Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ತುಮಕೂರು: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿದ್ದ ಯುದ್ಧದ ನಡುವೆ ಸುರಕ್ಷಿತವಾಗಿ ಆಗಮಿಸಿದ ತುಮಕೂರಿನ ವಿದ್ಯಾನಗರದ ವಿದ್ಯಾರ್ಥಿನಿ ದೀಕ್ಷಾ ಅವರ ಮನೆಗೆ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಭೇಟಿ ನೀಡಿ ವಿದ್ಯಾರ್ಥಿನಿಗೆ ಸ್ವಾಗತಿಸಿ ,ಅಲ್ಲಿನ ಪರಿಸ್ಥಿತಿಯನ್ನು ಚರ್ಚಿಸಿದರು. ಈ ವೇಳೆ ವಿದ್ಯಾರ್ಥಿಗೆ ಧೈರ್ಯ ತುಂಬಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ನಮ್ಮ ದೇಶದಿಂದ ಉಕ್ರೇನ್ ದೇಶಕ್ಕೆ ಮೆಡಿಕಲ್ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ನೂರಾರು ವಿದ್ಯಾರ್ಥಿನಿಯರು ನಮ್ಮ ದೇಶದಲ್ಲಿದ್ದಾರೆ. ಅಂತಹ ವಿದ್ಯಾರ್ಥಿನಿಯರಿಗೆ ನಮ್ಮ ಪಕ್ಷದ ಮುಖಂಡ ಪ್ರಭಾಕರ್ ಕೋರೆ ಹೇಳಿದಂತೆ, ನಮ್ಮ ದೇಶದಲ್ಲಿರುವ ಯೂನಿವರ್ಸಿಟಿಗಳಲ್ಲಿ ಮೆಡಿಕಲ್ ವಿದ್ಯಾಭ್ಯಾಸ ಮಾಡುವಂತೆ ಸರಕಾರ ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಮ್ಮ ದೇಶದ ಮಕ್ಕಳು ನಮಗೆ ಸರ್ವಸಂಪತ್ತು ಇದ್ದಹಾಗೆ. ಆದರೆ, ಅವರು ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆಂದು ಹೋಗುವಂತಾಗಿರುವುದು ಸರಿಯಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಸರ್ಕಾರಕ್ಕೆ ಒತ್ತಾಯಿಸಿದರು. ವಿದ್ಯಾರ್ಥಿನಿಯ ಸಾಂತ್ವನದ ವೇಳೆ ಕೆಸಿಡಿಸಿ ನಿರ್ದೇಶಕರಾದ ಸದಾಶಿವಯ್ಯ ಉಪಸ್ಥಿತರಿದ್ದರು.…
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಳಘಟ್ಟ ಫಿರ್ಕಾದ ಗ್ರಾಮ ಸಹಾಯಕರಾದ ತಿಮ್ಮಪ್ಪ ನವರನ್ನು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಕರ್ತವ್ಯದ ನಿಮಿತ್ತ ನವೋದಯ ಯೋಜನೆಯಡಿ ಪಿಂಚಣಿದಾರರ ಮಾಹಿತಿಯನ್ನು ಪಡೆಯುವ ಸಲುವಾಗಿ ದಯಾನಂದ ಮತ್ತು ರಾಜಪ್ಪ ನವರನ್ನು ಭೇಟಿ ಮಾಡಿ ದಾಖಲಾತಿಯನ್ನು ಪಡೆಯಲು ಹೋದ ಸಂದರ್ಭದಲ್ಲಿ ಗ್ರಾಮ ಸಹಾಯಕರಿಗೆ ದಾಖಲಾತಿ ನೀಡದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ ಮಾರಣಾಂತಿಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳಬೇಕು. ಈ ಮೂಲಕ ಪ್ರತಿಯೊಂದು ಇಲಾಖೆ ಗಳಲ್ಲಿಯೂ ಸಹ ನೌಕರರು ನಿರ್ಭಯವಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರಗಮಾಣವಾಗಬೇಕು. ಹಲ್ಲೆಗೊಳಗಾದ ಗ್ರಾಮ ಸಹಾಯಕರ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ, ತಾಲ್ಲೂಕಿನ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನ ಸಿರಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಜಯಚಂದ್ರರವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದ್ಯಸತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕೋ ಆರ್ಡಿನೇಟರ್ ಹಾಗೂ ಉಸ್ತುವಾರಿಗಳಾದ ಖಾಲಿದ್, ಹುಸೇನ್, ನಾಗರಾಜಯ್ಯ, ಅಜೀಮ್ (HMG) ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕಣಜನಹಳ್ಳಿ ಜಿ.ಕೃಷ್ಣಮೂರ್ತಿ ಬ್ಲಾಕ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುರೇಖಾಮಣಿ, ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಾಗರತ್ನಮ್ಮರವರ ಅಧ್ಯಕ್ಷತೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಿರಿಯೂರು ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ರಜೀಯಾ ಸುಲ್ತಾನ್, ಈ ದಿನ ಮಹಿಳೆಯರಿಗೆ ತುಂಬಾ ಮಹತ್ವವಾದ ದಿನ, ಒಂದು ಹೆಣ್ಷು ಮಗಳು ಕೇವಲ ಮನೆಗೆ ಮಾತ್ರ ಮೀಸಲಾಗಿಲ್ಲ, ಹೆಣ್ಣು ಮಕ್ಕಳು ಸಮಾಜದಲ್ಲಿ ಸದಾ ಏನಾದರೂ ಒಂದು ಸಾಧನೆ ಮಾಡಲೇಬೇಕು.ಈ ಸಾಧನೆಗೆ ಮನೆಯಲ್ಲಿನ ತಂದೆ, ತಾಯಿ ಅಥವಾ ಪತಿಯ ಸಹಕಾರ ಪ್ರೋತ್ಸಾಹ ಅಷ್ಟೇ ಅಗತ್ಯ ಎಂದರು. ಮಾಜಿ ಸಚಿವ ಡಿ.ಸುಧಾಕರ್ ರವರು ಮಾತನಾಡಿ, ನಾನು 2008 ರಲ್ಲಿ ಹಿರಿಯೂರು ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದಲ್ಲಿ ಶಾಸಕರಾಗಿ ಚುನಾವಣೆಯಲ್ಲಿ ಗೆಲ್ಲಲು ಕಾರಣ ಈ ನಮ್ಮ ಹಿರಿಯೂರು ತಾಲ್ಲೂಕಿನ ಮಹಿಳೆಯರು ಎಂದು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ…
ತುರುವೇಕೆರೆ: ತಾಲ್ಲೂಕು ಮಾಯಸಂದ್ರದಲ್ಲಿ ” ವಿಶ್ವ ಮಹಿಳಾ ದಿನಾಚರಣೆ “ಯನ್ನು ಬಹಳ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ , ಪಾತ್ರ ಮತ್ತು ಕರ್ತವ್ಯಗಳ ಬಗ್ಗೆ ವಿವರಿಸಿದ ಮಹಿಳಾ ಸಮಾಜದ ಅಧ್ಯಕ್ಷರಾದ ಆನಂದ ಮದನ್ ಕುಮಾರ್ ರವರು ನೆರೆದಿದ್ದ ಸರ್ವರಿಗೂ ಶುಭಾಶಯ ತಿಳಿಸಿದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಲೀಲಾವತಿ ಗಿಡ್ಡಯ್ಯ , ಸಮಾಜದ ಮುಖ್ಯ ಸದಸ್ಯರುಗಳಾದ ವಿಜಯ ವಸಂತ್ ರಾಜ್ , ಸ್ವರಣಂಭ, ಭುವನೇಶ್ವರಿ, ಆಶಾ ಚಂದು, ಶೈಲಾ ಪ್ರಸಾದ್ , ಪೂರ್ಣಿಮಾ , ಸಹನ ಸತ್ಯ, ಅಂಜಲಿ ಭಾನುಪ್ರಕಾಶ್ , ಪಾರ್ವತಮ್ಮ, ಗೀತಾ ವಿಪುಲ್ ಜೈನ್ , ಸಂಗೀತಾ ಮತ್ತು ಇತರರು ಭಾಗವಹಿಸಿದ್ದರು. ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆ: ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಾಗರಿಕ ವೇದಿಕೆ ವಿವಿಧ ಸಂಘ ಸಂಸ್ಥೆಗಳು ಆಶ್ರಯದಲ್ಲಿ ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ತಾಲೂಕಿನವರಾದ ಪ್ರೊ.ಪುಟ್ಟ ರಂಗಪ್ಪ ಅವರ “ತುಮಕೂರಿನ ವೀರವನಿತೆಯರು” ಎಂಬ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ತುಮಕೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಯ್ಯ ಉದ್ಘಾಟಿಸಿದರು. ಖ್ಯಾತ ಲೇಖಕಿ. ಹಾಗೂ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ “ವೀರವನಿತೆಯರು” ಕೃತಿಯನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಯಾವುದೇ ಕಾರ್ಯಕ್ರಮವನ್ನು ಮಾಡುವ ಮೊದಲು ಸಂವಿಧಾನದ ಚಿಕ್ಕ ಪೀಠಿಕೆಯನ್ನು ಓದುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಡಬೇಕು ಎಂದು ಸಲಹೆ ನೀಡಿದರು. ಈ ಸಮಾಜ ಒಂದು ಬೆಟ್ಟದಂತೆ. ಈ ಬೆಟ್ಟದಲ್ಲಿ ವಾಸಮಾಡುವ ನಾವುಗಳು ಅಂದರೆ ಮನುಷ್ಯ ಜಾತಿ, ಬೆಟ್ಟದಲ್ಲಿ ಬರುವ ಆಗುಹೋಗುಗಳು ಯಾವುದೇ ಸಂದರ್ಭದಲ್ಲೂ ಧೃತಿಗೆಡದೆ. ಈ ಸಮಾಜವನ್ನು ಮುನ್ನಡೆಸಿಕೊಂಡು ಹೋಗುವ ಧೈರ್ಯ ನಮ್ಮಲ್ಲಿರಬೇಕು. ಎಂದರು. ಈ…
ತುಮಕೂರು : ದಿವ್ಯದೃಷ್ಟಿ ಕಲಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ತುಮಕೂರಿನ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ವಿದ್ಯಾವಾಚಸ್ಪತಿ ಖ್ಯಾತ ಸಾಹಿತಿ ಡಾ.ಕವಿತಾಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ, ರಾಜ್ಯ ಪ್ರಶಸ್ತಿ ವಿಜೇತ ನವರತ್ನ ಇಂದುಕುಮಾರ್, ತಿಲಕ್ ಪಾರ್ಕ್ ಪೊಲೀಸ್ ಠಾಣೆ ಮಹಿಳಾ ಸಬ್ ಇನ್ಸ್ಪೆಕ್ಟರ್ ಚಂದ್ರಕಲಾ ಟಿ.ಎಸ್. ಹಾಗೂ ರಮೋ ಮಜಾ ಟಾಕೀಸ್ ಖ್ಯಾತಿ ಗೌರವ ನಿರ್ದೇಶಕರು ದಿವ್ಯದೃಷ್ಟಿ ಸಂಸ್ಥೆ ಇವರುಗಳು ಉದ್ಘಾಟಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮಜಾ ಟಾಕೀಸ್ ರೆಮೋ , ಎಲ್ಲರಿಗೂ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು ತಿಳಿಸಿ, ಸಾಧಕಿ ಕುಸುಮಾ ಜೈನ್ ಜೈನ್ ಅವರ ಸಾಧನೆಯನ್ನು ಶ್ಲಾಘಿಸಿದರು. ಜೊತೆಗೆ ಎಲ್ಲರೂ ಒಟ್ಟಾಗಿ ಇರೋಣ ನಗುನಗುತ ಇರೋಣ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕಿಯರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚಂದ್ರಶೇಖರ್, ಜಲಜ ಜೈನ್ ಕಾರ್ಯದರ್ಶಿ ದಿವ್ಯದೃಷ್ಟಿ ಸಂಸ್ಥೆ, ಕುಮಾರಿ ಚೈತ್ರಲಿ ನೃತ್ಯ ಕಲಾವಿದೆ ಡ್ಯಾನ್ಸ್…
ತುಮಕೂರು: ತುಮಕೂರಿನ 19 ವರ್ಷದ ಯುವತಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೃತ ಯುವತಿಯ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಕೈಗೊಳ್ಳಲಾಗಿದೆ. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಯುತ್ತಿದೆಯೆಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ರವರು ತಿಳಿಸಿದ್ದಾರೆ. ಕೊರೊನಾ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಬಂದ ವ್ಯಕ್ತಿ ನನ್ನ ಮಗಳನ್ನ ದುರುಪಯೋಗಪಡಿಸಿಕೊಂಡಿದ್ದು, ನಂತರ ಆತ ನೀಡಿದ ಔಷಧಿಯ ಪರಿಣಾಮ ಯುವತಿ ಮೃತಪಟ್ಟಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೃತ ಯುವತಿಯ ತಾಯಿಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ದಾಖಲು ಮಾಡಿಕೊಂಡಿದ್ದು, ತುಮಕೂರು ನಗರ ಠಾಣೆಯ ಇನ್ಸ್ಪೆಕ್ಟರ್ ರವರಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಉತ್ತರ ಪ್ರದೇಶ, ಗೋವಾ, ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗರಿಷ್ಠ ಸಂಖ್ಯೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ ಇದರ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ತುಮಕೂರು ನಗರದ ಟೌನ್ಹಾಲ್ ವೃತ್ತದಲ್ಲಿ ಬಿ.ಜೆ.ಪಿ ಪಕ್ಷದ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ತುಮಕೂರು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಲಕ್ಷ್ಮೀಶ್ ರವರ ನೇತೃತ್ವದಲ್ಲಿ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ವಿರೋಧಿ ಹಾಗೂ ದೇಶ ವಿರೋಧಿ ಕೃತ್ಯಗಳ ವಿರುದ್ಧವಾಗಿ ಹೋರಾಡಿದ ಬಿಜೆಪಿ ಪಕ್ಷಕ್ಕೆ ಈ ಬಾರಿ ಮತದಾರರು ಒಲವು ತೋರಿದ್ದು, ಈ ಮೂಲಕ ಮತದಾರರು ವಿರೋಧ ಪಕ್ಷಗಳಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು. ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಅಮಿತ್ ಶಾ ರವರ ನೇತೃತ್ವದಲ್ಲಿ ಈ ಬಾರಿಯ ಚುನಾವಣೆ ಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವು…
ಕೊರಟಗೆರೆ: ಪಟ್ಟಣದ ಎಲ್&ಟಿ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಲಾಕರ್ ಒಡೆದು ಕಳ್ಳತನ ನಡೆಸಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಪಟ್ಟಣದ ಕರ್ನಾಟಕ ಬ್ಯಾಂಕ್ ಎಟಿಎಂ ಪಕ್ಕದಲ್ಲಿ ಇತ್ತೀಚೆಗಷ್ಟೇ ನೂತನವಾಗಿ ಎಲ್&ಟಿ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಶಾಖೆಯನ್ನು ಪ್ರಾರಂಭಿಸಲಾಗಿತ್ತು . ಬಹಳ ದಿನಗಳಿಂದ ಹೊಂಚು ಹಾಕಿಕೂತಿದ್ದ ಕಳ್ಳರ ತಂಡ ಶಾಖೆಯಲ್ಲಿ ಲೋನ್ ಗಳ ವಹಿವಾಟನ್ನು ಗಮನಿಸಿ, ಈ ಶಾಖೆಯಲ್ಲಿ ಬಹಳಷ್ಟು ಹಣ ಇದೆಯೆಂದು ತಿಳಿದು ಬುಧವಾರ ರಾತ್ರಿ ಫೈನಾನ್ಸ್ ಕಂಪೆನಿಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳು ಹೋದ ನಂತರ ಕಳವಿಗೆ ಯತ್ನಿಸಿದ್ದಾರೆ. ಬಿಲ್ಡಿಂಗ್ ಮೆಟ್ಟಿಲುಗಳ ಮುಖಾಂತರ ಬಿಲ್ಡಿಂಗ್ ಪ್ರವೇಶಿಸಿ, ಶಾಖೆಯ ಬೀಗವನ್ನು ಒಡೆದು ಒಳನುಗ್ಗಿ ಲಾಕರ್ ಒಡೆಯಲು ಪ್ರಯತ್ನಿಸಿದ್ದಾರೆ. ಸಾಕಷ್ಟು ಪ್ರಯತ್ನಪಟ್ಟರೂ ಲಾಕರ್ ಓಪನ್ ಆಗದ ಕಾರಣ ಬಂದ ಕೆಲಸಕ್ಕೆ ಸುಂಕವಿಲ್ಲದೆ ವಾಪಸ್ ಮರಳಿದ್ದಾರೆ ಎಂದು ಹೇಳಲಾಗಿದೆ. ಕಳ್ಳತನಕ್ಕೆ ಸಂಬಂಧಿಸಿದಂತೆ ಶಾಖೆಯ ವ್ಯವಸ್ಥಾಪಕ ಶಿವು ಮಾತನಾಡಿ, ನಮ್ಮ ಕಂಪೆನಿ ಶಾಖೆಯು ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದು, ಬಿಲ್ಡಿಂಗ್ ಒಳಗೆ ಹೊರಗೆ ಸಿಸಿ…