Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಎರಡನೇ ಹಂತ ಇಂದು ಮುಗಿದಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜಿನ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಕೇಂದ್ರ-ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡುವ ಮೂಲಕ ಪಾದಯಾತ್ರೆ ಮುಕ್ತಾಯಗೊಂಡಿತು. ಇದೇ ವೇಳೆ ಪಾದಯಾತ್ರೆ ವೇಳೆ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷವು ಜನರ ಕ್ಷಮೆಯನ್ನು ಕೇಳಿದೆ.ಕೋವಿಡ್ ಮೂರನೇ ಅಲೆ ಹಿನ್ನಲೆಯಿಂದಾಗಿ ಹಾಗೂ ಕೋರ್ಟ್ ಅದೇಶದ ಮೆರೆ ಕಾಂಗ್ರೆಸ್ ಕೈಗೊಂಡಿದ್ದ ಮೇಕೆದಾಟು ಪಾದಯಾತ್ರೆ ಜನವರಿ 9 ರಿಂದ 14ರ ವರೆಗೆ ಕನಕಪುರ ತಾಲ್ಲೂಕಿನ ಸಂಗಮದಿಂದ ಪ್ರಾರಂಭವಾಗಿ ರಾಮನಗರದಲ್ಲಿ ಸ್ಥಗಿತಗೊಂಡಿತ್ತು. ಮತ್ತೆ ಫೆ 27 ರಿಂದ ರಾಮನಗರದಿಂದ ಮಾರ್ಚ್ 4ಕ್ಕೆ ನ್ಯಾಷನಲ್ ಕಾಲೇಜ್ ಮೈದಾನವರೆಗೆ ಸಾಗಲಿದೆ. ಮೊದಲಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡುತ್ತಾ, ರಾಮನಗರದಲ್ಲಿ ಮೇಕೆದಾಟು 1.0 ಸಂದರ್ಭದಲ್ಲಿ ಹತ್ತು ಎಫ್ ಐ ಆರ್ ಹಾಕಿ, ನಮ್ಮನ್ನು ಜೈಲಿಗೆ ಕಳಿಸಲು ಕುತಂತ್ರ ನಡೆಸಿದ್ದರು.ಈಗ ಪಾದಯಾತ್ರೆ ಯಶಸ್ಸು ನನ್ನ ಯಶಸ್ಸಲ್ಲ ಇದು ಪಕ್ಷ…
ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರದಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಭಾರತೀಯರು ಸಿಲುಕಿರುವಾಗ ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅವರು ಸಮಾಜವಾದಿ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದರು.”ಇದೀಗ ಏನಾಗುತ್ತಿದೆ ನೋಡಿ.ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದೆ ಮತ್ತು ಮೋದಿ ಇಲ್ಲಿ ಸಭೆಗಳನ್ನು ಮಾಡುತ್ತಿದ್ದಾರೆ.ಇಲ್ಲಿ ಯಾವುದು ಮುಖ್ಯವಾಗಬೇಕು ಹೇಳಿ ? ನಮ್ಮ ಭಾರತೀಯ ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ?” ಎಂದು ದೀದಿ ಪ್ರಶ್ನಿಸಿದರು.”ನೀವು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರೆ ಮತ್ತು ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‌ನಿಂದ ಏಕೆ ಮರಳಿ ಕರೆತರಲಿಲ್ಲ?” ಎಂದು ಅವರು ಪ್ರಶ್ನಿಸಿದರು.…
ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ ಮತ್ತು ವಿನಾಶಕಾರಿಯಾಗಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಬುಧವಾರ ಹೇಳಿದ್ದಾರೆ. ಕಳೆದ ವಾರ ಉಕ್ರೇನ್ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾಚರಣೆ ಎಂದು ಕರೆಯುವ ರಷ್ಯಾ, ಕೈವ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡರೆ ನಿಜವಾದ ಅಪಾಯ ಎದುರಿಸಬೇಕಾಗುತ್ತದೆ ಎಂದು ಲಾವ್ರೊವ್ ಹೇಳಿದ್ದಾರೆ. ಉಕ್ರೇನ್ ನ ಆಕ್ರಮಣವನ್ನು ಪ್ರಾರಂಭಿಸಿದ ಒಂದು ವಾರದ ನಂತರ, ರಷ್ಯಾ ತನ್ನ ಪಡೆಗಳು ಬುಧವಾರದಂದು ನಗರವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿತು, ದಕ್ಷಿಣದಲ್ಲಿ ಖೆರ್ಸನ್ ಅನ್ನು ವಶಪಡಿಸಿಕೊಂಡಿತು.ಸುಮಾರು ಒಂದು ವಾರದ ಹಿಂದೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ದಕ್ಷಿಣ ನೆರೆಹೊರೆಯ ಮೇಲೆ ಪೂರ್ಣ ಪ್ರಮಾಣದ ಆಕ್ರಮಣಕ್ಕೆ ಆದೇಶಿಸಿದ ನಂತರ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಉಕ್ರೇನಿಯನ್ನರು ತಮ್ಮ ದೇಶದಿಂದ ಪಲಾಯನ ಮಾಡಿದ್ದಾರೆ. ಇನ್ನೊಂದೆಡೆಗೆ ಪುಟೀನ್ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅಮೇರಿಕಾದ ಅಧ್ಯಕ್ಷ ಜೋ ಬಿಡೆನ್ “ಅವರು ಯುದ್ಧಭೂಮಿಯಲ್ಲಿ ಲಾಭಗಳನ್ನು ಗಳಿಸಬಹುದಾದರೂ, ದೀರ್ಘಾವಧಿಯಲ್ಲಿ ಅವರು ನಿರಂತರ ಹೆಚ್ಚಿನ ಬೆಲೆಯನ್ನು ತೆರುತ್ತಾರೆ” ಎಂದು ಹೇಳಿದ್ದಾರೆ.ಯುಎಸ್…
ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ವಾರ್ಡ್ ನಂ 24 ರಲ್ಲಿನ ಹುಳಿಯಾರ್ ರಸ್ತೆಯಲ್ಲಿರುವ ನಾಯಕ ಕ್ಯಾಂಪ್ ಬಳಿ ಇರುವ ಬೊಮ್ಮಕ್ಕ ದೇವಸ್ಥಾನದ ಎದುರು ಇರುವ ಬೀದಿ ದ್ವೀಪವು ಕೆಟ್ಟು ಹೋಗಿದ್ದು, ಆದರೆ ಇತ್ತ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ವಿದ್ಯುತ್ ದೀಪ ಕೆಟ್ಟು ಹೋಗಿ 20 ದಿನಗಳು ಕಳೆದವು.ಆದರೆ, ಆಡಳಿತ ಅಧಿಕಾರಿಗಳಾಗಲಿ, ಸ್ಥಳೀಯ ಜನಪ್ರತಿನಿಧಿಗಳಾಗಲಿ, ಈವರೆಗೂ ದುರಸ್ತಿಗೊಳಿಸದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ದೀಪ ಇಲ್ಲದ ಕಾರಣ ಈ ಭಾಗದಲ್ಲಿ ರಾತ್ರಿಯಾದರೆ, ಹೆಣ್ಣುಮಕ್ಕಳು ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಶೀಘ್ರವೇ ಈ ಬಗ್ಗೆ ಸಂಬಂಧಪಟ್ಟವರು ಕ್ರಮಕೈಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ: ಮುರುಳಿಧರನ್ ಆರ್., ಹಿರಿಯೂರು (ಚಿತ್ರದುರ್ಗ – ದಾವಣಗೆರೆ ) ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಹಾವೊಂದಕ್ಕೆ ಆಪರೇಷನ್ ಮಾಡಿ ಪ್ರಾಣ ಉಳಿಸಿರುವ ವಿಶೇಷ ಘಟನೆ ನಗರದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದಿದ್ದು, ಮೂರು ದಿನದ ಆರೈಕೆ ನಂತರ ನಾಗಪ್ಪನನ್ನು ಕಾಡಿಗೆ ಬಿಟ್ಟಿದ್ದಾರೆ.ಹೌದು., ಚಾಮರಾಜನಗರದ ಸೋಮವಾರಪೇಟೆಯಲ್ಲಿ 4 ದಿನಗಳ ಹಿಂದೆ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಸಿಲುಕಿ ಗಾಯಗೊಂಡಿದ್ದ ನಾಗರಹಾವೊಂದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಪಶು ಆಸ್ಪತ್ರೆಯಲ್ಲಿ ಡಾ.ಮೂರ್ತಿ ಎಂಬವರಿಂದ ಚಿಕಿತ್ಸೆ ಕೊಡಿಸಲಾಗಿದೆ. ಹಾವಿನ ದೇಹದ ಎರಡು ಕಡೆ ತುಂಡಾಗಿದ್ದನ್ನು ಹೊಲಿದು ಸೇರಿಸಲಾಗಿದ್ದು ಜೊತೆಗೆ ಮೂಳೆ ಮುರಿತವನ್ನು ಕಿರು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲಾಗಿದೆ. ಮೂರು ದಿನ ಸ್ನೇಕ್ ಅಶೋಕ್ ಆರೈಕೆಯಲ್ಲೇ ಇದ್ದ ನಾಗರಹಾವನ್ನು ಇಂದು ನಗರದ ಕರಿವರದರಾಜಸ್ವಾಮಿ ಬೆಟ್ಟಕ್ಕೆ ಬಿಟ್ಟು ಬರಲಾಗಿದೆ ಎಂದು ಸ್ನೇಕ್ ಅಶೋಕ್ ಮಾಹಿತಿ ಕೊಟ್ಟಿದ್ದಾರೆ. ಇನ್ನು, ಸ್ನೇಕ್ ಅಶೋಕ್ ಹಾವು ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದು ಇಲ್ಲಿಯವರೆಗೆ 17-18 ಸಾವಿರದಷ್ಟು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ಬಂದಿದ್ದಾರೆ. ವರದಿ ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ‘2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಅಂತಾ ಹೇಳಿದ್ದಾರೆ.‘ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು’ ಅಂತಾ ತಿರುಗೇಟು ನೀಡಿದ್ದಾರೆ.‘ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಸಿದ್ಧತೆಗಳು ಮುಗಿದಿದ್ದು, ನಾಳೆ ರಾಜ್ಯ ಸರ್ಕಾರದ ಆರ್ಥಿಕ ವರ್ಷ 2022-23 ರ ಬಜೆಟ್ ಮಂಡನೆ ಮಾಡಲಿದ್ದಾರೆ. ಆದರೆ ಆರ್ಥಿಕ ಇಲಾಖೆ ಹೇಳುವ ಪ್ರಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿ ಎಸ್ ಟಿ ಪರಿಹಾರ ಮತ್ತು ಕೇಂದ್ರ ಅನುದಾನ ಸಾವಿರಾರು ಕೋಟಿ ಬಾಕಿ ಇರಿಸಿಕೊಂಡಿದೆ. ಜಿಎಸ್ ಟಿ ಪರಿಹಾರ ಪಾವತಿ ಬಾಕಿ ₹ 7000 ಕೋಟಿ: GST ಜಾರಿ ಆದ ಸಂದರ್ಭದಿಂದಲೂ ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಇಲಾಖೆಯ ಕದ ತಟ್ಟುತ್ತಲೇ ಇದೆ ಹೊರತು ಈವರೆಗೆ ಸಮಾಧಾನಕರವಾದ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ ಜಿಎಸ್ ಟಿ ಪರಿಹಾರವಾಗಿ ಸಾಲ ಪಡೆಯುವ ವಿಶೇಷ ಅವಕಾಶವನ್ನು ಬಳಸಿಕೊಂಡಿದೆ.ವಾಣಿಜ್ಯ ಇಲಾಖೆ ಮಾಹಿತಿ ಪ್ರಕಾರ 2021-22ರಲ್ಲಿ ಜಿಎಸ್ ಟಿ ಪರಿಹಾರ ಹಾಗೂ ಸಾಲದ ರೂಪದಲ್ಲಿ 18,000 ಕೋಟಿ ಸ್ವೀಕರಿಸಿದೆ. ಇನ್ನೂ 7,000 ಕೋಟಿ ಪಾವತಿಯಾಗದೇ ಬಾಕಿ ಉಳಿದುಕೊಂಡಿದೆ. ಒಟ್ಟು 11,000 ಕೋಟಿ…
ಸಿರಾ: ಯುದ್ಧ ಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಶಿರಾ ತಾಲ್ಲೂಕಿನ ವಿದ್ಯಾರ್ಥಿ ಕೂಡ ಉಕ್ರೇನ್ ನಲ್ಲಿ ಸಿಲುಕಿದ್ದು, ವಿದ್ಯಾರ್ಥಿಗಳ ಮನೆಗೆ ತಾಲ್ಲೂಕು ಜೆಡಿಎಸ್ ಅದ್ಯಕ್ಷ ಆರ್.ಉಗ್ರೇಶ್ ಭೇಟಿ ನೀಡಿ, ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಭರವಸೆಯನ್ನು ನೀಡಿದರು. ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿ ಸ್ವಾಮಿ ಜೊತೆ ವಿಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು. ನಮ್ಮ ಪಕ್ಷದಿಂದ ಬೇಕಾಗಿರುವ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಜೊತೆಗೆ ಕುಟುಂಬಸ್ಥರು ಕೂಡ ಧೈರ್ಯದಿಂದ ಇರುವಂತೆ ಹೇಳಿದರು. ವರದಿ: ಎ.ಎನ್.ಪೀರ್, ತುಮಕೂರು
ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ಗುಜ್ಜನಡು ಗ್ರಾಮ ಪಂಚಾಯಿತಿ ಸಮಾಜಸೇವಕರಾದ ಸಾಯಿಸುಮನ ಹನುಮಂತರಾಯಪ್ಪ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳನ್ನು, ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ SDMC ಅಧ್ಯಕ್ಷರು ಈರಣ್ಣ, ನರಸಿಂಹನಾಯಕ, ರಾಮಚಂದ್ರಪ್ಪ, ಅಶ್ವತಪ್ಪ, ದೇವರಾಜ್, k p ಲಿಂಗಣ್ಣ, ಅಜಯ್ ಗೌಡ , ಗೌತಮ್ ಶಾಲಾ ಮುಖ್ಯೋಪಾಧ್ಯಾಯರು ಭಾರತಿ H, ಹಾಗೂ ಅತಿಥಿ ಶಿಕ್ಷಕರಾದ ಲೋಕೇಶ್ ಉಪಸ್ಥಿತರಿದ್ದರು. ವರದಿ: ನಂದೀಶ್ ಕೊತ್ತೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ಬಿಜೆಪಿಯಲ್ಲಿನ ಅನಿಶ್ಚಿತತೆ, ಪ್ರತಿಪಕ್ಷ ಕಾಂಗ್ರೆಸಿನ ಪ್ರಖರತೆ ಹಾಗೂ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು (Assembly Elections) ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಮತೋಲನದ ಬಜೆಟ್ (Balancing Budget) ಮಂಡಿಸುವುದು ಸವಾಲಿನ ಕೆಲಸವಾಗಿದೆ. ಇದರ ನಡುವೆ ಕೋವಿಡ್, ಆರ್ಥಿಕ ಹಿಂಜರಿತ, ವ್ಯಾಪರ-ವಹಿವಾಟುಗಳ ಕುಂಠಿತ, ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಜನ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಅಪಾರ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹಲವು ಕೊಡುಗೆ ಸಾಧ್ಯತೆ: ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನೀಡುವ ನಿರೀಕ್ಷೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿದ್ದು ಅವುಗಳಿಗೆ ಬಜೆಟ್‌ನಲ್ಲಿ…