Subscribe to Updates
Get the latest creative news from FooBar about art, design and business.
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
- ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
Author: admin
ಗುಬ್ಬಿ: ದಲಿತ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮಾರ್ಚ್ 18 ಮತ್ತು 19ರಂದು ದಾವಣಗೆರೆ ಚಲೋ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಗುಬ್ಬಿ ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಸಂಚಾಲಕ ಜೆ.ಸಿ.ನರಸಿಂಹ ಮೂರ್ತಿ ತಿಳಿಸಿದರು. ಗುಬ್ಬಿ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಡಕಾಗಿರುವ ದಲಿತ ಸಮುದಾಯದ ಮುಖಂಡರು ಹಾಗೂ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಎರಡು ದಿವಸಗಳಕಾಲ ರಾಜ್ಯ ಸಂಚಾಲಕರಾದ ಗುರುಮೂರ್ತಿ ಹಾಗೂ ರಾಜ್ಯ ಮಟ್ಟದ ನಾಯಕರು ಮತ್ತು ಮಠಾಧೀಶರು ಮತ್ತು ರಾಜಕೀಯ ಜನಪ್ರತಿನಿಧಿಗಳ ಸಮಕ್ಷಮದಲ್ಲಿ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರು ಹಾಗೂ ದಲಿತ ಸಮುದಾಯದವರು ಭಾಗವಹಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಕಾನೂನು ಸಲಹೆಗಾರರಾದ ನಿಟ್ಟೂರು ನಾಗಭೂಷಣ್, ದೊಡ್ಡ ಗುಣಿ ಕೀರ್ತಿ, ನಿಟ್ಟೂರು ನಾಗರಾಜ್, ಬಿಕ್ಕೆಗುಡ್ದ ಕೃಷ್ಣಪ್ಪ, ನರೇಂದ್ರ ಕುಮಾರ್, ದಲಿತ್ ಗಂಗಣ್ಣ, ಜಿ.ಹೆಚ್.ಹರೀಶ್, ಶಿವು ಶೆಟ್ಟಿಹಳ್ಳಿ, ಹಾಗೂ ಇನ್ನಿತರರು ಹಾಜರಿದ್ದರು. ವರದಿ: ಮಂಜುನಾಥ್,…
ಬೆಂಗಳೂರು: ಹೈಕೋರ್ಟ್ ನ ತ್ರಿಸದಸ್ಯ ಪೀಠದಿಂದ ಇಂದು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಶಾಂತಿ ಕಾಪಾಡಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ಪ್ರಕಟವಾಗಿರುವ ತೀರ್ಪು ಮಕ್ಕಳ ಭವಿಷ್ಯದ ಪ್ರಶ್ನೆಯಾಗಿದ್ದು ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪಿನಲ್ಲಿ ಸಮವಸ್ತ್ರ ಎತ್ತಿ ಹಿಡಿದಿದ್ದು ಹಿಜಬ್ ಸಮುದಾಯದ ಅತ್ಯಗತ್ಯ ಭಾಗವಲ್ಲ ಎಂದು ತಿಳಿಸಿದೆ. ಮಕ್ಕಳಿಗೆ ವಿದ್ಯೆಗಿಂತ ಬೇರೆ ಯಾವುದೂ ಮುಖ್ಯವಲ್ಲ ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ತೀರ್ಪು ನೀಡಿದ್ದು ತೀರ್ಪಿನ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದಿದ್ದಾರೆ. ಶಾಂತಿ ಕಾಪಾಡಬೇಕು , ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದಂತೆ ಎಲ್ಲರೂ ಸಹಕರಿಸಬೇಕು. ತೀರ್ಪನ್ನು ಎಲ್ಲ ಪಾಲಕರು, ಶಿಕ್ಷಕರು ಮಕ್ಕಳು ಕೂಡ ಪಾಲಿಸುವಂತಾಗಬೇಕು ಎಂದು ಮನವಿ ಮಾಡಿದ್ದಾರೆ. ತೀರ್ಪಿನ ನಂತರ ಪ್ರತಿಯೊಬ್ಬರು ಒಪ್ಪಿ ಸಾರ್ವಜನಿಕರು ರಾಜ್ಯದಲ್ಲಿ ಶಾಂತಿ ಕಾಪಾಡಿ ಎಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. ವರದಿ: ಮಾರುತಿ ಪ್ರಸಾದ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಮಾರ್ಚ್ 17ರಂದು ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನ. ಹಾಗಾಗಿ ಅದೇ ದಿನ ಜೇಮ್ಸ್ ಚಿತ್ರ ಬಿಡುಗಡೆ ಮಾಡಲು ಈಗಾಗಲೇ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜಕುಮಾರನಿಗಾಗಿ ಥಿಯೇಟರ್‌ಗಳು ಕೂಡ ಸಿಂಗಾರಗೊಳ್ಳುತ್ತಿವೆ. ರಾಜ್ಯವಷ್ಟೇ ಅಲ್ಲದೆ, ಹೊರ ರಾಜ್ಯ, ವಿದೇಶದಲ್ಲೂ ಜೇಮ್ಸ್ ಬರುವಿಕೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. 46 ವರ್ಷಗಳ ಕಾಲ ಆ ಬೆಟ್ಟದ ಹೂವು ಭೂಮಿ ಮೇಲೆ ನೆಲೆ ನಿಂತು ಎಲ್ಲರನ್ನೂ ನಕ್ಕು ನಗಿಸಿ ಕೈಗೆಟುಕದ ನಕ್ಷತ್ರದಂತೆ ನಮ್ಮಿಂದ ದೂರವಾಗಿದೆ. ಮಾರ್ಚ್ 17 ರಂದು ನಮಗೆ ದರ್ಶನ ನೀಡಲು ಅವ್ರು ಬರುತ್ತಿದ್ದಾರೆ. ಅವರಿಗಾಗಿ ಭಾನುವಾರ ಒಂದು ವಿಶೇಷ ಕಾರ್ಯಕ್ರಮ ನಡೆದಿದೆ. ಯಾರವರು ಅನ್ನೋದು ನಿಮಗೆ ಈಗಾಗಲೇ ಗೊತ್ತಾಗಿದೆ. ಅವರನ್ನು ನೆನೆದ ದೊಡ್ಮನೆ ಕುಟುಂಬದವರು ಭಾವುಕರಾಗಿದ್ರು. ಅಷ್ಟೇ ಅಲ್ಲ, ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಕಣ್ಣೀರು ಸುರಿಸಿದ್ದಾರೆ. ಹೌದು, ಜೇಮ್ಸ್ ಸಿನಿಮಾ(James Movie) ಇದೀಗ ಕರುನಾಡಿನ ಜನರ ಆಸ್ತಿಯಾಗಿದೆ. ಆ ಸಿನಿಮಾ ರಿಲೀಸ್ ಕ್ಷಣಕ್ಕಾಗಿ ಇಡೀ ದೇಶವಷ್ಟೇ ಅಲ್ಲ ಹೊರ ದೇಶಗಳ ಜನರೂ ಕಾದು ಕುಳಿತ್ತಿದ್ದಾರೆ.…
ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಪಿ.ಹೆಚ್.ಹಳ್ಳಿ ಗ್ರಾಮದ ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಹುಲಿಕಟ್ಟೆ ನೇತೃತ್ವದಲ್ಲಿ ನೂರಾರು ಮಂದಿ ರೈತರು ಆಗೂ ರೈತ ಮಹಿಳೆಯರು ಬೀಸೆಗೌಡನದೊಡ್ಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸ್ಥಳಕ್ಕೆ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಇದೇ ವೇಳೆ ಸ್ಥಳಕ್ಕೆ ಬಂದ ತಹಶೀಲ್ದಾರ ಮಹಾಭಲೇಶ್ವರ್,ಅರಣ್ಯ ಇಲಾಖೆಯ ಅಧಿಕಾರಿ ಮಹೇಶ್ ಆಗೂ ಪಿಡಬ್ಲೂಡಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಸಿದ್ದಪ್ಪ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ,ಪರಿಸರ ಇಲಾಖೆಯ ಅಧಿಕಾರಿಗಳನ್ನು ರೈತಮುಖಂಡರು ಸ್ಥಳದಲ್ಲಿ ತರಾಟೆಗೆ ತೆಗೆದುಕೊಂಡರು. ಕಳೆದ ಹದಿನೈದು ದಿನಗಳಿಂದ ರೈತ ಮಹಿಳೆಯರು ಅಹೊರಾತ್ರಿ ಧರಣಿ ನಡೆಸುತ್ತಿದ್ದರು. ತಾಲ್ಲೂಕಿನ ಒಬ್ಬ ಅಧಿಕಾರಿಗಳು ಇತ್ತ ಸುಳಿದಿಲ್ಲ ಹೋರಾಟಕ್ಕೆ ಮುಂದಾಗುವ ರೈತರ ಮೇಲೆ ರೇಪ್ ಕೇಸ್ ದಾಖಲಿಸಿದ್ದಾರೆ. ದೊಡ್ಡಮಟ್ಟದಲ್ಲಿ ಗಣಿಗಾರಿಕೆ ನಡೆಸಿ ಪ್ರಕೃತಿ ಸಂಪತ್ತು ನಾಶಕ್ಕೆ ಆಗೂ ಸಾರ್ವಜನಿಕರ ಸಮಸ್ಯೆಗೆ ಕಾರಣವಾಗಿರುವ ಗಣಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕಾರಣವಾದರು ಏನು ?…
ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ . 18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವರಿ 25ರಂದು ವಿಚಾರಣೆ ಅಂತ್ಯಗೊಳಿಸಿತ್ತು. ಅರ್ಜಿದಾರರ ಪರ ದೇವದತ್ ಕಾಮತ್, ಮಹಮ್ಮದ್ ತಾಹೀರ್, ರವಿವರ್ಮ ಕುಮಾರ್, ಎ.ಎಂ.ಧರ್, ವಿನೋದ್ ಕುಲಕರ್ಣಿ ಸೇರಿ 8ಕ್ಕೂ ಹೆಚ್ಚು ವಕೀಲರು ವಾದ ಮಂಡಿಸಿದ್ದರು. ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ, ಶಾಲಾ ಆಡಳಿತ ಮಂಡಳಿ ಪರ ಸಜ್ಜನ್ ಪೂವಯ್ಯ ಸೇರಿ 5 ವಕೀಲರು ವಾದ ಮಂಡಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಶಿರಾ: ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮಾರ್ಚ್ 18ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ನಗರದಲ್ಲಿ ರಾಜ್ಯಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲಾಗುವುದು ಎಂದುಪತ್ರಿಕಾಗೋಷ್ಠಿಯಲ್ಲಿ ಮುಖಂಡರು ತಿಳಿಸಿದರು. ಮೌಢ್ಯಾಚರಣೆಗಳಿಂದ ಜನರನ್ನು ರಕ್ಷಿಸಲು, ಶೋಷಣೆ ತಪ್ಪಿಸಲು, ಜಾಗೃತಿ ಮೂಡಿಸಲು ಮಾನವ ಬಂಧುತ್ವ ವೇದಿಕೆ ಸ್ಥಾಪಿಸಲಾಗಿದೆ. ಇದು ಒಂದು, ಜಾತಿ, ಧರ್ಮಕ್ಕೆ ಸೀಮಿತವಲ್ಲ. ವೈಚಾರಿಕ ಮನೋಭಾವದ ಎಲ್ಲರಿಗೂ ಅವಕಾಶವಿದೆ. ಬುದ್ಧ, ಬಸವ, ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಿದೆ’ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಚಾಲಕರಾದ ಧರಣಿ ಕುಮಾರ್, ತಾಲೂಕು ಸಂಚಾಲಕರಾದ ರಂಗರಾಜ್ , ಮಹಿಳಾ ಕಾರ್ಯಕರ್ತರು ಗಳಾದ ಶಿವಮ್ಮ , ರೇಖಾ ರಾಘವೇಂದ್ರ, ರೇಣುಕಮ್ಮ ಶಿವಕುಮಾರ್ , ವಿಜಯಲಕ್ಷ್ಮಿ ಪೂಜಾ ಪೆದ್ದರಾಜು, ಮಂಜುಳಾ ಶೇಷ ನಾಯಕ್ ವಿವರಿಸಿದರು ವರದಿ: ಎ.ಎನ್. ಪೀರ್ , ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಉಂಡ ಮನೆಗೆ ಕನ್ನ ಹಾಕಿದ ನೇಪಾಳಿ ದಂಪತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಬೆಂಗಳೂರು ನಗರದ ಕೊತ್ತನೂರು ದಿಣ್ಣೆ ಬಳಿಯ ಕ್ಲಾಸಿಕ್ ಆರ್ಚಿಟ್ ಲೇಔಟ್ ನಲ್ಲಿ ನಡೆದಿದೆ. ನಗರದ ಕೊತ್ತನೂರು ದಿಣ್ಣೆ ಬಳಿಯ ಕ್ಲಾಸಿಕ್ ಆರ್ಚಿಟ್ ಲೇಔಟ್ ನಲ್ಲಿ ಮನೆ ಕೆಲಸಕ್ಕಿದ್ದ ನೇಪಾಳ ಮೂಲದ ದಂಪತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ (Theft) ಪರಾರಿಯಾಗಿರುವ ಘಟನೆ ನಡೆದಿದೆ. ಕಾಂಗ್ರೆಸ್ (Congress) ಮುಖಂಡ ಚಂದ್ರಶೇಖರ್ ಅಲಿಯಾಸ್ ಬಾರ್ ಚಂದ್ರಪ್ಪ ಮನೆಯಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 10 ರಂದು ಚಂದ್ರಶೇಖರ್ ಕುಟುಂಬಸ್ಥರು ಧರ್ಮಸ್ಥಳಕ್ಕೆ ಮಂಜುನಾಥಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನೇಪಾಳ (Nepal) ಮೂಲದ ದಂಪತಿ ಹೊಂಚು ಹಾಕಿ ಕೂತಿದ್ರು. ತಮ್ಮವರನ್ನು ಕರೆಸಿಕೊಂಡ ಈ ಖತರ್ನಾಕ್ ದಂಪತಿ ಮನೆಯಲ್ಲಿದ್ದ 50 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಎಸ್ಕೇಪ್ ಆಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ…
ಹಿರಿಯೂರು: ತಾಲ್ಲೂಕಿನ ಐಮಂಗಲ ಹೋಬಳಿಯ ಬಾಲೇನಹಳ್ಳಿ ಗ್ರಾಮದಲ್ಲಿ’ ಪ್ರೇಮ ಪಕ್ಷಿಗಳಿಗೆ ಸಂಚಿನ ಸಿಡಿಲು’ ಎಂಬ ನಾಟಕ ಪ್ರದರ್ಶನ ನಡೆಯಿತು. ವಿಧವೆಗೆ ಮದುವೆ ಭಾಗ್ಯ ಕಥೆ ಹೊಂದಿರುವ ನಾಟಕವನ್ನು ಕಲಾ ಪ್ರೇಮಿಗಳು ವೀಕ್ಷಿಸಿ ಆನಂದಿಸಿದರು. ನಾಟಕ ನೋಡಲು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸುವ ಮೂಲಕ ರಂಗ ಭೂಮಿ ಕಲಾವಿದರನ್ನು ಪ್ರೋತ್ಸಾಹಿಸಿದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತಿಪಟೂರು: ಅಪಘಾತದಲ್ಲಿ ಮೃತಪಟ್ಟ ಪುನೀತ್ ರಾಜ್ ಕುಮಾರ್ ಅಭಿಮಾನಿಯೊಬ್ಬರು ನೇತ್ರದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವು ದೃಷ್ಟಿ ಹೀನರಿಗೆ ದೃಷ್ಠಿ ನೀಡಿದ್ದಾರೆ. ತಾಲ್ಲೂಕಿನ ಕಸಬಾ ಹೋಬಳಿಯ ಹಿಂಡಿಸ್ಕೆರೆಯ 23 ವರ್ಷ ವಯಸ್ಸಿನ ಯುವಕ ಯಶ್ವಂತ್ ಅವರು, ಹಿಂಡಿಸ್ಕೆರೆ ಗೇಟ್ ಬಳಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಅವರ ಕಣ್ಣುಗಳನ್ನು ದಾನ ಮಾಡಲಾಗಿದೆ. ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ದಾನ ಮಾಡಲಾಗಿದೆ. ಯಶ್ವಂತ್ ಅವರು ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯಾಗಿದ್ದರು. ತಮ್ಮ ಜೀವನದ ಕಾಲದಲ್ಲಿಯೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ವರದಿ: ಆನಂದ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಎಲ್ಲೆಡೆ ಇದೀಗ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾದ ಸದ್ದು ತುಂಬಾ ಜೋರಾಗಿದೆ.ಪ್ರಧಾನಿ ಮೋದಿ ಕೂಡ ಇದೀಗ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದರಿಂದ ಚಿತ್ರತಂಡಕ್ಕೆ ಒಂದು ಹೊಸ ಹುಮ್ಮಸ್ಸು ಸಿಕ್ಕಂತಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’ ಸತ್ಯ ಘಟನೆ ಆಧರಿಸಿದ ಸಿನಿಮಾ ಆಗಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ದೇಶಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮಾರ್ಚ್ 11ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಚಿತ್ರತಂಡ ಹೆಚ್ಚಿನ ಪ್ರಚಾರ ನೀಡಿರಲಿಲ್ಲ. ಆದ್ರೀಗ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. 1990 ರ ಕಾಶ್ಮೀರದ ಘಟನೆಗಳು, ಕಾಶ್ಮೀರಿ ಪಂಡಿತರ ನರಮೇಧದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.ಕಾಶ್ಮೀರ ದಂಗೆಯ ಸಮಯದಲ್ಲಿ ಕಾಶ್ಮೀರಿ ಹಿಂದೂಗಳ ವಲಸೆ ಕುರಿತ ವಿಷಯ ಇಟ್ಟುಕೊಂಡು, ಅದನ್ನು ಒಂದು ಸಿನಿಮಾವಾಗಿ ಸಮರ್ಥವಾಗಿ ಕಟ್ಟಿಕೊಟ್ಟಿರುವ ಚಿತ್ರತಂಡಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ಮಾಪಕ ಅಭಿಷೇಕ್ ಜೊತೆಗೆ ಚಿತ್ರದ ನಟಿ ಪಲ್ಲವಿ ಜೋಷಿ ಅವರು ಪ್ರಧಾನಿ…