Author: admin

ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ. ‘ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಅವರು ನಮ್ಮನ್ನು ಮುನ್ನಡೆಸುತ್ತಾರೆ ಮತ್ತು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಅವರ ನಾಯಕತ್ವದ ಮೇಲೆ ನಮಗೆಲ್ಲರಿಗೂ ನಂಬಿಕೆಯಿದೆ” ಎಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಂತರ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಎನ್‌ಐಗೆ ತಿಳಿಸಿದರು.ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯನ್ನು ನಡೆಸಿ 5 ರಾಜ್ಯಗಳಲ್ಲಿನ ಕಾಂಗ್ರೆಸ್ ಪಕ್ಷದ ಚುನಾವಣಾ ಸೋಲು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ‘ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.5 ರಾಜ್ಯಗಳ ಚುನಾವಣೆಯ ಬಗ್ಗೆ ವಿವರವಾದ ಚರ್ಚೆ ನಡೆಯಿತು.ನಾವು ವಿಷಯಗಳನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಮತ್ತು ಮುಂಬರುವ ಚುನಾವಣೆಗೆ ನಾವು ಹೇಗೆ…

Read More

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಪಂಜಾಬ್ ರಾಜ್ಯವನ್ನು ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಗೆ ಹೆಚ್ಚಿನ ಉತ್ಸಾಹ ನೀಡಿದೆ. ಇಷ್ಟು ಕಷ್ಟಪಟ್ಟು ದೊಡ್ಡ ಗೆಲುವು ಸಾಧಿಸಿ ಬಿಜೆಪಿ ರಿಲ್ಯಾಕ್ಸ್ ಮೂಡ್‌ ನಲ್ಲಿದೆ ಎಂದು ನೀವು ಯೋಚಿಸುತ್ತಿದ್ದರೆ ನಿಮ್ಮ ಆಲೋಚನೆ ತಪ್ಪು. ನಾಲ್ಕು ರಾಜ್ಯಗಳ ಚುನಾವಣೆಯ ವಿಜಯೋತ್ಸವದ ಬಳಿಕ ಬಿಜೆಪಿ ರಿಲಾಕ್ಸ್ ‘ಮೂಡ್’ನಲ್ಲಿಲ್ಲ, ಬದಲಿಗೆ ಈಗಿನಿಂದಲೇ ಬಿಜೆಪಿ ಮಿಷನ್ 2024 (BJP Mission 2024)ಗಾಗಿ ತಂತ್ರಗಾರಿಕೆಯನ್ನು ಪ್ರಾರಂಭಿಸಿದೆ. ಮತದಾನದ ಶೇಕಡಾವಾರು ಹೆಚ್ಚಳಕ್ಕೆ ತಂತ್ರ ಸಿದ್ಧವಾಗಿದೆ: ಪಕ್ಷದ ಸಂಪೂರ್ಣ ಗಮನವು ಶೇಕಡಾವಾರು ಮತಗಳನ್ನು ಹೆಚ್ಚಿಸುವತ್ತ ನೆಟ್ಟಿದೆ. 2019ಕ್ಕಿಂತ ಹೆಚ್ಚು ಶೇಕಡಾವಾರು ಮತ ಗಳಿಸಲು ಕಾರ್ಯತಂತ್ರ ಸಿದ್ಧಪಡಿಸಲಾಗುತ್ತಿದೆ. ಎಲ್ಲ ರಾಜ್ಯಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಈಗಾಗಲೇ ಬಿಜೆಪಿ (BJP) ಮುಖಂಡರು ಹಾಗೂ ಕಾರ್ಯಕರ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ನಾಲ್ಕು ರಾಜ್ಯಗಳಲ್ಲಿ…

Read More

ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ಮೈಸೂರು ವಿವಿ 46 ವರ್ಷದ ಹಿಂದೆ ಡಾ. ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್. ಕರುನಾಡಿನ ಕಣ್ಮಣಿ, ಕನ್ನಡಿಗರ ಪಾಲಿನ ಪ್ರೀತಿಯ ‘ಅಪ್ಪು’ಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಅಪ್ಪು ನಮ್ಮನ್ನೆಲ್ಲಾ ಅಗಲಿದ್ದರೂ, ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಮೂಲಕ ಮತ್ತೆ ಅಭಿಮಾನಿಗಳ ಎದುರು ಬರುತ್ತಿದ್ದಾರೆ. ಈ ಹೊತ್ತಲ್ಲೇ ಸಂಭ್ರಮದ ಸುದ್ದಿಯೊಂದು ಸಿಕ್ಕಿದ್ದು, ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್(Dr G Hemanth Kumar) ಅವರು, ‘ಹಿಂದೆ ಪದ್ಮಭೂಷಣ ಡಾ. ರಾಜ್ ಕುಮಾರ್ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಇದೀಗ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಮರಣೋತ್ತರವಾಗಿ…

Read More

ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಿ.ಹೊಸಳ್ಳಿಯ ಎಸ್.ಬಿ.ಕೆ. ಕ್ರಿಕೆಟರ್ಸ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ನಡೆಯಿತು. ಸಮಾಜ ಸೇವಕ ಬಿ.ಆರ್.ಶಶಿಧರ್, ಕೆ ಎಂಎಫ್ ನಿರ್ದೇಶಕ ಪ್ರಕಾಶ್ ಮತ್ತು ಅಭಿ ಡೆಂಟಲ್ ಕ್ಲಿನಿಕ್ ನ ಡಾ.ಬಸವ ಪ್ರಸಾದ್ ಕಾರ್ಯಕ್ರಮವನ್ನು  ಬ್ಯಾಟ್ ಬೀಸುವುದರ ಮೂಲಕ  ಉದ್ಘಾಟಿಸಿದರು. ಈ ಸಂದರ್ಭ ಬಳುವನೇರಲು ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮ, ಹಾಲ್ಕುರ್ಕೆ ಗ್ರಾ.ಪಂ. ಅಧ್ಯಕ್ಷ ಉಮಾಮಹೇಶ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಮತ್ತಿಹಳ್ಳಿ      ಗ್ರಾಪಂ ಸದಸ್ಯ ಹರೀಶ್ ಗೌಡ, ಪ್ರಮೀಳಾ ಅಡವೀಶ್,  ಮುಖಂಡರಾದ ಗಂಗಾಧರ್,  ಚಿದಾನಂದ್ ಮತ್ತು  ಶಂಕರಲಿಂಗಪ್ಪ ಸೇರಿದಂತೆ ಎಸ್.ಬಿ.ಕೆ. ಕ್ರಿಕೆಟರ್ಸ್ ನ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ  ಕ್ರೀಡಾಭಿಮಾನಿಗಳು  ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಗುಬ್ಬಿ:  ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಚನ್ನಬಸವೇಶ್ವರ ಸ್ವಾಮಿ ಅವರ ರಥೋತ್ಸವದ ವೇಳೆ ದಾಸೋಹದ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಪ್ರಜಾಪ್ರಗತಿ ಪತ್ರಿಕೆ ತಾಲೂಕು ವರದಿಗಾರರಾದ ರಾಜೇಶ್ ಗುಬ್ಬಿ ಅವರ ಮೇಲೆ ವ್ಯಕ್ತಿಯೋರ್ವ  ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಸ್ಥಳೀಯ ವ್ಯಕ್ತಿ ವಿಶ್ವನಾಥ್ ಎಂಬಾತ ವರದಿಗಾರ ರಾಜೇಶ್ ಗುಬ್ಬಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು, ಪರಿಣಾಮವಾಗಿ ಅವರ ಕೈಗಳಿಗೆ ಹೆಚ್ಚು ಗಾಯವಾಗಿದೆ. ಪತ್ರಕರ್ತ ರಾಜೇಶ್ ಗುಬ್ಬಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಗುಬ್ಬಿ  ಪೊಲೀಸ್  ಠಾಣೆಯಲ್ಲಿ  ಘಟನೆ ಸಂಬಂಧ  ದೂರು ದಾಖಲಿಸಲಾಗಿದೆ. ವರದಿ: ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ. ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ. ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು…

Read More

ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ವೆಂಕಟೇ ಗೌಡನಪಾಳ್ಯ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಸ್ಪರ್ಶಿಸಿ ಗುಡಿಸಲು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ ವೆಂಕಟೇಗೌಡನ ಪಾಳ್ಯ ಲಲಿತಮ್ಮ ಎಂಬುವರಿಗೆ ಸೇರಿದ ವಾಸದ ಗುಡಿಸಲಾಗಿದ್ದು ಗುಡಿಸಿಲಿನಲ್ಲಿ ಸಂಗ್ರಹಿಸಲಾಗಿದ್ದ ದವಸ ಧಾನ್ಯಗಳು ಗೃಹ ಉಪಯೋಗಿ ವಸ್ತುಗಳು ಮತ್ತು ತೆಂಗು ಸೇರಿ ಸುಮಾರು ಎರಡು ಲಕ್ಷಕ್ಕೂ ಅಧಿಕ ವೆಚ್ಚದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ‌ ಕಾರ್ಯಕ್ಕೆ ಮುಂದಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ . ಘಟನಾ ಸ್ಥಳಕ್ಕೆ ಯಾವುದೇ ಇಲಾಖಾ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವೆಂಕಟೇಗೌಡನ ಪಾಳ್ಯ ನಿವಾಸಿಗಳು ಹಾಗೂ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ವರದಿ: ಡಿ.ಮಂಜುನಾಥ್, ಗುಬ್ಬಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ಜಮಖಂಡಿ: ತಾಲೂಕಿನ ಮಧುರಖಂಡಿ ಗ್ರಾಮದ ಸಾಯಿ ಸಂಕಲ್ಪ ಕನ್ನಡ , ಆಂಗ್ಲ ಮಾಧ್ಯಮ ಹಿರಿಯ , ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ  ಎಂ.ಎಂ.ಮೂಡಲಗಿ ಗುರುಗಳು ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ, ಯೋಗಾಸನಗಳ ಅವಶ್ಯಕತೆ ಇದೆ . ಆದಕಾರಣ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದ ದೇಶದ ಜನರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದ್ದರಿಂದ ಹೊರಬರಬೇಕಾದರೆ ಕ್ರೀಡೆ ಹಾಗೂ ಯೋಗಾಸನದಂತಹ ದೈಹಿಕ ಶ್ರಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ವಾರ್ಷಿಕ ಕ್ರೀಡಾಕೂಟದಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಆಟಗಳನ್ನು ಆಡಿಸಿ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಮಹತ್ವವನ್ನು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಬಿ.ಎಸ್.ಮಲಾಬಾದಿ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಆರ್.ಜಿ.ಮೋರಗಾಂವಕರ ,ಶಿಕ್ಷಕರ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ: ಅಶೋಕ ಗುರಕೇರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಚರ್ಚ್ ರಸ್ತೆಯಲ್ಲಿ ಹಿರಿಯೂರು ತಾಲ್ಲೂಕಿನ ಎಸ್ ಆರ್ ಪಿ ಕಾಲೇಜಿಗೆ ಸೇರಿದ ವಾಹನ(ಕೆ ಎ ೧೬ ಡಿ ೪೯೦೪) ಕೆಟ್ಟು ಹೋಗಿದ್ದು, ಪರಿಣಾಮವಾಗಿ ರಸ್ತೆ ಸಂಚಾರಕ್ಕೆ ಕೆಲ ಕಾಲ ಅಡ್ಡಿಯುಂಟಾದ ಘಟನೆ ನಡೆಯಿತು. ವಾಹನ ಕೈ ಕೊಟ್ಟ ಬೆನ್ನಲ್ಲೇ ಎಸ್ ಆರ್ ಪಿ ಕಾಲೇಜಿನ ವ್ಯವಸ್ಥಾಪಕ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದರು. ಇನ್ನೂ ವಾಹನ ರಸ್ತೆಯಲ್ಲಿ ಕೆಟ್ಟು ನಿಂತ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಚಾಲಕರು ಪರದಾಡುವಂತಾಗಿತ್ತು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ). ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

Read More

ತುಮಕೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು ತಮಗೆ ನಿರಾಸೆ ಮೂಡಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಹೇಳಿದರು. ನಗರದ ಹೆಗ್ಗೆರೆಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮತ್ತು ಪಕ್ಷ ಪ್ರಸ್ತುತ ನಡೆದ ಚುನಾವಣೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಿದ್ದು ಅಂತಿಮವಾಗಿ ಪಕ್ಷಕ್ಕೆ ಹಿನ್ನೆಡೆಯಾಗಿದ್ದು ಅದಕ್ಕೆ ಕಾರಣಗಳನ್ನು ಹುಡುಕಬೇಕಿದೆ ಎಂದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಗಿಂತಲೂ ಪ್ರಿಯಾಂಕ ಗಾಂಧಿಯವರು ಹೆಚ್ಚಿನ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿದರು, ಜನರನ್ನು ತಲುಪುವ ಪ್ರಯತ್ನ ಮಾಡಿದರು ಆದರೂ ಮತಗಳು ಬೇರೆಯವರ ಪಾಲಾಗಿವೆ. ದೇಶದಲ್ಲಿ ಸಾಮಾನ್ಯ ಜನರ ಬದುಕಿಗೆ ತೊಂದರೆಯಾಗುತ್ತಿದೆ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯಿದೆ ಎನ್ನುವ ವಾತಾವರಣವಿದ್ದರೂ ಜನ ಬಿಜೆಪಿಗೆ ಮತ ಹಾಕುತ್ತಾರೆ ಎಂದರೆ ಏನೋ ಕಾರಣ ಇರಬಹುದು ಎನ್ನುವ ಅನುಮಾನ ವ್ಯಕ್ತಪಡಿಸಿದರು. ದೇಶದ ಅಭಿವೃದ್ಧಿ ದೃಷ್ಠಿಯಿಂದ 2024ರ ಲೋಕಸಭಾ ಚುನಾವಣೆ ಅತ್ಯಂತ ಪ್ರಮುಖವಾದುದ್ದಾಗಿದ್ದು ಅಷ್ಟರೊಳಗೆ ಕಾಂಗ್ರೆಸ್ ಪಕ್ಷವನ್ನು ದೇಶದಲ್ಲಿ ಸದೃಢಗೊಳಿಸಬೇಕು. ಇ.ವಿ.ಎಂ. ಬಗ್ಗೆ ತಮಗೇ ಮೊದಲಿನಿಂದಲೂ ಅನುಮಾನ ಇದ್ದು…

Read More