲಸ ಮಾಡುವುದಾಗಿ ಅವರು ಇದೇ ವೇಳೆ ತಿಳಿಸಿದರು. ಈ ಸಂದರ್ಭದಲ್ಲಿ ಪಿ.ಡಿ.ಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪುಟ್ಟಸ್ವಾಮಿಗೌಡ, ಅಭಿಮತ ಪತ್ರಿಕೆಯ ಸಂಪಾದಕರಾದ ಜಿ.ಎಲ್.ಮೂರ್ತಿ, ಗಾಂಧಿನಗರ ಮಹಂತೇಶ್, ಸಿದ್ಧಾರ್ಥ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ ಈ ಹಿನ್ನೆಲೆಯಲ್ಲಿ ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ಇಂದಿನಿಂದ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾವಿರಾರು ಜನರು ಭೂಮಿ ಮತ್ತು ವಸತಿಗಾಗಿ ಅರ್ಜಿಗಳನ್ನು ಹಾಕಿಕೊಂಡು ಇಂದು, ನಾಳೆ ಭೂಮಿ ವಸತಿಗೆ ಸಾಗುವಳಿ ಹಕ್ಕುಪತ್ರ ಸಿಗಬಹುದು ಎಂಬ ಆಶಾಭಾವನೆಯಿಂದ ಕಾಯುತ್ತಿದ್ದಾರೆ. ಭೂಮಿಗಾಗಿ ಅನೇಕ ಬಾರಿ ಕಛೇರಿಯಿಂದ ಕಛೇರಿಗಳಿಗೆ ಅಲೆದರೂ ಕೂಡ ಇದುವರೆಗೂ ಅರ್ಹರಿಗೆ ಭೂಮಿ ವಸತಿ ದೊರೆತಿಲ್ಲ. ರಾಜ್ಯ ಸೇರಿದಂತೆ ತುಮಕೂರು ಜಿಲ್ಲೆಯ ಈ ಭೂಮಿ ವಸತಿ ಸಮಸ್ಯೆಗಳನ್ನು ಬಗೆಹರಿಸಲು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿವಂಗತ ಹೆಚ್.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯಿಂದ 2018 ನೇ ಸಾಲಿನಿಂದ ಅನೇಕ ಬಾರಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ತಾಲ್ಲೂಕು ಕಛೇರಿಗಳ ಮುಂದೆ ಪ್ರತಿಭಟನೆಗಳು ನಡೆಸಿದ್ದರೂ ಕೂಡ ಇದುವರೆಗೂ ಸಮಸ್ಯೆಗಳು ಬಗೆಹರಿದಿಲ್ಲ. ಹೀಗಾಗಿ ಭೂಮಿ ಮತ್ತು ವಸತಿ ಸಮಿತಿಯು ಈಗಾಗಲೇ ಜಿಲ್ಲಾಡಳಿತದ ಗಮನಕ್ಕೆ ತಂದಿರುವ…
ತುಮಕೂರು: ಪಾವಗಡ ತಾಲೂಕು ಪಳವಳ್ಳಿ ಕಟ್ಟೆ ಕೆರೆಯ ಬಳಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಲು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಅವರು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ. ವೀರಭದ್ರಯ್ಯ ಅವರಿಗೆ ಸೂಚನೆ ನೀಡಿದರು. ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 19 ಮಂದಿಯ ಆರೋಗ್ಯ ವಿಚಾರಿಸಿ ಸಮಾಧಾನ ಹೇಳಿದ ನಂತರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸಂಭವಿಸಿದ ಬಸ್ ಅಪಘಾತದಲ್ಲಿ ಈವರೆಗೆ ಮರಣ ಹೊಂದಿದ 6 ಮಂದಿ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ ಎಂದು ಹೇಳಿದರು. ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನೂ ಸಹ ಸರ್ಕಾರದಿಂದಲೇ ಭರಿಸಲಾಗುವುದು. ಆಸ್ಪತ್ರೆಗೆ ದಾಖಲಾದ ಗಾಯಾಳುಗಳಿಗೆ ಔಷಧಿಗಾಗಿ ಹೊರಗಡೆ ಚೀಟಿ ಬರೆದುಕೊಡದೆ ಜಿಲ್ಲಾಸ್ಪತ್ರೆಯಲ್ಲಿಯೇ ಒದಗಿಸಬೇಕು ಹಾಗೂ ಜಿಲ್ಲಾಸ್ಪತ್ರೆ ವತಿಯಿಂದಲೇ…
ಪಾವಗಡ: ತಾಲ್ಲೂಕು ಪಳ್ಳವಳ್ಳಿ ಕಟ್ಟೆ ಮೇಲೆ ನಡೆದ ಅಪಘಾತದ ಹಿನ್ನೆಲೆಯಲ್ಲಿ ರಾಜ್ಯ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ವಿ.ಎಸ್.ಉಗ್ರಪ್ಪ, ಕೆಪಿಸಿಸಿ ಓಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಮೈಲಾರ ರೆಡ್ಡಿ ಮತ್ತಿತರ ಮುಖಂಡರು ಜೊತೆಗಿದ್ದರು. ವರದಿ: ದೇವರಹಟ್ಟಿ ನಾಗರಾಜ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಪಾವಗಡ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ಬಸ್ ದುರಂತದಲ್ಲಿ ಗಾಯಗೊಂಡ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಪಾವಗಡ ಸಮೀಪ ಬಸ್ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು, ಗಾಯಗೊಂಡಿರುವ ರೋಗಿಗಳಿಗೆ ಪರಿಹಾರ ಕೊಡಬೇಕು ಹಾಗೂ ಈ ಭಾಗದಲ್ಲಿ ಹೆಚ್ಚಿನ ಸರ್ಕಾರಿ ಬಸ್ಸುಗಳನ್ನು ಕಲ್ಪಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್ಸಿ ಅಂಜನಪ್ಪ, ಬೆಳ್ಳಿ ಲೋಕೇಶ್, ಪಾವಗಡದ ತಿಮ್ಮರಾಯಪ್ಪ, ಗುಬ್ಬಿ ನಾಗರಾಜು ಸೇರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರ ಕ್ಕೆ ಬಿ.ಎಸ್.ನಾಗರಾಜ್ ಅಭ್ಯರ್ಥಿ ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ ಅದರಂತೆ ಸ್ಥಳೀಯ ಮುಖಂಡರ ಜೊತೆ ಗೂಡಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಜಿಲ್ಲೆ ಗುಬ್ಬಿ ತಾಲ್ಲೂಕಿನ ಕಳ್ಳಿಪಾಳ್ಯ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ 2023 ಯಾವುದೇ ಪಕ್ಷದ ಅಂಗಿಲ್ಲದೆ ಸ್ವಾತಂತ್ರ್ಯವಾಗಿ ಪಕ್ಷ ಅಧಿಕಾರಕ್ಕೆ ತರಲು ರಾಜ್ಯದ ಎಲ್ಲಾ ಭಾಗದಲ್ಲಿ ಸಂಘಟನೆ ಮಾಡಲು ಬದ್ದರಾಗಿದ್ದೇವೆ ಎಂದರು. ನೀರಾವರಿ ಯೋಜನೆ ಅನುಷ್ಠಾನ ದ ಸಲುವಾಗಿ 180 ಕ್ಷೇತ್ರ ಗಳಲ್ಲಿ ಪಂಚರತ್ನ ಮತ್ತು ಜನತಾ ಜನಧಾರೆ ಯೋಜನೆಗಳನ್ನು ಜನತೆಗೆ ಪರಿಚಯಿಸುವ ಮೂಲಕ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲಾಗುವುದು ಎಂದರು. ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಫಘಾತ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಕುಟುಂಬಕ್ಕೆ ಧೈರ್ಯ ತುಂಬಲು ತೆರಳಿದ್ದೇನೆ ಎಂದರು. ಇದೇ ವೇಳೆಯಲ್ಲಿ ಜೆಡಿಎಸ್ ಪಕ್ಷದ…