Subscribe to Updates
Get the latest creative news from FooBar about art, design and business.
- ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ
- ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?
- ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು
- ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ
- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
- ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ
- ಸರಗೂರು: ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ
- ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆ ವಿಶೇಷ ಪೂಜೆ
Author: admin
ತುಮಕೂರು: ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು. ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು. ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು. ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ…
ಕೊರಟಗೆರೆ: ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿ ಅಂಗವಾಗಿ ಪರಮೇಶ್ವರ್ ಕಪ್– 2025 ಬೃಹತ್ ರಾಜ್ಯ ಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮತ್ತು ಪಟ್ಟಣ ಪಂಚಾಯ್ತಿ ಸದಸ್ಯ ನಂದೀಶ್ ತಿಳಿಸಿದರು. ಅವರು ಪಟ್ಟಣದ ರಾಜೀವ ಭವನದಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ, ಕೊರಟಗೆರೆ ತಾಲ್ಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂತಹ ಬೃಹತ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಏಪ್ರಿಲ್ 04, 05, 06ನೇ ತಾರೀಕಿನಂದು ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿವೆ, ಎಲ್ಲಾ ಪಂದ್ಯಗಳು ಹೊನಲು ಬೆಳಕಿನಲ್ಲಿ ನಡೆಯಲಿದ್ದು, ಈ ಕ್ರೀಡೆಗೆ ರಾಜ್ಯದ ಪ್ರತಿಷ್ಟಿತ 24 ಕ್ರಿಕೆಟ್ ತಂಡಗಳು ಹಾಗೂ ಕೊರಟಗೆರೆ ತಾಲೂಕಿನ ಬಲಿಷ್ಟ ಎರಡು ತಂಡಗಳು ಭಾಗವಹಿಸಲಿವೆ, ಈ ಕ್ರೀಡೆಯಲ್ಲಿ ಪ್ರಥಮ ಬಹುಮಾನ 2,22,222 ರೂಗಳು ಹಾಗೂ ಆಕರ್ಷಕ ಟ್ರೋಫಿ, ಎರಡನೇ ಬಹುಮಾನ 1,11,111 ರೂಗಳು ಹಾಗೂ ಆಕರ್ಷಕ ಟ್ರೋಪಿ, ಸರಣಿ ಶ್ರೇಷ್ಠ ಆಟಗಾರನಿಗೆ ಮೋಟಾರ್ ಬೈಕ್…
ಕೊರಟಗೆರೆ : ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಹೆಜ್ಜೇನು ದಾಳಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳು, 2 ಉಪನ್ಯಾಸಕರು ಹಾಗೂ ಚಲಿಸುತ್ತಿದ್ದ ವಾಹನ ಸವಾರರ ಮೇಲೂ ದಾಳಿ ಮಾಡಿದ್ದು, ಒಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ತಪಾಸಣೆ ನಡೆಸಿ, ಚಿಕಿತ್ಸೆ ನೀಡಿ, ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಪುರುಷೋತ್ತಮ್ ಧೈರ್ಯ ತುಂಬಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ ಭೇಟಿ ಮಾಡಿ, ಆರೋಗ್ಯದ ವಿಚಾರಣೆ ನಡೆಸಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ವೈದ್ಯರ ಮಾರ್ಗದರ್ಶನದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ. ಟೀ ಅಂಗಡಿ, ಹೋಟೆಲ್ ಹಾಗೂ…
ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಮೂಲದ ಬಶೀರ್ (43), ಪರ್ಹಿನ್ (45) ಹಾಗೂ ಇಮ್ರಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಜಲಾಶಯ ನೋಡಲೆಂದು ಆಗಮಿಸಿದ್ದರು ಎಂದು ತಿಳಿದು ಬಂದಿದೆ. ರಂಜಾನ್ ಹಬ್ಬದ ನಂತರ ಕುಟುಂಬ ಸಮೇತರಾಗಿ ತಾಲೂಕಿನ ವಿವಿಧ ಕಡೆ ಪ್ರವಾಸಕ್ಕೆಂದು ಆಗಮಿಸಿದ್ದರು. ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ನೋಡಲೆಂದು ಆಗಮಿಸಿದ್ದ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಚಲಿಸುತ್ತಿದ್ದ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಹಾಗೂ ಮಹಿಳೆ ಇಬ್ಬರೂ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ. ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮೃತಪಟ್ಟವರಾಗಿದ್ದಾರೆ. ಇವರು ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತಪಟ್ಟ ಮಹಿಳೆಯನ್ನು ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಇವರು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ನಿವಾಸಿಯಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತವಾಗಿದ್ದು ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಞೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಆದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಮೇ 5 ರಿಂದ ಉಚಿತ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380220884, 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್…
ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 10 ದಿನಗಳ ಅಣಬೆ ಬೇಸಾಯ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 12ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು–572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿದ್ದು, ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ BE/B.tech ಕೋರ್ಸುಗಳಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ ಕನಿಷ್ಠ ಶೇ.55ರಷ್ಟು ಅಂಕ ಗಳಿಸಿರಬೇಕು. ಈ ಯೋಜನೆಯಡಿ ಶಿಷ್ಯ ವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 5ಲಕ್ಷ ರೂ.ಗಳು ಮೀರಿರಬಾರದು. ಆಸಕ್ತರು ಏಪ್ರಿಲ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ತುಮಕೂರು ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು…
ತಿಪಟೂರು: ತಾಲೂಕು ಕೆರಗೋಡಿ, ರಂಗಾಪುರ ಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಗುರುಪರದೇಶಿ ಕೇಂದ್ರ ಸ್ವಾಮೀಜಿಯವರ 73ನೇ ಜನ್ಮ ವರ್ಧಂತಿ ಮಹೋತ್ಸವ ಏಪ್ರಿಲ್ 5ರಂದು ಶನಿವಾರ ಶ್ರೀಮಠದ ಆಭರಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸುಕ್ಷೇತ್ರದ ಹಿರಿಯ ವಿದ್ಯಾರ್ಥಿ ಹಾಗೂ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಯು.ಕೆ.ಶಿವಪ್ಪ ತಿಳಿಸಿದರು. ಅಂದು ಸುಕ್ಷೇತ್ರ ಆರಾಧ್ಯ ದೈವ ಗಳಾದ ಶ್ರೀ ಶಂಕರೇಶ್ವರ ಸ್ವಾಮಿ, ಶ್ರೀರಂಗನಾಥ ಸ್ವಾಮಿ ಎಲ್ಲ ಹಿರಿಯರ ಆರುಗುರುವರೇಣ್ಯರ ಗದ್ದೆಗೆ ದೇವಾಲಯಗಳಿಗೆ ಅಲಂಕಾರ, ರುದ್ರಾಭಿಷೇಕ ಶ್ರೀಗಳ ಪಾದಪೂಜೆ, ಭಕ್ತರಿಂದ ಭಕ್ತಿ ಸಮರ್ಪಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮಾಡಾಳು ಶ್ರೀ ರುದ್ರಮುನಿ ಸ್ವಾಮಿ ಗೋಡೆಕೆರೆ ಮೃತ್ಯುಂಜಯ ದೇಶಿಯ ಕೇಂದ್ರ ಸ್ವಾಮೀಜಿ ಸೇರಿದಂತೆ ಹರ ಗುರು ಚರಮೂರ್ತಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಅಂದು 5,000 ಜನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು, ಎಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು…