Subscribe to Updates
Get the latest creative news from FooBar about art, design and business.
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
- ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
- ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
- ಬೀದರ್: ರಾಡ್ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
- ಬೀದರ್ | ಹೆದ್ದಾರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ, ಓರ್ವ ಗಂಭೀರ ಗಾಯ
- ವೈದ್ಯರು – ಸಮಾಜದ ಜೀವನಾಡಿ
Author: admin
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಾಜ್ಯಾದ್ಯಂತ 8,73,794 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ 8.76 ಲಕ್ಷ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದರು. ಆದರೆ ಪರೀಕ್ಷೆಗೆ 8.71 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.ಕಳೆದ ಎರಡು ವರ್ಷಗಳ ಎಲ್ಲಾ ಬಡ್ತಿ ನೀತಿಯಿಂದಾಗಿ ಈ ಸಂಖ್ಯೆಗೆ ಕಾರಣವಾಗಿದೆ ಎಂದು ಶಿಕ್ಷಕರು ಹೇಳುತ್ತಾರೆ. ಈ ವಿದ್ಯಾರ್ಥಿಗಳು 8ನೇ ತರಗತಿ (2019-20) ಮತ್ತು 9ನೇ ತರಗತಿ (2020-21)ಯಲ್ಲಿದ್ದಾಗ ಪರೀಕ್ಷೆಗಳನ್ನು ತೆಗೆದುಕೊಂಡಿಲ್ಲ. ಎರಡೂ ವರ್ಷಗಳಲ್ಲಿ ಎಲ್ಲರಿಗೂ ಬಡ್ತಿ ನೀಡಲಾಗಿದೆ. ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದಾರೆ.ಹಿಂದಿನ ವರ್ಷಗಳಿಗೆ ಹೋಲಿಸಿದರೆ ಖಾಸಗಿ ಅಭ್ಯರ್ಥಿಗಳ ಸಂಖ್ಯೆಯೂ ಹೆಚ್ಚಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್‍ಇಇಬಿ) ಹೇಳಿದೆ. ಸಾಮಾನ್ಯವಾಗಿ ಸುಮಾರು 20,000-25,000 ಅಭ್ಯರ್ಥಿಗಳು ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಾರೆ. ಈ ಬಾರಿ ಆ ಸಂಖ್ಯೆ 46,421 ಆಗಿದೆ.ಕಳೆದ ಬಾರಿ ಸರ್ಕಾರ ವಿದ್ಯಾರ್ಥಿಗಳಿಗೆ ಎಲ್ಲಾ ಬಡ್ತಿ ನೀತಿಯನ್ನು ಘೋಷಿಸಿದರೆ, ಅನೇಕರು ಈ ಬಾರಿಯೂ ಅದೇ ರೀತಿಯ ವಿನಮ್ರತೆಯನ್ನು ನಿರೀಕ್ಷಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳ ನೋಂದಣಿಗೆ…
ಯುದ್ಧ ಪೀಡಿತ ಪ್ರದೇಶದಲ್ಲಿ ಜನ ಆತಂಕಗೊಳಗಾಗಿದ್ದು, ಸುಮಾರು 50 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ತೊರೆಯುತ್ತಿದ್ದಾರೆ. ಪೋಲ್ಯಾಂಡ್ ಗಡಿ ಭಾಗದಲ್ಲಿ ಸುಮಾರು ಎರಡೂವರೆ ಲಕ್ಷ ಜನ ಕಿಕ್ಕಿರಿದು ತುಂಬಿದ್ದು, ತಮಗೆ ಆಶ್ರಯ ಕಲ್ಪಿಸುವಂತೆ ಮೊರೆಯಿಡುತ್ತಿದ್ದಾರೆ. ಉಕ್ರೇನ್ ಮೂರು ದಿಕ್ಕುಗಳ ನೆರೆ ರಾಷ್ಟ್ರಗಳಿಗೂ ಮಹಾವಲಸೆ ಆರಂಭವಾಗಿದೆ. ಸುಮಾರು 50 ಲಕ್ಷಕ್ಕೂ ಅಕ ಮಂದಿ ಉಕ್ರೇನ್ ತೊರೆದಿದ್ದಾರೆ. ರಷ್ಯಾ ನಾಗರಿಕ ಪ್ರದೇಶಗಳನ್ನೂ ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದರಿಂದ ಜನ ಪ್ರಾಣ ಭೀತಿಯಿಂದ ಇದ್ದು, ಪೋಲ್ಯಾಂಡ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಆಶ್ರಯ ಬಯಸುತ್ತಿದ್ದಾರೆ. ಈವರೆಗೂ ಆತ್ಮವಿಶ್ವಾಸದಿಂದ ಹೋರಾಟ ನಡೆಸಿದ ಉಕ್ರೇನ್ ನಿನ್ನೆಯಿಂದ ಹಿನ್ನಡೆ ಅನುಭವಿಸುವಂತೆ ಭಾಸವಾಗಿದೆ. ರಷ್ಯನ್ ಪಡೆ ಬಹುತೇಕ ಉಕ್ರೇನ್ ನಗರಗಳನ್ನು ಸುತ್ತುವರೆದು ಮಾರಣಾಂತಿಕ ಆಕ್ರಮಣಕ್ಕೆ ಸಜ್ಜುಗೊಂಡಿದೆ. ಕೊನೆ ಹಂತದ ಮಾತುಕತೆಯ ಫಲಶೃತಿಯನ್ನು ನಿರೀಕ್ಷಿಸಲಾಗುತ್ತಿದ್ದು, ಒಂದು ವೇಳೆ ಅಲ್ಲಿ ಸಂಧಾನ ಸಾಧ್ಯವಾಗದೇ ಹೋದರೆ ಶತ್ರು ಪಡೆ ಉಕ್ರೇನನ್ನು ಕೈ ವಶ ಮಾಡಿಕೊಳ್ಳಲು ಸಜ್ಜಾಗಿದೆ. ಉಪಗ್ರಹ ಆಧಾರಿತ ಚಿತ್ರಗಳು, ಸೇನಾ ಪಡೆಯ ಜಮಾವಣೆಯನ್ನು ಖಚಿತ ಪಡಿಸಿವೆ. ಈ…
ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಈ ಮೂಲಕ ಇಡೀ ಜಿಲ್ಲಾಡಳಿತ ಆಡಳಿತ ಯಂತ್ರವನ್ನ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಜನರ ಸಂಕಷ್ಟಗಳಿಗೆ ಮಿಡಿಯುವ ಜನಸ್ನೇಹಿ ಸರ್ಕಾರ ನಮ್ಮದಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಹೊನ್ನಾಳಿ ಪಟ್ಟಣದ ಅಂಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ನೂತನ ಕಂದಾಯ ಉಪವಿಭಾಗದ ಉಪವಿಭಾಗಾಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ನಿಧಿ ಚೆಕ್ ವಿತರಣೆ ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 1035 ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡಲಾಗಿದೆ.ದಾವಣಗೆರೆ ಜಿಲ್ಲೆಯಲ್ಲಿ 84 ಜನವಸತಿ ಪ್ರದೇಶಗಳ 39 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಿದ್ದು ಅದರಲ್ಲಿ ಹೊನ್ನಾಳಿ ತಾಲ್ಲೂಕಿನಲ್ಲಿ 5 ಗ್ರಾಮಗಳು ಕೂಡ ಸೇರ್ಪಡೆಯಾಗಿವೆ. ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವುದರಿಂದ ಆ ಗ್ರಾಮಕ್ಕೆ ಸರ್ಕಾರದ…
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಮ್ಮ ಆದಾಯ 10 ಪಟ್ಟು ಹೆಚ್ಚಾಗಿದೆ ಎಂದು ದೋಣಿ ನಿರ್ವಾಹಕರು ಹೇಳಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಆದಾಯವು ವೃದ್ಧಿಸಿದೆ ಎಂದು ದೋಣಿ ನಡೆಸುವ ಸೋನಿನಿಸಾದ್ ತಿಳಿಸಿದ್ದಾರೆ. ನಮ್ಮ ಮುತ್ತಾತ ಅವರು ಆಸಿಘಾಟ್ ನಲ್ಲಿ ದೋಣಿ ನಡೆಸುತ್ತಿದ್ದರು. ಈ ಭಾಗದಲ್ಲಿ ಸುಮಾರು ಒಂದೂವರೆ ಲಕ್ಷ ಕುಟುಂಬಗಳು ಈ ವೃತ್ತಿ ಅವಲಂಬಿಸಿವೆ. ಅವರ ದೈನಂದಿನ ಖರ್ಚು, ವೆಚ್ಚಗಳನ್ನು ನಿಬಾಯಿಸುವುದು ಒಂದು ಕಾಲದಲ್ಲಿ ಕಷ್ಟವಾಗಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನದಿಗಳನ್ನು ಸ್ವಚ್ಛಗೊಳಿಸಿದ್ದರಿಂದ, ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ ಎಂದಿದ್ದಾರೆ. ಚಂದನ್ ಶೈನಿ ಮಾತನಾಡಿ, ದೋಣಿಗಳಿಗೆ ಗ್ಯಾಸ್ ಸಂಪರ್ಕ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 84 ಘಾಟ್‍ಗಳು ಸುಸಜ್ಜಿತವಾಗಿವೆ. ಪ್ರಯಾಣಿಕರಿಗೆ ನಾಲ್ಕು ಪಟ್ಟು ಹೆಚ್ಚಾಗಿದೆ. ಆದಾಯವೂ ದ್ವಿಗುಣಗೊಂಡಿದೆ ಎಂದಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ…
ಇಡೀ ರಾಜ್ಯದ ಜನತೆ ಶಿವರಾತ್ರಿ ಆಚರಿಸುವ ಸಂದರ್ಭದಲ್ಲಿ ನಾವು ಬೆಂಗಳೂರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಬದುಕಿನ ರಕ್ಷಣೆಗಾಗಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.ನಾನು ಬೆಂಗಳೂರು ಜನರ ಕ್ಷಮೆ ಕೇಳಲು ಬಯಸುತ್ತೇನೆ. ಮುಂದಿನ 3 ದಿನ ಟ್ರಾಫಿಕ್ ಸಮಸ್ಯೆ ಎದುರಾಗಲಿದೆ. ಈ ಹೋರಾಟದಿಂದ ಮುಂದಿನ 50 ವರ್ಷ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಹೀಗಾಗಿ ನೀವು ನಮಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಬೆಂಗಳೂರಿನ ಜನರಿಗಾಗಿ ಪಾದಯಾತ್ರೆ ಮಾಡುತ್ತಿದ್ದು, ಎಲ್ಲರೂ ಈ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡುತ್ತೇನೆ. ಪಾದಯಾತ್ರೆಗೆ ಅಪಾಟ್ರ್ಮೆಂಟ್ ಸಂಘ, ಕೈಗಾರಿಕೆ, ಕಾರ್ಖಾನೆ ಸಂಘಗಳು ಎಲ್ಲರೂ ಪಕ್ಷಭೇಧ ಮರೆತು ಆಗಮಿಸಿದ್ದಾರೆ. ಎಲ್ಲ ಸಹಕಾರ ಕೊಟ್ಟಿದ್ದಾರೆ ಎಂದರು.ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು…
ತುಮಕೂರು: ತುಮಕೂರಿನ ಎಂ.ಜಿ. ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ತುಮಕೂರು ಗ್ರಾಮಾಂತರ ಛಲವಾದಿ ಗ್ರಾಮೀಣಾಭಿವೃದ್ಧಿ ಸಂಘ (ರಿ ). ಸಂಘದ ವತಿಯಿಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಿರ್ದೇಶಕರುಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಸಮುದಾಯದ ವಿದ್ಯಾರ್ಥಿಗಳ ವಿಚಾರವಾಗಿ ಮತ್ತು ಸಮುದಾಯದ ಏಳಿಗೆಯ ವಿಚಾರವನ್ನು ಚರ್ಚಿಸಲಾಯಿತು. ಸಭೆಯಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್, ಉಪಾಧ್ಯಕ್ಷರಾದ ಯಲ್ಲಯ್ಯ, ಕಾರ್ಯದರ್ಶಿಗಳಾದ ಮಂಜುನಾಥ್ ಹೆಚ್, ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್, ಸಹಕಾರ್ಯದರ್ಶಿ ಪ್ರವೀಣ್, ನಿರ್ದೇಶಕರುಗಳಾದ ರಾಜಣ್ಣ ಹೊನ್ನುಡಿಕೆ, ರಾಮಚಂದ್ರ ಆರ್., ಶ್ರೀನಿವಾಸ್ ಶಶಿಕುಮಾರ್, ಮಹೇಶ್, ಮಮತಾ ಗುರೂಜಿ, ಮಂಜುಳಾ ಹಾಗೂ ವೆಂಕಟೇಶ್ ರವರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾದ ಪರಮೇಶ್ ರವರನ್ನು ಸನ್ಮಾನಿಸಲಾಯಿತು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ತಾಲೂಕಿನ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಹಾಗೂ ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ನೇತೃತ್ವದಲ್ಲಿ ತಾಲ್ಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ನೂರಾರು ವಾಹನಗಳಲ್ಲಿ ಮೇಕೆದಾಟು ಪಾದಯಾತ್ರೆಗೆ ತೆರಳಿದರು. ಈ ಸಂದರ್ಭದಲ್ಲಿ ಪಾವಗಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ H V V ವೆಂಕಟೇಶ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೋಟೆ ಪ್ರಭಾಕರ. ಸಿ.ಕೆ.ಪುರ.ಗ್ರಾಮದ ಬಿಂದು ಮಾಧವ ರಾವ್ ಹಾಗೂ ಪಾವಗಡ ತಾಲ್ಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು ವರದಿ: ರಾಮಪ್ಪ ಸಿ.ಕೆ.ಪುರ., ಪಾವಗಡ ತಾಲ್ಲೂಕು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ನಾಡಿನಲ್ಲೆಡೆ ಶಿವರಾತ್ರಿ ಹಬ್ಬದ ಸಡಗರ ಗರಿಗೆದರಿದ್ದು ಹಿನ್ನೆಲೆಯಲ್ಲಿ ತುಮಕೂರು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳು ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇರುವ ಕೋಟೆ ಆಂಜನೇಯ ಸ್ವಾಮಿಗೆ ಬೆಳಗ್ಗೆಯಿಂದ ವಿಶೇಷವಾದ ಪೂಜಾಕೈಂಕರ್ಯಗಳು ಜರುಗಿದವು. ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಆಂಜನೇಯಸ್ವಾಮಿಗೆ ವಿಶೇಷವಾದ ಅಲಂಕಾರವನ್ನು ಏರ್ಪಡಿಸಲಾಗಿತ್ತು. ಶಿವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಪೇಟೆಯಲ್ಲಿರುವ ಪಾರ್ವತಿ ಸಮೇತ ಗಂಗಾಧರೇಶ್ವರ ದೇವಾಲಯದಲ್ಲಿ ಕೂಡ ವಿಶೇಷವಾದ ಪೂಜಾಕೈಂಕರ್ಯಗಳು ನಡೆದವು.ಸುಮಾರು 700 ವರ್ಷಗಳ ಇತಿಹಾಸವಿರುವ ಚಿಕ್ಕಪೇಟೆಯ ಪ್ರಸನ್ನ ಗಂಗಾಧರೇಶ್ವರ ದೇವಾಲಯವು ಮುಜರಾಯಿ ಇಲಾಖೆಯ ಅಡಿಯಲ್ಲಿದ್ದು, ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆಯಿಂದ ಗಂಗಾಧರೇಶ್ವರಸ್ವಾಮಿ ವಿಶೇಷವಾದ ಅಭಿಷೇಕಗಳು ವಿವಿಧ ಅಲಂಕಾರಗಳು ನಡೆದವು ಪಾರ್ವತಿ ಸಮೇತ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ಅನೇಕ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾದರು. ವರದಿ: ಎ.ಎನ್.ಪೀರ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ಇತ್ತೀಚೆಗೆ ನಗರದಲ್ಲಿ ನಡೆದ ಪತ್ರಕರ್ತ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಪರಮೇಶ್ವರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರದ ಛಲವಾದಿ ಗ್ರಾಮೀಣ ಅಭಿವೃದ್ಧಿ ಸಂಘಟನೆಯವರು ಇಂದುನಗರದ ಅಂಬೇಡ್ಕರ್ ಭವನದಲ್ಲಿ ಪರಮೇಶ್ ಅವರನ್ನು ಸನ್ಮಾನಿಸಿದರು. ಈ ಸಂದರ್ಭ ಅಧ್ಯಕ್ಷ ಕೆ.ಕುಮಾರ್ , ಗೌರವಾಧ್ಯಕ್ಷ ಎಂ.ಸಂಪತ್ ಕುಮಾರ್ , ಉಪಾಧ್ಯಕ್ಷ ಯಲ್ಲಯ್ಯ ಸೇರಿದಂತೆ ಸಂಘದ ನಿರ್ದೇಶಕರುಗಳು ಸನ್ಮಾನದ ವೇಳೆ ಹಾಜರಿದ್ದರು. ವರದಿ: ಎ.ಎನ್.ಪೀರ್, ತುಮಕೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಪಾವಗಡ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಕಿಲಾರ್ಲಹಳ್ಳಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ನಿರೂಪಣೆಯನ್ನು ವಿಜ್ಞಾನ ಶಿಕ್ಷಕರಾದ ರಾಜಾನಾಯ್ಕ ಎಸ್.ಹೆಚ್. ನೆರವೇರಿಸಿದರು. ಸರ್ ಸಿ.ವಿ.ರಾಮನ್ ಫೋಟೋ ಪೂಜೆ ಮತ್ತು ಪ್ರಾರ್ಥನೆಯನ್ನು 7ನೇ ತರಗತಿ ಲಾವಣ್ಯ ಮತ್ತು ತಂಡ ನೆರವೇರಿಸಿದರು, ಮುಖ್ಯ ಶಿಕ್ಷಕರಾದ ಚಂದ್ರಪ್ಪ ಸ್ವಾಗತ ಮಾಡಿದರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ ಅಶ್ವತ್ಥ ನಾರಾಯಣರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಕ್ಕಳು ಉತ್ತಮ ಕಡಿಮೆ ವೆಚ್ಚದ ಮಾದರಿಗಳನ್ನು ತಯಾರಿಸಲು ವಿಜ್ಞಾನ ಶಿಕ್ಷಕರು ಮತ್ತು ಇತರ ಶಿಕ್ಷಕರು ಪ್ರೋತ್ಸಾಹಿಸಬೇಕು. ಪೋಷಕರು ಮಕ್ಕಳಿಗೆ 1 ರಿಂದ 10 ನೇ ತರಗತಿವರೆಗೆ ಹೆಚ್ಚು ಗಮನ ಕೊಟ್ಟರೆ ಅವರ ಭವಿಷ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು. ತಾಲ್ಲೂಕು ಅಕ್ಷರ ದಾಸೋಹ ಅಧಿಕಾರಿಗಳಾದ ಹನುಮಂತರಾಯಪ್ಪ ಮಾತನಾಡಿ, ಈ ದಿನ ಸಿ.ವಿ. ರಾಮನ್ ರವರಿಗೆ ನೋಬಲ್ ಪ್ರಶಸ್ತಿ ಬಂದ ದಿನ. ಅವರು ಭೌತಶಾಸ್ತ್ರ ವಿಷಯದಲ್ಲಿ ಬೆಳಕಿನ ಚದುರುವಿಕೆಯ ಬಗ್ಗೆ ಕೊಡುಗೆ ಅಪಾರ ಎಂದು ತಿಳಿಸಿದರು. ಅದೇ ರೀತಿ…